Author: kannadanewsnow05

ವಿಜಯಪುರ : ಕಳೆದ ಎರಡು ದಿನಗಳ ಹಿಂದೆ ರಾಜ್ಯದಲ್ಲಿ ಒಂದೇ ದಿನಕ್ಕೆ ಮೂವರು ಹೃದಯಾಘಾತಕ್ಕೆ ಬಲಿಯಾಗಿದ್ದರು. ಇದೀಗ ವಿಜಯಪುರದಲ್ಲಿ ಕೂಡ ಹೃದಯಾಘಾತದಿಂದ ಯುವಕನೊರ್ವ ಸಾವನ್ನಪ್ಪಿದ್ದಾನೆ. ಮದುವೆಯಲ್ಲಿ ಡ್ಯಾನ್ಸ್ ಮಾಡುತ್ತಲೆ ಕುಸಿದು ಬಿದ್ದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ವಿಜಯಪುರದ ಚಪ್ಪರಬಂದ ಕಾಲೋನಿಯಲ್ಲಿ ನಡೆದಿದೆ. ಹೌದು ಡ್ಯಾನ್ಸ್ ಮಾಡುತ್ತಿದ್ದಾಗಲೇ ಯುವಕನಿಗೆ ಹಾರ್ಟ್ ಅಟ್ಯಾಕ್ ಆಗಿದೆ. 28 ವರ್ಷದ ಯುವಕ ಇದೀಗ ಹೃದಯಾಘಾತದಿಂದ ಸಾವನಪ್ಪಿದ್ದಾನೆ. ವಿಜಯಪುರದ ಚಪ್ಪರ ಬಂದ ಕಾಲೋನಿಯಲ್ಲಿ ಈ ಒಂದು ದುರಂತ ನಡೆದಿದೆ. ಮದುವೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದಾಗಲೇ ಮೊಹಮದ್ ಪೈಗಂಬರ್ ಗಂಗನಹಳ್ಳಿ (28) ಎಂಬ ಯುವಕ ಸಾವನ್ನಪ್ಪಿದ್ದಾನೆ. ಎಲ್ಲರ ಎದುರೇ ಕುಸಿದು ಬಿದ್ದು ಮೊಹಮ್ಮದ್ ಸಾವನಪ್ಪಿದ್ದಾನೆ. ಮೃತ ಮೊಹಮ್ಮದ್ ಅಲ್ಯೂಮಿನಿಯಂ ವರ್ಕ್ಸ್ ಕೆಲಸ ಮಾಡುತ್ತಿದ್ದ. ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಕಳೆದ ನಾಲ್ಕು ವರ್ಷಗಳ ಹಿಂದೆ ಇಡೀ ಜಗತ್ತಿನಾದ್ಯಂತ ರಣಕೇಕೆ ಹಾಕಿದ್ದ ಕೋರೋನ ಮಹಾಮಾರಿ ಇದೀಗ ಮತ್ತೆ ಭಾರತಕ್ಕೆ ಒಕ್ಕರಿಸಿದೆ. ಅದರಲ್ಲೂ ಇದೀಗ ಕರ್ನಾಟಕದಲ್ಲಿ 35 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ ಹಾಗಾಗಿ ಆರೋಗ್ಯ ಇಲಾಖೆಯು ಶೀಘ್ರದಲ್ಲೇ ಕರೋನ ಕುರಿತಂತೆ ಎಚ್ಚರ ವಹಿಸಲು ಮಾರ್ಗಸೂಚಿ ಪ್ರಕಟವಾದ ಸಾಧ್ಯತೆ ಇದೆ. ಹೌದು ಕೊರೋನಾ ಮಹಾಮಾರಿ ಇದೀಗ ರಾಜ್ಯಕ್ಕೂ ಕಾಲಿಟ್ಟಿದ್ದು, ನಾಳೆಯಿಂದಲೇ ಕೋವಿಡ್ ಟೆಸ್ಟ್ ಆರಂಭವಾಗಲಿದೆ. ರಾಜ್ಯದ ಎಂಟು ಮೆಡಿಕಲ್ ಕಾಲೇಜುಗಳಲ್ಲಿ ಕೋವಿಡ್ ಟೆಸ್ಟ್ ನಡೆಯಲಿದೆ. ಬೆಂಗಳೂರಿನಲ್ಲಿಯೇ ಹೆಚ್ಚು ಕೋವಿಡ್ ಟೆಸ್ಟ್ ನಡೆಸಲು ಸೂಚನೆ ನೀಡಲಾಗಿದೆ. ಏಕೆಂದರೆ ಬೆಂಗಳೂರಿನಲ್ಲಿ 32 ಕೊರೋನ ಸಕ್ರಿಯ ಪ್ರಕರಣಗಳಿವೆ ಹಾಗಾಗಿ ಮುನ್ನೆಚ್ಚರಿಕೆ ಕ್ರಮ ಪಾಲನೆಗೆ ಆರೋಗ್ಯ ಇಲಾಖೆ, ಸೂಚನೆ ನೀಡಿದೆ. ಮೆಡಿಕಲ್ ಕಾಲೇಜುಗಳಲ್ಲಿ, ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ಟೆಸ್ಟ್ ನಡೆಸಲಾಗುತ್ತದೆ. ಇನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ, ಬೌರಿಂಗ್ ಆಸ್ಪತ್ರೆ ಸಿ.ವಿ ರಾಮನ್ ನಗರ ಆಸ್ಪತ್ರೆಯಲ್ಲಿ ಕೂಡ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ. ಅಲ್ಲದೆ ಕೋವಿಡ್ ಟೆಸ್ಟಿಂಗ್ ಲ್ಯಾಬ್ ಓಪನ್ ಗೆ…

Read More

ಬೆಂಗಳೂರು : ತನ್ನ ಸಹ ಕಲಾವಿದೆಯ ಮೇಲೆ ಅತ್ಯಾಚಾರ ಎರಡು ಬಾರಿ ಗರ್ಭಪಾದ ಮಾಡಿಸಿರುವ ಆರೋಪ ಹೊತ್ತಿರುವ ಕಿರುತೆರೆ ನಟ ಮಡೆನೂರು ಮನುವನ್ನು ಇದೀಗ ಪೊಲೀಸರು ಸ್ಥಳ ಮಹಜರುಗಾಗಿ ಕರೆದುಕೊಂಡು ಹೋಗಿದ್ದಾರೆ. ಹೌದು ನಟ ಮಡೇನೂರು ಮನು ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಅನ್ನಪೂರ್ಣೇಶ್ವರಿ ನಗರ ಠಾಣೆ ಪೋಲಿಸರು ಆರೋಪಿಯನ್ನು ಕರೆದೊಯ್ದು ಸ್ಥಳ ಮಹಜರು ನಡೆಸಿದ್ದಾರೆ. ಬೆಂಗಳೂರಿನ ಕಾಮಾಕ್ಯ ಬಳಿ ಇರುವ ಮನೆಗೆ ಕರೆದೋಯ್ದು ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ. 3 ವರ್ಷಗಳಿಗೂ ಹೆಚ್ಚು ಕಾಲ ಸಂತ್ರಸ್ತೇ ಬಾಡಿಗೆಗೆ ಇದ್ದಂತಹ ನಿವಾಸದಲ್ಲಿ ಇದೀಗ ಪೊಲೀಸರು ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಮನು ಜೊತೆಗೆ ಮತ್ತಿಬ್ಬರನ್ನು ಕರೆದುಕೊಂಡು ಬಂದು ಸ್ಥಳ ಮಹಜರು ನಡೆಸಿದ್ದಾರೆ. ನಾಗರಬಾವಿ ಬಳಿಯ ಸಂತ್ರಸ್ತೆ ಮನೆಯಲ್ಲಿ ಕೂಡ ಇದೀಗ ಮಹಜರು ನಡೆಸಲಾಗಿದೆ.

Read More

ಮೈಸೂರು : ಮೈಸೂರಿನಲ್ಲಿ ಮತ್ತೊಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ಟಿಪ್ಪರ್ ಟಾಟಾ ಏಸ್ ನಡುವೆ ಡಿಕ್ಕಿಯಾಗಿ ಮಕ್ಕಳು ಸೇರಿದಂತೆ ಹಲವರು ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್‍ಡಿ ಕೋಟೆ ತಾಲೂಕಿನ ಗುಜ್ಜೆಗೌಡನಪುರ ಬಳಿ ಈ ಒಂದು ಭೀಕರವಾದ ಅಪಘಾತ ಸಂಭವಿಸಿದೆ. ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಗುಜ್ಜೇಗೌಡನಪುರದ ಗ್ರಾಮಸ್ಥರು ಬಸವ ಜಯಂತಿ ಕಾರ್ಯಕ್ರಮಕ್ಕೆ ಮೈಸೂರಿಗೆ ತೆರಳುತ್ತಿದ್ದರು. ಕಟ್ಟೆಮನುಗನಹಳ್ಳಿ ಇಂದ ಟಾಟಾ ಏಸ್ ವಾಹನದಲ್ಲಿ ತೆರಳುತ್ತಿದ್ದರು. ಟಾಟಾ ಏಸ್ ನಲ್ಲಿದ್ದ ಮಕ್ಕಳು ಸೇರಿದಂತೆ ಹಲವರಿಗೆ ಗಂಭೀರವಾದ ಗಾಯಗಳಾಗಿವೆ. ತಕ್ಷಣ ಗಾಯಾಳುಗಳನ್ನು ಕೆ.ಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಚ್ ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ ಗ್ರಾಹಕನ ಮೇಲೆ ಡೆಲಿವರಿ ಬಾಯ್ ಹಲ್ಲೆ ಮಾಡಿದ್ದಾನೆ. ಜೆಪ್ಟೊ ಡೆಲಿವರಿ ಬಾಯ್ ನಿಂದ ಗ್ರಾಹಕನ ಮೇಲೆ ಹಲ್ಲೆ ನಡೆದಿದೆ. ಮೇ 21ರಂದು ಬಸವೇಶ್ವರನಗರದಲ್ಲಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಕುರಿತಂತೆ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಜೆಪ್ಟೊದಲ್ಲಿ ಶಶಾಂಕ್ ಎನ್ನುವವರ ಅವರ ಪತ್ನಿ ಆರ್ಡರ್ ಮಾಡಿದ್ದಾರೆ. ಈ ವೇಳೆ ರಿಸೀವ್ ಮಾಡಿಕೊಳ್ಳುವಾಗ ಡೆಲಿವರಿ ಬಾಯ್ ಕಿರಿಕ್ ಮಾಡಿದ್ದಾನೆ. ಅಡ್ರೆಸ್ ತಪ್ಪಾಗಿ ಕೊಟ್ಟಿದ್ದೀರಾ ಎಂದು ಮಾತಿಗೆ ಮಾತಿಗೆ ಬೆಳೆದು ಹಲ್ಲೆ ಮಾಡಿದ್ದಾನೆ. ಶಶಾಂಕ್ ಮೇಲೆ ಕೈಯಿಂದ ಮುಖದ ಮೇಲೆ ಗುದ್ದಿದ್ದಾನೆ. ಈ ವೇಳೆ ಶಶಾಂಕ್ ಕಣ್ಣಿನ ಕೆಳಭಾಗದಲ್ಲಿ ಗಂಭೀರವಾದ ಗಾಯವಾಗಿದೆ. ಘಟನೆ ಕುರಿತು ಬಸವೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮೈಸೂರು : ಮೈಸೂರಿನಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ಕೆರೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್‍ಡಿ ಕೋಟೆ ತಾಲೂಕಿನ ಬೂದನೂರಿನಲ್ಲಿ ಈ ಒಂದು ಘಟನೆ ನಡೆದಿದೆ. ಮೃತರನ್ನು ಮಹದೇವಸ್ವಾಮಿ, ಪತ್ನಿ ಮಂಜುಳಾ ಹಾಗೂ ಪುತ್ರಿ ಹರ್ಷಿತ ಇದೀಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಮೃತ ಮಹದೇವಸ್ವಾಮಿ ಹಿರಿಯ ಪುತ್ರಿ ಅರ್ಪಿತ ಮನೆ ಬಿಟ್ಟು ಹೋಗಿದ್ದಾಳೆ. ಯುವಕನೋರ್ವನನ್ನು ಪ್ರೀತಿಸಿ ಅರ್ಪಿತ ಮನೆ ಬಿಟ್ಟು ಹೋಗಿದ್ದಾಳೆ. ಹಾಗಾಗಿ ಮನನೊಂದು ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬೂದನೂರು ಕೆರೆಯ ಏರಿಯ ಮೇಲೆ ಬೈಕ್ ಹಾಗೂ ಮೂವರ ಚಪ್ಪಲಿ ಪತ್ತೆಯಾಗಿದೆ. ನಾಪತ್ತೆಯಾಗಿರುವ ಮೂವರಿಗಾಗಿ ಇದೀಗ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಘಟನೆ ಕುರಿತು ಎಚ್ ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಕಳೆದ ಜನೆವರಿ 9 ರಂದು ಕರ್ನಾಟಕ ಸರ್ಕಾರದ ಮುಂದೆ ಶರಣಾಗಿದ್ದ ಮಾಜಿ ನಕ್ಸಲರನ್ನು ಇದೀಗ ಬೆಂಗಳೂರಿನ NIA ಕೋರ್ಟ್ ಖುಲಾಸೆಗೊಳಿಸಿದೆ. 3 ಪ್ರಕರಣಗಳಲ್ಲಿ ಸಾಕ್ಷಿ ಒದಗಿಸಲು ಪ್ರಾಸಿಕ್ಯೂಷನ್ ವಿಫಲವಾದ ಹಿನ್ನೆಲೆಯಲ್ಲಿ ಮಾಜಿ ನಕ್ಸಲರನ್ನು ಇದೀಗ ಕೋರ್ಟ್ ಖುಲಾಸೆಗೊಳಿಸಿದೆ. ಮುಂಡಗರು ಲತಾ, ರವೀಂದ್ರ, ಸಾವಿತ್ರಿ ಮತ್ತು ಜ್ಯೋತಿಯನ್ನು ಇದೀಗ ಬೆಂಗಳೂರಿನ NIA ಕೋರ್ಟ್ ಖುಲಾಸೆಗೊಳಿಸಿದೆ. ಸಾಕ್ಷಿ ಒದಗಿಸಲು ಪ್ರಾಸಿಕ್ಯೂಷನ್ ವಿಫಲವಾದ ಹಿನ್ನೆಲೆಯಲ್ಲಿ ಇದೀಗ ಇವರನ್ನು ಕೋರ್ಟ್ ಖುಲಾಸೆಗೊಳಿಸಿದೆ. ಇತ್ತೀಚಿಗೆ ಮಾಜಿ ನಕ್ಸಲರಾದಂತ ಮುಂಡಗಾರು ಲತಾ, ರವೀಂದ್ರ ಅಲಿಯಾಸ್ ಕೋಟೆಹೋಂಡ ರವಿ, ಸಾವಿತ್ರಿ ಅಲಿಯಾಸ್ ಉಷಾ, ವನಜಾಕ್ಷಿ ಅಲಿಯಾಸ್ ಜ್ಯೋತಿ ಅಲಿಯಾಸ್ ಕಲ್ಪನಾ NIA ಕೋರ್ಟ್ ಮುಂದೆ ಶರಣಾಗಿದ್ದರು. ಚಿಕ್ಕಮಂಗಳೂರು ತಣಿಕೋಡು ಅರಣ್ಯ ಚೆಕ್ಪೋಸ್ಟ್ ಧ್ವಂಸ ಪ್ರಕರಣ, ಲೇವಾದೇವಿದಾರ ಗಂಗಾಧರ ಶೆಟ್ಟಿ ಅಲಿಯಾಸ್ ಕಿರಣ್ ಶೆಟ್ಟಿ ಬೈಕ್ ಗೆ ಬೆಂಕಿ ಹಚ್ಚಿದ್ದ ಪ್ರಕರಣ, ಬುಕ್ಕಡಿಬೈಲುವಿನಲ್ಲಿ ಸಾರ್ವಜನಿಕ ಸಭೆ ನಡೆಸಿದ ಆರೋಪದ ಅಡಿ ಪ್ರಕರಣ ದಾಖಲಾಗಿತ್ತು. ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕವಾಗಿ 3…

Read More

ಬೆಂಗಳೂರು : ಮೆಟ್ರೋ ಟಿಕೆಟ್‌ ದರವನ್ನು ಶೇ.70ರಷ್ಟು ಏರಿಸಿ ಪ್ರಯಾಣಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಬೆಂಗಳೂರು ಮೆಟ್ರೋ ರೈಲು ನಿಗಮ ಇದೀಗ ತನ್ನ ವ್ಯಾಪ್ತಿಯ ಶೌಚಾಲಯ ಬಳಕೆಗೂ ಶುಲ್ಕ ನಿಗದಿ ಪಡಿಸಿತ್ತು. ಬಿಎಂಆರ್‌ಸಿಎಲ್‌’ನ ಈ ನಡೆಯು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿತ್ತು. ಇದೀಗ BMRCL ಈ ಕುರಿತು ಸ್ಪಷ್ಟನೆ ನೀಡಿದೆ. ಮೆಟ್ರೋ ನಿಲ್ದಾಣಗಳಲ್ಲಿ ಶೌಚಾಲಯ ಬಳಕೆ ಉಚಿತವಾಗಿರುತ್ತದೆ. ಮೆಟ್ರೋ ಸ್ವೈಪ್ ಗೇಟ್ ಒಳಗಿನ ಶೌಚಾಲಯಗಳ ಬಳಕೆ ಉಚಿತವಾಗಿರುತ್ತದೆ. ಮುಂದೆಯೂ ಕೂಡ ಶೌಚಾಲಯ ಬಳಕೆ ಉಚಿತವಾಗಿರುತ್ತದೆ. ಮೆಟ್ರೋ ಸ್ವೈಪ್ ಗೇಟ್ ಗಿಂತ ಹೊರಗಿರುವ ಶೌಚಾಲಯಗಳನ್ನು ಮೆಟ್ರೋ ಪ್ರಯಾಣಿಕರಲ್ಲದೆ ಬೇರೆ ಸಾರ್ವಜನಿಕರು ಸಹ ಬಳಸುತ್ತಾರೆ. ಅಂತಹ ಶೌಚಾಲಯಗಳು ಮಾತ್ರ ಶುಲ್ಕ ನಿಗದಿ ಮಾಡಲಾಗಿದೆ ಎಂದು ಶೌಚಾಲಯ ಬಳಕೆಗೆ ಶುಲ್ಕ ವಿಚಾರದ ಬಗ್ಗೆ ಇದೀಗ BMRCL ಸ್ಪಷ್ಟನೆ ನೀಡಿದೆ.

Read More

ಬೆಂಗಳೂರು : ಜಾತಿ ಸಮೀಕ್ಷೆ ಮಾಡದ ಪಾಲಿಕೆ ಅಧಿಕಾರಿಗಳಿಗೆ ಇದೀಗ ಚಾಟಿ ಬೀಸಲಾಗಿದ್ದು, ನಿಗದಿತ ಸಮಯದಲ್ಲಿ ಮಾಹಿತಿ ಸಂಗ್ರಹಿಸದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಅಡಿಯಲ್ಲಿ ಐವರು ಅಧಿಕಾರಿಗಳು ಅಮಾನತು ಮಾಡಲಾಗಿದೆ. ಐವರನ್ನು ಅಮಾನತುಗೊಳಿಸಿ ಬಿಬಿಎಂಪಿ ಮುಖ್ಯ ಆಯುಕ್ತರು ಇದೀಗ ಆದೇಶ ಹೊರಡಿಸಿದ್ದಾರೆ. ಶ್ರೀಜೇಶ್, ವಿಜಯಕುಮಾರ್ ಶಿವರಾಜ್ ಹೆಚ್‍ಸಿ, ಮಹದೇವ್ ಹಾಗು ಶ್ರೀ ಶಂಕರ್ ಅಮಾನತುಗೊಂಡ ಅಧಿಕಾರಿಗಳು ಎಂದು ತಿಳಿದುಬಂದಿದೆ. ನಿತ್ಯ ಮನೆಗಳಿಗೆ ಭೇಟಿ ನೀಡಿ ವರದಿ ಸಂಗ್ರಹಿಸುವಂತೆ ಸೂಚನೆ ನೀಡಲಾಗಿತ್ತು. ಆದರೆ ಮೊಬೈಲ್ ಲಾಗಿನ್ ಮಾಡದೆ ಸಿಬ್ಬಂದಿಗಳು ಕಳ್ಳಾಟ ನಡೆಸಿದ್ದಾರೆ. ಹಾಗಾಗಿ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರರಾವ್ ಅವರು ಇದೀಗ ಇವರನ್ನು ಸಸ್ಪೆಂಡ್ ಮಾಡಿ ಆದೇಶಿಸಿದ್ದಾರೆ.

Read More

ಹಾಸನ : ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ದಾಳಿಯಿಂದ ಮತ್ತೊಬ್ಬ ಮಹಿಳೆ ಮೃತಪಟ್ಟಿದ್ದಾರೆ. ಗಜೇಂದ್ರಪುರ ಗ್ರಾಮದ ಚಂದ್ರಮ್ಮ (45) ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮೃತ ಚಂದ್ರಮ್ಮ ಅವರು ಬೇಲೂರು ತಾಲೂಕಿನ ಅಂಕಿಹಳ್ಳಿ ಗ್ರಾಮದಲ್ಲಿನ ಕರುಣ್ ಎಂಬುವವರ ಕಾಫಿ ತೋಟದ 12 ಮಂದಿ ಮಹಿಳಾ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಕಾಡಾನೆ ದಾಳಿ ಮಾಡಿದ್ದು, ಚಂದ್ರಮ್ಮ ಅವರು ಮೃತಪಟ್ಟಿದ್ದಾರೆ. 11 ಮಂದಿ ಕಾರ್ಮಿಕರು ಸ್ಥಳದಿಂದ ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ.

Read More