Author: kannadanewsnow05

ಬೆಂಗಳೂರು : ಕ್ರಿಮಿನಲ್ ಕೇಸ್ ಒಂದಕ್ಕೆ ಸಂಬಂಧಪಟ್ಟಂತೆ ಲಂಚ ಪಡೆಯುವಾಗ ರೇಡ್ ಹ್ಯಾಂಡ್ ಆಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ವರದಿಯಾಗಿದೆ. ಬೆಂಗಳೂರಿನ 46ನೇ ಸಿಸಿಎಚ್ ಕೋರ್ಟ್ ಪಬ್ಲಿಕ್ ಟ್ರಾನ್ಸ್ಸಿಕ್ಯೂಟರ್ ಲತಾ ಎನ್ನುವವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕ್ರಿಮಿನಲ್ ಕೇಸ್ ನಲ್ಲಿ ಆಕ್ಷೇಪಣೆ ಸಲ್ಲಿಸಲು ಲತಾ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಎಂ.ರಾಜರಾಮ್ ಎನ್ನುವವರಿಂದ 1,100 ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪ ಕೇಳಿ ಬಂದಿದ್ದು ಎಂ ರಾಜಾ ಎನ್ನುವವರ ಬಳಿ 1100 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ವೇಳೆ ಲೋಕಾಯುಕ್ತ ಅಧಿಕಾರಿಗಳು ಲಂಚ ಸ್ವೀಕರಿಸುವ ವೇಳೆ ದಾಳಿ ಮಾಡಿ ಲತಾ ಅವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಅನುದಾನ ಹಂಚಿಕೆಯಲ್ಲಿ ತಾರತಮ್ಯ ಪ್ರಶ್ನಿಸಿ ಬಿಜೆಪಿ ಶಾಸಕ ಪಿಐಎಲ್ ಸಲ್ಲಿಸಿದ್ದು ಜಮಖಂಡಿ ಬಿಜೆಪಿ ಶಾಸಕ ಜಗದೀಶ್ ಗುಡಗುಂಟೆ ಸಲ್ಲಿಸಿದ್ದ ಪಿಐಎಲ್ ಇಂದು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯ ಸರ್ಕಾರ ಹಣಕಾಸು ಇಲಾಖೆ ಹಾಗೂ ಬಾಗಲಕೋಟೆ ಜಿಲ್ಲಾಧಿಕಾರಿಗೆ ನೋಟಿಸ್ ನೀಡಿ ಆದೇಶ ಹೊರಡಿಸಿತು. ವಿಚಾರಣೆ ಸಂದರ್ಭದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಹಣ ಬಿಡುಗಡೆ ಮಾಡುತ್ತಿಲ್ಲ. ಕಾಂಗ್ರೆಸ್ ಶಾಸಕರಿಗೆ 50 ಕೋಟಿ ವಿಪಕ್ಷಗಳಿಗೆ 25 ಕೋಟಿ ಹಣ ನಿಗದಿ ಮಾಡಿದ್ದು, ಹಾಗಾಗಿ ಅನುದಾನದಲ್ಲಿ ತಾರತಮ್ಯ ಆರೋಪಿಸಿ ಹೈಕೋರ್ಟಿಗೆ ಪಿಐಎಲ್ ಸಲ್ಲಿಸಲಾಗಿದೆ. ಈ ವೇಳೆ ಸರ್ಕಾರ, ಹಣಕಾಸು ಇಲಾಖೆ ಮತ್ತು ಬಾಗಲಕೋಟೆ ಜಿಲ್ಲಾಧಿಕಾರಿಗೆ ಹೈಕೋರ್ಟ್ ನೋಟಿಸ್ ನೀಡಿದ್ದು, ಸಿಜೆ ವಿಭು ಬಕ್ರು ಹಾಗು ನ್ಯಾಯಮೂರ್ತಿ ಸಿಎಂ ಪೂಣಚ್ಚ ಅವರಿದ್ದ ಪೀಠದಿಂದ ನೋಟಿಸ್ ಜಾರಿಗೊಳಿಸಲಾಗಿದೆ.

Read More

ಬೆಳಗಾವಿ : ಕನೇರಿಯ ಕಾಡಸಿದ್ದೇಶ್ವರ ಮಠದ ಅದೃಶಕಾಡಸಿದ್ದೇಶ್ವರ ಸ್ವಾಮೀಜಿ ಅವರಿಗೆ ವಿಜಯಪುರ, ಬಾಗಲಕೋಟೆ ಜಿಲ್ಲೆಗಳಿಗೆ ನಿರ್ಬಂಧ ವಿಧಿಸಿದ್ದನ್ನು ಖಂಡಿಸಿ ಇಂದು ಬೆಳಗಾವಿ ಹೊರ ವಲಯದ ಖಾಸಗಿ ಹೋಟೆಲ್ ನಲ್ಲಿ ಹಿಂದೂ ಮುಖಂಡರು ಮಹತ್ವದ ಸಭೆ ನಡೆಸಿದರು. ರಾಜ್ಯಾಧ್ಯಂತ ಕನೇರಿ ಸ್ವಾಮೀಜಿಗಳ ಪರ ಹೋರಾಟಕ್ಕೆ ಸಭೆಯಲ್ಲಿ‌ ನಿರ್ಣಯ ಕೈಗೊಳ್ಳಲಾಗಿದೆ. ಅಲ್ಲದೇ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಅದನ್ನೇ ದೊಡ್ಡ ಅಸ್ತ್ರವನ್ನಾಗಿ ಬಳಸಲು ಮುಂದಾಗಿರುವುದು ಈ ಸಭೆಯಿಂದ ಸ್ಪಷ್ಟವಾಗಿದೆ. ಸಭೆಯಲ್ಲಿ ಕನೇರಿ ಸ್ವಾಮೀಜಿ ಕೂಡ ಉಪಸ್ಥಿತರಿದ್ದರು. ಸಭೆಯಲ್ಲಿ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ ಮುತಾಲಿಕ್, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಸಿ.ಸಿ. ಪಾಟೀಲ, ಶಶಿಕಲಾ ಜೊಲ್ಲೆ, ಅರವಿಂದ ಬೆಲ್ಲದ, ಅಭಯ ಪಾಟೀಲ, ಸಿ.ಟಿ. ರವಿ, ಮಾಜಿ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ, ಭಗವಂತ ಖೂಬಾ, ಪ್ರತಾಪ್​ ಸಿಂಹ ಸೇರಿ ಮತ್ತಿತರರು ಪಾಲ್ಗೊಂಡಿದ್ದರು. ಸುಪ್ರೀಂ ಕೋರ್ಟ್ ತರಾಟೆ ಇನ್ನು ಇದೆ ವಿಚಾರಕ್ಕೆ ಸಂಬಂಧಪಟ್ಟಂತೆ ಕನ್ನೇರಿ ಶ್ರೀಗಳು ಸಲ್ಲಿಸಿದ…

Read More

ಬೆಳಗಾವಿ : ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಮತ್ತು ಸಿಎಂ ಬದಲಾವಣೆ ಚರ್ಚೆ ವಿಚಾರಕ್ಕೆ ಸಂಬಂಧಪಟ್ಟಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿ ಅಗಲಿದ್ದಾರೆ ಎಂದು ಬೆಳಗಾವಿಯಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕವಾದ ಹೇಳಿಕೆ ನೀಡಿದ್ದಾರೆ. ಸ್ಪರ್ಧೆಯಲ್ಲಿರುವ ಯಾವ ನಾಯಕರು ಮುಖ್ಯಮಂತ್ರಿ ಆಗಲ್ಲ. ರಾಜ್ಯದ ಸಾರಥ್ಯ ಬ್ಲ್ಯಾಕ್ ಹಾರ್ಸ್ ಕೈಗೆ ಸಿಗಲಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಿಎಂ ಆಗಲ್ಲ, ಸತೀಶ್ ಜಾರಕಿಹೊಳಿ ಸೇರಿದಂತೆ ಯಾರು ರಾಜ್ಯದ ಮುಖ್ಯಮಂತ್ರಿ ಆಗಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಒಮ್ಮೆ ಸಿಎಂ ಆಗಬೇಕೆಂದು ಕಾಯುತ್ತಿದ್ದಾರೆ.ಒಮ್ಮೆಯಾದರೂ ಸಿಎಂ ಆಗಬೇಕೆಂದು ಅವರಿಗೆ ಆಸೆ ಇದೆ. ಅಲ್ಲಿ ಏನೂ ಕೆಲಸ ಇಲ್ಲ ಯಾವುದೇ ಉತ್ಪನ್ನವಿಲ್ಲ. ಸಿಎಂ ಪುತ್ರನ ಮೂಲಕ ಬೆಳಗಾವಿಗೆ ಬಂದು ಸತೀಶ್ ಹೆಸರು ಹೇಳಿಸಿದರು. ಡಿಕೆ ಶಿವಕುಮಾರ್ ಸಿಎಂ ಮಾಡಿದರೆ ನಮ್ಮ ಕಡೆಯಿಂದ ಸತೀಶ ಮಾಡಬೇಕೆಂದು ಹೇಳಿಸಿದ್ರು. ಸಿಎಂ ಸಿದ್ದರಾಮಯ್ಯ ಪುತ್ರನ ಮೂಲಕ…

Read More

ದಕ್ಷಿಣಕನ್ನಡ : ಅಕ್ರಮ ಕೂಟ ಸೇರಿದ ಆರೋಪದಲ್ಲಿ ಸೌಜನ್ಯ ತಾಯಿ ಕುಸುಮಾವತಿ ಸೇರಿದಂತೆ ತಿಮರೋಡಿ ಸಹೋದರ ಮೋಹನ್ ಶೆಟ್ಟಿ, ಪ್ರಸನ್ನ ರವಿ ಸೇರಿದಂತೆ 12 ಜನರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ತಿಮರೋಡಿ ಗಡಿಪಾರು ವಿರುದ್ಧ ಪ್ರತಿಭಟನೆ ಅಂತಾ ಕರೆ ನೀಡಲಾಗಿತ್ತು. ಪೊಲೀಸರಿಂದ ಅನುಮತಿ ಸಿಗದೇ ಇದ್ದರೂ ಜನ ಸೇರುವಂತೆ ಕರೆ ಕೊಡಲಾಗಿತ್ತು. ಇದರಿಂದ ಶಾಂತಿ-ಸುವ್ಯವಸ್ಥೆಗೆ ಧಕ್ಕೆಯಾಗಲಿದೆ ಎಂದು ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಮೊಬೈಲ್ ಖರೀಮರನ್ನು ಇದೀಗ ಒದ್ದು ಒಳಗಡೆ ಹಾಕಿದ್ದು, ಮೊಬೈಲ್ ಎಗರಿಸುತ್ತಿದ್ದ 42 ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ 3.36 ಕೋಟಿ ಮೌಲ್ಯದ ಮೊಬೈಲ್ ಫೋನ್ ಗಳನ್ನು ಸೀಜ್ ಮಾಡಿದ್ದಾರೆ. ಹೌದು ಒಟ್ಟು 1,949 ಮೊಬೈಲ್ ಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಕೇವಲ ಆರು ಮಂದಿ ಕಳ್ಳರಿಂದ 450 ಮೊಬೈಲ್ ಮಾಡಿದ್ದಾರೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಪ್ರಕರಣಗಳು ದಾಖಲಾಗಿದ್ದವು. ಮೊಬೈಲ್ ಕಳ್ಳರ ಖತರ್ನಾಕ್ ಐಡಿಯಾ ಬಯಲಾಗಿದ್ದು, ವಿಚಾರಣೆ ವೇಳೆ ಕಳ್ಳರು ಬಾಯಿ ಬಿಟ್ಟ ಸತ್ಯ ಕೇಳಿ ಪೊಲೀಸರು ಶಾಕ್ ಆಗಿದ್ದಾರೆ. ಬಸ್ ನಲ್ಲಿ ಐದಾರು ಕಳ್ಳರು ಒಟ್ಟಿಗೆ ಬರುತ್ತಿದ್ದರು. ಪ್ರಯಾಣಿಕರ ಗಮನ ಬೇರೆ ಸೆಳೆದು ಮೊಬೈಲ್ ಕಳ್ಳತನ ಮಾಡುತ್ತಿದ್ದರು. ಬಳಿಕ ಒಬ್ಬರಿಂದ ಒಬ್ಬರಿಗೆ ಮೊಬೈಲ್ ಶಿಫ್ಟ್ ಆಗುತ್ತಿತ್ತು. ಬಳಿಕ ಅಲುಮಿನಿಯಂ ಫೈಲ್ ನಲ್ಲಿ ಮೊಬೈಲ್ ಸುತ್ತಿಡುತ್ತಿದ್ದರು ಕೂಡಲೇ ಮೊಬೈಲ್ ನೆಟ್ವರ್ಕ್ ಜಾಮ್ ಆಗುತ್ತಿತ್ತು ತಕ್ಷಣ ಯಾರೇ ಕರೆ ಮಾಡಿದರು ಕಾಲ್…

Read More

ಬಾಗಲಕೋಟೆ : ಮುಂದಿನ ತಿಂಗಳು ಅಂದರೆ ನವೆಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂದು ಚರ್ಚೆಗಳು ನಡೆಯುತ್ತಿವೆ. ನಾಯಕತ್ವ ಬದಲಾವಣೆ ಆಗಿರಬಹುದು ಅಥವಾ ಸಚಿವ ಸಂಪುಟ ಪುನರಚನೆ ಎಲ್ಲವೂ ಕೂಡ ಬದಲಾಗುತ್ತದೆ ಎಂದು ಹೇಳಲಾಗುತ್ತಿದೆ. ಇದೀಗ ನಾನು ಸಹ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಹೇಳಿಕೆ ನೀಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ್ ಮಾತನಾಡಿದ್ದು, ನಾನು ಕೂಡ ಮಂತ್ರಿ ಆಗಬಹುದು ಎಂಬ ನಿರೀಕ್ಷೆ ಇದೆ. ಸಚಿವ ಸಂಪುಟ ಪುನಾರಚನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರಿಷ್ಠರ ಅನುಮತಿ ಪಡೆದು ಪುನಾರಚನೆ ಮಾಡುವುದಾಗಿ ಹೇಳಿದ್ದಾರೆ. ಈಗಾಗಲೇ ನಾನು ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದೇನೆ ಎಂದು ವಿಜಯಾನಂದ ಕಾಶಪ್ಪನವರು ತಮ್ಮ ಮಂತ್ರಿ ಆಸೆ ಬಿಚ್ಚಿಟ್ಟರು.

Read More

ಮೈಸೂರು : ರಾಜ್ಯ ರಾಜಕಾರಣದಲ್ಲಿ ಇದೀಗ ನಾಯಕತ್ವ ಬದಲಾವಣೆ ಹಾಗೂ ಸಂಪುಟಪುನ ರಚನೆ, ಕುರಿತಾಗಿ ಭಾರಿ ಚರ್ಚೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಪೂರ್ಣಾವಧಿ ಸಿಎಂ ಎಂದು ಘೋಷಿಸಿ ಎಂದು ಪತ್ರ ಚಳುವಳಿ ಆರಂಭಿಸಿದ್ದಾರೆ. ಕಾಂಗ್ರೆಸ್ ಹೈ ಕಮಾಂಡ್ಗೆ ಪತ್ರ ಬರೆದು ಚಳುವಳಿ ಆರಂಭಿಸಿದ್ದಾರೆ. ಮೈಸೂರಿನಲ್ಲಿ ರಾಮಸ್ವಾಮಿ ಮೃತದಲ್ಲಿ ಅಹಿಂದ ಒಕ್ಕೂಟದಿಂದ ಈ ಒಂದು ಪತ್ರ ಚಳುವಳಿ, ಆರಂಭಿಸಿದ್ದು ಗೊಂದಲಗಳಿಗೆ ತೆರೆ ಎಳೆಯುವಂತೆ ಒತ್ತಾಯಿಸಿ ಪತ್ರ ಚಳುವಳಿ ನಡೆಸಲಾಗಿದೆ. ಯಾರು ಸಿಎಂ ಆಗ್ತಾರೆ ಸಿಎಂ ರೇಸ್ನಲ್ಲಿ ಯಾರು ಇದ್ದಾರೆ ಎಂದು ಗೊಂದಲಗಳಿದ್ದು ಅವೆಲ್ಲ ಗೊಂದಲಗಳಿಗೆ ತೆರೆ ಎಳೆಯಿರಿ. ಹಾಗಾಗಿ ಸಿದ್ದರಾಮಯ್ಯರನ್ನು ಪೂರ್ಣಾವಧಿ ಸಿಎಂ ಎಂದು ಘೋಷಿಸಿ ಎಂದು ರಾಹುಲ್ ಗಾಂಧಿಗೆ ಅಡ್ರೆಸ್ ಮಾಡಿ ಪತ್ರ ಬರೆದಿದ್ದಾರೆ.

Read More

ನವದೆಹಲಿ : ಕೊಲ್ಲಾಪುರದ ಕನ್ನೆರಿ ಮಠದ ಶ್ರೀ ಕಾಡಸಿದ್ದೇಶ್ವರ ಸ್ವಾಮೀಜಿಗೆ ವಿಜಯಪುರ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾ ಆಡಳಿತ ನಿರ್ಬಂಧ ವಿಚಾರಕ್ಕೆ ಸಂಬಂಧಪಟ್ಟಂತೆ ಕನ್ನೇರಿ ಶ್ರೀಗಳು ಸಲ್ಲಿಸಿದ ಮೇಲ್ಮನವಿ ಅರ್ಜಿಯನ್ನು ಇದೀಗ ಸುಪ್ರೀಂ ಕೋರ್ಟ್ ವಜಾ ಗೊಳಿಸಿದೆ. ವಿಚಾರಣೆಯಲ್ಲಿ ಕನ್ನೆರಿ ಮಠದ ಸ್ವಾಮೀಜಿ ಈ ರೀತಿ ಕೀಳುಮಟ್ಟದ ಹೇಳಿಕೆ ನೀಡಿದು ಸರಿಯಲ್ಲ ಎಂದು ನ್ಯಾಯಮೂರ್ತಿಗಳಾದ ಪಂಕಜ್ ಮಿತ್ತಲ್ ಹಾಗೂ ಪ್ರಸನ್ನ ವರಾಲೆ ಪೀಠದಿಂದ ಸ್ವಾಮೀಜಿಗೆ ತರಾಟೆ ತೆಗೆದುಕೊಂಡಿದ್ದು, ಪ್ರಚೋದನಕಾರಿ ಹೇಳಿಕೆ ನೀಡಿದ್ದ ಕನ್ನೇರಿ ಶ್ರೀಗಳ ನಡೆ ವಿರುದ್ಧ ಆಕ್ರೋಶ ಹೊರ ಹಾಕಿದರು. ಹೈಕೋರ್ಟ್ ಹೇಳಿರುವುದರಲ್ಲಿ ತಪ್ಪೇನಿದೆ? ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿತು. ನೀವು ಸ್ವಾಮೀಜಿಯಾಗಿ ಗಂಭೀರವಾಗಿರಬೇಕು. ನೀವು ಒಳ್ಳೆಯ ಪ್ರಜೆಯಲ್ಲ. ಅವಹೇಳನಕಾರಿ ಭಾಷೆ ಬಳಸಿದ್ದೀರಿ. ವಾಕ್ ಸ್ವಾತಂತ್ರ್ಯ ವ್ಯಾಪ್ತಿಯಲ್ಲಿಲ್ಲ. ನೀವು ಮಾತನಾಡುವುದು ನಿಲ್ಲಿಸಿ ಮೌನವಾಗಿ ಬೇರೆ ಮಠದಲ್ಲಿ ಧ್ಯಾನ ಮಾಡಿ ಎಂದು ತರಾಟೆಗೆ ತೆಗೆದುಕೊಂಡಿತು.

Read More

ವಿಜಯಪುರ : ಇತ್ತೀಚಿಗೆ ವಿಜಯಪುರದಲ್ಲಿ ಸರಣಿ ಭೂಕಂಪನ ನಡೆಯುತ್ತಿದ್ದು, ನಿನ್ನೆ ರಾತ್ರಿ 11:00 ಸುಮಾರಿಗೆ ಒಂದು ಸಲ ಮತ್ತು ಇಂದು ಬೆಳಿಗ್ಗೆ 9 ಗಂಟೆಯ ಹಾಗೆ ಭೂಮಿ ಕಂಪಿಸಿದ ಅನುಭವ ಆಗಿದ್ದು ಜನರು ಬೆಚ್ಚಿಬಿದ್ದಿದ್ದಾರೆ. ಹೌದು ಜಿಲ್ಲೆಯಲ್ಲಿ ಸರಣಿ ಭೂಕಂಪನ ಸಂಭವಿಸಿದೆ. ಕಳೆದ 2 ತಿಂಗಳ ಅವಧಿಯಲ್ಲಿ 11 ಬಾರಿ ಭೂಮಿ ಕಂಪಿಸಿದ್ದು, ಇದರಿಂದ ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ. ಮಂಗಳವಾರ ರಾತ್ರಿ 11:41ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ಅದಾದ ಬಳಿಕ ಇಂದು ಬೆಳಿಗ್ಗೆ 5:30ರ ಸುಮಾರಿಗೆ ಭೂಮಿ ಕಂಪಿಸಿದೆ. ಸಿಸಿಟಿವಿ ದೃಶ್ಯದಲ್ಲಿಯೂ ಭೂಕಂಪನದ ತೀವ್ರತೆ ದಾಖಲಾಗಿದೆ.

Read More