Subscribe to Updates
Get the latest creative news from FooBar about art, design and business.
Author: kannadanewsnow05
ಬೆಳಗಾವಿ : ಬೆಳಗಾವಿಯಲ್ಲಿ ಇತ್ತೀಚಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃನಾಳ್ ಹೆಬ್ಬಾಳ್ಕರ್ ಕಾರು ಚಾಲಕ ಬಸವಂತಗೆ ಚಾಕು ಇರಿದಿದ್ದ ಪ್ರಕರಣ ನಡೆದಿತ್ತು. ಅದರ ಬೆನಲ್ಲೇ ಇದೀಗ ಮತ್ತೊಂದು ಚಾಕು ಇರಿತ ಪ್ರಕರಣ ವರದಿಯಾಗಿದೆ ಜಾಮೀನಿನ ಮೇಲೆ ಹೊರಬಂದಿದ್ದವನಿಂದ ಚೂರಿ ಇರಿಯಲಾಗಿದೆ. ಕಣ್ಣೆತ್ತಿ ನೋಡಿದ್ದಕ್ಕೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಲಾಗಿದೆ. ಬೆಳಗಾವಿಯ ನ್ಯೂ ಗಾಂಧಿನಗರದಲ್ಲಿ ಮಸೀದಿ ಮುಂದೆ ಈ ಒಂದು ಘಟನೆ ನಡೆದಿದ್ದು ಶುಕ್ರವಾರದ ನಮಾಜ್ ಮುಗಿಸಿ ಹೊರ ಬಂದಾಗ ಗಲಾಟೆ ಆಗಿದೆ. ಈ ವೇಳೆ ಜುಶಾನ್ ಎಂಬ ಯುವಕನಿಗೆ ಮುಜಾಮಿಲ್ ಚಾಕು ಇರದಿದ್ದಾನೆ. ಮುಂಜಾಮ್ಮಿಲ್ ಸತ್ತಿಗೇರಿ ಎಂಬಾತ ತಿಂಗಳ ಹಿಂದೆಯೇ ಜಾಮೀನು ಮೇಲೆ ಹೊರಗಡೆ ಬಂದಿದ್ದ ಆರೋಪಿ ಮುಜಮಿಲ್ ಸತ್ತಿಗೇರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಬೆಳಗಾವಿಯ ಮಾಳ ಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಬಿಎಂಟಿಸಿ ಬಸ್ ಡಿಕ್ಕಿ ಆಗಿ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬೆಟ್ಟದಾಸನಪುರ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಬೈಕ್ ಸವಾರನ ತಲೆಯ ಮೇಲೆ ಬಸ್ ನ ಹಿಂಬದಿ ಚಕ್ರ ಹರಿದು ಕಣಿರಾಜ್ (28) ಸಾವನ್ನಪ್ಪಿದ್ದಾರೆ. ತ್ರಿಬಲ್ ರೈಡಿಂಗ್ ವೇಳೆ ಕನಿರಾಜ್ ಆಯತಪಿ ಕೆಳಗೆ ಬಿದ್ದಾಗ ಹಿಂಬದಿಯಿಂದ ಬಂದ ಬಿಎಂಟಿಸಿ ಬಸ್ಸಿನ ಹಿಂದಿನ ಚಕ್ರಕ್ಕೆ ಸಿಲುಕಿ ಕಣಿರಾಜ್ ಸ್ಥಳದಲ್ಲಿ ಸಾವನಪ್ಪಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಬಳ್ಳಾರಿಯಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಗಲಾಟೆ ನಡೆದು ಫೈರಿಂಗ್ ವೇಳೆ ಓರ್ವ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವನಪ್ಪಿದ್ದ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಬಿಜೆಪಿ ಮತ್ತು ಕಾಂಗ್ರೆಸ್ ಎರಡು ಪಕ್ಷದ ಕಾರ್ಯಕರ್ತರನ್ನು ಅರೆಸ್ಟ್ ಮಾಡಿದರು. ಇದೀಗ ಬಳ್ಳಾರಿ ಗಕಭೆ ಪ್ರಕರಣದ 25 ಆರೋಪಿಗಳಿಗೆ ಬೆಂಗಳೂರಿನ 42ನೇ ACJM ಕೋರ್ಟ್ ಜಾಮಿನು ನೀಡಿದೆ. ಕ್ರೈಂ ನಂಬರ್ ನಾಲ್ಕರಲ್ಲಿ ಇರುವ 25 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ಬ್ಯಾನರ್ ಕಟ್ಟುವ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ಆಗಿತ್ತು. ಈ ವೇಳೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಆಪ್ತ ಸೋಮಶೇಖರ್ ರೆಡ್ಡಿ ಗನ್ ಮ್ಯಾನ್ ಗುರುಚರಣ್ ಸಿಂಗ್ ಹಾರಿಸಿದ ಗುಂಡು ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಗೆ ತಗುಲಿ ಸಾವನಪ್ಪಿದ್ದ. ಘಟನೆ ಸಂಬಂಧ ರಾಜ್ಯ ಸರ್ಕಾರ ಎಸ್ಪಿ ಪವನ್ ನಜ್ಜುರ್ ಅವರನ್ನು ಸಸ್ಪೆಂಡ್ ಮಾಡಿತ್ತು. ಅಲ್ಲದೆ ಡಿಐಜಿಪಿ ವರ್ತಿಕಾ ಕಟಿಯರವರನ್ನು ಸಹ ವರ್ಗಾವಣೆ ಮಾಡಿ…
ಹುಬ್ಬಳ್ಳಿ : ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ನಡೆಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಕೂಡ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು ಇದೀಗ ವಿಪಕ್ಷ ನಾಯಕ ಆರ್ ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಕರ್ನಾಟಕದ ಮುಖ್ಯಮಂತ್ರಿ ಯಾರು ಅನ್ನೋದೇ ಗೊತ್ತಾಗುತ್ತಿಲ್ಲ. ಕೆಸಿ ವೇಣುಗೋಪಾಲ್ ರಾಜ್ಯದ ಮುಖ್ಯಮಂತ್ರಿ ಆಗಿದ್ದಾರೆ ಎಂದು ಒಗ್ಗಳಿ ನಡೆಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕೇರಳದಲ್ಲಿ ಕನ್ನಡ ಶಾಲೆಗಳನ್ನು ಮುಚ್ಚುವ ಹುನ್ನಾರ ನಡೆಯುತ್ತಿದೆ. ಕಾಂಗ್ರೆಸ್ ನಾಯಕರಿಗೆ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಮೇಲೆ ಪ್ರೀತಿ ಇದೆ. ಕೇರಳದಲ್ಲಿ ಕನ್ನಡದ ಮೇಲೆ ನಡೆಯುತ್ತಿರುವ ಪ್ರಹಾರಕ್ಕೆ ಮಾತನಾಡುತ್ತಿಲ್ಲ ಪವರ್ ಫುಲ್ ಜನರಲ್ ಸೆಕ್ರೆಟರಿ ವೇಣುಗೋಪಾಲ್ ಮೌನವಾ… ಲಂಗಾಣ ನಮಗೆ ಸವಾಲು ಹಾಕಲು ನಮ್ಮ ನಾಯಕರೇ ಕಾರಣ ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅವರೇ, ಉತ್ತರ ಕೊಡಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ ವಾಲ್ಮೀಕಿ…
ಮೈಸೂರು : ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕಳಲೆ ಎಂಬ ಗ್ರಾಮದಲ್ಲಿ ನಡೆದಿದೆ. ರಿಪೀಸ್ ಪಟ್ಟಿಯಿಂದ ಹೊಡೆದು ಸುಧಾ (30) ರನ್ನು ಪತಿ ಮಹೇಶ್ ಕೊಲೆ ಮಾಡಿದ್ದಾನೆ. 13 ವರ್ಷದ ಹಿಂದೆ ಮಲ್ಲಹಳ್ಳಿ ಮಹೇಶ ಸುಧಾ ಅವರನ್ನು ವಿವಾಹವಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಸುಧಾ ಮತ್ತು ಮಹೇಶ್ ದೂರವಾಗಿದ್ದರು. ಕಳಲೇ ಗ್ರಾಮದ ದೊಡ್ಡಬೀದಿಯಲ್ಲಿ ಮಹೇಶ್ ಪತ್ನಿ ಸುಧಾ ವಾಸವಿದ್ದರು. ನಿನ್ನೆ ರಾತ್ರಿ ಹೆಂಡತಿ ಮನೆಗೆ ಬಂದು ಗಲಾಟೆ ಮಾಡಿದ್ದಾನೆ. ಗಲಾಟೆ ವಿಕೋಪಕ್ಕೆ ತಿರುಗಿ ಪತ್ನಿಯನ್ನು ಕೊಂದು ಪತಿ ಮಹೇಶ್ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಬೆಂಗಳೂರಿನ ಹೆಬ್ಬಾಳದ ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. ಮೂರು ಆರ್‌ಡಿಎಕ್ಸ್ ಬಾಂಬ್ ಇಟ್ಟಿರುವುದು ವಿದ್ಯಾಲಯದ ಇಮೇಲ್ ಐಡಿ ಗೆ ಸಂದೇಶ ಬಂದಿದೆ. ಸದಾಶಿವನಗರ ಠಾಣೆಗೆ ಕಾಲೇಜಿನ ಪ್ರಿನ್ಸಿಪಲ್ ಪಿಎಮ್ ಪ್ರಕಾಶ್ ದೂರ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿ ಸದಾಶಿವನಗರ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಪರಿಶೀಲನೆ ವೇಳೆ ಯಾವುದೇ ಆರ್ ಡಿ ಎಕ್ಸ್ ಬಾಂಬ್ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ. ಇದೊಂದು ಹೊಸ ಬೆದರಿಕೆ ಅನ್ನೋದು ಮೇಲ್ನೋಟಕ್ಕೆ ಪತ್ತೆಯಾಗಿದೆ ಬೆಂಗಳೂರಿನ ಸದಾಶಿವನಗರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಹುಬ್ಬಳ್ಳಿಯಲ್ಲಿ ನಡೆದ ಮಹಿಳೆ ವಿವಸ್ತ್ರ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದ್ದು, ಮುಖ್ಯಮಂತ್ರಿಗಳ ಅನುಮತಿ ಪಡೆದು ಸಿಐಡಿಗೆ ವಹಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ತಿಳಿಸಿದರು. ಪೊಲೀಸರ ಅಮಾನತಿಗೆ ವಿಪಕ್ಷ ನಾಯಕ ಆರ್.ಅಶೋಕ್ ಗಡುವು ನೀಡಿದ ವಿಚಾರವಾಗಿ ಪ್ರತಿಕ್ರಿಯಿಸಿ, ಹುಬ್ಬಳ್ಳಿ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಕೇಸ್ ಸಿಐಡಿಗೆ ಕೊಡಲು ಚರ್ಚೆ ನಡೆದಿದೆ. ಸಿಎಂ ಅನುಮತಿ ಪಡೆದು ಸಿಐಡಿ ತನಿಖೆಗೆ ಕೊಡ್ತೇವೆ. ಸಿಐಡಿ ತನಿಖೆಯ ನಂತರ ಸತ್ಯಾಸತ್ಯತೆ ಗೊತ್ತಾಗುತ್ತದೆ. ಮಹಿಳೆಯ ವಿವಸ್ತ್ರ ಪ್ರಕರಣದ ಬಗ್ಗೆ ಬಿಜೆಪಿಯವರು ಒಂದು, ನಮ್ಮವರು ಇನ್ನೊಂದು ರೀತಿ ಹೇಳುತ್ತಿದ್ದಾರೆ. ಹಾಗಾಗಿ, ಸಿಐಡಿ ತನಿಖೆಯಿಂದ ಎಲ್ಲವೂ ಹೊರಬರಲಿ ಎಂದರು. ಸಿಐಡಿಯವರು ತನಿಖೆ ಮಾಡಿ ಸರ್ಕಾರಕ್ಕೆ ವರದಿ ಕೊಡಬೇಕು. ಆ ನಂತರ ಸರ್ಕಾರ ಯಾರು ತಪ್ಪಿತಸ್ಥರು, ಯಾರ ನಿರ್ಲಕ್ಷ್ಯವಿದೆ ಎಲ್ಲವನ್ನೂ ಪರಿಗಣಿಸಿ ಮುಂದಿನ ತೀರ್ಮಾನ ಮಾಡಲಿದೆ. ಮಹಿಳೆ ವಿವಸ್ತ್ರ ಆಗುವುದಕ್ಕೆ ಪೊಲೀಸರು ಬಿಟ್ಟಿಲ್ಲ. ಪೊಲೀಸರು ಕೂಡಲೇ ಕ್ರಮ ವಹಿಸಿದ್ದಾರೆ. ಪೊಲೀಸರು ವಿವಸ್ತ್ರಗೊಳಿಸಿಲ್ಲ, ಆಕೆಯೇ…
ಬೆಂಗಳೂರು : ಧಾರವಾಡದಲ್ಲಿ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ಆದೇಶ ಕಾಯ್ದಿರಿಸಿ ಆದೇಶ ಹೊರಡಿಸಿದೆ. ಇದಕ್ಕೂ ಮುನ್ನ ವಾದ ಮುಂದುವರೆಸಿದ ಕುಲಕರ್ಣಿ ಪರ ವಕೀಲರು, ಕೊಲೆ ಪ್ರಕರಣದಲ್ಲಿ ಅರ್ಜಿದಾರರ ಯಾವುದೇ ಪಾತ್ರವಿಲ್ಲ. ಕೊಲೆಯಾದ ಸ್ಥಳದಲ್ಲಿಯೂ ಹಾಜರಿರಲಿಲ್ಲ. ಪ್ರಕರಣದಲ್ಲಿ ಇತರೆ ಆರೋಪಿಗಳಿಗೆ ಈಗಾಗಲೇ ಜಾಮೀನು ಮಂಜೂರಾಗಿದೆ. ಜಾಮೀನು ರದ್ದುಪಡಿಸಿ ಆದೇಶಿಸುವುದಕ್ಕೂ ಜಾಮೀನು ನೀಡುವ ಸಂದರ್ಭದಲ್ಲಿ ವಿಧಿಸುವ ಷರತ್ತುಗಳನ್ನು ಉಲ್ಲಂಘಿಸುವುದಕ್ಕೂ ಸಾಕಷ್ಟು ವ್ಯತ್ಯಾಸವಿದೆ ಎಂದರು. ಅರ್ಜಿದಾರರಿಗೆ ಜಾಮೀನು ಮಂಜೂರು ಮಾಡಿರುವುದು ತಪ್ಪು ಎಂದು ಸುಪ್ರೀಂ ಕೋರ್ಟ್ ತಿಳಿಸಿಲ್ಲ. ಆದರೆ, ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಆರೋಪದಲ್ಲಿ ಮಾತ್ರ ಜಾಮೀನು ರದ್ದುಮಾಡಿ ಆದೇಶಿಸಿದ್ದು, ಆದೇಶದಲ್ಲಿ ಹೊಸದಾಗಿ ಜಾಮೀನು ಅರ್ಜಿ ಸಲ್ಲಿಸಬಹುದು ಎಂಬುದಾಗಿ ತಿಳಿಸಿದೆ. ಆದ್ದರಿಂದ ಅರ್ಜಿದಾರರ ವಿರುದ್ಧ ಇಬ್ಬರು ಅಧಿಕಾರಿಗಳ ಪಾಟಿ ಸವಾಲು ಬಾಕಿ ಇದೆ. ಹಾಗಾಗಿ ಜಾಮೀನು ಮಂಜೂರು ಮಾಡಬೇಕು ಎಂದು…
ಬೆಂಗಳೂರು : ಬೆಂಗಳೂರಿನಲ್ಲಿ ಬೈಕ್ ಬಂದಿದ್ದಕ್ಕೆ ಡೆಲಿವರಿ ಬಾಯ್ ಒಬ್ಬನಿಗೆ ಬೈಕ್ ಸವಾರರು ಹಲ್ಲೆ ಮಾಡಿದ್ದಾರೆ ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು ಜನವರಿ 4ರಂದು ನಡೆದ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನಲ್ಲಿ ಬೈಕ್ ಸವಾರರಿಗೆ ಡೆಲಿವರಿ ಬಾಯ್ ಏಕಾಏಕಿ ಅಡ್ಡ ಬಂದಿದ್ದಾನೆ. ಇದರಿಂದ ಕೋಪಗೊಂಡು ಡೆಲಿವರಿ ಬಾಯ್ ಮೇಲೆ ಬೈಕ್ ಸವಾರರು ಹಲ್ಲೆ ಮಾಡಿದ್ದಾರೆ . ಬೈಕ್ ಸವಾರರಿಗೆ ತಕ್ಷಣ ಸ್ಥಳೀಯರು ಮತ್ತೆ ಥಳಿಸಿದ್ದಾರೆ. ಸ್ಥಳೀಯರಿಂದ ಗೂಸಾ ಬೀಳುತ್ತಿದ್ದಂತೆ ಬೈಕ್ ಸವಾರರು ಅಲ್ಲಿಂದ ಪರಾರಿ ಆಗಿದ್ದಾರೆ ಬೈಯಪ್ಪನಹಳ್ಳಿ ಠಾಣೆ ಪೋಲಿಸರು ಸಿಸಿಟಿವಿ ಕ್ಯಾಮರಾ ಪರಿಶೀಲನೆ ಮಾಡಿ ಪುಂಡರಿಗೆ ಹುಡುಕಾಟ ನಡೆಸುತ್ತಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಕಾಲೇಜು ಆಡಳಿತ ಮಂಡಳಿ ಕಿರುಕುಳಕ್ಕೆ ಬೇಸತ್ತು ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಶರಣಾಗಿರುವ ಘಟನೆ ವರದಿಯಾಗಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಯಶಸ್ವಿನಿ (23) ನೇಣಿಗೆ ಶರಣಾಗಿದ್ದಾಳೆ ಪರಿಮಳ ಹಾಗು ಭೂದೇವಯ್ಯ ದಂಪತಿಯ ಏಕೈಕ ಪುತ್ರಿಯಾಗಿರುವ ಯಶಸ್ವಿನಿ ಕಾಲೇಜು ಆಡಳಿತ ಮಂಡಳಿ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಶರಣಾಗಿದ್ದಾಳೆ. ಬೊಮ್ಮನಹಳ್ಳಿಯ ಆಕ್ಸ್ಫರ್ಡ್ ಡೆಂಟಲ್ ಕಾಲೇಜಿನ ವಿದ್ಯಾರ್ಥಿಯಾಗಿರುವ ಯಶಸ್ವಿನಿ ಒರಲ್ ಮೆಡಿಸಿನ್ ಅಂಡ್ ರೇಡಿಯೋಲೋಜಿ ವಿಭಾಗದಲ್ಲಿ ಮೂರನೇ ವರ್ಷದ ವಿದ್ಯಾರ್ಥಿನಿಯಾಗಿ ಓದುತ್ತಿದ್ದಳು. ದಂತ ವೈದ್ಯಕೀಯ ವಿದ್ಯಾರ್ಥಿಗಳಿಗೆ ಯಶಸ್ವಿನಿಗೆ ಕಾಲೇಜಿನಲ್ಲಿ ಕಿರುಕುಳ ನೀಡುತ್ತಿರುವ ಆರೋಪ ಕೇಳಿ ಬಂದಿದೆ. ಯಶಸ್ವಿನಿಗೆ ಅವಕಾಶ ನೀಡದೆ ಟಾರ್ಚರ್ ನೀಡಿದ್ದಾರೆ. ಕಣ್ಣು ನೋವಾಗಿದ್ದರಿಂದ ಯಶಸ್ವಿನಿ ಬುಧವಾರ ಕಾಲೇಜಿಗೆ ರಜೆ ಹಾಕಿದ್ದಳು.ಗುರುವಾರ ಕಾಲೇಜಿಗೆ ಹೋದಾಗ ವಿದ್ಯಾರ್ಥಿಗಳ ಮುಂದೆ ಆಕೆಗೆ ಅವಮಾನ ಮಾಡಲಾಗಿದೆ. ಕಣ್ಣಿಗೆ ಯಾವ ಡ್ರಾಪ್ಸ್ ಬಳಸಿದೆ ಎಷ್ಟು ಹಣೆ ಹಾಕಿಕೊಂಡೆ ಎಂದು ಪ್ರಶ್ನಿಸಿದ್ದಾರೆ.ಇಡೀ ಬಾಟಲಿ ಸುರಿದುಕೊಂಡ ಎಂದು ಉಪನ್ಯಾಸಕ ಅವಮಾನಿಸಿದ್ದಾರೆ. ಉಪನ್ಯಾಸಕ…














