Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಕೊಲೆ ನಡೆದಿದ್ದು, ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಸೆಕ್ಯೂರಿಟಿ ಗಾರ್ಡ್ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈಯಲಾಗಿದೆ. ಚಾಕುವಿನಿಂದ ಇರಿದು ನೇಪಾಳ ಮೂಲದ ಗಣೇಶ್ (32) ಎನ್ನುವ ಸೆಕ್ಯೂರಿಟಿ ಗಾರ್ಡನ್ನು ಕೊಲೆ ಮಾಡಲಾಗಿದೆ. ಬ್ಯಾಟರಾಯನಪುರದ ಟಿಂಬರ್ ಗಾರ್ಡನ್ ಬಳಿ ಈ ಒಂದು ಭೀಕರ ಕೊಲೆ ನಡೆದಿದೆ. ಬ್ಯಾಟರಾಯನಪುರದ ಗಾರ್ಮೆಂಟ್ ನಲ್ಲಿ ಗಣೇಶ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದ. ಸದ್ಯ ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ ಕೊಲೆ ಆರೋಪಿಗಳಿಗಾಗಿ ಸದ್ಯ ಪೋಲಿಸಲು ಹುಡುಕಾಟ ನಡೆಸುತ್ತಿದ್ದಾರೆ. ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಪ್ಲಾಸ್ಟಿಕ್ ನಲ್ಲಿ ಇಡ್ಲಿ ತಯಾರಿಸುವುದರಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ರಾಜ್ಯ ಸರ್ಕಾರ ಪ್ಲಾಸ್ಟಿಕ್ ಬ್ಯಾನ್ ಮಾಡಿ ಆದೇಶ ಹೊರಡಿಸಿತ್ತು. ಅದಾದ ಬಳಿಕ ಮಹಿಳೆಯರು ತಮ್ಮ ಸೌಂದರ್ಯಕ್ಕೆ ಬಳಸುವ ಲಿಪ್ಸ್ಟಿಕ್, ಲಿಪ್ ಕೇರ್ ಹಾಗೂ ಕಾಸ್ಮೆಟಿಕ್ ಗಳಲ್ಲಿ ಕೂಡ ಹಲವು ಪರಿಣಾಮಕಾರಿ ಅಂಶಗಳು ಪತ್ತೆಯಾಗಿವೆ. ಅಲ್ಲದೆ ಟ್ಯಾಟೂನಿಂದ ಚರ್ಮರೋಗ ಬರುವ ಸಾಧ್ಯತೆ ಇದೆ ಎಂದು ಶೀಘ್ರದಲ್ಲಿ ಅದನ್ನು ಕೂಡ ನಿಷೇಧಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಇದೀಗ ಮೆಹಂದಿಯಲ್ಲಿ ಕೂಡ ಕೃತಕ ಬಣ್ಣ ಬಳಸಿರುವ ಆರೋಪ ಕೇಳಿ ಬರುತ್ತಿದೆ. ಹೌದು ಲಿಪ್ಸ್ಟಿಕ್ ಟ್ಯಾಟು ಬಳಿಕ ಇದೀಗ ಮೆಹಂದಿಯು ಡೆಂಜರ್ ಎನ್ನಲಾಗುತ್ತಿದೆ. ಮದರಂಗಿಗೆ ಅಪಾಯಕಾರಿ ಕಲರ್ ಬಳಕೆ ಆಗುತ್ತಿದೆ ಎಂದು ಹೇಳಲಾಗುತ್ತಿದೆ. ಕೈಯಲ್ಲಿ ದೀರ್ಘಕಾಲ ಉಳಿಯಲು ಕೃತಕ ಬಣ್ಣ ಬಳಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಮೆಹಂದಿಯಲ್ಲಿ ಕೃತಕವನ್ನು ಬಳಸುತ್ತಿರುವ ಕುರಿತು ದೂರು ಬಂದಿದೆ. ಹಾಗಾಗಿ ಬೆಂಗಳೂರಿನಲ್ಲಿ ಸ್ಯಾಂಪಲ್ ಸಂಗ್ರಹಕ್ಕೆ ಆರೋಗ್ಯ…
ಬಳ್ಳಾರಿ : ಬಳ್ಳಾರಿ ಜಿಲ್ಲೆಯ ಕುರಿಕುಪ್ಪ ಬಳಿ 2400 ಸತ್ತ ಕೋಳಿ ಮಾದರಿಯಲ್ಲಿ ಹಕ್ಕಿ ಜ್ವರ ದೃಢವಾಗಿದೆ. ಪ್ರಯೋಗಾಲಯದಲ್ಲಿ ಸತ್ತ ಕೋಳಿಗಳ ಮಾದರಿಯಲ್ಲಿ ಹಕ್ಕಿ ಜ್ವರ ಇದೀಗ ದೃಢವಾಗಿದೆ ಎಂದು ತಿಳಿದುಬಂದಿದೆ. ಮಧ್ಯಪ್ರದೇಶದ ಭೂಪಾಲ್ನ ಲ್ಯಾಬ್ ನೀಡಿದ ವರದಿಯಲ್ಲಿ ಹಕ್ಕಿ ಜ್ವರ ಇರುವುದು ದೃಢವಾಗಿದೆ. ಹಕ್ಕಿ ಜ್ವರ ದೃಢವಾದ ಹಿನ್ನೆಲೆಯಲ್ಲಿ ಬಳ್ಳಾರಿಯ ಜನ ಇದೀಗ ಆತಂಕಕ್ಕೆ ಒಳಗಾಗಿದ್ದಾರೆ. ಕರ್ನಾಟಕ ಪಕ್ಕದ ರಾಜ್ಯಗಳದ ಆಂಧ್ರಪ್ರದೇಶ ತೆಲಂಗಾಣದಿಂದ ಸೋಂಕು ಹರಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸೂಚನೆ ನೀಡಿದೆ. ಕುರಿಕೊಪ್ಪ ಸುತ್ತಲೂ ಒಂದು ಕಿಲೋಮೀಟರ್ ಅಪಾಯಕಾರಿಯ ವಲಯ ಎಂದು ಘೋಷಣೆ ಮಾಡಲಾಗಿದೆ. ತೋರಣಗಲ್ಲು, ಕುರೆಕೊಪ್ಪ, ವಡ್ಡು, ತಾಳೂರ, ಬಸಾಪುರ, ದರೋಜಿ ಹಾಗು ದೇವಲಾಪುರ ಗ್ರಾಮವನ್ನು ಅಪಾಯಕಾರಿ ವಲಯ ಎಂದು ಗುರುತಿಸಲಾಗಿದೆ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಮಾಹಿತಿ ನೀಡಿದ್ದಾರೆ.
ಬೆಳಗಾವಿ : ಎಂತೆಂತ ಚಿಕ್ಕ ಪುಟ್ಟ ವಿಚಾಗಳಿಗೆ ಹಲ್ಲೆ ನಡೆಯುತ್ತೆ ನೋಡಿ, ಕೇವಲ ಮೊಬೈಲ್‌ನಲ್ಲಿರುವ ಸಿಮ್ ಕಾರ್ಡ್‌ಗಾಗಿ ವ್ಯಕ್ತಿಯೋರ್ವನಿಗೆ ಚಾಕು ಇರಿದ ಘಟನೆ ಬೆಳಗಾವಿ ನಗರದ ಬೋಗಾರವೇಸ್‌ನಲ್ಲಿರುವ ಹನುಮಂತ ದೇವಸ್ಥಾನದ ಬಳಿ ನಡೆದಿದೆ. ಹಲ್ಲೆ ಒಳಗಾದ ವ್ಯಕ್ತಿಯನ್ನು ಸುರೇಶ ವಾರಂಗ್ ಎಂದು ತಿಳಿದುಬಂದಿದೆ. ಹಲ್ಲೆ ಮಾಡಿದವರನ್ನು ನಿಖಿಲ್ ಕುರಣೆ ಎಂದು ತಿಳಿದುಬಂದಿದೆ. ಆರೋಪಿ ನಿಖಿಲ್ ಸುರೇಶ್ ಬಳಿ ಕರೆ ಮಾಡಿ ಕೊಡುತ್ತೇನೆ ಎಂದು ಫೋನ್ ತೆಗೆದುಕೊಂಡಿದ್ದಾನೆ. ಈ ವೇಳೆ ಮೊಬೈಲ್ ಕವರ್‌ನಲ್ಲಿಟ್ಟಿದ್ದ 4,000 ರೂ.ನಲ್ಲಿ 1500 ರೂ. ಹಣವನ್ನು ನಿಖಿಲ್ ಎಗರಿಸಿದ್ದಾನೆ. ಅಲ್ಲದೆ ಮೊಬೈಲ್‌ನಲ್ಲಿದ್ದ ಸಿಮ್‌ಕಾರ್ಡ್ ಸಹ ತೆಗೆದುಕೊಂಡಿದ್ದಾನೆ. ಸಿಮ್‌ಕಾರ್ಡ್ ಮತ್ತು ಹಣ ವಾಪಸ್ ಕೇಳಲು ಹೋಗಿದ್ದಾಗ ನಿಖಿಲ್ ಮತ್ತು ಆತನ ಗ್ಯಾಂಗ್ ನನ್ನ ಮೇಲೆ ಹಲ್ಲೆ ಮಾಡಿದೆ ಎಂದು ಸುರೇಶ್ ವಾರಂಗ್ ಆರೋಪಿಸಿದ್ದಾರೆ.ಸುರೇಶ್ ತೊಡೆಯ ಭಾಗಕ್ಕೆ ತೀವ್ರವಾಗಿ ಹಲ್ಲೆಯಾಗಿದ್ದು, ಬೆಳಗಾವಿಯ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ನವದೆಹಲಿ : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಇಂದು ಬಿಎಸ್ ಯಡಿಯೂರಪ್ಪ ವಿರುದ್ಧ ಕುರಿತ ಪ್ರಕರಣಗಳ ವಿಚಾರಣೆ ನಡೆಯಿತು. ವಿಚಾರಣೆ ಬಳಿಕ ನ್ಯಾ.ಪರ್ದಿವಾಲ ನ್ಯಾ.ಮನೋಜ್ ಸಿನ್ಹ ನೇತೃತ್ವದ ಸುಪ್ರೀಂಕೋರ್ಟ್ ಪೀಠ ವಿಚಾರಣೆಯನ್ನು ಮಾ.6ಕ್ಕೆ ಮುಂದೂಡಿ ಅದೇಶಿಸಲಾಯಿತು. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕೇಸ್ ಗಳು ದಾಖಲಾಗಿವೆ. ಪ್ರಕರಣಗಳಿಗೆ ತಡೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಲಾಗಿದ್ದು ನ್ಯಾ.ಪರ್ದಿವಾಲ ನ್ಯಾ.ಮನೋಜ್ ಸಿನ್ಹ ಅವರಿದ್ದ ಸುಪ್ರೀಂಕೋರ್ಟ್ ಪೀಠದಲ್ಲಿ ವಿಚಾರಣೆ ನಡೆಯಿತು.ವಿಚಾರಣೆ ವೇಳೆ ವಾದ ಪ್ರತಿವಾದ ಆಲಿಸಿದ ಬಳಿಕ ಮಾರ್ಚ್ 6ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್ ನ್ಯಾ.ಪರ್ದಿವಾಲ ನ್ಯಾ.ಮನೋಜ್ ಸಿನ್ಹ ನೇತೃತ್ವದ ಪೀಠದಿಂದ ಆದೇಶ ಹೊರಡಿಸಲಾಗಿದೆ.
ಬೆಳಗಾವಿ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿದ್ದ ಕಳೆದ ಮಹಾಕುಂಭ ಮೇಳಕ್ಕೆ ಕಳೆದ ಶಿವರಾತ್ರಿಯಂದು ತೆರೆ ಬಿದ್ದಿತ್ತು. ಒಂದು ಕುಂಭ ಮೇಳಕ್ಕೆ ಕುಟುಂಬದ ಸಮೇತ ತೆರಳಿದ್ದ ಬೆಳಗಾವಿ ಮೂಲದ ವ್ಯಕ್ತಿ, ಕುಂಭಮೇಳ ಮುಗಿಸಿ ಮರಳುವಾಗ ಹೃದಯಾಘಾತವಾಗಿ ಸಾವನಪ್ಪಿದ್ದಾರೆ. ಮೃತರನ್ನು ಬೆಳಗಾವಿಯ ಸಾಮಾಜಿಕ ಕಾರ್ಯಕರ್ತ ಕಿರಣ ನಿಪ್ಪಾಣಿಕರ (47) ಅವರು ಗುರುವಾರ ವಾರಾಣಸಿಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.ಇಂದು ಅವರ ಮೃತದೇಹವನ್ನು ಬೆಳಗಾವಿಗೆ ತರಲಾಗುವುದು ಎಂದು ಕುಟುಂಬದ ಆಪ್ತರು ತಿಳಿಸಿದ್ದಾರೆ. ಕಿರಣ್ ಸಹೋದರಿ ಲಕ್ಷ್ಮೀ ನಿಪ್ಪಾಣಿಕರ ಅವರು ಮಹಾನಗರ ಪಾಲಿಕೆ ಉಪ ಆಯುಕ್ತರಾಗಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿ ಕೊಂಡು ಅಗ್ನಿ ಅವಘಡ ಸಂಭವಿಸಿದೆ. ಈ ವೇಳೆ ಕಾರಿನಲ್ಲಿದ್ದ ನಾಲ್ವರು ವಿದ್ಯಾರ್ಥಿಗಳು ಅದೃಷ್ಟವಶಾತ್ ಪ್ರಾಣ ಅಪಾಯದಿಂದ ಪಾರಾಗಿರುವ ಘಟನೆ ಬೆಂಗಳೂರಿನ ಯಶವಂತಪುರದ ಮತ್ತಿಗೇರಿ ಸಿಗ್ನಲ್ ಬಳಿ ನಡೆದಿದೆ. ಹೌದು ಬೆಂಗಳೂರಿನ ಯಶವಂತಪುರದ ಮತ್ತಿರಿಯ ಸಿಗ್ನಲ್ ಬಳಿ ಈ ಒಂದು ಘಟನೆ ನಡೆದಿದೆ. ಬೆಂಕಿ ಕಾಣಿಸುತ್ತಿದ್ದಂತೆ ಕಾರಿನಿಂದ ಇಳಿದು ನಾಲ್ವರು ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಕಾರಿನಲ್ಲಿ ಹೇಗೆ ಬೆಂಕಿ ಹೊತ್ತುಕೊಂಡಿತು ಎಂದು ತಿಳಿದು ಬಂದಿಲ್ಲ. ಘಟನೆ ಕುರಿತು ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾರಾಷ್ಟ್ರ : ಕರ್ನಾಟಕ ರಾಜ್ಯ ಸಾರಿಗೆ ಬಸ್ಸಿನ ಕಂಡಕ್ಟರ್ ಮೇಲೆ ಮರಾಠಿ ಪ್ರಯಾಣಿಕರೊಂದಿಗೆ ಮರಾಠಿಯಲ್ಲಿ ಮಾತನಾಡದ ಕಾರಣ ಹಲ್ಲೆ ನಡೆದಿತ್ತು. ಘಟನೆ ಇದೀಗ ಎಷ್ಟರ ಮಟ್ಟಿಗೆ ತೀವ್ರತೆ ಆಗಿದೆ ಎಂದರೆ ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡಪರ ಹೋರಾಟಗಾರ ವಾಟಳ್ ನಾಗರಾಜ್ ಕರೆ ನೀಡಿದ್ದಾರೆ. ಇಷ್ಟಾದರೂ ಕೂಡ ಮಹಾರಾಷ್ಟ್ರದಲ್ಲಿ ಕೆಎಸ್ಆರ್ಟಿಸಿ ಬಸ್ ಚಾಲಕನ ಮುಖಕ್ಕೆ ಮಸಿ ಬೆಳೆದು ಮರಾಠಿಗರು ಪುಂಡಾಟ ಮೆರೆದಿದ್ದಾರೆ. ಹೌದು ಮಹಾರಾಷ್ಟ್ರದ ಪುಣೆಯಲ್ಲಿ ಸ್ವಾರ್ ಗೇಟ್ ಓವರ್ ಬ್ರಿಡ್ಜ್ ದಾಟುವ ಸಂದರ್ಭದಲ್ಲಿ ಆಳಂದ-ಸೋಲಾಪೂರ-ಪುಣೆ ಬಸ್ ಸೇರಿದಂತೆ ಬಸ್ ಚಾಲಕನ ಮುಖಕ್ಕೆ ಕೆಲ ಪುಂಡರು ಕಪ್ಪು ಮಸಿ ಬಳಿದು ಉದ್ದಟತನ ಮೆರೆದಿರುವ ಘಟನೆ ರಾತ್ರಿ ನಡೆದಿದೆ.ಕರ್ನಾಟಕ ರಾಜ್ಯ ಸಾರಿಗೆ ಬಸ್ಸಿನ ಕಂಡಕ್ಟರ್ ಮೇಲೆ ಮರಾಠಿ ಪ್ರಯಾಣಿಕರೊಂದಿಗೆ ಮರಾಠಿಯಲ್ಲಿ ಮಾತನಾಡದ ಕಾರಣ ಹಲ್ಲೆ ನಡೆದಿತ್ತು. ಆದರೆ ಇದೀಗ ಮತ್ತೆ ಕೆಲ ಪುಂಡರು ಕರ್ನಾಟಕದ ಬಸ್ಸುಗಳನ್ನು ಗುರಿಯಾಗಿಸಿ ಪುಣೆಯ ಸ್ವಾರ್ ಗೇಟ್ ಬ್ರಿಡ್ಜ್ ದಾಟುವಾಗ ಬಸ್ ಅನ್ನು ನಿಲ್ಲಿಸಿ,…
ಬೆಂಗಳೂರು : ಬೆಂಗಳೂರು: ಬೆಳಗಾವಿಯಲ್ಲಿ ಸಾರಿಗೆ ಬಸ್ ನಿರ್ವಾಹಕನ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿದ್ದರು. ಇದನ್ನು ಕನ್ನಡಪರ ಸಂಘಟನೆಗಳು ತೀವ್ರವಾಗಿಯೇ ಖಂಡಿಸಿದ್ದವು. ಈ ಬೆನ್ನಲ್ಲೇ ಇಂತಹ ಘಟನೆ ಖಂಡಿಸಿ ಮಾರ್ಚ್.22ಕ್ಕೆ ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದಾವೆ. ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ಮರಾಠಿಗರ ಪುಂಡಾಟಿಕೆ ಹೆಚ್ಚಾಗಿದೆ. ಅಲ್ಲದೇ ಕರ್ನಾಟಕದ ಬಸ್ ಗಳಿಗೆ ಮಸಿ ಕೂಡ ಬಳಿಯಲಾಗಿದೆ. ಈ ಎಲ್ಲವನ್ನು ಕನ್ನಡಪರ ಸಂಘಟನೆಗಳು ತೀವ್ರವಾಗಿ ಖಂಡಿಸಿದ್ದಾವೆ.ಬೆಳಗಾವಿಯಲ್ಲಿ ಸಾರಿಗೆ ಬಸ್ ಕಂಡಕ್ಟರ್ ಮೇಲಿನ ಹಲ್ಲೆ, ಮಹಾರಾಷ್ಟ್ರ ಗಡಿ ಭಾಗದಲ್ಲಿ ಕನ್ನಡಿಗರ ಮೇಲೆ ದಬ್ಬಾಳಿಕೆ ಖಂಡಿಸಿ ಮಾರ್ಚ್.22ರಂದು ಕರ್ನಾಟಕ ಬಂದ್ ನಡೆಸುವುದಾಗಿ ಕನ್ನಡಪರ ಸಂಘಟನೆಗಳು ಘೋಷಿಸಿವೆ. ಈ ಸಂಬಂಧ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳಿಂದ ಮಹತ್ವದ ಸಭೆ ಕೂಡ ನಡೆಸಿ ನಿರ್ಧಾರ ಕೈಗೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ಮಾರ್ಚ್ 22ರಂದು ಕರ್ನಾಟಕ ಬಂದ್ ಫಿಕ್ಸ್ ಆದಂತೆ ಆಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಹೊರಬೀಳಬೇಕಿದೆ.…
ತುಮಕೂರು : ತುಮಕೂರು ಜಿಲ್ಲೆಯ ಕುಣಿಗಲ್ ಬಳಿಯ ದೊಡ್ಡಕೆರೆಯಲ್ಲಿ ಮಹಿಳಾ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಟೆಕ್ಕಿ ಸುಮಾ ಮೃತದೇಹ ಪತ್ತೆಯಾಗಿದ್ದು, ಕುಣಿಗಲ್ ತಾಲೂಕಿನ ಸೊಬಗಾನಹಳ್ಳಿ ನಿವಾಸಿ ಸುಮಾ ಮೃತ ದುರ್ದೈವಿ. ಟೆಕ್ಕಿ ಸುಮಾ ಅವರು ಬೆಂಗಳೂರಿನಲ್ಲಿ ಸಾಫ್ಟವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ ಬೆಂಗಳೂರಿನಿಂದ ಗ್ರಾಮಕ್ಕೆ ವಾಪಸ್ ಬಂದಿದ್ದರು. ಸಂಜೆ ಹೊತ್ತಿಗೆ ಕೆರೆ ಬಳಿ ಸುಮಾರ ಬ್ಯಾಗ್, ಮೊಬೈಲ್, ಬಸ್ ಟಿಕೆಟ್, ಚಪ್ಪಲಿ ಸಿಕ್ಕಿವೆ.ಇದರಿಂದ ಅನುಮಾನಗೊಂಡ ಸ್ಥಳೀಯರು ಸುಮಾರ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಮತ್ತು ಪೊಲೀಸರು ದೌಡಾಯಿಸಿದ್ದಾರೆ. ಗುರುವಾರ ಸಂಜೆಯಿಂದ ಸುಮಾಗಾಗಿ ಕೆರೆಯಲ್ಲಿ ಅಗ್ನಿಶಾಮಕದಳ ಸಿಬ್ಬಂದಿ ಹುಡುಕಾಡಿದ್ದಾರೆ.ಆದರೆ ನಿನ್ನೆ ಸುಮಾ ಮೃತದೇಹ ಸಿಕ್ಕಿರಲಿಲ್ಲ. ಹಾಗಾಗಿ ಇಂದು ಮತ್ತೆ ಶೋಧಕಾರ್ಯಕ್ಕೆ ಇಳಿದರು. ಅಗ್ನಿಶಾಮಕದಳ ಸಿಬ್ಬಂದಿಯೊಂಗೆ ಶಾಸಕ ರಂಗನಾಥ್ ಸಾಥ್ ನೀಡಿದ್ದು, ಖುದ್ದು ಶೋಧಕಾರ್ಯಕ್ಕೆ ಕೆರೆಗೆ ಇಳಿದರು.ನಿರಂತರ ಶೋಧಕಾರ್ಯ ಬಳಿಕ ಟೆಕ್ಕಿ ಸುಮಾರ ಮೃತದೇಹ ಪತ್ತೆಯಾಗಿದೆ. ಘಟನೆ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ…