Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಮೈಸೂರು ನಾಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದ ಅಕ್ರಮ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಮೆಟ್ಟಿಲೇರಿದ್ದಾರೆ. ಇದರಿಂದ ಸಿಎಂ ಸಿದ್ದರಾಮಯ್ಯಗೆ ಮತ್ತೆ ಮುಡಾ ಸಂಕಷ್ಟ ಶುರುವಾಗಿದೆ. ಹೌದು ಸ್ನೇಹಮಯಿ ಕೃಷ್ಣ ಅವರು, ಮೈಸೂರು ಜಿಲ್ಲಾ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ ಎಂ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ, ಜಮೀನಿನ ಮೂಲ ಮಾಲೀಕ ಜೆ. ದೇವರಾಜು, ಮುಡಾದ ಮಾಜಿ ಆಯುಕ್ತ ಜಿ ಟಿ ದಿನೇಶ್ ಕುಮಾರ್ ಮತ್ತು ಜಾರಿ ನಿರ್ದೇಶನಾಲಯದ ಸಹಾಯಕ ನಿರ್ದೇಶಕರನ್ನು ಪ್ರತಿವಾದಿಗಳನ್ನಾಗಿ ಹೆಸರಿಸಿದ್ದಾರೆ. ಈ ಪ್ರಕರಣದಲ್ಲಿ ಖಾಸಗಿ ದೂರುದಾರರಾಗಿರುವ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿ ಇನ್ನೂ ವಿಚಾರಣೆಗೆ ಬರಬೇಕಿದೆ. ವಿಶೇಷ ನ್ಯಾಯಾಲಯವು 2026ರ ಜನವರಿ 28ರಂದು ಈ ಬಿ ರಿಪೋರ್ಟ್ ಅನ್ನು ಅಂಗೀಕರಿಸಿ ಆದೇಶ ಹೊರಡಿಸಿತ್ತು. ಹೀಗಾಗಿ, ಲೋಕಾಯುಕ್ತ ಎಸ್ಪಿ ಸಲ್ಲಿಸಿರುವ ಬಿ ರಿಪೋರ್ಟ್…
ಬೆಂಗಳೂರು : ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಇಂದು ಚರ್ಚೆ ನಡೆಯಿತು. ಹೈಕಮಾಂಡ್ ಹೇಳಿದಾಗ ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ. ಈ ವೇಳೆ ಸಿಎಂ ಆಗುವ ಆಸೆ ಇಲ್ಲವಾ ಅಂತ ಆರ್ ಅಶೋಕಗೆ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು. ಸಿಎಂ ಆಗಬೇಕು ಅನ್ನೋದನ್ನು ಹೇಳಲಾಗದೆ ಆರ್ ಅಶೋಕ್ ಈ ವೇಳೆ ನಕ್ಕಿದ್ದಾರೆ. ಅಶೋಕ ಆದರೂ ಸಿಎಂ ಆಗಲಿ ಬೆಲ್ಲದ ಆದರೂ ಸಿಎಂ ಆಗಲಿ, ಅಶ್ವತ್ ನಾರಾಯಣ ಸಿಎಂ ಆದರು ಸಹ ಸಂತೋಷವೇ, ಆದರೆ ವಿಜಯೇಂದ್ರ ನೀವು ಸಿಎಂ ಆಗೋಕೆ ಬಿಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ಕಾಲು ಎಳೆದರು. ಈ ವೇಳೆ ಶಾಸಕ ಸುನಿಲ್ ಕುಮಾರ್ ಡಿಕೆ ಶಿವಕುಮಾರ್ ಸಿಎಂ ಆಗಲಿ ಅಂತ ಒಂದು ಬಾರಿ ಹೇಳಲಿಲ್ಲವಲ್ಲ ಎಂದಾಗ ಹೈಕಮಾಂಡ್ ನವರು ಯಾವಾಗ ತೀರ್ಮಾನ ಮಾಡುತ್ತಾರೆ ಆಗ ಡಿಕೆ ಶಿವಕುಮಾರ್ ಅವರು ಸಿಎಂ ಆಗುತ್ತಾರೆ. ಇಲ್ಲಿರುವ 224 ಶಾಸಕರು ಕೂಡ ಮುಖ್ಯಮಂತ್ರಿ ಆಗಲು ಅರ್ಹರಿದ್ದಾರೆ. ನಮ್ಮಲ್ಲಿ ಅನೇಕರು ಮುಖ್ಯಮಂತ್ರಿ ಆಗುವುದಕ್ಕೆ…
ಬಾಗಲಕೋಟೆ : ಏಪ್ರಿಲ್ 9 ರಂದು ಉಪಚುನಾವಣೆ ಹಿನ್ನೆಲೆ ಬಾಗಲಕೋಟೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1,39,200 ಹಣವನ್ನ ಜಪ್ತಿ ಮಾಡಿಕೊಳ್ಳಲಾಗಿದೆ.ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 1,39,200 ಹಣವನ್ನು ಸಿಬ್ಬಂದಿಗಳು ಜಪ್ತಿ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಜಾಲಿಹಾಳ ಚೆಕ್ ಪೋಸ್ಟ್ ನಲ್ಲಿ ಪರಿಶೀಲನೆ ವೇಳೆ ಹಣ ಪತ್ತೆಯಾಗಿದೆ. ಸುನೀಲ್ ಹಳಕಟ್ಟಿ ಎಂಬುವವರ ಬಳಿ ಇದ್ದ 64,200 ರೂಪಾಯಿ ಮುಕ್ತಿಯರ ಬೆಪಾರಿ ಎಂಬುವವರ ಬಳಿ ಇದ್ದ 75 ಸಾವಿರ ಹಣ ಜಪ್ತಿ ಮಾಡಿದ್ದಾರೆ. 50 ಸಾವಿರಕಿಂತ ಹೆಚ್ಚಿನ ಹಣ ಸಾಗಿಸಲು ದಾಖಲಾತಿ ಕಡ್ಡಾಯ. ಈ ಹಿನ್ನೆಲೆ ಯಾವುದೇ ದಾಖಲಾತಿ ಇಲ್ಲದಕ್ಕೆ ಹಣ ವಶಕ್ಕೆ ಪಡೆದಿದ್ದಾರೆ.
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇತ್ತೀಚಿನ ದಿನಗಳಲ್ಲಿ ಬಾಂಬ್ ಬೆದರಿಕೆಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಇಂದು ದೆಹಲಿಯ ಬಜೆಟ್ ಮಂಡನೆಗೆ ನಿಗದಿಯಾಗಿದ್ದು, ಇದೇ ದಿನವೇ ದೆಹಲಿಯ ವಿಧಾನಸಭೆ ಹಾಗೂ ವಿಧಾನ ಸಭೆಯ ಮೆಟ್ರೋ ಸ್ಟೇಷನ್ ಳನ್ನು ಸ್ಪೋಟಿಸಲಾಗುವುದು ಎಂಬ ಸಂದೇಶವಿರುವ ಬಾಂಬ್ ಬೆದರಿಕೆ ಬಂದಿದೆ. ದೆಹಲಿ ವಿಧಾನಸಭೆಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶ ಬಂದಿದೆ. 16 RDX ಐಇಡಿಗಳನ್ನು ಇಡಲಾಗಿದೆ. ಇಂದು ಮಧ್ಯಾಹ್ನ 1.40ಕ್ಕೆ ಸ್ಪೋಟಿಸೋದಾಗಿ ಉಲ್ಲೆಖಿಸಲಾಗಿದೆ. ಸ್ಥಳಕ್ಕೆ ಶ್ವಾನ ಡಾ ಸಿಬ್ಬಂದಿ ಪೊಲೀಸರು ಬಂದು ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು, ಮಾರ್ಚ್-25: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಮಾರ್ಚ್ 27(27-03-2025) ರ ಶುಕ್ರವಾರದಂದು “ಶ್ರೀರಾಮ ನವಮಿ ಹಬ್ಬ”ದ ಪ್ರಯುಕ್ತ ನಗರದಲ್ಲಿರುವ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಬಿಎ ಪಶುಪಾಲನಾ ವಿಭಾಗದ ಉಪ ನಿರ್ದೇಶಕರು ರವರು ತಿಳಿಸಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಅಥವಾ ಇತ್ತೀಚಿನ ಆಡಳಿತಾತ್ಮಕ ಬದಲಾವಣೆಯಂತೆ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಈ ಕುರಿತು ಅಧಿಕೃತ ಆದೇಶವನ್ನು ಹೊರಡಿಸುತ್ತದೆ. 2026ರ ಶ್ರೀರಾಮ ನವಮಿಯು ಮಾರ್ಚ್ 26, ಗುರುವಾರ ಅಥವಾ ಪಂಚಾಂಗದ ಅನ್ವಯ ಮಾರ್ಚ್ 27, ಶುಕ್ರವಾರದಂದು ಆಚರಿಸಲ್ಪಡುತ್ತಿದ್ದು, ಆ ದಿನದಂದು ಈ ಕೆಳಗಿನ ನಿಯಮಗಳು ಅನ್ವಯವಾಗುತ್ತವೆ: ಪ್ರಮುಖ ನಿರ್ಬಂಧಗಳು: ಕಸಾಯಿಖಾನೆಗಳ ಮುಚ್ಚಲ್ಪಟ್ಟಿರುತ್ತವೆ: ನಗರದ ವ್ಯಾಪ್ತಿಯಲ್ಲಿರುವ ಎಲ್ಲಾ ಸಾರ್ವಜನಿಕ ಕಸಾಯಿಖಾನೆಗಳಲ್ಲಿ ಪ್ರಾಣಿವಧೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮಾಂಸ ಮಾರಾಟ ನಿಷೇಧ: ಚಿಲ್ಲರೆ ಅಂಗಡಿಗಳು, ಮಾರುಕಟ್ಟೆಗಳು ಮತ್ತು ಮಾಂಸದ ಮಳಿಗೆಗಳಲ್ಲಿ (ಕೋಳಿ, ಕುರಿ, ಮೀನು ಇತ್ಯಾದಿ) ಮಾಂಸ ಮಾರಾಟ ಮಾಡುವಂತಿಲ್ಲ. ದಂಡ ಮತ್ತು ಕ್ರಮ:…
ನವದೆಹಲಿ : ಮಧ್ಯಪ್ರಾಚ್ಯ ಸಂಘರ್ಷದಿಂದ ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಅಭಾವ ಜೋರಾಗಿದೆ. ಹೀಗಾಗಿ ಗ್ಯಾಸ್ ಕಂಪನಿಗಳು ಬುಕ್ಕಿಂಗ್ ಹೊಸ ನಿಯಮ ಜಾರಿಗೊಳಿಸಿದೆ. ಸಿಂಗಲ್ ಗ್ಯಾಸ್ ಕನೆಕ್ಷನ್ ಹಾಗೂ ಡಬಲ್ ಕನೆಕ್ಷನ್‌ಗೆ ಬೇರೆ ಬೇರೆ ನಿಯಮಗಳನ್ನು ಜಾರಿತಂದಿದೆ. ಹೌದು ಇಂದಿನಿಂದ ಗ್ಯಾಸ್ ಬುಕ್ಕಿಂಗ್‌ಗೆ ಹೊಸ ನಿಯಮ ಜಾರಿಯಾಗಿದೆ. ಗಡುವು ಮುಗಿಯುವ ಮೊದಲೇ ಗ್ಯಾಸ್ ಬುಕ್ ಮಾಡಿದ್ರೆ ಅಕೌಂಟ್ ಬ್ಲಾಕ್ ಆಗಲಿದೆ ಎಂದು ಕಂಪನಿ ತಿಳಿಸಿದೆ. ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಪಾರದರ್ಶಕತೆ ತರಲು ಹೊಸ ನಿಯಮ ಜಾರಿಗೆ ಬಂದಿದೆ. ನಿಗದಿತ ದಿನಗಳ ಗಡುವು ಮುಗಿಯುವ ಮೊದಲೇ ಸಿಲಿಂಡರ್ ಬುಕ್ ಮಾಡಲು ಪ್ರಯತ್ನಿಸಿದರೆ, ಅಂತಹ ಗ್ರಾಹಕರ ಎಲ್‌ಪಿಜಿ ಐಡಿಯನ್ನು ತಾತ್ಕಾಲಿಕವಾಗಿ ಬ್ಲಾಕ್ ಮಾಡಲಾಗುವುದು. ಸಬ್ಸಿಡಿ ದುರ್ಬಳಕೆ ತಡೆಯಲು ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಸಿಂಗಲ್ ಕನೆಕ್ಷನ್ ನಿಯಮ: ಗ್ಯಾಸ್ ಡೆಲವರಿ ಆದ ದಿನದಿಂದ 25 ದಿನದ ನಂತರ ಗ್ಯಾಸ್ ಬುಕ್ ಮಾಡಬೇಕು. ಈ ಮೊದಲು 21 ದಿನವಿತ್ತು. ಇದೀಗ ಅದನ್ನು 25 ದಿನಕ್ಕೆ ಏರಿಸಿದ್ದಾರೆ. ಡಬಲ್…
ಮಂಡ್ಯ :- ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇರೆಗೆ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹಾಗೂ ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಮದ್ದೂರು ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಹಳೇ ಬಸ್ ನಿಲ್ದಾಣದಲ್ಲಿ ತಾಲೂಕಿನ ವಿವಿಧ ಹಿಂದೂ ಪರ ಸಂಘಟನೆಗಳ ವತಿಯಿಂದ ಸೋಮವಾರ ಸಂಜೆ ಬಲಿದಾನ್ ದಿವಸವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಅನಂತ್ ಕುಮಾರ್ ಹೆಗ್ಡೆ ಮತ್ತು ಬಸವನಗೌಡ ಪಾಟೀಲ್ ಯತ್ನಾಳ್ ಅವರುಗಳು ಬಹಿರಂಗ ಸಭೆಯಲ್ಲಿ ರೋಷವೇಷದ ಮಾತುಗಳನ್ನು ಹೇಳಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇರೆಗೆ ಸೆಕ್ಷನ್ 196 (1)(A)BNS ಆಕ್ಟ್ ಪ್ರಕಾರ ನಗರದ ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ವರದಿ : ಗಿರೀಶ್ ರಾಜ್, ಮಂಡ್ಯ
ಉತ್ತರಕನ್ನಡ : ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಆಪ್ತ ಗೋಪಾಲಕೃಷ್ಣ ನಾಯ್ಕಗೆ ಚಾಕು ಇರಿದಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೇಣಿ ಬಳಿ ನಡೆದಿದೆ. ಗೋಪಾಲಕೃಷ್ಣ ಕಾರಿನಲ್ಲಿ ಹೋಗುತ್ತಿರುವಾಗ ದುಷ್ಕರ್ಮಿಗಳು ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ ನಡಸಿದ್ದಾರೆ. ರಾಡ್ ನಿಂದ ಹೊಡೆದು ಚಾಕುವಿನಿಂದ ಇರಿದು ಪರಾರಿ ಆಗಿದ್ದಾರೆ. ಗೋವಾ ನೋಂದಣಿಯ ಫೋರ್ಡ್ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯ್ಕ, ತಲೆ ಕುತ್ತಿಗೆಗೆ ಗಂಭೀರವಾದ ಗಾಯಗಳಾಗಿವೆ. ತಕ್ಷಣ ಅಂಕೋಲಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಶಿವಮೊಗ್ಗ ಜಿಲ್ಲೆಯ ತಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ನೀರಾನೆ ದಾಳಿಯಿಂದ ಮೃತಪಟ್ಟ ಯುವ ಪಶುವೈದ್ಯೆ ಡಾ.ಸಮೀಕ್ಷಾ ರೆಡ್ಡಿ ಹೆಸರಲ್ಲಿ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ಅಥವಾ ಬೇರೆ ಕಡೆ ಸ್ಮಾರಕ ನಿರ್ಮಿಸಬೇಕು ಎಂಬ ಸಲಹೆಯನ್ನು ಕುಟುಂಬದವರು ನೀಡಿದ್ದು, ಆದನ್ನು ಸ್ವೀಕರಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಂಗಳವಾರ ವಿಧಾನಸಭೆಗೆ ತಿಳಿಸಿದರು. ಶಿವಮೊಗ್ಗ ಶಾಸಕ ಚನ್ನಬಸಪ್ಪ ಅವರ ಗಮನ ಸಳೆಯುವ ಸೂಚನೆಗೆ ಉತ್ತರಿಸಿದ ಅವರು, ಕರ್ತವ್ಯಕ್ಕೆ ಸೇರಿ ಕೆಲವೇ ದಿನಗಳಲ್ಲಿ ಈ ದುರ್ಘಟನೆ ನಡೆದಿದೆ. ಮೃತರ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದೇನೆ. ಆ ವೇಳೆ 30 ಲಕ್ಷ ರೂಪಾಯಿ ಪರಿಹಾರ ಕೊಡಲು ಸರ್ಕಾರ ಮುಂದಾಗಿತ್ತು. ಆದರೆ ಕುಟುಂಬಸ್ಥರು ಪರಿಹಾರ ಬೇಡ, ಬನ್ನೇರುಘಟ್ಟ ಅಥವಾ ಬೇರೆ ಮೃಗಾಲಯದಲ್ಲಿ ಸ್ಮಾರಕ ಮಾಡಿ ಎಂದು ಮನವಿ ಮಾಡಿದರು. ಮುಂದಿನ ದಿನಗಳಲ್ಲಿ ಸ್ಮಾರಕ ರೂಪಿಸಲು ಸರ್ಕಾರ ಚಿಂತಿಸಲಿದೆ ಎಂದರು. ಯುವ ವೈದ್ಯೆ ಉತ್ಸಾಹಿ ಆಗಿದ್ದರು. ಮೃಗಾಲಯದಲ್ಲಿ ಈ ಹಿಂದೆ ಚಿರತೆಯೊಂದಕ್ಕೆ ಚಿಕಿತ್ಸೆ ನೀಡಿ ಸಂರಕ್ಷಣೆ…
ವಿಜಯನಗರ : ಇರಾನ್ ಇಸ್ರೇಲ್ ಯುದ್ಧದ ಪರಿಣಾಮ ಇದೀಗ ರಾಜ್ಯದಲ್ಲಿ ಟೊಮೆಟೊ ದರ ಪಾತಾಳಕ್ಕೆ ಕುಸಿದಿದೆ. 1000-1200 ರೂ. ಇದ್ದ ಒಂದು ಬಾಕ್ಸ್ ಟೊಮ್ಯಾಟೋ ಬೆಲೆ 100-80 ರೂ.ಗೆ ಕುಸಿದಿದೆ. ಬೆಲೆ ಕುಸಿತದಿಂದ ರೈತರು ಹಾಗೂ ಮಾರಾಟಗಾರರು ನಷ್ಟ ಅನುಭವಿಸುತ್ತಿದ್ದಾರೆ. ಇರಾನ್ – ಇಸ್ರೇಲ್ ಯುದ್ಧದಿಂದ ಬೇರೆ ದೇಶಗಳಿಗೆ ಟೊಮ್ಯಾಟೋ ರಫ್ತಾಗುತ್ತಿಲ್ಲ. ಅಲ್ಲದೇ ಸಿಲಿಂಡರ್ ಸಿಗದೇ ಹೋಟೆಲ್‍ಗಳು ಸರಿಯಾಗಿ ನಡೆಯದ ಹಿನ್ನೆಲೆ ಟೊಮ್ಯಾಟೋ ವ್ಯಾಪಾರ ಕುಸಿದಿದೆ. ಇದೇ ಕಾರಣಕ್ಕೆ ಟೊಮ್ಯಾಟೋ ಬೆಲೆ ಸಹ ಕುಸಿದಿದೆ. ವ್ಯಾಪಾರಿಗಳು 20 ರೂ.ಗೆ 2 ರಿಂದ 4 ಕೆಜಿ ಟೊಮ್ಯಾಟೋವನ್ನು ಮಾರಾಟ ಮಾಡುತ್ತಿದ್ದಾರೆ. ಏಕಾಏಕಿ ಟೊಮ್ಯಾಟೋ ಬೆಲೆ ಕುಸಿತದಿಂದ ರೈತರು ಕಂಗಾಲಾಗಿದ್ದಾರೆ. ಸಾಲ ಮಾಡಿ ಟೊಮ್ಯಾಟೋ ಬೆಳೆದು ಮಾರುಕಟ್ಟೆಗೆ ತರೋ ರೈತರ ಪರಿಸ್ಥಿತಿ ದೇವರಿಗೆ ಪ್ರೀತಿ ಎನ್ನುವಂತಾಗಿದೆ.














