Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಮೈಸೂರು : ಮೈಸೂರಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು, ನಿಯಂತ್ರಣ ತಪ್ಪಿ ಬೈಕ್ ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಮಲಗನಕೆರೆ ಗೇಟ್ ಬಳಿ ಸಂಭವಿಸಿದೆ. ಮೃತರನ್ನು ಸುದೀಪ್ ನಾಯಕ್ (26) ಹಾಗು ರಾಜ ನಾಯಕ್ (30) ಎಂದು ತಿಳಿದುಬಂದಿದೆ. ಮೃತ ರಾಜ ನಾಯಕಗೆ ಆರು ತಿಂಗಳ ಹಿಂದೆ ಅಷ್ಟೇ ಮದುವೆಯಾಗಿತ್ತು ಎನ್ನಲಾಗಿದೆ. ಅಪಘಾತದ ಕುರಿತು ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ನವದೆಹಲಿ: ಪ್ರತಿಷ್ಠಿತ ಟೂರ್ನಿಯ ಫೈನಲ್ ಪಂದ್ಯಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅತ್ಯಂತ ಮಹತ್ವದ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ಪ್ರಸಕ್ತ ಸೀಸನ್‌ನಲ್ಲಿ ತಂಡವು ಫೈನಲ್ ತಲುಪಲು ಕಾರಣವಾದ ಗೆಲುವಿನ ರಹಸ್ಯ ಹಾಗೂ ತಂಡದ ಒಳಗಿನ ವಾತಾವರಣ ಹೇಗಿತ್ತು ಎಂಬುದನ್ನು ಕೊಹ್ಲಿ ಮಾಧ್ಯಮಗಳ ಮುಂದೆ ಮುಕ್ತವಾಗಿ ಬಿಚ್ಚಿಟ್ಟಿದ್ದಾರೆ. ಒತ್ತಡ ಮುಕ್ತ ವಾತಾವರಣ “ಕಳೆದ ವರ್ಷ ತಂಡದಲ್ಲಿದ್ದ ವಿಪರೀತ ಒತ್ತಡ ಈ ಬಾರಿ ಆಟಗಾರರ ಮೇಲೆ ಇರಲಿಲ್ಲ.” ಎಂದು ಕೊಹ್ಲಿ ಹೇಳಿದ್ದಾರೆ. ಹಿಂದಿನ ಆವೃತ್ತಿಗಳಿಗೆ ಹೋಲಿಸಿದರೆ ಈ ಬಾರಿ ತಂಡವು ಯಾವುದೇ ಹೆಚ್ಚುವರಿ ಒತ್ತಡವನ್ನು ತಲೆಗೆ ಹಾಕಿಕೊಳ್ಳದೆ, ಅತ್ಯಂತ ನಿರಾಳವಾಗಿ ಅಖಾಡಕ್ಕಿಳಿದಿತ್ತು. ಈ ಮುಕ್ತ ವಾತಾವರಣವೇ ಆಟಗಾರರು ತಮ್ಮ ನೈಜ ಪ್ರದರ್ಶನವನ್ನು ಹೊರಹಾಕಲು ಪ್ರಮುಖ ಕಾರಣವಾಯಿತು ಎಂದು ಅವರು ವಿಶ್ಲೇಷಿಸಿದ್ದಾರೆ. ಸೋಲಿನಲ್ಲೂ ಕಾಯ್ದುಕೊಂಡ ಅಗ್ರಸ್ಥಾನ ಟೂರ್ನಿಯುದ್ದಕ್ಕೂ ತಂಡವು ಸ್ಥಿರ ಪ್ರದರ್ಶನ ನೀಡಿದೆ. ಕೆಲವು ಪಂದ್ಯಗಳಲ್ಲಿ ಹಿನ್ನಡೆ ಅನುಭವಿಸಿದರೂ, ತಂಡದ ರನ್ ರೇಟ್ ಮತ್ತು ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನವನ್ನು…

Read More

ಅಹಮದಾಬಾದ್: ನಿನ್ನೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ರೋಚಕ 2026ರ ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭರ್ಜರಿ ಜಯ ಸಾಧಿಸುವ ಮೂಲಕ ಇತಿಹಾಸ ಸೃಷ್ಟಿಸಿದೆ. ಈ ಗೆಲುವಿನೊಂದಿಗೆ ಬೆಂಗಳೂರು ತಂಡವು ಸತತ ಎರಡನೇ ಬಾರಿಗೆ ಐಪಿಎಲ್ ಟ್ರೋಫಿಯನ್ನು ತನ್ನ ಮುಡಿಗೇರಿಸಿಕೊಂಡಿದ್ದು, ಇಡೀ ದೇಶಾದ್ಯಂತ ಇರುವ ಆರ್‌ಸಿಬಿ ಅಭಿಮಾನಿಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಕ್ರೀಡಾಂಗಣದಲ್ಲಿ ನೆರೆದಿದ್ದ ಲಕ್ಷಾಂತರ ಅಭಿಮಾನಿಗಳ ಸಮ್ಮುಖದಲ್ಲಿ ಬೆಂಗಳೂರು ಆಟಗಾರರು ಕಪ್ ಗೆದ್ದು ಬೀಗಿದ್ದಾರೆ. ಖಾಸಗಿ ಹೋಟೆಲ್‌ನಲ್ಲಿ ಅದ್ಧೂರಿ ಸಂಭ್ರಮಾಚರಣೆ: ಮೈದಾನದಲ್ಲಿ ಟ್ರೋಫಿ ಮುಡಿಗೇರಿಸಿಕೊಂಡ ನಂತರ, ಬೆಂಗಳೂರು ತಂಡದ ಆಟಗಾರರು ಮತ್ತು ಸಿಬ್ಬಂದಿ ಅಹಮದಾಬಾದ್‌ನ ಪ್ರಮುಖ ಖಾಸಗಿ ಹೋಟೆಲ್‌ನಲ್ಲಿ ಅದ್ಧೂರಿ ಗೆಲುವಿನ ಪಾರ್ಟಿಯನ್ನು ಆಯೋಜಿಸಿದ್ದರು. ಸತತ ಎರಡನೇ ಬಾರಿ ಚಾಂಪಿಯನ್ ಪಟ್ಟಕ್ಕೇರಿದ ಖುಷಿ ಪ್ರತಿಯೊಬ್ಬ ಆಟಗಾರನ ಮುಖದಲ್ಲೂ ಎದ್ದುಕಾಣುತ್ತಿತ್ತು. ಇಡೀ ಹೋಟೆಲ್ ಆವರಣವನ್ನು ವಿಜಯೋತ್ಸವದ ನಿಮಿತ್ತ ಸುಂದರವಾಗಿ ಅಲಂಕರಿಸಲಾಗಿತ್ತು ಮತ್ತು ಇಡೀ ರಾತ್ರಿ ಆಟಗಾರರು ಈ ಐತಿಹಾಸಿಕ ಕ್ಷಣವನ್ನು ಸಂಭ್ರಮದಿಂದ ಆಚರಿಸಿದರು. ಡೊಳ್ಳಿನ…

Read More

ನವದೆಹಲಿ: ದೇಶದ ಜನತೆಗೆ ಬೆಲೆ ಏರಿಕೆಯ ಮತ್ತೊಂದು ಬಿಸಿ ತಟ್ಟಿದೆ. ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ (LPG) ಸಿಲಿಂಡರ್ ಬೆಲೆಯನ್ನು ಮತ್ತೆ ಹೆಚ್ಚಳ ಮಾಡಲಾಗಿದ್ದು, ವ್ಯಾಪಾರಿಗಳು ಹಾಗೂ ಗ್ರಾಹಕರಿಗೆ ಭಾರಿ ಆಘಾತ ನೀಡಿದೆ. ಜಾಗತಿಕ ಮಾರುಕಟ್ಟೆಯ ಏರಿಳಿತಗಳಿಗೆ ಅನುಗುಣವಾಗಿ ತೈಲ ಮಾರುಕಟ್ಟೆ ಕಂಪನಿಗಳು ಈ ಬೆಲೆ ಪರಿಷ್ಕರಣೆ ಮಾಡಿದ್ದು, ಹೊಸ ದರಗಳು ಇಂದಿನಿಂದಲೇ ಜಾರಿಗೆ ಬರಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದೆಹಲಿಯಲ್ಲಿ 42 ರೂಪಾಯಿ ಏರಿಕೆ ರಾಷ್ಟ್ರ ರಾಜಧಾನಿ ಹೊಸದೆಹಲಿಯಲ್ಲಿ 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ದರದಲ್ಲಿ 42 ರೂಪಾಯಿ ಹೆಚ್ಚಳ ಮಾಡಲಾಗಿದೆ. ಈ ಬೆಲೆ ಏರಿಕೆಯ ಬಳಿಕ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್‌ನ ಸದ್ಯದ ಬೆಲೆ 3,113.50 ರೂಪಾಯಿ ತಲುಪಿದೆ. ಇದು ಹೋಟೆಲ್, ರೆಸ್ಟೋರೆಂಟ್ ಮತ್ತು ಸಣ್ಣ ಪ್ರಮಾಣದ ಆಹಾರ ಉದ್ಯಮ ನಡೆಸುವವರ ಜೇಬಿಗೆ ಕತ್ತರಿ ಹಾಕಲಿದೆ. ಕೋಲ್ಕತ್ತಾದಲ್ಲೂ ಬೆಲೆ ಭಾರಿ ಹೆಚ್ಚಳ ಕೇವಲ ದೆಹಲಿ ಮಾತ್ರವಲ್ಲದೆ, ಪಶ್ಚಿಮ ಬಂಗಾಳದ ರಾಜಧಾನಿ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚೆಗೆ ಸುರಿಯುತ್ತಿರುವ ಧಾರಾಕಾರ ಮಳೆಗೆ ಗೋಡೆ ಮತ್ತು ಕಾಂಪೌಂಡ್‌ಗಳು ಕುಸಿದು ಸರಣಿ ದುರಂತಗಳು ಸಂಭವಿಸುತ್ತಿರುವುದು ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಇದೀಗ ನಗರದಲ್ಲಿ ಮಳೆಯ ಆರ್ಭಟಕ್ಕೆ ಮತ್ತೊಂದು ದುರಂತ ಸಂಭವಿಸಿದ್ದು, ಕಾಂಪೌಂಡ್ ಗೋಡೆ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಜೀವಂತವಾಗಿ ಸಮಾಧಿಯಾದ ದಾರುಣ ಘಟನೆ ವರದಿಯಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಬೊಮ್ಮಶಟ್ಟಿಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಮೃತ ಕಾರ್ಮಿಕರನ್ನು ದ್ಯಾಮಪ್ಪ ಮತ್ತು ಬಾಬುಲಾಲ್ ಎಂದು ಗುರುತಿಸಲಾಗಿದೆ. ಕಳೆದ ಎರಡು ದಿನಗಳಿಂದ ಈ ಭಾಗದಲ್ಲಿ ಎಡಬಿಡದೆ ಸುರಿದ ಮಳೆಯೇ ಈ ದುರಂತಕ್ಕೆ ಮುಖ್ಯ ಕಾರಣ ಎಂದು ಹೇಳಲಾಗುತ್ತಿದೆ. ಕೆಲಸ ಮಾಡುತ್ತಿದ್ದಾಗಲೇ ಬಂದೆರಗಿದ ಜಮ ಬೊಮ್ಮಶಟ್ಟಿಹಳ್ಳಿ ಗ್ರಾಮದ ಪಟೇಲ್ ಎಂಬುವರಿಗೆ ಸೇರಿದ ಖಾಲಿ ಸೈಟ್‌ನಲ್ಲಿ ಗೋಡೆ ನಿರ್ಮಾಣದ ಕೆಲಸ ನಡೆಯುತ್ತಿತ್ತು. ಎಂದಿನಂತೆ ಕಾರ್ಮಿಕರಾದ ದ್ಯಾಮಪ್ಪ ಮತ್ತು ಬಾಬುಲಾಲ್ ಅವರು ಸ್ಥಳದಲ್ಲಿ ಕೆಲಸ ಮಾಡುತ್ತಿದ್ದರು. ಆದರೆ, ಕಳೆದ ಕೆಲವು ದಿನಗಳಿಂದ ಸುರಿದಿದ್ದ ಮಳೆಗೆ ಅಲ್ಲಿನ ಮಣ್ಣು ಮತ್ತು ಪಕ್ಕದ ಗೋಡೆ…

Read More

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಪ್ರವಾಸಿಗರಿದ್ದ ಟ್ಯಾಕ್ಸಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸುಮಾರು 500 ಮೀಟರ್ (ಅರ್ಧ ಕಿಲೋಮೀಟರ್) ಆಳದ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಈ ಭೀಕರ ದುರಂತದಲ್ಲಿ ಬೆಂಗಳೂರು ಮೂಲದ ಎರಡು ಕುಟುಂಬಗಳ ಸದಸ್ಯರು ಹಾಗೂ ಸ್ಥಳೀಯ ಚಾಲಕ ಸೇರಿದಂತೆ ಒಟ್ಟು ಎಂಟು ಜನರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಟ್ಯಾಕ್ಸಿ ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ಪಾಂಗಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಪ್ರವಾಸಿಗರು ಸಂಚರಿಸುತ್ತಿದ್ದ ಟ್ಯಾಕ್ಸಿ ವಾಹನವು ಬೈರಾಗಢ್ ಪಾಂಗಿ ಸಚ್ ಪಾಸ್ ರಸ್ತೆಯ ಕಲ್ವಾನ್ ಎಂಬ ಸ್ಥಳದ ಬಳಿ ತಲುಪಿದಾಗ, ಚಾಲಕನ ನಿಯಂತ್ರಣ ಕೈತಪ್ಪಿದೆ. ಪರಿಣಾಮವಾಗಿ ವಾಹನವು ನೇರವಾಗಿ ಕಡಿದಾದ ಆಳವಾದ ಕಂದಕಕ್ಕೆ ಉರುಳಿ ಬಿದ್ದಿದೆ. ವಾಹನವು ಭಾರೀ ಎತ್ತರದಿಂದ ಕೆಳಗೆ ಬಿದ್ದಿರುವುದರಿಂದ ಅದರಲ್ಲಿದ್ದ ಯಾರೊಬ್ಬರೂ ಬದುಕುಳಿಯುವ ಸಾಧ್ಯತೆಗಳಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಮೃತರ ಹಿನ್ನೆಲೆ ಮತ್ತು ವಿವರಗಳು ಮೃತಪಟ್ಟ ದುರ್ದೈವಿಗಳಲ್ಲಿ ಬೆಂಗಳೂರಿನ ಕಾಡುಗೋಡಿ ನಿವಾಸಿಗಳಾದ ಅರವಿಂದ್ ಚಂದ್ರಶೇಖರ್, ಅವರ…

Read More

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿನ ಏರಿಳಿತ ಹಾಗೂ ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ದೇಶದ ಇಂಧನ ಭದ್ರತೆಯನ್ನು ಕಾಯ್ದುಕೊಳ್ಳಲು ವಿಧಿಸಲಾಗಿದ್ದ ವಿಂಡ್‌ಫಾಲ್‌ (ಆಕಸ್ಮಿಕ ಲಾಭ) ತೆರಿಗೆಯನ್ನು ಕೇಂದ್ರ ಸರ್ಕಾರವು ಗಣನೀಯವಾಗಿ ಕಡಿತಗೊಳಿಸಿದೆ. ಪರಿಷ್ಕೃತ ದರಗಳು ಜೂನ್ 1 ರಿಂದಲೇ ಜಾರಿಗೆ ಬರಲಿವೆ ಎಂದು ಕೇಂದ್ರ ಹಣಕಾಸು ಸಚಿವಾಲಯವು ಹೊರಡಿಸಿರುವ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಪೆಟ್ರೋಲ್ ರಫ್ತು ಸುಂಕ ಅರ್ಧದಷ್ಟು ಕಡಿತ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಉಂಟಾಗಿರುವ ಬದಲಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಈ ತೀರ್ಮಾನ ಕೈಗೊಂಡಿದೆ. ಹೊಸ ಆದೇಶದನ್ವಯ, ಪೆಟ್ರೋಲ್ ರಫ್ತು ಮೇಲಿನ ಆಕಸ್ಮಿಕ ಲಾಭದ ತೆರಿಗೆಯನ್ನು ಅರ್ಧದಷ್ಟು ಕಡಿತಗೊಳಿಸಲಾಗಿದೆ. ಈ ಹಿಂದೆ ಇದ್ದ ದರವನ್ನು ಪ್ರತಿ ಲೀಟರ್‌ಗೆ 1.5 ರೂಪಾಯಿಗೆ ಇಳಿಕೆ ಮಾಡುವ ಮೂಲಕ ರಫ್ತುದಾರರಿಗೆ ಕೇಂದ್ರ ಸರ್ಕಾರ ಭಾರಿ ರಿಲೀಫ್ ನೀಡಿದೆ. ಡೀಸೆಲ್ ಮತ್ತು ವಿಮಾನ ಇಂಧನ ಸುಂಕವೂ ಇಳಿಕೆ ಪೆಟ್ರೋಲ್ ಮಾತ್ರವಲ್ಲದೆ ಡೀಸೆಲ್ ಮತ್ತು ವಿಮಾನ ಇಂಧನ (ATF) ಮೇಲಿನ ರಫ್ತು ಸುಂಕವನ್ನೂ ಸಹ ಕಡಿತಗೊಳಿಸಲಾಗಿದೆ. ಡೀಸೆಲ್…

Read More

ಮುಂಬೈ: ತಮ್ಮ ಸುಮಧುರ ಕಂಠದಿಂದ ದಶಕಗಳ ಕಾಲ ಭಾರತೀಯ ಚಿತ್ರರಂಗವನ್ನು ಆಳಿದ್ದ ಹಿರಿಯ ಬಹುಭಾಷಾ ಗಾಯಕಿ ಸುಮನ್ ಕಲ್ಯಾಣಪುರ (89) ಅವರು ಭಾನುವಾರ ಸಂಜೆ ಮುಂಬೈನಲ್ಲಿ ನಿಧನರಾದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮುಂಬೈನ ಲೋಖಂಡ್ವಾಲಾದಲ್ಲಿರುವ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದರು. ಅವರ ನಿಧನಕ್ಕೆ ಸಂಗೀತ ಲೋಕದ ಗಣ್ಯರು ಹಾಗೂ ಅಭಿಮಾನಿಗಳು ತೀವ್ರ ಕಂಬನಿ ಮಿಡಿದಿದ್ದಾರೆ. ಧ್ವನಿಯಲ್ಲಿದ್ದ ಲತಾ ಮಂಗೇಷ್ಕರ್ ಸಾಮ್ಯತೆ 1960 ಮತ್ತು 70ರ ದಶಕಗಳಲ್ಲಿ ಸುಮನ್ ಕಲ್ಯಾಣಪುರ ಅವರು ದೇಶಾದ್ಯಂತ ಅಪಾರ ಜನಪ್ರಿಯತೆ ಗಳಿಸಿದ್ದರು. ವಿಶೇಷವೆಂದರೆ, ಇವರ ಕಂಠಸಿರಿ ಮತ್ತು ಹಾಡುವ ಶೈಲಿ ಖ್ಯಾತ ಗಾಯಕಿ ಲತಾ ಮಂಗೇಷ್ಕರ್ ಅವರ ಧ್ವನಿಗೆ ಅತ್ಯಂತ ಹತ್ತಿರವಾಗಿತ್ತು. ಈ ಸಾಮ್ಯತೆಯಿಂದಾಗಿಯೇ ಅವರು ಅಂದಿನ ದಿನಗಳಲ್ಲಿ ತಾವೂ ಒಬ್ಬ ಶ್ರೇಷ್ಠ ಗಾಯಕಿ ಎಂಬುದನ್ನು ಸಾಬೀತುಪಡಿಸಿ, ತಮ್ಮದೇ ಆದ ವಿಶಿಷ್ಟ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡಿದ್ದರು. 11 ಭಾಷೆಗಳು, 740ಕ್ಕೂ ಹೆಚ್ಚು ಸಿನಿಮಾಗಳು ಸುಮನ್ ಕಲ್ಯಾಣಪುರ ಅವರು ಕೇವಲ ಒಂದು ಭಾಷೆಗೆ ಸೀಮಿತವಾಗದೆ, ಭಾರತೀಯ ಸಂಗೀತ ಲೋಕಕ್ಕೆ…

Read More

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಐಪಿಎಲ್ ಇತಿಹಾಸದಲ್ಲಿ ಮತ್ತೊಂದು ಸುವರ್ಣ ಅಧ್ಯಾಯ ಬರೆದಿದೆ. ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಪಿಎಲ್ 2026ರ ರೋಮಾಂಚಕ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ ಆರ್‌ಸಿಬಿ ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಐತಿಹಾಸಿಕ ಗೆಲುವಿನೊಂದಿಗೆ ‘ಈ ಸಲ ಕಪ್ ನಮ್ದೇ’ ಎಂಬ ಘೋಷಣೆ ಸತತ ಎರಡನೇ ವರ್ಷವೂ ನಿಜವಾದಂತಾಗಿದೆ. ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನೆರೆದಿದ್ದ ಲಕ್ಷಾಂತರ ಕ್ರಿಕೆಟ್ ಪ್ರೇಮಿಗಳ ಸಮ್ಮುಖದಲ್ಲಿ ನಡೆದ ಈ ಹೈ-ವೋಲ್ಟೇಜ್ ಪಂದ್ಯದಲ್ಲಿ ಆರ್‌ಸಿಬಿ ಆಟಗಾರರು ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಅದ್ಭುತ ಪ್ರದರ್ಶನ ನೀಡಿದರು. ಬಲಿಷ್ಠ ಗುಜರಾತ್ ತಂಡವನ್ನು ಅವರದೇ ತವರು ಮೈದಾನದಲ್ಲಿ ಧೂಳೀಪಟ ಮಾಡಿದ ಬೆಂಗಳೂರು ಹುಡುಗರು, ಟ್ರೋಫಿಯನ್ನು ಎತ್ತಿ ಹಿಡಿಯುತ್ತಿದ್ದಂತೆ ಇತ್ತ ಇಡೀ ಕರ್ನಾಟಕದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಯಿತು. ಪಂದ್ಯ ಮುಗಿಯುತ್ತಿದ್ದಂತೆ ಇತ್ತ ಕರ್ನಾಟಕದಾದ್ಯಂತ ಆರ್ಸಿಬಿ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು.…

Read More

ತುಮಕೂರು : ಕೆರೆಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಹೋಬಳಿಯ ದೇವರಮರಡಿ ಕೆರೆಯಲ್ಲಿ ಒಂದು ದುರ್ಘಟನೆ ನಡೆದಿದೆ. ಮಜುರೆ ಗಿಲ್ಯನಾಯಕನ ತಂಡ ನಿವಾಸಿ ಗೌತಮ್ ಮೃತ ದುರ್ದೈವಿ ಎಂದು ತಿಳಿದುಬಂದಿದೆ. ನಿನ್ನೆ ಸಂಜೆ ಸಹೋದರ ಹಾಗೂ ಗೆಳೆಯರ ಜೊತೆಗೆ ಗೌತಮ್ ಕೆರೆ ತೆರಳಿದ್ದ ಈ ವೇಳೆ ಆಟವಾಡುತ್ತಾ ಕೆರೆಯಲ್ಲಿ ತೇಲುತ್ತಿದ್ದ ತೆಪ್ಪ ಹತ್ತಿದ್ದಾನೆ. ತೇಲುತ್ತಿದ್ದ ತೆಪ್ಪದ ಮೇಲೆ ಸಂಭ್ರಮಿಸುವಾಗ ಏಕಾಏಕಿ ತೆಪ್ಪಗೆ ಮಗುಚಿದೆ. ಈ ವೇಳೆ ಗೌತಮ್ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

Read More