Subscribe to Updates
Get the latest creative news from FooBar about art, design and business.
Author: kannadanewsnow05
ಹಾಸನ : ಚಿಕ್ಕ ವಯಸ್ಸಿನವರಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ಚಿಕ್ಕ ಮಕ್ಕಳೂ ಸಹ ನಿಂತಲೇ ಕೂತಲ್ಲೇ ಕುಸಿದುಬಿದ್ದು ಸಾವನ್ನಪ್ಪುತ್ತಿದ್ದಾರೆ. ಇದೀಗ ಹಾಸನದಲ್ಲಿ ಬಾತ್ರೂಂನಲ್ಲಿ ಇದ್ದಾಗಲೇ ಯುವತಿಗೆ ಹೃದಯಾಘಾತವಾಗಿ ಕುಸಿದು ಬಿದ್ದು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಇಂದು ನಡೆದಿದೆ. ಹೌದು ಹೃದಯಾಘಾತದಿಂದ ಯುವತಿ ಸಾವನ್ನಪ್ಪಿದ ಘಟನೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ಸಂಧ್ಯಾ (19) ಮೃತ ಯುವತಿ. ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯ ನಿವಾಸಿಗಳಾದ ವೆಂಕಟೇಶ್-ಪೂರ್ಣಿಮ ದಂಪತಿ ಪುತ್ರಿ ಸಂಧ್ಯಾ ಅಂತಿಮ ವರ್ಷದ ಡಿಪ್ಲೊಮಾ ಮುಗಿಸಿದ್ದಳು. ಬಾತ್ರೂಂಗೆ ತೆರಳಿದ್ದ ವೇಳೆ ಸಂಧ್ಯಾ ಕುಸಿದು ಬಿದ್ದಿದ್ದಾಳೆ. ಕೂಡಲೇ ಬಾತ್ರೂಂ ಬಾಗಿಲು ಒಡೆದು ಪೋಷಕರು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದ್ದರು. ಆದರೆ ಅಷ್ಟೊತ್ತಿಗಾಗಲೇ ಸಂಧ್ಯಾ ಉಸಿರು ಚೆಲ್ಲಿದ್ದಳು.
ಮುಂಬೈ : ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆಯ ಬಳಿ ಮತ್ತೆ ಭದ್ರತಾ ಲೋಪ ಕಂಡು ಬಂದಿದೆ. ಮುಂಬೈನ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಬಳಿ ಯುವಕನೊಬ್ಬ ಸಲ್ಮಾನ್ ಖಾನ್ ಅವರ ಮನೆಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದಾನೆ. ಹೌದು ಯುವಕನೊಬ್ಬ ಸಲ್ಮಾನ್ ಖಾನ್ ಮನೆಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದಾನೆ. ಮೇ 26 ಸಂಜೆ 7.15 ರ ಸಮಯದಲ್ಲಿ ಯುವಕ ಅಕ್ರಮವಾಗಿ ಮನೆ ಪ್ರವೇಶಿಸಲು ಯತ್ನಿಸಿದ್ದಾನೆ. 23 ವರ್ಷದ ಜಿತೇಂದ್ರ ಕುಮಾರ್ ಸಿಂಗ್ ನನ್ನು ಇದೀಗ ಮುಂಬೈ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸಲ್ಮಾನ್ ಖಾನ್ ಭೇಟಿ ಮಾಡುವ ಉದ್ದೇಶದಿಂದ ಬಂದಿದ್ದೇನೆ ಎಂದು ಬಂಧಿತ ಜಿತೇಂದ್ರ ಕುಮಾರ್ ಸಿಂಗ್ ಈ ವೇಳೆ ಹೇಳಿದ್ದಾನೆ. ಸಲ್ಮಾನ್ ಖಾನ್ ಮನೆ ಆವರಣದಲ್ಲಿ ಇದೀಗ ಹೆಚ್ಚುವರಿ ಭದ್ರತೆಯನ್ನು ನಿಯೋಜನೆ ಮಾಡಲಾಗಿದೆ.
ಬೆಂಗಳೂರು : ಇಂದಿನ ದಿನಮಾನಗಳಲ್ಲಿ ಯುವಕರಲ್ಲೇ ಹೃದಯಾಘಾತ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಇದೀಗ ಬೆಂಗಳೂರಿನಲ್ಲಿ ಹೃದಯಾಘಾತಕ್ಕೆ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಬಸವೇಶ್ವರನಗರದಲ್ಲಿ ಕೆ.ಆರ್.ಅಭಿಷೇಕ್ ಎಂಬ ಯುವಕ ಸಾವನಪ್ಪಿದ್ದಾನೆ. ಮೂಲತಃ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನವ ಎಂದು ತಿಳಿದುಬಂದಿದೆ. ಅನಸೂಯ ರಾಮಕೃಷ್ಣ ದಂಪತಿ ಪುತ್ರ ಕೆ.ಆರ್ ಅಭಿಷೇಕ್ ಹೃದಯಘಾತದಿಂದ ಸಾವನ್ನಪ್ಪಿದ್ದಾನೆ. ಅರಕಲಗೂಡು ತಾಲೂಕಿನ ಕಾಡನೂರಿನ ನಿವಾಸಿ ಎಂದು ತಿಳಿದುಬಂದಿದೆ. ಅಭಿಷೇಕ್, ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಬಸವೇಶ್ವರ ನಗರದಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಅಭಿಷೇಕ್ ಸಾವನ್ನಪ್ಪಿದ್ದಾನೆ. ತಕ್ಷಣ ಅಭಿಷೇಕ್ ನನ್ನು ಸ್ಥಳಿಯರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಅಭಿಷೇಕ್ ಮೃತಪಟ್ಟಿದ್ದಾನೆ.
ಬೆಂಗಳೂರು : ನಟಿ ತಮನ್ನಾ ಭಾಟಿಯ ಅವರು ‘ಮೈಸೂರು ಸ್ಯಾಂಡಲ್ ಸೋಪ್’ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ಸುಮಾರು 2 ವರ್ಷದ 2 ದಿನಗಳ ಮಟ್ಟಿಗೆ ಅವರನ್ನು ನೇಮಿಸಲಾಗಿದ್ದು, ಬರೋಬ್ಬರಿ 6.20 ಕೋಟಿ ಸಹಾಯಧನ ನೀಡಲು ಸರ್ಕಾರ ಒಪ್ಪಿಗೆ ಸೂಚಿಸಿದೆ. ಹೌದು ತಮನ್ನಾ ಭಾಟಿಯಾ ಅವರನ್ನು 02 ವರ್ಷ ಮತ್ತು ಎರಡು ದಿನಗಳ ಅವಧಿಗೆ 6.20 ಕೋಟಿ ರೂ. ವೆಚ್ಚದಲ್ಲಿ ನೇಮಕ ಮಾಡಿಕೊಳ್ಳಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ-1999ರ ಕಲಂ 4(2)໖ ಪ್ರದತ್ತವಾದ ಅಧಿಕಾರ ಚಲಾಯಿಸಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಗೆ ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಿದೆ. ಉತ್ತಮ ಗುಣಮಟ್ಟದ ಸೇವೆಯನ್ನು ಸಮಂಜಿಸ ದರದಲ್ಲಿ ಸಂಗ್ರಹಿಸುವುದನ್ನು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯು ದೃಢಪಡಿಸಿಕೊಳ್ಳುವುದು ಎಂದು ಸರ್ಕಾರ ಸೂಚನೆ ಹೊರಡಿಸಿದೆ. ಮುಂದಿನ ಎರಡು ವರ್ಷಗಳ ಮೈಸೂರು ಸ್ಯಾಂಡಲ್ ಸೋಪ್ ತಮನ್ನಾ ಫೋಟೋ ಇರಲಿದೆ. ಮೈಸೂರು ಸ್ಯಾಂಡಲ್ ಸೋಪ್ ಅನ್ನು 1916 ರಲ್ಲಿ ಮೈಸೂರಿನ ರಾಜ ಕೃಷ್ಣ ರಾಜ ಒಡೆಯರ್ IV ಬೆಂಗಳೂರಿನಲ್ಲಿ ಸರ್ಕಾರಿ ಸೋಪ್…
BREAKING : 15 ಸಾವಿರ ಲಂಚ ಸ್ವೀಕರಿಸುವ ವೇಳೆ, ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು
ಬೆಳಗಾವಿ : ಬೆಳಗಾವಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಅಧಿಕಾರಿಗಳಾದ ಅಬ್ದುಲ್ ಹುಲಿ ಕಂಪ್ಯೂಟರ್ ಆಪರೇಟರ್ ಸ್ವಾಮಿಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅಂಗನವಾಡಿ ಸಹಾಯಕಿ ಶಕುಂತಲಾ ಕಾಂಬಳೆ ಎನ್ನುವವರಿಂದ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಬ್ದುಲ್ ವಲಿ ಮತ್ತು ಸೌಮ್ಯ ಶಕುಂತಲಾ ಬಳಿ 30,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. 15000 ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲಕ್ಕೆ ಬಿದ್ದಿದ್ದಾರೆ. ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ ವೇಳೆ ಸೌಮ್ಯ ಬಡಿಗೇರ್ ಅಸ್ವಸ್ಥರಾಗಿದ್ದಾರೆ. ತಕ್ಷಣ ಕಚೇರಿಗೆ ವೈದ್ಯರೇನ್ನು ಕರೆಸಿ ಸೌಮ್ಯ ಅವರಿಗೆ ಚಿಕಿತ್ಸೆ ಕೊಡಿಸಲಾಗಿತು. ಲೋಕಾಯುಕ್ತ ಪೊಲೀಸರು ಸದ್ಯಕ್ಕೆ ಅಬ್ದುಲ್ ವಲಿ ಮತ್ತು ಸೌಮ್ಯ ಬಡಿಗೇರ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಮಹತ್ವದ ಸಂಪುಟ ಸಭೆ ನಡೆಯಿತು. ಈ ಸಂಪುಟ ಸಭೆಯಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿ ಗಣತಿ ವರದಿಯು ಸಭೆಯಲ್ಲಿ ಮತ್ತೊಮ್ಮೆ ಚರ್ಚಿಸಲಾಯಿತು. ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಜಾತಿಗಣತಿ ವಿಚಾರವನ್ನು ಪ್ರಸ್ತಾಪಿಸಲಾಯಿತು. ಈ ವೇಳೆ ಕೆಲವು ಸಚಿವರ ಅಭಿಪ್ರಾಯ ಸಂಗ್ರಹಿಸಿದ ಕುರಿತಂತೆ ಮತ್ತೆ ಈ ವಿಷಯವನ್ನು ಮುಂದೂಡಲಾಯಿತು. ಹೌದು ಇಂದು ನಡೆದ ಕ್ಯಾಬಿನೆಟ್ ನಲ್ಲಿ ಜಾತಿಗಣತಿ ವಿಚಾರ ನಿರ್ಧಾರವಾಗಿಲ್ಲ. ಜಾತಿಗಣತಿ ಜಾರಿ ವಿಷಯವನ್ನು ಇದೀಗ ಸಂಪುಟ ಸಭೆ ಮತ್ತೆ ಮುಂದೂಡಿದೆ. ಸಂಪುಟ ಸಭೆಯಲ್ಲಿ ಕೆಲವು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದು, ಸಚಿವರ ಅಭಿಪ್ರಾಯ ಮಂಡನೆ ಬಳಿಕ ಜಾತಿಗಣತಿ ಜಾರಿ ವಿಷಯ ಮುಂದೂಡಿಕೆ ಮಾಡಲಾಯಿತು.
ಕೊಪ್ಪಳ : ನಿನ್ನೆ ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ಹಾಡಹಗಲೇ ಬಸ್ ನಿಲ್ದಾಣದ ಬಳಿ ಮಾನಸಿಕ ಅಸ್ವಸ್ಥೆಯನ್ನು ಕರೆದೋಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದ ಘಟನೆ ನಡೆದಿತ್ತು. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಕನಕಗಿರಿ ಪೊಲೀಸರು ಆರೋಪಿ ಪ್ರಕಾಶ್ ರಾಮಣ್ಣ ಬೋವಿ ಎನ್ನುವ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಹಗಲಲ್ಲೆ ಕಾಮುಕನೊಬ್ಬ ಮಾನಸಿಕ ಅಸ್ವಸ್ಥೆ ಮಹಿಳೆಯನ್ನು ಅತ್ಯಾಚಾರಕ್ಕೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಬಂಧಿಸಿದ ಘಟನೆ ಬುಧವಾರ ನಡೆದಿದೆ. ಸದ್ಯ ಪ್ರಕಾಶ ರಾಮಣ್ಣ ಭೋವಿಯನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ. ಘಟನೆ ಹಿನ್ನೆಲೆ? ಬಸ್ ನಿಲ್ದಾಣದ ರಕ್ಷಣಾ ಗೋಡೆ ಒಳಗೆ ನಿರ್ಮಾಣವಾಗುತ್ತಿರುವ ಹೈಟೆಕ್ ಶೌಚಾಲಯಗಳ ಹಿಂಭಾಗದಲ್ಲಿ ಪ್ರಕಾಶ ಭೋವಿ 30ರಿಂದ35 ವರ್ಷದ ಮಾನಸಿಕ ಅಸ್ವಸ್ಥೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಮುಂದಾಗಿದ್ದಾನೆ. ಟಂ ಟಂ ನಲ್ಲಿ ಹೋಗುತ್ತಿರುವ ಯುವಕರು ಇದನ್ನು ವಿಡಿಯೋ ತೆಗೆಯಲು ಮುಂದಾಗಿದ್ದಾಗ ಅಲ್ಲಿಂದ ಮೊಬೈಲ್ನಲ್ಲಿ ಮಾತನಾಡುತ್ತಾ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡಿದ್ದರಿಂದ ಎಚ್ಚೇತ್ತ ಪೊಲೀಸರು…
ಶಿವಮೊಗ್ಗ : ಬೇಟೆಗೆ ಎಂದು ತೆರಳಿದ್ದಾಗ ಕೈಯಲ್ಲಿದ್ದ ಗುಂಡು ಆಕಸ್ಮಿಕವಾಗಿ ಸಿಡಿದಿದ್ದರಿಂದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕಟ್ಟೇಹಕ್ಕಲು ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ಬಸವಾನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳವಾರ ಮಜರೆ ಗ್ರಾಮದ ಗೌತಮ್ ಕೆ.ವಿ. (27) ಎಂದು ತಿಳಿದುಬಂದಿದೆ. ತಡರಾತ್ರಿ ನಾಲ್ವರು ಸ್ನೇಹಿತರೊಂದಿಗೆ ಗೌತಮ್ ಕಾರಿನಲ್ಲಿ ತೆರಳಿದ್ದ. ವಾಹನವನ್ನು ದಾರಿ ಮಧ್ಯೆ ನಿಲ್ಲಿಸಿ ಉಳಿದ ಸ್ನೇಹಿತರನ್ನು ಅಲ್ಲಿಯೇ ಬಿಟ್ಟು ಬಂದೂಕು ಹಿಡಿದುಕೊಂಡು ಸಮೀಪದ ಗುಡ್ಡ ಏರಿದ್ದಾನೆ. ಬಂದೂಕಿನ ಟ್ರಿಗರ್ ಎಳೆದು ಗುಡ್ಡ ಹತ್ತುವಾಗ ಕಾಲು ಜಾರಿ ಕೆಳಗೆ ಬಿದ್ದ ವೇಳೆ ಬಂದೂಕಿನಿಂದ ಗುಂಡು ಸಿಡಿದು ಕುತ್ತಿಗೆ ಮೂಲಕ ಮುಖವನ್ನು ಸೀಳಿಕೊಂಡು ಹೋಗಿ ಮೃತಪಟ್ಟಿದ್ದಾನೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು : ಗೂಗಲ್ ಮ್ಯಾಪ್ ನಂಬಿ ಅದೆಷ್ಟು ಅನಾಹುತಗಳು ನಡೆದಿವೆ. ಅದೆಷ್ಟೋ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ಚಿಕ್ಕಮಂಗಳೂರಿನಲ್ಲಿ ಘಟನೆ ನಡೆದಿದ್ದು ಗೂಗಲ್ ಮ್ಯಾಪ್ ನಂಬಿ ಟಿಟಿ ವಾಹನ ಒಂದು ಸೀದಾ ರೈತನ ಗದ್ದೆಗೆ ನುಗ್ಗಿರುವ ಘಟನೆ ವರದಿಯಾಗಿದೆ. ಹೌದು ಗೂಗಲ್ ಮ್ಯಾಪ್ ನಂಬಿ ಬಂದಿದ್ದ ಪ್ರವಾಸಿಗರು, ವಾಹನವನ್ನು ಗದ್ದೆಗೆ ಇಳಿಸಿಕೊಂಡು ಪರದಾಡಿದ ಘಟನೆ ಆಲ್ದೂರು ಬಳಿ ನಡೆದಿದೆ. ಬೆಂಗಳೂರು ಮೂಲದ ಪ್ರವಾಸಿಗರು ಬಾಳೆಹೊನ್ನೂರು ಕಡೆಯಿಂದ ಮೂಡಿಗೆರೆಗೆ ತೆರಳುತ್ತಿದ್ದರು. ಈ ವೇಳೆ, ಗೂಗಲ್ ಮ್ಯಾಪ್ ಕೈ ಕೊಟ್ಟಿದ್ದು, ವಾಹನ ಗದ್ದೆ ಬಳಿ ಹೋಗಿ ಸಿಕ್ಕಿ ಹಾಕಿಕೊಂಡಿದೆ. ಇದರಿಂದ ವಾಹನ ವಾಪಸ್ ತೆಗೆಯಲಾಗದೆ ಪ್ರವಾಸಿಗರು ಕೆಲವು ಕಾಲ ಅಲ್ಲೇ ಪರದಾಡಿದ್ದಾರೆ. ತಕ್ಷಣವೇ ಸ್ಥಳೀಯರು ಪ್ರವಾಸಿಗರ ನೆರವಿಗೆ ಧಾವಿಸಿದ್ದಾರೆ ಕೂಡಲೇ ಟ್ರ್ಯಾಕ್ಟರ್ ಒಂದನ್ನು ತಂದು ಅದಕ್ಕೆ ಹಗ್ಗ ಕಟ್ಟಿ ಗದ್ದೆಯಿಂದ ಟಿಟಿಯನ್ನು ರಸ್ತೆಗೆ ಎಳೆದು ತಂದಿದ್ದಾರೆ ಬಳಿಕ ಸ್ಥಳೀಯ ಮಾಹಿತಿ ಪಡೆದುಕೊಂಡು ಪ್ರವಾಸಿಗರು ಅಲ್ಲಿಂದ ತೆರಳಿದ್ದಾರೆ.
ನವದೆಹಲಿ : ಭಾರತದಲ್ಲಿ ಇದ್ಕೊಂಡು ಪಾಕಿಸ್ತಾನದ ಬೇಹುಗಾರಿಕೆಯಂತ ನೀಚ ಕೆಲಸ ಮಾಡಿದ ಯೂಟ್ಯೂಬರ್ ಜ್ಯೋತಿ ಕುರಿತು ಇದೀಗ ಮತ್ತಷ್ಟು ಸ್ಪೋಟಕ ಅಂಶ ಬಹಿರಂಗವಾಗಿದ್ದು, ತನಿಖೆಯ ವೇಳೆ ಜ್ಯೋತಿ ಪಾಕಿಸ್ತಾನದ ಗುಪ್ತಚರ ಅಧಿಕಾರಿಗೆ ನನ್ನ ಪಾಕಿಸ್ತಾನದಲ್ಲೇ ಮದ್ವೆ ಆಗು ಎಂದು ಹೇಳಿರುವ ಸಂಭಾಷಣೆ ತನಿಖೆ ವೇಳೆ ಬೆಳಕಿಗೆ ಬಂದಿದೆ. ಹೌದು ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಮತ್ತು ಪಾಕಿಸ್ತಾನಿ ಗುಪ್ತಚರ ಅಧಿಕಾರಿಯ ನಡುವಿನ ಸಂಭಾಷಣೆ ತನಿಖೆಯಿಂದ ಬೆಳಕಿಗೆ ಬಂದಿದೆ. ಪಾಕಿಸ್ತಾನದಲ್ಲಿ ನನ್ನನ್ನು ಮದುವೆಯಾಗಿ ಎಂದು ಪಾಕ್ ಅಧಿಕಾರಿಯನ್ನು ಜ್ಯೋತಿ ಕೇಳಿರುವುದು ಸಂಭಾಷಣೆಯಲ್ಲಿದೆ. ಚಾಟ್ವೊಂದರಲ್ಲಿ ಜ್ಯೋತಿ, ಹಸನ್ಗೆ ನನ್ನನ್ನು ಪಾಕಿಸ್ತಾನದಲ್ಲಿ ಮದುವೆಯಾಗು ಎಂದು ತಮ್ಮ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ತನಿಖೆಯ ಸಮಯದಲ್ಲಿ, ಪೊಲೀಸರು ಮಲ್ಹೋತ್ರಾ ಅವರಿಗೆ ಸೇರಿದ ನಾಲ್ಕು ಬ್ಯಾಂಕ್ ಖಾತೆಗಳ ಬಗ್ಗೆ ಮಾಹಿತಿಯನ್ನು ಕಂಡುಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಒಂದು ಖಾತೆಯಲ್ಲಿ ದುಬೈನಿಂದ ಮಾಡಿದ ವಹಿವಾಟುಗಳು ಸಹ ಕಂಡುಬಂದಿವೆ. ಆಕೆಗೆ ಎಲ್ಲಿಂದ ಹಣ ಬರುತ್ತಿದೆ ಎಂಬುದನ್ನು ಕಂಡುಹಿಡಿಯಲು ಏಜೆನ್ಸಿಗಳು ಈಗ ಆಕೆಯ ಎಲ್ಲಾ ಬ್ಯಾಂಕ್…