Author: kannadanewsnow05

ಕಲಬುರ್ಗಿ : ಕಲ್ಬುರ್ಗಿಯಲ್ಲಿ ಕಳೆದ 48 ಗಂಟೆಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಪ್ರವಾಹ ಪೀಡಿತ ಪ್ರದೇಶಗಳಿಗೆ ಸಚಿವ ಪ್ರಿಯಾಂಕ ಖರ್ಗೆ ಭೇಟಿ ನೀಡಿದ್ದಾರೆ. ಹಳೆ ಹೆಬ್ಬಾಳ ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಭೇಟಿ ನೀಡಿದ್ದಾರೆ. ಕಲ್ಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಳೆ ಹೆಬ್ಬಾಳ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಜಿಲ್ಲೆಯ ಬೆಣ್ಣೆತೋರ ಜಲಾಶಯದ ನೀರಿನಿಂದ ಇಡಿ ಗ್ರಾಮ ಮುಳುಗಡೆಯಾಗಿದೆ. ಗ್ರಾಮಸ್ಥರನ್ನು ಬೇರೆ ಕಡೆಗೆ ಶಾಶ್ವತವಾಗಿ ಶಿಫ್ಟ್ ಮಾಡುವಂತೆ ಸೂಚನೆ ನೀಡಿದ್ದಾರೆ. ಅಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ. ಈ ವೇಳೆ ಗ್ರಾಮಸ್ಥರ ಸಭೆ ಕರೆದು ಒಪ್ಪಿಗೆ ಪಡೆದು ಶಾಶ್ವತ ಪರಿಹಾರಕ್ಕೆ ಸೂಚಿಸಿದ್ದಾರೆ. ಇನ್ನು ಭೀಮಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಯಂಕಂಚಿ ಗ್ರಾಮಕ್ಕೆ ಭೀಮಾ ನದಿಯ ನೀರು ನುಗ್ಗಿದೆ. ಬಸವೇಶ್ವರ ದೇವಸ್ಥಾನ, ಮಹಾಲಕ್ಷ್ಮಿ ದೇವಸ್ಥಾನ ಸಂಪೂರ್ಣವಾಗಿ ಜಲಾವೃತವಾಗಿದೆ. ದೋಣಿಯಲ್ಲಿ ಹೋಗಿ ಗ್ರಾಮಸ್ಥರು ಪೂಜೆ ಸಲ್ಲಿಸಿದ್ದಾರೆ. ನದಿ ನೀರು ಉಕ್ಕಿ ಹರಿಯುತ್ತಿದ್ದರು ಕೂಡ ಭಿಮಾನದಿಯಲ್ಲಿ ದೋಣಿಯಲ್ಲಿ ಹೋಗಿ ಪೂಜೆ ಸಲ್ಲಿಸಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ ಒಂದು ನಡೆದಿದ್ದು ಪಾರ್ಕಿಂಗ್ ವಿಚಾರವಾಗಿ ಆಶೀರ್ವಾದ ಗಲಾಟೆ ಪಿಕೋಪಕ್ಕೆ ತಿರುಗಿ ವ್ಯಕ್ತಿ ಒಬ್ಬ ಅಪ್ರಾಪ್ತ ಬಾಲಕ ಸೇರಿದಂತೆ ನಾಲ್ವರಿಗೆ ಚಾಕು ಇರಿದಿರುವ ಘಟನೆ, ಬೆಂಗಳೂರಿನ ಮಾರಗೊಂಡನಹಳ್ಳಿಯ ಆರ್ ಆರ್ ಲೇಔಟ್ ನಲ್ಲಿ ನಡೆದಿದೆ. ಹೌದು ಸೆಪ್ಟೆಂಬರ್ 24ರಂದು ನಡೆದ ಈ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ ಸದ್ಯ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ವೆಂಕಟೇಶ್ ಎನ್ನುವ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಘಟನೆಯಲ್ಲಿ ಹೇಮಂತ್, ಹನುಮಂತಮ್ಮ ಮತ್ತು ರಮೇಶ್ ಸೇರಿ ಓರ್ವ ಅಪ್ರಾಪ್ತ ಗಾಯಗೊಂಡಿದ್ದಾರೆ. ಆರೋಪಿ ವೆಂಕಟೇಶ್​ನನ್ನು ಕೆ.ಆರ್.ಪುರಂ ಪೊಲೀಸರು ಬಂಧಿಸಿದ್ದಾರೆ. ಸೆಪ್ಟೆಂಬರ್ 24ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Read More

ಬಾಗಲಕೋಟೆ : ನಿರಂತರ ಮಳೆಗೆ ಮನೆಯ ಮೇಲ್ಚಾವಣಿ ಗೋಡೆ ಕುಸಿದು ಬಾಲಕ ಸಾವನಪ್ಪಿದ್ದಾನೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದ್ದು, ದರ್ಶನ್ ಲಾತೂರ್ (11) ಎನ್ನುವ ಬಾಲಕ ಸಾವನಪ್ಪಿದ್ದು ಇನ್ನೊರ್ವ ಬಾಲಕ ಶ್ರೀಶೈಲ್ ಗೆ ಗಂಭೀರವಾದ ಗಾಯಗಳಾಗಿವೆ. ಇಂದು ಬೆಳಗಿನ ಜಾವ ಐದು ಗಂಟೆಗೆ ಮನೆಯ ಮೇಲ್ಚಾವಣಿ ಹಾಗೂ ಗೋಡೆ ಕುಸಿದು ಬಿದ್ದು ಈ ಒಂದು ದುರಂತ ಸಂಭವಿಸಿದೆ. ಮನೆಯ ಕೋಣೆಯಲ್ಲಿ ತಾಯಿಯೊಂದಿಗೆ ಇಬ್ಬರು ಮಕ್ಕಳು ಮಲಗಿದ್ದರು. ತಾಯಿ ಮತ್ತೊಂದು ಕೊಠಡಿಗೆ ಬರುತ್ತಿದ್ದಂತೆ ಮೇಲ್ಚಾವಣಿ ಗೋಡೆ ಕುಸಿದು ಬಾಲಕ ಸಾವನಪ್ಪಿದ್ದಾನೆ ಗಾಯಗೊಂಡ ಶ್ರೀಶೈಲ್ ಗೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಉದ್ಯೋಗಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಕಾನ್ಸ್ಟೇಬಲ್, ಹಾಗು ‘SI’ ಹುದ್ದೆಗಳ ವಯೋಮಿತಿ, 2 ವರ್ಷಗಳ ಕಾಲ ಸಡಿಲಿಕೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ಹೌದು ರಾಜ್ಯದಲ್ಲಿ ಇನ್ಮುಂದೆ ಕಾನ್ಸ್ಟೇಬಲ್, ಹಾಗು ‘SI’ ಹುದ್ದೆಗಳ ನೇಮಕಾತಿಯಲ್ಲಿ 2 ವರ್ಷಗಳ ಕಾಲ ಸಡಿಲಿಕೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಕುರಿತು ಸರ್ಕಾರದಿಂದ ಅಧಿಕೃತ ಆದೇಶವಷ್ಟೇ ಹೊರಬೀಳಬೇಕಿದೆ.

Read More

ಉಡುಪಿ : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾರ್ಡುಗಳನ್ನು ರದ್ದು ಮಾಡುವುದಿಲ್ಲ ಒಟ್ಟು 1.28 ಕೋಟಿ ಬಿಪಿಎಲ್ ಕಾರ್ಡ್ ಗಳು ರಾಜ್ಯದಲ್ಲಿವೆ. ಈ ಪೈಕಿ 4.50 ಕೋಟಿ ಜನರು ಫಲಾನುಭವಿಗಳಿದ್ದಾರೆ ಬಿಪಿಎಲ್ ಕಾರ್ಡ್ ಪರೀಕ್ಷರಣೆ ತೊಡಗಿದ್ದೇವೆ. ಅನರ್ಹರನ್ನು ಬಿಪಿಎಲ್ ನಿಂದ ಏಪ್ರಿಲ್ ಗೆ ಹಾಕುತ್ತೇವೆ ಎಂದು ಉಡುಪಿಯಲ್ಲಿ ಆಹಾರ ಸಚಿವ ಕೆಎಚ್ ಮುನಿಯಪ್ಪ ಹೇಳಿಕೆ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಯಾವುದೇ ಕಾರಣಕ್ಕೂ ಕಾರ್ಡುಗಳನ್ನು ರದ್ದು ಮಾಡುವುದಿಲ್ಲ ಸರ್ಕಾರದ ಮಾನದಂಡ ಬಿಟ್ಟು ಪರಿಷ್ಕರಣೆ ಮಾಡಲ್ಲ ಅನರ್ಹರು ಸ್ವಯಂ ಪ್ರೇರಿತವಾಗಿ ಬಿಬಿಎಲ್ ಕಾರ್ಡ್ ಗಳನ್ನು ಬರೆಯಿರಿ. ಹೊಸ ಬಿಪಿಎಲ್ ಕಾರ್ಡ್ದಾರರಿಗೆ ಅವಕಾಶ ಮಾಡಿಕೊಡಿ ಅನ್ನ ಭಾಗ್ಯ ಯೋಜನೆ ಕಟ್ಟಕಡೆಯ ವ್ಯಕ್ತಿಗೆ ತಲುಪಬೇಕು ಅಂತ ಮನೆ ಕಟ್ಟುವವರಿಗೆ ಬಿಪಿಎಲ್ ಕಾರ್ಡ್ ಅವಶ್ಯಕತೆ ಇರುವುದಿಲ್ಲ.

Read More

ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ತನಿಖೆ ಬಗ್ಗೆ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರು ಸ್ವಾಗತ ಮತ್ತು ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ. ನಾವು ಯಾವಾಗಲೂ ಒಳ್ಳೆಯದನ್ನೇ ಮಾಡುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಕಾಂಗ್ರೆಸ್ ಸರ್ಕಾರ ಯಾವತ್ತಿಗೂ ಯಾರಿಗೂ ತೊಂದರೆ ಬಯಸುವುದಿಲ್ಲ.ಕಾನೂನಿನ ಚೌಕಟ್ಟಿನೊಳಗೆ ಏನು ನ್ಯಾಯ ಒದಗಿಸಬೇಕೋ ಅದನ್ನು ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ತಪ್ಪು ಮಾಡಿದವರಿಗೂ ಕಾನೂನು ರೀತಿಯಲ್ಲಿ ಕ್ರಮ ವಹಿಸಲಾಗುತ್ತದೆ. ಇವತ್ತಿನವರೆಗೂ ನಾವು ಧರ್ಮಸ್ಥಳ ಪ್ರಕರಣದಲ್ಲಿ ಮಧ್ಯಪ್ರವೇಶ ಮಾಡಿಲ್ಲ.ನಾವು ಕೂಡ ಅಧಿಕಾರಿಗಳ ಬಳಿ ಏನು ಅಂತಾ ಕೇಳಿಲ್ಲ. ಇಷ್ಟು ದಿನಗಳ ಕಾಲ ಮಾಧ್ಯಮಗಳಲ್ಲಿ ಬಂದ ವರದಿ ಬಗ್ಗೆ ನಾವು ಮಾತಾಡಿದ್ದೇವೆ. ಮುಂದೆ ಅಂತಿಮವಾದ ವರದಿ ಬರಲಿ, ಆ ನಂತರ ಮಾತಾಡೋಣ ಎಂದು ಡಿಕೆಶಿ ಹೇಳಿದರು.

Read More

ಹಾಸನ : ಹಾಸನದಲ್ಲಿ ಹೆಜ್ಜೇನು ದಾಳಿಗೆ ಸುಮಾರು 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಹಾಸನದ ಕೆಂಚಟ್ಟಹಳ್ಳಿ ಬಳಿ ವಿಶ್ವ ವಿದ್ಯಾಲಯದಲ್ಲಿ ಘಟನೆ ನಡೆದಿದೆ. ಕಬ್ಬಡ್ಡಿ ಪಂದ್ಯಾವಳಿಗೆ ವಿದ್ಯಾರ್ಥಿಗಳಿಗೆ ಆಯ್ಕೆ ವೇಳೆ ಘಟನೆ ನಡೆದಿದೆ. ಹೆಜ್ಜೇನು ದಾಳಿಯಾಗುತ್ತಿದ್ದಂತೆ ಚೆಲ್ಲಾಪಿಲ್ಲಿಯಾಗಿದ್ದಾರೆ. ತಕ್ಷಣ ಗಾಯಗೊಂಡ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Read More

ಬೆಂಗಳೂರು : ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಕಡಿಮೆಯಾಗಿದ್ದ ಮಳೆ ಇದೀಗ ಮತ್ತೆ ಚುರುಕುಗೊಂಡಿದೆ. ಮುಂದಿನ ಎರಡು ದಿನಗಳ ಕಾಲ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಬರುವ ತೀವ್ರ ಮಳೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಶೇಷವಾಗಿ 14 ಜಿಲ್ಲೆಗಳು ಗಂಭೀರ ಮಳೆ ಅಪಾಯ ವಲಯದಲ್ಲಿ ಸೇರಿವೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ವಿಜಯನಗರ ಮುಂತಾದವು.

Read More

ದಾವಣಗೆರೆ : ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರ ಆಪ್ತ ಸಹಾಯಕ ಎಂದು ಹೇಳಿಕೊಂಡು ಜಿಲ್ಲಾಧಿಕಾರಿಗೆ ವಂಚಿಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮೂರ್ತಿ ಅಲಿಯಾಸ್ ಅಭಿಷೇಕ್ ದೊಡ್ಡಮನಿ (20) ಬಂಧಿತ ಆರೋಪಿ. ತಾನು ಸಚಿವ ಬೈರತಿ ಸುರೇಶ್ ಆಪ್ತ ಸಹಾಯಕ ಎಂದು ಡಿಸಿಗೆ ಕರೆ ಮಾಡಿದ್ದ ಅಭಿಷೇಕ್ ದೊಡ್ಡಮನಿ, ಸರ್ಕಾರಿ ಸೌಲಭ್ಯ ದುರುಪಯೋಗ ಪಡಿಸಿಕೊಂಡ ಹಿನ್ನೆಲೆ ಬಂಧಿಸಲಾಗಿದೆ.‌ ಬಂಧಿತ ಆರೋಪಿ ಕಾರವಾರದವನಾಗಿದ್ದು, ದಾವಣಗೆರೆಗೆ ಆಗಮಿಸಿ ಈ ಕೃತ್ಯ ಎಸಗಿದ್ದ. ಜಿಲ್ಲಾಧಿಕಾರಿ ಡಾ. ಜಿ.ಎಂ. ಗಂಗಾಧರ್ ಸ್ವಾಮಿ ಅವರಿಗೆ ಕರೆ ಮಾಡಿದ್ದ ಅಭಿಷೇಕ್ ದೊಡ್ಡಮನಿ, ನಾನು ಬೈರತಿ ಸುರೇಶ್ ಅವರ ಆಪ್ತ ಸಹಾಯಕನಾಗಿದ್ದು ಬೆಳಗಾವಿಗೆ ತೆರಳಬೇಕಾಗಿದೆ, ತನಗೆ ಒಂದು ಕಾರಿನ ವ್ಯವಸ್ಥೆ ಮಾಡಿಕೊಡುವಂತೆ ತಿಳಿಸಿದ್ದಾನೆ. ಆದರೆ ಜಿಲ್ಲಾಧಿಕಾರಿ ಹಿಂದೆ ಮುಂದೆ ಯೋಚಿಸದೆ ಆರೋಪಿ ಅಭಿಷೇಕ್ ದೊಡ್ಡಮನಿಗೆ ಸರ್ಕಾರಿ ಕಾರು, ಅದಕ್ಕೆ ಇಂಧನ ತುಂಬಿಸಿ ಕಾರು ಚಾಲಕನನ್ನು ಕಳುಹಿಸಿಕೊಟ್ಟಿದ್ದರು. ಸರ್ಕಾರಿ ಸೌಲಭ್ಯಗಳನ್ನು ದುರುಪಯೋಗ ಪಡಿಸಿಕೊಂಡ ಬಗ್ಗೆ ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ…

Read More

ಬೆಂಗಳೂರು : ಇವತ್ತಿನಿಂದ ಸರ್ವೆ ಕಾರ್ಯ ಚುರುಕಾಗಿ ಆಗಲಿದೆ. ಯಾವುದೇ ಕಾರಣಕ್ಕೂ ಸಮೀಕ್ಷೆಯ ಅವಧಿ ವಿಸ್ತರಣೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಬಗ್ಗೆ ಕೃಷ್ಣಾದಲ್ಲಿಂದು ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ಬಳಿಕ ಸುದ್ದಿಗೋಷ್ಟಿ ಉದ್ದೇಶಿಸಿ ಅವರು ಮಾತನಾಡಿದರು. ಸಮೀಕ್ಷೆ ಕಾರ್ಯ ರಾಜ್ಯಾದ್ಯಂತ ಆರಂಭವಾಗಿದ್ದು, ಆರಂಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳ ಕಾರಣ ಸಮೀಕ್ಷೆ ನಿಧಾನವಾಗಿತ್ತು. ಈಗ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಇಂದಿನಿಂದ ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. ಸಮೀಕ್ಷೆ ಕಾರ್ಯಕ್ಕೆ ಯಾವುದೇ ತಾಂತ್ರಿಕ ತೊಂದರೆಗಳು ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ತಾಂತ್ರಿಕ ತೊಂದರೆಗಳು ಎದುರಾದರೆ ತಕ್ಷಣ ಅದನ್ನು ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಸಮೀಕ್ಷೆ ಕಾರ್ಯವನ್ನು ಎಲ್ಲಾ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ಶಿಕ್ಷಕರಿಗೆ ಗೌರವಧನದ ಬಗ್ಗೆ ಯಾವುದೇ ಅನುಮಾನ ಬೇಡ. ಈಗಾಗಲೇ ಗೌರವಧನವನ್ನು ಬಿಡುಗಡೆ ಮಾಡಿದ್ದೇವೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ…

Read More