Author: kannadanewsnow05

ಚಿಕ್ಕಮಗಳೂರು : ಇತ್ತೀಚಿಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮನೆಗಳ್ಳತನದಲ್ಲಿ ಚಡ್ಡಿ ಗ್ಯಾಂಗ್ ಅಲರ್ಟ್ ಆಗಿತ್ತು. ಇದೀಗ ಮನೆಗಳ್ಳತನ ಮಾಡುತ್ತಿದ್ದ ಚಡ್ಡಿ ಗ್ಯಾಂಗಿನ ಇಬ್ಬರು ಕಳ್ಳರನ್ನು ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಮಹಾರಾಷ್ಟ್ರ ಮೂಲದ ಪಪ್ಪು ಟಿಪ್ಪ ಪವಾರ್ ಮತ್ತು ಮಂಗೇಶ್ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಬಂಧಿತರ ಬಳಿ ಇದ್ದ 32 ಲಕ್ಷ ಮೌಲ್ಯದ ಚಿನ್ನ ಬೆಳ್ಳಿಯನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸ್ ಬಡಾವಣೆಯಲ್ಲಿ ಆರೋಪಿಗಳು ಕಳ್ಳತನ ಮಾಡಿದ್ದರು. ಇನ್ನುಳಿದ ಆರೋಪಿಗಳಿಗಾಗಿ ಪೊಲೀಸರು ತೀವ್ರವಾದ ಹುಡುಕಾಟ ನಡೆಸಿದ್ದಾರೆ. ಆರೋಪಿಗಳ ವಿರುದ್ಧ ಚಿತ್ರದುರ್ಗ, ಗದಗ, ಬಳ್ಳಾರಿ ಸೇರಿದಂತೆ ರಾಜ್ಯದ ಹಲವು ಠಾಣೆಗಳಲ್ಲಿ ಮನೆಗಳತನ ಪ್ರಕರಣಗಳು ದಾಖಲಾಗಿದ್ದವು.

Read More

ಚಾಮರಾಜನಗರ : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಟಿಪ್ಪರ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮಾದಪಟ್ಟಣದಲ್ಲಿ ಈ ಒಂದು ಅಪಘಾತ ಸಂಭವಿಸಿದ್ದು, ಚಾಲಕ ಸೇರಿ ಮೂವರ ಸ್ಥಿತಿ ಗಂಭೀರವಾಗಿದ್ದು ಮೈಸೂರು ಆಸ್ಪತ್ರೆಗೆ ಅವರನ್ನು ಶಿಫ್ಟ್ ಮಾಡಲಾಗಿದೆ. ಮೃತರನ್ನು ಕೇರಳದ ಕಲ್ಪಟ್ಟ ಮೂಲದ ರಶೀದ್ (40) ಮತ್ತು ನಜೀರಾ (38) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಬೇಗೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಬೇಗುರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗಲಿದ್ದು, ನವೆಂಬರ್ ಬಂದರೆ ರಾಜ ಕಾಂಗ್ರೆಸ್ ಸರ್ಕಾರಕ್ಕೆ ಎರಡೂವರೆ ವರ್ಷ ಪೂರೈಸುತ್ತದೆ. ಇದರ ಬೆನ್ನಲ್ಲೆ, ಸಂಪುಟ ಪುನರ್ ರಚನೆ ಬಗ್ಗೆ ಕೂಡ ಹಲವು ನಾಯಕರಿಂದ ಕೂಗು ಕೇಳಿ ಬರುತ್ತಿದ್ದು, ಇದರ ಮಧ್ಯ ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಚಿವ ಕೃಷ್ಣ ಬೈರೇಗೌಡ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ರೆಡಿ ಇದ್ದೇನೆ. ಎರಡುವರೆ ವರ್ಷದ ಬಳಿಕ ಸಂಪುಟ ಪುನರ್ ರಚನೆ ಆಗುತ್ತೆ. ಸರ್ಕಾರ ಬಂದಾಗಲೇ ಈ ನಿರ್ಧಾರ ಆಗಿತ್ತು, ಸಚಿವರಾಗಲು ಅರ್ಹತೆ ಇರುವವರಿಗೆ ಅವಕಾಶ ಸಿಗಬೇಕು. ನಾಯಕತ್ವ ಬದಲಾವಣೆಯ ಬಗ್ಗೆ ಹೈಕಮಾತ ತೀರ್ಮಾನಿಸುತ್ತದೆ. ಸಂಪುಟ ಪುನರು ರಚನೆಗೂ ನಾಯಕತ್ವ ಬದಲಾವಣೆಗೂ ಸಂಬಂಧವಿಲ್ಲ ಎಂದರು. ಪಕ್ಷ ನನಗೆ ಮೂರು ಬಾರಿ ಸಚಿವ ಸ್ಥಾನವನ್ನು ನೀಡಿದೆ. ಅರ್ಹತೆ ಮೀರಿ ನನಗೆ ಪಕ್ಷ ಅವಕಾಶ ಕೊಟ್ಟಿದೆ ಹೈ ಕಮಾಂಡ್ ಹೇಳಿದರೆ ನಾನು…

Read More

ವಿಜಯಪುರ : ರಾಜ್ಯದಲ್ಲಿ ಆರ್ ಎಸ್ ಎಸ್ ಪಥ ಸಂಚಲನ ಕುರಿತು ಈಗಾಗಲೇ ಭಾರಿ ಚರ್ಚೆಗೆ ಗ್ರಾಸವಾಗಿದ್ದು ಅದರಲ್ಲೂ ಚಿತ್ತಾಪುರದಲ್ಲಿ ಆರ್‌ಎಸ್‌ ಪಥ ಸಂಚಲನ ಕುರಿತು ಕಲ್ಬುರ್ಗಿ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ನಡೆಯುತ್ತಿದೆ. ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಅವರು ಆರ್ ಎಸ್ ಎಸ್ ನವರು ಬ್ರಿಟಿಷರ ಜೊತೆಗೆ ಶಾಮೀಲಾಗಿದ್ದರು ಎಂದು ಗಂಭೀರವಾಗಿ ಆರೋಪಿಸಿದ್ದಾರೆ ವಿಜಯಪುರದಲ್ಲಿ ಮಾತನಾಡಿದ ಅವರು, ಆರ್ ಎಸ್ ಎಸ್ ನವರು ಬ್ರಿಟಿಷರ ಜೊತೆಗೆ ಶಾಮೀಲಾಗಿದ್ದರು. ಆರ್ ಎಸ್ ಎಸ್ ಸ್ವತಂತ್ರ ಹೋರಾಟದಲ್ಲಿ ಯಾಕೆ ಪಾಲ್ಗೊಂಡಿರಲಿಲ್ಲ? ಸ್ವತಂತ್ರ ಹೋರಾಟ ಎಂಬುವುದೇ ಒಂದು ದೊಡ್ಡ ಸುನಾಮಿ. ಯಾಕೆ ಆರ್ ಎಸ್ ಎಸ್ ಆ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ? ಇವರೆಲ್ಲ ದೇಶಭಕ್ತರಂತೆ, ಇವರಿಂದ ನಾವು ಕಲಿಯಬೇಕಾ? ಯಾರು ಸ್ವತಂತ್ರ ಹೋರಾಟದಲ್ಲಿ ಭಾಗವಹಿಸಿಲ್ಲವೋ ಅವರಿಂದ ನಾವು ಈಗ ಕಲಿಯಬೇಕಿದೆ ಎಂದು ಟಾಂಗ್ ನೀಡಿದರು. ರಾಜ್ಯದಲ್ಲಿ ಆರ್ ಎಸ್ ಎಸ್ ಗೆ ಕಡಿವಾಣ ಹಾಕುವ ವಿಚಾರವಾಗಿ ಯಾವುದೇ ಕಾರ್ಯಕ್ರಮ ಇರಲಿ, ಅನುಮತಿ ಪಡೆಯಲೇಬೇಕು. ಇದರಲ್ಲಿ…

Read More

ಯಾದಗಿರಿ : ರಾಜ್ಯದಲ್ಲಿ ಒಂದು ಅಮಾನವೀಯ ಘಟನೆ ನಡೆದಿದ್ದು, ಮಹಿಳೆಯೊಬ್ಬರ ತಲೆ ಕೂದಲು ಕತ್ತರಿಸಿ, ಸುಣ್ಣ ಹಚ್ಚಿ, ಖಾರದ ಪುಡಿ ಎರಚಿ ಅಮಾನುಷವಾಗಿ ವರ್ತಿಸಿದ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಚಾಮನಾಳ ತಾಂಡಾದಲ್ಲಿ ನಡೆದಿದೆ. ಅ.16 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಗಂಗಾಬಾಯಿ ಶಂಕರ ಚಿನ್ನಾರಾಠೋಡ (35) ಸಂತ್ರಸ್ತೆ ಎಂದು ತಿಳಿದುಬಂದಿದೆ.ಸಂತ್ರಸ್ತೆ ಆರೋಗ್ಯ ಸಮಸ್ಯೆಯಿಂದಾಗಿ ಕಲಬುರಗಿ ಇರುವ ಚಿಕ್ಕಮ್ಮನ ಮನೆಗೆ ಆಗಾಗ ಹೋಗುತ್ತಿದ್ದಳು. ಆಕೆಯ ಅಳಿಯ ರಾಮು ರಾಠೋಡ ಎಂಬಾತ ಆಕೆಯನ್ನು ಕರೆದುಕೊಂಡು ಹೋಗುತ್ತಿದ್ದ. ಆದ್ರೆ ಆರೋಪಿಗಳು ಅಳಿಯನ ಜೊತೆಗೆ ಸಂಬಂಧ ಇಟ್ಟುಕೊಂಡು ಓಡಿ ಹೋಗಿ ಮರ್ಯಾದೆ ತೆಗೆದಿದ್ದೀಯಾ ಅಂತ ನಿಂದಿಸಿ ಮನಸೋಇಚ್ಛೆ ಥಳಿಸಿದ್ದಾರೆ. ಸುಮಾರು 11 ಜನ ಗಂಗೂಭಾಯಿಯನ್ನ ಒದ್ದು ನೆಲಕ್ಕೆ ಕೆಡವಿದ್ದಾರೆ. ಆಕೆಯನ್ನ ಹಿಡಿದು ತಲೆಕೂದಲು ಕತ್ತರಿಸಿದ್ದಾರೆ. ನಂತರ ತಲೆಗೆ ಸುಣ್ಣ ಹಚ್ಚಿ, ಮೈಮೇಲೆ ಕಾರದಪುಡಿ ಹಾಕಿ ದುಷ್ಕೃತ್ಯ ಎಸಗಿದ್ದಾರೆ. ಜೊತೆಗೆ ಗಂಗಾಭಾಯಿಗೆ ಜೀವ ಬೆದರಿಕೆ ಹಾಕಲಾಗಿದೆ ಎಂಬ ಆರೋಪ ಕೂಡ ಕೇಳಿಬಂದಿದೆ.ಪ್ರಕರಣ ಸಂಬಂಧ…

Read More

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಇಡೀ ಎಲೆಕ್ಟ್ರಾನಿಕ್ ಅಂಗಡಿ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ವಿಜಯಪುರ ಪಟ್ಟಣದಲ್ಲಿ ಈ ಒಂದು ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ವಸ್ತುಗಳು ಸುಟ್ಟು ಭಸ್ಮವಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಗಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿ ಆದರು.

Read More

ಆಂಧ್ರಪ್ರದೇಶ : ಆಂಧ್ರಪ್ರದೇಶ ಮತ್ತು ಬೆಂಗಳೂರು ನಡುವೆ ಕರ್ನೂಲ್ ನಲ್ಲಿ ಖಾಸಗಿ ಬಸ್ ದುರಂತದಲ್ಲಿ ಇದುವರೆಗೂ 20ಕ್ಕೂ ಹೆಚ್ಚು ಜನರು ಸಜೀವ ದಹನಗೊಂಡಿದ್ದು 23ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಸ್ ಚಾಲಕ ಮಿರಿಯಾಲ ಲಕ್ಷ್ಮಯ್ಯನನ್ನು ಅರೆಸ್ಟ್ ಮಾಡಲಾಗಿದೆ. ಚಾಲಕರನ್ನು ವಿಚಾರಣೆಗೆ ಒಳಪಡಿಸಿದಾಗ ಸ್ಪೋಟಕ ಅಂಶ ಬಯಲಾಗಿದ್ದು ಚಾಲಕ ಮಿರ್ಯಾಲ ಲಕ್ಷ್ಮಯ್ಯ ಪಲ್ನಾಡ್ ನಗರದ ನಿವಾಸಿಯಾಗಿದ್ದು, ಆತ ನಕಲಿ ಅಂಕಪಟ್ಟಿ ನೀಡಿ ಡ್ರೈವಿಂಗ್ ಲೈಸೆನ್ಸ್ ಪಡೆದಿದ್ದ ಎಂದು ತಿಳಿದುಬಂದಿದೆ. ಹತ್ತನೇ ಕ್ಲಾಸ್ ಪಾಸ್ ಆಗಿರೋ ನಕಲಿ ಅಂಕಪಟ್ಟಿ ಸಲ್ಲಿಸಿರುವುದು ತನಿಖೆಯ ವೇಳೆ ಪತ್ತೆಯಾಗಿದೆ. ಆರೋಪಿ ಚಾಲಕನನ್ನು ಬಂಧಿಸಿ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಲಾಲ್ಬಾಗ್ನಲ್ಲಿ ಸುರಂಗ ಮಾರ್ಗ ನಿರ್ಮಾಣ ವಿಚಾರವಾಗಿ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದು ಬಿಜೆಪಿ ಸಂಸದ ತೇಜಸ್ವಿ ವಿರುದ್ಧ ವಾಗ್ದಾಳಿ ನಡೆಸಿ ತೇಜಸ್ವಿ ಸೂರ್ಯ ಒಬ್ಬ ಕಾಲಿ ಟ್ರಂಕ್ ಎಂದು ಕಿಡಿಕಾರಿದ್ದಾರೆ. ಲಾಲ್ ಬಾಗ್ ಗೆ ಸುರಂಗ ಮಾರ್ಗ ನಿರ್ಮಾಣ ಮಾಡುವುದರಿಂದ ಯಾವುದೇ ರೀತಿಯ ಸಮಸ್ಯೆ ಆಗಲ್ಲ. ತೇಜಸ್ವಿ ಸೂರ್ಯ ಯಾರು? ಎಂಪಿ ಆಗಿ ಪ್ರಧಾನಿ ಹತ್ರ ರೂ.1 ಕೂಡ ಅನುದಾನ ತಂದಿಲ್ಲ. ಆತನೊಬ್ಬ ಖಾಲಿ ಟ್ರಂಕ್ ತೇಜಸ್ವಿ ಸೂರ್ಯ. ಟೀಕೆಗಳು ಸಾಯುತ್ತವೆ ಕೆಲಸಗಳು ಮಾತ್ರ ಉಳಿಯುತ್ತವೆ. ಬಿಜೆಪಿ ಅವಧಿಯಲ್ಲಿ ಯಾವುದೇ ಕೆಲಸ ಆಗಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು.

Read More

ಬೆಂಗಳೂರು : ಶಬರಿಮಲೈ ದೇಗುಲದಲ್ಲಿ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಆರೋಪಿ ಪೊನ್ನಿ ಉನ್ನಿಕೃಷ್ಣನ್ ಮನೆಯ ಮೇಲೆ ಕೇರಳ ಎಸ್ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಮೇಲೆ ದಾಳಿ ಮಾಡಿದ್ದಾರೆ. ನಾಲ್ವರು ಅಧಿಕಾರಿಗಳ ತಂಡದಿಂದ ದಾಳಿ ನಡೆಸಿ ಪರಿಶೀಲನೆ ಮಾಡುತ್ತಿದ್ದಾರೆ. ತಿರುವನಂತಪುರದಲ್ಲಿ ಉನ್ನಿಕೃಷ್ಣನ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ತನಿಖೆ ಭಾಗವಾಗಿ ಸಾಕ್ಷಿ ಆಧಾರಗಳನ್ನು ಸಂಗ್ರಹಿಸಲು ಪ್ರಮುಖ ಆರೋಪಿಯಾಗಿರುವ ಪೊನ್ನಿ ಉನ್ನಿಕೃಷ್ಣನ್ ನಿವಾಸದ ಮೇಲೆ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಳ್ಳಾರಿಯಲ್ಲಿ ಕೂಡ ಕೇರಳದ ಅಧಿಕಾರಿಗಳು ತನಿಖೆ ಮಾಡಿದ್ದಾರೆ. ಬಳ್ಳಾರಿ ರೊದ್ದಂ ಜುವೆಲರಿ ಶಾಪ್ನಲ್ಲಿ ಮೇಲೆ ದಾಳಿ ಮಾಡಿದ್ದಾರೆ. ಕದ್ದ ಚಿನ್ನದಲ್ಲಿ 476 ಗ್ರಾಂ ಚಿನ್ನ ಖರೀದಿಸಲಾಗಿತ್ತು. ರೊದ್ದಂ ಗೋಲ್ಡ್ ಮಾಲಿಕ ಗೋವರ್ಧನ್ ಖರೀದಿಸಿದ್ದರು. 476 ಚಿನ್ನವನ್ನು ಕೇರಳ ಎಸ್ಐಟಿ ಅಧಿಕಾರಿಗಳು ರಿಕವರಿ ಮಾಡಿದ್ದಾರೆ. ಗೋವರ್ಧನ್ ವಿಚಾರಣೆ ಮಾಡಿ ಚಿನ್ನವಶಕ್ಕೆ ಪಡೆದಿದ್ದಾರೆ. ಇದೀಗ ರೊದ್ಧಂ ಜುವೆಲ್ಲರಿ ಶಾಪ್…

Read More

ಬೆಂಗಳೂರು : ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಬೆಂಗಳೂರಿನ ಕೆಆರ್ ಪುರಂ ತ್ರಿವೇಣಿ ನಗರದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಗ್ಯಾಸ್ ಅನಿಲ ಸೋರಿಕೆಯಾಗಿ ಸಿಲಿಂಡರ್ ಸ್ಪೋಟಗೊಂಡಿದೆ. ಸಿಲಿಂಡರ್ ಸ್ಫೋಟದ ರಭಸಕ್ಕೆ ಪಕ್ಕದ ಮನೆಗಳಿಗೂ ಹಾನಿ ಆಗಿದೆ. ಕೆಆರ್ ಪುರಂ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ. ಸಿಲಿಂಡರ್ ಸ್ಫೋಟದ ರಭಸಕ್ಕೆ ಮನೆ ಸಂಪೂರ್ಣವಾಗಿ ಛಿದ್ರಗೊಂಡಿದ್ದು, ಓರ್ವ ಸಾವನಪ್ಪಿದ್ದಾನೆ. ಮೂವರಿಗೆ ಗಂಭೀರವಾದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯಘಟನಾ ಸ್ಥಳಕ್ಕೆ ಶ್ವಾನದಳ ಮತ್ತು ಬಾಂಬ್ ನಿಷ್ಕ್ರಿಯದಳ ಭೇಟಿ ಕೊಟ್ಟಿದ್ದು ವೈಟ್ ಫೀಲ್ಡ್ ವಿಭಾಗದ ಡೀಸಿಪಿ ಪರಶುರಾಮ್ ಸಹ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More