Author: kannadanewsnow05

ಕಲಬುರ್ಗಿ : ನವೆಂಬರ್ 2ರಂದು ಚಿತ್ತಾಪುರದಲ್ಲಿ ಆರ್‌ಎಸ್ ಪಥ ಸಂಚಲನ ನಡೆಸುವ ಕುರಿತು ಅನುಮತಿ ಕೋರಿ, ಕಲಬುರ್ಗಿ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ಇದೀಗ ಇಂದು ಕಲ್ಬುರ್ಗಿ ಹೈಕೋರ್ಟ್ ಪೀಠದಲ್ಲಿ ನಡೆಯಿತು. ಇದೆ ವೇಳೆ ಎಜಿ ಶಶಿಕಿರಣಶೆಟ್ಟಿ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದರು. ಜಿಲ್ಲಾಧಿಕಾರಿ ತಮ್ಮ ವರದಿಯಲ್ಲಿ ಎರಡು ಅಭಿಪ್ರಾಯಗಳನ್ನು ನೀಡಿದ್ದಾರೆ ಜನರಿಗೆ ತೊಂದರೆಯಾಗುವ ಬಗ್ಗೆ ಕಲ್ಬುರ್ಗಿ ಎಸ್ ಪಿ ವರದಿ ನೀಡಿದ್ದಾರೆ ಸಂಚಲನದ ಮಾರ್ಗದಲ್ಲಿ ಸಂಚಾರ ದಟ್ಟಣೆ ಆಗುವ ಸಾಧ್ಯತೆ ಇದೆ ಹೀಗಾಗಿ ಯಾವುದೇ ಸಂಘಟನೆಗಳಿಗೂ ಅನುಮತಿ ನೀಡದಂತೆ ವರದಿ ಇದೆ ಪಥಸಂಚಲನ ಮಾರ್ಗದಲ್ಲಿ ಹೆಚ್ಚಿನ ಜನರು ಸೇರುವ ಸಾಧ್ಯತೆ ಇದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇದೆ ಪರಿಸ್ಥಿತಿ ಸಾಮಾನ್ಯವಾಗಿ ಪತಸಂಚಲನ ನಡೆಸುವುದು ಸೂಕ್ತ ಕೆಲ ವಾರಗಳ ಬಳಿಕ ಪಥಸಂಚಲನ ನಡೆಸುವುದು ಸೂಕ್ತ ಎಂದು ವರದಿ ಇದೆ. ನಾವು ಅರ್ಜಿದಾರರ ಮನವಿಯನ್ನು ತಿರಸ್ಕರಿಸಿಲ್ಲ ಬಾಕಿ ಇರಿಸಿದ್ದೇವೆ ಹೈಕೋರ್ಟಿಗೆ ಅಡ್ವಕೇಟ್ ಜನರಲ್ ಶಶಿಕಿರಣಶೆಟ್ಟಿ ತಿಳಿಸಿದರು. ಸಮಸ್ಯೆ ಬಗೆಹರಿಯುವ ಮಾರ್ಗದ ಬಗ್ಗೆ…

Read More

ವಿಜಯಪುರ : ರಾಜ್ಯದಲ್ಲೊಂದು ಬೆಚ್ಚಿಬಿಳಿಸುವಂತಹ ಘಟನೆ ನಡೆದಿದ್ದು ನಡು ರಸ್ತೆಯಲ್ಲಿಯೇ ಪತಿಯೊಬ್ಬ, ತನ್ನ ಪತ್ನಿಗೆ ಮಚ್ಚಿನಿಂದ ಭೀಕರವಾಗಿ ಹಲ್ಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ನಡೆದಿದೆ. ಹಾಡಹಗಲೇ ಪತ್ನಿಯ ಮೇಲೆ ಪತಿ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಆನಂದ್ ಟಾಕೀಸ್ ಬಳಿ ಪತಿ ಮಚ್ಚಿನಿಂದ ನಡೆಸಿದ್ದಾನೆ. ಸ್ಥಳೀಯರು ಪತ್ನಿಯ ಹಲ್ಲೆ ನಡೆಸಿದ್ದಾನೆ. ಹಲ್ಲೆ ಮಾಡುತ್ತಿರುವುದನ್ನು ಕಂಡು ಸ್ಥಳೀಯರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಕಾರಣ ಇಲ್ಲದೆ ಪತ್ನಿಯ ಮೇಲೆ ಹಲ್ಲೆ ನಡೆಸುತ್ತಿದ್ದವನ ಮೇಲೆ ಸ್ಥಳೀಯರು ಕೂಡ ಆತನನ್ನು ಹಿಡಿದು ಥಳಿಸಿದ್ದಾರೆ.

Read More

ಬೆಂಗಳೂರು : ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಖಾಸಗಿ ಬಸ್ ಹೊತ್ತಿ ಉರಿದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನಗೊಂಡಿದ್ದು, ಇದೀಗ ಕರ್ನೂಲ್‌ನಲ್ಲಿ ನಡೆದ ಭೀಕರ ಬಸ್‌ ದುರಂತದಲ್ಲಿ ಬೆಂಗಳೂರಿನ ಇಬ್ಬರು ಸಾಫ್ಟ್‌ವೇರ್‌ ಎಂಜಿನಿಯರ್‌ ಕೂಡ ಸಾವನ್ನಪ್ಪಿದ್ದಾರೆ. ಎಂಜಿನಿಯರ್‌ಗಳಾದ ಅನುಷಾ, ಗನ್ನಮನೇನಿ ಧಾತ್ರಿ ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ.ಮಹೇಶ್ವರಂ ಅನುಷಾ ರೆಡ್ಡಿ ಮೂಲತಃ ಯದಾದ್ರಿ ಭುವನಗಿರಿ ಜಿಲ್ಲೆಯ ವಸ್ತಕೊಂಡೂರು ಗ್ರಾಮದವರು. ಬೆಂಗಳೂರಿನಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿ ಕೆಲಸ ಮಾಡಿಕೊಂಡಿದ್ದರು. ದೀಪಾವಳಿ ಹಬ್ಬ ಮುಗಿಸಿ ಬರುತ್ತಿದ್ದ ಅನುಷಾ ಇಂದು ಬೆಳಗ್ಗಿನ ಜಾವ ಸಂಭವಿಸಿದ ದುರಂತದಲ್ಲಿ ಮೃತಪಟ್ಟಿದ್ದಾರೆ. ಗನ್ನಮನೇನಿ ಧಾತ್ರಿ (ಜಿ.ಧಾತ್ರಿ) ಬಾಪಟ್ಲ ಜಿಲ್ಲೆಯವರು. ಮಾವನ ಮನೆಯಿಂದ ಬೆಂಗಳೂರಿಗೆ ವಾಪಸ್‌ ಬರುತ್ತಿದ್ದ ವೇಳೆ ಸಾವನ್ನಪ್ಪಿದ್ದು, ಬದುಕು ದುರಂತ ಅಂತ್ಯಕಂಡಿದೆ.

Read More

ಬೆಂಗಳೂರು : ಈ ಮೊದಲೇ ಹೇಳಿದಂತೆ ಅನರ್ಹ ಬಿಪಿಎಲ್ ಕಾರ್ಡ್ ಹೊಂದಿರುವ ಪಡಿತರರ ಬಿಪಿಎಲ್ ಕಾರ್ಡ್ಗಳನ್ನು ರದ್ದುಗೊಳಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಹೇಳಿತ್ತು. ಅದರಂತೆ ರಾಜ್ಯ ಸರ್ಕಾರವು ಅನರ್ಹ ಬಿಪಿಎಲ್ ಕಾರ್ಡ್‌ ಪಡೆದವರಿಗೆ ಬಿಗ್ ಶಾಕ್ ನೀಡಿದ್ದು, ರಾಜ್ಯಾದ್ಯಂತ ಒಟ್ಟು 4.9 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಲಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕೈಗೊಂಡ ಅನರ್ಹ ಪಡಿತರದಾರರ ಪತ್ತೆ ಕಾರ್ಯದಲ್ಲಿ ಕಳೆದ ಕೆಲವು ವಾರಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಅನರ್ಹ ಫಲಾನುಭವಿಗಳನ್ನು ಗುರುತಿಸಿ ಅವರ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಲಾಗಿದೆ. ಇದುವರಿಗೂ ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ರದ್ದುಗೊಳಿಸುವ ಸಂಖ್ಯೆ 4.9 ಲಕ್ಷಕ್ಕೆ ಏರಿಕೆಯಾಗಿದೆ. ಈ ಅಭಿಯಾನದಲ್ಲಿ ಬಿಪಿಎಲ್ ಕಾರ್ಡ್ ಕಳೆದುಕೊಂಡ ಅನರ್ಹರಿಗೆ ಸರ್ಕಾರ ಎಪಿಎಲ್ ಕಾರ್ಡ್‌ಗಳನ್ನು ನೀಡಲು ಮುಂದಾಗಿದೆ. ಅಕ್ರಮವಾಗಿ ಬಿಪಿಎಲ್ ಕಾರ್ಡ್ ಪಡೆದು ಪಡಿತರ ಯೋಜನೆಯ ಲಾಭ ಪಡೆದುಕೊಳ್ಳುತ್ತಿರುವ ಫಲಾನುಭವಿಗಳಿಗೆ ದಂಡ ವಿಧಿಸುವುದಕ್ಕೂ ಆಹಾರ ಇಲಾಖೆ ಚಿಂತನೆ ನಡೆಸುತ್ತಿದೆ. ಈ ಸಂಬಂಧ ದಂಡದ ನಿಯಮಗಳ ರೂಪುರೇಷೆಗಳನ್ನು ಕೂಡ…

Read More

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆವಿ “ಕಂಠೀರವ” ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 25.10.2025 (ಶನಿವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. “ಕಬ್ಬನ್ಪೇಟೆ 5ನೇ ಅಡ್ಡರಸ್ತೆ, 6ನೇ ಅಡ್ಡರಸ್ತೆ, 3ನೇ ಅಡ್ಡರಸ್ತೆ, 4ನೇ ಅಡ್ಡರಸ್ತೆ, ಚೌಳಗಳ್ಳಿ ಎ, ಬಿ, ಸಿ, ಡಿ ಗಲ್ಲಿ, ಆರ್ಬಿಐ, ನೃಪತುಂಗ ರಸ್ತೆ, ಯುವಿಸಿಇ, ಕೃಷಿ ಕಚೇರಿ, ಸರ್ಕಾರಿ ಕಲಾ ಕಾಲೇಜು, ಮಾರ್ಥಾಸ್ ಆಸ್ಪತ್ರೆ, ಸುಂಕಲ್ಪೇಟೆ, ನಗರ್ತ್ಪೇಟೆ ಮುಖ್ಯರಸ್ತೆ, ಕೆಎಎಸ್ ಲೇನ್, ‘ಸಿ’ ಲೇನ್ ‘ಎ’ ಲೇನ್ ‘ಡಿ’ ಲೇನ್ ಪಿಆರ್ಎಸ್ ಲೇನ್, 13ನೇ ಅಡ್ಡರಸ್ತೆ, 14ನೇ ಅಡ್ಡರಸ್ತೆ, ಕಬ್ಬನ್ಪೇಟೆಯ 15ನೇ ಅಡ್ಡರಸ್ತೆ, ಕೆಜಿ ರಸ್ತೆಯ ಒಂದು ಭಾಗ, ಒಟಿಸಿ ರಸ್ತೆ, ಶಾರದಾ ರಂಗಮಂದಿರದ ಹಿಂಭಾಗ, ಎಸ್ಪಿ ರಸ್ತೆ, ಎಸ್ಜೆಪಿ ರಸ್ತೆ, ಧರ್ಮರಾಯ ಸ್ವಾಮಿ ದೇವಸ್ಥಾನ ರಸ್ತೆ, ಆದರ್ಶ ಶಂಗ್ರಿಲ್ಲಾ ಮತ್ತು ಸುತ್ತಮುತ್ತಲಿನ ಪ್ರದೇಶಗಳು. 66/11kV NGEF MUSS ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ…

Read More

ಬೆಂಗಳೂರು: ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂಪಾಯಿಗಳನ್ನು ಶುಕ್ರವಾರ ಸರಕಾರಕ್ಕೆ ಹಸ್ತಾಂತರಿಸಿತು. ಸಂಸ್ಥೆಯ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮತ್ತು ಕೆಎಸ್ಡಿಎಲ್ ಅಧ್ಯಕ್ಷ ಅಪ್ಪಾಜಿ ನಾಡಗೌಡ ಅವರು ಈ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದರು. ಈ ಕಾರ್ಯಕ್ರಮವು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು. ಸಚಿವ ಪಾಟೀಲರು ಮಾತನಾಡಿ, ಕೆಎಸ್ಡಿಎಲ್ ಸಂಸ್ಥೆಯು ಕಳೆದ ಹಣಕಾಸು ವರ್ಷದಲ್ಲಿ 1,700 ಕೋಟಿ ರೂಪಾಯಿ ವಹಿವಾಟು ನಡೆಸಿ, 451 ಕೋಟಿ ರೂ. ಲಾಭವನ್ನು ಕಂಡಿದೆ. ಇದರ ಪೈಕಿ ನಿಯಮದಂತೆ ಶೇ.30ರಷ್ಟು ಲಾಭಾಂಶವನ್ನು ಸರಕಾರಕ್ಕೆ ಕೊಡಲಾಗಿದೆ. ವಹಿವಾಟು, ಲಾಭ ಮತ್ತು ಲಾಭಾಂಶ ಮೂರರಲ್ಲೂ ಇದು ಸಾರ್ವಕಾಲಿಕ ದಾಖಲೆ ಆಗಿದೆ ಎಂದಿದ್ದಾರೆ. 2022-23ರಲ್ಲಿ ಬಿಜೆಪಿ ಸರಕಾರವಿದ್ದಾಗ ಸಂಸ್ಥೆಯ ವತಿಯಿಂದ ಸರಕಾರಕ್ಕೆ 54 ಕೋಟಿ ರೂಪಾಯಿ ಡಿವಿಡೆಂಡ್ (ಲಾಭಾಂಶ) ಕೊಡಲಾಗಿತ್ತು. 2023-24ರಲ್ಲಿ 108 ಕೋಟಿ ರೂ. ಲಾಭಾಂಶ…

Read More

ಹಿರಿಯೂರು : ಹೊಸದುರ್ಗ ಶಾಸಕ ಬಿಜಿ. ಗೋವಿಂದಪ್ಪನವರ ಮೇಲೆ ನೀರಾವರಿ ಹೋರಾಟ ಸಮಿತಿ ಪದಾಧಿಕಾರಿಗಳು ಗುರುವಾರ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಾಣಿ ವಿಲಾಸ ಸಾಗರ ಜಲಾಶಯ ಗೇಟ್ ಅನ್ನು ಹೊಸದುರ್ಗ ಶಾಸಕರು ತಾವೇ ಮುಂದೆ ನಿಂತು ಜಿಲ್ಲಾಧಿಕಾರಿಗಳ ಅನುಮತಿ ಇಲ್ಲದೇ ಓಪನ್ ಮಾಡಿಸಿದ್ದು, ಈ ಅಧಿಕಾರವನ್ನು ಅವರಿಗೆ ಕೊಟ್ಟವರು ಯಾರು? ಎಂದು ಪ್ರಶ್ನಿಸಿದ ಹೋರಾಟಗಾರರು ಶಾಸಕರು ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆಂದು ಆರೋಪಿಸಿದ ಅವರು ಹೀಗೆ ಆದರೆ ಕಾನೂನು ಸುವ್ಯವಸ್ಥೆ ಮೇಲೆ ಹೊಡೆತ ಬೀಳಲಿದೆ. ವಿವಿ ಸಾಗರ ಜಲಾಶಯ ರಾಜ್ಯ ಸರ್ಕಾರದ ಅಧೀನದಲ್ಲಿದ್ದು, ಜಿಲ್ಲಾಧಿಕಾರಿಗಳು ಜಲಾಶಯ ಸಮಿತಿ ಅಧ್ಯಕ್ಷರಾಗಿದ್ದಾರೆ. ಜಲಾಶಯದ ಗೇಟ್ ತೆಗೆಸುವ, ಮುಚ್ಚುವ ಮತ್ತು ಅದಕ್ಕೆ ಸಂಬಂಧಪಟ್ಟಂತ ಕೆಲಸಗಳನ್ನು ಮಾಡಿಸುವ ಅಧಿಕಾರ ಜಿಲ್ಲಾಧಿಕಾರಿಗಳು ಹೊಂದಿದ್ದಾರೆ. ಆದರೆ ಶಾಸಕರು ತಾವೇ ಮುಂದೆ ನಿಂತು ಗೇಟ್ ಓಪನ್ ಮಾಡಿಸಿದ್ದು ಅತ್ಯಂತ ದುರದೃಷ್ಟಕರ ಎಂದು ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಈ ಸಂದರ್ಭದಲ್ಲಿ ದೂರು ನೀಡಿರುವ ನೀರಾವರಿ ಹೋರಾಟ…

Read More

ಬೆಂಗಳೂರು : ಆಸ್ತಿ ವಿಚಾರವಾಗಿ ತಂದೆ ಹಾಗು ಮಗನ ನಡುವೆ ಗಲಾಟೆ ನಡೆದಿದೆ. ಈ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿ ತಂದೆ ಮಗನ ಮೇಲೆ ಫೈರಿಂಗ್ ನಡೆಸಿದ್ದಾರೆ. ಮಗ ಹಾಗು ತಂದೆಯ ನಡುವೆ ಆಸ್ತಿ ವಿಚಾರವಾಗಿ ಗಲಾಟೆ ನಡೆದು, ತಂದೆ ಮಗನ ಮೇಲೆ ಗನ್ ನಿಂದ ಶೂಟ್ ಮಾಡಿದ್ದಾರೆ. ತಲೆಗೆ ಶೂಟ್ ಮಾಡಿದ್ದು, ಹರೀಶ್ (30) ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗನ ಮೇಲೆ ತಂದೆ ಸುರೇಶ್ ಫೈರಿಂಗ್ ಮಾಡಿದ್ದಾರೆ. ಹಳೆ ಲೋಡ್ ಗನ್ ನಿಂದ ಶೂಟ್ ಮಾಡಿದ್ದಾರೆ. ತಕ್ಷಣ ಸ್ಥಳೀಯರು ಹರೀಶ್ ನನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ತಂದೆ ಸುರೇಶ್ ಮದ್ಯ ಸೇವಿಸಿ ಜಮೀನು ಮಾರಾಟ ಮಾಡಿದ್ದರು. ಇದ್ದ ಜಮೀನು ಮಾರಾಟ ಮಾಡಲು ಹರೀಶ್ ಗೆ ಕಿರುಕುಳ ನೀಡಿದ್ದಾರೆ. ಇದೆ ವಿಚಾರವಾಗಿ ಗಲಾಟೆ ನಡೆದಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮರಳೆನಹಳ್ಳಿಯಲ್ಲಿ ನಡೆದಿದೆ.

Read More

ಹಾವೇರಿ : ಮನೆಯಲ್ಲಿ ಪುಟ್ಟ ಮಕ್ಕಳು ಆಟ ಆಡುತ್ತಿರುವಾಗ ಪೋಷಕರು ಆದಷ್ಟು ಎಚ್ಚರ ವಹಿಸಬೇಕು ಇಲ್ಲವಾದರೆ ಹಲವು ದುರಂತಗಳು ಸಂಭವಿಸುತ್ತವೆ ಇದೀಗ ಇಂತಹದ್ದೇ ದುರಂತ ಹಾವೇರಿಯಲ್ಲಿ ನಡೆದಿದ್ದು ಮನೆಯ ಮುಂದೆ ಆಟವಾಡುವಾಗ ಬಕೆಟ್ನಲ್ಲಿ ತಲೆಕೆಳಗಾಗಿ ಬಿದ್ದು ಒಂದು ವರ್ಷದ ಮಗು ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ. ಹೌದು ಆಟವಾಡುವಾಗ ನೀರಿನ ಬಕೆಟ್ ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹಾವೇರಿಯ ಶಿವಬಸವ ನಗರದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದ್ದು, ಬಕೆಟ್ನಲ್ಲಿ ಬಿದ್ದು ದಕ್ಷಿತ್ ಯಳಂಬಳ್ಳಿ ಮಠ (1) ಎನ್ನುವ ಮಗು ಸಾವನ್ನಪ್ಪಿದೆ. ಬಕೆಟ್ನಲ್ಲಿ ತಲೆಕೆಳಗಾಗಿ ಬಿದ್ದಿದ್ದ ದಕ್ಷೀತ್ ಸಾವನಪ್ಪಿದ್ದಾನೆ. ಕೂಡಲೇ ಮಗುವನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿ ಆಗದೆ ಮಗು ಕೊನೆಯುಸಿರೆಳೆದಿದೆ. ಘಟನೆ ಕುರಿತು ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಕಿರುತೆರೆ ನಟಿ ದಿವ್ಯ ಸುರೇಶ್ ಅವರಿಂದ ಹಿಟ್ ಅಂಡ್ ರನ್ ಆರೋಪ ಕೇಳಿ ಬಂದಿದೆ.ಅತಿ ವೇಗ ಮತ್ತು ನಿರ್ಲಕ್ಷದ ಚಾಲನೆ ಮಾಡಿದ ಆರೋಪ ಕೇಳಿ ಬಂದಿದ್ದು, ಅಪಘಾತದಲ್ಲಿ ಮಹಿಳೆ ಒಬ್ಬರ ಕಾಲು ಮುರಿತವಾಗಿದೆ ಎಂದು ತಿಳಿದುಬಂದಿದೆ. ಅಕ್ಟೋಬರ್ 4 ರಂದು ರಾತ್ರಿ 1:30ರ ವೇಳೆಗೆ ಈ ಒಂದು ಅಪಘಾತ ಸಂಭವಿಸಿದ್ದು ಬೆಂಗಳೂರಿನ ಬ್ಯಾಟರಾಯನಪುರ ಎಂಎಂ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮಹಿಳೆಯ ಕಾಲು ಮುರಿತವಾಗಿದ್ದು ಅದಾದ ಬಳಿಕ ಸೌಜನ್ಯಕಾದರೂ ನಮ್ಮನ್ನು ಬಂದು ಭೇಟಿಯಾಗಿಲ್ಲ ಎಂದು ಅಪಘಾತಕ್ಕೆ ಈಡಾದ ಮಹಿಳೆಯ ಕುಟುಂಬಸ್ಥರು ದಿವ್ಯಾ ಸುರೇಶ್ ವಿರುದ್ಧ ಆಕ್ರೋಶ ಹೋರ್ ಹಾಕಿದ್ದಾರೆ. ಬೇಡರಾಯನಪುರ ಪೊಲೀಸ್ ಠಾಣೆಯಲ್ಲಿ ದಿವ್ಯ ಸುರೇಶ್ ವಿರುದ್ಧ ಪ್ರಕರಣ ದಾಖಲಾಗಿದೆ.

Read More