Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಿನಲ್ಲಿ ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಜೆಜೆ ನಗರದಲ್ಲಿ ಓಂ ಶಕ್ತಿ ಮೆರವಣಿಗೆ ಸಂದರ್ಭದಲ್ಲಿ ಮಾಲಾಧಾರಿಗಳ ಮೇಲೆ ಕಲ್ಲುತೂರಾಟ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಇದೀಗ ಪ್ರತಿಕ್ರಿಯೆ ನೀಡಿದ್ದು, ಓಂ ಶಕ್ತಿ ಮಾಲಾಧಾರಿಗಳ ಮೇಲೆ ನಾಲ್ಕೈದು ಚಿಕ್ಕ ಹುಡುಗರು ಕಲ್ಲು ಎಸೆದಿದ್ದಾರೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಜೆಜೆಆರ್ ನಗರದ ವಿಎಸ್ ಗಾರ್ಡನ್‌ನ ಓಂ ಶಕ್ತಿ ದೇವಸ್ಥಾನದ ಬಳಿ ಮಾಲಾಧಾರಿಗಳ ಮೇಲೆ ನಡೆದ ಕಲ್ಲು ತೂರಾಟದ ಬಗ್ಗೆ ಮಾಹಿತಿ ನೀಡಿದರು. ನಾಲ್ಕೈದು ಜನ ಚಿಕ್ಕ ಹುಡುಗರು 15-17 ವರ್ಷದವರು ಕಲ್ಲೆಸೆದಿದ್ದಾರೆ. ಎಲ್ಲರನ್ನೂ ಈಗಾಗಲೇ ಬಂಧಿಸಲಾಗಿದೆ. ಇದು ಬಾಲಾಪರಾಧದ ವ್ಯಾಪ್ತಿಗೆ ಬರುತ್ತದೆ. ಪೊಲೀಸರು ಮುಂದಿನ ಕ್ರಮ ಕೈಗೊಳ್ಳುತ್ತಾರೆ ಎಂದರು. ಏನಿದು ಘಟನೆ? ವಿಎಸ್ ಗಾರ್ಡನ್‌ನ ಓಂ ಶಕ್ತಿ ದೇವಸ್ಥಾನದ ಬಳಿ ನಿನ್ನೆ ರಾತ್ರಿ ದೇವಿಯ ತೇರು ಎಳೆಯುತ್ತಿರುವ ವೇಳೆ ತೇರಿನ ಮೇಲೆ ಹಾಗೂ ಮಾಲಾಧಾರಿಗಳ ಮೇಲೆ ಕಿಡಿಗೇಡಿಗಳು…
ಮೈಸೂರು : ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿಯ ಆತಂಕ ಮುಂದುವರೆದಿದ್ದು, ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಇದೀಗ ಹುಲಿ ಪ್ರತ್ಯಕ್ಷ ಆಗಿದೆ. ಅಲ್ಲದೇ ಇಂದು ಮಂಡಕಳ್ಳಿ ಏರ್ಪೋರ್ಟಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ ಸದ್ಯ ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಬಿ ಇ ಎಂ ಎಲ್ ಬಳಿ ಹುಲಿ ಕಾಣಿಸಿಕೊಂಡಿತ್ತು. ಅದಾದ ಬಳಿಕ ಇಂದು ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಹುಲಿ ಕಾಣಿಸಿಕೊಂಡಿದ್ದು ಅದು ಅಲ್ಲದೆ ಸಿಎಂ ಸಿದ್ದರಾಮಯ್ಯ ಕೂಡ ಇಂದು ಏರ್ಪೋರ್ಟಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಅರಣ್ಯ ಸಿಬ್ಬಂದಿಗಳು ಭೇಟಿ ನೀಡಿ ಹುಲಿ ಪತ್ತೆಗೆ ಮುಂದಾಗಿದ್ದಾರೆ.
ಬೆಂಗಳೂರು : ಬಳ್ಳಾರಿಯಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಗಲಾಟೆ ನಡೆದು ಫೈರಿಂಗ್ ವೇಳೆ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಶಾಸಕ ಜನಾರ್ಧನ ರೆಡ್ಡಿ ಅವರಿಗೆ ಕರೆ ಮಾಡಿ ಘಟನೆಯ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಹೌದು ಶಾಸಕ ಜನಾರ್ಧನ ರೆಡ್ಡಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ಕರೆ ಮಾಡಿದ್ದು ಬಳ್ಳಾರಿಯಲಿ ನಡೆದ ಘರ್ಷಣೆ ಕುರಿತಂತೆ ಇಬ್ಬರು ಮಾತುಕತೆ ನಡೆಸಿದ್ದಾರೆ. ನಿನ್ನೆ ರಾತ್ರಿ ದೂರವಾಣಿ ಕರೆ ಮಾಡಿ ಹೆಚ್‍ಡಿ ಕುಮಾರಸ್ವಾಮಿ ಜನಾರ್ಧನ ರೆಡ್ಡಿ ಅವರೊಂದಿಗೆ ಮಾತನಾಡಿದ್ದು, ಘಟನೆಯ ಬಗ್ಗೆ ಮಾಹಿತಿ ಪಡೆದು ಚರ್ಚಿಸಿದ್ದಾರೆ. ನಿಮ್ಮ ಜೊತೆಗೆ ನಾವಿದ್ದೇವೆ ಎಂದು ಜನಾರ್ದನ ರೆಡ್ಡಿಗೆ ಎಚ್ ಡಿ ಕುಮಾರಸ್ವಾಮಿ ಅಭಯ ನೀಡಿದ್ದಾರೆ. ಈ ಘಟನೆಯನ್ನು ತೀವ್ರವಾಗಿ ಖಂಡಿಸಿ ಹೋರಾಡೋಣ ಅಂತ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು : ಮಂಡ್ಯ ಬಳಿಕ ಇದೀಗ ಬೆಂಗಳೂರಲ್ಲಿ ಕಿಡಿಗೇಡಿಗಳಿಂದ ಮತ್ತೆ ಕಲ್ಲು ತೂರಾಟ ನಡೆದಿದ್ದು, ದೇವಿಯ ತೇರು ಎಳೆಯುತ್ತಿರುವ ವೇಳೆ ಓಂ ಶಕ್ತಿ ಮಾಲಾಧಾರಿಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿರುವ ಘಟನೆ ಚಾಮರಾಜಪೇಟೆ ಬಳಿಯ ಜೆ.ಜೆ.ನಗರ (ಜಗಜೀವನ್ ರಾಮ್ ನಗರ) ಠಾಣೆವ್ಯಾಪ್ತಿಯಲ್ಲಿ ನಿನ್ನೆ ನಡೆದಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಓಂ ಶಕ್ತಿ ಅಧ್ಯಕ್ಷ ಶಶಿಕುಮಾರ್ ಅವರು ನೀಡಿದ ದೂರಿನ ಮೇರೆಗೆ FIR ದಾಖಲಾಗಿದೆ. ಎಫ್ ಐ ಆರ್ ದಾಖಲಾಗುತ್ತಿದ್ದಂತೆ ಇಡೀ ಏರಿಯಾ ಸಂಪೂರ್ಣವಾಗಿ ಸೈಲೆಂಟ್ ಆಗಿದ್ದು ಘಟನೆಗೆ ಸಂಬಂಧಿಸಿದಂತೆ ಇದೀಗ ಜೆಜೆ ಠಾಣೆ ಪೊಲೀಸರು ಅಪ್ರಾಪ್ತರನ್ನು ವಶಕ್ಕೆ ಪಡೆದಿದ್ದಾರೆ. ಜೆ.ಜೆ.ನಗರದ ವಿ.ಎಸ್. ಗಾರ್ಡನ್ ಓಂ ಶಕ್ತಿ ದೇವಸ್ಥಾನದ ಬಳಿ ಭಾನುವಾರ ರಾತ್ರಿ 8 ಗಂಟೆಗೆ ಈ ಘಟನೆ ನಡೆದಿದೆ. ಘಟನೆಯಲ್ಲಿ ವರದರಾಜು ಎಂಬುವರ ಅಪ್ರಾಪ್ತ ಮಗಳ ತಲೆಗೆ ಗಂಭೀರವಾದ ಗಾಯವಾಗಿದೆ. ಜತೆಗೆ ಇಬ್ಬರು ಮಹಿಳೆಯ ಕಾಲಿಗೆ ಗಾಯವಾಗಿದೆ. ವಿಷಯ ತಿಳಿದು…
BREAKING : ತಕ್ಷಣ ರಷ್ಯಾದಿಂದ ತೈಲ ಖರೀದಿ ನಿಲ್ಲಿಸದಿದ್ದರೆ ಮತ್ತಷ್ಟು ಸುಂಕ : ಭಾರತಕ್ಕೆ ಡೊನಾಲ್ಡ್ ಟ್ರಂಪ್ ಬೆದರಿಕೆ
ನವದೆಹಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಭಾರತಕ್ಕೆ ಬೆದರಿಕೆ ಹಾಕಿದ್ದಾರೆ. ಈ ಕೂಡಲೇ ಭಾರತ ರಷ್ಯಾದಿಂದ ತೈಲ ಖರೀದಿ ನಿಲ್ಲಿಸಬೇಕು ಇಲ್ಲದಿದ್ದರೆ ಭಾರತದ ಮೇಲೆ ನಾವು ಮತ್ತಷ್ಟು ಸುಂಕ ಹಾಕುತ್ತೇವೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ್ದಾರೆ. ಹೌದು ರಷ್ಯಾದ ತೈಲ ಸಮಸ್ಯೆಗೆ ಭಾರತ ಸಹಾಯ ಮಾಡದಿದ್ದರೆ ಭಾರತೀಯ ಆಮದಿನ ಮೇಲಿನ ಸುಂಕವನ್ನು ಹೆಚ್ಚಿಸಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ಸಾರ್ವಜನಿಕ ಭಾಷಣದಲ್ಲಿ ರಿಪಬ್ಲಿಕನ್ ವರದಿ ಮಾಡಿದೆ. ಟ್ರಂಪ್ ರಷ್ಯಾದೊಂದಿಗಿನ ಭಾರತದ ತೈಲ ವ್ಯಾಪಾರವನ್ನು ಉಲ್ಲೇಖಿಸುತ್ತಿದ್ದರು, ಇದನ್ನು ಅವರ ಆಡಳಿತವು ಬಹಳ ಹಿಂದಿನಿಂದಲೂ ವಿರೋಧಿಸುತ್ತಿದೆ ಮತ್ತು ಇದು ಆಗಸ್ಟ್ 2025 ರಲ್ಲಿ ಭಾರತದ ಮೇಲಿನ ಸುಂಕವನ್ನು 50% ಕ್ಕೆ ದ್ವಿಗುಣಗೊಳಿಸಲು ಕಾರಣವೆಂದು ಉಲ್ಲೇಖಿಸಲಾಗಿದೆ.”ರಷ್ಯಾದ ತೈಲ ವಿಷಯಕ್ಕೆ ಸಹಾಯ ಮಾಡದಿದ್ದರೆ ನಾವು ಭಾರತದ ಮೇಲೆ ಸುಂಕವನ್ನು ಹೆಚ್ಚಿಸಬಹುದು” ಎಂದು ಅಧ್ಯಕ್ಷರು ಹೇಳಿದ್ದಾರೆ. ಭಾರತ ಮತ್ತು ಯುಎಸ್ ನಡುವೆ…
ಬೆಂಗಳೂರು : ರಾಜ್ಯದ ದೀರ್ಘಾವಧಿ ಸಿಎಂ ಹೆಗ್ಗಳಿಕೆಗೆ ಇದೀಗ ಒಂದೇ ದಿನ ಬಾಕಿ ಇದ್ದು, ನಾಳೆ ದೇವರಾಜ್ ಅರಸು ದಾಖಲೆಯನ್ನು ಸಿಎಂ ಸಿದ್ದರಾಮಯ್ಯ ಮುರಿಯಲ್ಲಿದ್ದಾರೆ. ಈ ಹಿಂದೆ 7 ವರ್ಷ 239 ದಿನಗಳ ಕಾಲ ಡಿ.ದೇವರಾಜ ಅರಸು ಸಿಎಂ ಆಗಿದ್ದರು. ಇಂದಿಗೆ 7 ವರ್ಷ 239 ದಿನ ಸಿಎಂ ಸಿದ್ದರಾಮಯ್ಯ ಪೂರೈಸಿದ್ದಾರೆ. ಇನ್ನು 3ನೇ ಸ್ಥಾನದಲ್ಲಿ ಎಸ್ ನಿಜಲಿಂಗಪ್ಪ 7 ವರ್ಷ 175 ದಿನ, 4 ನೇ ಸ್ಥಾನದಲ್ಲಿ ರಾಮಕೃಷ್ಣ ಹೆಗಡೆ 5 ವರ್ಷ 216 ದಿನ, 5ನೇ ಸ್ಥಾನದಲ್ಲಿ ಬಿಎಸ್ ಯಡಿಯೂರಪ್ಪ 5 ವರ್ಷ 82 ದಿನ ಸಿಎಂ ಆಗಿದ್ದಾರೆ. ರಾಜ್ಯ ಬಜೆಟ್ ಮಂಡನೆಯಲ್ಲಿ ಸಿಎಂ ಸಿದ್ದರಾಮಯ್ಯ ದಾಖಲೆ ಬರೆದಿದ್ದಾರೆ ಇದುವರೆಗೂ 16 ಬಜೆಟ್ ಮಂಡಿಸಿರುವ ಸಿಎಂ ಸಿದ್ದರಾಮಯ್ಯ ಇನ್ನು ಎರಡನೇ ಸ್ಥಾನದಲ್ಲಿ
ಬೆಂಗಳೂರು : ಮುಡಾದಿಂದ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಖಾಸಗಿ ದೂರು ವಿಚಾರಣೆ ನಡೆಯಲಿದೆ. ಮೈಸೂರಿನ ಮುಡಾ ಹಗರಣದ ಸಂಬಂಧ ತನಿಖಾಧಿಕಾರಿ ಮೊದಲ ವರದಿ ಸಲ್ಲಿಸಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿ ಗೆ ಸೈಟ್ ಹಂಚಿಕೆ ಹಿನ್ನೆಲೆ, ತನಿಖಾಧಿಕಾರಿ ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದು, ಈ ಒಂದು ಬಿ ರಿಪೋರ್ಟ್ ಪ್ರಶ್ನಿಸಿ, ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ಕೂಡ ಇಂದು ವಿಚಾರಣೆ ನಡೆಯಲಿದೆ. ಅಲ್ಲದೆ ತನಿಖಾಧಿಕಾರಿ ವಿರುದ್ಧ ನ್ಯಾಯಾಂಗ ನಿಂದನೆ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟಿಗೆ ಸ್ನೇಹಮಯಿ ಕೃಷ್ಣ ಅವರು ಅರ್ಜಿ ಸಲ್ಲಿಸಿದ್ದಾರೆ. ಹಾಗಾಗಿ ಎರಡು ವಿಚಾರಣೆಗಳು ಇಂದು ನಡೆಯಲಿದೆ.
ತುಮಕೂರು : ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿ 11 ಮಂಗಗಳು ನಿಗೂಢವಾಗಿ ಸಾವನ್ನಪ್ಪಿವೆ. ತುಮಕೂರು ಜಿಲ್ಲೆಯ ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿ ಈ ಒಂದು ಘಟನೆ ಸಂಭವಿಸಿದೆ. 2 ದಿನಗಳ ಅಂತರದಲ್ಲಿ ಒಟ್ಟು 11 ಮಂಗಗಳ ಕಳೆಬರ ಪತ್ತೆಯಾಗಿದೆ. ಮೇಲ್ನೋಟಕ್ಕೆ ಮಂಗಗಳಿಗೆ ವಿಷ ಪ್ರಾಷಣ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಮೊದಲ ದಿನ 7 ಮಂಗಗಳು ಹಾಗೂ ಎರಡನೇ ಗಿಡ 4 ಮಂಗಗಳ ಕಳೆಬರ ಪತ್ತೆಯಾಗಿದೆ. ಸ್ಥಳೀಯರ ಮಾಹಿತಿಯನ್ನು ಆದರಿಸಿ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು ಅನುಮಾನಗೊಂಡು ಅರಣ್ಯ ಪ್ರದೇಶದಲ್ಲಿ ಎರಡು ದಿನಗಳ ಕಾಲ ಶೋಧ ನಡೆಸಿದ್ದಾರೆ. ಮಂಗಗಳು ಯಾವುದೇ ಕಾಯಿಲೆಯಿಂದ ಮೃತಪಟ್ಟಿಲ್ಲ ಎಂಬುದು ದಡಪಟ್ಟಿದ್ದು ಮಂಗಗಳ ಸಾವಿನ ಕಾರಣ ಪತ್ತೆಗೆ ಅರಣ್ಯ ಇಲಾಖೆ ಸಿಬ್ಬಂದಿ ಇದೀಗ ಮುಂದಾಗಿದೆ. ಊರ್ಡಿಗಿರಿಯ ಪಶು ಆಸ್ಪತ್ರೆಯಲ್ಲಿ ಮಂಗಗಳ ಮರಣೋತ್ತರ ಪರೀಕ್ಷೆ ನಡೆಯಿತು ಪರೀಕ್ಷಾ ವೇಳೆ ಮೃತ ಮಂಗಗಳ ದೇಹ ಹಾಗೂ ಕರುಳಿನಲ್ಲಿ ಅನ್ನಪತ್ತೆಯಾಗಿದೆ.
ಮಂಡ್ಯ : ತಿಥಿ ಸಿನಿಮಾ ಖ್ಯಾತಿಯ ಸೆಂಚೂರಿ ಗೌಡ ನಿಧನರಾಗಿದ್ದಾರೆ. ಸಂಗ್ರೇಗೌಡ ಅಲಿಯಾಸ್ ಸೆಂಚೂರಿ ಗೌಡ ನಿನ್ನೆ ರಾತ್ರಿ ವಿಧಿವಶರಾಗಿದ್ದಾರೆ. ನಿನ್ನೆ ರಾತ್ರಿ ಸಿಂಗರೇಗೌಡನ ಕೊಪ್ಪಲು ಗ್ರಾಮದಲ್ಲಿ ಸೆಂಚುರಿ ಗೌಡ ನಿಧನರಾಗಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸಿಂಗ್ರೇಗೌಡನ ಕೊಪ್ಪಲಿನಲ್ಲಿ ಸಿಂಗ್ರೇಗೌಡ ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದು, ನಿನ್ನೆ ರಾತ್ರಿ ಅವರು ನಿಧನರಾಗಿದ್ದಾರೆ. ತಿಥಿ ಸಿನಿಮಾ ಮೂಲಕ ಸೆಂಚುರಿ ಗೌಡ ಎಂದು ಸಂಗ್ರೇಗೌಡ ಖ್ಯಾತಿ ಪಡೆದಿದ್ದರು ಇಂದು ಸಂಗ್ರೇಗೌಡನ ಕೊಪ್ಪಲಿನಲ್ಲಿ ಸೆಂಚುರಿ ಗೌಡ ಅಂತ್ಯ ಸಂಸ್ಕಾರ ನೆರವೇರಲಿದೆ. ಕಳೆದ ಕೆಲವು ದಿನಗಳ ಹಿಂದೆ ಅಷ್ಟೇ, ಇದೇ ತಿಥಿ ಸಿನಿಮಾ ಮೂಲಕ ಖ್ಯಾತಿಯಾಗಿದ್ದ ಗಡ್ಡಪ್ಪ ಅವರು ಸಹ ನಿಧನರಾಗಿದ್ದರು.
ಬಳ್ಳಾರಿ : ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಗಲಾಟೆ ನಡೆದು ಫೈರಿಂಗ್ ವೇಳೆ ಓರ್ವ ಕಾಂಗ್ರೆಸ್ ಕಾರ್ಯಕರ್ತ ಬಲಿಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಿಜೆಪಿ ಹಾಗೂ ಕಾಂಗ್ರೆಸ್ನ ಒಟ್ಟು 26 ಕಾರ್ಯಕರ್ತರನ್ನು ಪೊಲೀಸರು ಅರೆಸ್ಟ್ ಮಾಡಿದ್ದು ಇದುವರೆಗೂ 6 ಎಫ್ಐಆರ್ ಗಳು ದಾಖಲಾಗಿವೆ. ಬಳ್ಳಾರಿ ನಗರದ ವಾಲ್ಮೀಕಿ ವೃತ್ತ ಹಾಗೂ ಮಹರ್ಷಿ ಪುತ್ಥಳಿ ಉದ್ಘಾಟನಾ ಸಮಾರಂಭದ ನಿಮಿತ್ತ ಕಟ್ಟಲಾದ ಬ್ಯಾನರ್ಸ್, ಬಂಟಿಂಗ್ಸ್ ವಿಚಾರವಾಗಿ ಗಲಭೆ ನಡೆದು ಕಲ್ಲು ತೂರಾಟವಾಗಿತ್ತು. ಖಾಸಗಿ ಅಂಗರಕ್ಷಕರು ಗುಂಡು ಹಾರಿಸಿದ್ದರು. ಈ ವೇಳೆ ರಾಜಶೇಖರ್ ರೆಡ್ಡಿ ಎಂಬವರು ಮೃತಪಟ್ಟಿದ್ದರು. ಪೊಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರೂ ಗಾಯಗೊಂಡಿದ್ದರು. ಈ ಘಟನೆಗಳ ಹಿನ್ನೆಲೆಯಲ್ಲಿ ಪೊಲೀಸರು 6 ಎಫ್‌ಐಆರ್ ದಾಖಲಿಸಿಕೊಂಡಿದ್ದು, ತನಿಖೆ ತೀವ್ರಗೊಳಿಸಿದ್ದಾರೆ.














