Author: kannadanewsnow05

ಹರಿಯಾಣ : ಆಂಧ್ರದ ಕರ್ನೂಲ್‌ ಬಳಿಯ ಚಿನ್ನಟೇಕೂರು ಬಳಿ ಘನಘೋರ ದುರಂತ ಸಂಭವಿಸಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸು ಹೊತ್ತಿ ಉರಿದು ಕನಿಷ್ಠ 20ಕ್ಕೂ ಹೆಚ್ಚು ಜನ ಸಜೀವ ದಹನವಾಗಿರುವ ಶಂಕೆ ವ್ಯಕ್ತವಾಗಿದೆ. ಈ ಒಂದು ದುರಂತದ ಬೆನ್ನಲ್ಲೇ ಹರಿಯಾಣದಲ್ಲಿ ಮತ್ತೊಂದು ಭೀಕರವಾದ ಬಸ್ ಅಪಘಾತ ಸಂಭವಿಸಿದೆ. ಗುರುಗ್ರಾಮದಿಂದ ಬಿಹಾರಕ್ಕೆ ತೆರಳುತ್ತಿದ್ದ ಬಸ್ ಅಪಘಾತಕ್ಕೆ ಈಡಾಗಿದ್ದು, ಈ ಒಂದು ಅಪಘಾತದಲ್ಲಿ 15ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ. ಕುಶಿ ನಗರದ ಬಳಿ ನಿಂತಿದ್ದ ಲಾರಿಗೆ ಬಸ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.ಗಾಯಾಳುಗಳನ್ನು ತಕ್ಷಣ ಹತ್ತಿರದ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಬಿಟ್ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿದ ಅರ್ಜಿ ಇಂದು ವಿಚಾರಣೆ ನಡೆಯಿತು. ಬಿ ಎಸ್ ಯಡಿಯೂರಪ್ಪ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ಅವರು ವಾದ ಮಂಡಿಸಿದರು. ಹೊಸದಾಗಿ ಪ್ರಕರಣವನ್ನು ಪರಿಗಣಿಸಲು ಹೈಕೋರ್ಟ್ ಈ ವೇಳೆ ಸೂಚನೆ ನೀಡಿತು. ತನಿಖೆಯ ಎಲ್ಲಾ ಅಂಶಗಳನ್ನು ಪರಿಶೀಲಿಸಿ ಕಾಗ್ನೀಜೆನ್ಸ್ ಪಡೆಯಬೇಕಿತ್ತು ಸಂತ್ರಸ್ತೆಯ ಹೇಳಿಕೆಯನ್ನು ಬಿಟ್ಟು ಉಳಿದ ಸಾಕ್ಷಿಗಳನ್ನು ಕೋರ್ಟ್ ಪರಿಗಣಿಸಿಲ್ಲ. ಯಡಿಯೂರಪ್ಪ ಮನೆಯಲ್ಲಿದ್ದ ಸಾಕ್ಷಿಗಳ ಹೇಳಿಕೆಯನ್ನು ಪರಿಗಣಿಸಿಲ್ಲ. ಆಡಿಯೋ ರೆಕಾರ್ಡಿಂಗ್ ಅನ್ನು ಸಹ ನ್ಯಾಯಾಲಯ ಪರಿಗಣಿಸಿಲ್ಲ. ಹೊಸದಾಗಿ ಪಡೆದಿರುವ ಆದೇಶ ಸರಿ ಇಲ್ಲ ಎಂದು ವಾದಿಸಿದರು. ಆಗ ಇದು ರದ್ದುಪಡಿಸಬೇಕಾದ ಪ್ರಕರಣವೆಂದು ನನಗೆ ಮನವರಿಕೆ ಆಗಿಲ್ಲ ಆದರೆ ಕಾಗ್ನೀಜೆನ್ಸ್ ಪಡೆದ ವಿಧಾನದ ಬಗ್ಗೆ ಪ್ರಶ್ನೆಗಳಿವೆ ಎಂದು ಹೈಕೋರ್ಟ್ ತಿಳಿಸಿತು. ಇನ್ನು ರಾಜ್ಯ ಸರ್ಕಾರದ ಪರವಾಗಿ ಪ್ರೊ. ರವಿವರ್ಮ ಕುಮಾರ್ ಅವರು ವಾದ ಮಂಡಿಸಿದರು. ರೂಮ್ನಲ್ಲಿ ಲಾಕ್ ಮಾಡಿಕೊಂಡಿದ್ದರಿಂದ ಸಂತ್ರಸ್ತದೆ ಹೇಳಿಕೆಗೆ…

Read More

ಹಾವೇರಿ : ದೀಪಾವಳಿ ಹಬ್ಬದ ಸಂಭ್ರಮಾಚರಣೆಯಲ್ಲಿ ಹಾವೇರಿ ಜಿಲ್ಲೆಯಲ್ಲಿ ಹೋರಿ ಬೆದರಿಸುವ ಸ್ಪರ್ಧೆ ನಡೆಯುತ್ತದೆ. ಪ್ರತಿವರ್ಷ ಈ ಒಂದು ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿರುತ್ತಾರೆ. ನಿನ್ನೆ ತಾನೆ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಸಾವನ್ನಪ್ಪಿದ್ದರು. ಇದೀಗ ಹೋರಿ ತಿವಿದು ಮತ್ತೊರ್ವ ಯುವಕ ಸಾವನ್ನಪ್ಪಿದ್ದಾನೆ. ಹೌದು ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಮತ್ತೊಂದು ದುರಂತವಾಗಿದ್ದು ಹಾವೇರಿ ಜಿಲ್ಲೆಯಲ್ಲಿ ಹೋರಿ ತೀವಿದು ಮತ್ತೊಬ್ಬ ಯುವಕ ಸಾವನಪ್ಪಿದ್ದಾನೆ. ತಿಳುವಳ್ಳಿ ಗ್ರಾಮದಲ್ಲಿ ಹೋರಿ ತಿವಿದು ಯುವಕ ಸಾವನ್ನಪ್ಪಿದ್ದಾನೆ.ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ತಿಳವಳ್ಳಿ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಹೋರಿ ತೆಗೆದು ಭರತ್ (22) ಎನ್ನುವ ಯುವಕ ಸಾವನ್ನಪ್ಪಿದ್ದಾನೆ. ಹೋರಿ ಹಬ್ಬ ನೋಡಲು ಹೋಗಿದ್ದಾಗ ಈ ಒಂದು ದುರ್ಘಟನೆ ಸಂಭವಿಸಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಆರೋಪಿಯಾಗಿರುವ ಪತಿ ಮಹೇಂದ್ರ ರೆಡ್ಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 29ನೇ ACMM ಕೋರ್ಟ್ ಆದೇಶ ಹೊರಡಿಸಿದೆ. ಬೆಂಗಳೂರಲ್ಲಿ ಕೃತಿಕಾ ರೆಡ್ಡಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಪಾಪಿ ಪತಿ ಮಹೇಂದ್ರ ಕೃತಿಕಾಳನ್ನು ಕೊಂದ ನಂತರ ವಾಟ್ಸ್ ಅಪ್ ನಲ್ಲಿ ‘i have killed krutika’ ಎಂದು ಮೆಸೇಜ್ ಮಾಡಿರೋದು ಬೆಳಕಿಗೆ ಬಂದಿದೆ. ಇದೀಗ ಆರೋಪಿಪತಿಯನ್ನು ಪೊಲೀಸರು ಬೆಂಗಳೂರಿನ 29 ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಿದ್ದು ವಿಚಾರಣೆ ಬಳಿಕ ಜಡ್ಜ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದರು. ಪ್ರಕರಣ ಹಿನ್ನೆಲೆ? ವೈದ್ಯೆಯಾಗಿದ್ದ ಪತ್ನಿ ಕೃತಿಕಾ ರೆಡ್ಡಿಯನ್ನು ಕೊಲೆ ಮಾಡಿದ್ದ ಹಂತಕ ಡಾಕ್ಟರ್ ಮಹೇಂದ್ರ ರೆಡ್ಡಿಯ ಕರಾಳ ಮುಖ ತನಿಖೆಯ ವೇಳೆ ಬಯಲಾಗುತ್ತಿದೆ. ವೃತ್ತಿಯಲ್ಲೂ ಇಬ್ಬರೂ ವೈದ್ಯರಾಗಿದ್ದರೂ ಕೂಡ ಪತ್ನಿಯನ್ನು ಯಾಕೆ ಕೊಲೆ…

Read More

ಬೆಂಗಳೂರು : ಬಿಗ್ ಬಾಸ್ ಮನೆಗೆ ಪರಿಸರ ನಿಯಮ ಉಲ್ಲಂಘನೆಯಿಂದ ಬೀಗ ಜಡಿದ ಕೇಸ್ ಮಾಸೋ ಮುನ್ನವೇ, ಇದೀಗ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲಾಗಿದೆ.ಈ ಸಂಬಂಧ ಹೈಕೋರ್ಟ್ ವಕೀಲ ಪ್ರಶಾಂತ್ ಮೆತಾಲ್ ಎಂಬುವರು ಬಿಗ್ ಬಾಸ್ ಮನೆಯಲ್ಲಿ ಎಸ್ ಪದ ಬಳಕೆ ಮಾಡಿದಕ್ಕೆ ಅಶ್ವಿನಿಗೌಡ ವಿರುದ್ಧ ಬಿಡದಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅಶ್ವಿನಿಗೌಡ ಸೇರಿದಂತೆ ನಾಲ್ವರ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ದೂರಿನಲ್ಲಿ ಸಹ ಸ್ಪರ್ಧಿ ರಕ್ಷಿತಾ ಕುರಿತು ಈ ಮಾತನ್ನು ಆಡಿದ್ದಾರೆ. ಇದೊಂದು ವೈಕ್ತಿತ್ವ ನಿಂದನೆಯಾಗಿ ಅಶ್ವಿನಿಗೌಡ ಆರೋಪಿಸಿದ್ದಾರೆ. ಹೀಗಾಗಿ ಅವರು ಹಾಗೂ ಕಲರ್ಸ್ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್, ಕ್ಲಸ್ಟರ್ ಹೆಡ್ ಸುಷ್ಮಾ ಮತ್ತು ಡೈರೆಕ್ಟರ್ ಪ್ರಕಾಶ್ ವಿರುದ್ಧವೂ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಹೀಗಾಗಿ ಬಿಡದಿ ಪೊಲೀಸ್ ಠಾಣೆಯಲ್ಲಿ ಗಂಭೀರವಲ್ಲದ ಪ್ರಕರಣ ಎಂಬುದಾಗಿ ಎನ್ ಸಿ ಆರ್ ದಾಖಲಿಸಿದ್ದಾರೆ. ಅಷ್ಟಕ್ಕೂ ಅಶ್ವಿನಿ ಗೌಡ ಅಂದಿದ್ದಾದ್ರು ಏನು ಇಲ್ಲಿದೆ ವಿಡಿಯೋ https://twitter.com/ColorsKannada/status/1979012661393133821?t=lVrnhfvq-nOWR0d_-nfZMw&s=19

Read More

ಬೆಂಗಳೂರು : ಬೆಂಗಳೂರಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 2 ಪ್ರತ್ಯೇಕ ಪ್ರಕರಣಗಳಲ್ಲಿ 2 ಕೋಟಿ 50 ಲಕ್ಷ ರೂಪಾಯಿ ಮೌಲ್ಯದ ಡ್ರಗ್ಸ್ ಅನ್ನು ಹೆಬ್ಬಗೋಡಿ ಠಾಣೆ ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಅಲ್ಲದೇ ಇಬ್ಬರು ವಿದೇಶಿ ಪ್ರಜೆಗಳನ್ನು ಅರೆಸ್ಟ್ ಮಾಡಿದ್ದಾರೆ. 1 ಕೆಜಿ 47 ಗ್ರಾಂ MDMA ಕ್ರಿಸ್ಟಲ್ ಜಪ್ತಿ ಮಾಡಿಕೊಂಡಿದ್ದಾರೆ. ಈ ವೇಳೆ ಇಬ್ಬರು ವಿದೇಶಿ ಪ್ರಜೆಗಳನ್ನು ಹೆಬ್ಬಗೋಡಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಡ್ಯೂರೋ ಮ್ಯೂಚೆಲ್, ಇಬ್ಯು ಸ್ಯಾಮ್ಯೂಯೇಲ್ ಚೆಕುಮೂವ ಬಂಧಿತ ವಿದೇಶಿ ಪ್ರಜೆಗಳು ಎಂದು ತಿಳಿದುಬಂದಿದೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆಯಡಿ ಕೇಸ್ ದಾಖಲಾಗಿದೆ.

Read More

ಬೆಳಗಾವಿ : ಪತಿಯ ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಮಹಿಳೆ ಅನ್ನೋದು ಲೆಕ್ಕಿಸದೆ ಪತಿಯ ಸಂಬಂಧಿಕರು ಅಮಾನವೀಯವಾಗಿ ಹಲ್ಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬೆಂಬಲವಾಡ ಗ್ರಾಮದಲ್ಲಿ ನಡೆದಿದೆ. ಹೌದು ಗಂಡನ ಅನೈತಿಕ ಸಂಬಂಧವನ್ನು ಪತ್ನಿ ರಾಜಶ್ರೀ ಪ್ರಶ್ನೆ ಮಾಡಿದ್ದಾರೆ. ಇದನ್ನು ಪ್ರಶ್ನಿಸಿದಕ್ಕೆ ಗಂಡನ ಸಂಬಂಧಿಕರು ರಾಜಶ್ರೀ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದಾರೆ. 4 ದಿನಗಳ ಹಿಂದೆ ಇದೆ ವಿಷಯಕ್ಕೆ ಇಬ್ಬರ ಮಧ್ಯ ಗಲಾಟೆ ಆಗಿತ್ತು. ಪತ್ನಿ ರಾಜಶ್ರೀ ಹಾಗು ಆಕೆಯ ತಾಯಿಯ ಮೇಲೆ ಹಲ್ಲೆ ನಡೆದಿದೆ. ಪತಿ ರಾಕೇಶ್ ಹಾಗು ಕುಟುಂಬಸ್ಥರು ಹಲ್ಲೆ ಮಾಡಿದ್ದಾರೆ. ಹಲ್ಲೆಗೆ ಒಳಗಾದ ರಾಜಶ್ರೀ ಹಾಗು ತಾಯಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದ್ದು, ಮದುವೆಯಾಗೋದಾಗಿ ನಂಬಿಸಿ, ಯುವಕ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಈ ವೇಳೆ ಮತಾಂತರ ಆಗಲ್ಲ ಎಂದಿದ್ದಕ್ಕೆ ಮದ್ವೆಗೆ ಇದೀಗ ಯುವಕ ನಿರಾಕರಣೆ ಮಾಡಿದ್ದಾನೆ. ಈ ವೇಳೆ ಯುವಕ ಮತ್ತೊರ್ವ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾನೆ. ಈ ಕುರಿತು ಪ್ರಿಯಕರ ಮೊಹಮ್ಮದ್ ಇಶಾಕ್ ವಿರುದ್ಧ ದೂರು ನೀಡಲಾಗಿದೆ. ಸಂತ್ರಸ್ತ ಯುವತಿ ದೂರು ದಾಖಳಿಸಿದ್ದಾಳೆ. ಬೆಂಗಳೂರಿನ HSR ಲೇಔಟ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

Read More

ಬೆಂಗಳೂರು : ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಈಗಾಗಲೇ ಭಾರಿ ಚರ್ಚೆ ನಡೆಸಿದ್ದು, ಈ ವಿಚಾರವಾಗಿ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಸಿಎಂ ಬದಲಾವಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್​​ ನಿರ್ಧಾರವೇ ಅಂತಿಮ. ಸಂದರ್ಭ ಬಂದಾಗ ಅವರು ಸಿಎಲ್​ಪಿ ಸಭೆ ಕರೆಯುತ್ತಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಹೈಕಮಾಂಡ್​ ಸಂದರ್ಭ ಬಂದಾಗ ಸಿಎಲ್​ಪಿ ಕರೆಯುತ್ತಾರೆ. ಆಗ ಶಾಸಕರ ಅಭಿಪ್ರಾಯ ಪಡೆಯುತ್ತಾರೆ. ವೀಕ್ಷಕರು ಹೈಕಮಾಂಡ್​ಗೆ ವರದಿ ಕೊಡುತ್ತಾರೆ. ಆ ನಂತರ ಯಾರು?, ಏನು? ಎಂಬ ಘೋಷಣೆ ಆಗುತ್ತದೆ. ಇದು ನಮ್ಮಲ್ಲಿರುವ ಪದ್ಧತಿ. ಇದನ್ನು ಶಾರ್ಟ್ ಕಟ್ ಆಗಿ ಹೇಗೆ ಮಾಡುತ್ತಾರೆ ಹೇಳಿ?. ನಾನು, ಸತೀಶ್, ಮಹದೇವಪ್ಪ ಕಾಫಿ ಕುಡಿಯುಲು ಸೇರಿದ್ವಿ. ಇದರ ಹಿಂದೆ ಬೇರೆ ಏನೂ ಇಲ್ಲ ಎಂದರು. ನಮ್ಮ ಸುತ್ತೋಲೆಯಲ್ಲಿ ಆರ್‌ಎಸ್‌ಎಸ್‌ ಪದ ಬಂದಿಲ್ಲ. ಆರ್‌ಎಸ್‌ಎಸ್‌ ಅನ್ನು ಇಟ್ಕೊಂಡು ಆದೇಶ ಮಾಡಿಲ್ಲ. ಇದು ಎಲ್ಲರಿಗೂ ಅನ್ವಯವಾಗುತ್ತದೆ. ಸಂಘರ್ಷ ಆಗಬಾರದು ಅಂತ ನಿಯಮ ಹಾಕಿದ್ದೇವೆ. ಶಾಲಾ, ಕಾಲೇಜಿಗೆ ತೊಂದರೆ ಆಗಬಾರದು. 2013ರಲ್ಲಿ…

Read More

ಹಾವೇರಿ : ಹಾವೇರಿಯ ವೀರಭದ್ರೇಶ್ವರ ದೇವಸ್ಥಾನದ ರಥೋತ್ಸವ ಪ್ರತಿವರ್ಷ ದೀಪಾವಳಿಯಂದು ನಡೆಯುತ್ತದೆ. ಈ ಹಿನ್ನೆಲೆಯಲ್ಲಿ ಜಾತ್ರಾ ಸಮಿತಿ ಬಲಿಪಾಡ್ಯಮಿಯಂದು ದನ ಬೆದರಿಸುವ ಸ್ಪರ್ಧೆಯನ್ನು ಆಯೋಜಿಸುತ್ತದೆ. ಈ ವೇಳೆ ಕೊಬ್ಬರಿ ಹೋರಿ ತಿವಿದು ಓರ್ವ ವಯೋವೃದ್ಧ ವ್ಯಕ್ತಿ ಸಾವನ್ನಪ್ಪಿದ ಘಟನೆ ಜಿಲ್ಲೆಯಲ್ಲಿ ಇಂದು ನಡೆಯಿತು. ಮೃತರನ್ನು 70 ವರ್ಷದ ಚಂದ್ರಶೇಖರ್​​​ ಕೊಡಿಹಳ್ಳಿ ಎಂದು ಗುರುತಿಸಲಾಗಿದೆ. ಚಂದ್ರಶೇಖರ ಕೋಡಹಳ್ಳಿ ಅವರು ಹಾವೇರಿಯ ದಾನೇಶ್ವರಿನಗರದ ನಿವಾಸಿ. ಘಟನೆಯಲ್ಲಿ ಇನ್ನಿಬ್ಬರಿಗೆ ಗಂಭೀರ ಗಾಯವಾಗಿದ್ದು, ಹುಬ್ಬಳ್ಳಿಯ ಕಿಮ್ಸ್​ಗೆ ರವಾನಿಸಲಾಗಿದೆ. ಹೋರಿ ಬೆದರಿಸುವ ಸ್ಪರ್ಧೆಯನ್ನು ನೋಡಿ ವಾಪಸ್ ಮನೆಗೆ ಹೋಗುತ್ತಿದ್ದ ವೇಳೆ, ಹಿಂದಿನಿಂದ ಹೋರಿ ತಿವಿದು ಘಟನೆ ನಡೆದಿದೆ. ಹಾವೇರಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Read More