Subscribe to Updates
Get the latest creative news from FooBar about art, design and business.
Author: kannadanewsnow05
ಧಾರವಾಡ : ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ನೀಡಬೇಕು ಎಂದು ಕಳೆದ ಡಿಸೆಂಬರ್ ನಲ್ಲಿ ಬೆಳಗಾವಿಯ ಸುವರ್ಣಸೌಧದ ಬಳಿ ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಮಾಡಿದ್ದರು. ಈ ಕುರಿತು ತನಿಖೆ ನಡೆಸುವಂತೆ ಅರ್ಜಿ ಸಲ್ಲಿಸಿದರು. ಬಸವ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಇತರರು ಅರ್ಜಿ ಸಲ್ಲಿಸಿದರು. ಅರ್ಜಿ ವಿಚಾರ ನಡೆಸಿದ ಧಾರವಾಡ ಹೈಕೋರ್ಟ್ ಇದೀಗ ತೀರ್ಪು ಕಾಯ್ದಿರಿಸಿ ಆದೇಶ ಹೊರಡಿಸಿದೆ. ಇಂದು ಧಾರವಾಡ ಹೈಕೋರ್ಟ್ ಪೀಠದಲ್ಲಿ, ಸರ್ಕಾರ ಹಾಗೂ ಪಂಚಮಸಾಲಿ ಹೋರಾಟಗಾರರ ಎರಡು ಕಡೆಯಿಂದ ಕೋರ್ಟಿಗೆ ವಿಡಿಯೋ ಸಾಕ್ಷಾಧಾರ ಸಲ್ಲಿಕೆ ಮಾಡಲಾಗಿದೆ. ಸರ್ಕಾರದ ಪರವಾಗಿ ಎಜಿ ಶಶಿಕಿರಣ್ ಶೆಟ್ಟಿ ಹಾಜರಾಗಿ ವಾದ ಮಂಡಿಸಿ, ಗಲಾಟೆ ಮಾಡದಂತೆ ಶಾಸಕರು, ಸಚಿವರು ಖುದ್ದು ಭೇಟಿ ನೀಡಿ ಮನವಿ ಮಾಡಿದರು. ಆದರೂ ಕೂಡ ಪ್ರತಿಭಟನಾಕಾರರು ಕಲ್ಲು, ಚಪ್ಪಲಿ ತೋರಿದ್ದರು. ಸುವರ್ಣಸೌಧದ ಎದುರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿದ್ದರು. ಪ್ರತಿಭಟನೆಯ ವೇಳೆ ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿ ಮಾಡಿದ್ದಾರೆ. ಕಲ್ಲು ತೂರಿದ್ದರಿಂದ 23 ಪೊಲೀಸರು ಗಾಯಗೊಂಡಿದ್ದರು. ಇದು…
ಚಿಕ್ಕಮಗಳೂರು : ‘KSRTC ಪಲ್ಲಕ್ಕಿ ಬಸ್ ಗೆ ಹಿಂದಿನಿಂದ ವೇಗವಾಗಿ ಬಂದು ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಆಂಧ್ರಪ್ರದೇಶದ ಹಲವು ಪ್ರವಾಸಿಗರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಚಿಕ್ಕಮಂಗಳೂರು ಜಿಲ್ಲೆಯ ಕಳಸ ವ್ಯಾಪ್ತಿಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಕಳಸ-ಹೊರನಾಡು ರಸ್ತೆಯಲ್ಲಿ ಆಂಧ್ರ ಪ್ರವಾಸಿಗರಿದ್ದ ಕಾರು KSRTC ಪಲ್ಲಕ್ಕಿ ಬಸ್ ಗೆ ಡಿಕ್ಕಿ ಹೊಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕು ವ್ಯಾಪ್ತಿಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಆಂಧ್ರ ಮೂಲದ ಪ್ರವಾಸಿಗರಿಗೆ ಗಾಯವಾಗಿದ್ದು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಒಂದು ಅಪಘಾತದಲ್ಲಿ ಕಾರು ಹಿಂದಿನಿಂದ ವೇಗವಾಗಿ ಬಂದು ಬಸ್ ಕೆಳಗೆ ನುಗ್ಗಿದೆ. ಸರ್ಕಾರಿ ಬಸ್ ಕೆಳಗೆ ಕಾರು ಸಿಲುಕಿದೆ. ಕೂಡಲೇ ಸ್ಥಳೀಯರು ಕಾರನ್ನು ಹೊರಗೆ ಎಳೆದು ತೆಗೆದಿದ್ದಾರೆ. ಚಿಕ್ಕಮಂಗಳೂರು ಜಿಲ್ಲೆಯ ಕಳಸ ಪೊಲೀಸ್ ಠಾಣೆಯಲ್ಲಿ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕುಡಿದ ಮತ್ತಿನಲ್ಲಿ ವ್ಯಕ್ತಿಗೆ ದೊಣ್ಣೆಯಿಂದ ಹೊಡೆದು ಹತ್ಯೆಗೈದಿರುವ ಘಟನೆ ಆನೇಕಲ್ ತಾಲೂಕಿನ ಮುತ್ತನಲ್ಲೂರು ಗ್ರಾಮದಲ್ಲಿ ಘಟನೆ ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮುತ್ತನಲ್ಲೂರು ಗ್ರಾಮದಲ್ಲಿ ಬಾರ್ ನಲ್ಲಿ ಕುಡಿಯುವಾಗ ಪರಸ್ಪರ ಇಬ್ಬರು ವ್ಯಕ್ತಿಗಳು ಪರಿಚಯವಾಗಿದ್ದರು. ಕಂಠಪೂರ್ತಿ ಕುಡಿದು ಬಾರ ರ್ ನಿಂದ ಹೊರಗಡೆ ಬಂದು ಗಲಾಟೆ ಮಾಡಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ರಸ್ತೆಯಲ್ಲಿ ದೊಣ್ಣೆಯಿಂದ ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ಗುರು ಎನ್ನುವ ಆರೋಪಿ ತನಗೆ ಪರಿಚಯವಾದ ವ್ಯಕ್ತಿಗೆ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಸದ್ಯ ಸೂರ್ಯ ಸಿಟಿ ಪೊಲೀಸರು ಆರೋಪಿ ಗುರುನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಬಡ್ಡಿ ದಂಧೆಕೊರರ ಕಿರುಕುಳ ಮುಂದುವರೆದಿದೆ. ಕಿರುಕುಳ ಬಡ್ಡಿ ಹಣ ಪಾವತಿಸದ ಹಿನ್ನೆಲೆಯಲ್ಲಿ ಮನೆಗೆ ನುಗ್ಗಿ ಪುಂಡರು ದಾಂಧಲೆ ನಡೆಸಿದ್ದಾರೆ. ಹುಬ್ಬಳ್ಳಿಯ ಸೆಟ್ಲಮೆಂಟ್ ಏರಿಯಾದಲ್ಲಿ ಬಡ್ಡಿ ದಂಧೆಕೋರರು ಮನೆಗೆ ನುಗ್ಗಿ ದಾಂಧಲೆ ಮಾಡಿದ್ದಾರೆ. ಭಾರತಿ ದೊಡ್ಡಮನಿ ಎಂಬುವರ ಮನೆಗೆ ನುಗ್ಗಿ ಗಲಾಟೆ ಮಾಡಿದ್ದಾರೆ. ಕಳೆದ 15 ವರ್ಷಗಳ ಹಿಂದೆ ಭಾರತೀ ದೊಡ್ಡಮನಿ 1 ಲಕ್ಷ ಹಣ ಸಾಲ ಪಡೆದಿದ್ದರು. ಆದರೆ ಕಳೆದ 15 ವರ್ಷದ ಗಳಿಂದ ಬರಿ ಒಂದು ಲಕ್ಷಕ್ಕೆ ಬಡ್ಡಿ ಕಟ್ಟುತ್ತಾನೆ ಬಂದಿದ್ದಾರೆ. ಬಡ್ಡಿ ಕಟ್ಟುತ್ತಿದ್ದರು ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಭಾರತೀಯ ದೊಡ್ಡಮನಿ ಬಡ್ಡಿ ಕಟ್ಟಿಲ್ಲ. ಹಾಗಾಗಿ ಮನೆಗೆ ನುಗ್ಗಿದ ಪುಂಡರು ಮನೆಯಲ್ಲಿ ಬಿಯರ್ ಕುಡಿದು, ಸಿಗರೇಟ್ ಸೇದಿ ಗಲಾಟೆ ಮಾಡಿದ್ದಾರೆ. ಬಡ್ಡಿ ಹಣ ಕೊಡುತ್ತೇನೆ ಅಂದರೂ ಬಿಡದೆ ಗಲಾಟೆ ಮಾಡಿದ್ದಾರೆ. ಬಡ್ಡಿ ದಂಧೆಕೊರರ ಹೆಸರು ಹೇಳುವುದಕ್ಕೂ ಭಾರತಿ ಭಯಪಟ್ಟಿದ್ದಾರೆ.
ವಿಜಯಪುರ : ವಿಜಯಪುರದಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಜಮೀನಿನಲ್ಲಿ ಅಕ್ರಮವಾಗಿ ಬೆಳೆದ 28 ಕೆಜಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ತಿಕೋಟ ತಾಲೂಕಿನ ಯತ್ನಾಳ ಗ್ರಾಮದ ಬಳಿ ಹಸಿ ಗಾಂಜಾವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ವಿಜಯಪುರ ಜಿಲ್ಲೆಯ ಚಿಕೋಟ ತಾಲೂಕಿನ ಯತ್ನಾಳ ಗ್ರಾಮದಲ್ಲಿ ಸೆನ್ ಠಾಣೆಯ ಡಿವೈಎಸ್ಪಿ ಸುನಿಲ್ ಕಾಂಬಳೆ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಇಬ್ಬರು ಆರೋಪಿಗಳನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ವಿಜಯಪುರ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೀದರ್ : ಕಳೆದ ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶದಲ್ಲಿ ಬೀದರ್ ಜಿಲ್ಲೆಯ ಒಂದೇ ಕುಟುಂಬದ ಆರು ಜನರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೀದರ್ ಜಿಲ್ಲೆಗೆ 6 ಜನರ ಮೃತದೇಹಗಳು ತಲುಪಿದ್ದು ಇದೀಗ ಬೀದರ್ ನಗರದ ಗುಮ್ಮೆ ಲೇಔಟ್ ನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಸಾಮೂಹಿಕ ಅಂತ್ಯಕ್ರಿಯೆ ನೆರವೇರಿತು. ಹೌದು ಬೀದರ್ ನಗರದ 6 ಜನರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೀದರ್ ನ ಗುಮ್ಮೆ ಲೇಔಟ್ ರುದ್ರಭೂಮಿಯಲ್ಲಿ ಸಾಮೂಹಿಕ ಅಂತ್ಯಕ್ರಿಯೆ ನಡೆಯಿತು. ಲಾಡಗೇರಿ ಬಡಾವಣೆಯ ಸುಲೋಚನಾ, ಲಕ್ಷ್ಮಿ, ನೀಲಮ್ಮ, ಸಂತೋಷ್ ಕುಮಾರ್, ಸುನಿತಾ ಹಾಗೂ ಕಲಾವತಿ ಅಂತ್ಯಕ್ರಿಯೆ ನಡೆಯಿತು. ಭೀಕರ ರಸ್ತೆ ಅಪಘಾತದಲ್ಲಿ 6 ಸೋದರ ಸಂಬಂಧಿಗಳು ಮೃತಪಟ್ಟಿದ್ದರು. ಉತ್ತರ ಪ್ರದೇಶದ ವಾರಣಾಸಿ ಬಳಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು.
ಶಿವಮೊಗ್ಗ : ಅಡುಗೆ ಮಾಡುತ್ತಿದ್ದಾಗ ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸ್ಪೋಟಗೊಂಡಿರುವ ಘಟನೆ ಶಿವಮೊಗ್ಗದ ಕೋಟೆ ಗಂಗೂರಿನ ಮಂಡಿ ಬಡಾವಣೆಯಲ್ಲಿ ಈ ಒಂದು ಭೀಕರ ಅಗ್ನಿ ದುರಂತ ಅವಘಡವಿಸಿದೆ. ಬೈಲಪ್ಪ ಎಂಬುವವರ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡಿದೆ. ಬೈಲಪ್ಪ ಕುಟುಂಬಸ್ಥರು ಕೂಡಲೇ ಮನೆಯಿಂದ ಹೊರಬಂದ ತಕ್ಷಣ ಸಿಲಿಂಡರ್ ಸ್ಫೋಟಗೊಂಡಿದೆ. ಗ್ಯಾಸ್ ಸಿಲಿಂಡರ್ ಸ್ಪೋಟದಿಂದ ಮನೆ ಗೋಡೆಗಳಲ್ಲಿ ಬಿರುಕು ಮೂಡಿದೆ. ಅಲ್ಲದೇ ಸ್ಫೋಟದ ತೀವ್ರತೆಗೆ ಮೇಲ್ಚಾವಣಿ ಹಾರಿಹೋಗಿದೆ. ಮನೆಯಲ್ಲಿದ್ದ ಬಟ್ಟೆ ದವಸ ಧಾನ್ಯ ಮತ್ತಿತರ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕತಾಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು.
ರಾಮನಗರ : ವಾಣಿಜ್ಯ ಮಳಿಗೆಗಳ ನಿರ್ಮಾಣ ಕಟ್ಟಡದ ಕಮಾನು ನಿರ್ಮಿಸುವ ಸಂದರ್ಭದಲ್ಲಿ ಆಯತಪ್ಪಿ ಕೆಳಗೆ ಬಿದ್ದು ಓರ್ವ ಕಾರ್ಮಿಕ ಸ್ಥಳದಲ್ಲಿ ಮತ್ತೊರವಣಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ಪಟ್ಟಣದಲ್ಲಿ ನಡೆದಿದೆ. ಹೌದು ನಿರ್ಮಾಣ ಹಂತದ ಕಟ್ಟಡ ಕಮಾನು ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ. ಕನಕಪುರ ಪಟ್ಟಣದ ರೂರಲ್ ಕಾಲೇಜು ಬಳಿ ಈ ಒಂದು ಘಟನೆ ಸಂಭವಿಸಿದೆ. ವಾಣಿಜ್ಯ ಮಳಿಗೆಗಳ ನಿರ್ಮಾಣ ಕಾಮಗಾರಿ ವೇಳೆ ಈ ಒಂದು ಅವಘಡ ಸಂಭವಿಸಿದೆ. ಘಟನೆಯಲ್ಲಿ ಮತ್ತೋರ್ವ ಕಾರ್ಮಿಕ ಗಾಯಗೊಂಡಿದ್ದು, ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ 5 ಪ್ರಮುಖ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆ ಕೂಡ ಒಂದು. ಕಾಂಗ್ರೆಸ್ ಸರ್ಕಾರ ರಾಜ್ಯದ ಬಡ ಜನರಿಗೆ 200 ಯೂನಿಟ್ ವಿದ್ಯುತ್ ಉಚಿತ ನೀಡುತ್ತಿದ್ದು, ಇದೀಗ ರಾಜ್ಯದ ಜನತೆಗೆ ಬಿಗ್ ಶಾಕ್ ಎದುರಾಗಿದೆ. ಒಂದು ವೇಳೆ ಗೃಹಜ್ಯೋತಿ ಯೋಜನೆಗೆ ಸರ್ಕಾರ ಹಣ ನೀಡದೆ ಹೋದರೆ ಗ್ರಾಹಕರಿಂದ ವಸೂಲಿ ಮಾಡಲಾಗುತ್ತದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಶಿವಶಂಕರ ಸ್ಪಷ್ಟನೆ ನೀಡಿದ್ದಾರೆ. ಹೌದು ಈ ಕುರಿತು ಬೆಂಗಳೂರಿನಲ್ಲಿ ಬೆಸ್ಕಾಂ ಎಂಡಿ ಶಿವಶಂಕರ್ ಸ್ಪಷ್ಟನೆ ನೀಡಿದ್ದು, ಗೃಹಜ್ಯೋತಿ ಯೋಜನೆಗೆ ಮುಂಗಡ ಅನುದಾನ ನಮಗೆ ನೀಡಲಾಗಿದೆ.ಈ ಯೋಜನೆ ಸಂಬಂಧ ನಮ್ಮಲ್ಲಿ ಮುಂಗಡ 50 ಕೋಟಿ ರೂಪಾಯಿ ಇದೆ. ಸರ್ಕಾರ ಮುಂಗಡ ಹಣ ಕೊಡದೆ ಇದ್ದಲ್ಲಿ ಗ್ರಾಹಕರು ಕೊಡಬೇಕು ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಶಿವಶಂಕರ ತಿಳಿಸಿದರು. ಆದರೆ ಸರ್ಕಾರ ನಮಗೆ ಪ್ರತಿ ತಿಂಗಳು ಮುಂಗಡ ಹಣ ಬಿಡುಗಡೆ ಮಾಡುತ್ತಿದೆ.ಹಾಗಾಗಿ ಗ್ರಾಹಕರು ಬಿಲ್ ಪಾವತಿಸಬೇಕಾದ ಪ್ರಮೇಯ ಬರುವುದಿಲ್ಲ. ರಾಜ್ಯ ಸರ್ಕಾರ…
ಮಂಡ್ಯ : ಮಂಡ್ಯದಲ್ಲಿ ಸಾಲ ಬಾದೆಗೆ ಬೇಸತ್ತು ಒಂದೇ ಕುಟುಂಬದ ಮೂವರು ಮಂಡ್ಯ ತಾಲೂಕಿನ ಯಲಿಯೂರು ಬಳಿ ವಿಸಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು ಮೊದಲು ಮೂವರು ವಿಷ ಸೇವಿಸಿದ್ದಾರೆ. ಬಳಿಕ ವಿಸಿ ನಾಲೆಗೆ ಹಾರಿ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಹೌದ್ ಗಂಜಾಂ ನಿಂದ ಮೂವರು ಆಟೋದಲ್ಲಿ ವಿಸಿ ನಾಲೆ ಬಳಿ ಬಂದಿದ್ದಾರೆ. ನಾಲೆ ಮೇಲೆ ಆಟವನ್ನು ನಿಲ್ಲಿಸಿದ್ದಾರೆ ನಾಲೆ ಬಳಿಯೇ ವಿಷ ಕುಡಿದು ನೀರಿಗೆ ಹಾರಿದ್ದಾರೆ. ಮಂಡ್ಯ ತಾಲೂಕಿನ ಚಂದಗಾಲು ಬಳಿ ಘಟನೆ ನಡೆದಿದೆ. ಮೊದಲು ವಿಷ ಸೇವಿಸಿ, ನಂತರ ವಿಸಿ ನಾಲೆಗೆ ಹಾರಿ ಮೂವರು ಆತ್ಮಹತ್ಯೆ ಶರಣಾಗಿದ್ದಾರೆ. ಮಂಡ್ಯ ತಾಲೂಕಿನ ಚಂದಗಾಲು ಬಳಿ ವಿಸಿ ನಾಲೆಗೆ ಹಾರಿ ಶರಣಾಗಿದ್ದಾರೆ ಎಂದು ಮಂಡ್ಯ ಜಿಲ್ಲೆಯ ಎಸ್ ಪಿ ಮಲ್ಲಿಕಾರ್ಜುನ್ ಬಾಲದಂಡಿ ತಿಳಿಸಿದರು. ಘಟನೆ ಹಿನ್ನೆಲೆ? ಸಾಲದಿಂದ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದ್ದು, ಆತ್ಮಹತ್ಯೆ ಮಾಡಿಕೊಂಡವರು…