Subscribe to Updates
Get the latest creative news from FooBar about art, design and business.
Author: kannadanewsnow05
ಚಿಕ್ಕಮಗಳೂರು : ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರು ಪಾಲಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಬಾಳೆಹೊಳೆ ಸಮೀಪ ಸಂಭವಿಸಿದೆ. ನೀರು ಪಾಲಾದ ಯುವಕರನ್ನು ಅಭಿಷೇಕ್ (27) ಹಾಗೂ ಯೋಗೀಶ್ (17) ಎಂದು ಗುರುತಿಸಲಾಗಿದೆ. ಇವರು ಮೂಲತಃ ಕೊಡಗು ಜಿಲ್ಲೆಯವರಾಗಿದ್ದಾರೆ ಎಂದು ತಿಳಿದು ಬಂದಿದೆ. ಅಭಿಷೇಕ್ ತನ್ನ ಅಕ್ಕನ ಮನೆಗೆ ಬಂದಿದ್ದ ವೇಳೆ ಸ್ನೇಹಿತರೊಂದಿಗೆ ಭದ್ರಾ ನದಿಗೆ ಈಜಲು ತೆರಳಿದ್ದಾನೆ. ಮೃತ ಅಭಿಷೇಕ್ ಅವರ ಅಕ್ಕ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಘಟನೆ ತಿಳಿಯುತ್ತಿದ್ದಂತೆ ಕಳಸ ಪೊಲೀಸರು ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರ ಸಹಾಯದಿಂದ ಮೃತದೇಹಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದು, ಮುಂದಿನ ತನಿಖೆ ನಡೆಯುತಿದೆ.
ಬೆಂಗಳೂರು : ಸ್ಥಳೀಯ ಸಂಸ್ಥೆ ಚುನಾವಣೆಗು ಮುನ್ನ ಮೈತ್ರಿ ನಾಯಕರಲ್ಲಿ ಇದೀಗ ಬಿರುಕು ಮೂಡಿದೆ. ಗೊಂದಲದ ನಡುವೆ ಜೆಡಿಎಸ್ ಪಕ್ಷ ಜೆಡಿಎಸ್ ಚುನಾವಣೆಗೆ ತಯಾರಿ ಮಾಡಿಕೊಂಡಿದ್ದು, ಸೀಟು ಹಂಚಿಕೆಯಲ್ಲಿ ಸಮನ್ವಯತೆ ಮೂಡದಿದ್ದರೆ ಪ್ಲಾನ್ ಎ ಮತ್ತು ಪ್ಲಾನ್ ಬಿ ತಕ್ಕಂತೆ 85ರಿಂದ 100 ವಾರ್ಡ್ಗಳಲ್ಲಿ ಎಚ್ ಡಿ ಕುಮಾರಸ್ವಾಮಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತಯಾರಿ ಮಾಡಿಕೊಂಡಿದ್ದಾರೆ. ಅದಕ್ಕೆ ಪೂರಕವಾಗಿ ಎರಡು ಸಭೆ ಮಾಡಿರುವ ಎಚ್ ಡಿ ಕುಮಾರಸ್ವಾಮಿ ಸೀಟು ಹಂಚಿಕೆ ವೇಳೆ ಕನಿಷ್ಠ 70ರಿಂದ 80 ಸೀಟ್ ಕೇಳಲು ನಿರ್ಧಾರ ಮಾಡಿದ್ದಾರೆ. ಬಿಜೆಪಿ 80 ಸೀಟ್ ಬಿಟ್ಟು ಕೊಟ್ಟರೆ ಮೈತ್ರಿ ಆಗಿ ಚುನಾವಣಾ ಹೋರಾಟ ಮಾಡಲಾಗುತ್ತೆ. 70 ರಿಂದ 80 ಸೀಟ್ ಬಿಟ್ಟು ಕೊಡದಿದ್ದರೆ ಪ್ರತ್ಯೇಕವಾಗಿ ಸ್ಪಂದಿಸಲು ಹೆಚ್ ಡಿ ಕುಮಾರಸ್ವಾಮಿ ಚಿಂತನೆ ನಡೆಸುತ್ತಿದ್ದಾರೆ. ಐದು ಪಾಲಿಕೆಗಳ 369 ವಾರ್ಡ್ಗಳಲ್ಲಿ ಸಿದ್ಧತೆ ನಡೆಸಲು ಎಸ್ ಡಿ ಕುಮಾರಸ್ವಾಮಿ ಕರೆ ನೀಡಿದ್ದಾರೆ ಬೆಂಗಳೂರು ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ ಹೀಗಾಗಿ ಮೈತ್ರಿ…
ಬೆಂಗಳೂರು : ಬೆಂಗಳೂರಿನಲ್ಲಿ ಶಿವರಾತ್ರಿ ದಿನದಂದೆ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಭಾರೀ ಸ್ಫೋಟ ಸಂಭವಿಸಿದೆ. ಯಲಹಂಕದ ಚೌಡೇಶ್ವರಿ ಲೇಔಟ್ ನ ಮನೆ ಒಂದರಲ್ಲಿ ಈ ಒಂದು ಅಗ್ನಿ ಅವಘಡ ಸಂಭವಿಸಿದೆ. ಸ್ಪೋಟದ ತೀವ್ರತೆಗೆ ಮನೆಯ ಗೋಡೆ ಸಂಪೂರ್ಣವಾಗಿ ಛಿದ್ರ ಛಿದ್ರವಾಗಿದೆ. ಬಾಗೆಪಲ್ಲಿ ಮೂಲದ ದಂಪತಿ ರಾಜು ಮತ್ತು ಕೃಷ್ಣಮ ಎಂಬುವವರಿಗೆ ಗಂಭೀರವಾದ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ದಂಪತಿಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಯಲಹಂಕ ಠಾಣೆ ಪೂರಿಸಲು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಯಲಹಂಕ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.
BIG NEWS : ಹಾಸನದಲ್ಲಿ ಮದುವೆಗೆ ಬಂದಿದ್ದ ಮಹಿಳೆ ನಿಗೂಢವಾಗಿ ನಾಪತ್ತೆ ಕೇಸ್ ಗೆ ಟ್ವಿಸ್ಟ್ : ಅತ್ಯಾಚಾರ, ಕೊಲೆ ಶಂಕೆ!
ಹಾಸನ : ಮದುವೆಗೆ ಬಂದಿದ್ದ ಮಹಿಳೆ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಹಾಸನ ತಾಲೂಕಿನ ಕಲ್ಕೆರೆ ಗ್ರಾಮದಲ್ಲಿ ನಡೆದಿದೆ. ಮಹಿಳೆಯ ಉಡುಪು, ಚಪ್ಪಲಿ ಹಾಗೂ ವ್ಯಾನಿಟಿ ಬ್ಯಾಗ್ ಪತ್ತೆಯಾಗಿದೆ ತುಮಕೂರು ಜಿಲ್ಲೆಯ ಕುಣಿಗಲ್ ನಿವಾಸಿಯಾಗಿರುವ ಪ್ರಿಯಾಂಕ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಇದೀಗ ಈ ಒಂದು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಸಂಬಂಧಿಕರು ಆಯ್ಕೆಯನ್ನು ಅತ್ಯಾಚಾರ ಎಸೆಗಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಹೌದು ಮದುವೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಪ್ರಿಯಾಂಕ ಚಿಕ್ಕಮಂಗಳೂರಿಗೆ ಬಂದಿದ್ದರು. ನಿಗೂಢವಾಗಿ ನಾಪತ್ತೆಯಾದ ಬೆನ್ನಲ್ಲೇ ಈ ವಿಚಾರವಾಗಿ ದೂರು ಕೊಟ್ಟರು ಪೊಲೀಸರು ಸ್ಪಂದಿಸುತ್ತಿಲ್ಲ ಎಂದು ಸಂಬಂಧಿಕರು ಗಂಭೀರವಾಗಿ ಆರೋಪಿಸಿದ್ದಾರೆ. ಇದೀಗ ಅರೆಹಳ್ಳಿ ಹಾಗೂ ಬೇಲೂರು ಠಾಣೆ ಪೊಲೀಸರ ವಿರುದ್ಧ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ವೇಳೆ ಸುಮಾರು 20ರಿಂದ 25 ಲಕ್ಷ ಮೌಲ್ಯದ ಚಿನಭರಣ ಆಕೆಯ ಮೇಲಿತ್ತು ಹಾಗಾಗಿ ಆಕೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಶಂಖ್ಯಾ ವ್ಯಕ್ತವಾಗಿದೆ ಎಂದು ಆರೋಪಿಸಿದರು. ಧರ್ಮಸ್ಥಳಕ್ಕೆ ಪಾದಯಾತ್ರೆಗೆ ಹೊರಟಿರುವ ಜನರಿಗೆ ಪ್ರಿಯಾಂಕಾ ಆಧಾರ್ ಕಾರ್ಡ್ ಸಿಗುತ್ತದೆ. ಅವರು…
ಶಿರಾಳಕೊಪ್ಪ ಬಳಿ ಬೆಳಗಿಯಲ್ಲಿ ಅಂಗನವಾಡಿ ಸಹಾಯಕಿಯ ಭೀಕರವಾಗಿ ಕೊಲೆ ಮಾಡಲಾಗಿದೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಗ್ರಾಮದಲ್ಲಿ ಈ ಒಂದು ಬರ್ಬರ ಕೊಲೆ ನಡೆದಿದೆ. ನಿನ್ನೆ ರಾತ್ರಿ ಪ್ರೇಮ (52) ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕೊಲೆಯಾದ ಪ್ರೇಮಾ ನಾಲ್ವರು ಮಕ್ಕಳ ಜೊತೆಗೆ ವಾಸವಿದ್ದರು. ಮೂವರು ಹೆಣ್ಣು ಮಕ್ಕಳ ಹಾಗೂ ಓರ್ವ ಮಗನ ಜೊತೆಗೆ ಪ್ರೇಮ ವಾಸವಿದ್ದರು. ಘಟನೆ ಸಂಭಂದ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಭಡ್ತಿ ನೀಡುವ ವಿಚಾರದಲ್ಲಿ ರಾಜ ಸರ್ಕಾರ ಇದೀಗ ಮತ್ತೊಂದು ಎಡವಟ್ಟು ಮಾಡಿಕೊಂಡಿದೆ. ಹೌದು ರಾಜ್ಯ ಸರ್ಕಾರದಿಂದ ಇದೀಗ ಸ್ವಯಂ ನಿವೃತ್ತಿಯಾಗಿದ್ದ ಸ್ವಾಮೀಜಿಗೂ ಪ್ರಮೋಷನ್ ನೀಡಿರುವುದು ಬೆಳಕಿಗೆ ಬಂದಿದೆ. ರಾಜ್ಯ ಸರ್ಕಾರ ಈ ಒಂದು ಎಡವಟ್ಟು ಮಾಡಿದ್ದು ಅಧಿಕಾರಿಗಳಿಗೆ ಭಡ್ತಿ ನೀಡುವ ವೇಳೆ ಸ್ವಯಂ ನಿವೃತ್ತಿಯಾಗಿದ್ದ ಸ್ವಾಮಿಜಿಗೂ ಪ್ರಮೋಷನ್ ನೀಡಿದ್ದಾರೆ. 20 ಅಧಿಕಾರಿಗಳಿಗೆ ಭಡ್ತಿ ಕೊಟ್ಟು ಸರ್ಕಾರ ಆದೇಶ ಹೊರಡಿಸಿದ್ದು, ಇದರಲ್ಲಿ ಸ್ವಯಂ ನಿವೃತ್ತಿಯಾದ ಸ್ವಾಮೀಜಿ ಹೆಸರು ಕೂಡ ಉಲ್ಲೇಖವಾಗಿದೆ. ನಿವೃತ್ತಿಗೂ ಮೊದಲು ಮಂಡ್ಯದಲ್ಲಿ ಅಪ್ಪಾಜಿ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಿದ್ದ ಡಾಕ್ಟರ್ ಎಚ್ ಎಲ್ ನಾಗರಾಜ್ ಕಳೆದ ವರ್ಷ ಸ್ವಯಂ ನಿವೃತ್ತಿ ಪಡೆದುಕೊಂಡು ಸ್ವಾಮೀಜಿ ಆಗಿದ್ದರು. ಭಡ್ತಿಯ ವೇಳೆ ನಿವೃತ್ತ ಪಡೆದವರನ್ನು ಪಟ್ಟಿಯಲ್ಲಿ ಸರ್ಕಾರ ಸೇರಿಸಿ ಎಡವಟ್ಟು ಮಾಡಿದೆ ಸರ್ಕಾರದ ಅಧೀನ ಕಾರ್ಯದರ್ಶಿ ಕೇಶವಪ್ರಸಾದ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ವಿಶ್ವ ಒಕ್ಕಲಿಗ ಮಹಾ ಸಂಸ್ಥಾನದ ಪೀಠಾಧಿಪತಿ ನಿಶ್ಚಲಾನಂದನಾಥ ಶ್ರೀ ಗಳಿಗೂ ಇದೀಗ ಭಡ್ತಿ ನೀಡಿ ಸರ್ಕಾರ ಆದೇಶ ನೀಡಿದೆ.
ಶಿವಮೊಗ್ಗ,ಫೆ 13 (ಕರ್ನಾಟಕ ವಾರ್ತೆ) : ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ(ಕೆಪೆಕ್) ಸಂಸ್ಥೆ, ಜಿಲ್ಲಾ ಪಂಚಾಯತ್, ಕೃಷಿ ಹಾಗೂ ತೋಟಗಾರಿಕೆ ಇಲಾಖೆ, ಚಿಕ್ಕಮಗಳೂರು ಇವರ ವತಿಯಿಂದ ಫೆ.17 ರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಚಿಕ್ಕಮಗಳೂರಿನ ಜಿ.ಪಂ ಸಭಾಂಗಣದಲ್ಲಿ ‘ಕಾಳು ಮೆಣಸು ಮತ್ತಿತರೆ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಹಾಗೂ ರಫ್ತು’ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ತರಬೇತಿಯಲ್ಲಿ ಸಂಬಾರು ಬೆಳೆಗಳ ವಿವಿಧ ವಿಷಯ ತಜ್ಞರು ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ತರಬೇತಿ ನೀಡುವರು. ಸಂಬಾರು ಬೆಳೆಗಾರರು, ರೈತ ಉತ್ಪಾದಕ ಸಂಸ್ಥೆಗಳು, ಸಂಬಾರು ಉತ್ಪನ್ನಗಳ ಉದ್ದಿಮೆದಾರರಿಗೆ ಈ ತರಬೇತಿ ಕಾರ್ಯಕ್ರಮವು ಉಪಯುಕ್ತವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೆಪೆಕ್ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.
ಬೆಂಗಳೂರು : ಮುಂದಿನ ಬಜೆಟ್‌ನಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಿಸುವ ನಿಟ್ಟಿನಲ್ಲಿ ಪ್ರೊ. ಗೋವಿಂದರಾವ್ ಸಮಿತಿ ಶಿಫಾರಸ್ಸುಗಳ ಅನುಷ್ಟಾನಕ್ಕಾಗಿ ಕನಿಷ್ಟ 15 ಸಾವಿರ ಕೋಟಿ ರೂ. ಅನುದಾನ ಹಂಚಿಕೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಹೆಚ್ಚು ಅವಧಿ ಅಧಿಕಾರದಲ್ಲಿದಿದ್ದುಕಾಂಗ್ರೆಸ್ ಪಕ್ಷ. ಅತಿ ಹೆಚ್ಚು ಬಜೆಟ್ ಮಂಡಿಸಿರುವುದು ಸಿದ್ದರಾಮಯ್ಯ. ಹೀಗಾಗಿ ಪ್ರಾದೇಶಿಕ ಅಸಮತೋಲನಕ್ಕೆ ಅವರೇ ಕಾರಣ. ಈಗ ಆ ತಪ್ಪನ್ನು ಸರಿಪಡಿಸಲು ಬಜೆಟ್‌ನಲ್ಲಿ ಸೂಕ್ತ ಅನುದಾನ ನಿಗದಿ ಮಾಡಬೇಕು ಎಂದು ಇಂದು ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ. ಅನ್ಯ ಇಲಾಖೆ ಅಥವಾ ಸಂಸ್ಥೆಗಳಿಗೆ ನೀಡುವ ಅನುದಾನವನ್ನು ಕ್ರೊಢೀಕರಿಸಿ ಇಂತಿಷ್ಟು ಮೊತ್ತ ಹಣವನ್ನು ನೀಡಿರುವುದಾಗಿ ಹಾರಿಕೆ ಭರವಸೆ ನೀಡಬಾರದು. ಕೆಕೆಆರ್‌ಡಿಬಿ ಸಹಿತ ಇತರೆ ಅಭಿವೃದ್ಧಿ ಮಂಡಳಿ ಅಥವಾ ನಿಗಮಗಳಿಗೆ ನೀಡುವ ಅನುದಾನವನ್ನು ಈ ಲೆಕ್ಕಾಚಾರಕ್ಕೆ ಸೇರಿಸಬಾರದು. ತಾರತಮ್ಯ ನಿವಾರಣೆಗಾಗಿಯೇ ವಿಶೇಷ, ಪ್ರತ್ಯೇಕ ಅನುದಾನ ಒದಗಿಸಬೇಕು. ಇಲ್ಲವಾದರೆ ನಿಮ್ಮ ಮಾತಿಗೂ ಕೃತಿಗೂ ಸಂಬಂಧವಿಲ್ಲ…
ಶಿವಮೊಗ್ಗ. ಫೆಬ್ರವರಿ 13: ( ಕರ್ನಾಟಕ ವಾರ್ತೆ): ಕರ್ನಾಟಕ ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯದ ಅಭಿವೃದ್ದಿ ನಿಗಮದ ವತಿಯಿಂದ 2025-26 ನೇ ಸಾಲಿಗೆ ಆಹಾರ ವಾಹಿನಿ ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಲ್ಲಿ ನಿಗಮದಿಂದ ವಾಹನ ಖರೀದಿಗೆ ರೂ.3.00 ಲಕ್ಷಗಳ ಸಹಾಯಧನವನ್ನು ಪಡೆಯಲು ಸೇವಾಸಿಂದು ಪೋರ್ಟೆಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯು ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯದ ಹಿಂದುಳಿದ ವರ್ಗಗಳ ಪ್ರವರ್ಗ-1ರ ಬುಂಡ್ ಬೆಸ್ತರ್, ಬೈಲ ಪತ್ತರ್, ಭೈರಾಗಿ (ಬಾವ), ಬಜಿನಿಯ, ಬಾಲಸಂತೋಶಿ-ಜೋಶಿ, ಬಾಜಿಗರ್, ಭರಡಿ, ಬುಡ್ ಬುಡಕಿ – ಜೋಶಿ- ಗೋಂಧಳಿ, ಚಾರ, ಚಿತ್ರಕಶಿ-ಜೋಶಿ, ದರ್ವೇಶ್, ದವೇರಿ, ಧೋಲಿ, ದೊಂಬರಿ, ದೊಂಬಿದಾಸ, ದುರ್ಗ-ಮುರ್ಗ (ಬುರ್ ಬುರಚ), ಗರಡಿ, ಘಿಸಡಿ, ಗೊಲ್ಲ, ಗೋಂಧಳಿ, ಗೋಪಲ್, ಹೆಳವ, ಹಾವ್ ಗಾರ (ಹಾವಡಿಗರ್), ಜೋಗಿ, ಜೋಶಿಸಾದ ಜೋಶಿ, ಕಾಶಿಕಪಾಡಿ, ಕಡಬು, ಕೆಲ್ ನಾರಿ, ಕಿಳ್ಳೆಕ್ಯಾತನ್, ಕೊಲಾತಿ, ಮಸನಿಯ…
ಹಾಸನ : ಮದುವೆಗೆ ಬಂದಿದ್ದ ಮಹಿಳೆ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಹಾಸನ ತಾಲೂಕಿನ ಕಲ್ಕೆರೆ ಗ್ರಾಮದಲ್ಲಿ ನಡೆದಿದೆ ಮಹಿಳೆಯ ಉಡುಪು, ಚಪ್ಪಲಿ ಹಾಗೂ ವ್ಯಾನಿಟಿ ಬ್ಯಾಗ್ ಪತ್ತೆಯಾಗಿದೆ ತುಮಕೂರು ಜಿಲ್ಲೆಯ ಕುಣಿಗಲ್ ನಿವಾಸಿಯಾಗಿರುವ ಪ್ರಿಯಾಂಕ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಮದುವೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಪ್ರಿಯಾಂಕ ಚಿಕ್ಕಮಂಗಳೂರಿಗೆ ಬಂದಿದ್ದರು. ನಿಗೂಢವಾಗಿ ನಾಪತ್ತೆಯಾದ ಬೆನ್ನಲ್ಲೇ ಈ ವಿಚಾರವಾಗಿ ದೂರು ಕೊಟ್ಟರು ಪೊಲೀಸರು ಸ್ಪಂದಿಸುತ್ತಿಲ್ಲ ಎಂದು ಸಂಬಂಧಿಕರು ಗಂಭೀರವಾಗಿ ಆರೋಪಿಸಿದ್ದಾರೆ. ಇದೀಗ ಅರೆಹಳ್ಳಿ ಹಾಗೂ ಬೇಲೂರು ಠಾಣೆ ಪೊಲೀಸರ ವಿರುದ್ಧ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಧರ್ಮಸ್ಥಳಕ್ಕೆ ಪಾದಯಾತ್ರೆಗೆ ಹೊರಟಿರುವ ಜನರಿಗೆ ಪ್ರಿಯಾಂಕಾ ಆಧಾರ್ ಕಾರ್ಡ್ ಸಿಗುತ್ತದೆ. ಅವರು ತಕ್ಷಣ ಆಧಾರ್ ಕಾರ್ಡನಲ್ಲಿದ್ದ ನಂಬರ್ ಗೆ ಕರೆ ಮಾಡುತ್ತಾರೆ ಅದು ಅವರ ಪತಿಗೆ ಹೋಗುತ್ತದೆ ನಿಮ್ಮ ಪತ್ನಿ ಆಧಾರ್ ಕಾರ್ಡ್ ನಮಗೆ ಸಿಕ್ಕಿದೆ ಎಂದು ಮಾಹಿತಿ ನೀಡುತ್ತಾರೆ. ತಕ್ಷಣ ಕುಟುಂಬಸ್ಥರು ಸ್ಥಳಕ್ಕೆ ಬಂದಾಗ ಅಲ್ಲಿ ಅವರ ವಸ್ತುಗಳು ಸಿಗುತ್ತವೆ. ಆದರೆ ಅವರು ನಾಪತ್ತೆಯಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 373 ಸಮೀಪ…














