Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಸಾಮಾನ್ಯವಾಗಿ ಬೈಕ್ ಅಥವಾ ಕಾರು ಯಾವುದೇ ಇರಲಿ ನಂಬರ್ ಪ್ಲೇಟ್ ಮೇಲೆ ನಂಬರ್ ಇರುವುದನ್ನು ನೋಡಿದ್ದೇವೆ. ಅಲ್ಲದೆ ನಂಬರ್ ಜೊತೆ ಕೆಲವು ಅಡಿ ಬರಹಗಳನ್ನು ಸಹ ಕಾಣುತ್ತೆವೆ. ಕೇಂದ್ರ ಮೋಟಾರ್ ವಾಹನ ನಿಯಮದ ಪ್ರಕಾರ ವಾಹನದ ಹಿಂದೆ ಮತ್ತು ಮುಂದೆ ನಂಬರ್ ಪ್ಲೇಟ್ ಮೇಲೆ ನಂಬರ್ ಕಡ್ಡಾಯ.ಆದರೆ ಬೆಂಗಳೂರಿನಲ್ಲಿ ಕಾರು ಒಂದು ನಂಬರ್ ಪ್ಲೇಟ್ ಮೇಲೆ ನಂಬರ್ ಬದಲಾಗಿ ಮಾಫಿಯಾ ಎಂದು ಸ್ಟಿಕರ್ ಅಳವಡಿಸಿ ಓಡಾಡುತ್ತಿರುವ ಫೋಟೋ ಇದೀಗ ವೈರಲ್ ಆಗಿದೆ. ಹೌದು ಕಾರಿನ ನಂಬರ್ ಪ್ಲೇಟ್ ನಲ್ಲಿ ಮಾಫಿಯಾ ಪ್ರತ್ಯಕ್ಷವಾಗಿದೆ. ಬೆಂಗಳೂರಿನಲ್ಲಿ ಓಡಾಡುತ್ತಿದೆ ಮಾಫಿಯಾ ಎಂದು ಬರೆದ ಕಾರು. ನಂಬರ್ ಪ್ಲೇಟ್ ನಲ್ಲಿ ಮಾಫಿಯಾ ಎಂದು ಬರೆಸಿ ಉದ್ಧಟತನ ಮೆರೆಯಲಾಗಿದೆ. ಕಾರಿನ ನಂಬರ್ ಪ್ಲೇಟ್ ಮೇಲೆ ನಂಬರ್ ಬದಲಿಗೆ ಮಾಫಿಯಾ ಎಂಬ ಬರಹ ಬರೆಯಲಾಗಿದೆ.ಮಾಫಿಯಾ ಎಂದು ಬರೆದು ಏರ್ಪೋರ್ಟರ್ ರಸ್ತೆಯಲ್ಲಿ ಕಾರು ಸಂಚರಿಸಿದೆ. ಸಾರ್ವಜನಿಕರೊಬ್ಬರು ಈ ಒಂದು ಫೋಟೋವನ್ನು ತೆಗೆದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ.
ನವದೆಹಲಿ : ಉತ್ತರ ದೆಹಲಿಯ ರೋಹಿಣಿ ಜಿಲ್ಲೆಯ ಪ್ರೇಮ್ ನಗರದಲ್ಲಿರುವ ಸೂರ್ಯ ಮಂದಿರದಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದ ಬೆಂಕಿ ಅವಘಡದಲ್ಲಿ 65 ವರ್ಷದ ಅರ್ಚಕರೊಬ್ಬರು ಸುಟ್ಟು ಕರಕಲಾದ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ದೆಹಲಿಯ ರೋಹಿಣಿ ಪ್ರದೇಶದ ಸೂರ್ಯ ದೇವಾಲಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅರ್ಚಕರು ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಅಪಘಾತದಲ್ಲಿ ದೇವಸ್ಥಾನದ ಅರ್ಚಕ ಸುಟ್ಟು ಕರಕಲಾಗಿದ್ದಾರೆ. ಹೌದು ದೆಹಲಿಯ ರೋಹಿಣಿ ಪ್ರದೇಶದ ಸೂರ್ಯ ದೇವಾಲಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅರ್ಚಕರು ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಅಪಘಾತದಲ್ಲಿ ದೇವಸ್ಥಾನದ ಅರ್ಚಕ ಸುಟ್ಟು ಕರಕಲಾಗಿದ್ದಾರೆ. ಘಟನೆಯಲ್ಲಿ ಸಾವನ್ನಪ್ಪಿದ ಅರ್ಚಕರನ್ನು 65 ವರ್ಷದ ಪಂಡಿತ್ ಬನ್ವಾರಿ ಲಾಲ್ ಶರ್ಮಾ ಎಂದು ಗುರುತಿಸಲಾಗಿದೆ. ಶನಿವಾರ, ಪ್ರೇಮ್ ನಗರ ಪೊಲೀಸ್ ಠಾಣೆಗೆ ಸೂರ್ಯ ದೇವಾಲಯದಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ಮಾಹಿತಿ ಸಿಕ್ಕಿತು. ಅಗ್ನಿಶಾಮಕ ದಳ ಮತ್ತು ಪೊಲೀಸ್ ತಂಡ ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಿಸಿತು. ಆದರೆ, ಅರ್ಚಕ ಬನ್ವಾರಿ ಲಾಲ್ ಶರ್ಮಾ ಪ್ರಜ್ಞಾಹೀನ…
ಮಂಡ್ಯ : ನಾಡಬಾಂಬ್ ಸ್ಫೋಟಗೊಂಡು ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಕಂಬದಹಳ್ಳಿಯ ಆಂಜನೇಯ ಬೆಟ್ಟದಲ್ಲಿ ಈ ಒಂದು ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕಂಬದಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಹರಿಯಂತ್ ಪಾಟೀಲ್ ಹಾಗೂ ಪಾರ್ಥ ಎಂದು ತಿಳಿದುಬಂದಿದೆ. ಜೈನಬಸದಿ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಓದುತ್ತಿದ್ದರು.ಬೆಟ್ಟದ ದೇವಸ್ಥಾನದಲ್ಲಿ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯಕ್ಕೆ ತೆರಳಿದ್ದಾರೆ. ಈ ವೇಳೆ ಕಸದ ರಾಶಿಗೆ ವಿದ್ಯಾರ್ಥಿಗಳು ಕೈ ಹಾಕುತ್ತಿದ್ದಂತೆ ನಾಡ ಬಾಂಬ್ ಸ್ಫೋಟಗೊಂಡಿದೆ. ಈ ಘಟನೆಯಲ್ಲಿ ಓರ್ವನ ಅಂಗೈ ಚಿತ್ರವಾಗಿದ್ದು ಮತ್ತೊಬ್ಬನ ಮುಖದ ಭಾಗಕ್ಕೆ ತೀವ್ರ ಗಾಯವಾಗಿದೆ. ಕಾಡು ಹಂದಿ ಬೇಟೆಗೆ ನಾಡ ಬಾಂಬ್ ಇಟ್ಟಿರುವ ಶಂಕೆ ಇದೀಗ ವ್ಯಕ್ತವಾಗಿದೆ.
ಬೆಳಗಾವಿ : ಬೈಕ್ ಗೆ ಹಿಂಬದಿಯಿಂದ ವೇಗವಾಗಿ ಬಂದಂತ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘೋರ ದುರಂತ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅನಂತಪುರ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಮೃತರನ್ನು ರಾಮು ಕರ್ಣಿ (49) ಹಾಗೂ ಮಗಳು ಜಾಹ್ನವಿ ಕರ್ಣಿ (11) ಎಂದು ತಿಳಿದುಬಂದಿದೆ. ಇನ್ನು ರಾಮು ಪತ್ನಿಗೆ ಗಂಭೀರವಾದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರು ಮಹಾರಾಷ್ಟ್ರದ ಜತ್ತ ತಾಲೂಕಿನ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ಅನಂತಪುರ ಗ್ರಾಮದ ಸೋದರ ಸಂಬಂಧಿ ಮದುವೆಗೆ ಇವರು ಬಂದಿದ್ದರು. ಬೈಕಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಕಾರು ಚಾಲಕ ಸ್ಥಳದಿಂದ ಪರಾರಿ ಆಗಿದ್ದಾನೆ. ಅಪಘಾತದ ಕುರಿತಿ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಯುವತಿ ತನ್ನ ಪ್ರೀತಿ ನಿರಾಕರಿಸಿದ್ದಾಳೆ ಎಂದು ರುಚಿ ಗೆದ್ದ ಪಾಗಲ್ ಪ್ರೇಮಿ ಒಬ್ಬ ಯುವತಿಯ ತಂದೆಗೆ ಸೇರಿದ ಬೈಕ್ ಹಾಗೂ ಕಾರುಗಳಿಗೆ ಬೆಂಕಿ ಹಾಕಿರುವ ಘಟನೆ ಬೆಂಗಳೂರಿನ ಚೆನ್ನಮ್ಮನ ಅಚ್ಚುಕಟ್ಟು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸ್ನೇಹಿತರನ್ನು ಕರೆದುಕೊಂಡು ಬೈಕ್ ಹಾಗೂ ಕಾರುಗಳಿಗೆ ಬೆಂಕಿ ಹಚ್ಚಿರುವ ಪಾಗಲ್ ಪ್ರೇಮಿಯನ್ನು ರಾಹುಲ್ ಎಂದು ತಿಳಿದುಬಂದಿದೆ. ಯುವತಿಯೊಬ್ಬಳನ್ನು ಪಾಗಲ್ ಪ್ರೇಮಿ ರಾಹುಲ್ ಪ್ರೀತಿಸುತ್ತಿದ್ದ. ಪ್ರೀತಿ ನಿರಾಕರಿಸಿದಕ್ಕೆ ರೊಚ್ಚಿಗೆದ್ದು ಕಾರು ಮತ್ತು ಬೈಕುಗಳಿಗೆ ರಾಹುಲ್ ಬೆಂಕಿ ಹಾಕಿದ್ದಾನೆ. ಸ್ನೇಹಿತರನ್ನು ಕರೆದುಕೊಂಡು ಹೋಗಿ ರಾಹುಲ್ ಈ ಕೃತ್ಯ ಎಸಗಿದ್ದಾನೆ. ಈ ವೇಳೆ ತಡೆಯಲು ಬಂದ ಸೆಕ್ಯೂರಿಟಿ ಗಾರ್ಡ್ ಮೇಲು ಕೂಡ ಆರೋಪಿಗಳು ಹಲ್ಲೆ ಮಾಡಿದ್ದಾರೆ. ಘಟನೆ ಕುರಿತು ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು : ರಾಜ್ಯದಲ್ಲಿ ಇಂದು ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಮೂವರು ಪಾದಚಾರಿಗಳ ಮೇಲೆ ಕಾರು ಹರಿದು ಓರ್ವ ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಕೊಳಾಯಿ ಬಳಿ ಈ ಒಂದು ಭೀಕರವಾದಂತಹ ಅಪಘಾತ ಸಂಭವಿಸಿದೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ದೀಪುಗೌಡ (50) ಎಂದು ತಿಳಿದು ಬಂದಿದೆ. ಇನ್ನು ಅಪಘಾತದಲ್ಲಿ ಕೊಪ್ಪಳ ಜಿಲ್ಲೆಯ ಕಾರಟಗಿ ಮೂಲದ ಪ್ರದೀಪ್ ಕೊಲ್ಕರ್ ಹಾಗೂ ಮಂಗಳೂರಿನ ಕೋಡಿಕೆರೆ ನಿವಾಸಿ, ನಾಗರಾಜ್ ಗೆ ಗಂಭೀರವಾದ ಗಾಯಗಳಾಗಿವೆ. ಕುಳಾಯಿ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ರಸ್ತೆ ದಾಟುತ್ತಿದ್ದಾಗ KA 19 AA 0746 ಸಂಖ್ಯೆಯ ಕಾರು ಡಿಕ್ಕಿ ಹೊಡೆದಿದೆ. ಗಾಯಾಳುಗಳಿಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಭೀಕರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.
ತುಮಕೂರು : ಕಾರ್ಯಕರ್ತರ ಸಮಸ್ಯೆಗಳಿಗೆ ಸ್ಪಂದಿಸದಿರುವುದಕ್ಕೆ ತುಂಬಾ ಬೇಸರವಾಗುತ್ತಿದೆ. ನೀವು ಹೇಳಿದರೆ ಕೂಡಲೇ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಸ್ಫೋಟಕವಾದಂತಹ ಹೇಳಿಕೆ ನೀಡಿದರು. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿ ನಿನ್ನೆ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಿತು ಈ ಒಂದು ಸಭೆಯಲ್ಲಿ ಮಾತನಾಡಿದ ಅವರು ಕಾರ್ಯಕರ್ತರ ಸಮಸ್ಯೆಗಳಿಗೆ ಸ್ಪಂದಿಸದಿರುವುದಕ್ಕೆ ತುಂಬಾ ಬೇಸರವಾಗುತ್ತಿದೆ. ಇತ್ತೀಚಿಗೆ ಕ್ಷೇತ್ರದ ಕಾರ್ಯಕರ್ತರೊಂದಿಗೆ ಬೇರೆಯಲು ಆಗುತ್ತಿಲ್ಲ ನಿಮ್ಮ ಮನಸ್ಸಿನ ಆಕಾಂಕ್ಷಿಯಂತೆ ಸ್ಪಂದಿಸಲು ನನಗೆ ಸಾಧ್ಯವಾಗುತ್ತಿಲ್ಲ ಎಂದು ಸಭೆಯಲ್ಲಿ ಕಾರ್ಯಕರ್ತರ ಬಳಿ ಕ್ಷಮೆ ಕೇಳಿದ ಸಚಿವ ಪರಮೇಶ್ವರ್. ನೀವು ಹೇಳಿದರೆ ಗೃಹ ಸಚಿವ ಸ್ಥಾನಕ್ಕೂ ರಾಜೀನಾಮೆ ನೀಡಲು ಸಿದ್ದ ಎಂದು ತಿಳಿಸಿದರು. ಪರಮೇಶ್ವರ್ ಅವರ ಹೇಳಿಕೆಯಿಂದ ಕಾಂಗ್ರೆಸ್ ಕಾರ್ಯಕರ್ತರು ಕ್ಷಣಕಾಲ ವಿಚಲಿತರಾಗಿದ್ದರು. ತಕ್ಷಣ ರಾಜೀನಾಮೆ ಕೊಡಬೇಡಿ ಅಂತ ಕಾರ್ಯಕರ್ತರು ಕೂಗಿದರು. ನೀವು ಇನ್ನು ಮುಖ್ಯಮಂತ್ರಿ ಆಗಬೇಕು ರಾಜಿನಾಮೆ ಕೊಡಬೇಡಿ ಎಂದು ಪರಮೇಶ್ವರಿಗೆ ಕಾರ್ಯಕರ್ತರು ಮನವಿ ಮಾಡಿದರು. ತುಮಕೂರು ಜಿಲ್ಲೆಯ…
ನ್ಯೂಯಾರ್ಕ್ : ಈಗಾಗಲೇ ಹಲವು ದೇಶಗಳ ಮೇಲೆ ತೆರಿಗೆ ಹೇಳಿರುವ ಅಮೆರಿಕ ಅಧ್ಯಕ್ಷ ಅಡೊನಾಲ್ಡ್ ಟ್ರಂಪ್ ಶೀಘ್ರದಲ್ಲಿ ಚೀನಾ ಮತ್ತು ಭಾರತದ ಮೇಲೂ ಪ್ರತಿ ತೆರಿಗೆಯನ್ನು ಹೇಳುತ್ತೇವೆ ಎಂದು ಘೋಷಣೆ ಮಾಡಿದ್ದಾರೆ. ಅಲ್ಲದೆ ಭಾರತ ನಮ್ಮ ವಸ್ತುಗಳ ಮೇಲೆ ಭಾರಿ ತೆರಿಗೆ ಹೇರುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಕೆಲ ದಿನಗಳ ಹಿಂದೆ ಸಂದರ್ಶನದಲ್ಲಿ ಈ ಕುರಿತು ಮಾತನಾಡಿದ ಅವರು, ಭಾರತ ನಮ್ಮ ವಸ್ತುಗಳ ಮೇಲೆ ಭಾರಿ ತೆರಿಗೆ ಹೇರುತ್ತಿದೆ. ಅದಕ್ಕೆ ಪ್ರತಿಯಾಗಿ ನಾವೂ ಅಂತೆಯೇ ಮಾಡುತ್ತೇವೆ. ಇಷ್ಟರವರೆಗೆ ನಾವು ಹಾಗೆ ಮಾಡಿರಲಿಲ್ಲ. ಆದರೆ ಈಗ ಅದರ ತಯಾರಿ ನಡೆಸಿದ್ದೇವೆ. ಇದನ್ನು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾಗಲೂ ಹೇಳಿದ್ದೆ’ ಎಂದರು. ಇದೇ ವೇಳೆ ಚೀನಾದ ಮೇಲೆಯೂ ಭಾರೀ ತೆರಿಗೆ ಹೇರುವುದಾಗಿ ಘೋಷಿಸಿದರು.
ಮಹಾರಾಷ್ಟ್ರ : ಕರ್ನಾಟಕದಲ್ಲಿ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಮೇಲೆ ದಾಳಿ ನಡೆದ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ತನ್ನ ಬಸ್ ಸೇವೆಗಳನ್ನು ಸ್ಥಗಿತಗೊಳಿಸಿರುವುದಾಗಿ ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ತಿಳಿಸಿದ್ದಾರೆ. ಶುಕ್ರವಾರ ರಾತ್ರಿ 9:10 ರ ಸುಮಾರಿಗೆ ಬೆಂಗಳೂರಿನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ಬಸ್ ಅನ್ನು ಗುರಿಯಾಗಿಸಿಕೊಂಡು ಕನ್ನಡ ಪರ ಕಾರ್ಯಕರ್ತರು ಚಾಲಕ ಭಾಸ್ಕರ್ ಜಾಧವ್ ಅವರ ಮುಖಕ್ಕೆ ಕಪ್ಪು ಬಣ್ಣ ಬಳಿದು ಹಲ್ಲೆ ನಡೆಸಿದ್ದಾರೆ ಎಂದು ಸರ್ನಾಯಕ್ ಹೇಳಿದರು. ಈ ದಾಳಿಗೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಪೊಲೀಸ್ ಪ್ರಕರಣ ದಾಖಲಾಗಿದ್ದು, ಕರ್ನಾಟಕ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸುವವರೆಗೆ ಸೇವೆಗಳು ಪುನರಾರಂಭಗೊಳ್ಳುವುದಿಲ್ಲ ಎಂದು ಸರ್ನಾಯಕ್ ಹೇಳಿದ್ದಾರೆ. ಶುಕ್ರವಾರ ಬೆಳಗಾವಿ ಬಳಿ ಮರಾಠಿಯಲ್ಲಿ ಹುಡುಗಿಗೆ ಉತ್ತರಿಸದ ಕಾರಣ ಕರ್ನಾಟಕ ಸಾರಿಗೆ ಬಸ್ ಕಂಡಕ್ಟರ್ ಮಹಾದೇವಪ್ಪ ಮಲ್ಲಪ್ಪ ಹುಕ್ಕೇರಿ ಮೇಲೆ ಹಲ್ಲೆ ನಡೆಸಲಾಗಿತ್ತು. ಸುಲೇಭಾವಿ ಗ್ರಾಮದಲ್ಲಿ ಬಸ್ ಹತ್ತಿದ ಹುಡುಗಿಯೊಬ್ಬಳು ಮರಾಠಿಯಲ್ಲಿ ಮಾತನಾಡುತ್ತಿದ್ದಳು, ಮತ್ತು ಕನ್ನಡದಲ್ಲಿ ಮಾತನಾಡಲು ಕೇಳಿದಾಗ ಅವಳು ತನ್ನನ್ನು ನಿಂದಿಸುತ್ತಿದ್ದಳು ಎಂದು…
ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯು ಮುಂದಿನ ಶೈಕ್ಷಣಿಕ ವರ್ಷ (2025-26)ದ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಜೂ.2 ರಿಂದ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಲಿದೆ. ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾದ ಬಳಿಕದ ಮೊದಲ ಕಾರ್ಯನಿರತ ದಿನದಿಂದ ಪ್ರಥಮ ಪಿಯುಸಿ ದಾಖಲಾತಿ ಪ್ರಕ್ರಿಯೆ ಆರಂಭವಾಗಲಿದೆ. ಮೇ 22ರಿಂದ ದ್ವಿತೀಯ ಪಿಯುಸಿ ದಾಖಲಾತಿ ಆರಂಭವಾಗಲಿವೆ. ಮೊದಲನೇ ಅವಧಿ ಜೂ.2ರಿಂದ ಸೆ.21ರವರೆಗೆ ಇರಲಿದ್ದು, ಎರಡನೇ ಅವಧಿ ಅಕ್ಟೋಬರ್ 8 ರಿಂದ 2026ರ ಮಾ.31ರವರೆಗೆ ನಡೆಯಲಿದೆ. ಮಧ್ಯಂತರ ರಜೆ ಸೆ.22 ರಿಂದ ಅ.7ರವರೆಗೆ ಇರಲಿದೆ. ಉಳಿದಂತೆ ಜೂ.16 ರಿಂದ ಪ್ರಾಯೋಗಿಕ ತರಗತಿಗಳು ಆರಂಭವಾಗಲಿದೆ. ಆಗಸ್ಟ್ 11ರಿಂದ 14ರವರೆಗೆ ಪ್ರಥಮ ಕಿರು ಪರೀಕ್ಷೆ ನಡೆಯಲಿವೆ. ಇನ್ನು ಎರಡನೇ ಅವಧಿಯಲ್ಲಿ ಅಕ್ಟೋಬರ್ 9 ರಿಂದ 27ರವರೆಗೆ ಮಧ್ಯ ವಾರ್ಷಿಕ ಪರೀಕ್ಷೆ, ಡಿ. 19 ರಿಂದ 22 ಎರಡನೇ ಕಿರು ಪರೀಕ್ಷೆ, 2026ರ ಜ.2ರಿಂದ ಜ. 13ರವರೆಗೆ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗಳು, ಜ.5ರಿಂದ 20ರವರೆಗೆ ದ್ವಿತೀಯ ಪಿಯು ಪೂರ್ವ ಸಿದ್ಧತಾ…