Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ನಗರದಲ್ಲಿ ರಸ್ತೆ ಗುಂಡಿಗಳು ಹೆಚ್ಚಾಗಿರುವ ಕಾರಣ, ಒಂದು ತಿಂಗಳಲ್ಲಿ ಮುಚ್ಚಬೇಕು. ಒಂದು ವೇಳೆ ಮುಚ್ಚದೇ ಇದ್ದರೇ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಎಲ್ಲಾ ಚೀಫ್ ಇಂಜಿನಿಯರ್ ಗಳನ್ನು ಸಸ್ಪೆಂಡ್ ಮಾಡುವುದಾಗಿ ಸಿಎಂ ಸಿದ್ಧರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ನಿನ್ನೆ ಬೆಂಗಳೂರಲ್ಲಿ ರಸ್ತೆ ಗುಂಡಿ ಮುಚ್ಚೋ ಸಂಬಂಧ ಗೃಹ ಕಚೇರಿ ಕೃಷ್ಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ಜಿಬಿಎ ಅಧಿಕಾರಿಗಳ ಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಗರಂ ಆದ ಘಟನೆಯೂ ನಡೆಯಿತು. ಇಂಜಿನಿಯರ್ ಗಳ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ರಸ್ತೆ ಗುಂಡಿಗಳನ್ನು ಮುಚ್ಚಲು ನಿಮಗೇನು ಕಷ್ಟ ಎಂಬುದಾಗಿ ಗರಂ ಆದರು. ರಸ್ತೆ ಗುಂಡಿಗಳನ್ನು ಮುಚ್ಚಲು ನಿಮಗೇನು ಕಷ್ಟ? ನಾಚಿಕೆ ಆಗುವುದಿಲ್ಲವೇ ನಿಮಗೆ? ಮುಚ್ಚಿರುವ ಗುಂಡಿಗಳು ನೆಟ್ಟಗಿಲ್ಲ ಜನರ ಕಷ್ಟ ಗೊತ್ತಾಗಲ್ವಾ?ನಿಮ್ಮಿಂದ ಸರ್ಕಾರಕ್ಕೆ ಕೆಟ್ಟ ಹೆಸರು ನಿಮ್ಮನ್ನು ಸಸ್ಪೆಂಡ್ ಮಾಡಿ ಮನೆಗೆ ಕಳುಹಿಸಬೇಕಾಗುತ್ತದೆ. ಗುಂಡಿ ಮುಚ್ಚದಿದ್ದರೆ ಎಲ್ಲಾ ಚೀಫ್ ಇಂಜಿನಿಯರ್ಗಳನ್ನ್ ಸಸ್ಪೆಂಡ್ ಮಾಡುತ್ತೇನೆ. ಪ್ರತಿ ಸಲ ಮಳೆ ಬಂದಾಗಲೂ ಇದೆ ಸಮಸ್ಯೆ…
ಬೆಂಗಳೂರು : ಕಲಬುರ್ಗಿ ಆಳಂದ ಕ್ಷೇತ್ರದಲ್ಲಿ ನಡೆದ ಮತಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್ ಐಟಿ ರಚಿಸಿ ಆದೇಶ ಹೊರಡಿಸಿದೆ. ಮತಪಟ್ಟಿಯಿಂದ ಅನಧಿಕೃತವಾಗಿ ಹೆಸರು ಕೈ ಬಿಡಲಾಗಿರುವ ಆರೋಪ ಸಂಬಂಧ 21.02.2023 ರಂದು ನೀಡಿದ ದೂರಿನ ಆಧಾರದ ಮೇಲೆ ಕಲ್ಬುರ್ಗಿ ಜಿಲ್ಲೆ ಆಳಂದ ಪೊಲೀಸ್ ಠಾಣೆಯಲ್ಲಿ 26/2023 ಕಲಂ. 182, 419, 464, 465 ಐ.ಪಿ.ಸಿ ರಂತೆ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ತನಿಖೆಗಾಗಿ ಸಿಐಡಿ ಅಪರ ಪೊಲೀಸ್ ಮಹಾನಿರ್ದೇಶಕರಾದ ಬಿ.ಕೆ.ಸಿಂಗ್ ನೇತೃತ್ವದಲ್ಲಿ ಎಸ್ ಐಟಿ ರಚನೆ ಮಾಡಲಾಗಿದೆ. ಸಿಐಡಿ ಎಸ್ ಪಿ ಸೈದುಲು ಅದಾವತ್ ಮತ್ತು ಸಿಐಡಿ ಎಸ್ ಪಿ ಶುಭಾನ್ವಿತ ಎಸ್ ಐಟಿ ತಂಡದಲ್ಲಿರಲಿದ್ದಾರೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ದೆಹಲಿಯಲ್ಲಿ ಈ ಪ್ರಕರಣ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮತಗಳ್ಳತನದ ಆರೋಪ ಮಾಡಿದ್ದರು. ಈ ಕ್ರಿಮಿನಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಇತರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಬಹುದಾದ ಇತರ ಪ್ರಕರಣಗಳ ಸಮಗ್ರ ತನಿಖೆಯನ್ನು ಕೈಗೊಳ್ಳಲು ಎಸ್ ಐಟಿ…
ತುಮಕೂರು : ರಾಜ್ಯದಲ್ಲಿ ಮತ್ತೊಂದು ಘೋರ ಘಟನೆ ನಡೆದಿದ್ದು, ಮನೆಯಲ್ಲಿ ಯಾರೂ ಇಲ್ಲದಿದ್ದಾಗ ತನ್ನ 4 ವರ್ಷ ಮತ್ತು 2 ವರ್ಷದ ಇಬ್ಬರು ಮಕ್ಕಳನ್ನು ಕೊಲೆ ಮಾಡಿದ ತಾಯಿ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಡಪನಕೆರೆಯಲ್ಲಿ ಈ ಘಟನೆ ನಡೆದಿದೆ. 23 ವರ್ಷದ ಸರಿತಾ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಆತ್ಮಹತ್ಯೆಗೂ ಮುನ್ನ 4 ವರ್ಷದ ಮಗ ಕೌಶಿಕ್ ಹಾಗೂ 2 ವರ್ಷದ ಮಗು ಯುಕ್ತಿಯನ್ನು ಕೊಲೆ ಮಾಡಿದ್ದಾರೆ. ಬಳಿಕ ತಾವೂ ಸಾವನ್ನಪ್ಪಿದ್ದಾರೆ. ನಿನ್ನೆ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಸರಿತಾ ತನ್ನ ಇಬ್ಬರು ಮಕ್ಕಳ ಹತ್ಯೆಗೈದು, ಬಳಿಕ ತಾನು ನೇಣಿಗೆ ಶರಣಾಗಿದ್ದಾರೆ. ಮೂಲತಃ ಕಡಪನಕೆರೆಯ ಸರಿತಾ ತನ್ನದೇ ಊರಿನ ಸಂತೋಷ್ ಜೊತೆ ವಿವಾಹವಾಗಿದ್ದರು. ಕಳೆದ 6 ವರ್ಷಗಳ ಹಿಂದೆ ಸಂತೋಷ್ ಜೊತೆ ವಿವಾಹವಾಗಿತ್ತು.ವೃತ್ತಿಯಲ್ಲಿ ಆಟೋ ಚಾಲಕನಾಗಿರುವ…
ಬೆಂಗಳೂರು : ಸೋಮವಾರದಿಂದ ಅಂದರೆ ನಾಳೆಯಿಂದ ಹಾಲಿನ ಉತ್ಪನ್ನಗಳ ಮೇಲಿನ ಸರಕು ಸೇವಾ ತೆರಿಗೆ ಶೇ. 12ರಿಂದ ಶೇ. 5ಕ್ಕೆ ಇಳಿಕೆ ಮಾಡಲಾಗಿದ್ದು, ಇದರ ಲಾಭವನ್ನು ಗ್ರಾಹಕರು ಪಡೆದುಕೊಳ್ಳಬಹುದಾಗಿದೆ. ನಂದಿನಿ ತುಪ್ಪ, ಬೆಣ್ಣೆ, ಚೀಸ್ ಸೇರಿದಂತೆ ಹಲವು ಉತ್ಪನ್ನಗಳ ಬೆಲೆ ಕಡಿಮೆಯಾಗಲಿದೆ. ಆದೇಶದಲ್ಲಿ ಹಾಲಿನ ಉತ್ಪನ್ನಗಳ ಮೇಲಿನ ಜಿಎಸ್‌ಟಿ ಇಳಿಕೆಯಿಂದಾಗಿ ‘ನಂದಿನಿ’ ಹಾಲಿನ ಉತ್ಪನ್ನಗಳ ಮಾರಾಟ ದರ ಪರಿಷ್ಕರಣೆ ಮಾಡಿರುವ ಬಗ್ಗೆ.ಕೇಂದ್ರಸರ್ಕಾರವು ಸಾರ್ವಜನಿಕರ ದೈನಂದಿನ ಬಳಕೆಯ ಆಹಾರ ಉತ್ಪನ್ನಗಳ ಮೇಲಿನ ಜಿಎಸ್‌ಟಿ(Goods and Services Tax-GST) ಯನ್ನು ಇಳಿಕೆ ಮಾಡಿದ್ದು ದಿನಾಂಕ: 22.09.2025 ರಿಂದ ಕಡ್ಡಾಯವಾಗಿ ಎಲ್ಲಾ ಆಹಾರ ಉತ್ಪನ್ನಗಳ ತಯಾರಿಕಾ ಮತ್ತು ಮಾರಾಟ ಸಂಸ್ಥೆಗಳು ಜಾರಿಗೊಳಿಸುವಂತೆ ತಿಳಿಸಲಾಗಿದೆ. ಅದರಂತೆ ಕೆಎಂಎಫ್ ಸಂಸ್ಥೆಯ ನಂದಿನಿ ಉತ್ಪನ್ನಗಳ ಮಾರಾಟ ದರ ಪರಿಷ್ಕರಣೆ ಮಾಡಲಾಗಿದ್ದು, ವಿವರಗಳು ಈ ಕೆಳಕಂಡಂತಿದೆ. 1000 ಮಿಲಿ ಲೀಟರ್ ತುಪ್ಪ ಹಳೆಯ ದರ 650 ಇದ್ದರೆ, ಹೊಸ ದರ 610 ರೂಪಾಯಿಗೆ ಇಳಿಕೆ ಮಾಡಲಾಗಿದೆ. ಇನ್ನು 500 ಮಿಲಿ ಲೀಟರ್…
ಬೆಂಗಳೂರು, ಸೆ. 20: “ಅಕ್ಟೊಬರ್ 31ರ ಒಳಗಾಗಿ ಬೆಂಗಳೂರಿನ ಎಲ್ಲಾ ರಸ್ತೆಗಳನ್ನು ಸರಿಪಡಿಸಬೇಕು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಗಡುವು ನೀಡಿದ್ದಾರೆ. ಜೊತೆಗೆ ರಸ್ತೆಗುಂಡಿ ಮುಚ್ಚಲು ಹೆಚ್ಚುವರಿ 750 ಕೋಟಿ ರೂ. ಅನುದಾನ ಕೊಡುವ ಭರವಸೆ ನೀಡಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರು ರಸ್ತೆಗಳ ಸುಧಾರಣೆ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕುರಿತು ಸಿಎಂ ನಿವಾಸ ಕಾವೇರಿಯಲ್ಲಿ ಶನಿವಾರ ನಡೆದ ಉನ್ನತ ಮಟ್ಟದ ಸಭೆ ಬಳಿಕ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. “ಬೆಂಗಳೂರಿನ ರಸ್ತೆಗುಂಡಿ ಸಮಸ್ಯೆ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ತಾವು ಜಿಬಿಎ ಅಧಿಕಾರಿಗಳ ಸಭೆ ಮಾಡಿದ್ದೇವೆ. ನಮ್ಮ ಅಧಿಕಾರಿಗಳು, ಪೊಲೀಸರು ಹಾಗೂ ಸಾರ್ವಜನಿಕರ ಸಹಕಾರದಿಂದ ನಾವು ನಗರದಲ್ಲಿ 10 ಸಾವಿರ ರಸ್ತೆ ಗುಂಡಿ ಪತ್ತೆ ಮಾಡಿದ್ದೇವೆ. ಇವುಗಳನ್ನು ಸರಿಪಡಿಸದಿದ್ದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದೇನೆ” ಎಂದು ಹೇಳಿದರು. “ರಸ್ತೆಗುಂಡಿಗಳ ಪಟ್ಟಿ ಮಾಡಿ ಮಾಹಿತಿ ನೀಡುವಂತೆ…
ಸಾಗರ : ಮಾಜಿ ಸಚಿವ ಹರತಾಳು ಹಾಲಪ್ಪ ಅವರ ತಾಯಿ ಮಂಜಮ್ಮ ಹಿರೇನಾಯ್ಕ್ (91), ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಶನಿವಾರ ನಿಧನ ಹೊಂದಿದರು. ಇಂದು ಮದ್ಯಾಹ್ನ 2 ಗಂಟೆಗೆ ಸೊರಬ ತಾಲ್ಲೂಕಿನ ಹೊಳೆಕೊಪ್ಪ ಗ್ರಾಮದಲ್ಲಿ ಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.
ಬೆಂಗಳೂರು : ಕೆಲಸಕ್ಕೆ ಹೋಗು ಅಂದಿದ್ದಕ್ಕೆ ತಂದೆಯನ್ನೇ ಭೀಕರವಾಗಿ ಮಗ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ದಾಸರಹಳ್ಳಿಯಲ್ಲಿ ಕಳೆದ ಸಪ್ಟೆಂಬರ್ ಮೂರರಂದು ನಡೆದಿದ್ದು ಇದೀಗ ಪೊಲೀಸರು ಆತ್ಮಹತ್ಯೆ ಪ್ರಕರಣವನ್ನು ಭೇದಿಸಿದ್ದಾರೆ. ತಂದೆ ಮಂಜುನನ್ನು ಹತ್ಯೆಗೈದು ನನ್ನ ತಂದೆ ಹೇಗೆ ಮಲಗಿದ್ದಾರೆ ಎಂದು ಮಗ ಮನೋಜ್ ನಾಟಕವಾಡಿದ್ದಾನೆ. ತಂದೆಯ ಶವದ ಮುಂದೆ ಕೂತು ಕಣ್ಣೀರು ಹಾಕಿದ್ದಾನೆ. ಹತ್ಯೆಯ ಬಳಿಕ ಮನೋಜ್ ಎನ್ನುವ ಯುವಕ ಕಣ್ಣೀರು ಹಾಕಿ ನಾಟಕ ಮಾಡಿದ್ದಾನೆ. ಇನ್ನು ಕೊಲೆಯಾದ ವ್ಯಕ್ತಿಯನ್ನು ಮಂಜು ಎಂದು ತಿಳಿದುಬಂದಿದೆ. ಸೆಪ್ಟೆಂಬರ್ 3ರಂದು ದಾಸರಹಳ್ಳಿಯಲ್ಲಿ ತಂದೆ ಮಂಜು ಸಾವನಪ್ಪಿದ್ದರು. ಮಗ ಮನೋಜನಿಂದ ತಂದೆ ಸಾವಿನ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ನಮ್ಮ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮನೋಜ್ ಪೊಲೀಸ್ರಿಗೆ ಮಾಹಿತಿ ನೀಡಿದ್ದಾನೆ. ಸೋಫಾ ಮೇಲೆ ಮಲಗಿದ್ದ ಸ್ಥಿತಿಯಲ್ಲಿ ಮಂಜು ಶವ ಪತ್ತೆಯಾಗಿತ್ತು. ತನಿಖೆ ವೇಳೆ ಮಂಜು ಸಾವಿನ ರಹಸ್ಯವನ್ನು ಪೊಲೀಸರು ಭೇದಿಸಿದ್ದಾರೆ. ಮೃತ ಮಂಜು ಮನೆಗೆ ಮಗನ ಸ್ನೇಹಿತ ಬಂದು ಹೋಗಿದ್ದ ಮಗನ ಸ್ನೇಹಿತ…
ಬೆಂಗಳೂರು : ರಾಜ್ಯದಲ್ಲಿ ಸೆಪ್ಟೆಂಬರ್ 22ರಿಂದ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಆರಂಭವಾಗಲಿದ್ದು, ಇದರ ಮಧ್ಯ ಕ್ರಿಶ್ಚಿಯನ್ ಜಾತಿ ಪಟ್ಟಿಯಲ್ಲಿ, ಕುರುಬ ಕ್ರಿಶ್ಚಿಯನ್, ಬ್ರಾಹ್ಮಣ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್ ಲಿಂಗಾಯತ ಕ್ರಿಶ್ಚಿಯನ್ ಸೇರ್ಪಡೆ ಕುರಿತು ಇದೀಗ ರಾಜ್ಯಪಾಲ ಥಾವರ ಚೆಂದ ಗೆಹ್ಲೋಟ್ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮರುಪರಿಶೀಲನೆ ಮಾಡಿ ಎಂದು ತಿಳಿಸಿದ್ದಾರೆ. ಜಾತಿ ಪಟ್ಟಿಯಲ್ಲಿ ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಸೇರಿದಂತೆ ಹೊಸ ಜಾತಿ ಪಟ್ಟಿಗಳ ಸೇರ್ಪಡೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲ ಗೆಹ್ಲೊಟ್ ಹತ್ರ ಬರೆದಿದ್ದಾರೆ. ಕ್ರಿಶ್ಚಿಯನ್ ಹೊಸ ಜಾತಿಗಳ ಸೇರ್ಪಡೆಯಿಂದ ಸಾಮಾಜಿಕ ಧಕ್ಕೆ ಮತ್ತು ದೀರ್ಘಾವಧಿಯ ಸಮಸ್ಯೆ ಉಂಟಾಗುವ ಸಾಧ್ಯತೆ ಇರುತ್ತದೆ. ಸಾಮಾಜಿಕ ವ್ಯವಸ್ಥೆಗೆ ಸಮಸ್ಯೆಯಾಗದಂತೆ ಮರುಪರಿಶೀಲಿಸುವಂತೆ ಇದೀಗ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ.
ಗದಗ : ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಜಾತಿಗಣತಿ ಸಮೀಕ್ಷೆ ಆರಂಭವಾಗಲಿದ್ದು, ಈಗಾಗಲೇ ಇದೇ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಸಚಿವರೇ ಕೆಲವು ವಿಚಾರವಾಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದೀಗ ಸೆಪ್ಟೆಂಬರ್ 22 ರಿಂದ ಜಾತಿ ಗಣತಿ ಆರಂಭವಾಗುತ್ತಿದೆ ಧರ್ಮ ಜಾತಿ ಹೇಳಬೇಕು ಕುರುಬರಲ್ಲಿ ಅನೇಕ ಜಾತಿಗಳಿವೆ ಅವೆಲ್ಲ ಬರೆಸಬೇಡಿ ಕುರುಬ ಅಂತ ಮಾತ್ರ ಬರೆಸಿ ಅಂತ ಸಿಎಂ ಸಿದ್ದರಾಮಯ್ಯ ತಿಳಿಸಿದರು. ಇಂದು ಗದಗ ನಗರದಲ್ಲಿ ಕುರುಬರ ಸಂಘದ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಅವರು, ಸೆಪ್ಟೆಂಬರ್ 22 ರಿಂದ ಜಾತಿ ಗಣತಿ ಆರಂಭವಾಗುತ್ತಿದೆ. ಹಾಗಾಗಿ ಪ್ರತಿಯೊಬ್ಬರೂ ತಮ್ಮ ತಮ್ಮ ಧರ್ಮ, ಜಾತಿ ಹೇಳಬೇಕು. ಇನ್ನು ಕುರುಬರಲ್ಲಿ ಅನೇಕ ಜಾತಿಗಳಿವೆ. ಆದರೆ ಕಾಲಂನಲ್ಲಿ ಅವೆಲ್ಲ ಬರೆಸಬೇಡಿ, ಕೇವಲ ಕುರುಬ ಅಂತ ಮಾತ್ರ ಬರೆಸಿ ಅಂತ ಕರೆ ನೀಡಿದರು.
ದಾವಣಗೆರೆ : ದಾವಣಗೆರೆಯಲ್ಲಿ ಹಾಡ ಹಗಲೇ ಕೋರ್ಟ್ ಆವರಣದಲ್ಲೆ ಪತ್ನಿಗೆ ಚಾಕುವಿನಿಂದ ಇರಿದು ಪತಿ, ಕೊಲೆಗೆ ಯತ್ನಿಸಿರುವ ಘಟನೆ ದಾವಣಗೆರೆ ನಗರದ ಕೌಟುಂಬಿಕ ನ್ಯಾಯಾಲಯ ಆವರಣದಲ್ಲಿ ಈ ಒಂದು ಘಟನೆ ನಡೆದಿದೆ. ಪತ್ನಿಗೆ ಚಾಕು ಇರಿದ ಬಳಿಕ ಪತಿ ತಾನು ಸಹ ಕೈ ಕೊಯ್ದುಕೊಂಡಿದ್ದಾನೆ. ಪತ್ನಿ ಪವಿತ್ರ ಮೇಲೆ ಪತಿ ಪ್ರವೀಣ್ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾನೆ. ಸದ್ಯ ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಪತಿ ಪ್ರವೀಣ್ ಹಾಗೂ ಪತ್ನಿ ಪವಿತ್ರಾಗೆ ಇಬ್ಬರಿಗೂ ನೀಡಲಾಗುತ್ತಿದೆ. ದಾವಣಗೆರೆಯ ಜಾಲಿ ನಗರದ ನಿವಾಸಿಯಾಗಿರುವ ಪ್ರವೀಣ್ ಬೆಂಗಳೂರು ಮೂಲದ ಪವಿತ್ರ ಜೊತೆಗೆ ಮದುವೆಯಾಗಿದ್ದ. ಪರಸ್ಪರ ಪ್ರೀತಿಸಿ ಇಬ್ಬರು ಅಂತರ್ಜಾತಿ ವಿವಾಹವಾಗಿದ್ದರು. ಕಳೆದ ಕೆಲವು ದಿನಗಳ ಹಿಂದೆ ಪತ್ನಿ ಪತಿಯನ್ನು ತೊರೆದು ಹೋಗಿದ್ದಳು. ಇಂದು ನ್ಯಾಯಾಲಯದಲ್ಲಿ ವಿಚಾರಣೆ ಇರುವ ಹಿನ್ನೆಲೆಯಲ್ಲಿ ಇಬ್ಬರೂ ಬಂದಿದ್ದರು. ಪತ್ನಿಯ ನಡತೆಯ ಮೇಲೆ ಪತಿ ಪ್ರವೀಣ್ ಶಂಕೆ ವ್ಯಕ್ತಪಡಿಸುತ್ತಿದ್ದ.








