Author: kannadanewsnow05

ಬೆಂಗಳೂರು : ಬೆಂಗಳೂರಲ್ಲಿ ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗಂಭೀರವಾಗಿ ಗಾಯಗೊಂಡಿದ್ದ ಪೂರ್ಣಿಮಾ ಎನ್ನುವ ಮಹಿಳೆ ಸಾವನಪ್ಪಿದ್ದಾರೆ. ವಿಕ್ಟೋರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳಿದಿದ್ದಾರೆ ಕಳೆದ ಮಂಗಳವಾರ ಮಂಜುಶ್ರೀ ಲೇಔಟ್ ನಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ರಾಮಮೂರ್ತಿನಗರ ಠಾಣಾ ವ್ಯಾಪ್ತಿಯ ಮಂಜುಶ್ರೀ ಲೇಔಟ್ ನಲ್ಲಿ ಗ್ಯಾಸ್ ಸೋರಿಕೆಯಾಗಿ ವಾಸನೆ ಬಂದಾಗ ಬಾಡಿಗೆದಾರನ ಮನೆಗೆ ಮಾಲಕಿ ಪೂರ್ಣಿಮಾ ಹೋಗಿದ್ದಳು. ಬಾಡಿಗೆದಾರನ ಮನೆ ಪರಿಶೀಲನೆ ಹೋಗಿದ್ದ ವೇಳೆ ಮಾಲಕಿ ಪೂರ್ಣಿಮಾ ಸ್ವಿಚ್ ಆನ್ ಮಾಡುತ್ತಿದ್ದಂತೆ ಅಗ್ನಿ ಅವಘಡ ಸಂಭವಿಸಿತ್ತು. ಪೂರ್ಣಿಮಾ ಹಾಗೂ ಬಾಡಿಗೆದಾರ ವೆಂಕಟೇಶ್ ಗೆ ಗಂಭೀರವಾದ ಗಾಯಗಳಾಗಿತ್ತು. ಪೂರ್ಣಿಮಾ ಇದೀಗ ಸಾವನ್ನಪ್ಪಿದ್ದು, ಬಾಡಿಗೆದಾರ ವೆಂಕಟೇಶ ಸ್ಥಿತಿ ಗಂಭೀರವಾಗಿದೆ.

Read More

ಹಾಸನ : ರಾಜ್ಯದ ಪಡಿದರ ಚೀಟಿದಾರರಿಗೆ ಸರ್ಕಾರ ಇದೀಗ ಸಿಹಿಸುದ್ದಿ ಒಂದನ್ನು ನೀಡುತ್ತಿದ್ದು, ಫೆಬ್ರುವರಿ ಅಂತ್ಯ ಅಥವಾ ಮಾರ್ಚ್ ತಿಂಗಳಿನಿಂದ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತೆ ಎಂದು ಆಹಾರ ಇಲಾಖೆ ಸಚಿವ ಕೆಎಚ್ ಮುನಿಯಪ್ಪ ತಿಳಿಸಿದರು. ಹಾಸನದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಸರ್ಕಾರ ರಾಜ್ಯದ ಪಡಿತರ ಚೀಟಿದಾರರಿಗೆ ಈ ಒಂದು ಇಂದಿರಾ ಕಿಟ್ ಯೋಜನೆ ಜಾರಿಗೆ ಮಾಡಿದ್ದು, ಫೆಬ್ರವರಿ ಅಂತ್ಯ ಅಥವಾ ಮಾರ್ಚ್ ತಿಂಗಳಲ್ಲಿ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತೆ. ಸಕ್ಕರೆ, ಬೆಳೆ, ಅಡುಗೆ ಎಣ್ಣೆ ಉಪ್ಪು ಒಳಗೊಂಡ ಈ ಒಂದು ಕಿಟ್ ವಿತರಿಸಲಾಗುತ್ತಿದ್ದು ಇದರಿಂದ ಪೌಷ್ಟಿಕ ಆಹಾರ ಸಿಗಲಿದೆ ಎಂದು ಅವರು ತಿಳಿಸಿದರು.

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡಲು ಶಿಫಾರಸ್ಸು ಮಾಡಿದಂತ ಪತ್ರವೊಂದು ವೈರಲ್ ಆಗಿತ್ತು. ಇದೇ ಪತ್ರವನ್ನು ಶಾಸಕ ಸುನೀಲ್ ಕುಮಾರ್ ಕಾರ್ಕಳ ಕೂಡ ಶೇರ್ ಮಾಡಿ, ಸಿಎಂ ವಿರುದ್ಧ ಕಿಡಿಕಾರಿದ್ದರು. ಈ ಬೆನ್ನಲ್ಲೇ ನಕಲಿ ಶಿಫಾರಸ್ಸು ಪತ್ರ ಸಿದ್ಧಮಾಡಿ, ಹಂಚಿದವರ ವಿರುದ್ಧ ಸರ್ಕಾರ ಎಫ್ಐಆರ್ ದಾಖಲಿಸಿದೆ. ಈ ಕುರಿತಂತೆ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಒಂದೇ ಸುಳ್ಳನ್ನು ನೂರು ಬಾರಿ ಹೇಳಿ ಅದನ್ನೇ ಸತ್ಯವಾಗಿಸುವ ಬಿಜೆಪಿಯ ಸುಳ್ಳಿನ ಫ್ಯಾಕ್ಟರಿಯ ಮತ್ತೊಂದು ವಿಫಲ ಹುನ್ನಾರವಿದು. ಸುನೀಲ್ ಕುಮಾರ್ ಅವರೇ, ದಿನಾಂಕವಿಲ್ಲದ, ರೆಫರೆನ್ಸ್ ಸಂಖ್ಯೆಯಿಲ್ಲದ ಒಂದು ನಕಲಿ ಪತ್ರವನ್ನು ಹಿಡಿದು ಜನರಲ್ಲಿ ಗೊಂದಲ ಸೃಷ್ಟಿಸಲು ಹೊರಟಿರುವ ನಿಮಗೆ ಕನಿಷ್ಠ ಜ್ಞಾನವೂ ಇಲ್ಲವೇ? ಆರೋಗ್ಯ ಇಲಾಖೆಯ ಅಧಿಕಾರಿಯನ್ನು ಅಬಕಾರಿ ಇಲಾಖೆಗೆ ವರ್ಗಾಯಿಸಲು ನಮ್ಮ ನಿಯಮಗಳಲ್ಲಿ ಅವಕಾಶವೇ ಇಲ್ಲ ಎಂಬುದು ತಿಳಿಯದಷ್ಟು ಬೌದ್ಧಿಕ ದಿವಾಳಿತನವೇ? ಈ ನಕಲಿ ಪತ್ರದ ಬಗ್ಗೆ ನಮ್ಮ ಮುಖ್ಯಮಂತ್ರಿ…

Read More

ಬೆಂಗಳೂರು : ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ, ಮಂಡ್ಯ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ||ಕೆ.ಮೋಹನ್ ಇವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ ಎಂದು ಮಂಡ್ಯ ಆರೋಗ್ಯ ಇಲಾಖೆಯಿಂದ ಮೈಸೂರು ಗ್ರಾಮಾಂತರ ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡಿರುವ ನಕಲಿ ಪತ್ರದ ಕುರಿತು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಟ್ವೀಟ್‌ನಲ್ಲಿ ಹಂಚಿಕೊಂಡಿರುವ ಅವರು, ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ, ಮಂಡ್ಯ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ||ಕೆ.ಮೋಹನ್ ಇವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಅಪಪ್ರಚಾರದಲ್ಲಿ ತೊಡಗಿರುವುದು ಖಂಡನೀಯ ಮತ್ತು ಅತ್ಯಂತ ಗಂಭೀರ ಸ್ವರೂಪದ ಅಪರಾಧವಾಗಿದೆ. ಈ ಬಗ್ಗೆ ನನ್ನ ಸಚಿವಾಲಯದ ಅಧಿಕಾರಿಗಳು ದೂರು ದಾಖಲಿಸಿದ್ದು, ಪೊಲೀಸ್ ಇಲಾಖೆ ಇದರ ಹಿಂದಿರುವ ದುಷ್ಟರನ್ನು ಪತ್ತೆ ಮಾಡಿ, ಕಾನೂನು ಕ್ರಮ ಕೈಗೊಳ್ಳಲಿದೆ. ಇಂತಹ…

Read More

ಬೆಂಗಳೂರು: 2026ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ನಿಗಮದ ಬಸ್ಸುಗಳಲ್ಲಿ ಪರೀಕ್ಷಾ ದಿನಗಳಂದು ಉಚಿತವಾಗಿ ಪ್ರಯಾಣಿಸಲು ಅನುಮತಿಸಿ ಆದೇಶಿಸಲಾಗಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ಸುತ್ತೋಲೆ ಹೊರಡಿಸಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ: 28.02.2026 ರಿಂದ ಕರ್ನಾಟಕದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ, ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸುವಂತೆ ಉಲ್ಲೇಖಿತ-1 ರ ಪತ್ರದಲ್ಲಿ ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ರವರು ಕೋರಿರುತ್ತಾರೆ ಎಂದಿದ್ದಾರೆ. ಅದರನ್ವಯ ಕ.ರಾ.ರ.ಸಾ.ನಿಗಮವು, ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ಅಂದರೆ, ದಿನಾಂಕ 28.02.2026 ರಿಂದ 17.03.2026 ರವರೆಗೆ, ಪರೀಕ್ಷೆಗೆ ಹಾಜರಾಗುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು…

Read More

ಚಿಕ್ಕಬಳ್ಳಾಪುರ : ಇಂದು ಪ್ರೇಮಿಗಳ ದಿನ ಹಿನ್ನೆಲೆ ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿಮೀ ದೂರದಲ್ಲಿರುವ ಈ ಗಿರಿಧಾಮವು ಸಾಮಾನ್ಯವಾಗಿ ವಾರಾಂತ್ಯ ಮತ್ತು ಸಾರ್ವಜನಿಕ ರಜಾ ದಿನಗಳಲ್ಲಿ ಹೆಚ್ಚಿನ ಜನಸಂದಣಿಯನ್ನು ಹೊಂದಿರುತ್ತದೆ. ವಿಶೇಷ ದಿನಗಳಲ್ಲಿ ಪ್ರವಾಸಿಗರ ಸಂಖ್ಯೆ ಮತ್ತಷ್ಟು ಹೆಚ್ಚಿರುತ್ತದೆ. ಫೆಬ್ರವರಿ 14ರ ಪ್ರೇಮಿಗಳ ದಿನ ನಂದಿಬೆಟ್ಟಕ್ಕೆ ಹೆಚ್ಚಿನ ಪ್ರವಾಸಿಗರು ಬರುತ್ತಾರೆ. ಇದೇ ವೇಳೆ ಕೆಲವು ಅಹಿತಕಾರ ಘಟನೆಗಳು ನಡೆದ ಕಾರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಕ್ರಮ ತೆಗೆದುಕೊಂಡಿದೆ. ಆದೇಶದ ಪ್ರಕಾರ, ಶನಿವಾರ ನಂದಿ ಬೆಟ್ಟಕ್ಕೆ ಯಾವುದೇ ಖಾಸಗಿ ವಾಹನಗಳು ಅಥವಾ ಪ್ರವಾಸಿಗರನ್ನು ಪ್ರವೇಶಿಸಲು ಅನುಮತಿಸಲಾಗುವುದಿಲ್ಲ. ನಿರ್ಬಂಧವನ್ನು ಜಾರಿಗೊಳಿಸಲು ಪ್ರವೇಶ ಸ್ಥಳದಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ. ವಾರಾಂತ್ಯ ಮತ್ತು ರಜಾದಿನಗಳಲ್ಲಿ, ನಂದಿ ಬೆಟ್ಟಕ್ಕೆ 3,000 ರಿಂದ 3,500 ದ್ವಿಚಕ್ರ ವಾಹನಗಳಲ್ಲಿ ಮತ್ತು 1,500 ರಿಂದ 1,700 ನಾಲ್ಕು ಚಕ್ರ ವಾಹನಗಳಲ್ಲಿ 16…

Read More

ಹೊಸಪೇಟೆ : ಹಂಪಿ ಉತ್ಸವ ಉದ್ಘಾಟನಾ ಸಮಾರಂಭದ ವೇದಿಕೆ ಬಳಿ ನಿನ್ನೆ ರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪಟಾಕಿಯಿಂದ ಬೆಂಕಿ ಹೊತ್ತಿಕೊಂಡಿದ್ದು, ಯಾರಿಗೂ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ. ಸಿಎಂ ಸಿದ್ದರಾಮಯ್ಯ ಅವರಿದ್ದ ಮುಖ್ಯ ವೇದಿಕೆಯ ಎದುರೇ ಬೆಂಕಿ ಹೊತ್ತಿಕೊಂಡಿದೆ. ಸಿಎಂ ಸಿದ್ದರಾಮಯ್ಯ ಪೂಜೆ ಸಲ್ಲಿಸುವ ವೇಳೆಯೇ ಕ್ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಸ್ಥಳದಲ್ಲೇ ಇದ್ದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದು, ಉತ್ಸವದಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಬಂದ ಸಮಯದಲ್ಲಿ ಪಟಾಕಿ ಸಿಡಿಸಲಾಗಿದೆ. ಈ ವೇಳೆ ಬೆಂಕಿ ಕಿಡಿಗಳು ಹುಲ್ಲು ಹಾಗೂ ಸಮೀಪದ ವಸ್ತುಗಳಿಗೆ ತಗುಲಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ವೇದಿಕೆಯ ಸಮೀಪವೇ ಬೆಂಕಿ ಮತ್ತು ದಟ್ಟ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ನೆರೆದಿದ್ದ ಸಾವಿರಾರು ಪ್ರೇಕ್ಷಕರು ಹಾಗೂ ಗಣ್ಯರು ಆತಂಕಗೊಂಡಿದ್ದಾರೆ. ಆದರೆ, ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಸಕಾಲಕ್ಕೆ ಸಿಬ್ಬಂದಿ ಎಚ್ಚೆತ್ತಿದ್ದರಿಂದ ಸಂಭವಿಸಬಹುದಾದ ದೊಡ್ಡ…

Read More

ಬೆಂಗಳೂರು : ನ್ಯಾಯಾಲಯದ ಸೂಚನೆ ಹಿನ್ನೆಲೆಯಲ್ಲಿ ಹೃದಯ ಸಮಸ್ಯೆ ಕಾಣಿಸಿಕೊಂಡ ಸಂಬಂಧ ಭಾರತಿ ನಗರದ ರೌಡಿ ಶಿವಪ್ರಕಾಶ್ ಆಲಿಯಾಸ್ ಬಿಕ್ಷು ಶಿವ ಕೊಲೆ ಪ್ರಕರಣದ ಆರೋಪಿ, ಕೆ. ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಬೈರತಿ ಬಸವರಾಜು ಅವರನ್ನು ಶುಕ್ರವಾರ ನಗರದ ಜಯದೇವ ಹೃದ್ರೋಗ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಗುರುವಾರ ಸಂಜೆ ಬಂಧನಕ್ಕೊಳಗಾಗಿದ್ದ ಬೈರತಿ ಬಸವರಾಜುರನ್ನು ಸಿಐಡಿ ಅಧಿಕಾರಿಗಳು, ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಬಳಿಕ ಜನಪ್ರ ತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಶುಕ್ರವಾರ ಹಾಜರುಪಡಿಸಿದರು. ಆಗೆ ಬೌರಿಂಗ್ ಆಸ್ಪತ್ರೆ ವೈದ್ಯರ ವರದಿಯಲ್ಲಿ ಇಸಿಜಿಯಲ್ಲಿ ವ್ಯತ್ಯಾಸ ಉಲ್ಲೇಖವಾ ಗಿತ್ತು. ಈ ಸಂಗತಿಯನ್ನು ನ್ಯಾಯಾ ಲಯದ ಗಮನಕ್ಕೆ ತಂದು ಹೆಚ್ಚಿನ ಚಿಕಿತ್ಸೆಗೆ ಶಾಸಕರ ಪರ ವಕೀಲರು ಮನವಿ ಮಾಡಿದರು. ಈ ಮನವಿ ಪುರಸ್ಕರಿಸಿದ ನ್ಯಾಯಾಲಯ, ಆರೋಪಿ ಬಸವರಾಜು ಅವರಿಗೆ ಹೆಚ್ಚಿನ ಚಿಕಿತ್ಸೆ ಕೊಡಿಸಿ ಶನಿವಾರ ಗೃಹ ಕಚೇರಿಯಲ್ಲಿ ಹಾಜರುಪಡಿಸುವಂತೆ ಸಿಐಡಿ ಅಧಿಕಾರಿಗಳಿಗೆ ಸೂಚಿಸಿತು. ಅಂತೆಯೇ ರಾತ್ರಿ 7 ಗಂಟೆಗೆ ಸುಮಾರಿಗೆ ಜಯನಗ…

Read More

ಹಾವೇರಿ : ಹಾವೇರಿ ಜಿಲ್ಲೆಯ ಬ್ಯಾಡಗಿ ಮತಕ್ಷೇತ್ರದ ಕಾಂಗ್ರೆಸ್​​ ಶಾಸಕ ಬಸವರಾಜ್ ಶಿವಣ್ಣನವರಿಗೆ ಲಘು ಹೃದಯಾಘಾತ ಆಗಿದೆ. ತಕ್ಷಣವೇ ಶಾಸಕ ಬಸವರಾಜ್​ ಶಿವಣ್ಣ ಅವರನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಶಾಸಕರ ಆರೋಗ್ಯ ಸ್ಥಿರವಾಗಿರೋ ಬಗ್ಗೆ ಮಾಹಿತಿ ಲಭ್ಯವಾಗಿದೆ. ನಿನ್ನೆ ಹಾವೇರಿಯಲ್ಲಿ ನಡೆದ ಕಾಂಗ್ರೆಸ್ ಸಾಧನ ಸಮಾವೇಶದಲ್ಲಿ ಭಾಗವಹಿಸಲು ಸಚಿವ ಶಿವಾನಂದ ಪಾಟೀಲ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಹಾಜರಾಗಿದ್ದರು. ಈ ಕಾರ್ಯಕ್ರಮದ ತಯಾರಿ ಹಾಗೂ ಭಾಗವಹಿಸುವ ಕಾರ್ಯದಲ್ಲಿ ಶಾಸಕ ಬಸವರಾಜ್ ಶಿವಣ್ಣ ಅವರು ದಿನಪೂರ್ತಿ ಬ್ಯುಸಿಯಾಗಿದ್ದರು. ಬೆಳಗ್ಗೆಯಿಂದಲೇ ಸ್ವಲ್ಪ ಸುಸ್ತು ಕಾಣಿಸಿಕೊಂಡಿದ್ದರೂ, ಕಾರ್ಯಕ್ರಮದ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದರು ಎನ್ನಲಾಗಿದೆ. ಮಧ್ಯಾಹ್ನದ ಹೊತ್ತಿಗೆ ಅಸ್ವಸ್ಥತೆ ಹೆಚ್ಚಾಗುತ್ತಿದ್ದಂತೆ ಕುಟುಂಬಸ್ಥರು ಹಾಗೂ ಪಕ್ಷದ ಕಾರ್ಯಕರ್ತರು ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ನಿರ್ಧರಿಸಿದರು. ಪ್ರಾಥಮಿಕ ತಪಾಸಣೆಯಲ್ಲಿ ಹೃದಯ ಸಂಬಂಧಿತ ಸಮಸ್ಯೆ ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಹಾವೇರಿಯಿಂದ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.ಈ ವೇಳೆ 2 ಬ್ಲಾಕ್ ಕಂಡುಬಂದಿದ್ದು, 2 ಕಡೆ ಸ್ಟಂಟ್ ಅಳವಡಿಸಲಾಗಿದೆ…

Read More

ಬೆಂಗಳೂರು : ಕದ್ದ ಆಸ್ತಿಯನ್ನು ಹೊಂದಿರುವ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯು ಪೊಲೀಸರು ಕೇಳಿದಾಗ ಅದನ್ನು ಹಸ್ತಾಂತರ ಮಾಡಲು ವಿಳಂಬಗೊಳಿಸುವ ಅಥವಾ ನಿರಾಕರಿಸುವ ಯಾವುದೇ ಕಾನೂನುಬದ್ಧ ಹಕ್ಕನ್ನು ಹೊಂದಿರುವುದಿಲ್ಲ ಎಂದು ಹೈಕೋರ್ಟ್‌ ಆದೇಶಿಸಿದೆ. ಅಲ್ಲದೆ, ಕದ್ದ ಆಸ್ತಿ ವಿಷಯದಲ್ಲಿ ಅದು ಚಿನ್ನದ ಸಾಲ ಕಂಪನಿಯಾಗಿದ್ದರೂ ಸಹ ಕದ್ದ ಆಸ್ತಿಯನ್ನು ಹೊಂದುವುದು ರಕ್ಷಾ ಕವಚವಾಗಿ ಬದಲಾಗುವುದಿಲ್ಲ. ಅಲ್ಲದೇ, ಬಡ್ಡಿ ಮತ್ತು ಭದ್ರತೆಯ ಕಾರಣ ನೀಡಿ ಕದ್ದ ವಸ್ತುಗಳನ್ನು ತನ್ನ ಬಳಿಯೇ ಇಟ್ಟುಕೊಳ್ಳುವುದಕ್ಕೆ ಅವಕಾಶವಿಲ್ಲ ಎಂದು ಆದೇಶಿಸಿದೆ. ಕೆಂಗೇರಿಯ ಕರೂರು ವೈಶ್ಯ ಬ್ಯಾಂಕ್‌ ಶಾಖೆಯಿಂದ ಕದ್ದ ಒಡವೆಗಳನ್ನು ಅಡವಿಟ್ಟುಕೊಂಡು ಸಾಲ ಮಂಜೂರು ಮಾಡಿದ್ದ ಆರೋಪದಲ್ಲಿ ಕದ್ದ ಒಡವೆಗಳನ್ನು ಒಪ್ಪಿಸುವಂತೆ ಕೆಂಗೇರಿ ಪೊಲೀಸರು ನೀಡಿದ್ದ ನೋಟಿಸ್ ಪ್ರಶ್ನಿಸಿ ಐಐಎಫ್ಎಲ್ ಫೈನಾನ್ಸ್ ಕಂಪನಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿರುವ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಮಾಡಿದೆ. ಹಣಕಾಸುದಾರರ ಯಾವುದೇ ಭದ್ರತಾ ಹಿತಾಸಕ್ತಿ ಒಪ್ಪಂದದ ಪ್ರಕಾರ ಮಾನ್ಯವಾಗಿದ್ದರೂ ಸಹ ಕದ್ದ ಆಸ್ತಿಯ ನಿಜವಾದ ಮಾಲೀಕರ…

Read More