Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಅನೈತಿಕ ಚಟುವಟಿಕೆ, ಡ್ರಗ್ಸ್ ಮಾಫಿಯ ಸೇರಿದಂತೆ ಇನ್ನಿತರ ದಂಧೆಯ ಜೊತೆಗೆ ಆರೋಪಿಗಳ ಜೊತೆ ಶಾಮಿಲಾಗಿರುವುದು ಕಂಡು ಬಂದರೆ ಇನ್ನು ಮುಂದೆ ಎಚ್ಚರಿಕೆ ಕೊಡುವುದಿಲ್ಲ, ಕ್ರಮ ತೆಗೆದುಕೊಳ್ಳುತ್ತೇವೆ. ಎಚ್ಚರಿಕೆ ಕೊಡುವುದೆಲ್ಲ ಒಂದು ಹಂತದಲ್ಲಿ ಮುಗಿದಿದೆ. ಈಗ ಏನಿದ್ದರು ಕ್ರಮ ಆಗಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಖಡಕ್ ಸೂಚನೆ ಕೊಟ್ಟರು. ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, ರೌಡಿಗಳು ಪುಂಡಾಟ, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ, ಬ್ಯಾಂಕ್ ದರೋಡೆ ಪ್ರಕರಣಗಳ ತನಿಖೆಯ ಬಗ್ಗೆ ಅಧಿಕಾರಿಗಳೊಂದಿಗೆ ಕೂಲಂಕಷವಾಗಿ ಚರ್ಚೆ ಮಾಡಲಾಗಿದೆ. ಪರಿಶಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳ ಬಗ್ಗೆ ಪರಿಶೀಲನೆ ಮಾಡಲಾಗಿದೆ. ಕಳೆದ ಮೂರು ವರ್ಷಗಳಿಗೆ ಹೋಲಿಸಿದರೆ ಶಿಕ್ಷೆ ಪ್ರಮಾಣ ಶೇ.10ರಷ್ಟಾಗಿದೆ ಎಂದರು.
ಬೆಂಗಳೂರು : ಪತ್ನಿಯ ಶೀಲದ ಬಗ್ಗೆ ಅನುಮಾನಗೊಂಡ ಪತಿಯೊಬ್ಬ ಚಾಕುವಿನಿಂದ ಪತ್ನಿಯ ಕುತ್ತಿಗೆ ಇರಿದಿರುವ ಘಟನೆ ಬೆಂಗಳೂರಿನಲ್ಲಿ ಬ್ಯಾಡರ ಹಳ್ಳಿಯಲ್ಲಿ ಸೆಪ್ಟೆಂಬರ್ 18ರಂದು ಈ ಒಂದು ಕೃತ್ಯ ನಡೆದಿದೆ. ತೀವ್ರ ರಕ್ತಸ್ರಾವದಿಂದ ನರಳಾಡುತ್ತಿದ್ದ ಪತ್ನಿ ದೇವಿಕಾಳನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಪ್ರಾಣಪಾಯದಿಂದ ಬಚಾವ್ ಮಾಡಿದ್ದಾರೆ.ಚಾಕು ಇರಿದ ಪತಿಯನ್ನು ಚಂದ್ರು ಎಂದು ತಿಳಿದುಬಂದಿದೆ. 11 ವರ್ಷಗಳ ಹಿಂದೆ ಚಂದ್ರು ಮತ್ತು ದೇವಿಕ ವಿವಾಹವಾಗಿದ್ದರು, ಖಾಸಗಿ ಆಸ್ಪತ್ರೆಯಲ್ಲಿ ಪತ್ನಿ ದೇವಿಕಾ ಕೆಲಸ ಮಾಡುತ್ತಿದ್ದಾಳೆ. ಮನೆಗೆ ಯಾರೊ ಬರುತ್ತಿದ್ದಾರೆ ಎಂದು ಚಂದ್ರು ಪತ್ನಿ ದೇವಿಕಾ ಜೊತೆ ಜಗಳ ತೆಗೆಯುತ್ತಿದ್ದ. ಕುಡಿತದ ಚಟಕ್ಕೆ ಬಿದ್ದು ಪ್ರತಿದಿನ ಜಗಳ ಮಾಡುತ್ತಿದ್ದ. ಇದರಿಂದ ಬೇಸತ್ತ ದೇವಿಕಾ ಪತಿಯಿಂದ ಐದು ವರ್ಷಗಳಿಂದ ದೂರವಿದ್ದಳು. ಅಲ್ಲದೆ ದೇವಿಕಾಳ ಚಿನ್ನವನ್ನು ಪತಿ ಚಂದ್ರು ಅಡವಿಟ್ಟಿದ್ದ.ಈ ಕುರಿತು ಬ್ಯಾಡರಹಳ್ಳಿ ಠಾಣೆಯಲ್ಲಿ ಪತ್ನಿ ದೇವಿಕ ದೂರು ನೀಡಿದ್ದಾಳೆ. ಪತ್ನಿ ದೂರ ನೀಡಿದರೂ ಪದೇ ಪದೇ ಪತಿ ಚಂದ್ರು ಹಿಂಸೆ ಕೊಡುತ್ತಿದ್ದ. ಪತ್ನಿ ಕೆಲಸ ಮಾಡುತ್ತಿದ್ದ ಆಸ್ಪತ್ರೆಯ…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಬೆಂಗಳೂರು ವಿಶ್ವವಿದ್ಯಾಲಯ ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆಯಲ್ಲಿ ಇವರು ಉಪನ್ಯಾಸಕರ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಉಪನ್ಯಾಸಕರಾದ ಸ್ವರೂಪ ಕುಮಾರ್, ರಾಮಾಂಜನೇಯ ಸೇರಿದಂತೆ ಐವರು ಉಪನ್ಯಾಸಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. FIR ದಾಖಲಾದ ಬೆನ್ನಲ್ಲೇ ಉಪನ್ಯಾಸಕರ ಹಲವು ವಿಡಿಯೋಗಳು ವೈರಲ್ ಆಗಿವೆ. ಮಕ್ಕಳಿಗೆ ಪಾಠ ಮಾಡುವ ಉಪನ್ಯಾಸಕರಿಂದಲೇ ಕುಡಿದು ಡ್ಯಾನ್ಸ್ ಮಾಡುವ ವಿಡಿಯೋ ವೈರಲ್ ಆಗಿವೆ . ಮದ್ಯ ಸೇವಿಸಿ ಅತಿಥಿ ಉಪನ್ಯಾಸಕ ರಾಮಾಂಜನೇಯ ಡ್ಯಾನ್ಸ್ ಮಾಡಿದ್ದಾನೆ.ಶರ್ಟ್ ಬಿಚ್ಚಿ ಕುಡಿದು ಬೆಂಗಳೂರು ವಿಶ್ವವಿದ್ಯಾಲಯ ಆವರಣದಲ್ಲಿ ಡ್ಯಾನ್ಸ್ ಮಾಡಿದ್ದಾನೆ. ಉಪನ್ಯಾಸಕ ರಾಮಾಂಜನೇಯ ವಿರುದ್ಧ ಇದೀಗ ಸಾಲ ಸಾಲು ಆರೋಪಗಳು ಕೇಳಿಬಂದಿವೆ. ಇಂಟರ್ನಲ್ ಮಾರ್ಕ್ಸ್ ನೀಡಲು ಹಣಕ್ಕೆ ಬೇಡಿಕೆ ಇಟ್ಟ ಆರೋಪ, ಕಣ್ಣು ಕಾಣದ ವಿದ್ಯಾರ್ಥಿಗೆ ಇಂಟರ್ನಲ್ ನೀಡಲು ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ನೇತ್ರಾನಂದ ಎಂಬ ಅಂದ ವಿದ್ಯಾರ್ಥಿ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಅಂಬೇಡ್ಕರ್ ಜಯಂತಿ…
ಹಾಸನ : ಕರ್ತವ್ಯ ಲೋಪ ಆರೋಪ ಹಿನ್ನೆಲೆಯಲ್ಲಿ ಬೇಲೂರು ಬಿಇಒ ರಾಜೇಗೌಡನನ್ನು ಅಮಾನತುಗೊಳಿಸಲಾಗಿದೆ. ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಈ ಕುರಿತು ಆದೇಶ ಹೊರಡಿಸಿದ್ದಾರೆ. ಹಾಸನ ಜಿಲ್ಲೆಯ ಡಿಡಿಪಿಐ ವರದಿ ಆಧರಿಸಿ ಬಿಇಒ ರಾಜೇಗೌಡನನ್ನು ಅಮಾನತು ಗೊಳಿಸಲಾಗಿದೆ. ಭ್ರಷ್ಟಾಚಾರ, ಲೈಂಗಿಕ ಕಿರುಕುಳ, ಕೊಲೆ ಬೆದರಿಕೆ ಸೇರಿದಂತೆ ಹಲವು ಆರೋಪಗಳು ಕೇಳಿ ಬಂದಿದ್ದು ಆರೋಪಗಳು ಸಾಬೀತು ಹಿನ್ನೆಲೆಯಲ್ಲಿ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಅಲ್ಲದೇ ಇತ್ತೀಚಿಗೆ ಶಾಸಕ ಎಚ್ ಕೆ ಸುರೇಶ್ ಜೊತೆಗೆ ರಾಜೇಗೌಡ ವಾಗ್ವಾದ ನಡೆಸಿದ್ದ ಇದೀಗ ಬೇಲೂರು ಬಿಇಓ ರಾಜೇಗೌಡನನ್ನ ಅಮಾನತುಗೊಳಿಸಲಾಗಿದೆ.
ಬೆಂಗಳೂರು : ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರು ಈ ಬಾರಿ ದಸರಾ ಉದ್ಘಾಟನೆ ಮಾಡಲಿದ್ದು, ಈ ವಿಚಾರವಾಗಿ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಇಂದು ಸುಪ್ರೀಂಕೋರ್ಟ್ ನಲ್ಲಿ ಈ ಅರ್ಜಿಯ ವಿಚಾರಣೆ ನಡೆದು, ಬಾನು ಮುಷ್ತಾಕ್ ದಸರಾ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇದೀಗ ಸಿಎಂ ಸಿದ್ದರಾಮಯ್ಯ ತಮ್ಮ ಟ್ವೀಟ್ ಖಾತೆಯಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಸ್ವಾಗತಿಸಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ರಾಜ್ಯ ಸರ್ಕಾರದ ನಿಲುವಿನ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿರುವ ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಸ್ವಾಗತಿಸುತ್ತೇನೆ. ಮೈಸೂರು ದಸರಾವನ್ನು ಧಾರ್ಮಿಕ ನೆಲೆಗಟ್ಟಿಗೆ ಸೀಮಿತವಾಗಿಸಲು ಸಾಧ್ಯವಿಲ್ಲ. ಜಾತಿ, ಧರ್ಮಗಳನ್ನು ಮೀರಿ ನಾಡಿನ ಸಮಸ್ತ ಜನರು ಕೂಡಿ ಸಂಭ್ರಮಿಸುವ ಹಬ್ಬವೆಂದು ನಾವು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೆವು, ಆದರೂ ಇದರ ವಿರುದ್ಧ ವ್ಯವಸ್ಥಿತ ಅಪಪ್ರಚಾರ ನಡೆಸಿ, ಸಮಾಜವನ್ನು ಒಡೆಯುವ ಪ್ರಯತ್ನ ಮಾಡಲಾಯಿತು. ಈಗ ಸುಪ್ರೀಂ ತೀರ್ಪಿನಿಂದ…
ಗದಗ : ಗದಗದಲ್ಲಿ ನಿವೃತ್ತ ಶಿಕ್ಷಕರಿಂದ ಲಂಚ ಪಡೆಯುವಾಗ ಎಫ್ ಡಿ ಸಿ ಎಸ್. ಎಸ್ ಚೌತಾಯಿ ಎನ್ನುವವರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸೇವಾ ಪುಸ್ತಕ ಮಹಾಲೆಕ್ಕಪಾಲಕರ ಕಚೇರಿಗೆ ಕಳುಹಿಸಲು ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಿವೃತ್ತ ಮುಖ್ಯ ಶಿಕ್ಷಕ ಎಸ್ ಬಿ ಲಕ್ಷ್ಮೇಶ್ವರ ಅವರಿಂದ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಎಫ್ ಡಿ ಸಿ ಚೌತಾಯಿ ಅವರನ್ನ ವಶಕ್ಕೆ ಪಡೆದು ಲೋಕಾಯುಕ್ತ ಪೊಲೀಸರು ಇದೀಗ ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರು : ಕಾವೇರಿ ನೀರಿನ ಪೈಪ್‌ಲೈನ್ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಇಂದಿನಿಂದ 2 ದಿನಗಳ ಕಾಲ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಆಗಲಿದೆ. ಬೆಂಗಳೂರು ನೀರಿನ ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ ನಗರದ ನಾಗರಬಾವಿ ಬಿಡಿಎ ಕಾಂಪ್ಲೆಕ್ಸ್ ಪ್ರದೇಶದ 600 ಮಿಮೀ ವ್ಯಾಸದ ಮುಖ್ಯ ಕಾವೇರಿ ನೀರಿನ ಪೈಪ್‌ಲೈನ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೆ.19 ರಿಂದ 20ರ ವರೆಗೆ ನಗರದ ಕೆಲವು ಭಾಗಗಳಲ್ಲಿ ಕಾವೇರಿ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ತುರ್ತು ಕಾರಣದಿಂದ ನಡೆಯುತ್ತಿರುವ ಕಾಮಗಾರಿಯಲ್ಲಿ ಸಾರ್ವಜನಿಕರು ಸಹಕಾರ ನೀಡುವಂತೆ ಹಾಗೂ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ BWSSB ಮನವಿ ಮಾಡಿದೆ. ನಗರದ ವಿಜಯನಗರ, ಬನವಾಸಿ ರಸ್ತೆ, ಕೋರಮಂಗಲ, ಗಾಂಧಿನಗರ ಸುತ್ತಮುತ್ತಲಿನ ಪ್ರದೇಶಗಳು, ಬಿ.ಡಿ.ಎ. ಕಾಂಪ್ಲೆಕ್ಸ್ ಸುತ್ತಮುತ್ತ ಇತರ ಹತ್ತಿರದ ಬಡಾವಣೆಗಳು.
SHOCKING : ಬೆಂಗಳೂರಲ್ಲಿ ಲೈಂಗಿಕವಾಗಿ ಸಹಕರಿಸಲು ಒತ್ತಾಯಿಸಿ ಯುವತಿಗೆ ಚಾಕು ಇರಿತ : ಸಾಫ್ಟ್ವೇರ್ ಉದ್ಯೋಗಿ ಅರೆಸ್ಟ್
ಬೆಂಗಳೂರು : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಲೈಂಗಿಕವಾಗಿ ಸಹಕರಿಸುವಂತೆ ಒತ್ತಾಯಿಸಿ ಯುವತಿಗೆ ಚಾಕು ಇರಿದಿದ್ದ ಸಾಫ್ಟ್ ವೇರ್ ಉದ್ಯೋಗಿಯನ್ನು ವೈಟ್‌ಫೀಲ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ 24 ವರ್ಷದ ಯುವತಿಗೆ ಚಾಕುವಿನಿಂದ ಇರಿದು ಹಣ ಸುಲಿಗೆ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಮೂಲದ ಬಾಬು ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೆಪ್ಟೆಂಬರ್ 16ರಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ವೈಟ್‌ಫೀಲ್ಡ್ ಠಾಣೆ ವ್ಯಾಪ್ತಿಯ ಕೋ-ಲಿವಿಂಗ್ ಪಿ.ಜಿಯೊಂದರಲ್ಲಿ ಯುವತಿಗೆ ಚಾಕು ಇರಿಯಲಾಗಿತ್ತು. ಬ್ಯಾಂಕ್ ಉದ್ಯೋಗಿಯಾಗಿರುವ ಯುವತಿಗೆ 3 ತಿಂಗಳ ಹಿಂದಷ್ಟೆ ಕೋ-ಲಿವಿಂಗ್ ಪಿ.ಜಿಯಲ್ಲೇ ಬಾಬುನ ಪರಿಚಯವಾಗಿತ್ತು. ಸೆಪ್ಟೆಂಬರ್ 16ರಂದು ನಸುಕಿನ ಜಾವ ಯುವತಿಯ ರೂಮ್‌ಗೆ ಹೋಗಿದ್ದ ಆರೋಪಿ, ಲೈಂಗಿಕವಾಗಿ ಸಹಕರಿಸುವಂತೆ ಒತ್ತಾಯಿಸಿದ್ದ. ಸಮ್ಮತಿಸದಿದ್ದಾಗ ಚಾಕುವಿನಿಂದ ಆಕೆಯ ಬೆನ್ನಿಗೆ ಇರಿದು ಗಾಯಗೊಳಿಸಿದ್ದ. ಬಳಿಕ ಯುವತಿಯ ಖಾಸಗಿ ಫೋಟೋ ಕ್ಲಿಕ್ಕಿಸಿಕೊಂಡಿದ್ದ ಆರೋಪಿ, 70 ಸಾವಿರ ರೂ. ಹಣಕ್ಕೆ ಬೇಡಿಕೆಯಿಟ್ಟಿದ್ದ. ಅಷ್ಟು ಹಣ ಇಲ್ಲ ಎಂದಾಗ ಆಕೆಯ ಮೊಬೈಲ್…
ಬೆಂಗಳೂರು : ರಾಜ್ಯದಲ್ಲಿ ಇದೇ ಸೆಪ್ಟೆಂಬರ್ 22ರಂದು ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗಲಿದ್ದು, ಈ ವಿಚಾರವಾಗಿ ನಿನ್ನೆ ಹಾಗೂ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತ್ಯೇಕ ಸಭೆ ನಡೆಯಿತು. ಇದೀಗ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಯಾವುದೇ ಕಾರಣಕ್ಕೂ ಮುಂದೂಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಬೆಂಗಳೂರಲ್ಲಿ ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಮುಂದೂಡುವುದಿಲ್ಲ. ಸಮೀಕ್ಷೆಯ ಬಗ್ಗೆ ಬಿಜೆಪಿಯವರು ರಾಜಕೀಯವಾಗಿ ಮಾತನಾಡುತ್ತಿದ್ದಾರೆ.ಸಚಿವರು ಕೂಡ ವಿರೋಧಿಸಬೇಕು ಎಂದು ಬಿಜೆಪಿ ಹೇಳುತ್ತಿದೆ ಎಂದು ಆಕ್ರೋಶ ಹೊರಹಾಕಿದರು. ಇನ್ನು ನಿನ್ನ ಸಂಪುಟ ಸಭೆಯಲ್ಲಿ ಹೊಸ ಜಾತಿಗಳನ್ನು ಸೃಷ್ಟಿಸಿರುವುದರಿಂದ ಜಾತಿಗಣತಿ ಗೊಂದಲದ ಗೂಡಾಗಿದೆ. ಇದುವರೆಗೆ ವಿಪಕ್ಷ ಬಿಜೆಪಿ ಮಾತ್ರ ಆಕ್ರೋಶ ವ್ಯಕ್ತಪಡಿಸಿತ್ತು. ಆಗೆಲ್ಲಾ ಇದರಲ್ಲಿ ತಪ್ಪೇನಿದೆ? ಮತಾಂತರವಾದವರಿಗೆ ಸವಲತ್ತು ಸಿಗುವುದು ಬೇಡ್ವಾ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದರು. ಆದರೆ ಈಗ ಸ್ವಪಕ್ಷೀಯರಿಂದಲೇ ವಿರೋಧ ವ್ಯಕ್ತವಾಗಿರುವುದರಿಂದ ಹೊಸ ಜಾತಿ ಸೃಷ್ಟಿಗೆ ಬ್ರೇಕ್ ಹಾಕಲು…
ಕೊಪ್ಪಳ : ಕೊಪ್ಪಳದಲ್ಲಿ ಜಮೀನು ವಿಚಾರಕ್ಕೆ ವೃದ್ದೆಗೆ ರಕ್ತ ಬರುವಂತೆ ಹಲ್ಲೆ ನಡೆಸಲಾಗಿದೆ. ಇಬ್ಬರು ಯುವಕರು ವೃದ್ದೆ ರತ್ನಮ್ಮ ಎನ್ನುವವರ ಮೇಲೆ ಹಲ್ಲೆ ಮಾಡಿದ್ದಾರೆ. ಚಂದ್ರಪ್ಪ ಮತ್ತು ಉಡಚನ್ನಪ್ಪ ಎಂಬ ಯುವಕರು ವೃದ್ದೆ ರತ್ನಮ್ಮ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಕೊಪ್ಪಳ ತಾಲೂಕಿನ ತಿಗರಿ ಎಂಬ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ರತ್ನಮ್ಮಗೆ ಸೇರಿದ ಜಮೀನಿನ ಪಕ್ಕ ಚಂದ್ರಪ್ಪ ಅವರ ಜಾಮೀನು ಇರುತ್ತೆ ಜಮೀನು ಒತ್ತುವರಿ ಆಗಿದೆ ಎಂದು ಮಾತಿನ ಚಕಮಕಿ ನಡೆಯುತ್ತದೆ. ಈ ಸಂದರ್ಭ ವೃದ್ದೆ ರತ್ನಮ್ಮ ಮೇಲೆ ಬಾಯಲ್ಲಿ ರಕ್ತ ಬರುವ ಹಾಗೆ ಹಲ್ಲೆ ನಡೆಸಲಾಗಿದೆ. ಆಗ ರತ್ನಮ್ಮ ನಿಮ್ಮ ವಿರುದ್ಧ ದೂರು ಕೊಡುತ್ತೇನೆ ಅಂದಾಗ ಪೊಲೀಸ್ ಠಾಣೆ ನಮ್ಮದೇ ಇದೆ ಅಂತ ದಮ್ಕಿ ಬೇರೆ ಹಾಕಿದ್ದಾರೆ.









