Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಿರಿಯ ವಯಸ್ಸಿನಲ್ಲೇ ತಂಬಾಕು ಮತ್ತು ಧೂಮಪಾನದ ವ್ಯಸನಕ್ಕೆ ಒಳಗಾಗುತ್ತಿರುವವರ ಸಂಖ್ಯೆ ದಿನೇದಿನೆ ಹೆಚ್ಚುತ್ತಿದ್ದು, ಇದು ಯುವ ಜನರಲ್ಲಿ ಕ್ಯಾನ್ಸರ್ ಪ್ರಕರಣಗಳ ಗಣನೀಯ ಏರಿಕೆಗೆ ಕಾರಣವಾಗುತ್ತಿದೆ ಎಂದು ಬೆಂಗಳೂರಿನ ಪ್ರಸಿದ್ಧ ಕಿಡ್ವಾಯಿ ಆಸ್ಪತ್ರೆಯ ವೈದ್ಯರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಯುವ ಪೀಳಿಗೆಯಲ್ಲಿ ಪ್ರಮುಖವಾಗಿ ನಾಲಿಗೆ, ಬಾಯಿ ಹಾಗೂ ಲಿವರ್ (ಯಕೃತ್) ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗಿ ಪತ್ತೆಯಾಗುತ್ತಿವೆ. ಇದರೊಂದಿಗೆ, ಸಿಗರೇಟ್‌ಗೆ ಪರ್ಯಾಯ ಮತ್ತು ಸುರಕ್ಷಿತ ಎಂದು ಭಾವಿಸಲಾಗಿರುವ ‘ವೇಪಿಂಗ್’ (ಇ-ಸಿಗರೇಟ್) ಕೂಡ ಶ್ವಾಸಕೋಶಕ್ಕೆ ಅಷ್ಟೇ ಭೀಕರ ಅಪಾಯವನ್ನು ತಂದೊಡ್ಡುತ್ತಿದೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಸಾಮಾನ್ಯವಾಗಿ ತಂಬಾಕು ಮತ್ತು ಧೂಮಪಾನದ ಹಾನಿಕಾರಕ ಪರಿಣಾಮಗಳು ದೇಹದ ಮೇಲೆ ತಕ್ಷಣವೇ ಗೋಚರಿಸುವುದಿಲ್ಲ. ಈ ಹಿಂದೆ ತಂಬಾಕು ಸಂಬಂಧಿತ ಕ್ಯಾನ್ಸರ್‌ಗಳು ಸುಮಾರು 15 ರಿಂದ 20 ವರ್ಷಗಳ ನಿರಂತರ ಬಳಕೆಯ ನಂತರ, ಅಂದರೆ 54 ವರ್ಷ ದಾಟಿದ ಹಿರಿಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದವು. ಆದರೆ, ಪ್ರಸ್ತುತ ದಿನಗಳಲ್ಲಿ ಬದಲಾದ ಜೀವನಶೈಲಿ ಹಾಗೂ ಪಾಶ್ಚಿಮಾತ್ಯ ಸಂಸ್ಕೃತಿಯ ಪ್ರಭಾವದಿಂದಾಗಿ…

Read More

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಮಹತ್ವದ ಬೆಳವಣಿಗೆಯೊಂದರಲ್ಲಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ನೂತನ ನಾಯಕರಾಗಿ ಡಿ.ಕೆ. ಶಿವಕುಮಾರ್ ಅಧಿಕೃತವಾಗಿ ಆಯ್ಕೆಯಾಗಿದ್ದಾರೆ. ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಿರ್ಣಾಯಕ ಸಭೆಯಲ್ಲಿ, ಹಿರಿಯ ನಾಯಕ ಸಿದ್ದರಾಮಯ್ಯ ಅವರು ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ನೂತನ ಶಾಸಕಾಂಗ ಪಕ್ಷದ ನಾಯಕರೆಂದು ಘೋಷಿಸಿದರು. ಸಭೆಯಲ್ಲಿದ್ದ ಎಲ್ಲಾ ನೂತನ ಶಾಸಕರು ಈ ನಿರ್ಧಾರವನ್ನು ಸರ್ವಾನುಮತದಿಂದ ಸ್ವಾಗತಿಸಿದರು. ಬುಧವಾರ ಸಂಜೆ ಶುಭ ಮುಹೂರ್ತ: ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ, ಡಿ.ಕೆ. ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ದಿನಾಂಕ ಮತ್ತು ಸಮಯ ನಿಗದಿಯಾಗಿದೆ. ಬರುವ ಬುಧವಾರದಂದು ಅವರು ಅಧಿಕೃತವಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ತೀವ್ರವಾಗಿ ನಂಬುವ ಹಾಗೂ ಅವರ ಆರಾಧ್ಯ ದೈವವಾಗಿರುವ ‘ಅಜ್ಜಯ್ಯನ ಮಠ’ದ ಸೂಚನೆಯ ಪ್ರಕಾರವೇ ಈ ಮುಹೂರ್ತವನ್ನು ನಿಗದಿಪಡಿಸಲಾಗಿದೆ ಎಂದು ತಿಳಿದುಬಂದಿದೆ. ಬುಧವಾರ ಸಂಜೆ 4:05 ರ ಶುಭ ಮುಹೂರ್ತದಲ್ಲಿ ಅವರು…

Read More

ಬೆಂಗಳೂರು: ರಾಜಧಾನಿಯ ವಿಧಾನಸೌಧದಲ್ಲಿ ಇಂದು ನಡೆದ ಮಹತ್ವದ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ಭಾರಿ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ರಾಜ್ಯದ ನೂತನ ಶಾಸಕಾಂಗ ಪಕ್ಷದ ನಾಯಕರಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಈ ಪ್ರಸ್ತಾವನೆಯನ್ನು ಸಭೆಯ ಮುಂದೆ ಮಂಡಿಸಿರುವುದು ವಿಶೇಷವಾಗಿತ್ತು. ಸಿದ್ದರಾಮಯ್ಯ ಪ್ರಸ್ತಾವನೆ – ಹೈಕಮಾಂಡ್ ಅನುಮೋದನೆ: ವಿಧಾನಸೌಧದ ಸಭಾಂಗಣದಲ್ಲಿ ಜಮಾಯಿಸಿದ್ದ ಪಕ್ಷದ ಎಲ್ಲಾ ನೂತನ ಶಾಸಕರ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಪಿಸಿದರು. ಸಿಎಂ ಅವರ ಈ ಪ್ರಸ್ತಾವನೆಗೆ ಸಭೆಯಲ್ಲಿದ್ದ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (AICC) ಉಸ್ತುವಾರಿಗಳು ಹಾಗೂ ವೀಕ್ಷಕರಾದ ಜಯರಾಮ್ ರಮೇಶ್ ಮತ್ತು ಕೆ.ಸಿ. ವೇಣುಗೋಪಾಲ್ ಅವರು ತಕ್ಷಣವೇ ಹಸಿರು ನಿಶಾನೆ ತೋರಿ, ಅಧಿಕೃತ ಅನುಮೋದನೆ ನೀಡಿದರು. ಹಿರಿಯ ಹಾಗೂ ಯುವ ನಾಯಕರ ದಂಡು: ಈ ಅತ್ಯಂತ ಪ್ರಮುಖ ರಾಜಕೀಯ ಸಭೆಯಲ್ಲಿ ಸರ್ಕಾರದ ಹಿರಿಯ ಸಚಿವರು…

Read More

ಬೆಂಗಳೂರು: ರಾಜಧಾನಿಯ ರಾಜಕೀಯ ವಲಯದಲ್ಲಿ ಇಂದು ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ವಿಧಾನಸೌಧದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ಪ್ರಮುಖ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯ ರಾಜಕಾರಣದ ಮುಂದಿನ ದಿಕ್ಸೂಚಿಯಂತಿರುವ ಈ ಸಭೆಯಲ್ಲಿ, ಕೆಪಿಸಿಸಿ ಅಧ್ಯಕ್ಷ ಹಾಗೂ ಹಾಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಸಭೆಯ ಅತ್ಯಂತ ಗಮನಾರ್ಹ ಕ್ಷಣವೆಂದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಖುದ್ದಾಗಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಅಧಿಕೃತವಾಗಿ ಘೋಷಿಸಿದ್ದು. ವೇದಿಕೆಯ ಮೇಲಿದ್ದ ಸಿದ್ದರಾಮಯ್ಯ ಅವರು, “ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್” ಎಂದು ಪ್ರಕಟಿಸುತ್ತಿದ್ದಂತೆ ಇಡೀ ಸಭಾಂಗಣದಲ್ಲಿ ಶಾಸಕರ ಕರತಾಡನ ಮತ್ತು ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಈ ನಿರ್ಧಾರವು ಪಕ್ಷದೊಳಗಿನ ಒಗ್ಗಟ್ಟನ್ನು ಮತ್ತಷ್ಟು ಬಲಪಡಿಸಿದೆ. ಶಾಸಕರ ಹಾಜರಾತಿ ಪ್ರಕ್ರಿಯೆ ಇದಕ್ಕೂ ಮುನ್ನ, ಸಭೆಯ ಅಧಿಕೃತ ಪ್ರಕ್ರಿಯೆಗಳು ಅತ್ಯಂತ ವ್ಯವಸ್ಥಿತವಾಗಿ ಆರಂಭಗೊಂಡವು. ಸಭೆಗೆ ಆಗಮಿಸಿದ ಎಲ್ಲಾ ಕಾಂಗ್ರೆಸ್ ಶಾಸಕರ ಸಹಿ ಮತ್ತು ಹಾಜರಾತಿ ಪಡೆದುಕೊಳ್ಳುವ…

Read More

ಬೆಂಗಳೂರು : ನೈರುತ್ಯ ಮುಂಗಾರು ಕರ್ನಾಟಕಕ್ಕೆ ಪ್ರವೇಶಿಸಿದ್ದು, ದಕ್ಷಿಣ ಒಳನಾಡಿನಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ. ನೈರುತ್ಯ ಮುಂಗಾರು ಮಾಲ್ಡೀವ್ಸ್, ಲಕ್ಷದ್ವೀಪ, ಮತ್ತು ಬಂಗಾಳಕೊಲ್ಲಿಯ ದಕ್ಷಿಣ ಹಾಗೂ ಕೇಂದ್ರ ಭಾಗಗಳಲ್ಲಿ ಮತ್ತಷ್ಟು ಮುನ್ನಡೆದಿದೆ. ಮುಂದಿನ 4-5 ದಿನಗಳಲ್ಲಿ ಕೇರಳ ಮತ್ತು ತಮಿಳುನಾಡಿನ ಕೆಲವು ಭಾಗಗಳಿಗೆ ಮುಂಗಾರು ಪ್ರವೇಶಿಸಲು ಪೂರಕ ವಾತಾವರಣ ನಿರ್ಮಾಣವಾಗಿದೆ. ಬಂಗಾಳಕೊಲ್ಲಿಯಿಂದ ಲಕ್ಷದ್ವೀಪದವರೆಗೆ ಸೃಷ್ಟಿಯಾಗಿರುವ ಸುಳಿಗಾಳಿಯ ಪ್ರಭಾವದಿಂದಾಗಿ ಕರ್ನಾಟಕದಲ್ಲಿ ಮಳೆ ಚುರುಕುಗೊಂಡಿದೆ. ಮುಂದಿನ 24 ರಿಂದ 48 ಗಂಟೆಗಳ ಕಾಲ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು ಮತ್ತು ರಾಮನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಮಳೆಯ ಜೊತೆಗೆ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಮಳೆ ಮತ್ತು ಗಾಳಿಯ ಸಂದರ್ಭದಲ್ಲಿ ಮರಗಳ ಕೆಳಗೆ…

Read More

ಬೆಂಗಳೂರು: ರಾಜಧಾನಿಯ ಶಕ್ತಿ ಕೇಂದ್ರವಾದ ವಿಧಾನಸೌಧದಲ್ಲಿ ಇಂದು ತೀವ್ರ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್ ಪಕ್ಷದ ಮಹತ್ವದ ಶಾಸಕಾಂಗ ಸಭೆ (CLP Meeting) ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಇದಕ್ಕೂ ಮುನ್ನ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದ ತಮ್ಮ ಕೊಠಡಿಯಲ್ಲಿ ವಿಶೇಷ ಪೂಜೆ ನೆರವೇರಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ರಾಜಕೀಯದ ಪ್ರಮುಖ ನಿರ್ಧಾರಗಳು ಹೊರಬೀಳುವ ಮುನ್ನ ಡಿ.ಕೆ. ಶಿವಕುಮಾರ್ ಅವರು ಧಾರ್ಮಿಕ ವಿಧಿವಿಧಾನಗಳಿಗೆ ಶರಣಾಗಿದ್ದಾರೆ. ತಮ್ಮ ಕೊಠಡಿಗೆ ಆಗಮಿಸುತ್ತಿದ್ದಂತೆ ಪೂಜಾ ಕಾರ್ಯಗಳಿಗೆ ಸಿದ್ಧತೆ ಮಾಡಿಕೊಂಡ ಡಿಸಿಎಂ, ಅತ್ಯಂತ ಭಕ್ತಿಭಾವದಿಂದ ದೈವದ ಮೊರೆ ಹೋಗಿರುವುದು ಸದ್ಯ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಏಕಾಂಗಿಯಾಗಿ ನಡೆದ ವಿಶೇಷ ಪೂಜೆ ಡಿ.ಕೆ. ಶಿವಕುಮಾರ್ ಅವರು ತಮ್ಮ ಕೊಠಡಿಯಲ್ಲಿದ್ದ ಆಪ್ತರು, ಬೆಂಬಲಿಗರು ಹಾಗೂ ಭದ್ರತಾ ಸಿಬ್ಬಂದಿ ಸೇರಿದಂತೆ ಎಲ್ಲರನ್ನೂ ಹೊರಗೆ ಕಳುಹಿಸಿ, ಸಂಪೂರ್ಣವಾಗಿ ಏಕಾಂಗಿಯಾಗಿ ಈ ಪೂಜೆಯನ್ನು ನೆರವೇರಿಸಿದರು. ಯಾವುದೇ ಗದ್ದಲವಿಲ್ಲದೆ, ಏಕಾಗ್ರತೆಯಿಂದ ದೇವತಾ ಆರಾಧನೆಯಲ್ಲಿ ತೊಡಗಿಸಿಕೊಳ್ಳಲು ಅವರು ಬಯಸಿದ್ದರಿಂದ ಕೊಠಡಿಯ ಬಾಗಿಲು ಮುಚ್ಚಿ…

Read More

ಬೆಂಗಳೂರು : ನನ್ನ ಸಿನಿಯಾರಿಟಿಗೆ ತಕ್ಕಂತೆ ಸಚಿವ ಸ್ಥಾನ ನೀಡಲಿ. ನಿರ್ದಿಷ್ಟವಾಗಿ ಇಂತಹದ್ದೇ ಖಾತೆ ನೀಡಿ ಎಂದು ಹೇಳುವುದಿಲ್ಲ. ಹಿರಿತನ‌ದ ಮೇಲೆ ಖಾತೆ ನೀಡಲಿ ಎಂದು ವಿಧಾನಸೌಧದಲ್ಲಿ ಹಿರಿಯ ಶಾಸಕ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರುಮ, ನಾನು ಎಂಟು ಬಾರಿ ಸಚಿವನಾಗಿದ್ದೇನೆ. ಐದು ಬಾರಿ ಶಾಸಕನಾಗಿದ್ದೇನೆ. ಸಾರಿಗೆ, ಗೃಹ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆಗಳ ಸಚಿವನಾಗಿ ಕಾರ್ಯನಿರ್ವಹಿಸಿದ್ದೇನೆ.. ಇದೀಗ ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಹಿರಿತನ ಆಧಾರದ ಮೇಲೆ ಸಚಿವ ಸ್ಥಾನ ನೀಡುವಂತೆ ಕೇಳಿದ್ದೇನೆ. ನಿರ್ದಿಷ್ಟವಾಗಿ ಇಂತಹದ್ದೇ ಖಾತೆ ನೀಡಿ ಎಂದು ಕೇಳಿಲ್ಲ. ಯಾವುದೇ ಖಾತೆ ಕೊಟ್ಟರೂ ಕೆಲಸ ಮಾಡುವೆ ಎಂದರು. ಇಂದಿನ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ಸಚಿವ ಸಂಪುಟದಲ್ಲಿ ಯಾರೆಲ್ಲಾ ಇರುತ್ತಾರೆ ಎಂಬುದರ ಬಗ್ಗೆ ಇಂದು ಚರ್ಚೆಯಾಗಲಿದೆ ಎಂದ ಅವರು, ಕುರ್ಚಿ ಕಾಳಗ ಸಂಬಂಧ ಸುಗಮವಾಗಿ ಅಧಿಕಾರ ಹಂಚಿಕೆಯಾಗಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ರಾಮಲಿಂಗಾರೆಡ್ಡಿ, ಒಪ್ಪಂದದಂತೆ ಅಧಿಕಾರ…

Read More

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪಟ್ಟಾಭಿಷೇಕಕ್ಕೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಬರುವ ಜೂನ್ 3ರ ಬುಧವಾರದಂದು ಡಿ.ಕೆ. ಶಿವಕುಮಾರ್ ಅವರು ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ. ಈ ಮೂಲಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಮತ್ತು ನೂತನ ನಾಯಕತ್ವದ ಕುರಿತಾದ ದೀರ್ಘಾವಧಿಯ ಚರ್ಚೆಗಳಿಗೆ ಹಾಗೂ ಕಾಯುವಿಕೆಗೆ ತೆರೆಬೀಳುವ ಲಕ್ಷಣಗಳು ಕಾಣಿಸುತ್ತಿವೆ. ರಾಜಭವನದಲ್ಲಿ ಜೂನ್ 3ರ ಸಂಜೆ 5:15ಕ್ಕೆ ಸರಿಯಾಗಿ ಡಿ.ಕೆ. ಶಿವಕುಮಾರ್ ಅವರ ಪ್ರಮಾಣವಚನ ಕಾರ್ಯಕ್ರಮ ಆಯೋಜನೆಗೊಂಡಿದೆ. ಜ್ಯೋತಿಷ್ಯ ಶಾಸ್ತ್ರ ಹಾಗೂ ಮುಹೂರ್ತದ ಪ್ರಕಾರ ಅತ್ಯಂತ ಶುಭದಾಯಕ ಎನ್ನಲಾದ ‘ರಿಜಿಸ್ಟರ್ ಲಗ್ನ’ದಲ್ಲಿ ಅವರು ಪ್ರಮಾಣವಚನ ಸ್ವೀಕರಿಸುತ್ತಿರುವುದು ವಿಶೇಷವಾಗಿದೆ. ಈ ಭವ್ಯ ಕಾರ್ಯಕ್ರಮಕ್ಕೆ ರಾಜಭವನದ ಆವರಣ ಸಜ್ಜಾಗುತ್ತಿದ್ದು, ರಾಜಕೀಯ ಗಣ್ಯರು ಹಾಗೂ ಅಭಿಮಾನಿಗಳು ಸಾಕ್ಷಿಯಾಗಲಿದ್ದಾರೆ. ಡಿ.ಕೆ. ಶಿವಕುಮಾರ್ ಅವರೊಬ್ಬರೇ ಅಲ್ಲದೆ, ಅವರ ಜೊತೆಗೆ ಒಟ್ಟು 14 ಮಂದಿ ಹಿರಿಯ ಹಾಗೂ ಪ್ರಮುಖ ನಾಯಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.…

Read More

ಬೆಂಗಳೂರು:* ರಾಜ್ಯ ಸರ್ಕಾರದ ಸಂಪುಟ ಪುನರಚನೆ ವೇಳೆಯಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯವನ್ನು ನೀಡಬೇಕೆಂದು *ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ – ರಾಷ್ಟ್ರೀಯ ಯುವ ಘಟಕ* ಒತ್ತಾಯಿಸಿದೆ. ಬಸವಣ್ಣನವರ ಶಾಶ್ವತ ಲೌಕಿಕ ಮತ್ತು ಸಮಾನತಾವಾದಿ ತತ್ವಶಾಸ್ತ್ರದಿಂದ ಪ್ರೇರಿತವಾದ ನಮ್ಮ ಸಮುದಾಯವು ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಸಮಗ್ರ ಆಡಳಿತಕ್ಕೆ ಒತ್ತು ನೀಡುವ ಕಾಂಗ್ರೆಸ್ ಸರ್ಕಾರಕ್ಕೆ ನಿರ್ಣಾಯಕ ಬೆಂಬಲ ನೀಡಿದೆ. ರಾಜ್ಯದ ಅತಿದೊಡ್ಡ ಸಮುದಾಯವಾಗಿರುವ ನಾವು, 37 ಲಿಂಗಾಯತ ಶಾಸಕರೊಂದಿಗೆ ಕರ್ನಾಟಕದಾದ್ಯಂತ ಪಕ್ಷಕ್ಕೆ ಭಾರೀ ಬೆಂಬಲ ಒದಗಿಸಿದ್ದೇವೆ. ಈ ಹಿನ್ನೆಲೆಯಲ್ಲಿ ಮುಂಬರುವ ಸಂಪುಟ ಪುನರಚನೆಯಲ್ಲಿ ನಮ್ಮ ಸಮುದಾಯದ ಹೆಚ್ಚಿನ ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂದು ಯುವ ಘಟಕ ಆಗ್ರಹಿಸಿದೆ. ಈ ಕುರಿತು ಆಯೋಜಿಸಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ *ರಾಷ್ಟ್ರೀಯ ಯುವ ಘಟಕದ ಅಧ್ಯಕ್ಷರಾದ ವೆಂಕಟರೆಡ್ಡಿ ಡಿ. ಪಾಟೀಲ್*, “ಹಿಂದಿನ ಕ್ಯಾಬಿನೆಟ್‌ನಲ್ಲಿ ನಮ್ಮ ಸಮುದಾಯದ ಏಳು ಮಂತ್ರಿಗಳು ಅತ್ಯುತ್ತಮವಾಗಿ ಸಾರ್ವಜನಿಕ ಸೇವೆ ನೀಡಿದ್ದಾರೆ. ರಾಜ್ಯದ ಅಭಿವೃದ್ಧಿ, ಪರಿಸರ ರಕ್ಷಣೆ, ದುರ್ಬಲರ ಸಬಲೀಕರಣ…

Read More

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಅಂದುಕೊಂಡಂತೆ ಮುಂಬರುವ ಜೂನ್ 3ರ ಬುಧವಾರದಂದು ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಈ ಮಹತ್ವದ ಬೆಳವಣಿಗೆಯಿಂದಾಗಿ ಕೈ ಪಾಳಯದಲ್ಲಿ ಹಾಗೂ ಅವರ ಅಭಿಮಾನಿಗಳಲ್ಲಿ ಸಡಗರ ಮನೆಮಾಡಿದೆ. ರಾಜಭವನದಲ್ಲಿ ಈ ಭವ್ಯ ಕಾರ್ಯಕ್ರಮ ಆಯೋಜನೆಯಾಗಿದ್ದು, ಸಂಜೆ 5:15ರ ವೃಶ್ಚಿಕ ಲಗ್ನದಲ್ಲಿ ಡಿ.ಕೆ. ಶಿವಕುಮಾರ್ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಪ್ರಖ್ಯಾತ ವಾಸ್ತು ಗುರೂಜಿ ಆರಾಧ್ಯ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಈ ಲಗ್ನವು ಅತ್ಯಂತ ಶುಭದಾಯಕವಾಗಿದ್ದು, ಅವರ ರಾಜಕೀಯ ಭವಿಷ್ಯಕ್ಕೆ ಮತ್ತಷ್ಟು ಶಕ್ತಿ ತುಂಬಲಿದೆ ಎಂದು ಜ್ಯೋತಿಷ್ಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ. ಇನ್ನು ಈ ಸಮಾರಂಭದಲ್ಲಿ ಕೇವಲ ಡಿ.ಕೆ. ಶಿವಕುಮಾರ್ ಮಾತ್ರವಲ್ಲದೆ, ಅವರೊಂದಿಗೆ ಸರಿಸುಮಾರು 14 ನೂತನ ಸಚಿವರು ಕೂಡ ಪ್ರಮಾಣವಚನ ಸ್ವೀಕರಿಸುವ ಬಲವಾದ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಸಚಿವ ಸಂಪುಟ ಸೇರಲಿರುವ ಶಾಸಕರ ಪಟ್ಟಿ…

Read More