Subscribe to Updates
Get the latest creative news from FooBar about art, design and business.
Author: kannadanewsnow05
ದಾವಣಗೆರೆ : ಮರಾಠ ಎಂದರೆ ಮುಸ್ಲಿಂ ವಿರೋಧಿಗಳು ಎಂದು ಯುವ ಜನತೆ ತಲೆಯಲ್ಲಿ ತುಂಬಿದೆ. ಯುವಜನಾಂಗ ಸ್ವಲ್ಪ ಶಾಂತ ಮನಸ್ಸಿನಿಂದ ಶಿವಾಜಿಯ ಬಗ್ಗೆ ಓದಬೇಕು ಶಿವಾಜಿ ಮಹಾರಾಜ ಮುಸ್ಲಿಂ ವಿರೋಧಿ ಅಲ್ಲ ಎಂದು ದಾವಣಗೆರೆಯಲ್ಲಿ ತುಳಜಾಭವಾನಿ ಭವನ ಉದ್ಘಾಟನಾ ಸಮಾರಂಭದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿಕೆ ನೀಡಿದರು. ಬಹುತೇಕರು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ವಿಚಾರ ಬಂದರೂ ನಂಬುತ್ತಾರೆ. ಶಿವಾಜಿ ಜೊತೆ ಯಾರಿದ್ದಾರೆಂದು ಕೆಲ ಮುಸ್ಲಿಂ ನಾಯಕರ ಹೆಸರನ್ನು ಸಂತೋಷ್ ಲಾಡ್ ಇದೆ ವೇಳೆ ತಿಳಿಸಿದರು.ಪ್ರತಿಯೊಬ್ಬರು ಇಂದು ಆಸ್ತಿ ಹಕ್ಕು ಪಡೆಯಲು ಕಾರಣ ಡಾ.ಅಂಬೇಡ್ಕರ್. ಬಿ.ಆರ್ ಅಂಬೇಡ್ಕರ್ ಒಂದು ಜಾತಿ ಸಮುದಾಯಕ್ಕೆ ಸೀಮಿತರಾದವರಲ್ಲ. ಪ್ರತಿಯೊಬ್ಬರು ತಮ್ಮ ಮನೆಗಳಲ್ಲಿ ಅಂಬೇಡ್ಕರ್ ಫೋಟೋ ಇಟ್ಟುಕೊಳ್ಳಬೇಕು ಎಂದು ದಾವಣಗೆರೆಯಲ್ಲಿ ಕಾರ್ಮಿಕ ಇಲಾಖೆ ಸಚಿವ ಸಂತೋಷ ಲಾಡ್ ಹೇಳಿಕೆ ನೀಡಿದರು.
ಶಿವಮೊಗ್ಗ : ಶಿವಮೊಗ್ಗದ ತುಂಗಾ ನದಿಯ ಹಿನ್ನೀರಿನಲ್ಲಿ ಮೂವರ ಮೃತ ದೇಹ ಪತ್ತೆಯಾಗಿವೆ. ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆಯ ಮೃತ ದೇಹಗಳು ಪತ್ತೆಯಾಗಿವೆ. ಕೊಳೆತ ಸ್ಥಿತಿಯಲ್ಲಿ ಮೂವರು ಅಪರಿಚಿತ ಮೃತ ದೇಹಗಳು ಪತ್ತೆಯಾಗಿವೆ. ಸಕ್ರೆಬೈಲ್ ಆನೆ ಬಿಡಾರದ 10n3 ಮೈಲಿಕಲ್ಲಿನ ಬಳಿ ಮೂವರು ಅಪರಿಚಿತ ಮೃತ ದೇಹಗಳು ಪತ್ತೆಯಾಗಿವೆ. ಶಿವಮೊಗ್ಗ ತಾಲೂಕಿನ 10ನೇ ಮೈಲಿಕಲ್ಲಿನ ಬ್ಯಾಕ್ ವಾಟರ್ ಬಳಿ ಮೃತ ದೇಹಗಳು ಪತ್ತೆಯಾಗಿದ್ದು ಘಟನಾ ಸ್ಥಳಕ್ಕೆ ತುಂಗಾನಗರ ಠಾಣೆಯ ಪೊಲೀಸರುಪೇಟೆ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗುತ್ತಿದೆ.
ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ತಡರಾತ್ರಿ ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯ ಮೇಲೆ ನಾಲ್ವರು ಕಾಮುಕರು ಅತ್ಯಾಚಾರ ನಡೆಸಿರುವ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ. ಹೌದು ಬೆಂಗಳೂರಲ್ಲಿ ನಾಲ್ವರು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದು, ಕೋರಮಂಗಲದಲ್ಲಿ ತಡರಾತ್ರಿ ಅತ್ಯಾಚಾರ ನಡೆದಿದೆ.ತಡರಾತ್ರಿ 12 ಗಂಟೆಗೆ ಸುಮಾರಿಗೆ ನಾಲ್ವರು ಕಾಮುಕರು ಮಹಿಳೆಯನ್ನು ಭೇಟಿಯಾಗಿದ್ದರು ನಂತರ ಹಳೆ ಪರಿಚಯ ರೀತಿ ಮಾತನಾಡಿ ಮಹಿಳೆಯನ್ನು ನಾಲ್ವರು ದುಷ್ಕರ್ಮಿಗಳು ಊಟಕ್ಕೆ ಎಂದು ಮುಚ್ಚಿದ ಹೋಟೆಲ್ ಟೆರೇಸ್ ಮೇಲೆ ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾರೆ. ಬಳಿಕ ಮಹಿಳೆಯ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಬೆಳಿಗ್ಗೆ 5 ಗಂಟೆಗೆ ಮೊಬೈಲ್ ಪರ್ಸ ಕಿತ್ತುಕೊಂಡು ಕಳಿಸಿದ್ದರು. ನಂತರ 112 ಗೆ ಫೋನ್ ಮಾಡಿ ಸಂತ್ರಸ್ತ ಮಹಿಳೆ ಮಾಹಿತಿ ನೀಡಿದಳು. ಸಾಮೂಹಿಕ ಅತ್ಯಾಚಾರ ಎಂದು ಕೋರಮಂಗಲ ಪೊಲೀಸರು ಇದೀಗ ದೂರು ದಾಖಲಿಸಿಕೊಂಡಿದ್ದಾರೆ. ಘಟನೆ ಸಂಭಂದ ಮೂರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಗಾಳ ಹಾಗೂ ಉತ್ತರ ಪ್ರದೇಶದ ಮೂಲದ ಅಜಿತ್ ವಿಶ್ವಾಸ ಹಾಗೂ…
ಮೈಸೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ 5 ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಅದರಲ್ಲಿ ಶಕ್ತಿ ಯೋಜನೆ ಕೂಡ ಒಂದು. ಆರಂಭದಲ್ಲಿ ಈ ಒಂದು ಶಕ್ತಿ ಯೋಜನೆಯಿಂದ ಸಾಕಷ್ಟು ಸಂಖ್ಯೆಯಲ್ಲಿ ಮಹಿಳೆಯರು ರಾಜ್ಯದ ವಿವಿಧ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿದ್ದರು. ಯೋಜನೆ ಜಾರಿ ಆದಾಗಿನಿಂದ ಇಂದಿನವರೆಗೂ ಮಹಿಳೆಯರು ಬಸ್ಸಿನಲ್ಲಿ ಪ್ರಯಾಣಿಸುವ ಸಂಖ್ಯೆ ಕಡಿಮೆಯಾಗಿಲ್ಲ. ಇದೀಗ ಕೆಎಸ್ಆರ್ಟಿಸಿಯ ಮೈಸೂರು ವಿಭಾಗ ಪುರುಷರಿಗೆ ಸೀಟ್ ಬಿಟ್ಟು ಕೊಡಿ ಎಂದು ಅಧಿಕೃತ ಆದೇಶ ಹೊರಡಿಸಿದೆ. ಹೌದು ಈ ಕುರಿತು KSRTC ಮೈಸೂರು ವಿಭಾಗ ನಗರ ಸಾರಿಗೆ ವಾಹನಗಳಲ್ಲಿನ ಮರುಷರಿಗೆ ಮೀಸಲಿರುವ ಆಸನಗಳಲ್ಲಿ ಮಹಿಳಾ ಪ್ರಯಾಣಿಕರು ಕುಳಿತುಕೊಳ್ಳುತ್ತಿದ್ದು, ಪುರುಷ ಪ್ರಯಾಣಿಕರಿಗೆ ಆಸನಗಳು ಸಿಗುವುದಿಲ್ಲವೆಂದು ಶ್ರೀ ವಿಷ್ಣುವರ್ಧನ.ಎಸ್ ಎಂಬವರು ಕೇಂದ್ರ ಕಚೇರಿಗೆ ಉಲ್ಲೇಖದಂತೆ ದೂರು ಸಲ್ಲಿಸಿರುವುದು ಸರಿಯಷ್ಟೆ. ಅದರಂತೆ ತಮ್ಮ ಘಟಕಗಳಿಂದ ಕಾರ್ಯಾಚರಣೆಯಾಗುವ ಎಲ್ಲಾ ವಾಹನಗಳಲ್ಲಿ ಪುರುಷ ಪ್ರಯಾಣಿಕರಿಗೆ ಮೀಸಲಿಸಿರುವ ಆಸನಗಳಲ್ಲಿ ಪುರುಷ ಪ್ರಯಾಣಿಕರು ಕುಳಿತು ಪ್ರಯಾಣ ಮಾಡಲು ಕ್ರಮಕೈಗೊಳ್ಳುವಂತೆ ಎಲ್ಲಾ ಚಾಲನಾ…
ಬೆಂಗಳೂರು : ನಿನ್ನೆ ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಭಾಗವಹಿಸಿ OPS ಜಾರಿ ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿರುವುದು ಸಂತಸ ತಂದಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರ ಹಾಗೂ ಜಿಲ್ಲೆ-ತಾಲ್ಲೂಕು ಶಾಖೆಗಳ ನಿರ್ದೇಶಕರು-ಪದಾಧಿಕಾರಿಗಳ ಸಮಾವೇಶವು ನಿರೀಕ್ಷೆಗೂ ಮೀರಿ ಯಶಸ್ಸನ್ನು ಕಂಡಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ತಿಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್‌ರವರು ಭಾಗವಹಿಸಿ, ಓಪಿಎಸ್ ಜಾರಿಗೊಳಿಸುವ ಸ್ಪಷ್ಟ ಸಂದೇಶ ನೀಡಿರುವುದು ರಾಜ್ಯ ಎನ್‌ಪಿಎಸ್ ನೌಕರರಿಗೆ ಅತೀವ ಸಂತಸ ತಂದಿದೆ. ಇದರ ಜೊತೆ ಸರ್ಕಾರಿ ನೌಕರರಿಗೆ ಉಚಿತ ಆರೋಗ್ಯ ಯೋಜನೆ ಶೀಘ್ರ ಜಾರಿಗೊಳಿಸುವ ಭರವಸೆಯು ನೌಕರರಿಗೆ ಸಂತೋಷ…
ಮೈಸೂರು : ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಕಿಡಿಗೇಡಿಗಳು ಬೆಟ್ಟಕ್ಕೆ ಬೆಂಕಿ ಹಚ್ಚಿರುವ ಪರಿಣಾಮ ಸದ್ಯ ಚಾಮುಂಡಿ ಬೆಟ್ಟದಲ್ಲಿ ಬೆಂಕಿ ಹತ್ತಿ ಉರಿಯುತ್ತಿರುವ ಘಟನೆ ವರದಿಯಾಗಿದೆ. ಹೌದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬೆಂಕಿ ಬಿದ್ದಿದ್ದು, ಚಾಮುಂಡಿ ಬೆಟ್ಟಕ್ಕೆ ಕಿಡಿಗೇಡಿಗಳು ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದೆ. ಬೇಸಿಗೆ ಆರಂಭವಾಗಿರುವುದರಿಂದ ಬೆಟ್ಟ ಒಣಗಿತ್ತು.ಕಿಡಿ ಗಿಡಿಗಳು ಬೆಂಕಿ ಹಾಕಿದ್ದರಿಂದ ಈಗ ಬೆಂಕಿ ಆವರಿಸಿದೆ. ಕೂಡಲೇ ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸಲು ಮುಂದಾಗಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ OPS ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಶೀಘ್ರದಲ್ಲಿ OPS ಜಾರಿ ಮಾಡಿಯೇ ತೀರುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಅಲ್ಲದೇ ಸರ್ಕಾರಿ ನೌಕರರ ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರು ಡಿಕೆ, ಡಿಕೆ ಎಂದು ಘೋಷಣೆ ಕೂಗಿದಾಗ ನನ್ನ ನೇತೃತ್ವದಲ್ಲಿ ಚುನಾವಣೆ ನಡೆದಾಗ ಈ ಪದ ಹೇಳಿ ಎಂದು ತಾವು ಮುಖ್ಯಮಂತ್ರಿ ಆಗುವ ಕನಸನ್ನು ಪರೋಕ್ಷವಾಗಿ ಹೇಳಿದ್ದಾರೆ ಎನ್ನಲಾಗಿದೆ. ಎನ್‌ಪಿಎಸ್ ಒಪಿಎಸ್ ಬಗ್ಗೆ ಡಿಕೆ ಶಿವಕುಮಾರ್ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸರ್ಕಾರಿ ನೌಕರರ ಸಮಾವೇಶದಲ್ಲಿ ಮಾತನಾಡಿ, ಶೀಘ್ರದಲ್ಲಿ OPS ಜಾರಿ ಮಾಡುತ್ತೇವೆ ಎಂದಾಗ ಸರಕಾರಿ ನೌಕರರು ಫುಲ್ ಖುಷ್ ಆಗಿದ್ದಾರೆ. ಈ ವೇಳೆ ಡಿಕೆ ಡಿಕೆ ಅಂತ ಸರ್ಕಾರಿ ನೌಕರರು ಜೋರಾಗಿ ಕೂಗಿದ್ದಾರೆ. ನೌಕರರ ಮಾತಿಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ನಾಯಕತ್ವದ ಬಾಣ ಬಿಟ್ಟಿದ್ದು, ಮುಂದೇ ನಾನು ಚುನಾವಣೆಗೆ ನಿಂತಾಗ ಡಿಕೆ ಅಂತ ಪದ ಬಳಸಿ, ನನ್ನ ನೇತೃತ್ವದಲ್ಲಿ ಚುನಾವಣೆ ನಡೆದಾಗ ಈ ಪದವನ್ನು ಹೇಳಿ ಎಂದು ಡಿಸಿಎಂ…
ಮಂಡ್ಯ : ಜಮೀನಿಗೆ ನೀರು ಹಾಯಿಸಲು ಹೋದಾಗ ರೈತನ ಮೇಲೆ ಏಕಾಏಕಿ ಚಿರತೆ ದಾಳಿ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಕೆಸ್ತೂರು ಗ್ರಾಮದಲ್ಲಿ ರೈತನ ಮೇಲೆ ಚಿರತೆ ದಾಳಿ ಮಾಡಿದ್ದು, ಜಮೀನಿಗೆ ತೆರಳಿದ್ದ ವೇಳೆ ಚಿರತೆ ದಾಳಿ ಮಾಡಿದೆ. ಚಿರತೆ ದಾಳಿಗೆ ರೈತ ರಾಮು ಬೆನ್ನು, ಕುತ್ತಿಗೆ ಭಾಗಕ್ಕೆ ಗಂಭೀರವಾದ ಗಾಯಗಳಾಗಿವೆ. ಜಮೀನಿಗೆ ನೀರು ಹಾಯಿಸಲು ಹೋಗಿದ್ದಾಗ ರಾಮು ಮೇಲೆ ಚಿರತೆ ದಾಳಿ ಮಾಡಿದೆ. ಮದ್ದೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ರೈತ ರಾಮು ಪ್ರಾಣಪಾಯದಿಂದ ಪಾರಾಗಿದ್ದಾನೆ.
ಮೈಸೂರು : ಮುಡಾದಲ್ಲಿ ಅಕ್ರಮ ಎಸಗಿದ ಯಾರನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹೇಳಿಕೆ ನೀಡಿದರು. ಇಂದು ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳು ಈಗ ಮಾತನಾಡಿದ ಅವರು 50:50 ಅನುಪಾತದಲ್ಲಿ ಪರಿಹಾರ ನೀಡುವ ಕಾನೂನು ಮುಡಾದಲ್ಲಿ ಇದೆ. ಈ ಕಾನೂನು ಬಿಜೆಪಿ ಅವಧಿಯಲ್ಲು ಇತ್ತು. ಹಾಗಾಗಿ ಪಾರ್ವತಮ್ಮಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪರಿಹಾರ ನೀಡಿದ್ದಾರೆ ಎಂದು ಸಚಿವ ಭೈರತಿ ಸುರೇಶ್ ತಿಳಿಸಿದರು. 50:50 ಅನುಪಾತದಂತೆ ಹಂಚಿಕೆಯಾದ ಸೈಟ್ ಅಕ್ರಮದ ತನಿಖೆ ನಡೆಯುತ್ತಿದೆ ನ್ಯಾ.ಪಿ.ಎನ್ ದೇಸಾಯಿ ಆಯೋಗ ಕೇಸ್ ತನಿಖೆ ನಡೆಸುತ್ತಿದೆ. ತನಿಖೆ ಮುಗಿದ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ. 50:50 ಅನುಪಾತದಲ್ಲಿ ಪರಿಹಾರ ನೀಡುವ ಕಾನೂನು ಮುಡಾದಲ್ಲಿ ಇದೆ. ಆ ಕಾನೂನು ಇಲ್ಲದೆ ಪರಿಹಾರ ಹೇಗೆ ಕೊಡುವುದು? ಇದು ಬಿಜೆಪಿ ಕಾಲದಲ್ಲಿ ಪರಿಹಾರ ನೀಡಿರುವುದಾಗಿದೆ. ಪಾರ್ವತಮ್ಮ ಅವರಿಗೂ ಬೊಮ್ಮಾಯಿ ಅವರೇ ಪರಿಹಾರ ನೀಡಿದ್ದಾರೆ ಎಂದು ನಗರ ಅಭಿವೃದ್ಧಿ ಸಚಿವ ಭೈರತಿ ಸುರೇಶ್ ಹೇಳಿಕೆ ನೀಡಿದರು. ಮುಡಾ ಕೇಸ್…
ಹಾಸನ : ಹಾಸನದಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು ಪತ್ನಿಯ ಮೇಲೆ ಅನುಮಾನಕ್ಕೆ ಪತಿಯೊಬ್ಬ ಪತ್ನಿಯ ಕತ್ತು ಸಿಳಿ ಭೀಕರವಾಗಿ ಕೊಂದು ಬಳಿಕ ಮನೆಗೆ ಬೇಗ ಹಾಕಿಕೊಂಡು ಪರಾರಿಯಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೂಡಿಗೆ ಎಂಬ ಗ್ರಾಮದಲ್ಲಿ ನಡೆದಿದೆ. ಹೌದು ಕೌಟುಂಬಿಕ ಕಲಹದಿಂದ ಪತ್ನಿ ಕತ್ತು ಸೀಳಿ ಭೀಕರವಾಗಿ ಪತಿ ಕೊಲೆಗೈದಿದ್ದಾನೆ. ಹಾಸನದ ಸಕಲೇಶಪುರದ ಹಿರಿಯೂರು ಕೂಡಿಗೆ ಎಂಬಲ್ಲಿ ಈ ಒಂದು ಕೊಲೆ ನಡೆದಿದೆ. ಪತ್ನಿ ಮಂಜುಳಾಳನ್ನು ಹತ್ಯೆಗೈದ ಬಳಿಕ ಪತಿ ಯೋಗೇಶ್ ಮನೆಗೆ ಬೇಗ ಹಾಕಿ ಪರಾರಿ ಆಗಿದ್ದಾನೆ. ಪತ್ನಿ ಮೇಲಿನ ಅನುಮಾನದಿಂದ ಪತಿ ಹತ್ಯೆಗೈದಿರುವ ಶಂಕೆ ಇದೀಗ ವ್ಯಕ್ತವಾಗುತ್ತಿದೆ. ಘಟನೆ ಕುರಿತು ಸಕಲೇಶಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪತಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.