Author: kannadanewsnow05

ಬೆಂಗಳೂರು : ಕೃಷ್ಣಾ ಮೇಲ್ದಂಡೆ ಯೋಜನೆಗೆ ಭೂಸ್ವಾಧೀನಕ್ಕೆ ಇದೀಗ ಸರ್ಕಾರ ಪರಿಹಾರ ನಿಗದಿ ಮಾಡಿದೆ. ಈ ಕುರಿತು ರಾಜ್ಯ ಸರ್ಕಾರ ನಿಗದಿ ಮಾಡಿದ್ದು ವಿಶೇಷ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ರೈತರಿಗೆ ಪರಿಹಾರ ನಿಗದಿ ಮಾಡಿದೆ ಎಂದು ವಿಧಾನಸೌಧದಲ್ಲಿ HK ಪಾಟೀಲ್ ತಿಳಿಸಿದರು. ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಇಂದು ನಡೆದ ವಿಶೇಷ ಸಂಪುಟ ಸಭೆಯಲ್ಲಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಉಪಸ್ಥಿತರಿದ್ದರು . ಒಣ ಭೂಮಿಗೆ ಎಕರೆಗೆ 30 ಲಕ್ಷ ರೂಪಾಯಿ ಪರಿಹಾರ ನಿಗದಿ ಮಾಡಿದೆ. ಅಲ್ಲದೇ ಕೃಷಿ ಭೂಮಿಗೆ 40 ಲಕ್ಷ ರೂಪಾಯಿ ಪರಿಹಾರ ನಿಗದಿ ಮಾಡಿದೆ. ಪರಿಹಾರ ಮೊತ್ತ ನಿಗದಿ ಮಾಡಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.ಕೃಷ್ಣಾ ಮೇಲ್ದಂಡೆ ಯೋಜನೆ ಪರಿಹಾರ ವಿಚಾರದಲ್ಲಿ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದೆ. ನೀರಾವರಿ ಯೋಜನೆಗಳ ಜಾರಿಗೆ ಸಿಎಂ, ಡಿಸಿಎಂಗೆ ವಿಶೇಷ ಕಾಳಜಿ ಇದೆ ಎಂದು ತಿಳಿಸಿದರು.a

Read More

ಬೆಂಗಳೂರು : ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕರ ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಇದೀಗ ಆದೇಶ ಹೊರಡಿಸಿದೆ. ಮರುಮತ ಎಣಿಕೆಯ ನಂತರ ಹೊಸದಾಗಿ ಫಲಿತಾಂಶ ಘೋಷಿಸಲು ನ್ಯಾ.ಆರ್ ದೇವದಾಸ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಇದೆ ವೇಳೆ ಶಾಸಕರ ಪರವಾಗಿ ವಕೀಲರು 30 ದಿನಗಳ ಕಾಲ ಅವಕಾಶ ಕೋರಿ ಮನವಿ ಸಲ್ಲಿಸಿದ್ದು ಹೈಕೋರ್ಟ್ 30 ದಿನಗಳ ಕಾಲ ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿದೆ. 4 ವಾರಗಳಲ್ಲಿ ಹೈಕೋರ್ಟ್ ಮರು ಮತ ಎಣಿಕೆ ನಡೆಸಲು ಆದೇಶ ನೀಡಿದ್ದು, ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ವೈ ನಂಜೇಗೌಡ ಆಯ್ಕೆ ಅಸಿಂಧುಗೊಳಿಸಿ ಆದೇಶ ಹೊರಡಿಸಿತು. ಜಿಲ್ಲಾ ಚುನಾವಣಾ ಅಧಿಕಾರಿ ಮತ ಎಣಿಕೆಯ ವಿಡಿಯೋ ಸಲ್ಲಿಸಿಲ್ಲ ಹಾಗಾಗಿ ಜಿಲ್ಲಾ ಚುನಾವಣಾ ಅಧಿಕಾರಿ ವಿರುದ್ಧ ಸಹ ಕ್ರಮಕ್ಕೆ ಹೈಕೋರ್ಟ್ ಸೂಚನೆ ನೀಡಿತು. ಶಾಸಕ ಕೆ ವೈ ನಂಜೇಗೌಡ ಆಯ್ಕೆ ಅಸಿಂಧು ಉಳಿಸಿ ಹೈಕೋರ್ಟ್ ಆದೇಶಿಸಿದ್ದು 4 ವಾರಗಳಲ್ಲಿ ಹೈಕೋರ್ಟ್ ಮರು ಮತ ಎಣಿಕೆ ನಡೆಸಲು ಆದೇಶ ನೀಡಿತು.…

Read More

ಬೆಂಗಳೂರು : ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕರ ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಇದೀಗ ಆದೇಶ ಹೊರಡಿಸಿದೆ. ಹೊಸದಾಗಿ ಮರು ಮತ ಎಣಿಕೆ ನಡೆಸಲು ಹೈಕೋರ್ಟ್ ಇದೆ ಸಂದರ್ಭದಲ್ಲಿ ಸೂಚನೆ ಹೊರಡಿಸಿದೆ. ಮರು ಮತಎಣಿಕೆಯ ನಂತರ ಹೊಸದಾಗಿ ಫಲಿತಾಂಶ ಘೋಷಿಸಲು ನ್ಯಾ.ಆರ್ ದೇವದಾಸ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. 4 ವಾರಗಳಲ್ಲಿ ಹೈಕೋರ್ಟ್ ಮರು ಮತ ಎಣಿಕೆ ನಡೆಸಲು ಆದೇಶ ನೀಡಿದ್ದು, ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ವೈ ನಂಜೇಗೌಡ ಆಯ್ಕೆ ಅಸಿಂಧುಗೊಳಿಸಿ ಆದೇಶ ಹೊರಡಿಸಿತು. ಜಿಲ್ಲಾ ಚುನಾವಣಾ ಅಧಿಕಾರಿ ಮತ ಎಣಿಕೆಯ ವಿಡಿಯೋ ಸಲ್ಲಿಸಿಲ್ಲ ಹಾಗಾಗಿ ಜಿಲ್ಲಾ ಚುನಾವಣಾ ಅಧಿಕಾರಿ ವಿರುದ್ಧ ಸಹ ಕ್ರಮಕ್ಕೆ ಹೈಕೋರ್ಟ್ ಸೂಚನೆ ನೀಡಿತು. ಶಾಸಕ ಕೆ ವೈ ನಂಜೇಗೌಡ ಆಯ್ಕೆ ಅಸಿಂಧು ಉಳಿಸಿ ಹೈಕೋರ್ಟ್ ಆದೇಶಿಸಿದ್ದು 4 ವಾರಗಳಲ್ಲಿ ಹೈಕೋರ್ಟ್ ಮರು ಮತ ಎಣಿಕೆ ನಡೆಸಲು ಆದೇಶ ನೀಡಿತು. ಇದೇ ವೇಳೆ ಶಾಸಕ ಕೆ ವೈ ನಂಜೆಗೌಡ ಪರ ಹಿರಿಯ ವಕೀಲೆ ನಳಿನ ಮಾಯಾಗೌಡ…

Read More

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಜನರು ಪರದಾಟ ನಡೆಸುತ್ತಿದ್ದಾರೆ. ಅಲ್ಲದೇ ಸಂಚಾರ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಬೆಳಗಾವಿಯಲ್ಲಿ ಕಳೆದ ಒಂದು ಗಂಟೆಗಳಿಂದ ಭಾರಿ ಮಳೆ ಆಗುತ್ತಿದ್ದು ಜಿಲ್ಲೆಯ ಚಿಕ್ಕೋಡಿ ತಾಲೂಕಲ್ಲಿ ಕಳೆದ ಒಂದು ಗಂಟೆಯಿಂದ ಭಾರಿ ಮಳೆ ಸುರಿಯುತ್ತಿದೆ. ಭಾರಿ ಮಳೆಯಿಂದಾಗಿ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ಥವಾಗಿದೆ.ರಸ್ತೆಯ ಮೇಲೆ ನೀರು ನದಿಯಂತೆ ಹರಿಯುತ್ತಿದ್ದು ಜನರು ಪರದಾಟ ನಡೆಸುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ, ಹುಕ್ಕೇರಿ ಸೇರಿದಂತೆ ಹಲವಡೆ ಭಾರಿ ಮಳೆ ಸುರಿಸುತ್ತಿದೆ ಇನ್ನು ನಿರಂತರವಾಗಿ ಮಳೆ ಸುರಿಸುತ್ತಿರುವುದರಿಂದ ರೈತರು ಬೆಳೆ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ.

Read More

ಬೆಂಗಳೂರು : ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ ಶಿಪ್ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯ ವೇಳೆ ಟೌನ್ ಶಿಪ್ ಯೋಜನೆ ವಿರೋಧಿಸಿ ನಾಲ್ವರು ರೈತರು ವಿಷ ಸೇವಿಸಿರುವ ಘಟನೆ ವರದಿಯಾಗಿದೆ.ಬೈರಮಂಗಲ ಬಳಿ ಪ್ರತಿಭಟನೆ ವೇಳೆ ನಾಲ್ವರ ರೈತರು ವಿಷ ಸೇವಿಸಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಬೈರಮಂಗಲ ಬಳಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರಾದ ಕುಮಾರ್, ಶ್ರೀಧರ್, ಸೌಮ್ಯ ಹಾಗೂ ಶಾರದಾ ವಿಷ ಸೇವನೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಪಕ್ಷ ನಾಯಕರಾದ ಆರ್.ಅಶೋಕ, ಶಾಸಕ ಅಶ್ವತ್ಥ ನಾರಾಯಣ ಎದುರೇ, ರೈತರು ವಿಷಯ ಸೇವಿಸಿದ್ದಾರೆ. ವಿಷ ಸೇವಿಸುತ್ತಿದ್ದ ರೈತರನ್ನು ಇತರೆ ಪ್ರತಿಭಟನಾಕಾರರು ತಕ್ಷಣ ತಡೆದಿದ್ದಾರೆ.

Read More

ಶಿವಮೊಗ್ಗ : ಹಿಂದೂಸ್ತಾನ್ ಏರೋನ್ಯಾಟಿಕ್ಸ್ ಲಿಮಿಟೆಡ್‌ನಲ್ಲಿ ಮೆಕಾನಿಕಲ್ ಎಂಜಿನಿಯರಿಂಗ್/ ಎಲೆಕ್ನಿಕಲ್ ಎಂಜಿನಿಯರಿಂಗ್ ಡಿಪ್ಲೊಮಾ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ, 45 ವರ್ಷದೊಳಗಿನ ಸಾಮಾನ್ಯ ವರ್ಗದ ಹಾಗೂ 50 ವರ್ಷದೊಳಗಿನ ಎಸ್ಸಿ/ಎಸ್‌ಟಿ ವರ್ಗದ ಮಾಜಿ ಸೈನಿಕರುಗಳಿಗೆ ನಾಲ್ಕು ವರ್ಷಗಳ ಅವಧಿಗೆ ಏರ್‌ಪ್ರೇಮ್ / ಎಲೆಕ್ಟ್ರೀಷಿಯನ್ ಹುದ್ದೆಗೆ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಅರ್ಹ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು dgrddemp@desw.gov.in- DGR ಜಾಲತಾಣದಿಂದ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಗಳನ್ನು ಎಕ್ಸೆಲ್ ಫಾರ್ಮೆಟ್‌ನಲ್ಲಿ ಜಿಲ್ಲಾ/ರಾಜ್ಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಗೆ soldiersshimoga@gmail.com ಇ-ಮೇಲ್ ಮೂಲಕ ಮಾತ್ರ ಕಳುಹಿಸಬಹುದಾಗಿದೆಯೆಂದು ಉಪ ನಿರ್ದೇಶಕರು (ಪ್ರಭಾರ), ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ 08182-220925 ಹಾಗೂ soldiersshimoga@gmail.com ಗೆ ಮಿಂಚಂಚೆ ಸಂಪರ್ಕಿಸಬಹುದಾಗಿದೆ.

Read More

ಬೆಂಗಳೂರು : ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಸಾರಕ್ಕಿ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 18.09.2025 (ಗುರುವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. “ಶಾಕಂಬರಿ ನಗರ, ಪೈಪ್ ಲ್ಯೆನ್ ರೋಡ್, ರಾಘವೇಂದ್ರ ಸ್ವಾಮಿ ಮಟ, ಜೆ.ಪಿ ನಗರ ಮೊದಲನೇ ಹಂತ, 14ನೇ ಅಡ್ಡ ರಸ್ತೇ, ಸಲಾರ್ಪುರಿಯಾ ಅಪಾಟ್ ಮೆಂಟ್, ನಾಗಜುನ ಅಪಾಟ್ ಮೆಂಟ್ ಪುಟ್ಟೇನಹಳ್ಳಿ, ಜಯನಗರ 8, 5, 7 ನೇ ಬ್ಲಾಕ್, ಐಟಿಐ ಲೇಹ್ಔಟ್, ಎಸ್. ಬಿ.ಐ ಕಾಲೋನಿ, ಅರ್.ವಿ.ಡೆಂಟಲ್ ಕಾಲೇಜ್ ಸುತ್ತಮುತ್ತಲ ಪ್ರದೇಶಗಳು. ಅಲ್ಲದೇ 24ನೇ ಮ್ಯೇನ್, ಎಲ್ಐಸಿ ಕಚೇರಿ ಹಿಂಬಾಗ, ಎಲ್ಐಸಿ ಕಾಲೋನಿ, ಕೆ ಆರ್ ಲೇಔಟ್, ವೆಂಕಟಾದ್ರಿ ಲೇಔಟ್, ಜಿ.ಪಿ.ನಗರ 5ನೇ ಹಂತ, ಸಾಯಿ ನಸರಿ ರಸ್ತೇ, ಜಿ.ಪಿ.ನಗರ 6ನೇ ಹಂತ, 15ನೇ ಕ್ರಾಸ್, 16 & 12 ನೇ ಕ್ರಾಸ್, ಆದರ್ಶ ರೆಸಿಡೆನ್ಸಿ ಅಪಾರ್ಟ್ಮೆಂಟ್, ಬನ್ನೇರಘಟ್ಟ ರೋಡ್, ಡಾಲರ್ಸ್ ಲೇಔಟ್, ಕಲ್ಯಾಣಿ ಮ್ಯಾಗ್ನಮ್…

Read More

ಬೆಂಗಳೂರು : ರಾಜ್ಯದಲ್ಲಿ ಬರೋಬ್ಬರಿ 8 ಲಕ್ಷ ಬಿಪಿಎಲ್ ಕಾರ್ಡ್ ರದ್ದಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.ಅಕ್ರಮವಾಗಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಸರ್ಕಾರ ಬಿಗ್ ಶಾಕ್ ನೀಡಲು ಮುಂದಾಗಿದೆ. ಸುಮಾರು 8 ಲಕ್ಷಕ್ಕೂ ಅಧಿಕ ಕಾರ್ಡ್ ಇದೀಗ ರದ್ದಾಗುವ ಆಗುವ ಸಾಧ್ಯತೆ ಇದೆ. ಅಕ್ರಮ ಬಿಪಿಎಲ್ ಕಾರ್ಡ್ ಇರುವುದು ಪತ್ತೆಯಾಗಿದೆ. ಅನರ್ಹರು ಪಡೆದಿರುವ ಬಿಪಿಎಲ್ ಕಾರ್ಡ್ ಗಳ ಮೇಲೆ ಇದೀಗ ಹದ್ದಿನ ಕಣ್ಣು ಇಡಲಾಗಿದೆ. ಆಹಾರ ಇಲಾಖೆಯ ವಿಶೇಷ ಕಾರ್ಯಚರಣೆಯಲ್ಲಿ ಇದು ಬಹಿರಂಗವಾಗಿದೆ ಒಟ್ಟು 12,68,097 ಅನುಮಾನಾಸ್ಪದ ರೇಷನ್ ಕಾರ್ಡ್ ಪತ್ತೆಯಾಗಿದೆ. 8 ಲಕ್ಷ ರೇಷನ್ ಕಾರ್ಡ್ ರದ್ದಾಗುವ ಸಾಧ್ಯತೆ ಇದೆ ಶೀಘ್ರದಲ್ಲಿ ಆಹಾರ ಇಲಾಖೆ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. 19690 ಮಂದಿ ಕಾನೂನು ಬಾಹಿರವಾಗಿ ಬಿಪಿಎಲ್ ಕಾರ್ಡ್ ಪಡೆದಿದ್ದಾರೆ. 25 ಲಕ್ಷಕ್ಕಿಂತ ಅಧಿಕ ವಹಿವಾಟು ಮೀರಿರುವವರು 2684 ಇದ್ದಾರೆ. ಇ- ಕೆ ವೈ ಸಿ ಮಾಡಿಸದೆ ಇರುವವರ ಸಂಖ್ಯೆ 6,16,196 ಇದ್ದಾರೆ 1. 20 ಲಕ್ಷಕ್ಕಿಂತ ಹೆಚ್ಚು ಆದಾಯ ಹೊಂದಿರುವವರು 5,13,613…

Read More

ರಾಮನಗರ : ನಗರದ ಬಸ್ ನಿಲ್ದಾಣದಲ್ಲಿ ಕೆಎಸ್​ಆರ್​ಟಿಸಿ ವತಿಯಿಂದ ಆಯೋಜಿಸಲಾಗಿದ್ದ ನಗರ ಬಸ್ ಸಂಚಾರ ಪ್ರಾರಂಭೋತ್ಸವಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ರಾಮನಗರ ಬಸ್ ನಿಲ್ದಾಣಕ್ಕೆ ಅಗತ್ಯ ಜಮೀನು ಒದಗಿಸಿದ್ದಲ್ಲಿ ಹೊಸ ಬಸ್ ನಿಲ್ದಾಣವನ್ನು ನಿರ್ಮಿಸಿಕೊಡಲಾಗುವುದು. ಈಗಿರುವ ಬಸ್ ನಿಲ್ದಾಣವನ್ನು ಶೀಘ್ರದಲ್ಲಿಯೇ ನವೀಕರಣ ಮಾಡಲಾಗುವುದು ಎಂದು ಭರವಸೆ ನೀಡಿದರು. ರಾಮನಗರದಲ್ಲಿ ನಗರ ಬಸ್ ಸಂಚಾರ ಆರಂಭಗೊಂಡಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು.ಬೆಂಗಳೂರಿನ ಸುತ್ತಮುತ್ತ ಇರುವ ಜಿಲ್ಲೆಗಳಿಗೆ ಬೆಂಗಳೂರು ನಗರ ಸಾರಿಗೆ (ಬಿಎಂಟಿಸಿ) ಬಸ್‌ಗಳನ್ನು ಸಂಚಾರಕ್ಕೆ ಕ್ರಮ ವಹಿಸಲಾಗಿದೆ. ಅಂತೆಯೇ ರಾಮನಗರಕ್ಕೂ ಸಹ ಪ್ರಸ್ತುತ ಸುಗ್ಗನಹಳ್ಳಿಯವರೆಗೆ ಬೆಂಗಳೂರು ನಗರ ಬಸ್ ಸಾರಿಗೆ ಸಂಚರಿಸಲಾಗುತ್ತಿದ್ದು, ಅದನ್ನು ರಾಮನಗರಕ್ಕೆ ವಿಸ್ತರಣೆ ಮಾಡಲಾಗುವುದು ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಸಾರಿಗೆ ಸಂಸ್ಥೆಗೆ ಹೊಸದಾಗಿ 5,800 ಬಸ್‌ಗಳನ್ನು ಖರೀದಿಸಲಾಗಿದೆ ಹಾಗೂ ಚಾಲಕರು, ನಿರ್ವಾಹಕರು, ಮೆಕಾನಿಕ್‌ಗಳು ಸೇರಿದಂತೆ 10,000 ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದ್ದು, ಇದರಿಂದ ಹೆಚ್ಚು ಬಸ್​ಗಳು ಸಂಚಾರ ಆರಂಭಿಸಲು ಅನುಕೂಲಕರವಾಗಲಿದೆ. ಶಕ್ತಿ ಯೋಜನೆಯಿಂದ…

Read More

ಬೀದರ್ : ಬೀದರ್ ತಾಲೂಕಿನ ಗೋರನಹಳ್ಳಿ ಬಳಿ ರಸ್ತೆ ಪಕ್ಕ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಬಂಧಿಸಿ ಮಹಿಳೆಯಿಂದ ಸುಮಾರು 43.47 ಲಕ್ಷ ಮೌಲ್ಯದ ಗಾಂಜಾ ವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಬೀದರ್ ತಾಲೂಕಿನ ಗೊರನಳ್ಳಿ ಬಳಿ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ. ಬಂಧಿತ ಮಹಿಳೆಯ ಬಳಿ ಇದ್ದ ಸುಮಾರು 43 ಕೆಜಿ 479 ಗ್ರಾಂ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ. ರಸ್ತೆ ಪಕ್ಕ ನಿಂತಿದ್ದಾಗ ಅನುಮಾನ ಗೊಂಡ ಗಸ್ತು ತಿರುಗುವ ಪೊಲೀಸರು ಆಕೆಯನ್ನು ಪರಿಶೀಲಿಸಿದಾಗ ಗಾಂಜಾ ಮಾರಾಟ ಮಾಡುತ್ತಿರುವುದು ಪತ್ತೆಯಾಗಿದೆ.

Read More