Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಇದೀಗ ನಗರದ ಕಾಲೇಜು ವಿದ್ಯಾರ್ಥಿನಿಗೆ ಆಟೋ ಚಾಲಕನೋರ್ವ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಸೆಪ್ಟಂಬರ್ 8ರಂದು ಪುಟ್ಟೇನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, 19 ವರ್ಷದ ವಿದ್ಯಾರ್ಥಿನಿ ನೀಡಿರುವ ದೂರಿನ ಅನ್ವಯ ಆಟೋ ಚಾಲಕ ಹನುಮಂತಪ್ಪ ತಳವಾರ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೆ. 8 ರಂದು ಸಂಜೆ 4:30ಕ್ಕೆ ಕಾಲೇಜಿನಿಂದ ಮನೆಗೆ ತೆರಳಲು ವಿದ್ಯಾರ್ಥಿನಿ ರ‍್ಯಾಪಿಡೋ ಮೂಲಕ ಆಟೋ ಬುಕ್ ಮಾಡಿದ್ದಳು. ಸಂಜೆ 5:15 ಗಂಟೆ ಸುಮಾರಿಗೆ ಆಕೆಯನ್ನು ಮನೆ ಬಳಿ ಡ್ರಾಪ್ ಮಾಡಿದ್ದ ಚಾಲಕ, ಅದೇ ಸಂದರ್ಭದಲ್ಲಿ ನೀವು ಸಿನೆಮಾ ನಟಿಯ ಥರ ಇದ್ದೀರಿ ಎನ್ನುತ್ತ ಬ್ಯಾಗ್‌ಗಳನ್ನು ಇಳಿಸಲು ಸಹಾಯ ಮಾಡುವುದಾಗಿ ತಾನೂ ಕೆಳಗಿಳಿದಿದ್ದಾನೆ. ಬಳಿಕ ವಿದ್ಯಾರ್ಥಿನಿಯ ಸಮೀಪ ಬಂದು, ನಿಮಗೆ ಜ್ವರವಿದೆಯಾ? ಎಂದು ಆಕೆಯ ಹಣೆಯನ್ನು ಸ್ಪರ್ಶಿಸಿದ್ದ. ಆ ಸಂದರ್ಭದಲ್ಲಿ ಸ್ಪರ್ಶಿಸದಂತೆ ತಿಳಿಸಿದರೂ, ಸಹ ವಿದ್ಯಾರ್ಥಿನಿಯ ಖಾಸಗಿ ಅಂಗ ಸ್ಪರ್ಶಿಸಲಾರಂಭಿಸಿದ್ದ.…
ಬೆಂಗಳೂರು : ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ರಾಜ್ಯ ಸರ್ಕಾರ ಅಹ್ವಾನ ನೀಡಿದೆ.ಈ ವಿಚಾರವಾಗಿ ಭಾರಿ ವಿರೋಧ ವ್ಯಕ್ತವಾಗಿದ್ದು, ಮಾಜಿ ಸಂಸದ ಪ್ರತಾಪ್ ಸಿಂಹ ಈ ಕುರಿತು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಈ ವಿಚಾರವಾಗಿ ಇಂದು ಹೈಕೋರ್ಟ್ ನಲ್ಲಿ ಪ್ರತಾಪ್ ಸಿಂಹ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಯಿತು. ಈ ವೇಳೆ ಹೈಕೋರ್ಟ್ ಸಿಜೆ ವಿಭು ಬಖ್ರು ಹಾಗು ನ್ಯಾ.ಸಿಎಂ ಜೋಶಿ ಅವರಿದ್ದ ಪೀಠ ಪ್ರತಾಪ್ ಸಿಂಹ ಸಲ್ಲಿಸಿದ ಪಿಐಎಲ್ ವಜಾಗೊಳಿಸಿದ್ದಾರೆ. ಇಂದು ಹೈ ಕೋರ್ಟ್ ವಿಭಾಗಿಯ ಪೀಠದಲ್ಲಿ ಪ್ರತಾಪ್ ಸಿಂಹ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಯಿತು. ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿದ್ದು ಸರಿಯಲ್ಲ ಹಿಂದೂ ವಿರೋಧಿ ಕನ್ನಡ ವಿರೋಧಿ ಹೇಳಿಕೆ ನೀಡಿದ್ದಾರೆ. ಭುವನೇಶ್ವರಿ ಕನ್ನಡ ಬಾವುಟದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಬಾನು ಮುಷ್ತಾಕ್ ನೀಡಿದ ಹೇಳಿಕೆಯ ಇಂಗ್ಲಿಷ್ ಅನುವಾದ ಸಲ್ಲಿಕೆಯಾಗಿದೆ. ಕೆಂಪು ಹಳದಿ ಬಣ್ಣದ ಬಗ್ಗೆಯೂ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಈ ದೇಶದಲ್ಲಿ…
ಬೆಂಗಳೂರು : ವರನಟ ಡಾ. ರಾಜಕುಮಾರ್ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಿಸಿಬಿ ಪೊಲೀಸರು ವಿನೋದ ಶೆಟ್ಟಿ ಎಂಬ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಡಾ.ರಾಜಕುಮಾರ್ ಹಾಗೂ ಅವರ ಕುಟುಂಬದವರ ಬಗ್ಗೆ ಆವಾಚ್ಯವಾಗಿ ನಿಂದನೆ ಮಾಡಿ ಮಾತನಾಡಿದ್ದ. ಬಾಯಿಗೆ ಬಂದಂತೆ ಮಾತನಾಡಿ ತಾಕತ್ತಿದ್ದರೆ ಬನ್ನಿ ಅಂತ ವಿನೋದ ಶೆಟ್ಟಿ ಅವಾಜ್ ಹಾಕಿದ್ದ. ಇದೀಗ ಬೆಂಗಳೂರಿನ ಸಿಸಿಬಿ ಪೊಲೀಸರು ಆರೋಪಿ ವಿನೋದ್ ಶೆಟ್ಟಿಯನ್ನ ಅರೆಸ್ಟ್ ಮಾಡಿದ್ದಾರೆ.
BREAKING : ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ವಿರೋಧ : ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ‘PIL’ ವಜಾ
ಬೆಂಗಳೂರು : ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ರಾಜ್ಯ ಸರ್ಕಾರ ಅಹ್ವಾನ ನೀಡಿದೆ.ಈ ವಿಚಾರವಾಗಿ ಭಾರಿ ವಿರೋಧ ವ್ಯಕ್ತವಾಗಿದ್ದು, ಮಾಜಿ ಸಂಸದ ಪ್ರತಾಪ್ ಸಿಂಹ ಈ ಕುರಿತು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಈ ವಿಚಾರವಾಗಿ ಇಂದು ಹೈಕೋರ್ಟ್ ನಲ್ಲಿ ಪ್ರತಾಪ್ ಸಿಂಹ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಯಿತು. ಈ ವೇಳೆ ಹೈಕೋರ್ಟ್ ಸಿಜೆ ವಿಭು ಬಖ್ರು ಹಾಗು ನ್ಯಾ.ಸಿಎಂ ಜೋಶಿ ಅವರಿದ್ದ ಪೀಠ ಪ್ರತಾಪ್ ಸಿಂಹ ಸಲ್ಲಿಸಿದ ಪಿಐಎಲ್ ವಜಾಗೊಳಿಸಿದ್ದಾರೆ. ಇಂದು ಹೈ ಕೋರ್ಟ್ ವಿಭಾಗಿಯ ಪೀಠದಲ್ಲಿ ಪ್ರತಾಪ್ ಸಿಂಹ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಯಿತು. ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿದ್ದು ಸರಿಯಲ್ಲ ಹಿಂದೂ ವಿರೋಧಿ ಕನ್ನಡ ವಿರೋಧಿ ಹೇಳಿಕೆ ನೀಡಿದ್ದಾರೆ. ಭುವನೇಶ್ವರಿ ಕನ್ನಡ ಬಾವುಟದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಬಾನು ಮುಷ್ತಾಕ್ ನೀಡಿದ ಹೇಳಿಕೆಯ ಇಂಗ್ಲಿಷ್ ಅನುವಾದ ಸಲ್ಲಿಕೆಯಾಗಿದೆ. ಕೆಂಪು ಹಳದಿ ಬಣ್ಣದ ಬಗ್ಗೆಯೂ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಈ ದೇಶದಲ್ಲಿ…
ಶಿವಮೊಗ್ಗ : ಶಿವಮೊಗ್ಗದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ರಸ್ತೆ ಗುಂಡಿಗೆ ಬೈಕ್ ಸವಾರ ಒಬ್ಬ ಬಲಿಯಾಗಿದ್ದಾರೆ. ಆಳವಾದ ಗುಂಡಿ ತಪ್ಪಿಸಲು ಹೋಗಿ ಮಹೇಶ್ ಎನ್ನುವ ಬೈಕ್ ಸವಾರ ಸಾವನಪ್ಪಿದ್ದಾರೆ. ಮೃತ ಮಹೇಶ್ ಮೆಡಿಕಲ್ ಪ್ರತಿನಿಧಿಯಾಗಿದ್ದರು. ಶಿವಮೊಗ್ಗದ ಮಲಗುಪ್ಪ ಬಡಾವಣೆಯಲ್ಲಿ ಈ ಒಂದು ಘಟನೆ ನಡೆದಿದೆ. ಗುಂಡಿ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಬೈಕ್ ರಸ್ತೆ ಬದಿಯ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ತೀವ್ರವಾಗಿ ಗಾಯಗೊಂಡಿದ್ದ ಮಹೇಶ್ ಚಿಕಿತ್ಸೆ ಫಲಿಸದೆ ಸಾವನಪ್ಪಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ ನಿಂದ ಬಿದ್ದು ವ್ಯಕ್ತಿ ಸಾವನಪ್ಪಿರುವ ಘಟನೆ ನಡೆದಿದ್ದು, ನೆಲಮಂಗಲದ ಮಾದನಾಯಕನಹಳ್ಳಿ ಅಪಾರ್ಟ್ಮೆಂಟ್ ಅಲ್ಲಿ ಈ ಒಂದು ಘಟನೆ ಸಂಭವಿಸಿದೆ. ಅಪಾರ್ಟ್ಮೆಂಟ್ನ 24ನೇ ಮಹಡಿಯಿಂದ ಬೀಳುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪ್ರೆಸ್ಟೀಜ್ ಅಪಾರ್ಟ್ಮೆಂಟ್ ನಿಂದ ಬಿದ್ದು ಲೋಕೇಶ್ ಪವನ್ ಕೃಷ್ಣ (26) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎರಡು ದಿನಗಳ ಹಿಂದೆ ಲೋಕೇಶ್ ಅಕ್ಕನ ಭಾವನ ಮನೆಗೆ ಬಂದಿದ್ದ. ಅಕ್ಕ ಭಾವ ಮನೆಯಲ್ಲಿ ಇಲ್ಲದ ವೇಳೆ ಲೋಕೇಶ್ ಆತ್ಮಹತ್ಯೆ ಶರಣಾಗಿದ್ದಾನೆ. ಎರಡು ದಿನ ಮನೆಯಲ್ಲಿದ್ದು ಮೂರನೇ ದಿನ ಲೋಕೇಶ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಅಪಾರ್ಟ್ಮೆಂಟ್ನಿಂದ ಬೀಳುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲೂ ಸಹ ಸೆರೆಯಾಗಿದೆ. ಅನಾರೋಗ್ಯದ ಹಿನ್ನೆಲೆ ಲೋಕೇಶ್ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗುತ್ತಿದೆ. ಈತ ಖಾಸಗಿ ಮಾಲ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ಇನ್ನೊಂದು ಕಡೆ ಅನಾರೋಗ್ಯದ ಸಮಸ್ಯೆ ಕಾಡುತ್ತಿತ್ತು. ಹಾಗಾಗಿ ಲೋಕೇಶ್ ಅಕ್ಕನ ಮನೆಗೆ ಬಂದು ಎರಡು ದಿನಗಳ ಕಾಲ ಇದ್ದ ಬಹಳ ಖಿನ್ನತೆಗೆ ಒಳಗಾಗಿದ್ದ.ಲೋಕೇಶ್ ಮೂರನೇ ದಿನ ನಸುಕಿನ…
ಬೆಂಗಳೂರು : ರಾಜ್ಯದ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸೋ ಕಾಲ ಸಮೀಪಿಸಿದೆ ಎನ್ನಲಾಗುತ್ತಿದೆ. ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಲು ಸೆಪ್ಟೆಂಬರ್.16, 2025ರ ನಾಳೆ ಸಭೆಯನ್ನು ಸರ್ಕಾರ ಕರೆಯಲಾಗಿದೆ. ಸರ್ಕಾರದ ಕಾರ್ಯದರ್ಶಿಗಳು, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ದಿನಾಂಕ:16.09.2025ರ ನಾಳೆ ಮಧ್ಯಾಹ್ನ 3.00 ಗಂಟೆಗೆ ಕೊಠಡಿ ಸಂಖ್ಯೆ:331, 3ನೇ ಮಹಡಿ, ಬಹುಮಹಡಿಗಳ ಕಟ್ಟಡ ಇಲ್ಲಿ ಈ ಕೆಳಕಂಡ ವಿಷಯಗಳ ಕುರಿತು ಚರ್ಚಿಸಲು ಸಭೆಯನ್ನು ಏರ್ಪಡಿಸಲಾಗಿದೆ. ಇನ್ನು ಬೆಂಗಳೂರಿನಲ್ಲಿ ಪರಿಶಿಷ್ಟ ಪಂಗಡ ಪಟ್ಟಿಗೆ ಕುರುಬ ಸಮುದಾಯ ಸೇರ್ಪಡೆ ವಿಚಾರವಾಗಿ ಐಟಿಬಿಟಿ ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆ ನೀಡಿದ್ದು, ಬೇಡಿಕೆ ಇತ್ತು ಈ ಬಗ್ಗೆ ನಾವು ದಾಖಲೆ ಕೇಳಿದ್ದೆವು. ನಾಳೆ ಬೆಂಗಳೂರಿನಲ್ಲಿ ಕುರುಬ ಸಮುದಾಯದ ಸಭೆ ಕರೆದಿದ್ದಾರೆ ಅದಾದ ಮೇಲೆ ಕೋಲಿ ಸಮುದಾಯದ ಸಭೆ ಕೂಡ ಮಾಡುತ್ತೇವೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಬೀಖರವಾದ ಅಪಘಾತ ಸಂಭವಿಸಿದ್ದು ಗೂಡ್ಸ್ ಆಟೋ ಡಿಕ್ರಿಯಾಗಿ ಬೈಕ್ ನಲ್ಲಿ ಇದ್ದಂತಹ ಇಬ್ಬರು ಸವಾರರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಅವಧಿ ಕೊಡಗುರ್ಕಿ ರಸ್ತೆಯಲ್ಲಿ ಒಂದು ಅಪಘಾತ ಸಂಭವಿಸಿದೆ. ಮೃತ ಬೈಕ್ ಸವಾರರನ್ನು ಜೆ. ವೆಂಕಟಪುರ ಗ್ರಾಮದ ನಿವಾಸಿ ವಿನೋದ್ ಕುಮಾರ್ (22) ಹಾಗೂ ನಂದಿಗುಂದ ಗ್ರಾಮದ ನಿವಾಸಿ ನಿಖಿಲ್ (7) ದುರ್ಮರಣ ಹೊಂದಿದ್ದಾರೆ. ನಂದಿಗುಂದದಿಂದ ಬೈಕ್ ನಲ್ಲಿ ವೆಂಕಟಪುರಕ್ಕೆ ತೇರಳುತ್ತಿದ್ದಾಗ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ಕುರಿತು ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸೋ ಘಟನೆಯೊಂದು ನಡೆದಿದ್ದು, ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಅಮೃತ ಹಳ್ಳಿಯ ಠಾಣೆ ಪೊಲೀಸರು ಮಂಜುನಾಥ್ ಎಂಬ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಸೆಪ್ಟೆಂಬರ್ 7 ರಾತ್ರಿ 11:50 ರಲ್ಲಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಾರು ನಿಲ್ಲಿಸಿ ಯುವತಿ ಶ್ವಾನದ ರಕ್ಷಣೆಗೆ ಮುಂದಾಗಿದ್ದಾಳೆ. ಈ ವೇಳೆ ಬೈಕ್ ನಲ್ಲಿ ಬಂದು ಆರೋಪಿ bad ಟಚ್ ಮಾಡಿ ತೆರಳಿದ್ದ. ಈ ವೇಳೆ ಕೈಗೆ ರಕ್ತ ಆಗಿದ್ದರಿಂದ ಯುವತಿ ಪೆಟ್ರೋಲ್ ಬಂಕ್ ಬಳಿ ಕೈ ತೊಳೆದುಕೊಳ್ಳುತ್ತಿದ್ದಳು. ಸ್ವಲ್ಪ ಹೊತ್ತಿನ ಬಳಿಕ ಮತ್ತೆ ಬಂದು ಯುವತಿಯ ಖಾಸಗಿ ಅಂಗ ಮುಟ್ಟಿ ಪರಾರಿಯಾಗಿದ್ದಾನೆ. ಘಟನೆ ಬಗ್ಗೆ ಅಮೃತಹಳ್ಳಿ ಠಾಣೆಯಲ್ಲಿ ಯುವತಿ ದೂರು ದಾಖಲಿಸಿದ್ದಾಳೆ. ಸದ್ಯ ಆರೋಪಿ ಮಂಜುನಾಥನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ದಾವಣಗೆರೆ : ಇತ್ತೀಚಿಗೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಅಲ್ಲದೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಕೂಡ ಈದ್ ಮಿಲಾದ್ ಹಬ್ಬದ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಕಿಡಿಗೇಡಿಗಳು ಘೋಷಣೆ ಕೂಗಿದ್ದರು. ಈ ವಿಚಾರವಾಗಿ ಬಿಜೆಪಿ ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಮಾತು ಎತ್ತಿದರೆ ಸಾಕು ಬಿಜೆಪಿಯವರು ಬೆಂಕಿ ಹಚ್ಚುತ್ತಾರೆ ಎಂದು ಹೇಳುತ್ತಾರೆ. ಧರ್ಮಸ್ಥಳ, ಚಾಮುಂಡಿ ವಿಚಾರದಲ್ಲಿ ಬೆಂಕಿ ಹಚ್ಚಿದ್ದು ಯಾರು? ಗಣೇಶ ಮೆರವಣಿಗೆಯಲ್ಲಿ ಕಲ್ಲೆಸೆದವರಿಗೆ ಬೆಂಬಲ ಕೊಡುತ್ತೀರಿ, ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದೀರಿ. ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ದರ್ಪ ದೌಲತ್ತು ಮುಂದುವರಿದರೆ ನಿಮಗೆ ಕರ್ನಾಟಕದ ಜನತೆಗೆ ತಕ್ಕ ಪಾಠ ಕಲಿಸುತ್ತಾರೆ. ಕೋಮು ಗಲಭೆಗೆ ಇಡೀ ಸರ್ಕಾರವೇ ಕಾರಣ ಕಲ್ಲು ತೂರಾಟ, ಬೆಂಕಿ ಹಚ್ಚುವವರನ್ನು ಪಾಕಿಸ್ತಾನಕ್ಕೆ ಕಳುಹಿಸಿ ಎಂದು ಮಾಜಿ ಶಾಸಕ ರೇಣುಕಾಚಾರ್ಯ ಆಗ್ರಹಿಸಿದರು.









