Subscribe to Updates
Get the latest creative news from FooBar about art, design and business.
Author: kannadanewsnow05
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಕಳೆದ ಎರಡು ದಿನಗಳ ಹಿಂದೆ ನಡೆದ ಘಟನೆ ಇಡೀ ಹುಬ್ಬಳ್ಳಿ ಜನತೆಯನ್ನು ಬೆಚ್ಚಿಬೀಳಿಸಿದ್ದು 18 ವಯಸ್ಸಿನ ಯುವತಿ ಒಬ್ಬಳು 50 ವರ್ಷದ ಅಂಕಲ್ ಜೊತೆಗೆ ಓಡಿ ಹೋಗಿ ಮದುವೆಯಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ 50 ವರ್ಷದ ಅಕಲ್ ಜೊತೆ 18 ವರ್ಷದ ಯುವತಿ ಮದುವೆ ಪ್ರಕರಣದಲ್ಲಿ ಹುಬ್ಬಳ್ಳಿ ಪೊಲೀಸರು ಕಿಲಾಡಿ ಅಂಕಲ್‌ನನ್ನು ಬಂಧಿಸಿದ್ದಾರೆ. ಕೇಶ್ವಾಪುರದ ಚಾಲುಕ್ಯ ನಗರದ ಪ್ರಕಾಶ್ ಕಂಜರಘಾಟ ಬಂಧಿತ ಆರೋಪಿಯಾಗಿದ್ದಾನೆ. ಹೌದು ಮನೆಯಿಂದ ನಾಪತ್ತೆಯಾಗಿದ್ದ ಹುಬ್ಬಳ್ಳಿಯ ಕರೀಷ್ಮಾ, 50 ವರ್ಷದ ಸೆಕ್ಯೂರಿಟಿ ಪ್ರಕಾಶ್ ಎನ್ನುವಾತನ ಜೊತೆ ಪತ್ತೆಯಾಗಿದ್ದಳು. ಅಲ್ಲದೇ ಇಬ್ಬರು ಮದುವೆಯಾಗಿದ್ದರು. ಆದ್ರೆ, ಅದೇನಾಯ್ತೋ ಏನೋ ಕರೀಷ್ಮಾ ಪ್ರಕಾಶನನ್ನು ಬಿಟ್ಟು ವಾಪಸ್ ಮನೆಗೆ ಓಡಿ ಬಂದಿದ್ದಾಳೆ. ಅಲ್ಲದೇ ಬಲವಂತವಾಗಿ ನನ್ನ ಕರೆದುಕೊಂಡು ಹೋಗಿ ಮದುವೆಯಾಗಿದ್ದಾನೆ ಎಂದು ಪ್ರಕಾಶನ ವಿರುದ್ಧ ಗಂಭೀರ ಆರೋಪ ಮಾಡಿದ್ದಾಳೆ. ಅಲ್ಲದೇ ಈ ಸಂಬಂಧ ಕರೀಷ್ಮಾ ಹುಬ್ಬಳ್ಳಿಯ ಕೇಶ್ವಾಪೂರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಒಂದು ವರ್ಷದ ಹಿಂದೆಯೂ ನನಗೆ ಪ್ರಕಾಶ್…
ಹಾಸನ : ಹಾಸನದಲ್ಲಿ ಘೋರವಾದ ಘಟನೆ ನಡೆದಿದ್ದು, ಟಿಪ್ಪರ್ ಹರಿದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಒಬ್ಬರು ಸ್ಥಳದಲ್ಲೇ ಉಸಿರು ಚೆಲ್ಲಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ನೆಹರು ನಗರದಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತ ಗ್ರಾಂ ಪಂಚಾಯತಿ ಅಧ್ಯಕ್ಷೆಯನ್ನು ಮಲ್ಲಿಗೆಮ್ಮ (58) ಎಂದು ತಿಳಿದುಬಂದಿದೆ. ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ನೆಹರು ನಗರದಲ್ಲಿ ಈ ಒಂದು ಘಟನೆ ಸಂಭವಿಸಿದೆ. ಹನಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಲ್ಲಿಗೆಮ್ಮ ಟಿಪ್ಪರ್ ಹರಿದು ಸಾವನಪ್ಪಿದ್ದಾರೆ. ಮಲ್ಲಿಗಮ್ಮ ಬ್ಯಾಂಕಿಗೆ ಹೋಗಿ ವಾಪಾಸ್ ನಡೆದುಕೊಂಡು ಬರುವಾಗ ಈ ಒಂದು ಘಟನೆ ಸಂಭವಿಸಿದೆ. ಹಿಂದಿನಿಂದ ವೇಗವಾಗಿ ಬಂದು KA56 8961 ನಂಬರಿನ ಲಾರಿ ಡಿಕ್ಕಿ ಹೊಡೆದಿದೆ. ಕೂಡಲೇ ಮಲ್ಲಿಗೆಮ್ಮ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ. ಘಟನೆ ಕುರಿತು ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ರಾಜ್ಯ ಸರ್ಕಾರ ಜಾರಿ ಮಾಡಿರುವ ಅನ್ನಭಾಗ್ಯ ಯೋಜನೆ ಅಡಿ ಇಷ್ಟು ದಿನ 5 ಕೆ.ಜಿ ಅಕ್ಕಿಯ ಬದಲಾಗಿ ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ಹಣ ಹಾಕುತ್ತಿತ್ತು. ಆದರೆ ಇದೀಗ ಕೇಂದ್ರ ಸರ್ಕಾರದಿಂದ ಅಕ್ಕಿ ಖರೀದಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದರಿಂದ, ಹಣದ ಬದಲು 10 ಕೆಜಿ ಅಕ್ಕಿ ಕೊಡಲು ತೀರ್ಮಾನ ಕೈಗೊಂಡಿದೆ. ಅನ್ನಭಾಗ್ಯ ಹಣದ ಬದಲು ಅಕ್ಕಿ ಕೊಡಲು ರಾಜ್ಯ ಸರ್ಕಾರ ಇದೀಗ ತೀರ್ಮಾನಿಸಿದ್ದು ಫಲಾನುಭವಿಗಳಿಗೆ ಹಣದ ಬದಲು 10 ಕೆಜಿ ಅಕ್ಕಿ ಕೊಡಲು ಸರ್ಕಾರ ತೀರ್ಮಾನ ಕೈಗೊಂಡಿದೆ. ಫೆಬ್ರವರಿ ತಿಂಗಳಿನಿಂದಲೇ ಹಣದ ಬದಲು ಅಕ್ಕಿ ಕೊಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೇಂದ್ರ ಸರ್ಕಾರದಿಂದಲೇ ಅಕ್ಕಿ ಖರೀದಿಸಲು ರಾಜ್ಯ ಸರ್ಕಾರ ಇದೀಗ ಮುಂದಾಗಿದ್ದು, ಹಾಗಾಗಿ ಹಣದ ಬದಲಾಗಿ ಅಕ್ಕಿ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಕುರಿತು ವಿಧಾನಸೌಧದಲ್ಲಿ ಆಹಾರ ಸಚಿವ ಕೆಎಚ್ ಮುನಿಯಪ್ಪ ಅವರು ಮಾತನಾಡಿ, ಫೆಬ್ರುವರಿಯಲ್ಲಿ ಪೂರ್ಣ ಪ್ರಮಾಣದ ಅನ್ನಭಾಗ್ಯ ಯೋಜನೆಯ 10 ಕೆ.ಜಿ ಅಕ್ಕಿಯನ್ನು ನೀಡುತ್ತೇವೆ.…
ಬೆಂಗಳೂರು : ಬೆಂಗಳೂರಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಮನೆಯ ಮುಂದೆ ಆಟವಾಡುತ್ತಿದ್ದ ಪುಟ್ಟ ಮಗುವಿನ ಮೇಲೆ ಜೆಬಿಜಿ ಹರಿದು ದಾರಿಣವಾಗಿ ಸಾವನ್ನಪ್ಪಿದ ಘಟನೆ ಕಾಡುಗೋಡಿ ಬಳಿಯ ಸಿಟಿ ಲೇಔಟ್ ನಲ್ಲಿ ಘಟನೆ ನಡೆದಿದೆ. ಈ ಒಂದು ದುರ್ಘಟನೆಯಲ್ಲಿ ಮೃತಪಟ್ಟ ಬಾಲಕನನ್ನು ಥವನ್ ರೆಡ್ಡಿ (2) ಎಂದು ತಿಳಿದುಬಂದಿದೆ.ನಿನ್ನೆ ಸಂಜೆ 6.30 ಕ್ಕೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜೆಸಿಬಿ ಚಾಲಕ ವಾಹನವನ್ನು ಅತೀವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ್ದೇ ಇದಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.ಎಂದಿನಂತೆ ಮನೆಯ ಮುಂದೆ ಥವನ್ ಆಟವಡುತ್ತಿದ್ದ ವೇಳೆ JCB ವೇಗವಾಗಿ ಬಂದಿದೆ. ಜೆಸಿಬಿ ಬರುವುದನ್ನು ಗಮನಿಸದೇ ಥವನ್ ಆಟದಲ್ಲಿ ಮಗ್ನನಾಗಿದ್ದ.ಈ ವೇಳೆ JCB ಆತನ ತಲೆಯ ಮೇಲೆ ಹರಿದಿದೆ.ಗಾಯಗೊಂಡ ಮಗುವನ್ನು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ. ಆದರೆ, ಪರೀಕ್ಷೆ ನಡೆಸಿದ ವೈದ್ಯರು ಮಾರ್ಗ ಮಧ್ಯದಲ್ಲಿ ಮಗು ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ. ವೈದೇಹಿ ಆಸ್ಪತ್ರೆಯಲ್ಲಿ ಮಗುವಿನ ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಮಹಾದೇವಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು…
ಮಹಾರಾಷ್ಟ್ರ : ಅಪಘಾತ ತಪ್ಪಿಸಲು ಹೋಗಿ ಕೆಎಸ್ಆರ್ಟಿಸಿ ಬಸ್ ಒಂದು ಪಲ್ಟಿಯಾದ ಪರಿಣಾಮ ಬಸ್ ನಲ್ಲಿದ್ದ 23 ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಮೈಶಾಳ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. KSRTC ಬಸ್ ಮಹಾರಾಷ್ಟ್ರದ ಮೀರಜ್ ನಿಂದ ವಿಜಯಪುರಕ್ಕೆ ತೆರಳುತ್ತಿತ್ತು. ಈ ವೇಳೆ ಕೆಎಸ್ಆರ್ಟಿಸಿ ಬಸ್ ಟ್ರ್ಯಾಕ್ಟರ್ ಅನ್ನು ಓವರ್ ಟೇಕ್ ಮಾಡಲು ಮುಂದಾಗಿದೆ. ಈ ಸಂದರ್ಭದಲ್ಲಿ ಎದುರಿಗೆ ಬಂದ ಲಾರಿ ಡಿಕ್ಕಿ ತಪ್ಪಿಸಲು ಹೋಗಿ ಬಸ್ ಪಲ್ಟಿಯಾಗಿದೆ. ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ಪಕ್ಕದ ಗುಂಡಿಗೆ ಉರಳಿ ಬಿದ್ದಿದೆ. ಬಸ್ ಪಲ್ಟಿಯಾದ ಪರಿಣಾಮ ಬಸ್ ನಲ್ಲಿ 40ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದರು. 23 ಜನರಿಗೆ ಗಾಯಗಳಾಗಿದ್ದು, ಕೂಡಲೇ ಸ್ಥಳೀಯರು ಪ್ರಯಾಣಿಕರನ್ನು ರಕ್ಷಿಸಿ ಆಸ್ಪತ್ರೆಗೆ ರವಾನಿಸಿದ್ದಾರೆ. 23 ಜನರಿಗೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರು : ರಾಜ್ಯ ಸರ್ಕಾರ ಜಾರಿ ಮಾಡಿರುವ ಅನ್ನಭಾಗ್ಯ ಯೋಜನೆ ಅಡಿ ಇಷ್ಟು ದಿನ 5 ಕೆ.ಜಿ ಅಕ್ಕಿಯ ಬದಲಾಗಿ ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ಹಣ ಹಾಕುತ್ತಿತ್ತು. ಆದರೆ ಇದೀಗ ಕೇಂದ್ರ ಸರ್ಕಾರದಿಂದ ಅಕ್ಕಿ ಖರೀದಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದರಿಂದ, ಹಣದ ಬದಲು 10 ಕೆಜಿ ಅಕ್ಕಿ ಕೊಡಲು ತೀರ್ಮಾನ ಕೈಗೊಂಡಿದೆ. ಅನ್ನಭಾಗ್ಯ ಹಣದ ಬದಲು ಅಕ್ಕಿ ಕೊಡಲು ರಾಜ್ಯ ಸರ್ಕಾರ ಇದೀಗ ತೀರ್ಮಾನಿಸಿದ್ದು ಪ್ರತಿಫಲ ಅನುಭವಿಗೆ ಹಣದ ಬದಲು 10 ಕೆಜಿ ಅಕ್ಕಿ ಕೊಡಲು ಸರ್ಕಾರ ತೀರ್ಮಾನ ಕೈಗೊಂಡಿದೆ. ಫೆಬ್ರವರಿ ತಿಂಗಳಿನಿಂದಲೇ ಹಣದ ಬದಲು ಅಕ್ಕಿ ಕೊಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೇಂದ್ರ ಸರ್ಕಾರದಿಂದಲೇ ಅಕ್ಕಿ ಖರೀದಿಸಲು ರಾಜ್ಯ ಸರ್ಕಾರ ಇದೀಗ ಮುಂದಾಗಿದ್ದು, ಹಾಗಾಗಿ ಹಣದ ಬದಲಾಗಿ ಅಕ್ಕಿ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಬೆಳಗಾವಿ : ಇತ್ತೀಚಿನ ದಿನಗಳಲ್ಲಿ ಹಾರ್ಟ್ ಅಟ್ಯಾಕ್ ಅನ್ನೋದು ಸಹಜ ಕಾಯಿಲೆಯಾಗಿಬಿಟ್ಟಿದೆ. ಇದೀಗ ತರಗತಿಯಲ್ಲಿ ಪಾಠ ಮಾಡುತ್ತಿರುವಾಗಲೇ ಶಿಕ್ಷಕರೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದ ತೆಲಸಂಗ ವಸತಿ ತೋಟದಲ್ಲಿ ನಡೆದಿದೆ. ಅಥಣಿ ತಾಲೂಕಿನ ಐಗಳಿ ಗ್ರಾಮದ ತೆಲಸಂಗ ವಸತಿ ತೋಟದ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರತ ಶಿಕ್ಷಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.ಮೃತ ಶಿಕ್ಷಕರನ್ನು ಭೈರಪ್ಪ ಆರ್ ಸಾತಗೊಂಡನವರ (55) ಎಂದು ತಿಳಿದುಬಂದಿದೆ.
ಬೆಂಗಳೂರು : ಅನ್ನಭಾಗ್ಯ ಯೋಜನೆಯ ಹಣ ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣ ಇನ್ನು ಇನ್ನು ಫಾಲಾನುಭವಿಗಳ ಖಾತೆಗೆ ಜಮೆ ಆಗದೆ ಇರುವ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ರಾಜ್ಯದ ಆರ್ಥಿಕ ಪರಿಸ್ಥಿತಿಯ ಕುರಿತು ಶ್ವೇತ ಪತ್ರ ಹೊರಡಿಸಿ ಎಂದು ರಾಜ್ಯ ಸರ್ಕಾರಕ್ಕೆ ಅಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಬಗ್ಗೆ ನಮ್ಮ ವಿರೋಧವಿಲ್ಲ. ಗ್ಯಾರಂಟಿ ಯೋಜನೆ ಬಗ್ಗೆ ಹೊಸ ಕಂಡೀಶನ್ ಹಾಕಿದ್ವಿ. ಎಂಪಿ ಚುನಾವಣೆಯ ಮತದಾನದ ಮೂರು ದಿನಗಳ ಮುನ್ನವೇ ಹಣ ಜಮೆಯಾಗಿದೆ. ಬೈ ಎಲೆಕ್ಷನ್ ಮತದಾನಕ್ಕೂ ಮುನ್ನವೇ ಗ್ಯಾರಂಟಿ ಹಣ ತಲುಪುತ್ತದೆ. ಮುಂದಿನ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಚುನಾವಣೆಗೂ ಹೀಗೆ ಮಾಡುತ್ತಾರೆ. ರಾಜ್ಯದ ಜನರು ರೈತರು ಬಡವರು ಭಿಕ್ಷುಕರ? ಎಂದು ರಾಜ್ಯ ಸರ್ಕಾರದ ವಿರುದ್ಧ ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ ಕೆಪಿಸಿಸಿ ಅಧ್ಯಕ್ಷರು ಸಿಎಂ ಹುದ್ದೆ ವಿಚಾರವಾಗಿ ಬಡಿದಾಟ ನಡೆಯುತ್ತಿದೆ ಕೆಲ ನಾಯಕರು ಅಧ್ಯಕ್ಷರ ಬದಲಾವಣೆಗೆ ಬಗ್ಗೆ ಮಾತನಾಡಿದ್ದಾರೆ.…
ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ. ಶೀಘ್ರವೇ ನಂದಿನಿ ಹಾಲಿನ ದರ ಏರಿಕೆಗೆ ಕೆಎಂಎಫ್ ಪ್ರಸ್ತಾವನೆ ಸಲ್ಲಿಸಿದ್ದು, ಬೆಲೆ ಏರಿಕೆಯ ಅಂತಿಮ ನಿರ್ಧಾರ ಸಿಎಂ ಅಂಗಳದಲ್ಲಿದೆ.ಪ್ರತಿ ಲೀಟರ್ ಹಾಲಿಗೆ 5 ರೂ ಏರಿಕೆ ಮಾಡುವಂತೆ ಸಿಎಂ ಸಿದ್ದರಾಮಯ್ಯಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈಗಾಗಲೇ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ ದರ ಹೆಚ್ಚಳ, ಬೆಂಗಳೂರು ಮೆಟ್ರೋ ಟಿಕೆಟ್ ದರ ಏರಿಕೆಯ ಬರೆ ಕಾಯುತ್ತಿರುವ ಸಂದರ್ಭದಲ್ಲೇ ಹಾಲಿನ ದರ ಏರಿಕೆ ವಿಚಾರ ಗಮನಸೆಳೆದಿದೆ. ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್) ಹಾಲಿನ ದರ ಲೀಟರ್‌ಗೆ 5 ರೂಪಾಯಿ ಏರಿಸುವುದಕ್ಕೆ ಸಿದ್ಧತೆ ನಡೆಸಿದೆ ಎಂದು ಕೆಎಂಎಫ್ ಮೂಲಗಳು ತಿಳಿಸಿವೆ. ಜೂನ್ 2024ರಲ್ಲಿ ಪ್ರತಿ ಪ್ಯಾಕೇಟ್‌ಗೆ 50 ಮಿಲಿ ಲೀ. ಹಾಲು ಹೆಚ್ಚುವರಿಯಾಗಿ ಕೊಟ್ಟು ಮತ್ತೆ 2 ರು.ಏರಿಕೆ ಮಾಡಲಾಗಿತ್ತು. ಇದೀಗ ರಾಜ್ಯದ 16 ಹಾಲು ಒಕ್ಕೂಟಗಳಿಂದ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 5 ರು.ನಂತೆ ಏರಿಕೆ ಮಾಡಲು ಒತ್ತಡ ಹೆಚ್ಚುತ್ತಿದೆ. ಹೀಗಾಗಿ…
ಬೆಂಗಳೂರು : ಬೆಂಗಳೂರಿನ ವಿಧಾನಸೌಧದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ, ಹಲವು ಜನರಿಂದ ಕೋಟ್ಯಾಂತರ ರೂಪಾಯಿ ಹಣ ಪಡೆದು ದುಬೈಗೆ ಹಾರಿದ್ದ ಪಿಡಿಒ ಅಧಿಕಾರಿಯನ್ನು ಇಂದು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಅರೆಸ್ಟ್ ಮಾಡಿರುವ ಘಟನೆ ವರದಿಯಾಗಿದೆ. ಹೌದು ವಿಧಾನಸೌಧದಲ್ಲಿ ಸ್ಪೀಕರ್ ಕಚೇರಿಯಲ್ಲಿ ಕೆಲಸ ಕೊಡಿಸುವುದಾಗಿ ಪಿಡಿಒ ಅಧಿಕಾರಿ ಯೋಗೇಂದ್ರ ಹಲವರ ಬಳಿ ಹಣ ಪಡೆದುಕೊಂಡಿದ್ದ.ಮತ್ತೊಬ್ಬರಿಗೆ ಗೋಲ್ಡ್ ಬ್ಯುಸಿನೆಸ್ ಹೆಸರಲ್ಲಿ ವಂಚನೆಗೈಯ್ಯಲಾಗಿತ್ತು. ಇನ್ನೊಬ್ಬರಿಗೆ ಕ್ರಿಪ್ಟೋ ಕರೆನ್ಸಿ, ಟೆಂಬರ್ ಬ್ಯುಸಿನೆಸ್ ಹೆಸರಲ್ಲಿ ಟೋಪಿ ಹಾಕಲಾಗಿತ್ತು. ಇದೀಗ ವಂಚಕ ಪಿಡಿಓ ಯೋಗೇಂದ್ರ ಬಂಧನವಾಗಿದೆ. ಒಬ್ಬೊಬ್ಬರಿಗೆ ಕೋಟಿಗಟ್ಟಲೇ ಟೋಪಿ ಹಾಕಿರೋ ವಂಚಕ ಯೋಗೇಂದ್ರ, ದುಬೈಗೆ ಪರಾರಿಯಾಗಿದ್ದನು. ಬೆಂಗಳೂರಿಗೆ ವಾಪಸ್ ಆದ ವೇಳೆ ಏರ್ಪೋರ್ಟ್ ನಲ್ಲಿಯೇ ಪೊಲೀಸರ ಬಲೆಗೆ ಬಿದ್ದಿದ್ದಾನೆ.ದುಬೈನಲ್ಲಿ ತಲೆಮರೆಸಿಕೊಂಡಿದ್ದ ಯೋಗೇಂದ್ರ ಬೆಂಗಳೂರಿಗೆ ವಾಪಸ್ ಆದ ತಕ್ಷಣ ಲಾಕ್ ಆಗಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಪಿಡಿಓ ಯೋಗೇಂದ್ರ ವಿರುದ್ಧ ಚೆನ್ನಮ್ಮನಕೆರೆ, ಯಲಹಂಕ ನ್ಯೂಟೌನ್ ,ವಿವಿ ಪುರಂ,ಹಿರಿಯೂರು,ಚಿತ್ರದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ.ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಹೆಚ್ಚಿನ…