Author: kannadanewsnow05

ಚಿತ್ರದುರ್ಗ : ಚಿತ್ರದುರ್ಗ ಡಿಡಿಪಿಐ ಕಚೇರಿಯಲ್ಲಿ ಸಿಬ್ಬಂದಿಯಿಂದ ಎಣ್ಣೆ ಪಾರ್ಟಿ ಮಾಡಿದ್ದಾರೆ. ಡಿಡಿಪಿಐ ಕಚೇರಿಯಲ್ಲಿ ಸಿಬ್ಬಂದಿಗಳು ಎಣ್ಣೆ ಪಾರ್ಟಿ ಮಾಡಿದ ವಿಡಿಯೋ ಸದ್ಯ ವೈರಲ್ ಆಗಿದೆ. ಸಿಬ್ಬಂದಿ ವರ್ಗ ಕಾರು ಖರೀದಿ ಹಿನ್ನೆಲೆಯಲ್ಲಿ ಕಚೇರಿಯಲ್ಲಿಯೇ ಎಣ್ಣೆ ಪಾರ್ಟಿ ಮಾಡಿದ್ದಾರೆ. ಮಧ್ಯ ಬೆರೆಸಿದ ವಾಟರ್ ಕ್ಯಾನ್ ಕಚೇರಿಗೆ ತಂದಿದ್ದ ಸಿಬ್ಬಂದಿಗಳು ಫುಲ್ ಎಣ್ಣೆ ಪಾರ್ಟಿ ಮಾಡಿದ್ದಾರೆ. ಹೌದು ಚಿತ್ರದುರ್ಗದ ಡಿಡಿಪಿಐ ಕಚೇರಿಯಲ್ಲಿ ಹೊಸ ಕಾರು ಖರೀದಿ ಮಾಡುವ ಖುಷಿಯಲ್ಲಿ ಕ್ಯಾನ್ ತುಂಬ ಬಿಯರ್ ತಂದು ಕಚೇರಿಯಲ್ಲಿಯೇ ಎಣ್ಣೆ ಪಾರ್ಟಿ ಮಾಡಿದ್ದಾರೆ ಸದ್ಯಕ್ಕೆ ಈ ಒಂದು ವಿಡಿಯೋ ಭಾರಿ ವೈರಲ್ ಆಗಿದೆ. ಡಿಡಿಪಿಐ ಕಚೇರಿಯಲ್ಲಿ ಸಿಬ್ಬಂದಿಗಳು ಕುಡಿದು ಮೂರು ಮಾಸ್ತಿ ಮಾಡಿದ್ದಾರೆ ಡಿಡಿಪಿಐ ಮಂಜುನಾಥ್ ಕಾರು ಚಾಲಕ ಮತ್ತು ಸಿಬ್ಬಂದಿಗಳು ಭಾಗಿಯಾಗಿದ್ದಾರೆ.

Read More

ಹಾಸನ : ರಾಜ್ಯ ರಾಜಕೀಯದಲ್ಲಿ ಇದೀಗ ಭಾರಿ ವಿಚಾರ ಚರ್ಚೆಗೆ ಗ್ರಾಸವಾಗಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಶಕ್ತಿಯುತ ಖಡ್ಗಮಾಲಾ ಸ್ತೋತ್ರ ಹಾಗೂ ನಾರಾಯಣಿ ಪೂಜೆ, ಇಷ್ಟಾರ್ಥ ಸಿದ್ದಿಗಾಗಿ ನಾರಾಯಣಿ ಮಂತ್ರದೊಂದಿಗೆ ಡಿಸಿಎಂ ಡಿಕೆ ಶಿವಕುಮಾರ್ ಪೂಜೆ ಸಲ್ಲಿಸಿದ್ದಾರೆ. ಶತ್ರುಗಳ ಮೇಲೆ ವಿಜಯದ ಸಂಕೇತವಾಗಿ ಈ ಒಂದು ಪೂಜೆ ಮಾಡಿಸಿದ್ದು, 5 ನಿಮಿಷಗಳ ಕಾಲ ಶಕ್ತಿಯುತವಾದ ಖಡ್ಗಮಾಲಾ ಸ್ತೋತ್ರವನ್ನು ಡಿಸಿಎಂ ಡಿಕೆ ಶಿವಕುಮಾರ್ ಸ್ಪಟಿಸಿ ವಿಶೇಷವಾಗಿ ಪ್ರಾರ್ಥನೆ ಮಾಡಿದ್ದಾರೆ. ಹೌದು ಹಾಸನಾಂಬೆ ದೇಗುಲದಲ್ಲಿ ಶಕ್ತಿಯುತವಾದ ಖಡ್ಗಮಾಲಾ ಸ್ತೋತ್ರ ಪಠಿಸಿ ನಾರಾಯಣಿ ಮಂತ್ರದೊಂದಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ ಅತ್ಯಂತ ಪ್ರಬಲ ಪೂಜೆ ಇದಾಗಿದ್ದು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಚಂಡಿಕಾ ಹೋಮ ಮಾಡುವಂತಹ ವೇಳೆ ಈ ಮಂತ್ರವನ್ನು ಪಠಿಸಲಾಗಿದೆ. ನಿನ್ನೆ ಕುಟುಂಬದ ಸಮೇತ ಅವರು ಹಾಸನ ಪಡೆದು ಸಲ್ಲಿಸಿದರು. ಅದು ನಮಗೆ ಸೀರೆ ಬಳೆ ಅರ್ಪಣೆ ಮಾಡಿ ಶತ್ರುವಿನ ಮೇಲೆ ವಿಜಯದ ಸಂಕೇತವಾಗಿ ಪೂಜೆ ಸಲ್ಲಿಸಿದ್ದಾರೆ. ಹಾಸನಾಂಬೆ ದೇವಿಗೆ ಮೊಗ್ಗಿನ ಜಡೆ, ಬಳೆ, ಸೀರೆ ಹಾಗೂ ಹೂ…

Read More

ಬೆಂಗಳೂರು : ರಾಜ್ಯ ಸರ್ಕಾರದಿಂದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಾತಿಗಣತಿ ವೇಳೆ ಲೋಪವಾಗಿದೆ. ಕರ್ತವಲೋಪ್ಯ ಎಸಗಿದ 13 ಸಿಬ್ಬಂದಿಗಳಿಗೆ ಇದೀಗ ನೋಟಿಸ್ ಜಾರಿ ಮಾಡಲಾಗಿದೆ. ಗಣಿತಿದಾರರಿಗೆ ನಗರ ಪಾಲಿಕೆ ಜಂಟಿ ಆಯುಕ್ತರಿಂದ ನೋಟಿಸ್ ಜಾರಿಗೊಳಿಸಲಾಗಿದೆ. 5ಕ್ಕಿಂತ ಕಡಿಮೆ ಮನೆಗಳಿಗೆ ಗಣಿತ ಮಾಡಿರುವ ಆರೋಪ ಕೇಳಿ ಬಂದಿದೆ ಈ ಹಿನ್ನೆಲೆಯಲ್ಲಿ ಗಣತಿಗೆ ನೇಮಿಸಿದ 13 ಮಂದಿ ಮೇಲ್ವಿಚಾರಕರಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ನಿಮ್ಮಿಂದ ಗಣತಿ ಕಾರ್ಯ ಪ್ರಗತಿ ಕುಂಠಿತಗೊಂಡಿದೆ. ಸರ್ಕಾರದ ಆದೇಶಕ್ಕೆ ಕಿಂಚಿತ್ತು ಬೆಲೆ ಕೊಟ್ಟಿಲ್ಲ ಮೇಲ್ನೋಟಕ್ಕೆ ಕರ್ತವ್ಯ ಲೋಪ ಕಂಡು ಬಂದಿದೆ ಕೆಳಹಂತದ ಗಣಿತಿದಾರರಿಗೆ ಸರಿಯಾದ ಮಾರ್ಗದರ್ಶನ ನೀಡಿಲ್ಲ. ತಲುಪದ 24 ಗಂಟೆಯಲ್ಲಿ ಉತ್ತರ ನೀಡಬೇಕು ಎಂದು ಸೂಚನೆ ಸೂಚಿಸಲಾಗಿದೆ. ಸಮರ್ಪಕ ಉತ್ತರ ನೀಡದಿದ್ದರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ.

Read More

ಕಲಬುರ್ಗಿ : ಕಲ್ಬುರ್ಗಿಯಲ್ಲಿ ತಿಪ್ಪೇಗುಂಡಿಯಲ್ಲಿ ನಾಡಪಿಸ್ತುಲ್ ಹಾಗೂ ಮೂರು ಗುಂಡುಗಳು ಪತ್ತೆಯಾಗಿವೆ, ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಚಿಂಚೋಳಿ (ಹೆಚ್) ಗ್ರಾಮದಲ್ಲಿ ನಾಡಪಿಸ್ತುಲ್ ಮತ್ತು ಗುಂಡುಗಳು ಪತ್ತೆಯಾಗಿವೆ. ಟೈಲರ್ ಅಂಗಡಿಯಲ್ಲಿದ್ದ ಬಟ್ಟೆಗಳನ್ನು ಮಾಳಪ್ಪ ಎನ್ನುವ ವ್ಯಕ್ತಿ ಗುಂಡಿಗೆ ಹಾಕಿದ್ದ. ಈ ವೇಳೆ ಬಟ್ಟೆಗೆ ಬೆಂಕಿ ಹಚ್ಚಿದ ಕೆಲ ಸಮಯದ ಬಳಿಕ ಭಾರಿ ಸ್ಫೋಟದ ಶಬ್ದ ಕೇಳಿಸಿದೆ. ಆಗ ತಿಪ್ಪೆಗುಂಡಿ ಪರಿಶೀಲಿಸಿದಾಗ ಮೂರು ಗುಂಡು ಪತ್ತೆಯಾಗಿದೆ. ಈ ಸಂಬಂಧ ಕಾಳಿಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹಾಸನ : ರಾಜ್ಯ ರಾಜಕೀಯದಲ್ಲಿ ಇದೀಗ ಭಾರಿ ವಿಚಾರ ಚರ್ಚೆಗೆ ಗ್ರಾಸವಾಗಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಶಕ್ತಿಯುತ ಖಡ್ಗಮಾಲಾ ಸ್ತೋತ್ರ ಹಾಗೂ ನಾರಾಯಣಿ ಪೂಜೆ, ಇಷ್ಟಾರ್ಥ ಸಿದ್ದಿಗಾಗಿ ನಾರಾಯಣಿ ಮಂತ್ರದೊಂದಿಗೆ ಡಿಸಿಎಂ ಡಿಕೆ ಶಿವಕುಮಾರ್ ಪೂಜೆ ಸಲ್ಲಿಸಿದ್ದಾರೆ. ಶತ್ರುಗಳ ಮೇಲೆ ವಿಜಯದ ಸಂಕೇತವಾಗಿ ಈ ಒಂದು ಪೂಜೆ ಮಾಡಿಸಿದ್ದು, 5 ನಿಮಿಷಗಳ ಕಾಲ ಶಕ್ತಿಯುತವಾದ ಖಡ್ಗಮಾಲಾ ಸ್ತೋತ್ರವನ್ನು ಡಿಸಿಎಂ ಡಿಕೆ ಶಿವಕುಮಾರ್ ಸ್ಪಟಿಸಿ ವಿಶೇಷವಾಗಿ ಪ್ರಾರ್ಥನೆ ಮಾಡಿದ್ದಾರೆ. ಹೌದು ಹಾಸನಾಂಬೆ ದೇಗುಲದಲ್ಲಿ ಶಕ್ತಿಯುತವಾದ ಖಡ್ಗಮಾಲಾ ಸ್ತೋತ್ರ ಪಠಿಸಿ ನಾರಾಯಣಿ ಮಂತ್ರದೊಂದಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ ಅತ್ಯಂತ ಪ್ರಬಲ ಪೂಜೆ ಇದಾಗಿದ್ದು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಚಂಡಿಕಾ ಹೋಮ ಮಾಡುವಂತಹ ವೇಳೆ ಈ ಮಂತ್ರವನ್ನು ಪಠಿಸಲಾಗಿದೆ. ನಿನ್ನೆ ಕುಟುಂಬದ ಸಮೇತ ಅವರು ಹಾಸನ ಪಡೆದು ಸಲ್ಲಿಸಿದರು. ಅದು ನಮಗೆ ಸೀರೆ ಬಳೆ ಅರ್ಪಣೆ ಮಾಡಿ ಶತ್ರುವಿನ ಮೇಲೆ ವಿಜಯದ ಸಂಕೇತವಾಗಿ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ನನಗೆ ಸಿಎಂ ಸ್ಥಾನ ಸಿಗುವ…

Read More

ಬೆಂಗಳೂರು : ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಬೆಂಗಳೂರು ನಗರ-2, ಬೆಂಗಳೂರು ಗ್ರಾಮಾಂತರ-1, ಚಿತ್ರದುರ್ಗ-1, ದಾವಣಗೆರೆ-2, ಹಾವೇರಿ-2, ಬೀದರ್-1, ಉಡುಪಿ-1, ಬಾಗಲಕೋಟೆ-1 ಮತ್ತು ಹಾಸನ-1 ಜಿಲ್ಲಾ ಲೋಕಾಯುಕ್ತ ಪೊಲೀಸ್ ಠಾಣೆಗಳಲ್ಲಿ ಒಟ್ಟು 12 ಸರ್ಕಾರಿ ಅಧಿಕಾರಿಗಳು ತಮ್ಮ ಬಲ್ಲ ಆದಾಯದ ಮೂಲಗಳಿಗಿಂತ ಹೆಚ್ಚು ಅಸಮತೋಲನ ಆಸ್ತಿಯನ್ನು ಹೊಂದಿದ್ದ ಬಗ್ಗೆ ಪ್ರಕರಣಗಳು ದಾಖಲಾಗಿರುತ್ತವೆ. ಈ ಕುರಿತಂತೆ ಕರ್ನಾಟಕ ಲೋಕಾಯುಕ್ತದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ: 14.10.2025 ರಂದು ಆರೋಪಿತ ಸರ್ಕಾರಿ ಅಧಿಕಾರಿಗಳಿಗೆ ಸಂಬಧಿಸಿದ ಮನೆ, ಕಛೇರಿ ಹಾಗೂ ಸಂಬಂಧಿಕರ ಮನೆಗಳು ಸೇರಿದಂತೆ ಒಟ್ಟು 48 ಸ್ಥಳಗಳಲ್ಲಿ ಏಕ ಕಾಲಕ್ಕೆ ಶೋಧನಾ ಕಾರ್ಯ ಕೈಗೊಂಡಿದ್ದು, ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಅಸಮತೋಲನ ಆಸ್ತಿ ಹೊಂದಿದ್ದ ಬಗ್ಗೆ ಮಾಹಿತಿ ತಿಳಿದುಬಂದಿರುತ್ತದೆ ಎಂದಿದೆ. 1) ಮಂಜುನಾಥ. ಜಿ, ವೈದ್ಯಾಧಿಕಾರಿಗಳು, ಹೆರಿಗೆ ಆಸ್ಪತ್ರೆ, ಮಲ್ಲಸಂದ್ರ, ಬೆಂಗಳೂರು. ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 4 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು…

Read More

ಮೈಸೂರು : ಇಂದು ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2:40ಕ್ಕೆ ಹಾಸನದಿಂದ ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಆಗಮಿಸಲಿದ್ದು, ಹೆಲಿಕ್ಯಾಪ್ಟರ್ ನಲ್ಲಿ ಮೈಸೂರಿಗೆ ಆಗಮಿಸಲಿದ್ದಾರೆ. ಮೈಸೂರಿನಲ್ಲಿ ಬೌದ್ಧ ಮಹಾ ಸಮ್ಮೇಳನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ಈ ಒಂದು ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.ಮೈಸೂರಿನಲ್ಲಿ ಕರ್ನಾಟಕ ರಾಜ್ಯ ಭಿಕ್ಕು ಸಂಘ ಹಾಗೂ ರಾಜ್ಯ ಬೌದ್ಧ ಸಂಘ ಸಂಸ್ಥೆ ಈ ಒಂದು ಕಾರ್ಯಕ್ರಮ ಆಯೋಜಿಸಿದ್ದು, ಕಾರ್ಯಕ್ರಮದ ಬಳಿಕ ಮತ್ತೆ ಸಂಜೆ 7 ಗಂಟೆಗೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

Read More

ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ನವೆಂಬರ್‌ಗೆ ಎರಡೂವರೆ ವರ್ಷ ಪೂರೈಸಲಿದೆ. ನವೆಂಬರ್‌ ವೇಳೆಗೆ ರಾಜ್ಯ ರಾಜಕೀಯದಲ್ಲಿ ಮಹಾಕ್ರಾಂತಿಯಾಗಲಿದೆ ಎನ್ನುವ ಚರ್ಚೆ ಕೇಳಿ ಬರುತ್ತಿದ್ದು, ಈ ನಡುವೆ ಮುಖ್ಯಮಂತ್ರಿ ಬದಲಾವಣೆ ಹಾಗೂ ಸಚಿವ ಸಂಪುಟ ಪುನರ್‌ರಚನೆ ಕುರಿತು ಹಲವು ಚರ್ಚೆಗಳು ನಡೆದಿವೆ. ಇದೀಗ ಸಂಪುಟ ಪುನಾರಚನೆ ಆದ್ರೆ 15 ಹಾಲಿ ಸಚಿವರಿಗೆ ಗೇಟ್ ಪಾಸ್ ನೀಡೋದಂತು ಪಕ್ಕಾ, ಹಾಗಾಗಿ 15 ಶಾಸಕರಿಗೆ ಸಚಿವ ಸ್ಥಾನ ಸಿಗಲಿದೆ. ಇನ್ನೂ 15 ಜನ ಹಿರಿಯ ಶಾಸಕರು ಹಾಗೂ ಹೊಸ ಮುಖಗಳಿಗೆ ಮಣೆ ಹಾಕಲು ಹೈಕಮಾಂಡ್‌ ಮುಂದಾಗಿದೆ. ಏಕೆಂದರೆ ಮುಂದಿನ 2028 ರ ವಿಧಾನಸಭಾ ಚುನಾವಣೆಯನ್ನ ಗಮನದಲ್ಲಿಟ್ಟುಕೊಂಡು ಅಸಮಾಧಾನಿತ ನಾಯಕರಿಗೆ ಮಂತ್ರಿ ಪಟ್ಟ ಕಟ್ಟಲು ತಯಾರಿ ನಡೆಸಿದೆ. ನವೆಂಬರ್ ಎರಡನೇ ವಾರದಲ್ಲಿ, ರಾಜ್ಯದ ನಾಯಕರು ದೆಹಲಿಗೆ ತೆರಳಿ ಹೈಕಮಾಂಡ್ ಜೊತೆ ಅಂತಿಮ ಸುತ್ತಿನ ಮಾತುಕತೆ ನಡೆಸಲಿದ್ದಾರೆ. ಹೈಕಮಾಂಡ್‌ನಿಂದ ಹಸಿರು ನಿಶಾನೆ ಸಿಗುತ್ತಿದ್ದಂತೆಯೇ ಸಂಪುಟ ಪುನಾರಚನೆಯ ಕಸರತ್ತು ಅಧಿಕೃತವಾಗಿ ಆರಂಭವಾಗಲಿದೆ. ನವೆಂಬರ್ ತಿಂಗಳಾಂತ್ಯದ ವೇಳೆಗೆ…

Read More

ಹಾಸನ : ಹಾಸನಾಂಬ ದೇವಾಲಯಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಪೂಜೆ ಸಲ್ಲಿಸಿದ್ದು ನಿನ್ನೆ ಅಷ್ಟೇ ಡಿಕೆ ಶಿವಕುಮಾರ್ ಹಾಸನಾಂಬೆಗೆ ಪೂಜೆ ಪುನಸ್ಕಾರ ಸಲ್ಲಿಸಿದರು. ಹಾಸನ ಬಗ್ಗೆ ಪೂಜೆ ಸಲ್ಲಿಸಿ ಡಿಕೆ ಶಿವಕುಮಾರ್ ಅಚ್ಚರಿಯ ಹೇಳಿಕೆ ನೀಡಿದ್ದು ದೇವರಿಗೂ ಭಕ್ತನಿಗೂ ವ್ಯವಹಾರ ನಡೆಯುವ ಸ್ಥಳ ಅಂದರೆ ದೇವಾಲಯ ಸಿಎಂ ಸ್ಥಾನ ಸಿಗುವ ವಿಚಾರ ನನಗೆ ಮತ್ತು ಭಗವಂತನಿಗೆ ಮಾತ್ರ ಗೊತ್ತಿದೆ ಎಂದು ಹೇಳಿಕೆ ನೀಡಿದ್ದಾರೆ. ನಿನ್ನೆ ಶ್ರೀ ಹಾಸನಾಂಬ ದೇವಾಲಯಕ್ಕೆ ಕುಟುಂಬಸಮೇತ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದುರ್ಗಿಯ ಸ್ವರೂಪಿ, ಶಾರದೆ ಸ್ವರೂಪಿಯಾದ ತಾಯಿ ಹಾಸನಾಂಬೆಯ ದರ್ಶನ ಭಾಗ್ಯ ನಮ್ಮಲ್ಲರಿಗೂ ಸಿಕ್ಕಿದೆ. ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಶಕ್ತಿ ದೇವತೆಯಾಗಿದ್ದು, ಭಕ್ತರ ದುಃಖವನ್ನು ಪರಿಹರಿಸುತ್ತಾಳೆ ಎಂದರು. ಭಕ್ತರು ತಮಗೆ ನೆಮ್ಮದಿ, ಶಾಂತಿಯ ಬದುಕನ್ನು ಕೊಡು ಎಂದು ತಾಯಿಯಲ್ಲಿ ಬೇಡಿಕೊಳ್ಳುತ್ತಾರೆ. ಭಕ್ತನಿಗೂ ಭಗವಂತನಿಗೂ ವ್ಯವಹಾರ ನಡೆಯುವ ಸ್ಥಳ ದೇವಾಲಯ. ಎಲ್ಲ ಜನರು ವಿಶೇಷವಾದ ದರ್ಶನ…

Read More

ಬೆಂಗಳೂರು : ಬೆಂಗಳೂರಿನ ಬಡವರು ಮತ್ತು ಮಧ್ಯಮ ವರ್ಗದವರು ಅನಧಿಕೃತವಾಗಿ ನಿರ್ಮಿಸಿರುವ ಸಣ್ಣ ವಿಸ್ತೀರ್ಣದ ಮನೆಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ ಪಡೆಯುವುದರಿಂದ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೌದು ಬೆಂಗಳೂರಿನ ನಿವಾಸಿಗಳಿಗೆ ನಗರಾಭಿವೃದ್ಧಿ ಇಲಾಖೆ ಗುಡ್ ನ್ಯೂಸ್ ನೀಡಿದೆ. ಗ್ರೇಟರ್‌ ಬೆಂಗಳೂರು ಆಡಳಿತ (GBA) ವ್ಯಾಪ್ತಿಯಲ್ಲಿ 1200 ಚದರಡಿ(30*40 ಸೈಟ್‌) ವ್ಯಾಪ್ತಿಯ ವಿಸ್ತೀರ್ಣದಲ್ಲಿ ನಿರ್ಮಾಣಗೊಂಡಿರುವ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರ ಪಡೆಯುವುದರಿಂದ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಅಕ್ಟೋಬರ್ 9ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿತ್ತು. ಈ ನಿರ್ಧಾರದ ಅನ್ವಯ ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳ 1200 ಚದರ ಅಡಿ ಜಾಗದಲ್ಲಿ ನಿರ್ಮಾಣಗೊಂಡಿರುವ ನೆಲ+2 ಅಂತಸ್ತು ಅಥವಾ ಸ್ಟಿಲ್ಟ್‌(ಬೇಸ್‌ಮೆಂಟ್‌ ಪಾರ್ಕಿಂಗ್‌)+3 ಅಂತಸ್ತುಗಳವರೆಗಿನ ವಸತಿ ಕಟ್ಟಡಗಳಿಗೆ ಓಸಿ ಪಡೆಯುವುದರಿಂದ ವಿನಾಯಿತಿ ನೀಡಿ ಆದೇಶಿಸಿದೆ. 30*40 ಸೈಟ್ ನಲ್ಲಿ ನೆಲ +2 ಅಂತಸ್ತಿನ ಕಟ್ಟಡಗಳಿಗೆ, ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರ ಪಡೆಯುವುದರಿಂದ ವಿನಾಯಿತಿ ನೀಡಲಾಗಿದೆ.…

Read More