Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯದಲ್ಲಿ ಕೆಪಿಎಸ್ ಶಾಲೆಗಳ ಗುಣಮಟ್ಟ ಮತ್ತಷ್ಟು ಹೆಚ್ಚಿಸುವ ಉದ್ದೇಶದಿಂದ ಶೀಘ್ರದಲ್ಲೇ ಶಿಕ್ಷಕರನ್ನು ನೇಮಕ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಘೋಷಣೆ ಮಾಡಿದರು. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸರ್ಕಾರಿ ಕೆಪಿಎಸ್ (KPS) ಶಾಲೆಗಳ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸುವ ಉದ್ದೇಶದಿಂದ, ಆಹಾರ ಸಂಗೀತ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಕಲಾ ಶಿಕ್ಷಕರ ನೇಮಕಾತಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದರು. ಈ ಮಹತ್ವದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಅವರು ಶಿವಮೊಗ್ಗದಿಂದಲೇ ಅಧಿಕೃತ ಚಾಲನೆ ನೀಡಲಿದ್ದಾರೆ ಎಂಬುದನ್ನೂ ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು. 1995ರಿಂದ ಹತ್ತು ವರ್ಷಗಳ ಕಾಲ ಅನುದಾನವಿಲ್ಲದೆ ಕಾರ್ಯನಿರ್ವಹಿಸುತ್ತಿರುವ ಕನ್ನಡ ಶಾಲೆಗಳಿಗೆ ರಾಜ್ಯ ಬಜೆಟ್ನಲ್ಲಿ ಅನುದಾನ ಒದಗಿಸುವಂತೆ ಸರ್ಕಾರಕ್ಕೆ ಮನವಿ ಮಾಡಿರುವುದಾಗಿ ತಿಳಿಸಿದ್ದಾರೆ. ಶಿಕ್ಷಣ ಕ್ಷೇತ್ರದ ಬಲವರ್ಧನೆ ಸರ್ಕಾರದ ಪ್ರಮುಖ ಗುರಿಯಾಗಿದ್ದು, ಈ ಕುರಿತು ಫೆಬ್ರವರಿ 2ರಂದು ಬಜೆಟ್ ಪೂರ್ವ ಸಭೆಯನ್ನು ಕರೆಯಲಾಗಿದೆ ಎಂದು ಅವರು ಹೇಳಿದರು.
ಬಳ್ಳಾರಿ : ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ನಗರಸಭೆ ಕಾರ್ಯಾಲಯದಲ್ಲಿ ಹಿರಿಯ ಆರೋಗ್ಯ ಅಧಿಕಾರಿಯೊಬ್ಬರು ಕಿರಿಯ ಮಹಿಳಾ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಹಿರಿಯ ಆರೋಗ್ಯ ಅಧಿಕಾರಿ ರಂಗಸ್ವಾಮಿ, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳಾ ಆರೋಗ್ಯ ಅಧಿಕಾರಿ ಆರೋಪಿಸಿದ್ದಾರೆ. ಈ ಸಂಬಂಧ ಮಹಿಳಾ ಅಧಿಕಾರಿ ದೂರು ನೀಡಿದ್ದಾರೆ. ದೂರಿನ ಅನ್ವಯ ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಎಚ್ಚರಿಕೆ ನೀಡಿದ್ರೂ ಪದೇಪದೇ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ವಿಷಯ ಬಹಿರಂಗ ಮಾಡಿದರೆ ಪೌರಕಾರ್ಮಿಕರ ಮುಂದೆ ಅವಮಾನ ಮಾಡುವ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಬೆಳಗಾವಿ : ಬೆಳಗಾವಿಯಲ್ಲಿ ಭೀಕರವಾದ ಅಪಘಾತ ಒಂದು ಸಂಭವಿಸಿದ್ದು ರಸ್ತೆ ಬದಿ ನಿಂತಿದ್ದ ಕಾರಿಗೆ ವೇಗವಾಗಿ ಬಂದಂತಹ ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ದಂಪತಿಗಳು ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೂಗನೋಳ್ಳಿ ಎಂಬಲ್ಲಿ ಈ ಒಂದು ಅಪಘಾತ ಸಂಭವಿಸಿದ್ದು, ಮೃತ ದಂಪತಿಗಳು ಕೊಲ್ಲಾಪುರದ ಮೂಲದವರು ಎಂದು ತಿಳಿದುಬಂದಿದೆ. ಹುಬ್ಬಳ್ಳಿಯಿಂದ ಕೊಲ್ಲಾಪುರಕ್ಕೆ ತೆರಳುವಾಗ ಕೂಗನೋಳ್ಳಿ ಎಂಬಲ್ಲಿ ದಂಪತಿಗಳು ಕಾರು ನಿಲ್ಲಿಸಿದ್ದಾರೆ. ಈ ವೇಳೆ ಹಿಂಬದಿಯಿಂದ ವೇಗವಾಗಿ ಬಂದಂತಹ ಕಂಟೇನರ್ ಒಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿಗಳು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿತ್ತಾದರು ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಘಟನೆ ಕುರಿತು ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾಸನ : ಶ್ರವಣಬೆಳಗೊಳ ಹಾಗೂ ಅರಸೀಕೆರೆಯಲ್ಲಿ ರವಿವಾರ ಹಮ್ಮಿಕೊಂಡಿದ್ದ ಹಿಂದೂ ಸಮಾಜೋತ್ಸವದಲ್ಲಿ ಭಾಷಣಕಾರರಾಗಿ ಭಾಗವಹಿಸಬೇಕಿದ್ದ ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಗೆ ಜಿಲ್ಲಾ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಆದೇಶಿಸಿದ್ದಾರೆ. ಪ್ರಚೋದನಕಾರಿ ಭಾಷಣ ಮಾಡಿರುವ ಸಂಬಂಧ ವಿವಿಧ ಜಿಲ್ಲೆಗಳಲ್ಲಿ ಶರಣ್ ಪಂಪ್ವೆಲ್ ವಿರುದ್ಧ ಪ್ರಕರಣ ದಾಖಲಾಗಿವೆ. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದಶರಣ್ ಪಂಪ್ವೆಲ್ ಜಿಲ್ಲೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ : ರಾಜ್ಯದಲ್ಲಿ ಮತ್ತೊಂದು ಭಾರಿ ಅನಾಹುತ ಒಂದು ತಪ್ಪಿದ್ದು, ಖಾಸಗಿ ಬಸ್ ಒಂದು ಆಕಸ್ಮಿಕ ಬೆಂಕಿಯಿಂದಾಗಿ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಖಾಸಗಿ ಬಸ್ ನಲ್ಲಿ ಇದ್ದ ಪ್ರಯಾಣಿಕರು ಪಾರಾಗಿರುವ ಘಟನೆ ಸಿಗಂದೂರು ಬಳಿ ಹುಲಿದೇವರ ಬನ ಗ್ರಾಮದ ಬಳಿ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಕ್ಷೇತ್ರದ ಬಳಿ ಖಾಸಗಿ ಬಸ್ಸಿಗೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿತ್ತು. ಬೆಂಕಿ ಕಂಡು ಹುಲಿದೇವರಬನ ಗ್ರಾಮಸ್ಥರು ಬಸ್ ನಿಲ್ಲಿಸಿದ್ದಾರೆ. ಬಸ್ ಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ಜನ ನಂದಿಸಿದ್ದಾರೆ. ಅದೃಷ್ಟವಶಾತ್ ಬಸ್ ನಲ್ಲಿ ಇದ್ದ ಎಲ್ಲಾ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಭೀಕರವಾದ ಕೊಲೆಯಾಗಿದ್ದು ನೆಲಮಂಗಲದ ರೌಡಿಶೀಟರ್ ಆಟೋ ನಾಗನನ್ನು ಮಾರಕಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಬಾಲಾಜಿ ಫಾರ್ಮ್ ಹೌಸ್ ನಲ್ಲಿ ರೌಡಿಶೀಟರ್ ಆಟೋ ನಾಗನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಲಗ್ಗೆರೆ ಮತ್ತು ಹುಲಿಯೂರು ದುರ್ಘಟ್ಟ ವ್ಯಾಪ್ತಿಯ ರೌಡಿಶೀಟರ್ ಆಗಿದ್ದ ಆಟೋ ನಾಗ ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಳಗಾವಿ : ಕರ್ನಾಟಕ ಮತ್ತು ಗೋವಾ ಗಡಿ ಭಾಗದಲ್ಲಿ 400 ಕೋಟಿ ರಾಬರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸ್ಪೋಟಕ ಆಡಿಯೋ ಲಭ್ಯವಾಗಿದೆ. ಕರ್ನಾಟಕ ಗೋವಾ ಗಡಿಯಲ್ಲಿ 400 ಕೋಟಿ ದರೋಡೆ ಕೇಸ್ ಗೆ ಸಂಬಂಧಪಟ್ಟಂತೆ ಆರೋಪಿಗಳು ಇಬ್ಬರು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಆರೋಪಿಗಳಾದ ವಿರಾಟ್ ಮತ್ತು ಜಯೆಶ್ ಮಾತನಾಡಿದ್ದಾರೆ ಎನ್ನುವ ಆಡಿಯೋ ವೈರಲ್ ಆಗಿದೆ. ಇಬ್ಬರು ಮಾತನಾಡಿದ್ದಾರೆ ಆಶ್ರಮ ಒಂದರಲ್ಲಿ ಎರಡು ಸಾವಿರ ಹಣ ಬದಲಾವಣೆ ಕುರಿತು ಚರ್ಚೆ ಮಾಡಿದ್ದಾರೆ. ಅಹಮದಾಬಾದ್ ನ ಆಶ್ರಮ ಒಂದರಲ್ಲಿ ಡೀಲ್ ಕುರಿತು ಮಾತು ಆಡಿದ್ದಾರೆ. ಉದ್ಯಮಿ ಕಿಶೋರ್ ಬಳಿ ಹಣ ಇರುವ ಕುರಿತು ಮಾತುಕತೆ ನಡೆದಿರುವ ಆಡಿಯೋ ವೈರಲ್ ಆಗಿದೆ. ಉದ್ಯಮಿ ಕಿಶೋರ್ ಮತ್ತು ಆರೋಪಿ ಜಯೇಶ್ ಆಡಿಯೋ ವೈರಲಾಗಿದೆ ಹಣ ಸಾಗಣೆ ಮತ್ತು ಹಣ ದರೋಡೆಯಾಗಿರುವ ಕುರಿತು ಚರ್ಚಿಸಿದ್ದು ಹಣ ಸಾಗಾಟದ ಜವಾಬ್ದಾರಿಯನ್ನು ಆರೋಪಿ ವಿರಾಟ್ ಹೊತ್ತುಕೊಂಡಿದ್ದ. ವಿರಾಟ್ ಹುಡುಗರ ಮೂಲಕ ಹಣ ಸಾಗಿಸಲು ಹೇಳಲಾಗಿತ್ತು ಈಗ ವಿರಾಟ್ ಗ್ಯಾಂಗಿನ…
ಬೆಂಗಳೂರು : ಜೆಡಿಎಸ್ ಅಧಿಕಾರಕ್ಕೆ ಬರಲ್ಲಾ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ ವಿಚಾರವಾಗಿ 2018 ರಲ್ಲಿ ಅವರಪ್ಪನ ಆಣೆ ಕುಮಾರಸ್ವಾಮಿ ಸಿಎಂ ಆಗಲ್ಲ ಅಂದರು. ಆಮೇಲೆ 2018ರಲ್ಲಿ ನಾನು ಮುಖ್ಯಮಂತ್ರಿ ಆಗಿಲ್ವಾ? 2028 ರಲ್ಲೂ ಹಾಗೆ ಆಗುತ್ತೆ ಅಂತ ಅನಿಸುತ್ತೆ ಎಂದು ಕೇಂದ್ರ ಸಚಿವ HD ಕುಮಾರಸ್ವಾಮಿ ತಿಳಿಸಿದರು. ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಸಮೀಪದ ಬೈರಮಂಗಲದಲ್ಲಿ ಮಾತನಾಡಿದ ಅವರು, 2018 ರಲ್ಲಿ ಅವರಪ್ಪನ ಆಣೆ ಕುಮಾರಸ್ವಾಮಿ ಸಿಎಂ ಆಗಲ್ಲ ಅಂದರು. ಆಮೇಲೆ 2018ರಲ್ಲಿ ನಾನು ಮುಖ್ಯಮಂತ್ರಿ ಆಗಿಲ್ವಾ? ಸಿದ್ದರಾಮಯ್ಯನವರೇ ನಮ್ಮ ಮನೆಗೆ ಹುಡುಕಿಕೊಂಡು ಬಂದಿದ್ದರು. 2028 ರಲ್ಲೂ ಹಾಗೆ ಆಗುತ್ತೆ ಅಂತ ಅನಿಸುತ್ತದೆ ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ನಾನು ಹಾಗೆ ತೆಗೆದುಕೊಳ್ಳುತ್ತೇನೆ ಎಂದು ಕೇಂದ್ರ ಸಚಿವ HD ಕುಮಾರಸ್ವಾಮಿ ತಿಳಿಸಿದರು. ನನ್ನ ಮೇಲೆ ಅಭಿಮಾನ ಇರುವಂತಹ ಯುವಕರು ಘೋಷಣೆ ಕೂಗುತ್ತಾರೆ 2028ಕ್ಕೆ ಹೆಚ್ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಅಂತ ಕುಗ್ತಾರೆ ಆದರೆ ಸಭೆಯಲ್ಲಿ ಈಗಾಗಲೇ ನೇರವಾಗಿ ಹೇಳಿದ್ದೇನೆ. ನನಗೆ ಮುಖ್ಯಮಂತ್ರಿ…
ಬೆಂಗಳೂರು : ರಾಜ್ಯದಲ್ಲಿ ಎಂದಿಗೂ ಜೆಡಿಎಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ ಬೆನ್ನಲ್ಲಿಯೇ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ 2028ಕ್ಕೆ ರಾಜ್ಯದಲ್ಲಿ NDA ಅಧಿಕಾರಕ್ಕೆ ಬರುತ್ತದೆ ಎಂದು ತಿಳಿಸಿದರು. ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಸಮೀಪದ ಭೈರಮಂಗಲದಲ್ಲಿ ಮಾತನಾಡಿದ ಅವರು ನನ್ನ ಮೇಲೆ ಅಭಿಮಾನ ಇರುವಂತಹ ಯುವಕರು ಘೋಷಣೆ ಕೂಗುತ್ತಾರೆ 2028ಕ್ಕೆ ಹೆಚ್ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಅಂತ ಕುಗ್ತಾರೆ ಆದರೆ ಸಭೆಯಲ್ಲಿ ಈಗಾಗಲೇ ನೇರವಾಗಿ ಹೇಳಿದ್ದೇನೆ. ನನಗೆ ಮುಖ್ಯಮಂತ್ರಿ ಆಗುವುದು ಮುಖ್ಯ ಅಲ್ಲ ರಾಜ್ಯದಲ್ಲಿ ಜನತಾ ಸರ್ಕಾರ ಬರಬೇಕು ಅನ್ನುವುದು ನನ್ನ ಹೋರಾಟ ಎಂದು ಎಚ್ ಡಿ ಕುಮಾರಸ್ವಾಮಿ ತಿಳಿಸಿದರು. 2028ಕ್ಕೆ ರಾಮರಾಜ ರೈತರ ಸರ್ಕಾರ ಬರುತ್ತದೆ ಅದಕ್ಕಾಗಿಯೇ ಭಗವಂತ ಆರನೇ ಬಾರಿ ನನ್ನನ್ನು ಬದುಕಿಸಿದ್ದಾನೆ. 2028 ರಲ್ಲಿ ರಾಜ್ಯದಲ್ಲಿ ಜನತೆಯ ಸರ್ಕಾರ, ನಿಜವಾದ ರಾಮರಾಜ್ಯ ಸರ್ಕಾರ ತರಬೇಕು ಅಂತಲೇ ಆ ಭಗವಂತ ನನಗೆ 6ನೇ ಬಾರಿ ಬದುಕುಳಿಸಿದ್ದಾನೆ. ಕಾಂಗ್ರೆಸ್ ಮಹಾನುಭಾವನಿಗೂ ಬುದ್ಧಿ ಹೇಳುತ್ತೇನೆ ಮನೆಹಾಳು…
ಬೆಂಗಳೂರು : ರಾಜ್ಯದಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ಒಂದು ನಡೆದಿದ್ದು, ಕಾಲೇಜು ವಿದ್ಯಾರ್ಥಿಗೆ ಪೊಲೀಸ್ ಕಾನ್ಸ್ಟೇಬಲ್ ಒಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ಇದೀಗ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕಾನ್ಸ್ಟೇಬಲ್ ಅನ್ನು ಅರೆಸ್ಟ್ ಮಾಡಲಾಗಿದೆ. ಆರ್.ಟಿ.ನಗರ ಠಾಣೆಯ ಕಾನ್ಸ್ಟೇಬಲ್ ಯಮುನಾ ನಾಯಕ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದೆ. ಸಂತ್ರಸ್ತ ಯುವಕ ನೀಡಿದ ದೂರಿನ ಮೇರೆಗೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಾರಪೇಟೆ ಠಾಣೆ ಪೊಲೀಸರು, ಯಮುನಾ ನಾಯಕ್ನನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಇತ್ತೀಚೆಗೆ ಫ್ರೀಡಂ ಪಾರ್ಕ್ನಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಯಮುನಾ ನಾಯಕ್, ತನಗೆ ಲೈಂಗಿಕ ಕಿರುಕುಳ ನೀಡಿದ್ದ ಎಂದು ಪಿಯುಸಿ ವಿದ್ಯಾರ್ಥಿಯೋರ್ವ ಆರೋಪಿಸಿದ್ದಾನೆ. ಈ ಸಂಬಂಧ ನೊಂದ ವಿದ್ಯಾರ್ಥಿ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರ ಮೇರೆಗೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸದ್ಯ ಯಮುನಾ ನಾಯಕ್ನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.














