Subscribe to Updates
Get the latest creative news from FooBar about art, design and business.
Author: kannadanewsnow05
ಬೆಳಗಾವಿ : ಹೆಚ್ಚು ಕುಡಿತದ ಚಟಕ್ಕೆ ಬಿದ್ದಿದ್ದ ತಮ್ಮನನ್ನು ಅಣ್ಣ ಪ್ರಶ್ನಿಸಿದ್ದಾನೆ. ಇದೇ ವಿಚಾರಕ್ಕೆ ಅಣ್ಣ-ತಮ್ಮಂದಿರ ನಡುವೆ ಗಲಾಟೆ ನಡೆದು ಗಲಾಟೆ ವಿಕೋಪಕ್ಕೆ ತಿರುಗಿ ಅಣ್ಣ ಮಾರಕಾಸ್ತ್ರದಿಂದ ತಮ್ಮನನ್ನು ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಎಸ್ ಧಾಗೇರಾ ಗ್ರಾಮದಲ್ಲಿ ಒಂದು ಘಟನೆ ನಡೆದಿದೆ. ಮಾರಕಾಸ್ತ್ರದಿಂದ ಕೊಚ್ಚಿ ಲಕ್ಷ್ಮಣ ಬರಮ ಬಾಳೆಕುಂದ್ರಿ (28) ಭೀಕರ ಕೊಲೆಯಾಗಿದೆ. ಕೊಲೆ ಮಾಡಿದ ಅಣ್ಣ ಮಾರುತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಷ್ಟಪಟ್ಟು ದುಡಿದು ಅಣ್ಣತಮ್ಮಂದಿರು ಹೊಸದಾಗಿ ಮನೆ ಕಟ್ಟಿದ್ದರು. ತಂದೆ ಇಲ್ಲದೆ ಇಬ್ಬರು ಸಹೋದರರು ತಾಯಿಯ ಆರೈಕೆಯಲ್ಲಿ ಬೆಳೆದಿದ್ದರು. ಮನೆ ಕಟ್ಟಿ ಮದುವೆ ಮಾಡಿಕೊಡುವ ಪ್ಲಾನ್ ನಲ್ಲಿ ಇದ್ದರು. ತಮ್ಮ ಲಕ್ಷ್ಮಣ್ ಹೆಚ್ಚು ಕುಡಿಯುತ್ತಿದ್ದದ್ದನ್ನು ಅಣ್ಣ ಮಾರುತಿ ಪ್ರಶ್ನಿಸಿದ್ದಾನೆ. ಇಬ್ಬರ ನಡುವೆ ಇದೆ ವಿಚಾರಕ್ಕೆ ಗಲಾಟೆ ಆಗಿ ಸಹೋದರ ಮಾರುತಿ ತಮ್ಮನನ್ನೇ ಕೊಲೆ ಮಾಡಿದ್ದಾನೆ. ಎರಡು ದಿನದ ಹಿಂದೆ ನಡೆದ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ…
ಶಿವಮೊಗ್ಗ : ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆಗೆ ಜನಿವಾರ ತೆಗೆಸಿರುವ ಆರೋಪ ಕೇಳಿಬಂದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಈ ಒಂದು ಘಟನೆ ನಡೆದಿದೆ ಎನ್ನಲಾಗಿದೆ. ತೀರ್ಥಹಳ್ಳಿಯ ಆದಿಚುಂಚನಗಿರಿ ಕಾಲೇಜಿನ ಸಿಇಟಿ ಪರೀಕ್ಷ ಕೇಂದ್ರದಲ್ಲಿ ನಿನ್ನೆ ಎರಡನೇ ದಿನದ ಸಿಇಟಿ ಪರೀಕ್ಷೆ ವೇಳೆ ಘಟನೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಗಾಯತ್ರಿ ದೀಕ್ಷೆ ಪಡೆದ ಜನಿವಾರವನ್ನು ತೆಗೆದಿಸಿದ್ದಕ್ಕೆ ಇದೀಗ ಆಕ್ರೋಶ ವ್ಯಕ್ತವಾಗಿದ್ದು, ಬ್ರಾಹ್ಮಣ ಮಹಾಸಭಾ ಮತ್ತು ವಿಪ್ರ ಸಂಘಟನೆ ಒಕ್ಕೂಟದಿಂದ ಆಕ್ರೋಶ ವ್ಯಕ್ತವಾಗಿದೆ. ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಇದೀಗ ಆಗ್ರಹಿಸಿದ್ದಾರೆ. ಪ್ರತಿಯೊಬ್ಬರಿಗೂ ಅವರದೇ ಆದಂತಹ ವೈಯಕ್ತಿಕ ಭಾವನೆಗಳಿರುತ್ತವೆ, ಈ ರೀತಿ ಮಾಡಿದವರ ವಿರುದ್ಧ ಸೂಕ್ತವಾದಂತಹ ಕ್ರಮ ಕೈಗೊಳ್ಳಿ ಎಂದು ಪರೀಕ್ಷಾ ಕೇಂದ್ರದ ಬಳಿ ಬ್ರಾಹ್ಮಣ ಮಹಾಸಭಾ ಮತ್ತು ವಿಪ್ರ ಸಂಘಟನೆ ಕೆಲವರು ಆಗ್ರಹಿಸಿದ್ದಾರೆ.
ಬೆಂಗಳೂರು : ರೀಲ್ಸ್ ಹುಚ್ಚಿಗೆ ಜನ ಏನು ಬೇಕಾದರೂ ಮಾಡೋಕೆ ಹೇಸುವುದಿಲ್ಲ. ಇದೀಗ ಬೆಂಗಳೂರು ನಗರದಲ್ಲಿ ಟ್ರಾಫಿಕ್ ನಡುವೆ ರಸ್ತೆ ದಾಟುವುದೇ ದೊಡ್ಡ ಸರ್ಕಸ್ ಮಾಡಿದಂಗೆ.ಇನ್ನು ಗಡಿಬಿಡಿಯಲ್ಲಿ ಸಿಗ್ನಲ್ ಪಾಲಿಸದೇ ರಸ್ತೆ ದಾಟಲು ಹೋಗಿ ಪ್ರಾಣ ಕಳೆದುಕೊಂಡವರ ಹಲವಾರು ಉದಾಹರಣೆಗಳಿವೆ. ಇದರ ಮಧ್ಯ ನಡು ರಸ್ತೆಯಲ್ಲಿಯೇ ವ್ಯಕ್ತಿಯೋರ್ವ ಚೇರ್ ಹಾಕಿಕೊಂಡು ಕುಳಿತು ಟೀ ಕುಡಿಯುತ್ತಾ ರೀಲ್ಸ್ ಮಾಡಿದ್ದಾನೆ. ಹೌದು ಈ ರೀಲ್ಸ್ ವೈರಲ್ ಆಗಿದ್ದು, ಅನೇಕರು ಈತನ ನಡೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿಡಿಯೊ ಹಂಚಿಕೊಂಡು ಬೆಂಗಳೂರು ಪೊಲೀಸ್ ಎಕ್ಸ್ ಖಾತೆಯನ್ನು ಉಲ್ಲೇಖಿಸಿದ್ದರು. ಇದರ ಆಧಾರದ ಮೇಲೆ ದೂರು ದಾಖಲಿಸಿಕೊಂಡು ಕ್ರಮಕ್ಕೆ ಮುಂದಾದ ಹಲಸೂರು ಗೇಟ್ ಉಪ ವಿಭಾಗದ ಎಸ್ ಜೆ ಪಾರ್ಕ್ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಪ್ರಚಾರದ ತೆವಲಿಗೆ ಕಳೆದ ಏಪ್ರಿಲ್ 12 ರಂದು ವಾಹನ ಸಂಚಾರ ಹೆಚ್ಚಾಗಿರುವ ಎಸ್.ಜೆ.ಪಾರ್ಕ್ ಬಳಿ ರಸ್ತೆಯಲ್ಲಿ ರೀಲ್ಸ್ ಮಾಡುತ್ತಾ ಕಿರಿಕ್ ಮಾಡಿದ್ದ. ನಂತರ ಆ ರೀಲ್ಸ್ ಅನ್ನು ತನ್ನ ಇನ್‌ಸ್ಟಾಗ್ರಾಮ್ ಖಾತೆ simbu_str_123…
ಬೆಂಗಳೂರು : ಇತ್ತೀಚಿಗೆ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ತನಿಖೆಯಲ್ಲಿ ಇರುವಾಗಲೇ ಬೆಂಗಳೂರಿನಲ್ಲಿ ಮತ್ತೊರ್ವ ಬಿಜೆಪಿ ಕಾರ್ಯಕರ್ತ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ ನಡೆದಿದೆ. ಫೇಸ್ಬುಕ್ ನಲ್ಲಿ ವಿಡಿಯೋ ಮಾಡಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮರಕ್ಕೆ ನೇಣು ಬಿಗಿದುಕೊಂಡು ಪ್ರವೀಣ್ ಗೌಡ ಬೇಲೂರು (35) ಆತ್ಮಹತ್ಯೆಗೆ ಶರಣಾಗಿದ್ದಾರೆ. ಆನೇಕಲ್ ಪಟ್ಟಣದ ಎಸ್ವಿಎಂ ಸ್ಕೂಲ್ ಬಳಿ ಈ ಒಂದು ಘಟನೆ ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಪಟ್ಟಣದ ಎಸ್ವಿಎಂ ಸ್ಕೂಲ್ ಬಳಿ ಸಾವಿಗೆ ಕಾರಣರಾದವರ ಹೆಸರುಗಳನ್ನು ವಿಡಿಯೋದಲ್ಲಿ ರೆಕಾರ್ಡ್ ಮಾಡಿ ಪ್ರವೀಣ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಡಿಯೋದಲ್ಲಿ ಏನಿದೆ? ಕಳೆದ ಎರಡು ತಿಂಗಳಿನಿಂದ ಮಾನಸಿಕವಾಗಿ ನೊಂದಿದ್ದೇನೆ. ನನ್ನ ಸಾವಿಗೆ ಕೆಲವರು ನೇರವಾಗಿ ಕಾರಣರಾಗಿದ್ದಾರೆ. ಸಮಂದೂರ್ ಕಿರಣ್, ಗೋಕುಲ್ ಪ್ಯಾಶನ್ ಹರೀಶ್, ಭಾಸ್ಕರ್, ನಾರಾಯಣಪ್ಪ ದೊಡ್ಡಹಾಗಡೆ, ಮಧುಗೌಡ,ಳ್ ಹಾಗು ಸರವಣ ಎಂಬುವವರ ಹೆಸರು ವಿಡಿಯೋದಲ್ಲಿ…
ಶಿವಮೊಗ್ಗ : ರಾಜ್ಯದಲ್ಲಿ ಮಂಗನ ಕಾಯಿಲೆಗೆ ಮತ್ತೊಂದು ಬಲಿಯಾಗಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ 8 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಮೃತ ಬಾಲಕನನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ದತ್ತರಾಜಪುರ ಗ್ರಾಮದ ರಚಿತ್ (8) ಎಂದು ತಿಳಿದುಬಂದಿದೆ. ಕಳೆದ 15 ದಿನಗಳ ಹಿಂದೆ ರಚಿತ್ ಹಾಗೂ ಆತನ ಸಹೋದರಿಗೆ ಮಂಗನ ಕಾಯಿಲೆ ಸೋಂಕು ತಗುಲಿತ್ತು. ಇಬ್ಬರನ್ನು ತೀರ್ಥಹಳ್ಳಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಇಬ್ಬರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಚೇತರಿಸಿಕೊಂಡ ರಚಿತ್ ಸಹೋದರಿಯನ್ನು ಡಿಸ್ಚಾರ್ಜ್ ಮಾಡಲಾಗಿತ್ತು. ಆದರೆ ಗಂಭೀರ ಸ್ಥಿತಿಯಲ್ಲಿದ್ದ ರಚಿತ್ ಮಣಿಪಾಲ ಆಸ್ಪತ್ರೆಯಲ್ಲಿ ಇಂದು ಸಾವನ್ನಪ್ಪಿದ್ದಾನೆ.
ಮಂಗಳೂರು : ಮನೆಯ ಮುಂದೆ ಆಡುತ್ತಿದ್ದಾಗ ಆಕಸ್ಮಿಕವಾಗಿ ನೀರಿನ ತೊಟ್ಟಿಗೆ ಬಿದ್ದು ಎರಡೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಮಂಗಳೂರಿನ ಮುಂಡಗೋಡ ತಾಲ್ಲೂಕಿನ ಗುಂಜಾವತಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಮನೆಯ ಎದುರಿನ ನೀರಿನ ತೊಟ್ಟಿಗೆ ಆಕಸ್ಮಿಕವಾಗಿ ಬಿದ್ದ, ಎರಡೂವರೆ ವರ್ಷದ ವಿನಯ್ ಕುಂಬಾರ ಎನ್ನುವ ಮಗು ಸಾವನ್ನಪ್ಪಿದೆ.ಮನೆಯ ಮುಂದೆ ಆಟವಾಡುತ್ತಿದ್ದ ಮಗು, ನೀರಿನ ತೊಟ್ಟಿಗೆ ಬಿದ್ದಿರುವುದನ್ನು ಗಮನಿಸಿದ ಕುಟುಂಬದವರು ತಾಲ್ಲೂಕು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿಯೇ ಮಗು ಕೊನೆಯುಸಿರೆಳೆದಿದೆ. ಘಟನೆ ಕೋರಿದಂತೆ ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾಸನ : ಪತಿ ಪತ್ನಿಯ ಶೀಲ ಶಂಕಿಸುವುದು ಅಷ್ಟೆ ಅಲ್ಲದೇ, ಕೌಟುಂಬಿಕ ಕಲಹದಿಂದ ಮನನೊಂದ ಪತ್ನಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಲಿಂಗಾಪುರ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಗೃಹಿಣಿಯನ್ನು ಹರಿಣಾಕ್ಷಿ ಎಂದು ತಿಳಿದುಬಂದಿದೆ. ಬೇಲೂರು ತಾಲೂಕಿನ ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಲಿಂಗಾಪುರ ಗ್ರಾಮದ ಶೇಖರ್ ಎಂಬುವವರು ಕಳೆದ 16 ವರ್ಷಗಳ ಹಿಂದೆ ಸಕಲೇಶಪುರ ತಾಲೂಕಿನ ಮಾಗಲು ಗ್ರಾಮದ ಹರಿಣಾಕ್ಷಿಯವರನ್ನು ಮದುವೆಯಾಗಿದ್ದರು. ಈ ನಡುವೆ ಇಬ್ಬರ ಮಧ್ಯೆ ಸಣ್ಣ ಪುಟ್ಟ ವಿಚಾರಕ್ಕೆ ಜಗಳ ಆಗುತ್ತಿತ್ತು ಈ ವೇಳೆ ಕುಟುಂಬಸ್ಥರ ಸಮ್ಮುಖದಲ್ಲಿ ರಾಜಿ ಸಂಧಾನ ಮಾಡುತ್ತಿದ್ದವು ಎಂದು ಮೃತಳ ತಂದೆ ತಿಳಿಸಿದ್ದಾರೆ. ಆದರೆ ಇತ್ತೀಚೆಗೆ ನನ್ನ ಮಗಳ ಮೇಲೆ ಅನೈತಿಕ ಸಂಬಂಧದ ಸಂಶಯ ಪಟ್ಟು ನಾನು ಬೇರೆ ವಿವಾಹವಾಗುತ್ತೇನೆ ನೀನು ಸಹ ಬೇರೆ ಆಗು ಎಂದು ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತ ವಿಚ್ಛೇದನ ಕೊಡುವಂತೆ ಪೀಡಿಸುತ್ತಿದ್ದ. ಅಲ್ಲದೆ ಅವನು ಬೇರೆ ಮಹಿಳೆಯೊಂದಿಗೆ ಹಾರ್ಥಿಕ…
ರಾಯಚೂರು : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಅಮರಾಪುರ ಗ್ರಾಮದ ಬಳಿ ಘಟನೆ ನಡೆದಿದೆ. ಗೂಡ್ಸ್ ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಗೂಡ್ಸ್ ವಾಹನದಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಮೃತರನ್ನು ನಾಗರಾಜ್ (28) ಸೋಮು (38) ನಾಗಭೂಷಣ್ (36) ಹಾಗೂ ಮುರಳಿ (38) ಎಂದು ತಿಳಿದುಬಂದಿದೆ. ಮೃತಪಟ್ಟ ನಾಲ್ವರು ತೆಲಂಗಾಣದ ಹಿಂದೂಪುರ ನಿವಾಸಿಗಳು ಎಂದು ತಿಳಿದು ಬಂದಿದೆ. ಇನ್ನು ಗೂಡ್ಸ್ ಪಿಕಪ್ ವಾಹನ ಚಾಲಕ ಆನಂದ್ ಗೆ ಗಂಭೀರವಾದ ಗಾಯಗಳಾಗಿವೆ. ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿದೆ.ಕುರಿ ಖರೀದಿಸಲು ಯಾದಗಿರಿ ಜಿಲ್ಲೆಯ ಶಹಪುರಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ಕುರಿತು ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬ್ರಿಟಿಷ್ ಕಾಲದ ಪೊಲೀಸ್ ಸಿಬ್ಬಂದಿಗಳ ಟೋಪಿಗೆ ಬ್ರೇಕ್ ಬೀಳುವ ಸಾಧ್ಯತೆ ಇದ್ದು, ರಾಜ್ಯದ ಹೆಡ್ ಕಾನ್‌ಸ್ಟೆಬಲ್‌ಗಳು, ಕಾನ್‌ಸ್ಟೆಬಲ್‌ಗಳು ಧರಿಸುತ್ತಿರುವ ಸ್ಲೋಚ್ ಹ್ಯಾಟ್ ಅನ್ನು ಬದಲಾವಣೆ ಮಾಡಲು ರಾಜ್ಯ ಪೊಲೀಸ್ ಇಲಾಖೆ ಮುಂದಾಗಿದೆ. ಈ ಹಿನ್ನೆಲೆ ಬೆಂಗಳೂರಿನಲ್ಲಿ ನಾಳೆ ಬೆಳಿಗ್ಗೆ 11:30ಕ್ಕೆ ಸಭೆ ನಡೆಯಲಿದೆ. ಕೆಎಸ್ಆರ್‌ಪಿ ಎಡಿಜಿಪಿ ಉಮೇಶ್ ಕುಮಾರ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ಕಾನ್‌ಸ್ಟೆಬಲ್‌ಗಳು ಆರಂಭದಲ್ಲಿ ಟರ್ಬನ್ ಮಾದರಿಯ ಟೋಪಿ ಬಳಸುತ್ತಿದ್ದರು. ಪ್ರಸ್ತುತ ಬಳಸುತ್ತಿರುವ ಟೋಪಿಯನ್ನು ಆರ್.ಗುಂಡೂರಾವ್ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಆರಂಭಿಸಲಾಗಿತ್ತು. ಹಳೆ ಮಾದರಿಯ ಟೋಪಿ ಬಳಕೆಯಿಂದ ಕಾನ್‌ಸ್ಟೆಬಲ್‌ಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಪ್ರತಿಭಟನೆ, ರ್‍ಯಾಲಿ ವೇಳೆ ಈ ಟೋಪಿ ಧರಿಸಿ, ಕರ್ತವ್ಯ ನಿರ್ವಹಣೆ ಕಷ್ಟ. ಟೋಪಿ ಕೆಳಕ್ಕೆ ಬಿದ್ದರೆ ಸಮವಸ್ತ್ರಕ್ಕೆ ಅಗೌರವ ತೋರಿದಂತಾಗುತ್ತದೆ. ಆದ್ದರಿಂದ, ಹಳೆ ಮಾದರಿಯ ಟೋಪಿ ಬದಲಿಗೆ ಗಟ್ಟಿಯಾಗಿ ನಿಲ್ಲುವಂತಹ ಟೋಪಿ ನೀಡಿದರೆ ಉತ್ತಮ ಎಂದು ಕಾನ್‌ಸ್ಟೆಬಲ್‌ಗಳು ಕೋರಿದ್ದರು.
ರಾಯಚೂರು : ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ ಬೆಂಗಳೂರು ಮೂಲದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ರಾಯಚೂರು ತಾಲೂಕಿನ ಎಲೆಬಿಚ್ಚಾಲಿ ಗ್ರಾಮದ ಬಳಿ ನಡೆದಿದೆ. ಮೃತರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಮೂಲದ ಮುತ್ತುರಾಜ್(24) ಮತ್ತು ಮದನ್ (20) ಎಂದು ತಿಳಿದುಬಂದಿದೆ. ಎಲೆಬಿಚ್ಚಾಲಿ ಗುರುರಾಯರ ಏಕಶಿಲಾ ವೃಂದಾವನ ದರ್ಶನಕ್ಕೆ ಬೆಂಗಳೂರಿನಿಂದ 15 ಜನ ಸ್ನೇಹಿತರ ತಂಡ ಆಗಮಿಸಿತ್ತು. ಈ ವೇಳೆ ಮುತ್ತುರಾಜ್ ಮತ್ತು ಮದನ್ ನದಿಯಲ್ಲಿ ಈಜಲು ತೆರಳಿದ್ದಾರೆ. ನದಿಯಲ್ಲಿ ತಗ್ಗು ಪ್ರದೇಶದಲ್ಲಿ ಸಿಲುಕಿ ಒದ್ದಾಡಿ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಶವಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಘಟನೆ ಕುರಿತಂತೆ ಯರಗೇರಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.