Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ನನ್ನು ಮಾರಕಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ, ಪ್ರಮುಖ ಆರೋಪಿ ಆಗಿರುವಂತಹ ಜಗ್ಗ ಕೊಲೆಯಾದ ದಿನವೇ ಭಾರತ ಬಿಟ್ಟು ದುಬೈಗೆ ಪರಾರಿಯಾಗಿದ್ದ. ಇದೀಗ ಸಿಐಡಿ ಅಧಿಕಾರಿಗಳು ಆರೋಪಿ ಜಗ್ಗನಿಗೆ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದ್ದಾರೆ. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ದುಬೈಗೆ ಪರಾರಿಯಾಗಿರುವ ಜಗದೀಶ್ ಅಲಿಯಾಸ್ ಜಗ್ಗನಿಗೆ ಸಿಐಡಿ ಪೋಲೀಸರು ಬ್ಲೂ ಕಾರ್ನರ್ ನೋಟಿಸ್ ಹೊರಡಿಸಿದ್ದಾರೆ. ಇಂಟರ್ಫೋಲ್ ಮೂಲಕ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಲಾಗಿದ್ದು, ಸಿಐಡಿ ಪೊಲೀಸರು ಇದೀಗ ಆತನ ಕುರಿತು ಮಾಹಿತಿ ಕಲೆ ಹಾಕಲಿದ್ದಾರೆ ಎನ್ನುವುದರ ಕುರಿತು ಮಾಹಿತಿ ಸಿಗಲಿದೆ. ಆದರೆ ಇದೀಗ CID ಅಧಿಕಾರಿಗಳಿಗೆ ಬಂದಿರುವ ಮಾಹಿತಿ ಪ್ರಕಾರ ಆರೋಪಿ ಜಗ್ಗ ದುಬೈ ನಿಂದಲೂ ಪರಾರಿಯಾಗಿದ್ದಾನೆ ಎನ್ನಲಾಗಿದೆ. ದುಬೈ ಏರ್ಪೋರ್ಟ್ ಎಂಟ್ರಿ ಆಗಿದ್ದರ ಬಗ್ಗೆ ಸಿಐಡಿ ಗೆ ಮಾಹಿತಿ ತಿಳಿದು ಬಂದಿದೆ ಬ್ಲೂ ಕಾರ್ನರ್ ನೋಟಿಸ್…
ಕಲಬುರ್ಗಿ : ಕಲ್ಬುರ್ಗಿಯಲ್ಲಿ ನಾಟಿ ಔಷಧಕ್ಕೆ ಮೂರನೇ ಬಲಿಯಾಗಿದ್ದು ಸೇಡಂ ತಾಲೂಕಿನ ಮಧುಕಲ್ ನಿವಾಸಿ ನಾಗೇಶ್ ಎನ್ನುವವರು ಇದೀಗ ಸಾವನಪ್ಪಿದ್ದಾರೆ. ಕುಡಿತದ ಚಟ ಬಿಡಲು ನಾಟಿ ಔಷಧಿ ಸೇವಿಸಿದ್ದ ನಾಗೇಶ್ ತಾಯಪ್ಪ ಮುತ್ಯಾನಂದ ಔಷಧಿ ತೆಗೆದುಕೊಂಡಿದ್ದ. ಮದ್ಯ ವ್ಯಸನಿ ಮೂಗಿಗೆ ತಾಯಪ್ಪ ಮುತ್ಯಾ ಔಷಧಿ ಹಾಕುತ್ತಿದ್ದ. ನಿನ್ನೆ ಸಹ ಇಬ್ಬರು ಸಾವನಪ್ಪಿದ್ದು, ಇದೀಗ ನಾಗೇಶ್ ಎನ್ನುವ ಮತ್ತೊರ್ವ ವ್ಯಕ್ತಿ ಸಾವನಪ್ಪಿದ್ದಾರೆ. ತೆಲಂಗಾಣ ಗಡಿಯಲ್ಲಿ ಇದೀಗ ಔಷಧ ಹಾಕುತ್ತಿದ್ದ ತಾಯಪ್ಪ ಅಲಿಯಾಸ್ ಪಕೀರಪ್ಪ ಮುತ್ಯಾನನ್ನು ಪೊಲೀಸರ ಅರೆಸ್ಟ್ ಮಾಡಿದ್ದಾರೆ ಸೇಡಂ ತಾಲೂಕಿನ ಇಮ್ಮಡಾಪುರದಲ್ಲಿ ನಿನ್ನೆ ಈ ಒಂದು ಘಟನೆ ನಡೆದಿತ್ತು ಕಲ್ಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನ ಇಮಡಾಪುರ ಗ್ರಾಮದಲ್ಲಿ ಕುಡಿತದ ಚಟಪಡಿಸಲು ಪಕೀರಪ್ಪ ಮಧ್ಯ ಔಷಧ ನೀಡಿದ್ದ ಔಷದ ಸೇವಿಸಿದ ಬಳಿಕ ಒದ್ದಾಡಿ ಮೂವರು ಮೃತಪಟ್ಟಿದ್ದರು ಈ ಸಂಬಂಧ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಸೇಡಂ ಪೊಲೀಸರು ತಾಯಪ್ಪನನ್ನು ಬಂಧಿಸಿ ವಿಚಾರಣೆ ಮಾಡುತ್ತಿದ್ದಾರೆ.
ಚಿಕ್ಕಬಳ್ಳಾಪುರ : ಸರ್ಕಾರಿ ಕೆಲಸ ಕೊಡಿಸೋದಾಗಿ ಹೇಳಿ ಹಣ ಪಡೆದು ವಂಚನೆ ಎಸಗಿರುವ ಆರೋಪ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಚಾಲಕನೋಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಆವರಣದಲ್ಲಿ ಈ ಒಂದು ಘಟನೆ ನಡೆದಿದೆ. ಬಿಜೆಪಿ ಸಂಸದ ಡಾ. ಕೆ ಸುಧಾಕರ್ ಹಾಗು ಯುವಕರಿಬ್ಬರ ಹೆಸರು ಬರೆದಿಟ್ಟು ಮುಖ್ಯ ಲೆಕ್ಕಾಧಿಕಾರಿ ಕಾರು ಚಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸರ್ಕಾರಿ ಕೆಲಸ ಕೊಡಿಸೋದಾಗಿ ಹೇಳಿ ಹಣ ಪಡೆದು ವಂಚನೆ ಎಸಗಿರುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದರಾದ ಡಾ.ಕೆ.ಸುಧಾಕರ್ ಚಿಕ್ಕಬಳ್ಳಾಪುರ ಅವರ ಬೆಂಬಲಿಗರಾದ, ನಾಗೇಶ್ ಮಂಜುನಾಥ್ ಹೆಸರು ಬರೆದಿಟ್ಟು ಜಿಲ್ಲಾ ಪಂಚಾಯತಿ ಗುತ್ತಿಗೆ ಚಾಲಕ ಎನ್. ಬಾಬು ನೇಣಿಗೆ ಶರಣಾಗಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಉತ್ತರಕನ್ನಡ : ಈ ಬಡತನ, ಹಸಿವು ಅನ್ನೋದು ಬಹಳ ಕ್ರೂರಿ ಆಗಿರುತ್ತದೆ. ಕೆಲವೊಂದು ಬಾರಿ ನಮ್ಮ ಶತ್ರುಗಳಿಗೂ ಇಂತಹ ಪರಿಸ್ಥಿತಿ ಬರಬಾರದು ಅಂದುಕೊಳ್ಳುತ್ತೇವೆ. ಇದೀಗ ರಾಜ್ಯದಲ್ಲಿ ಹೃದಯ ವಿದ್ರಾವಕ ಘಟನೆ ಒಂದು ನಡೆದಿದ್ದು ಮಹಿಳೆ ಒಬ್ಬರು ಒಂದೊತ್ತಿನ ಊಟಕ್ಕೂ ಗತಿಯಿಲ್ಲದೆ ಮನನೊಂದು ತಮಗೆ ತಾವೇ ಬೆಂಕಿ ಹಚ್ಚಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಹೌದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅನಗೋಡಿನ ಬೆಳ್ತೆರಗದ್ದೆಯಲ್ಲಿ ಒಂದು ಹೊತ್ತಿನ ಊಟಕ್ಕೂ ಗತಿ ಇಲ್ಲದೇ ಮನನೊಂದು ಬಡ ಮಹಿಳೆಯೋರ್ವಳು ಬೆಂಕಿ ಹಚ್ಚಿಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದೆ. ಲಕ್ಷ್ಮೀ ಮಹಾದೇವ ನಾಗೇಶ ಸಿದ್ಧಿ (48) ಮೃತ ಮಹಿಳೆ ಎಂದು ತಿಳಿದುಬಂದಿದೆ. ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಸಾಯಲು ಯತ್ನಿಸಿದ್ದಾರೆ. ಆದರೆ ದೇಹವೆಲ್ಲ ಸುಟ್ಟು ನರಳಾಟಕ್ಕೆ ಸ್ಥಳೀಯರು ಸಹಕಾರದಿಂದ ಹುಬ್ಬಳ್ಳಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಮೃತಪಟ್ಟಿದ್ದಾರೆ.ಕೌಟುಂಬಿಕ ಕಾರಣಗಳಿಗಾಗಿ ಲಕ್ಷ್ಮೀ, ಗಂಡನಿಂದ ಬೇರ್ಪಟ್ಟ ಬಳಿಕ ಏಕಾಂಗಿಯಾಗಿ ವಾಸಿಸುತ್ತಿದ್ದರು. ಆದರೆ, ಆರ್ಥಿಕ ಸಂಕಷ್ಟದಿಂದಾಗಿ ಒಂದು…
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸಿ ಎಂದು ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದ್ದರು. ಹೈಕೋರ್ಟ್ ನಿರ್ದೇಶನ ಧಿಕ್ಕರಿಸಿ ಮುಷ್ಕರದಲ್ಲಿ ಪಾಲ್ಗೊಂಡಿದ್ದ ಸುಮಾರು 30 ಸಾವಿರ ಸಾರಿಗೆ ನೌಕರರಿಗೆ ಇದೀಗ ಸಂಕಷ್ಟ ಎದುರಾಗಿದೆ. ಕೆಲಸಕ್ಕೆ ಗೈರಾಗಿದ್ದ ಸಾರಿಗೆ ನೌಕರರ ಒಂದು ದಿನದ ವೇತನ ಕಡಿತದ ಜತೆಗೆ, ಗೈರಿಗೆ ಕಾರಣ ಕೇಳಿ ನೋಟಿಸ್ ಕೂಡ ಜಾರಿ ಮಾಡಲಾಗಿದೆ. ವೇತನ ಹೆಚ್ಚಳ ಹಿಂಬಾಕಿ ಮತ್ತು ವೇತನ ಹೆಚ್ಚಳಕ್ಕೆ ಆಗ್ರಹಿಸಿ ಕೆಎಸ್ಸಾರ್ಟಿಸಿ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಮಂಗಳವಾರ ಮುಷ್ಕರಕ್ಕೆ ಕರೆ ನೀಡಿತ್ತು. ಆದರೆ, ಮುಷ್ಕರವನ್ನು ಒಂದು ದಿನ ಮುಂದೂಡುವಂತೆ ಸೋಮವಾರ ಹೈಕೋರ್ಟ್ ನೌಕರರಿಗೆ ಸೂಚಿಸಿತ್ತು. ಮಂಗಳವಾರ ಕೆಲಸಕ್ಕೆ ಗೈರಾಗಿದ್ದ ಸಾರಿಗೆ ನೌಕರರ ಒಂದು ದಿನದ ವೇತನ ಕಡಿತದ ಜತೆಗೆ, ಗೈರಿಗೆ ಕಾರಣ ಕೇಳಿ ನೋಟಿಸ್ ಕೂಡ ಜಾರಿ ಮಾಡಲಾಗಿದೆ. ಅದನ್ನು ನಿರ್ಲಕ್ಷಿಸಿದ್ದ ಜಂಟಿ ಕ್ರಿಯಾ ಸಮಿತಿ ನೀಡಿದ ಸೂಚನೆ ಮೇರೆಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ 1.14 ಲಕ್ಷ ನೌಕರರ ಪೈಕಿ…
ದಾವಣಗೆರೆ : ಸಾಲಗಾರರ ಕಿರುಕುಳಕ್ಕೆ ಬೇಸತ್ತು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮಾಚಿಗೊಂಡನಹಳ್ಳಿ ಈ ಒಂದು ಘಟನೆ ಸಂಭವಿಸಿದೆ. ಮಾಚಿಗೊಂಡನಹಳ್ಳಿಯ ಯಶವಂತ ನಾಯಕ (24) ನೇಣಿಗೆ ಶರಣಾದ ಯುವಕ ಎಂದು ತಿಳಿದುಬಂದಿದೆ. ಮನೆ ಜಪ್ತಿ ಮಾಡುವುದಾಗಿ ಫೈನಾನ್ಸ್ ಸಿಬ್ಬಂದಿಗಳು ಯುವಕನಿಗೆ ಬೆದರಿಕೆ ಹಾಕಿದ್ದರು. ಫೈನಾನ್ಸಿ ಒಂದರಲ್ಲಿ ಯಶವಂತ ಐದು ಲಕ್ಷ ರೂಪಾಯಿ ಸಾಲ ಪಡೆದಿದ್ದ. ಸುನಿಲ್ ನಾಯಕ್ ಎನ್ನುವವರ ಬಳಿ ಯಶವಂತ 40,000 ಸಾಲ ಮಾಡಿದ್ದ ಹಣ ವಾಪಸ್ ನೀಡದಿದ್ದಕ್ಕೆ ಸುನಿಲ್ ನಾಯಕ ಗಲಾಟೆ ಮಾಡಿದ್ದಾನೆ. ಹೀಗಾಗಿ ಡೆತ್ ನೋಟ್ ಬರೆದಿಟ್ಟು ಯಶವಂತ ನಾಯಕ ನಿನಗೆ ಶರಣಾಗಿದ್ದಾನೆ ಈ ಕುರಿತು ನ್ಯಾಮತಿ ಪೊಲೀಸ್ ಠಾಣೆಗೆ ದೂರಿ ನೀಡಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು, ಬೆಂಗಳೂರಿನ ನೈಸ್ ರಸ್ತೆಯಲ್ಲಿ ಗೂಡ್ಸ್ ವಾಹನವೊಂದು ಆಕಸ್ಮಿಕ ಬೆಂಕಿಯಿಂದ ಹೊತ್ತಿ ಉರಿದಿರುವ ಘಟನೆ ನಡೆದಿದೆ. ಆಕಸ್ಮಿಕ ಬೆಂಕಿಯಿಂದ ಗೂಡ್ಸ್ ವಾಹನ ಬೆಂಕಿಗೆ ಆಹುತಿಯಾಗಿದೆ. ನೋಡು ನೋಡುತ್ತಲೇ ಗೂಡ್ಸ್ ವಾಹನ ಸಂಪೂರ್ಣವಾಗಿ ಬೆಂಕಿಯಿಂದ ಸುಟ್ಟು ಕರಕಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ತುಮಕೂರು : ರಾಜ್ಯದಲ್ಲಿ ದಲಿತ ಸಿಎಂ ಕೂಗು ಮುಂದುವರೆದಿದ್ದು ಇದೀಗ ಇಂದು ಗೃಹ ಸಚಿವ ಜಿ ಪರಮೇಶ್ವರ್ ಅವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಒಂದು ಕಾರ್ಯಕ್ರಮದಲ್ಲಿ ಹಲವು ಸ್ವಾಮೀಜಿಗಳು ಅವಕಾಶ ಸಿಕ್ಕರೆ ಮುಂದಿನ ಮುಖ್ಯಮಂತ್ರಿ ಗೃಹ ಸಚಿವ ಜಿ ಪರಮೇಶ್ವರ್ ಅವರು ಆಗಲಿ ಎಂದು ಪರಮೇಶ್ವರ್ ಪರವಾಗಿ ಬ್ಯಾಟಿಂಗ್ ಬೀಸಿದ್ದಾರೆ. ತುಮಕೂರಿನ ಬಾಪೂಜಿ ವಿದ್ಯಾಸಂಸ್ಥೆಯಲ್ಲಿ ಪರಮೇಶ್ವರ್ ಆಪ್ತ ಮುರುಳೀಧರ್ ಹಾಲಪ್ಪ ಸ್ವಾಮೀಜಿಗಳ ಶೃಂಗ ಸಭೆ ಆಯೋಜಿಸಿದ್ದು, ಸಿದ್ದರಬೆಟ್ಟದ ಶ್ರೀ ಸೇರಿದಂತೆ ಸುಮಾರು 30 ಕ್ಕೂ ಹೆಚ್ಚು ಸ್ವಾಮೀಜಿಗಳು ಶೃಂಗ ಸಭೆಯಲ್ಲಿ ಭಾಗಿಯಾಗಿದ್ದಾರೆ. ಈ ಸಭೆಯಲ್ಲಿ ತುಮಕೂರು ಅಭಿವೃದ್ಧಿ ಆಗಬೇಕಾದರೆ ಪರಮೇಶ್ವರ್ ಸಿಎಂ ಆಗಬೇಕು ಎಂದು ಅಭಿಪ್ರಾಯಪಟ್ಟಿರುವ ಸ್ವಾಮಿಜಿಗಳು ಪರಂ ಪರ ಬ್ಯಾಟ್ ಬೀಸಿದ್ದಾರೆ. ಅವಕಾಶ ಸಿಕ್ಕರೆ ಪರಮೇಶ್ವರ್ ಸಿಎಂ ಆಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ ವನಕಲ್ಲು ಮಠದ ಬಸವ ರಮಾನಂದ ಸ್ವಾಮೀಜಿಯವರೊಂದಿಗೆ ತಿಪಟೂರು ಷಡಕ್ಷರಿ ಮಠದ ರುದ್ರಮುನಿ ಸ್ವಾಮೀಜಿ ಕೂಡ ಪರಂ ಸಿಎಂ ಆಗಬೇಕು ಎಂದು…
ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಹೊಸದಾಗಿ ಗುರುತಿಸಿರುವ 5 ಕಾರ್ಪೊರೇಷನ್ಗಳ ಚುನಾವಣೆಯನ್ನು ಮುಂದಿನ ವರ್ಷದ ಫೆಬ್ರವರಿಯಲ್ಲಿ ನಡೆಸುವ ಸಾಧ್ಯತೆ ಇದ್ದು, ಈ ಕುರಿತು ಸುಪ್ರೀಂ ಕೋರ್ಟ್ಗೆ ಕರ್ನಾಟಕ ಸರ್ಕಾರ ಅಫಿಡವಿಟ್ ಸಲ್ಲಿಸಿದೆ. 2015ರ ಆಗಸ್ಟ್ನಲ್ಲಿ ಬಿಬಿಎಂಪಿಯ 198 ವಾರ್ಡ್ಗಳಿಗೆ ಕೊನೆಯದಾಗಿ ಚುನಾವಣೆ ನಡೆದಿತ್ತು. ಕೌನ್ಸಿಲ್ನ ಅವಧಿ 2020ರ ಸೆಪ್ಟೆಂಬರ್ನಲ್ಲಿ ಮುಗಿದಿದ್ದರೂ ಕಾನೂನು ಮತ್ತು ಆಡಳಿತಾತ್ಮಕ ತೊಡಕಿನಿಂದಾಗಿ ಚುನಾವಣೆ ವಿಳಂಬವಾಗಿದೆ. ಇದೀಗ ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ ಜಾರಿಯಲ್ಲಿದ್ದು, ವರ್ಷಾಂತ್ಯದೊಳಗೆ ಚುನಾವಣಾಪೂರ್ವ ಸಿದ್ಧತಾ ಹಂತವನ್ನು ಪೂರ್ಣಗೊಳಿಸಲು ರಾಜ್ಯ ಬದ್ದವಾಗಿದೆ ಎಂದು ತಿಳಿಸಿದೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ನವೆಂಬರ್ 1ರಿಂದ ಚುನಾವಣಾ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್.ಸಂಗ್ರೇಷಿ ತಿಳಿಸಿದ್ದಾರೆ. ಸರ್ಕಾರ ವಿಂಗಡನೆ ಮತ್ತು ವಾರ್ಡ್ ರಿಸರ್ವೇಶನ್ ಜವಾಬ್ದಾರಿಯನ್ನು ಮುಗಿಸಿದರೆ ನವೆಂಬರ್ 1ರಿಂದ ನಾವು ನಮ್ಮ ಪ್ರಕ್ರಿಯೆ ಶುರು ಮಾಡುತ್ತೇವೆ ಎಂದು ತಿಳಿಸಿದ್ದಾರೆ. ನವೆಂಬರ್ 30ರ ಬಳಿಕವೇ ನಿಜವಾದ ಗ್ರೌಂಡ್ವರ್ಕ್ ಶುರುವಾಗುತ್ತದೆ. ಮತದಾರರ ಸಮೀಕ್ಷೆ, ವಾರ್ಡ್ ಆಧಾರಿತ ಹೊಂದಾಣಿಕೆ…
ಬೆಂಗಳೂರು : ಹೆರಿಗೆಯಾದ ಕೆಲವೇ ಗಂಟೆಗಳಲ್ಲಿ ಬಾಣಂತಿ ಸಾವನ್ನಪ್ಪಿದ್ದು ಇದಕ್ಕೆ ವೈದ್ಯರ ನಿರ್ಲಕ್ಷವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ ಈ ಒಂದು ಘಟನೆ, ಬೆಂಗಳೂರಿನ ಕೋಣನಕುಂಟೆಯಲ್ ಕ್ರಾಸ್ ಬಳಿರುವ ಅಸ್ಟ್ರಾ ಆಸ್ಪತ್ರೆಯಲ್ಲಿ ನಡೆದಿದೆ. ಅಸ್ಟ್ರಾ ಆಸ್ಪತ್ರೆ ವೈದ್ಯರ ನಿರ್ಲಕ್ಷದಿಂದ ಬಾಣಂತಿ ಸಾವನಪ್ಪಿದ್ದಾಳೆ ಎನ್ನುವ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಕೋಣನಕುಂಟೆ ಕ್ರಾಸ್ ನಲ್ಲಿರುವ ಅಸ್ಟ್ರಾ ಆಸ್ಪತ್ರೆಯಲ್ಲಿ ನಿನ್ನೆ ಮಂಡ್ಯ ಮೂಲದ ತನು (23) ಎನ್ನುವ ಮಹಿಳೆ ದಾಖಲಾಗಿದ್ದರು.ಈ ವೇಳೆ ಆಸ್ಪತ್ರೆಯ ವೈದ್ಯರು ಹೆರಿಗೆ ಮಾಡಿಸಿದ್ದಾರೆ. ಶಸ್ತ್ರಚಿಕಿತ್ಸೆಯಾದ ಕೆಲವೇ ಗಂಟೆಯಲ್ಲಿ ತನುವ ಮೃತಪಟ್ಟಿದ್ದಾರೆ ಯಾವುದೇ ಮಾಹಿತಿ ನೀಡಿರಲಿಲ್ಲ. ಇದೀಗ ವೈದರ ನಿರ್ಲಕ್ಷಕ್ಕೆ ಬಾಣಂತಿ ಸಾವನಪ್ಪಿದ್ದಾಳೆ ಎಂದು ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.