Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಪಶ್ಚಿಮಬಂಗಾಳ : ಪಶ್ಚಿಮ ಬಂಗಾಳ ಬಿಜೆಪಿ ಪಟ್ಟಾಭಿಷೇಕಕ್ಕೆ ಇದೀಗ ಮುಹೂರ್ತ ಫಿಕ್ಸ್ ಆಗಿದ್ದು ಮೇ 9ಕ್ಕೆ ಬೆಳಿಗ್ಗೆ 11 ಗಂಟೆಗೆ ನೂತನ ಮುಖ್ಯಮಂತ್ರಿ ಪದಗ್ರಹಣ ಸಮಾರಂಭ ನಡೆಯಲಿದೆ. ಕೊಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಸಮಾರಂಭ ನಡೆಯಲಿದ್ದು, ಮೇ 8ರಂದು ಸಂಜೆ 4 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ಒಂದು ಸಭೆಯಲ್ಲಿ ಬಿಜೆಪಿ ನಾಯಕರು ಸಿಎಂ ಹೆಸರನ್ನು ಘೋಷಣೆ ಮಾಡಲಿದ್ದಾರೆ, ಬಳಿಕ ರಾಜಪಾಲರನ್ನು ಭೇಟಿಯಾಗಿ ಹಕ್ಕು ಮಂಡನೆ ಆಗಲಿದೆ. ಸಂಜೆ 4 ಗಂಟೆಗೆ ಶಾಸಕಾಂಗ ಪಕ್ಷದ ಸಭೆ: ಮುಖ್ಯಮಂತ್ರಿ ಪಟ್ಟ ಯಾರಿಗೆ ಒಲಿಯಲಿದೆ ಎಂಬ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ. ಇಂದು ಸಂಜೆ 4 ಗಂಟೆಗೆ ಬಿಜೆಪಿಯ ಶಾಸಕಾಂಗ ಪಕ್ಷದ ಮಹತ್ವದ ಸಭೆಯನ್ನು ಕರೆಯಲಾಗಿದೆ. ಈ ಸಭೆಯಲ್ಲಿ ಹಿರಿಯ ನಾಯಕರು ಮತ್ತು ವೀಕ್ಷಕರ ಸಮ್ಮುಖದಲ್ಲಿ ಶಾಸಕರು ತಮ್ಮ ನಾಯಕನನ್ನು ಆರಿಸಲಿದ್ದಾರೆ. ಈ ಸಭೆಯ ಮುಕ್ತಾಯದ ನಂತರ ಬಿಜೆಪಿ ಅಧಿಕೃತವಾಗಿ ನೂತನ ಮುಖ್ಯಮಂತ್ರಿಯ ಹೆಸರನ್ನು ಘೋಷಣೆ ಮಾಡಲಿದೆ. ಬೆಳಿಗ್ಗೆ 11ಕ್ಕೆ ಪದಗ್ರಹಣ…

Read More

ದಾವಣಗೆರೆ: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಮಠದ ಪೀಠಾಧಿಪತಿಯಾಗಿರುವ ವಚನಾನಂದ ಸ್ವಾಮೀಜಿಗೆ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಸ್ವಾಮೀಜಿ ತನಿಖೆಗೆ ಸಂಪೂರ್ಣ ಸಹಕರಿಸಬೇಕು, ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು, ನ್ಯಾಯಾಲಯದ ಅನುಮತಿಯಿಲ್ಲದೆ ವ್ಯಾಪ್ತಿ ಬಿಟ್ಟು ಹೋಗಬಾರದು ಎಂಬ ಷರತ್ತುಗಳನ್ನು ನ್ಯಾಯಾಲಯ ವಿಧಿಸಿದೆ. ಮಠದಲ್ಲಿ ಸ್ವಾಮೀಜಿ ಹಾಗೂ ಟ್ರಸ್ಟಿಗಳ ನಡುವೆ ನಡೆಯುತ್ತಿರುವ ಸಂಘರ್ಷದ ನಡುವೆ ಸ್ವಾಮೀಜಿ ವಿರುದ್ಧ ಮಕ್ಕಳ ದುರ್ಬಳಕೆ ಹಾಗೂ ದೌರ್ಜನ್ಯ ಎಸಗಿದ ಆರೋಪದಡಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಅವರು, ಏಪ್ರಿಲ್ 21ರಂದು ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.ಸುದೀರ್ಘ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯವು ಅಂತಿಮವಾಗಿ ಏಪ್ರಿಲ್ 21ರಂದು ಅವರಿಗೆ ಜಾಮೀನು ನೀಡಲು ಸಮ್ಮತಿಸಿದೆ. ಆದರೆ, ಈ ಜಾಮೀನು ಮಂಜೂರಾತಿ ವೇಳೆ ನ್ಯಾಯಾಲಯವು ಕಟ್ಟುನಿಟ್ಟಿನ ಷರತ್ತುಗಳನ್ನು ವಿಧಿಸಿದೆ. “ತನಿಖಾಧಿಕಾರಿಗಳು ನಡೆಸುವ ತನಿಖೆಗೆ ಸ್ವಾಮೀಜಿಯವರು ಸಂಪೂರ್ಣವಾಗಿ ಸಹಕರಿಸಬೇಕು. ಈ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ಸಾಕ್ಷ್ಯಗಳನ್ನು ನಾಶಪಡಿಸಲು ಅಥವಾ ಸಾಕ್ಷಿಗಳಿಗೆ ಬೆದರಿಕೆ ಹಾಕಲು ಪ್ರಯತ್ನಿಸಬಾರದು,”…

Read More

ಬೆಂಗಳೂರು : ಬಾಡಿಗೆ ಮನೆಯಲ್ಲಿ ಯುವತಿ ಸ್ನಾನ ಮಾಡುವಾಗ ಅಪರಿಚಿತ ವ್ಯಕ್ತಿಯೋರ್ವ ವಿಡಿಯೋ ಚಿತ್ರೀಕರಣ ಮಾಡಿರುವ ಘಟನೆ ನಗರದ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 23 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಈ ಬಗ್ಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ದೂರುದಾರೆ ಯುವತಿ ಕಳೆದ ಒಂಬತ್ತು ತಿಂಗಳ ಹಿಂದೆ ಗರುಡಾಚಾರ್ ಪಾಳ್ಯಕ್ಕೆ ವಾಸ್ತವ್ಯ ಬದಲಾಯಿಸಿದ್ದರು. ಏಪ್ರಿಲ್​​ 29ರಂದು ರಾತ್ರಿ ಸುಮಾರು 9.30ರಿಂದ 9.40ರ ವೇಳೆ ಅವರು ಸ್ನಾನ ಮಾಡುತ್ತಿದ್ದಾಗ, ಪಕ್ಕದ ಕಟ್ಟಡದಿಂದ ಯಾರೋ ಫೋನ್ ಮೂಲಕ ವಿಡಿಯೋ ಮಾಡುತ್ತಿರುವುದನ್ನು ಗಮನಿಸಿ ಬೆಚ್ಚಿಬಿದ್ದಿ ಕಿರುಚಿದ್ದಾರೆ. ಈ ವೇಳೆ ಆ ವ್ಯಕ್ತಿ ಮೊಬೈಲ್​ ಸಮೇತ ಓಡಿ ಹೋಗಿದ್ದಾನೆ. ಕೂಡಲೇ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆಯಿಂದ ತೀವ್ರ ಮಾನಸಿಕ ನೋವಿಗೆ ಒಳಗಾಗಿರುವ ದೂರುದಾರೆ, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ಆತಂಕ ಎದುರಿಸುತ್ತಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಘಟನೆಯ ವಿವರ: ನಗರದ ಗರುಡಾಚಾರ್ ಪಾಳ್ಯದಲ್ಲಿ ವಾಸವಾಗಿರುವ 23 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್…

Read More

ದಕ್ಷಿಣ ಕನ್ನಡ: ಜಿಲ್ಲೆಯ ಸುಬ್ರಹ್ಮಣ್ಯ–ಮಂಜೇಶ್ವರ ರಾಜ್ಯ ಹೆದ್ದಾರಿಯ ಸವಣೂರು ಸಮೀಪದ ಚಾಪಳ್ಳ ತಿರುವಿನಲ್ಲಿ ಮಂಗಳವಾರ ಸಂಜೆ ಮೈನಡುಗಿಸುವ ರಸ್ತೆ ಅಪಘಾತ ಸಂಭವಿಸಿದೆ. ಎರಡು ಬೈಕ್‌ಗಳ ನಡುವೆ ನಡೆದ ಈ ಭೀಕರ ಸಂಘರ್ಷದಲ್ಲಿ ಇಬ್ಬರು ಯುವಕರು ದುರ್ಮರಣಕ್ಕೀಡಾಗಿದ್ದು, ಮೃತರ ಕುಟುಂಬದಲ್ಲಿ ಶೋಕದ ಮಡುವು ಆವರಿಸಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರ ಸ್ಥಳದಲ್ಲೇ ಪ್ರಾಣ ಬಿಟ್ಟರೆ, ತೀವ್ರವಾಗಿ ಗಾಯಗೊಂಡಿದ್ದ ಸಹ ಸವಾರನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ನಡೆಸಲಾಯಿತಾದರೂ, ಸಾಗಿಸುವ ದಾರಿ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ. ಮೃತ ಯುವಕರನ್ನು ಬಂಟ್ವಾಳ ತಾಲೂಕಿನ ಮಿತ್ತೂರು ಬೊಳ್ಳರಮಜಲು ನಿವಾಸಿ ಪುರಂದರ ಎಂಬುವರ ಪುತ್ರ ಯಜ್ನೇಶ್ (21) ಮತ್ತು ಆರ್ಲಪದವು ನೋಣಯ್ಯ ಭರಣ್ಯ ಎಂಬುವರ ಪುತ್ರ ಜಗನ್ (20) ಎಂದು ಗುರುತಿಸಲಾಗಿದೆ. ಘಟನೆಯ ವಿವರದಂತೆ, ಚಾಪಳ್ಳದ ಅಪಾಯಕಾರಿ ತಿರುವಿನಲ್ಲಿ ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸ ಎಷ್ಟಿತ್ತೆಂದರೆ ವಾಹನಗಳು ಸಂಪೂರ್ಣ ಜಖಂಗೊಂಡಿವೆ. ಇದೇ ವೇಳೆ ಮೃತರ ಬೈಕ್ ಹಿಂದೆಯೇ ಬರುತ್ತಿದ್ದ ಮತ್ತೊಂದು ಬೈಕ್‌ ಕೂಡ ನಿಯಂತ್ರಣ ತಪ್ಪಿ…

Read More

ಮೈಸೂರು : ರಾಜ್ಯದಲಿ ನಾಯಕತ್ವ ಬದಲಾವಣೆ ಹಾಗೂ ಸಂಪುಟ ಪುನಾರಚನೆ ಕುರಿತಂತೆ ಹೈಕಮಾಂಡ್ ಈಗಾಗಲೇ ಮಹೂರ್ತ ಫಿಕ್ಸ್ ಮಾಡಿದೆ ಎಂದು ಹೇಳಲಾಗಿರತ್ತು. ಆದರೆ ಇದೀಗ ಸಿಎಂ ಸಿದ್ದರಾಮಯ್ಯ ಇದುವರೆಗೂ ನನ್ನ ರಾಹುಲ್ ಗಾಂಧಿ ದೆಹಲಿಗೆ ಕರೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಇದುವರೆಗೂ ರಾಹುಲ್ ಗಾಂಧಿ ನನ್ನನ್ನು ದೆಹಲಿಗೆ ಕರೆದಿಲ್ಲ. ನಾನು ಕೂಡ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಅವಕಾಶ ಕೇಳಿಲ್ಲ. ರಾಹುಲ್ ಗಾಂಧಿ ನನ್ನನ್ನು ದೆಹಲಿಗೆ ಕರೆದರೆ ಹೋಗುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ರಾಹುಲ್ ಗಾಂಧಿ ಭೇಟಿ ಫಿಕ್ಸ್ ಆದಮೇಲೆ ಸಂಪುಟ ಪುನರ್ ರಚನೆ ಆಗುತ್ತಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸಂಪುಟ ವಿಸ್ತರಣೆನ ಅಥವಾ ಯಾವ ವಿಷಯದ ಚರ್ಚೆ ಗೊತ್ತಾಗಲಿದೆ. ರಾಹುಲ್ ಕರೆದೇ ಇಲ್ಲ ಅಂದಮೇಲೆ ಅಜೆಂಡ ಹೇಗೆ ಫಿಕ್ಸ್ ಆಗುತ್ತದೆ? ಅವರು ಕರೆಯದಿದ್ದರೆ, ನಾನೇ ರಾಹುಲ್ ಗಾಂಧಿಗೆ ಕೇಳುತ್ತೇನೆ. ಸದ್ಯಕ್ಕಂತೂ ದೆಹಲಿಯ ಪ್ರವಾಸ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

Read More

ಬೆಂಗಳೂರು : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (BMTC) ಬಸ್‌ಗಳಲ್ಲಿ ದಿನನಿತ್ಯ ಸಂಚರಿಸುವ ಲಕ್ಷಾಂತರ ಪ್ರಯಾಣಿಕರಿಗೆ ಈಗ ಸುಸಜ್ಜಿತ ಮತ್ತು ತಾಂತ್ರಿಕ ಸ್ನೇಹಿ ಗುಡ್ ನ್ಯೂಸ್ ಒಂದು ಸಿಕ್ಕಿದೆ. ಮೆಟ್ರೋ ರೈಲುಗಳಲ್ಲಿ ಇರುವಂತೆ ಇನ್ನು ಮುಂದೆ ಬಿಎಂಟಿಸಿ ಬಸ್‌ಗಳಲ್ಲೂ ಕ್ಯಾಶ್‌ಲೆಸ್‌ ಪ್ರಯಾಣಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ‘ರಿಚಾರ್ಜೆಬಲ್‌ ಪ್ರಿಪೇಯ್ಡ್ ಕಾರ್ಡ್’ ಅನ್ನು ಪರಿಚಯಿಸಲು ಸಂಸ್ಥೆ ಮುಂದಾಗಿದೆ. ಈ ಕ್ರಮವು ಬೆಂಗಳೂರಿನ ಸಾರಿಗೆ ವ್ಯವಸ್ಥೆಯಲ್ಲಿ ಡಿಜಿಟಲ್ ಕ್ರಾಂತಿಗೆ ಹೊಸ ಮುನ್ನುಡಿ ಬರೆಯಲಿದೆ. ಸಾಮಾನ್ಯವಾಗಿ ಬಸ್‌ಗಳಲ್ಲಿ ಪ್ರಯಾಣಿಸುವಾಗ ಚಿಲ್ಲರೆ ಹಣದ ಸಮಸ್ಯೆ ದೊಡ್ಡ ತಲೆನೋವಾಗಿ ಪರಿಣಮಿಸುತ್ತದೆ. ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ಚಿಲ್ಲರೆ ವಿಚಾರವಾಗಿ ಆಗಾಗ ನಡೆಯುವ ಕಿರಿಕಿರಿಗಳಿಗೆ ಈ ಪ್ರಿಪೇಯ್ಡ್ ಕಾರ್ಡ್ ಶಾಶ್ವತ ಪರಿಹಾರ ನೀಡಲಿದೆ. ಪ್ರಯಾಣಿಕರು ಒಮ್ಮೆ ಕಾರ್ಡ್ ಪಡೆದು ಅದಕ್ಕೆ ಬೇಕಾದ ಮೊತ್ತವನ್ನು ರಿಚಾರ್ಜ್ ಮಾಡಿಸಿಕೊಂಡರೆ, ಟಿಕೆಟ್ ಪಡೆಯಲು ನಗದು ನೀಡುವ ಅಗತ್ಯವಿರುವುದಿಲ್ಲ. ಇದು ಸಮಯವನ್ನು ಉಳಿಸುವುದಲ್ಲದೆ ಪ್ರಯಾಣವನ್ನು ಹೆಚ್ಚು ಸುಗಮಗೊಳಿಸಲಿದೆ. ನೂಕುನುಗ್ಗಲಿನ ಸಮಯದಲ್ಲಿ ಬಸ್ ಹತ್ತಿದಾಗ ಕೈಯಲ್ಲಿ ಹಣ…

Read More

ಬೆಂಗಳೂರು : ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪ ಹೊತ್ತು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಖೈದಿಯಾಗಿ ಕಾಲ ಕಳೆಯುತ್ತಿದ್ದಾರೆ. ಅಲ್ಲದೆ ಇತ್ತೀಚಿಗೆ ಸುಪ್ರೀಂ ಕೋರ್ಟ್ ನಲ್ಲಿ ಜಾಮೀನು ಕೋರಿ ಅರ್ಜಿಯನ್ನು ಸಲ್ಲಿಸಿದ್ದು, ಈ ವಿಚಾರವಾಗಿ ಹಾಡಿ ಸರಕಾರಕ್ಕೆ ಸುಪ್ರೀಂಕೋರ್ಟ್ ಒಂದು ವಾರದ ಒಳಗಾಗಿ ವರದಿ ನೀಡುವಂತೆ ಸೂಚನೆ ನೀಡಿದೆ. ಇದಕ್ಕಿಂತ ಮೊದಲು ದರ್ಶನ್ ಜೈಲಿನಲ್ಲಿ ಇದ್ದಾಗ ಪತ್ನಿ ವಿಜಯಲಕ್ಷ್ಮಿ, ಹೋಗದ ದೇವಸ್ಥಾನಗಳಿಲ್ಲ. ತೀರಿಸಿದ ಹರಕೆಗಳಿಲ್ಲ. ಪತಿ ದರ್ಶನ್ ಗಾಗಿ ದೇವಸ್ಥಾನ, ದೇವರುಗಳ ಮೊರೆ ಹೋಗಿದ್ದರು. ಈಗಲೂ ಸಹ ಅವರು ದರ್ಶನ್ ಗಾಗಿ ಪ್ರಾರ್ಥನೆ ಸೇವೆ ಸಲ್ಲಿಸುತ್ತಿದ್ದಾರೆ. ಇದೀಗ ಇನ್ಸ್ಟಾಗ್ರಾಮ್ ನಲ್ಲಿ ವಿಜಯಲಕ್ಷ್ಮಿ ಅವರು ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು ಅದಕ್ಕೆ ಒಬ್ಬರು ಕಮೆಂಟ್ ಮಾಡಿದ್ದು ಭಾರಿ ವೈರಲ್ ಆಗುತ್ತಿದೆ. ಹೌದು ಇಂದು ಅವರು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದೆ. ರೇಷ್ಮೆ ಸೀರೆಯನ್ನು ಉಟ್ಟು, ತಲೆಯಲ್ಲಿ ಮಲ್ಲಿಗೆ ಮುಡಿದು, ಮುಗುಳ್ನಗುತ್ತಾ ಸಾಂಪ್ರದಾಯಿಕ ಉಡುಗೆಯಲ್ಲಿ ವಿಜಯಲಕ್ಷ್ಮಿ ಕಂಗೊಳಿಸಿದ್ದಾರೆ. ಈ ಫೋಟೋ…

Read More

ತಮಿಳುನಾಡು : ತಮಿಳುನಾಡಲ್ಲಿ ಟಿವಿಕೆ ಪಕ್ಷಕ್ಕೆ ಬೆಂಬಲ ಸೂಚಿಸಲು ಮುಂದಾಗಿದ್ದ ಕಾಂಗ್ರೆಸ್ ಗೆ ಇದೀಗ ಬಿಗ್ ಶಾಕ್ ಎದುರಾಗಿದೆ. AIADMK ಜೊತೆಗೆ ಟಿವಿಕೆ ಮಾತುಕತೆ ನಡೆಸಿದ್ದರಿಂದ ಕಾಂಗ್ರೆಸ್ ಗೆ ಹಿನ್ನಡೆ ಆಗಿದೆ. ಟಿವಿಕೆ ಬೆಂಬಲಿಸೋ ಸಲುವಾಗಿ ಸಭೆ ನಡೆಸಲು ಮುಂದಾಗಿತ್ತು. ಆದರೆ ಇದೀಗ ಕಾಂಗ್ರೆಸ್ ಗೆ ಶಾಕ್ ಎದುರಾಗಿದೆ. ಟಿವಿಕೆ ಬೆಂಬಲಿಸೋ ವಿಚಾರವಾಗಿ ಕಾಂಗ್ರೆಸ್ ಸುದ್ದಿಗೋಷ್ಠಿ ಕರೆದಿತ್ತು. ಏಕಾಏಕಿ ಸುದ್ದಿಗೋಷ್ಠಿ ವಿಳಂಬ ಮಾಡಿದೆ. ಕಾದು ನೋಡುವ ತಂತ್ರಕ್ಕೆ ಮುಂದಾಗಿದೆ. ಇನ್ನೊಂದು ಕಡೆ ಡಿಎಂಕೆ ಮತ್ತು ಕಾಂಗ್ರೆಸ್ ಮೈತ್ರಿಯಲ್ಲಿ ಬಿರುಕು ಮೂಡಿದೆ. ಎಂ.ಕೆ ಸ್ಟಾಲಿನ್ ಅಸಮಾಧಾನ ಹೊರ ಹಾಕಿದ್ದು ಸುಧೀರ್ಘಕಾಲದ ಮೈತ್ರಿಗೆ ಮಾಡಿದ ದ್ರೋಹ ಎಂದು ಕಿಡಿ ಕರೆದಿದ್ದಾರೆ ಕಾಂಗ್ರೆಸ್ ಬೆನ್ನಿಗೆ ಚೂರಿ ಹಾಕುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ ಟಿ ವಿ ಕೆ ಜೊತೆ ಹೋದರೆ ಬಿಎಂಟಿ ಜೊತೆ ಯಾವುದೇ ಸಂಬಂಧ ಇರಲ್ಲ ಅಂತ ಸ್ಪಷ್ಟವಾಗಿ ಹೇಳಿದ್ದಾರೆ.

Read More

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಹರಳೆ ಗ್ರಾಮದ ಬಳಿ ಇಂದು ಮಧ್ಯಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸೈಕಲ್ ಸವಾರಿ ಮಾಡುತ್ತಿದ್ದ ಬಾಲಕನೊಬ್ಬ ಯಮಸ್ವರೂಪಿಯಾಗಿ ಬಂದ ಟೆಂಪೋಗೆ ಬಲಿಯಾಗಿದ್ದಾನೆ. ಅಪಘಾತದ ತೀವ್ರತೆಗೆ ಬಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಮೃತರ ಗುರುತು: ಅಪಘಾತದಲ್ಲಿ ಮೃತಪಟ್ಟ ಬಾಲಕನನ್ನು ಹರಳೆ ಗ್ರಾಮದ ನಿವಾಸಿ ಯಶವಂತ್ (11) ಎಂದು ಗುರುತಿಸಲಾಗಿದೆ. ಎಂದಿನಂತೆ ಬಾಲಕನು ತನ್ನ ಸೈಕಲ್‌ನಲ್ಲಿ ಗ್ರಾಮದ ರಸ್ತೆಯಲ್ಲಿ ಸವಾರಿ ಮಾಡುತ್ತಿದ್ದಾಗ ಈ ಅವಘಡ ನಡೆದಿದೆ. ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆಯ ವಿವರ: ಯಶವಂತ್ ರಸ್ತೆಯ ಬದಿಯಲ್ಲಿ ಸೈಕಲ್ ತುಳಿಯುತ್ತಿದ್ದಾಗ, ಅತೀ ವೇಗವಾಗಿ ಬಂದ ಟೆಂಪೋ ನಿಯಂತ್ರಣ ತಪ್ಪಿ ಬಾಲಕನಿಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಾಲಕ ಸೈಕಲ್ ಸಮೇತ ರಸ್ತೆಗೆ ಉರುಳಿ ಬಿದ್ದಿದ್ದಾನೆ. ತಲೆಗೆ ಮತ್ತು ದೇಹದ ಇತರ ಭಾಗಗಳಿಗೆ ಗಂಭೀರವಾದ ಪೆಟ್ಟು ಬಿದ್ದ ಪರಿಣಾಮ ಅತಿಯಾದ ರಕ್ತಸ್ರಾವವಾಗಿ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸ್ಥಳೀಯರ ಆಕ್ರೋಶ: ಅಪಘಾತ…

Read More

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಂಡು ಫಲಿತಾಂಶ ಹೊರಬಿದ್ದಿದ್ದರೂ ಸಹ ಹಿಂಸಾಚಾರದ ಕಿಚ್ಚು ಮಾತ್ರ ಆರಿಲ್ಲ. ರಾಜ್ಯದ ವಿವಿಧೆಡೆ ನಡೆದ ಭೀಕರ ಸಂಘರ್ಷಗಳಲ್ಲಿ ಕಳೆದ 24 ಗಂಟೆಗಳಲ್ಲಿ ನಾಲ್ವರು ರಾಜಕೀಯ ಕಾರ್ಯಕರ್ತರು ಬಲಿಯಾಗಿದ್ದು, ಜನರ ಭೀತಿ ಮುಂದುವರೆದಿದೆ. ರಾಜ್ಯದ ಸುಮಾರು 12ಕ್ಕೂ ಹೆಚ್ಚು ಕಡೆಗಳಲ್ಲಿ ಗುಂಪು ಘರ್ಷಣೆ, ಮನೆಗಳಿಗೆ ಬೆಂಕಿ ಹಚ್ಚುವುದು ಮತ್ತು ದಾಳಿ ಪ್ರಕರಣಗಳು ವರದಿಯಾಗಿವೆ. ಬಿಜೆಪಿ ಕಾರ್ಯಕರ್ತನ ಭೀಕರ ಹತ್ಯೆ ಕೋಲ್ಕತ್ತಾದ ನ್ಯೂ ಟೌನ್ ಪ್ರದೇಶದಲ್ಲಿ ತಡರಾತ್ರಿ ನಡೆದ ದಾಳಿಯಲ್ಲಿ ಬಿಜೆಪಿ ಕಾರ್ಯಕರ್ತ ಮಧು ಎಂಬುವವರನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಮಧು ಅವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದ್ದು, ಸ್ಥಳದಲ್ಲೇ ಅವರು ಪ್ರಾಣ ಬಿಟ್ಟಿದ್ದಾರೆ ಎನ್ನಲಾಗಿದೆ. ಈ ಘಟನೆಯಿಂದಾಗಿ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಬಿಜೆಪಿ ನಾಯಕರು ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿರುದ್ಧ ಕಿಡಿಕಾರಿದ್ದಾರೆ. ಟಿಎಂಸಿ ಕಾರ್ಯಕರ್ತನ ಕೊಲೆ ಇನ್ನೊಂದೆಡೆ, ವೀರಭೂಮಿಯ ನ್ಯೂಟೌನ್ ವ್ಯಾಪ್ತಿಯಲ್ಲಿ ನಡೆದ ಮತ್ತೊಂದು ಘರ್ಷಣೆಯಲ್ಲಿ ಟಿಎಂಸಿ ಕಾರ್ಯಕರ್ತ ಅಬೀರ್ ಎಂಬುವವರನ್ನು ಹತ್ಯೆ…

Read More