Author: kannadanewsnow05

ನವದೆಹಲಿ : ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಅವರ ಶಾಸಕ ಸ್ಥಾನ ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದು, ಚುನಾವಣಾ ಆಯೋಗಕ್ಕೆ ಮರುಮತ ಎಣಿಕೆ ಮಾಡುವಂತೆ ಮಹತ್ವದ ಸೂಚನೆ ನೀಡಿದೆ. ಹೌದು ಹೈಕೋರ್ಟ್ ಆದೇಶ ಪ್ರಶ್ನಿಸಿ ನಂಜೇಗೌಡ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ನ್ಯಾ.ಸೂರ್ಯ ಕಾಂತ್ ಹಾಗೂ ನ್ಯಾ.ಜೊಯಮಲ್ಯ ಬಾಗ್ನಿ ಅವರ ಪೀಠ ದಿಂದ ಮಂಗಳವಾರ ವಿಚಾರಣೆ ನಡೆಸಲಾಯಿತು. ಈ ವೇಳೆ ತಡೆಯಾಜ್ಞೆ ನೀಡಿದೆ. 2023ರ ಚುನಾವಣೆ ಯಲ್ಲಿ ಮಾಲೂರು ಕ್ಷೇತ್ರದ ಮತ ಎಣಿಕೆ ಯಲ್ಲಿ ಅಕ್ರಮ ಪ್ರಕರಣದಲ್ಲಿ ಸೆ.16 ರಂದು ಹೈಕೋರ್ಟ್ ಕಾಂಗ್ರೆಸ್ ಶಾಸಕ ನಂಜೇಗೌಡ ಆಯ್ಕೆಯನ್ನು ರದ್ದುಪಡಿಸಿತ್ತು. ಸುಪ್ರೀಂ ಮೇಲ್ಮನವಿಗೆ ತಿಂಗಳ ಅವಕಾಶ ನೀಡಿತ್ತು. ಸುಪ್ರೀಂ ಕೋರ್ಟ್, ಫಲಿತಾಂಶ ವನ್ನು ಯಾವುದೇ ಕಾರಣಕ್ಕೂ ಪ್ರಕಟ ಮಾಡದೇ ಮುಚ್ಚಿದ ಲಕೋಟೆಯಲ್ಲಿ ಕೋರ್ಟ್‌ಗೆ ಸಲ್ಲಿಸುವಂತೆ ತಿಳಿಸಿದೆ. ಫಲಿ ತಾಂಶ ಬರುವವರೆಗೂ ಶಾಸಕ ಸ್ಥಾನ ಅಬಾಧಿತ ಎಂದು, ವಿಚಾರಣೆ 4 ವಾರ…

Read More

ಶಿವಮೊಗ್ಗ : ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ತೆರಳಿದ್ದ ಸಿಬ್ಬಂದಿ ಮೇಲೆ ನಾಯಿ ದಾಳಿ ಮಾಡಿ ಕಚ್ಚಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಈ ವೇಳೆ ಶಿಕ್ಷಕಿ ಕಾಲಿನಲ್ಲಿ ರಕ್ತ ಬಂದಿದೆ. ಆದರೂ ಅವರು ಗಣತಿ ಕಾರ್ಯವನ್ನು ಮುಗಿಸಿ ಬಳಿಕ ಚಿಕಿತ್ಸೆ ಪಡೆದು ಕರ್ತವ್ಯ ಪ್ರಜ್ಞೆ ಮಾಡಿದ್ದಾರೆ. ಇದು ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಅಬ್ಬಲಗೆರೆ ಸರ್ಕಾರಿ ಪ್ರೌಢಶಾಲೆಯ ಪ್ರಥಮ ದರ್ಜೆ ಸಹಾಯಕಿ ಉಮಾರಾಣಿ ಅವರ ಮೇಲೆ ನಾಯಿ ದಾಳಿ ಮಾಡಿದೆ. ಆದರೂ ಅವರು ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ. ಬಳಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಮಂಗಳವಾರ ಉಮಾರಾಣಿ ಅವರು ಗಣತಿ ಕಾರ್ಯಕ್ಕಾಗಿ ನಿಯೋಜನೆಗೊಂಡಿದ್ದರು. ಅದರಂತೆ ಶಿವಮೊಗ್ಗದ ರವಿವರ್ಮ ಬೀದಿ, ಆಜಾದ್‌ ನಗರ ಭಾಗದಲ್ಲಿ ಸರ್ವೆಗೆ ತೆರಳಿದ್ದರು. ಈ ವೇಳೆ ಅವರ ಮೇಲೆ ಬೀದಿ ನಾಯಿ ಏಕಾಏಕಿ ದಾಳಿ ನಡೆಸಿದೆ. ಉಮಾದೇವಿ ಅವರ ಎಡಗಾಲಿಗೆ ನಾಯಿ ಕಚ್ಚಿದೆ. ಇದರಿಂದ ಅವರ ಕಾಲಿನಿಂದ ರಕ್ತ ಬರಲು ಆರಂಭವಾಗಿದೆ. ಆದರೂ ಅವರು ಕರ್ತವ್ಯ ಪ್ರಜ್ಞೆ…

Read More

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸದ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ಸಾರಿಗೆ ನೌಕರರು ಮತ್ತೆ ಮುಷ್ಕರ ಹಮ್ಮಿಕೊಂಡಿದ್ದು, ಬೇಡಿಕೆ ಈಡೇರಿಕೆ ಕುರಿತು ಶೀಘ್ರ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಸಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಗುರುವಾರದಿಂದ ಹಮ್ಮಿಕೊಂಡಿದ್ದ ಉಪವಾಸ ಸತ್ಯಾಗ್ರಹವನ್ನು ಮುಂದೂಡಲಾಗಿದೆ. ವೇತನ ಹೆಚ್ಚಳ ಮತ್ತು ವೇತನ ಹೆಚ್ಚಳ ಹಿಂಬಾಕಿ ಪಾವತಿಗೆ ಆಗ್ರಹಿಸಿ ಕೆಎಸ್ಸಾರ್ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನೇತೃತ್ವದಲ್ಲಿ ಅಕ್ಟೊಬರ್ 15 ರಿಂದ 19ರವರೆಗೆ ಬೆಂಗಳೂರು, ಹುಬ್ಬಳ್ಳಿ ಮತ್ತು ಕಲಬುರಗಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿತ್ತು. ಈ ಕುರಿತು ಕಾರ್ಮಿಕ ಇಲಾಖೆ ಆಯುಕ್ತರು ಮಂಗಳವಾರ ಕಾರ್ಮಿಕ ಸಂಘಟನೆಗಳ ಮುಖಂಡರು ಮತ್ತು ಸಾರಿಗೆ ನಿಗಮಗಳ ಅಧಿಕಾರಿಗಳೊಂದಿಗೆ ಸಂಧಾನ ಸಭೆಯನ್ನೂ ನಡೆಸಿದ್ದರು. ಆದರೆ, ಸಭೆಯಲ್ಲಿ ಯಾವುದೇ ನಿರ್ಣಯ ತೆಗೆದುಕೊಳ್ಳದ ಕಾರಣ ಅ.27ಕ್ಕೆ ಸಭೆ ಮುಂದೂಡಲಾಗಿತ್ತು. ಅದರ ನಡುವೆಯೇ ನೌಕರರ ಬೇಡಿಕೆ ಈಡೇರಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ 15 ದಿನಗಳಲ್ಲಿ ಜಂಟಿ…

Read More

ಬೆಂಗಳೂರು : ಇತ್ತೀಚಿಗೆ ಬೆಂಗಳೂರು ನಗರದಲ್ಲಿ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಕಚೇರಿ ಹಾಗೂ ಶಾಲೆಗಳು ಸೇರಿ ಇತರೆಡೆ ಹುಸಿ ಬಾಂಬ್ ಬೆದರಿಕೆ ಮೂಲಕ ಆತಂಕ ಸೃಷ್ಟಿಸಿರುವ ದುಷ್ಕರ್ಮಿಗಳ ಪತ್ತೆಗೆ ಜಂಟಿ ಪೊಲೀಸ್ ಆಯುಕ್ತರ ಮೇಲುಸ್ತುವಾರಿಯಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆಯಾಗಿದೆ. ಈ ಹುಸಿ ಬಾಂಬ್ ಬೆದರಿಕೆ ಬೆಂಗಳೂರು- 34, ಮುಂಬೈ- 27, ಚೆನ್ನೈ-22, ಕೇಂದ್ರ ತನಿಖಾ ದಳ (ಸಿಬಿಐ)-2 ಹಾಗೂ ದೆಹಲಿ-20 ಸೇರಿ ರಾಷ್ಟ್ರವ್ಯಾಪಿ 100ಕ್ಕೂ ಹೆಚ್ಚಿನ ದಿ ಪ್ರಕರಣಗಳು ದಾಖಲಾಗಿವೆ. ಆದರೆ ಈವರೆಗೆ ಆರೋಪಿಗಳ ಮೂಲ ಪತ್ತೆಯಾಗಿಲ್ಲ. ಹೀಗಾಗಿ ಈಗ ರಾಜ್ಯ ಹಾಗೂ ಕೇಂದ್ರ ತನಿಖಾ ಸಂಸ್ಥೆಗಳು ಜಂಟಿಯಾಗಿ ಕಾರ್ಯಾಚರಣೆಗಿಳಿದಿವೆ. ಭೀತಿ ಸೃಷ್ಟಿಕರ್ತರ ಪತ್ತೆಗೆ ತಮ್ಮ ಮೇಲುಸ್ತುವಾರಿಯಲ್ಲಿ ಡಿಸಿಪಿ ನೇತೃತ್ವದಲ್ಲಿ ಎಸ್‌ಐಟಿಯನ್ನು ಜಂಟಿ ಪೊಲೀಸ್ ಆಯುಕ್ತ (ಪಶ್ಚಿಮ) ವಂಶಿಕೃಷ್ಣ ರಚಿಸಿದ್ದಾರೆ. ಕೇಂದ್ರ ಹಾಗೂ ಹೊರ ರಾಜ್ಯಗಳ ಪೊಲೀಸರ ಸಹಭಾಗಿತ್ವದಲ್ಲಿ ಆರೋಪಿಗಳನ್ನು ಹಿಡಿಯಲು ಎಸ್‌ಐಟಿ ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಕೆಲ ಮಾಹಿತಿ ಸಹ ಸಿಕ್ಕಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Read More

ಮಡಿಕೇರಿ : ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯ ಮತ್ತು ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ, ಈ ಎರಡೂ ಸಂಸ್ಥೆಗಳು ಒಟ್ಟಾಗಿ ನವೆಂಬರ್ 01, 1985 ರಿಂದ ಕರ್ನಾಟಕದಲ್ಲಿರುವ ಕನ್ನಡ ಬಾರದ ಎಲ್ಲ ಸರ್ಕಾರಿ ನೌಕರರಿಗಾಗಿ ಹನ್ನೆರಡು ತಿಂಗಳುಗಳ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯೊಂದನ್ನು ನಡೆಸುತ್ತಿವೆ. ಇದಕ್ಕೆ ಕರ್ನಾಟಕದಲ್ಲಿರುವ ಎಲ್ಲ ನಗರಸಭೆ, ಕ.ವಿ.ಪ್ರ.ನಿ.ನಿ., ಕೆ.ಎಸ್.ಆರ್.ಟಿ.ಸಿ., ವಿಶ್ವವಿದ್ಯಾಲಯಗಳು, ಶಾಲಾ ಕಾಲೇಜುಗಳು ಮತ್ತಿತರ ಸರ್ಕಾರಿ ಅನುದಾನ ಪಡೆಯುವ ಸಂಸ್ಥೆಗಳ ನೌಕರರು ಮತ್ತು ಎಲ್ಲ ರಾಷ್ಟ್ರೀಕೃತ ಬ್ಯಾಂಕುಗಳ ನೌಕರರು ಸಹ ನೊಂದಾಯಿಸಿಕೊಳ್ಳಬಹುದು. ಕರ್ನಾಟಕ ಸರ್ಕಾರಿ ನೌಕರರು ಸಂಪರ್ಕ ಶಿಬಿರ ಹಾಗೂ ಪರೀಕ್ಷೆಗಳಿಗೆ ಹಾಜರಾಗುವಾಗಿನ ಅವರ ಕಚೇರಿ ಗೈರು ಹಾಜರಿಯನ್ನು ಅನ್ಯ ಕಾರ್ಯನಿಮಿತ್ತ ಎಂದು ಪರಿಗಣಿಸಲಾಗುವುದು. ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಗೆ ನೋಂದಾಯಿಸಿಕೊಂಡು ಉತ್ತೀರ್ಣರಾದವರಿಗೆ ಕರ್ನಾಟಕ ಲೋಕಸೇವಾ ಆಯೋಗದ ಕನ್ನಡ ಪರೀಕ್ಷೆಯಿಂದ ಕರ್ನಾಟಕ ಸರ್ಕಾರದ ಅಧಿಸೂಚನೆ ಸಿಅಸುಇ 39:ಸೆಸೆವಿ: 87(1), ದಿನಾಂಕ 13ನೇ ಫೆಬ್ರವರಿ 1989 (ಕರ್ನಾಟಕ ರಾಜ್ಯಪತ್ರ ಭಾಗ-4, 2ಸಿ(1).ಮಾರ್ಚಿ 23, 1989,…

Read More

ಬೆಂಗಳೂರು : ನಾಳೆಯಿಂದ ಐದು ದಿನಗಳ ಕಾಲ ಸರ್ಕಾರಿ ನೌಕರರ ಉಪವಾಸ ಸತ್ಯಾಗ್ರಹ ವಿಚಾರವಾಗಿ, ವಿವಿಧ ಬೇಡಿಕೆ ಈಡೇರಿಸಿದ ಸರ್ಕಾರದ ವಿರುದ್ಧ ಮತ್ತೆ ಮುಷ್ಕರಕ್ಕೆ ಸಜ್ಜಾಗಿದ್ದಾರೆ. ಮೊದಲ ಹಂತದಲ್ಲಿ ಸಾರಿಗೆ ನೌಕರರಿಂದ ಐದು ದಿನ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು. ಆಗಸ್ಟ್ 5ರಂದು ಸಾರಿಗೆ ಬಸ್ ಗಳನ್ನು ನಿಲ್ಲಿಸಿ ಮುಷ್ಕರ ನಡೆಸಿದ್ದ ಸಾರಿಗೆ ನೌಕರರು.ಹೈಕೋರ್ಟ್ ತಡಿಯಾಜ್ಞೆ ಹಿನ್ನೆಲೆಯಲ್ಲಿ ಮುಷ್ಕರ ಕೈ ಬಿಟ್ಟಿದ್ದರು. ಆದರೆ ಇಲ್ಲಿಯವರೆಗೆ ನೌಕರರ ಬೇಡಿಕೆಯನ್ನು ರಾಜ್ಯ ಸರ್ಕಾರ ಈಡೇರಿಸಿಲ್ಲ. ಹಾಗಾಗಿ ರಾಜ್ಯ ಸರ್ಕಾರದ ವಿಳಂಬ ಧೋರಣೆ ಖಂಡಿಸಿ ಹೋರಾಟಕ್ಕೆ ಪ್ಲಾನ್ ಮಾಡಿಕೊಂಡಿದ್ದು, ರಾಜ್ಯದಲ್ಲಿ ಮತ್ತೆ ಬಿಎಂಟಿಸಿ, ಕೆಎಸ್ಆರ್ಟಿಸಿ ಬಸ್ ಬಂದ್ ಗೆ ಪ್ಲಾನ್ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಐದು ದಿನ ಸಾರಿಗೆ ನೌಕರರಿಗೆ ರಜೆ ರದ್ದುಗೊಳಿಸಲಾಗಿದೆ. ಕೆಎಸ್ಆರ್ಟಿಸಿಯಿಂದ ನೌಕರರಿಗೆ ಖಡಕ್ ಆದೇಶ ನೀಡಿದೆ. ಸಾರಿಗೆ ಸಂಸ್ಥೆ ಸಾರ್ವಜನಿಕ ಉಪಯುಕ್ತ ಸೇವಾ ಸಂಸ್ಥೆ ಅಂತ ಘೋಷಣೆ ಮಾಡಿದ್ದು, ಜನರಿಗೆ ಸಮರ್ಪಕ ಸೇವೆ ಒದಗಿಸುವುದು ನಿಗಮದ ಕರ್ತವ್ಯವಾಗಿದೆ. ನಾಳೆಯಿಂದ ಅಕ್ಟೋಬರ್ 19…

Read More

ದಕ್ಷಿಣಕನ್ನಡ : ದಕ್ಷಿಣಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ನಿಡ್ಡೋಡಿಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿದ್ದು, ನಾಲ್ವರು ಆರೋಪಿಗಳನ್ನ ಅರೆಸ್ಟ್ ಮಾಡಿದ್ದಾರೆ. ದಾಳಿಯ ವೇಳೆ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ರಕ್ಷಿಸಿದ್ದಾರೆ. ಮೂಡುಬಿದಿರೆ ನಿಡ್ಡೋಡಿ ನಿವಾಸಿ ಆಟೋ ಚಾಲಕ ಮಹೇಶ್, ಕಟೀಲು ನಿವಾಸಿ ಶ್ರೀಕಾಂತ್, ಯಜ್ನೇಶ್ ಹಾಗು ದಿಲೀಪ್ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಮಹೇಶ್ ಇಬ್ಬರು ಅಪ್ರಾಪ್ತೆ ಬಾಲಕಿಯರನ್ನ ಪುಸಲಾಯಿಸಿ ಕರೆತಂದಿದ್ದ. ಈ ವೇಳೆ ಪೊಲೀಸರು ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ್ದಾರೆ.

Read More

ಚಾಮರಾಜನಗರ : ಚಾಮರಾಜನಗರದಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ವಿದ್ಯುತ್ ತಂತಿ ತಗುಲಿ ಇಬ್ಬರೂ ಕೂಲಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊತ್ತಲವಾಡಿಯ ಬಳಿ ಮೆಲ್ಲೂರಿನಲ್ಲಿ ಈ ಒಂದು ಘಟನೆ ಸಂಭವಿಸಿದೆ. ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಬಳಿಯ ಮೇಲ್ಲೂರು ಗ್ರಾಮದ ಸ್ವಾಮಿ (52) ಕೃಷ್ಣ ಶೆಟ್ಟಿ (50) ಮೃತ ಕೂಲಿ ಕಾರ್ಮಿಕರು ಎಂದು ತಿಳಿದು ಬಂದಿದೆ. ತೋಟದಲ್ಲಿ ಕೆಲಸ ಮಾಡುತ್ತಿರುವಾಗ ಈ ಅವಘಡ ಸಂಭವಿಸಿದೆ. ಚಾಮರಾಜನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, ಹಿರಿಯ IPS ಅಧಿಕಾರಿ ಅಲೋಕ್ ಕುಮಾರ್ ವಿರುದ್ಧದ ಇಲಾಖಾ ತನಿಖೆಯ ಆದೇಶ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರದ ಆದೇಶ ರದ್ದುಗೊಳಿಸಿ CAT ಆದೇಶ ಹೊರಡಿಸಿದೆ. ಕೇಂದ್ರ ಆಡಳಿತಾತ್ಮಕ ನ್ಯಾಯ ಮಂಡಳಿ (CAT) ಈ ಆದೇಶ ಹೊರಡಿಸಿದೆ. ಸರ್ಕಾರ ಇಲಾಖೆ ಆದೇಶ ಪ್ರಶ್ನೆಸಿ ಅಲೋಕ್ ಕುಮಾರ್ ಸಿ ಎ ಟಿ ಮೊರೆ ಹೋಗಿದ್ದರು. ಇಬ್ಬರು ನ್ಯಾಯಮೂರ್ತಿಗಳ ನಡುವೆ ವಿಭಿನ್ನ ತೀರ್ಪು ಹಿನ್ನೆಲೆಯಲ್ಲಿ ಸಿಎಟಿ ಮುಖ್ಯಸ್ಥ ನ್ಯಾಯಮೂರ್ತಿ ಈ ಒಂದು ಪ್ರಕರಣ ಹೋಗಿತ್ತು. ಎರಡು ಕಡೆಯ ವಾದ ಮತ್ತು ಪ್ರತಿವಾದ ಆಲಿಸಿ ಇಂದು ತೀರ್ಪು ಪ್ರಕಟಿಸಿದ್ದು ಸರ್ಕಾರದ ಇಲಾಖೆ ಆದೇಶ ರದ್ದುಗೊಳಿಸಿದೆ. ಅಲೋಕ್ ಕುಮಾರ್ ಅವರಿಗೆ ಸಲಬೇಕಾದ ಅಭ್ಯರ್ಥಿ ಮ

Read More

ಯಾದಗಿರಿ : ರೌಡಿಶೀಟರ್ ಜೊತೆ ಪಿಎಸ್ಐ ಕೇಕ್ ಕಟ್ ಮಾಡಿದ ವಿಚಾರವಾಗಿ ನಾರಾಯಣಪುರ ಠಾಣೆ ಪಿಎಸ್ಐ ರಾಜಶೇಖರ ಸಸ್ಪೆಂಡ್ ಮಾಡಲಾಗಿದೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಠಾಣೆ ಪಿಎಸ್ಐ ರಾಜಶೇಖರ್ ನನ್ನ ಅಮಾನತುಗೊಳಿಸಲಾಗಿದೆ. ಅಮಾನತು ಮಾಡಿ ಯಾದಗಿರಿ ಎಸ್ ಪಿ ಪೃಥ್ವಿಕ್ ಶಂಕರ್ ಆದೇಶ ಹೊರಡಿಸಿದ್ದಾರೆ.ಸಭೆ ಇನ್ಸ್ಪೆಕ್ಟರ್ ಆಗಿ 10 ವರ್ಷ ಪೂರ್ಣಗೊಳಿಸಿದ್ದಕ್ಕೆ ಕೇಕ್ ಕಟ್ ಮಾಡಿದ್ದಾರೆ. ನಾರಾಯಣಪುರ ಠಾಣಾ ವ್ಯಾಪ್ತಿಯ ರೌಡಿಶೀಟರ್ ನಾಗರಾಜ್ ಜೊತೆಗೆ ಪಿಎಸ್ಐ ರಾಜಶೇಖರ್ ಕೇಕ್ ಕಟ್ ಮಾಡಿರುವ ಹಿನ್ನೆಲೆಯಲ್ಲಿ ಇದೀಗ ಎಸ್ ಪಿ ಪೃಥ್ವಿ ಶಂಕರ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

Read More