Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, ಹಿರಿಯ IPS ಅಧಿಕಾರಿ ಅಲೋಕ್ ಕುಮಾರ್ ವಿರುದ್ಧದ ಇಲಾಖಾ ತನಿಖೆಯ ಆದೇಶ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರದ ಆದೇಶ ರದ್ದುಗೊಳಿಸಿ CAT ಆದೇಶ ಹೊರಡಿಸಿದೆ. ಕೇಂದ್ರ ಆಡಳಿತಾತ್ಮಕ ನ್ಯಾಯ ಮಂಡಳಿ (CAT) ಈ ಆದೇಶ ಹೊರಡಿಸಿದೆ. ಸರ್ಕಾರ ಇಲಾಖೆ ಆದೇಶ ಪ್ರಶ್ನೆಸಿ ಅಲೋಕ್ ಕುಮಾರ್ ಸಿ ಎ ಟಿ ಮೊರೆ ಹೋಗಿದ್ದರು. ಇಬ್ಬರು ನ್ಯಾಯಮೂರ್ತಿಗಳ ನಡುವೆ ವಿಭಿನ್ನ ತೀರ್ಪು ಹಿನ್ನೆಲೆಯಲ್ಲಿ ಸಿಎಟಿ ಮುಖ್ಯಸ್ಥ ನ್ಯಾಯಮೂರ್ತಿ ಈ ಒಂದು ಪ್ರಕರಣ ಹೋಗಿತ್ತು. ಎರಡು ಕಡೆಯ ವಾದ ಮತ್ತು ಪ್ರತಿವಾದ ಆಲಿಸಿ ಇಂದು ತೀರ್ಪು ಪ್ರಕಟಿಸಿದ್ದು ಸರ್ಕಾರದ ಇಲಾಖೆ ಆದೇಶ ರದ್ದುಗೊಳಿಸಿದೆ. ಅಲೋಕ್ ಕುಮಾರ್ ಅವರಿಗೆ ಸಲಬೇಕಾದ ಅಭ್ಯರ್ಥಿ ಮ
ಯಾದಗಿರಿ : ರೌಡಿಶೀಟರ್ ಜೊತೆ ಪಿಎಸ್ಐ ಕೇಕ್ ಕಟ್ ಮಾಡಿದ ವಿಚಾರವಾಗಿ ನಾರಾಯಣಪುರ ಠಾಣೆ ಪಿಎಸ್ಐ ರಾಜಶೇಖರ ಸಸ್ಪೆಂಡ್ ಮಾಡಲಾಗಿದೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಠಾಣೆ ಪಿಎಸ್ಐ ರಾಜಶೇಖರ್ ನನ್ನ ಅಮಾನತುಗೊಳಿಸಲಾಗಿದೆ. ಅಮಾನತು ಮಾಡಿ ಯಾದಗಿರಿ ಎಸ್ ಪಿ ಪೃಥ್ವಿಕ್ ಶಂಕರ್ ಆದೇಶ ಹೊರಡಿಸಿದ್ದಾರೆ.ಸಭೆ ಇನ್ಸ್ಪೆಕ್ಟರ್ ಆಗಿ 10 ವರ್ಷ ಪೂರ್ಣಗೊಳಿಸಿದ್ದಕ್ಕೆ ಕೇಕ್ ಕಟ್ ಮಾಡಿದ್ದಾರೆ. ನಾರಾಯಣಪುರ ಠಾಣಾ ವ್ಯಾಪ್ತಿಯ ರೌಡಿಶೀಟರ್ ನಾಗರಾಜ್ ಜೊತೆಗೆ ಪಿಎಸ್ಐ ರಾಜಶೇಖರ್ ಕೇಕ್ ಕಟ್ ಮಾಡಿರುವ ಹಿನ್ನೆಲೆಯಲ್ಲಿ ಇದೀಗ ಎಸ್ ಪಿ ಪೃಥ್ವಿ ಶಂಕರ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ವಿಜಯಪುರ : ಇಡೀ ಜಿಲ್ಲೆಯನ್ನೇ ಬೆಚ್ಚಿ ಬೀಳಿಸುವಂತ ಘಟನೆ ವಿಜಯಪುರದಲ್ಲಿ ನಡೆದಿದ್ದು, ಜಿಲ್ಲೆಯ ಕನ್ನೂರು ಗ್ರಾಮದಲ್ಲಿ ಕಲ್ಲಿನಿಂದ ಜಜ್ಜಿ ಇಬ್ಬರು ಯುವಕರನ್ನ ಬರ್ಬರ ಹತ್ಯೆ ಮಾಡಿದ್ದ ಪ್ರಕರಣದ ಪ್ರಮುಖ ಆರೋಪಿಯನ್ನು ವಿಜಯಪುರ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ. ಅಕ್ಷಯ್ ಜುಲಜುಲೆ ಬಂಧಿತ ಆರೋಪಿಯಾಗಿದ್ದು, ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ. ತನಿಖೆಗಿಳಿದ ಪೊಲೀಸರು 5 ಜನ ಆರೋಪಿಗಳನ್ನ ಸೆರೆಹಿಡಿಯಲು ಕನ್ನೂರು ಗ್ರಾಮದ ಹೊರವಲಯಕ್ಕೆ ತೆರಳಿದ್ದರು. ಈ ವೇಳೆ ಪ್ರಕರಣದ ಪ್ರಮುಖ ಆರೋಪಿ ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಆತನ ಕಾಲಿಗೆ ಪೊಲೀಸರು ಗುಂಡು ಹಾರಿಸಿ, ಅರೆಸ್ಟ್ ಮಾಡಿದ್ದಾರೆ. ಭಾನುವಾರ (ಅ.12) ರಾತ್ರಿ ವಿಜಯಪುರ ಜಿಲ್ಲೆಯ ಕನ್ನೂರು ಗ್ರಾಮದಲ್ಲಿ ಸಾಗರ ಬೆಳುಂಡಗಿ (25) ಹಾಗೂ ಇಸಾಕ್ ಖುರೇಷಿ (24) ಎಂಬ ಇಬ್ಬರ ಹತ್ಯೆ ನಡೆದಿತ್ತು. ಈ ಸಂಬಂಧ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ವೇಳೆ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಸದ್ಯ ಆರೋಪಿ ಹಾಗೂ ಸಿಬ್ಬಂದಿಯನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಬೆಂಗಳೂರು : ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಬಹುತೇಕ ಫಿಕ್ಸ್ ಎಂದೇ ಹೇಳಲಾಗುತ್ತಿದೆ. ಏಕೆಂದರೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಸಹ ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಔತಣಕೂಟ ಸಹ ಏರ್ಪಡಿಸಿದ್ದರು. ಹೀಗಾಗಿ ಇದೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ರಾಮಲಿಂಗಾರೆಡ್ಡಿ ಡಿಸೇಂಬರ್ ನಲ್ಲಿ ಸಚಿವ ಸಂಪುಟ ಪುನಾರಚನೆ ಆಗಲಿದೆ ಎಂದು ಸುಳಿವು ನೀಡಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ಪುನಾರಚನೆ ಕುರಿತು ಸಚಿವ ರಾಮಲಿಂಗ ರೆಡ್ಡಿ ಇದೀಗ ಮಹಾತ್ವದ ಸುಳಿವು ಕೊಟ್ಟಿದ್ದಾರೆ ಡಿಸೆಂಬರ್ ನಲ್ಲಿ ಸಚಿವ ಸಂಪುಟ ಪುನರ್ ರಚನೆ ಆಗಲಿದೆ. ನಮ್ಮಲ್ಲಿ 7 ರಿಂದ 8 ಹಿರಿಯ ಶಾಸಕರಿದ್ದಾರೆ ಅವರಿಗೂ ಕೂಡ ಅವಕಾಶ ಕೊಡಬೇಕಲ್ವಾ ಎಂದು ಬೆಂಗಳೂರಿನಲ್ಲಿ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದರು.
ಬೆಂಗಳೂರು : ಆರ್ ಎಸ್ ಎಸ್ ನಿಷೇಧದ ಕುರಿತಂತೆ ಸಿಎಂ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದ ಬೆನ್ನೆಲ್ಲೆ ಪ್ರಿಯಾಂಕ ಖರ್ಗೆಗೆ ಬೆದರಿಕೆ ಕರೆ ಬರುತ್ತಿವೆ. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಹೌದ ನನಗೆ ಗೊತ್ತಿಲ್ಲ ಈ ಗುರುತು ಪ್ರಿಯಾಂಕ ಖರ್ಗೆ ಕರೆದು ಮಾಹಿತಿ ಪಡೆದುಕೊಳ್ಳುತ್ತೇನೆ ಎಂದು ತಿಳಿಸಿದರು. ರಾಜ್ಯದಲ್ಲಿ RSS ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಸಚಿವ ಪ್ರಿಯಾಂಕ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ನನಗೆ ಅನೇಕ ಬೆದರಿಕೆ ಕರೆಗಳು ಬರುತ್ತಿವೆ. ನನಗೆ ಮತ್ತು ನನ್ನ ಕುಟುಂಬಕ್ಕೆ ಬೆದರಿಕೆ ಕರೆಗಳು ಬರುತ್ತಿದ್ದು, ಇದಕ್ಕೆ ನಾನು ಯಾವುದಕ್ಕೂ ವಿಚಲಿತಲಾಗಲ್ಲ ಎಂದು ಪ್ರಿಯಾಂಕ್ ಖರ್ಗೆ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಹಾಸನ : ಆರ್ ಎಸ್ ಎಸ್ ನಿಷೇಧದ ಕುರಿತು ಕಾಂಗ್ರೆಸ್ ಎಂಎಲ್ಸಿ ಬಿ.ಕೆ ಹರಿಪ್ರಸಾದ್ ಆರ್ ಎಸ್ ಎಸ್ ಇದು ಒಂದು ತಾಲಿಬಾನ್ ಸಂಘಟನೆ ಆಗಿದೆ ಎಂದು ಇತ್ತೀಚಿಗೆ ಹೇಳಿಕೆ ನೀಡಿದ್ದರು. ಈ ವಿಚಾರವಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಎಂ ಸಿದ್ದರಾಮಯ್ಯ ಬಿಕೆ ಹರಿಪ್ರಸಾದ್ ತಾಲಿಬಾನ್ ಚೀಲಗಳು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪ್ರಿಯಾಂಕ್ ಖರ್ಗೆ ಅವರಿಗೆ ಧಮ್, ತಾಕತ್ ಇದ್ದರೆ ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಮಸೀದಿಗಳನ್ನು ತೆರವುಗೊಳಿಸಲಿ. ಆರ್ ಎಸ್ ಎಸ್ ನಿಷೇಧಿಸಲು ಕಾಂಗ್ರೆಸ್ ನವರಿಗೆ ಅಧಿಕಾರ ಇಲ್ಲ. ಆರ್ ಎಸ್ ಎಸ್ ಟಾರ್ಗೆಟ್ ಮಾಡಿ ಇವರು ಮಾತನಾಡುತ್ತಿದ್ದಾರೆ. ಆರ್ ಎಸ್ ಎಸ್ ಶಾಖೆಯಲ್ಲಿ ದೇಶ ಪ್ರೇಮದ ಬಗ್ಗೆ ಚರ್ಚೆ ಆಗುತ್ತೆ. ಪ್ರಿಯಾಂಕ ಖರ್ಗೆ ತಾಲಿಬಾನಿಗಳ ಬಚ್ಚಾ, ಸಿಎಂ ಸಿದ್ದರಾಮಯ್ಯ ಹರಿಪ್ರಸಾದ್ ತಾಲಿಬಾನ್ ಪರ ಮಾತನಾಡುವ ಚೇಲಾಗಳು. ಪ್ರಿಯಾಂಕ ಖರ್ಗೆ ಬಾಬಾ ಸಾಹೇಬ್ ಅಂಬೇಡ್ಕರ್ ಹಿಂಬಾಲಕರಲ್ಲ. ಸೋನಿಯಾ ಗಾಂಧಿ, ನೆಹರು ಹಿಂಬಾಲಕರು…
ನವದೆಹಲಿ : ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಮರುಮತ ಎಣಿಕೆಗೆ ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಇದೀಗ ಸೂಚನೆ ನೀಡಿದೆ. ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಗೆ ಸುಪ್ರೀಂಕೋರ್ಟ್ ರಾಜ ಚುನಾವಣಾ ಆಯೋಗಕ್ಕೆ ಸೂಚಿಸಿದೆ. ಶಾಸಕರಾಗಿ ಆಯ್ಕೆ ಅಸಿಂಧುಗೊಳಿಸಿದ್ದ ಆದೇಶಕ್ಕೆ ತಡೆ ನೀಡಿದ್ದು, ಇದೀಗ ಮಾಲೂರು ಕ್ಷೇತ್ರದ ಮತಗಳ ಮರು ಎಣಿಕೆಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಫಲಿತಾಂಶವನ್ನು ಮುಚ್ಚಿದಲಕೋಟೆಯಲ್ಲಿ ಸಲ್ಲಿಸಲು ಸುಪ್ರೀಂಕೋರ್ಟ್ ರಾಜ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ. ಪ್ರಕರಣದ ಹಿನ್ನೆಲೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದಿಂದ ಕೆ.ವೈ.ನಂಜೇಗೌಡ ಗೆಲುವು ಸಾಧಿಸಿದ್ದರು. ಇದನ್ನು ಪ್ರಶ್ನಿಸಿರುವ ಅರ್ಜಿದಾರರು, ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಲ್ಲಾ 15 ಮಂದಿ ಸ್ಪರ್ಧಿಗಳ ಏಜೆಂಟ್ಗಳಿಗೆ ಮತ ಎಣಿಕೆ ಕೇಂದ್ರದಲ್ಲಿ ಸಮರ್ಪಕ ವ್ಯವಸ್ಥೆ ಮಾಡಿರಲಿಲ್ಲ. ಒಂದೇ ಕೊಠಡಿಯಲ್ಲಿ ಮತಗಳ ಎಣಿಕೆ ಕಾರ್ಯ ನಡೆಯಬೇಕಿದ್ದು, ಎರಡು ಪ್ರತ್ಯೇಕ ಕೊಠಡಿಯಲ್ಲಿ ಎಣಿಕೆ ಮಾಡಲಾಗಿದೆ.ಆ ಮೂಲಕ ಜನಪ್ರತಿನಿಧಿಗಳ ಕಾಯ್ದೆಯ ನಿಯಮಗಳು…
ಬೆಂಗಳೂರು : ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಇದೀಗ ಶಾಲಾ ಕಟ್ಟಡದಿಂದ ಜಿಗಿದು 17 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ರಿಚರ್ಡ್ಸ್ ಟೌನ್ ನಲ್ಲಿ ಈ ಒಂದು ಘಟನೆ ನಡೆದಿದೆ.ಮೃತ ಬಾಲಕ 12ನೇ ತರಗತಿಯ ವಿಜ್ಞಾನ ವಿದ್ಯಾರ್ಥಿ ಎಂದು ಹೇಳಲಾಗಿದೆ. ನಿನ್ನೆ ಬೆಳಿಗ್ಗೆ 8.20ರ ಸುಮಾರಿಗೆ ಶಾಲಾ ಕಟ್ಟಡದಿಂದ ಹಾರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬುದು ಇಲ್ಲಿಯವರೆಗೆ ತಿಳಿದು ಬಂದಿಲ್ಲ. ವಿದ್ಯಾರ್ಥಿಯ ಸಾವನ್ನು ಅಸಹಜ ಸಾವು ಎಂದು ವರದಿ (ಯುಡಿಆರ್) ಮಾಡಲಾಗಿದೆ. ಈಗಾಗಲೇ ಪೊಲೀಸರು ಶಾಲೆಯ ಸಿಸಿಟಿವಿಯನ್ನು ಪರಿಶೀಲನೆ ಮಾಡಿದ್ದು, ವಿದ್ಯಾರ್ಥಿ ಸಾವಿಗೆ ಕಾರಣ ಏನು ಎಂಬುದನ್ನು ತನಿಖೆ ನಡೆಸುತ್ತಿದ್ದಾರೆ.
ಸಿಜೆಐ ಮೇಲಿನ ದಾಳಿ ಬೆಂಬಲಿಸುತ್ತಿರುವವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿ; ಸರ್ಕಾರಕ್ಕೆ ವಕೀಲ ಮನೋರಾಜ್ ರಾಜೀವ್ ಆಗ್ರಹ
ಮಂಗಳೂರು: ಸುಪ್ರೀಂ ಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ್ ಶೂ ಎಸೆದು ಅಪಮಾನಿಸಿದ ಕೃತ್ಯದ ವಿರುದ್ಧ ಕೃತ್ಯದ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಅಷ್ಟೇ ಅಲ್ಲ ದೇಶದ ಹಲವೆಡೆ ಪ್ರಕರಣಗಳು ದಾಖಲಾಗಿವೆ. ಆದರೆ. ಇನ್ನೊಂದೆಡೆ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ಮೇಲೆ ವಕೀಲ ನಡೆಸಿದ ಕೃತ್ಯವನ್ನು ಸಮರ್ಥಿಸುತ್ತಿರುವ ಸನ್ನಿವೇಶವೂ ಕಂಡುಬರುತ್ತಿದೆ. ಈ ಬೆಳವಣಿಗೆ ಬಗ್ಗೆ ಕಾನೂನು ತಜ್ಞರು ಹಾಗೂ ವಕೀಲರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಕೇಶ್ ಕಿಶೋರ್ ನಡೆಸಿರುವ ಸಂವಿಧಾನ ವಿರೋಧಿ ಕೃತ್ಯವನ್ನು ಕೆಲವರು ಸಮರ್ಥಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಾಕಿರುವ ಪ್ರಕರಣಕ್ಕೆ ಕರ್ನಾಟಕವೂ ಸಾಕ್ಷಿಯಾಗಿವೆ. ಈ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಮಾಜಿ ಸರ್ಕಾರಿ ಅಭಿಯೋಜಕರೂ ಆದ ಮಂಗಳೂರಿನ ಹಿರಿಯ ವಕೀಲ ಮನೋರಾಜ್ ರಾಜೀವ್, ಅಂತಹಾ ಕೃತ್ಯವನ್ನು ಬೆಂಬಲಿಸಿ ಪ್ರಚಾರ ಮಾಡುವವರ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕು ಎಂದು ಪ್ರತಿಪಾದಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಾನೂನು ಘಟಕದ ಅಧ್ಯಕ್ಷರೂ…
ಬೆಂಗಳೂರು : ರಾಜ್ಯದಲ್ಲಿ RSS ಚಟುವಟಿಕೆಗಳಿಗೆ ನಿಷೇಧದ ಕುರಿತು ಸಿಎಂ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ಇದೀಗ ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಬಂದಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಕುರಿತು ಪ್ರಿಯಾಂಕ ಖರ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಕಳೆದ ಎರಡು ದಿನಗಳಿಂದ ನನ್ನ ಫೋನ್ ರಿಂಗನಿಸುವುದು ನಿಲ್ಲಿಸಿಲ್ಲ. ಸರ್ಕಾರಿ ಶಾಲೆಗಳು ಕಾಲೇಜುಗಳು ಮತ್ತು ಸಾರ್ವಜನಿಕ ಸಂಸ್ಥೆಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆ ಪ್ರಶ್ನಿಸಲು ಧೈರ್ಯ ಮಾಡಿದರಿಂದ ಬೆದರಿಕೆ ಕರೆಗಳು ಬರುತ್ತಿವೆ.ನನ್ನ ಮತ್ತು ನನ್ನ ಕುಟುಂಬಕ್ಕೆ ಬೆದರಿಕೆಗಳು ಹಾಗೂ ನಿಂದನೆ ಕರೆಗಳು ಬರುತ್ತಿದ್ದು, ಆದರೆ ನಾನು ಇದು ಯಾವುದಕ್ಕೂ ವಿಚಲಿತನಾಗುವುದಿಲ್ಲ. ಅಥವಾ ಆಶ್ಚರ್ಯ ಪಡುವುದಿಲ್ಲ ಆರ್ ಎಸ್ ಎಸ್ ಮಹಾತ್ಮ ಗಾಂಧಿ ಅಥವಾ ಅಂಬೇಡ್ಕರ್ ಅವರನ್ನೇ ಬಿಟ್ಟಿಲ್ಲ. ಇನ್ನು ಅವರು ನನ್ನನ್ನು ಏಕೆ ಬಿಡುತ್ತಾರೆ ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಸಮಾನತೆ ವಿವೇಚನೆ ಕರುಣೆಯಲ್ಲಿ ಬೇರೂರಿರುವ ಸಮಾಜ ಕಟ್ಟಬೇಕಿದೆ ಈ ದೇಶವನ್ನು ಅತ್ಯಂತ…














