Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯದಲ್ಲಿ ನಿನ್ನೆ ಕರಾಳ ರವಿವಾರವಾಗಿತ್ತು. ಹೌದು ರಾಜ್ಯದಲ್ಲಿ ನಿನ್ನೆ ಒಂದೇ ದಿನ ಪ್ರತ್ಯೇಕ ಘಟನೆಗಳಲ್ಲಿ ಒಟ್ಟು 12 ಜನರು ಸಾವನಪ್ಪಿದ್ದಾರೆ. ಬೆಂಗಳೂರು, ಚಿಕ್ಕಬಳ್ಳಾಪುರದಲ್ಲಿ, ಬೀದರ್ ಕೋಲಾರದಲ್ಲಿ ನಡೆದ ಪ್ರತ್ಯೇಕ ಅಪಘಾತಗಳಲ್ಲಿ 6 ಜನರು ಸಾವನ್ನಪ್ಪಿದ್ದಾರೆ. ಲಾರಿ ಹರಿದು ಗರ್ಭಿಣಿ ಸಾವು! ಸಿಮೆಂಟ್ ಮಿಕ್ಸರ್ ಲಾರಿ ಡಿಕ್ಕಿಯಿಂದ ಸ್ಕೂಟಿಯಲ್ಲಿ ತೆರಳುತ್ತಿದ್ದ ಗರ್ಭಿಣಿ ಸಾವನ್ನಪ್ಪಿರುವ ಘಟನೆ ಬಾಗಲೂರಿನ ಗುಂಡಪ್ಪ ಕ್ರಾಸ್ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರು ನಗರ ಜಿಲ್ಲೆಯ ಉತ್ತರ ತಾಲೂಕಿನ ಬಾಗಲೂರು ಗ್ರಾಮದಲ್ಲಿ ಅಪಘಾತ ನಡೆದಿದೆ. ಬೂದಿಗೆರೆಯ ವಿರಗ ನಗರ ನಿವಾಸಿ ಮಾನಸ ಮೃತ ಗರ್ಭಿಣಿ ಎಂದು ತಿಳಿದು ಬಂದಿದೆ. ಹಿಂಬದಿಯಿಂದ ಡಿಕ್ಕಿ ಹೊಡೆದು ಗರ್ಭಿಣಿ ಮೇಲೆ ಲಾರಿ ಹರಿದಿದ್ದರಿಂದ ಸ್ಥಳದಲ್ಲಿಯೇ ಸಾವನಪ್ಪಿದ್ದಾಳೆ. ಪೊಲೀಸರು ಸದ್ಯ ಸಿಮೆಂಟ್ ಮಿಕ್ಸರ್ ಲಾರಿ ಚಾಲಕನನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೀನು ಹಿಡಿಯಲು ಹೋಗಿ ಬಾಲಕ ಸೇರಿ ಇಬ್ಬರು ನೀರುಪಾಲು! ಕೃಷಿಹೊಂಡದಲ್ಲಿ ಮೀನು…
ಮೈಸೂರು : ಮೈಸೂರಿನಲ್ಲಿ ಭೀಕರವಾದ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ಕಕ್ಕೂ ಹೆಚ್ಚು ಗೋದಾಮುಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಮೈಸೂರು ಹೊರವಲಯದ ಕೆಸರೆ ಬಡಾವಣೆಯಲ್ಲಿ ಈ ಒಂದು ಭೀಕರ ಅಗ್ನಿ ಅವಘಡ ಸಂಭವಿಸಿದೆ. ಮೈಸೂರು ಬೆಂಗಳೂರು ಹೈವೇ ಬಳಿಯ ನಾಲ್ಕು ಗೋದಾಮುಗಳು ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದಿವೆ. ಹಳೆಯ ವಸ್ತುಗಳನ್ನು ಗೋದಾಮುಗಳಲ್ಲಿ ಸಂಗ್ರಹಿಸಿ ಇಡಲಾಗಿತ್ತು. ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಕುಡಿದ ಮತ್ತಿನಲ್ಲಿ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಬೆಂಕಿ ಶಂಕೆ ವ್ಯಕ್ತವಾಗಿದೆ. ಎನ್ ಆರ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಬೆಂಗಳೂರು : ಮೆಟ್ರೋ ದೊರ ಪರಿಷ್ಕರಣೆ ಸಂಬಂಧ ಇಂದು ಬಿಜೆಪಿಯ ಸಂಸದ ತೇಜಸ್ವಿ ಸೂರ್ಯ ಪ್ರತಿಭಟನೆಗೆ ಸಿದ್ಧತೆ ಮಾಡಿಕೊಂಡಿದ್ದರು ಆದರೆ ಬೆಂಗಳೂರಿನ ಜಯನಗರ ಠಾಣೆ ಪೊಲೀಸರು ತೇಜಸ್ವಿ ಸೂರ್ಯ ಅವರಿಗೆ ಪ್ರತಿಭಟನೆಗೆ ಅನುಮತಿ ನಿರಾಕರಿಸಿ ನೋಟಿಸ್ ನೀಡಿದ್ದಾರೆ. ಹೌದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಮೆಟ್ರೋ ದರ ಪರಿಷ್ಕರಣೆ ಸಂಬಂಧ ಇಂದು ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಸರ್ಕಾರದ ವಿರುದ್ಧ ಇಂದು ಪ್ರತಿಭಟನೆಗೆ ಮುಂದಾಗಿದ್ದರು. ಆರ್ ವಿ ಮೆಟ್ರೋ ನಿಲ್ದಾಣದ ಬಳಿ ಪ್ರತಿಭಟನೆಗೆ ತಯಾರಿ ಮಾಡಿಕೊಂಡಿದ್ದರು. ಶಾಸಕ ರಾಮಮೂರ್ತಿ ಜೊತೆಗೆ ಪ್ರತಿಭಟನೆಗೆ ಮುಂದಾಗಿದ್ದರು. ಹೈಕೋರ್ಟ್ ಆದೇಶದಂತೆ ಫ್ರೀಡಂ ಪಾರ್ಕ್ ಹೊರತುಪಡಿಸಿ ಬೆಂಗಳೂರಿನ ಬೇರೆ ಎಲ್ಲೂ ಮುಷ್ಕರ ನಡೆಸುವಂತಿಲ್ಲ ಮೆರವಣಿಗೆ ಮುಷ್ಕರಕ್ಕೆ ಅನುಮತಿ ನಿರಾಕರಿಸಿ ಬೆಂಗಳೂರಿನ ಜಯನಗರ ಠಾಣೆ ಪೊಲೀಸರು ತೇಜಸ್ವಿ ಸೂರ್ಯ ಅವರಿಗೆ ನೋಟಿಸ್ ನೀಡಿದ್ದಾರೆ.
BREAKING : ಇಂದಿನಿಂದ ಮೆಟ್ರೋ ಪ್ರಯಾಣದ ದರ ಏರಿಕೆ ಇಲ್ಲ : ಕೇಂದ್ರದ ಸೂಚನೆ ಬೆನ್ನಲ್ಲೆ, ದರ ಏರಿಕೆ ಕೈಬಿಟ್ಟ ‘BMRCL’
ಬೆಂಗಳೂರು : ಕಳೆದ ಕೆಲವು ದಿನಗಳಿಂದ ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣದ ದರ ಏರಿಕೆ ಕುರಿತಾಗಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಡುವೆ ತೀವ್ರ ಹಗ್ಗ ಜಗ್ಗಾಟ ನಡೆದಿತ್ತು. ಅಷ್ಟೇ ಅಲ್ಲದೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸಹ ಟಿಕೆಟ್ ದರ ಕಡಿಮೆ ಆಗಲಿದೆ ಎಂದು ಹೇಳಿಕೆ ನೀಡಿದರು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಾವು ಮೆಟ್ರೋ ಪ್ರಯಾಣದ ದರ ಏರಿಕೆ ಮಾಡಿಲ್ಲ ಕೇಂದ್ರದವರು ಮಾಡಿದ್ದಾರೆ ಎಂದು ಆರೋಪಿಸಿದ್ದರು. ಆದರೆ ಇದೀಗ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು ಕೇಂದ್ರ ಸರ್ಕಾರದ ಸೂಚನೆಯ ಮೇರೆಗೆ ಮೆಟ್ರೋ ಟಿಕೆಟ್ ಪ್ರಯಾಣದ ದರ ಏರಿಕೆಯನ್ನು ಬಿಎಂಆರ್ಸಿಎಲ್ ಕೈಬಿಟ್ಟಿದೆ. ಹಾಗಾಗಿ ಇಂದಿನಿಂದ ಮೆಟ್ರೋ ಟಿಕೆಟ್ ದರ ಏರಿಕೆ ಆಗೋದಿಲ್ಲ ಎಂದು ತಿಳಿದುಬಂದಿದೆ. ಈ ವಿಚಾರವಾಗಿ ಬಿಎಂಆರ್‌ಸಿಎಲ್ ಎಂಡಿ ರವಿಶಂಕರ್ ಅವರಿಗೆ ಕೇಂದ್ರ ಸರ್ಕಾರದಿಂದ ಇ-ಮೇಲ್ ಮೂಲಕ ಸೂಚನೆ ಬಂದಿದ್ದು, ನಾಳೆಯಿಂದ ಮೆಟ್ರೋ ಪ್ರಯಾಣದ ಟಿಕೆಟ್ ದರ ಏರಿಕೆ ಮಾಡಬೇಡಿ ಎಂದು ಇ-ಮೇಲ್ ಬಂದಿದೆ. ಹಾಗಾಗಿ…
ಬೆಂಗಳೂರು : ಭಾರತ & ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಒಪ್ಪಿಕೊಂಡು ಸ್ವಾಗತಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ಸಂಪೂರ್ಣ ಶರಣಾಗಿದ್ದಾರೆ. ಮುಂದಿನ ದಿನಗಳಲ್ಲಿ ಈ ಒಪ್ಪಂದ 140 ಕೋಟಿ ಭಾರತೀಯರಿಗೆ, ಅದರಲ್ಲಿಯೂ ಮುಖ್ಯವಾಗಿ ದೇಶದ 72 ಕೋಟಿ ರೈತರ ಪಾಲಿಗೆ ಮರಣಶಾಸನ ಆಗಲಿರುವುದು ಖಂಡಿತ ಎಂದು ಸಿಎಂ ಸಿದ್ದರಾಮಯ್ಯ ಮೋದಿ ವಿರುದ್ಧ ಕಿಡಿ ಕಾರಿದ್ದಾರೆ. ಟ್ವೀಟ್ ನಲ್ಲಿ ಈ ಕುರಿತು ಆಕ್ರೋಶ ಹೊರಹಾಕಿದ ಅವರು, ಎರಡು ದೇಶಗಳ ನಡುವಿನ ಸಂಬಂಧಗಳು ಸಮಾನತೆ ಮತ್ತು ಪರಸ್ಪರ ಗೌರವದ ಬುನಾದಿಯ ಮೇಲೆ ಸ್ಥಾಪನೆಯಾಗಬೇಕಾಗುತ್ತದೆ. ಅದು ಒತ್ತಡ, ಬೆದರಿಕೆ ಮತ್ತು ಏಕಪಕ್ಷೀಯ ನೀತಿ-ನಿರ್ಧಾರಗಳ ಹೇರಿಕೆಯಿಂದ ನಡೆಯಬಾರದು. ಆದರೆ ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದ ಕಾರ್ಯರೂಪಕ್ಕೆ ಬಂದಿರುವ ವಿಧಿ-ವಿಧಾನಗಳನ್ನು ಗಮನಿಸಿದರೆ ಇದು ಒಡೆಯನ ಅಜ್ಞೆಗೆ ಸೇವಕ ತಲೆಯಾಡಿಸಿದಂತಿದೆ. ರಷ್ಯಾದಿಂದ ತೈಲ ಖರೀದಿಸುತ್ತಿದ್ದ ಭಾರತವನ್ನು ಮಣಿಸುವ ಉದ್ದೇಶದಿಂದಲೇ ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಯರ್ರಾಬಿರ್ರಿಯಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್…
ಮುಂಬೈ : ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ್ ಸಾವರ್ಕರ್ ಅವರಿಗೆ ಭಾರತರತ್ನ ಕೊಟ್ಟರೆ ಪ್ರಶಸ್ತಿಯ ಘನತೆ ಹೆಚ್ಚುತ್ತದೆ. ಹಿಂದುತ್ವ ಸಿದ್ಧಾಂತವಾದಿ ಸಾವರ್ಕರ್ ಅವರಿಗೆ ಭಾರತರತ್ನ ಪ್ರಶಸ್ತಿ ಕೊಡಬೇಕು. ಅದರಿಂದಪ್ರಶಸ್ತಿಯಘನತೆ ಹೆಚ್ಚುತ್ತದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಅವರು ಹೇಳಿದ್ದಾರೆ. ನಿನ್ನೆ ಮುಂಬೈನಲ್ಲಿ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಆರ್‌ಎಸ್‌ಎಸ್‌ಗೆ ಅಚ್ಛೇ ದಿನ್ ಬಂದಿದೆಯೇ ಎಂದು ಸಭಿಕರೊಬ್ಬರು ಕೇಳಿದ ಪ್ರಶ್ನೆಗೆ, ಅದು ಇನ್ನೊಂದು ಮಾರ್ಗ. ಸಂಘವು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಬದ್ಧವಾಗಿತ್ತು. ಅದನ್ನು ಬೆಂಬಲಿಸಿದವರು ಪ್ರಯೋಜನ ಪಡೆದಿದ್ದಾರೆ ಎಂದು ತಿಳಿಸಿದರು. ಇಸ್ಲಾಂ ಅನ್ನು ಶಾಂತಿಯ ಧರ್ಮ ಎಂದು ಕರೆಯಲಾಗುತ್ತದೆ, ಆದರೆ ಶಾಂತಿ ಕಾಣುವುದಿಲ್ಲ. ಧರ್ಮದಲ್ಲಿ ಆಧ್ಯಾತ್ಮಿಕತೆ ಇಲ್ಲದಿದ್ದರೆ, ಅದು ದಬ್ಬಾಳಿಕೆ ಮತ್ತು ಆಕ್ರಮಣಕಾರಿಯಾಗುತ್ತದೆ. ಇಂದು ಕ್ರಿಶ್ಚಿಯನ್ ಮತ್ತು ಇಸ್ಲಾಂ ಧರ್ಮದಲ್ಲಿ ಏಸುಕ್ರಿಸ್ತ ಮತ್ತು ಪ್ರವಾದಿ ಮುಹಮ್ಮದ್ ಅವರ ಬೋಧನೆಗಳು ಕಂಡುಬರುತ್ತಿಲ್ಲ. ನಮಗೆ ನಿಜವಾದ ಇಸ್ಲಾಂ ಮತ್ತು ಕ್ರಿಶ್ಚಿಯನ್ ಧರ್ಮದ ಆಚರಣೆ ಬೇಕು ಎಂದು ಹೇಳಿದರು
ನವದೆಹಲಿ : ಪ್ರಧಾನಿ ಮೋದಿ ಮಲೇಷಿಯಾಗೆ ಭೇಟಿ ನೀಡಿದ್ದು, ಭಯೋತ್ಪಾದನೆ ನಿರ್ಮೂಲನೆಗೆ ಭಾರತ-ಮಲೇಷ್ಯಾ ಜಂಟಿಯಾಗಿ ಪಣತೊಟ್ಟಿವೆ. ಉಗ್ರರ ವಿರುದ್ದ ಶೂನ್ಯ ಸಹಿಷ್ಣುತೆ ನೀತಿ ಅನುಸರಿಸಲು, ಭಯೋತ್ಪಾದನೆ ವಿರುದ್ಧ ಹೋರಾಟಕ್ಕೆ ಸಹಕಾರ ಹೆಚ್ಚಿಸಲು ಹಾಗೂ ಸಂಘಟಿತ ಅಪರಾಧಗಳ ಬಗ್ಗೆ ಪರಸ್ಪರ ಮಾಹಿತಿ ವಿನಿಮಯಕ್ಕೆ ಉಭಯ ದೇಶಗಳು ಸಂಕಲ್ಪ ಮಾಡಿವೆ. ಎರಡು ದಿನಗಳ ಮಲೇಷ್ಯಾ ಪ್ರವಾಸ ಕೈಗೊಂಡ ಪ್ರಧಾನಿ ಮೋದಿ, ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತ ಎಂದಿಗೂ ರಾಜಿಯಾಗುವುದಿಲ್ಲ, ಮೂಲಭೂತವಾದ ಹತ್ತಿಕ್ಕುವ ವಿಷಯದಲ್ಲಿ ಎಂದಿಗೂ ಭಾರತ ದ್ವಿಮುಖ ನೀತಿ ಅನುಸರಿಸುವುದಿಲ್ಲ. ಮತೀಯ ಹಿಂಸಾಚಾರ ಹತ್ತಿಕಲು ಭಾರತಕ್ಕೆ ನೆರೆಯ ‘ಆಸಿಯಾನ್’ ದೇಶಗಳು ಬೆಂಬಲ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಮಲೇಷ್ಯಾ ಪ್ರವಾಸ ಮುಗಿಸಿ ಭಾನುವಾರ ರಾತ್ರಿ ಭಾರತಕ್ಕೆ ಮರಳಿದ ಮೋದಿ, ಇದಕ್ಕೂ ಮುನ್ನ ಅಲ್ಲಿನ ಪ್ರಧಾನಿ ಅನ್ವರ್ ಇಬ್ರಾಹಿಂ ಅವರೊಂದಿಗೆ ದ್ವಿಪಕ್ಷೀಯ ಬಾಂಧವ್ಯ ಸುಧಾರಣೆ ಸಂಬಂಧ ಚರ್ಚಿಸಿದರು. ಭಯೋತ್ಪಾದನೆ ವಿರುದ್ಧ ಹೋರಾಟಕ್ಕೆ ಪರಸ್ಪರ ಸಹಕಾರ ಹೆಚ್ಚಳವೂ ಇದರ ಭಾಗವಾಗಿದೆ. ಕೃಷಿ, ಉತ್ಪಾದನೆ,…
ಬೆಂಗಳೂರು : ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ. ಈಗಾಗಲೇ ನಾಳೆಯಿಂದ ನಮ್ಮ ಮೆಟ್ರೋ ಪ್ರಯಾಣದ ದರ ಶೇಕಡ 5 ರಷ್ಟು ಏರಿಕೆ ಆಗಲಿದೆ ಎಂದು ಬಿಎಂಆರ್‌ಸಿಎಲ್ ಎಂಡಿ ರವಿಶಂಕರ್ ಸ್ಪಷ್ಟನೆ ನೀಡಿದ್ದಾರೆ. ಇದರ ಬೆನ್ನಲೆ ರಾಜ್ಯದ ಜನತೆಗೆ ಜನತೆಗೆ ಇದೀಗ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರದಲ್ಲಿಯೇ ವಿದ್ಯುತ್ ಏರಿಕೆ ಆಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಹೌದು ರಾಜ್ಯದಲ್ಲಿ ವಿದ್ಯುತ್ ಬಿಲ್ ಏರಿಕೆ ಆಗುವ ಸಾಧ್ಯತೆ ಇದೆ ಎಸ್ಕಾಂಗಳ ನಷ್ಟ ಸರಿದೂಗಿಸಲು ದೊರೆ ಏರಿಕೆಗೆ ಚಿಂತನೆ ನಡೆಸಲಾಗುತ್ತಿದೆ. ಆದಾಯ ಕೊರತೆಯಿಂದ ಕರೆಂಟ್ ಬಿಲ್ ಹೆಚ್ಚಿಸಲು ಚಿಂತಿಸಲಾಗುತ್ತಿದೆ ವಿದ್ಯುತ್ ಸರಬರಾಜು ಕಂಪನಿಗಳು ನಷ್ಟದ ಹಳಿಯಲ್ಲಿವೆ. ಆದಾಯ ಸರಿದೂಗಿಸಲು ವಿದ್ಯುತ್ ದರ ಏರಿಕೆಗೆ ಬೆಸ್ಕಾಂ, ಎಸ್ಕಾಂ ಗಳು ಪಟ್ಟು ಹಿಡಿದಿವೆ. ಏಪ್ರಿಲ್ 1 ರಿಂದ ವಿದ್ಯುತ್ತರ ಏರಿಕೆ ಆಗುವ ಸಾಧ್ಯತೆ ಇದೆ. ವಿದ್ಯುತ್ ದರ ಏರಿಕೆಗೆ ಕೆ ಇ ಆರ್ ಸಿ ಅಸ್ತು ಎನ್ನುತ್ತಾ ಎಂದು ಕಾಡುನೋಡ್ಬೇಕಾಗಿದೆ. ಬೆಸ್ಕಾಂ ಸೇರಿ ಎಸ್ಕಾಂಗಳಿಂದ ಕೆಇಆರ್‌ಸಿಗೆ…
ಹುಬ್ಬಳ್ಳಿ : ನಾಯಕತ್ವ ಬದಲಾವಣೆ ಕುರಿತು ಒಂದೆಡೆ ನಮ್ಮ ತಂದೆಯೇ 5 ವರ್ಷ ಸಿಎಂ ಎಂದು ಯತೀಂದ್ರ ಹೇಳುತ್ತಿದ್ದರೆ, ಮತ್ತೊಂದು ಕಡೆ ಯತೀಂದ್ರನೇ ನಮ್ಮ ಹೈಕಮಾಂಡ್ ಎಂದು ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ. ಇದರ ಮಧ್ಯ ರಾಜ್ಯದ ಬಜೆಟ್ ಮಂಡನೆಯ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗುವ ಸಂಭವವಿದ್ದು, ಈ ಕುರಿತು ಶೀಘ್ರದಲ್ಲಿಯೇ ವರಿಷ್ಠರು ನಿರ್ಣಯ ಕೈಗೊಳ್ಳಲಿದ್ದಾರೆ ಎಂದು ವಿಧಾನ ಪರಿಷತ್‌ನ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಸಚಿವ ಸಂಪುಟ ಪುನಾರಚನೆ ಕುರಿತು ಪಕ್ಷದ ಹೈಕಮಾಂಡ್ ಚಿಂತನೆ ನಡೆಸಿದೆ. ಶೇ.50ರಷ್ಟು ಸಚಿವರನ್ನು ಪಕ್ಷ ಸಂಘಟನೆಗೆ ಬಳಸಿಕೊಳ್ಳಬೇಕು. ಆ ಸ್ಥಾನಗಳನ್ನು ಹೊಸಬರಿಗೆ ನೀಡುವಂತೆ ಪಕ್ಷದ ವರಿಷ್ಠರಿಗೆ ಮನವಿ ಮಾಡಲಾಗಿದೆ. ನಮ್ಮ ಮನವಿಗೆ ಸ್ಪಂದನೆ ದೊರೆಯುವ ವಿಶ್ವಾಸವಿದೆ. ನಾನು ಸಹ ಸಚಿವ ಸ್ಥಾನದ ಆಕಾಂಕ್ಷಿಯಾಗಿ ದ್ದೇನೆ. ಕಳೆದ 22 ವರ್ಷದಿಂದ ಕಿತ್ತೂರ ಕರ್ನಾಟಕ ಭಾಗದಲ್ಲಿ ಅಲ್ಪಸಂಖ್ಯಾತರಿಗೆ ಸಚಿವ ಸ್ಥಾನ ದೊರೆತಿಲ್ಲ. ಈ ಬಾರಿ ಸಚಿವ ಸ್ಥಾನದ…
ಕೋಲಾರ : ಬೊಲೆರೋ ವಾಹನ ಪಲ್ಟಿಯಾಗಿ ಮೂವರು ಕಾರ್ಮಿಕರು ಸಾವನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಆಂಧ್ರಪ್ರದೇಶದ ಮುನಿಯಮ್ಮ ವೆಂಕಟಪ್ಪ ಸೇರಿ ಮೂವರು ಸಾವನಪ್ಪಿದ್ದಾರೆ. ಅಪಘಾತದಲ್ಲಿ ಸುಮಾರು 10ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು ಹತ್ತಿರ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಆಂಧ್ರಪ್ರದೇಶದ ಮದನಪಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಲಿ ಕೆಲಸ ಮುಗಿಸಿಕೊಂಡು ಹೋಗುವಾಗ ಈ ಒಂದು ದುರಂತ ಸಂಭವಿಸಿದೆ ಅಪಘಾತದ ಕುರಿತು ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ














