Author: kannadanewsnow05

ಕೋಲಾರ : ಶಾಲೆಗೆ ಯಾಕೆ ಬಂದಿಲ್ಲ ಎಂದು ಶಿಕ್ಷಕಿಯೋರ್ವಳು ವಿದ್ಯಾರ್ಥಿಗೆ ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಶಾಲೆಗೆ ಬಂದು ವಿದ್ಯಾರ್ಥಿಯ ತಂದೆ ಗೂಂಡಾ ವರ್ತನೆ ತೋರಿದ್ದು, ಶಾಲೆಗೆ ನುಗ್ಗಿ ಶಿಕ್ಷಕಿಯ ಮೇಲೆ ವಿದ್ಯಾರ್ಥಿಯ ತಂದೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಕ್ಷೇತ್ರನಹಳ್ಳಿ ಗ್ರಾಮದಲ್ಲಿ ಈ ಒಂದು ಘಟನೆ ಸಂಭವಿಸಿದೆ. ಹೌದು ಸರ್ಕಾರಿ ಶಿಕ್ಷಕಿ ಮಂಜುಳಾ ಮೇಲೆ ವಿದ್ಯಾರ್ಥಿಯ ತಂದೆ ಚೌಡಪ್ಪ ಎನ್ನುವ ವ್ಯಕ್ತಿ ದಾಳಿ ಮಾಡಿದ್ದಾನೆ ಎರಡು ದಿನಗಳ ಕಾಲ ಚರಣ ಯಾರಿಗೆ ಬಾರದಿದ್ದಕ್ಕೆ ಶಿಕ್ಷಕಿ ವಿದ್ಯಾರ್ಥಿಗೆ ಪ್ರಶ್ನಿಸಿದ್ದಾಳೆ ಶಾಲೆಗೆ ಆಗಮಿಸಿ ಚರಣ್ ತಂದೆ ಚೌಡಪ್ಪ ಶಿಕ್ಷಕಿ ಮಂಜುಳಾ ಮೇಲೆ ದಾಳಿ ಮಾಡಿದ್ದಾನೆ. ಶಕ್ತಿ ಮಂಜುಳಾ ತಲೆಗೆ ಬಾಗಿಲು ಬಡಿದು ಹಲ್ಲೆ ಸರ್ಕಾರಿ ಶಿಕ್ಷಕಿ ಮಂಜುಳಗೆ ಗಂಭೀರವಾದಿ ಗಾಯಗಳಾಗಿದ್ದು ಸದ್ಯ ಆಸ್ಪತ್ರೆಗೆ ಗಾಯಗಳಾಗಿವೆ.

Read More

ಮೈಸೂರು : ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆ ಜಂಬೂ ಸವಾರಿ. ಜಂಬೂ ಸವಾರಿಯ ದಿನ ಚಿನ್ನದ ಅಂಬಾರಿಗೆ ಪುಷ್ಪಾರ್ಚನೆ ಮಾಡಿ ರಾಷ್ಟ್ರಗೀತೆ ನುಡಿಸುವಾಗ ಸಾಂಪ್ರದಾಯಿಕ ಕುಶಾಲತೋಪುಗಳನ್ನು ಸಿಡಿಸಿ ಗೌರವ ಸಮರ್ಪಣೆ ಮಾಡುವುದು ಸಂಪ್ರದಾಯ. ಇಂತಹ ಕುಶಾಲತೋಪು ಸಿಡಿಸುವ ಕಾರ್ಯಕ್ರಮಕ್ಕೆ ಅರಮನೆಯ ಆನೆ ಬಾಗಿಲಿನಲ್ಲಿ ಫಿರಂಗಿ ಒಣ ತಾಲೀಮಿನ ಅಭ್ಯಾಸ ನಡೆಸಲಾಗುತ್ತಿದೆ. ವಿಶ್ವವಿಖ್ಯಾತ ಜಂಬೂ ಸವಾರಿ ದಿನ ಅರಮನೆಯ ಹೊರಭಾಗದಲ್ಲಿ ಚಾಮುಂಡಿ ತಾಯಿ ಚಿನ್ನದ ಅಂಬಾರಿಯಲ್ಲಿ ಆನೆ ಮೇಲೆ ಆಸೀನಳಾಗಿ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡುವ ಸಂದರ್ಭದಲ್ಲಿ ಪುಷ್ಪಾರ್ಚನೆ ಮಾಡಿದ ತಕ್ಷಣ ಪೊಲೀಸ್ ಬ್ಯಾಂಡ್​ನಿಂದ ರಾಷ್ಟ್ರಗೀತೆ ನುಡಿಸುತ್ತಾರೆ. ಆ ಸಂದರ್ಭದಲ್ಲಿ ರಾಷ್ಟ್ರಗೀತೆ ನುಡಿಸುವಾಗ 52 ಸೆಕೆಂಡ್​ಗಳಲ್ಲಿ 21 ಸುತ್ತು ಕುಶಾಲತೋಪುಗಳನ್ನು 7 ಫಿರಂಗಿಗಳಿಂದ ಹಾರಿಸಲಾಗುತ್ತದೆ. ನಗರದ ಸಶಸ್ತ್ರ ಪಡೆಯ 31 ನುರಿತ ಸಿಬ್ಬಂದಿ ಕುಶಾಲತೋಪು ಸಿಡಿಸುವ ತಾಲೀಮಿಗೆ ಅಭ್ಯಾಸ ನಡೆಸುವುದೇ ಒಣ ತಾಲೀಮು. ಅರಮನೆಯ ಮುಂಭಾಗದ ಆನೆ ಬಾಗಿಲಿನಲ್ಲಿ ಫಿರಂಗಿಗಳ ಕುಶಾಲತೋಪು ತಾಲೀಮನ್ನು ಪ್ರತಿನಿತ್ಯ ನಡೆಸುತ್ತಾರೆ. ಬಳಿಕ ಗಜಪಡೆಗೆ 3 ಸುತ್ತು…

Read More

ರಾಯಚೂರು : ರಾಜ್ಯದ ಹಲವು ಜಿಲ್ಲೆಯಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾದ ರೀತಿ ಮೂಲಭೂತ ಸೌಕರ್ಯಗಳು ಇಲ್ಲ. ಸರಿಯಾದ ವೈದ್ಯರು ಹಾಗೂ ಸಿಬ್ಬಂದಿ ಕೊರತೆ ಜೊತೆಗೆ ನೀರು ಹಾಗೂ ವಿದ್ಯುತ್ ನಂತಹ ಮೂಲಭೂತ ಸೌಕರ್ಯಗಳೇ ಇಲ್ಲ. ಇದಕ್ಕೆ ಪೂರಕವೆಂಬಂತೆ ಜನರೇಟರ್ ಕೆಟ್ಟಿದ್ದರಿಂದ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಮಹಿಳೆಗೆ ಹೆರಿಗೆ ಮಾಡಿಸಿರುವ ಘಟನೆ ರಾಯಚೂರಿನಲ್ಲಿ ಬೆಳಕಿಗೆ ಬಂದಿದೆ. ಹೌದು ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಘಟನೆ ನಡೆದಿದೆ. ಆಸ್ಪತ್ರೆಯ ಸೌರ ಘಟಕಗಳು, ಜನರೇಟರ್ ಕೆಟ್ಟು ಹೋಗಿದ್ದರಿಂದ ರಾತ್ರಿ ವೇಳೆ ರೋಗಿಗಳಿಗೆ ಮೊಂಬತ್ತಿ ಹಾಗೂ ಮೊಬೈಲ್ ಟಾರ್ಚ್ ಮೂಲಕವೇ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತೀಚೆಗೆ ಟ್ಟಿ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಹಾಗೂ ಸಿಬ್ಬಂದಿ, ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಗರ್ಭಿಣಿ ಮಹಿಳೆಯೊಬ್ಬರಿಗೆ ಹೆರಿಗೆ ಮಾಡಿಸಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಈಗ ಜನರು ನೆಮ್ಮದಿಯಿಂದ ಬದುಕುತ್ತಿದ್ದಾರೆ ಹೀಗಾಗಿ ಬಿಜೆಪಿಯವರು ಕರಾವಳಿ ಭಾಗದಿಂದ ಮೈಸೂರು ಭಾಗದ ಕಡೆಗೆ ಬಂದಿದ್ದಾರೆ. ಬಿಜೆಪಿಯವರು ಅವರ ಮಕ್ಕಳನ್ನು ಮುಂದೆ ಬಿಟ್ಟು ಹೋರಾಟ ಮಾಡಲಿ ಬೇರೆಯವರ ಮಕ್ಕಳನ್ನು ಬಾವಿಗೆ ತಳ್ಳಿ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಕಾಂಗ್ರೆಸ್ MLC ಬಿಕೆ ಹರಿಪ್ರಸಾದ ಹೇಳಿಕೆ ನೀಡಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಧರ್ಮಾಧಾರಿತ ರಾಜಕಾರಣ ಮಾಡುತ್ತಿದ್ದಾರೆ. ಕರಾವಳಿ ಭಾಗದಲ್ಲಿ ಬಿಜೆಪಿಯವರು ನಿರುದ್ಯೋಗಿಗಳಾಗಿದ್ದಾರೆ ಹೀಗಾಗಿ ಮೈಸೂರು ಭಾಗಕ್ಕೆ ಬಂದಿದ್ದಾರೆ. ಹಣಕೊಟ್ಟು ಹೋರಾಟಕ್ಕೆ ಕರೆಸಿದ್ದಾರೆ ಎಂದು ಮಹಿಳೆಯೊಬ್ಬರು ಹೇಳಿದ್ದಾರೆ. ಶೂದ್ರರೂ ಹಾಗೂ ಹಿಂದುಳಿದವರನ್ನು ಹೋರಾಟಕ್ಕೆ ಮುಂದೆ ಬಿಡುತ್ತಾರೆ. ಹಣ & ಹೆಂಡ ಕೊಟ್ಟು ಧರ್ಮ ಕಾಪಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಬಿಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದರು.

Read More

ಬೆಳಗಾವಿ : ವಸತಿ ಶಾಲೆಯಲ್ಲಿ ಉಪಹಾರ ಸೇವಿಸಿದ 30ಕ್ಕೂ ಹೆಚ್ಚು ಜನರು ಅಸ್ವಸ್ಥ ಆಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಹಿರೇಕೋಡಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದ್ದು, ಸದ್ಯ ಇಬ್ಬರು ವಿದ್ಯಾರ್ಥಿಗಳಿಗೆ ICU ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಸತಿ ಶಾಲೆಯಲ್ಲಿ ಬೆಳಗ್ಗೆ ವಿದ್ಯಾರ್ಥಿಗಳು ಉಪ್ಪಿಟ್ಟು ಸೇವಿಸಿದ್ದಾರೆ. 400ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ 6ನೇ ತರಗತಿಯಿಂದ ಪಿಯುಸಿವರೆಗೆ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಉಪ್ಪಿಟ್ಟು ಸೇವನೆ ನಂತರ ಹಲವು ಮಕ್ಕಳಿಗೆ ಹೊಟ್ಟೆ ನೋವು, ವಾಂತಿ, ಭೇದಿ ಆಗಿದ್ದು ಅಸ್ವಸ್ಥರನ್ನು ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Read More

ಬೆಂಗಳೂರು : ಸೆಪ್ಟೆಂಬರ್ 22 ರಿಂದ ರಾಜ್ಯ ಸರ್ಕಾರ ಹೊಸ ಜಾತಿ ಗಣತಿ ನಡೆಸುವ ವಿಚಾರವಾಗಿ ಇಂದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ 1ಲಕ್ಷ 75 ಶಿಕ್ಷಕರನ್ನು ನೇಮಕ ಮಾಡಿದ್ದು ಅವರಿಗೆ ವೇತನ ಸಹ ನೀಡಲಾಗುತ್ತೆ ಎಂದು ಬೆಂಗಳೂರಿನ ಗೃಹಕಚೇರಿ ಕೃಷ್ಣ ದಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು. ಕಾಂತರಾಜು ವರದಿಯನ್ನು ನಾವು ಒಪ್ಪಿಕೊಂಡಿಲ್ಲ. ಬಳಿಕ ಜಯಪ್ರಕಾಶ್ ಹೆಗಡೆ ಹಿಂದುಳಿದ ಆಯೋಗದ ಅಧ್ಯಕ್ಷರಾದರು. 2015 ರಲ್ಲಿ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಆಗಿತ್ತು. 10 ವರ್ಷ ಆಗಿದೆ ಅಂತ ಹೊಸ ಸಮೀಕ್ಷೆಗೆ ತೀರ್ಮಾನ ಆಗಿದೆ. ಸಮೀಕ್ಷೆ ಜವಾಬ್ದಾರಿ ಹಿಂದುಳಿದ ಆಯೋಗಕ್ಕೆ ವಹಿಸಿದ್ದೇನೆ. ಜಾತಿ, ಧರ್ಮ ಹಾಗೂ ಸಾಮಾಜಿಕ ಪರಿಸ್ಥಿತಿಯ ಬಗ್ಗೆ ಗೊತ್ತಾಗಬೇಕು. ಅವರ ಹಿನ್ನೆಲೆ ಗೊತ್ತಾದಾಗ ವಿಶೇಷ ಕಾರ್ಯಕ್ರಮ ರೂಪಿಸಬಹುದು ಹಿಂದೆ ಕಾಂತರಾಜು ಅಧ್ಯಕ್ಷತೆಯಲ್ಲಿ ಸಮೀಕ್ಷೆ ಮಾಡಲು ಸೂಚಿಸಿದ್ದೆ ಆ ವರದಿ ಹಳೆಯದು ಅಂತ ಪರಿಗಣನೆ ಮಾಡಲಿಲ್ಲ. ಈಗ ಹೊಸದಾಗಿ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಸೂಚಿಸಿದ್ದೇನೆ. 7 ಕೋಟಿ ಜನರ ಸಾಮಾಜಿಕ…

Read More

ಬೆಂಗಳೂರು : ಸೆಪ್ಟೆಂಬರ್ 22 ರಿಂದ ರಾಜ್ಯ ಸರ್ಕಾರ ಹೊಸ ಜಾತಿ ಗಣತಿ ನಡೆಸುವ ವಿಚಾರವಾಗಿ ಇಂದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಕಾಂತರಾಜು ವರದಿಯನ್ನು ನಾವು ಒಪ್ಪಿಕೊಂಡಿಲ್ಲ ಎಂದು ಬೆಂಗಳೂರಿನ ಗೃಹಕಚೇರಿ ಕೃಷ್ಣ ದಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು. ಕಾಂತರಾಜು ವರದಿಯನ್ನು ನಾವು ಒಪ್ಪಿಕೊಂಡಿಲ್ಲ. ಬಳಿಕ ಜಯಪ್ರಕಾಶ್ ಹೆಗಡೆ ಹಿಂದುಳಿದ ಆಯೋಗದ ಅಧ್ಯಕ್ಷರಾದರು. 2015 ರಲ್ಲಿ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಆಗಿತ್ತು. 10 ವರ್ಷ ಆಗಿದೆ ಅಂತ ಹೊಸ ಸಮೀಕ್ಷೆಗೆ ತೀರ್ಮಾನ ಆಗಿದೆ. ಸಮೀಕ್ಷೆ ಜವಾಬ್ದಾರಿ ಹಿಂದುಳಿದ ಆಯೋಗಕ್ಕೆ ವಹಿಸಿದ್ದೇನೆ. ಜಾತಿ, ಧರ್ಮ ಹಾಗೂ ಸಾಮಾಜಿಕ ಪರಿಸ್ಥಿತಿಯ ಬಗ್ಗೆ ಗೊತ್ತಾಗಬೇಕು. ಅವರ ಹಿನ್ನೆಲೆ ಗೊತ್ತಾದಾಗ ವಿಶೇಷ ಕಾರ್ಯಕ್ರಮ ರೂಪಿಸಬಹುದು ಹಿಂದೆ ಕಾಂತರಾಜು ಅಧ್ಯಕ್ಷತೆಯಲ್ಲಿ ಸಮೀಕ್ಷೆ ಮಾಡಲು ಸೂಚಿಸಿದ್ದೆ ಆ ವರದಿ ಹಳೆಯದು ಅಂತ ಪರಿಗಣನೆ ಮಾಡಲಿಲ್ಲ. ಈಗ ಹೊಸದಾಗಿ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಸೂಚಿಸಿದ್ದೇನೆ. 7 ಕೋಟಿ ಜನರ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.…

Read More

ಬೆಂಗಳೂರು : ಬೆಂಗಳೂರಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನಿವಾಸದ ಬಳಿ ಕಾರೊಂದು ಹೊತ್ತಿ ಉರಿದಿರುವ ಘಟನೆ ವರದಿಯಾಗಿದೆ. ಬೆಂಗಳೂರಿನ ಕಾವೇರಿ ನಿವಾಸದ ಪಕ್ಕ ಪಾರ್ಕಿಂಗ್ ಮಾಡಿದ್ದ ಕಾರು ಏಕಾಏಕಿ ಹೊತ್ತಿ ಉರಿದಿದೆ. ಕಾವೇರಿ ನಿವಾಸಿದ ಸುತ್ತಲೂ ದಟ್ಟ ಹೋಗಿ ಆವರಿಸಿದೆ ಬೆಂಕಿ ನಲ್ಲಿ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಸಿಎಂ ನಿವಾಸದ ಸುತ್ತ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದೆ ಸದಾಶಿವನಗರದಿಂದ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದ ನಡುವಿನ ರಸ್ತೆ ಕ್ಯಾಲೆಶ್ ಗುಟ್ಟಹಳ್ಳಿ ಕಡೆಗೂ ಟ್ರಾಫಿಕ್ ಜಾಮ್ ಉಂಟಾಗಿದೆ.

Read More

ಬೆಂಗಳೂರು : ನೇಪಾಳದಲ್ಲಿ ಸಿಲುಕಿದ ಕನ್ನಡಿಗರು ತಾಯ್ನಾಡಿಗೆ ಸುರಕ್ಷಿತವಾಗಿ ವಾಪಸ್ ಆಗಿದ್ದಾರೆ. ಸುಮಾರು 39ಕ್ಕೂ ಹೆಚ್ಚು ಕನ್ನಡಿಗರು ಸುರಕ್ಷಿತವಾಗಿ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ನಿನ್ನೆ ರಾತ್ರಿ 7:30ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 39 ಕನ್ನಡಿಗರು ಸುರಕ್ಷಿತವಾಗಿ ಬಂದಿಳಿದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ನೇಪಾಳದಿಂದ ದೆಹಲಿ ದೆಹಲಿಯಿಂದ ಬೆಂಗಳೂರಿಗೆ ಕನ್ನಡಿಗರು ಬಂದು ಇಳಿದಿದ್ದಾರೆ. ಇಶಾ ಫೌಂಡೇಶನ್ ಜೊತೆಗೆ ತೆರಳಿದ್ದ ಪ್ರಯಾಣಿಕರು ಸೇರಿದಂತೆ ಎಲ್ಲರೂ ಸುರಕ್ಷಿತವಾಗಿ ಮರಳಿದ್ದಾರೆ ಎಂದು ತಿಳಿದುಬಂದಿದೆ.

Read More

ಉಡುಪಿ : ಉಡುಪಿಯಲ್ಲಿ ಘೋರ ಕೃತ್ಯ ನಡೆದಿದ್ದು, ಹುಟ್ಟುಹಬ್ಬದ ದಿನವೇ ಯುವತಿಗೆ ಚಾಕು ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮವರ ತಾಲೂಕಿನ ಕೊಕರ್ಣಿಯಲ್ಲಿ ನಡೆದಿದೆ. ಚಾಕು ಇರಿತಕ್ಕೆ ಒಳಗಾದ ಯುವತಿಯನ್ನು ರಕ್ಷಿತಾ ಪೂಜಾರಿ (25) ಎಂದು ತಿಳಿದುಬಂದಿದೆ. ಪಕ್ಕದ ಮನೆಯ ನಿವಾಸಿ ಕಾರ್ತಿಕ್ ಎಂಬ ಯುವಕ ಚಾಕು ಇರಿದು ಪರಾರಿಯಾಗಿದ್ದಾನೆ.ಗಾಯಗೊಂಡ ರಕ್ಷಿತಾಳನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮದುವೆಗೆ ಆಕ್ಷೇಪ ಬಂದ ಕಾರಣ ರಕ್ಷಿತಾ ಕಾರ್ತಿಕ್ ನಂಬರ್ ಬ್ಲಾಕ್ ಮಾಡಿದ್ದಳು. ಈ ಕಾರಣಕ್ಕೆ ಚಾಕು ಇರಿದು ಆರೋಪಿ ಕಾರ್ತಿಕ್ ಪರಾರಿಯಾಗಿದ್ದಾನೆ. ಬ್ರಹ್ಮವರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More