Subscribe to Updates
Get the latest creative news from FooBar about art, design and business.
Author: kannadanewsnow05
ದಕ್ಷಿಣಕನ್ನಡ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಪ್ರಕರಣದ ತನಿಖೆಗೆ ಮಹೇಶ್ ಶೆಟ್ಟಿ ತಿಮರೋಡಿ ದೂರು ನೀಡಿದ್ದಾರೆ. ಎಸ್ಐಟಿಗೆ ಮಹೇಶ್ ಶೆಟ್ಟಿ ತಿಮರೋಡಿ ದೂರು ನೀಡಿದ್ದಾರೆ. ಧರ್ಮಸ್ಥಳದಲ್ಲಿ ನಡೆದ ಅಸಹಜ ಸಾವುಗಳನ್ನು ಕೊಲೆ ಎಂದು ಪರಿಗಣಿಸಿ fir ದಾಖಲಿಸಿಕೊಳ್ಳಿ ಎಂದು ತಿಮರೋಡಿ ದೂರು ನೀಡಿದ್ದಾರೆ. ಬೆಳ್ತಂಗಡಿಯ ಎಸ್ಐಡಿ ಠಾಣೆಗೆ ತಿಮ್ಮರೋಡಿ ದೂರು ನೀಡಿದ್ದಾರೆ ಮೂಡಿಸಿದೆ. 2006 2010ರ ವರೆಗೆ ಸಂಶಯ ಆಶೀರ್ವಾದ ಸಾವು ಆಗಿದೆ ಧರ್ಮಸ್ಥಳದ ವಸತಿ ಗ್ರಹಗಳಲ್ಲಿ ಸಂಶಯಸ್ಪದ ಸಾವುಗಳಾಗಿವೆ. ಅನೇಕ ಸಂಶಯ ಸಾವು ಆಗಿದೆ ಎಂದು ಹೊರಡಿದೂರು ನೀಡಿದ್ದಾರೆ ಧರ್ಮಸ್ಥಳದ ಗಾಯತ್ರಿ ಶರಾವತಿ ವೈಶಾಲಿ ವಸತಿಗೃಹ ಸಂಶಯ ಆಸ್ಪದ ಸಾವುಗಳು ಆಗಿದೆ. ಬುರುಡೆ ಕೇಸ್ ಎಲ್ಲಾ ಆಯಾಮದಲ್ಲೂ ಎಸ್ಐಟಿ ಇದೀಗ ತನಿಖೆ ಮಾಡುತ್ತಿದೆ. ಬುರುಡೆ ಕೇಸಿನ ಜೊತೆಗೆ ಹಿಂದಿನ ಕೇಸ್ ಗಳ ಬಗ್ಗೆಯೂ ಎಸ್ಐಟಿ ತನಿಖೆ ನಡೆಸುತ್ತಿದ್ದು ಧರ್ಮಸ್ಥಳ ಗ್ರಾಮ್ ಪಂಚಾಯಿತಿ ವ್ಯಾಪ್ತಿಯಲ್ಲಿನ ಶವಗಳ ದಫನ್ ಬಗ್ಗೆ ಹೇಳಲಾಗಿದೆ ಈ ಬಗ್ಗೆ ಆರೋಪ ಕೇಳಿಬಂದಿದ್ದು…
ಬೆಂಗಳೂರು: ಬೇಲೆಕೇರಿ ಅದಿರು ಅಕ್ರಮವಾಗಿ ವಿದೇಶಕ್ಕೆೆ ಸಾಗಾಟ ಮಾಡಿದ ಆರೋಪ ಪ್ರಕರಣದಲ್ಲಿ ಬಂಧಿತರಾಗಿರುವ ಕಾರವಾರ-ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅನಾರೋಗ್ಯ ಹಿನ್ನೆಲೆಯಲ್ಲಿ 7 ದಿನಗಳ ಮಧ್ಯಂತರ ಜಾಮೀನು ನೀಡಿ, ಗುರುವಾರ ಆದೇಶ ಹೊರಡಿಸಿದೆ. ಸತೀಶ್ ಸೈಲ್ ಅವರನ್ನು ಬಂಧಿಸಿದ್ದ ಜಾರಿ ನಿರ್ದೇಶನಾಲಯ (ಇ.ಡಿ.)ದ ಅಧಿಕಾರಿಗಳು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆೆ ಬುಧವಾರ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಆರೋಪಿ ಸೈಲ್ ಅವರನ್ನು ಸೆಪ್ಟೆಂಬರ್ 12ರ ವರೆಗೆ ಇ.ಡಿ ವಶಕ್ಕೆ ನೀಡಿ ಆದೇಶಿಸಿದ್ದರು. ಪ್ರಕರಣ ಹಿನ್ನೆಲೆ? ಉತ್ತರ ಕನ್ನಡ ಜಿಲ್ಲೆಯ ಬೇಲೇಕೇರಿ ಬಂದರಿನಲ್ಲಿ ವಶಕ್ಕೆ ಪಡೆದು ಸಂಗ್ರಹಿಸಲಾಗಿದ್ದ ಸಾವಿರಾರು ಟನ್‌ಗಳಷ್ಟು ಕಬ್ಬಿಣದ ಅದಿರನ್ನು ಅಕ್ರಮವಾಗಿ ಸಾಗಣೆ ಮಾಡಿದ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್‌ಗೆ ಈ ಹಿಂದೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏಳು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿತ್ತು. ಈ ತೀರ್ಪು ಪ್ರಶ್ನಿಸಿ ಸತೀಶ್ ಸೈಲ್ ಮತ್ತಿತರರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ…
ಅಶ್ವಿನಿ ದೇವತೆಗಳು ಹಿಂದೂ ಪುರಾಣದ ದೈವಿಕ ಅವಳಿ ವೈದ್ಯರು. ಇವರು ಸೂರ್ಯದೇವನ ಮತ್ತು ಸಂಜ್ಞಾದೇವಿಯ ಮಕ್ಕಳಾಗಿದ್ದು, ಮಹಾಭಾರತದ ನಕುಲ ಹಾಗೂ ಸಹದೇವರು ಇವರ ವರಪ್ರಸಾದದಿಂದ ಜನಿಸಿದ್ದಾರೆ. ಚ್ಯವನ ಮುನಿಯ ಆಯುಷ್ಯವನ್ನು ಪುನರುಜ್ಜೀವನಗೊಳಿಸಿದ ಕೀರ್ತಿ ಇವರಿಗಿದೆ. ದೇವತೆಗಳ ವೈದ್ಯರೆಂದೂ ಕರೆಯಲ್ಪಡುವ ಇವರು penyakitಗಳನ್ನು ವಾಸಿಮಾಡುವ ಮತ್ತು ಆರೋಗ್ಯವನ್ನು ನೀಡುವ ಶಕ್ತಿಯನ್ನು ಹೊಂದಿದ್ದಾರೆ ಎಂದು ನಂಬಲಾಗಿದೆ. ಅಶ್ವಿನಿ ದೇವತೆಗಳ ಬಗ್ಗೆ ಪ್ರಮುಖ ಅಂಶಗಳು ದೈವಿಕ ವೈದ್ಯರು: ಇವರು ದೇವತೆಗಳ ವೈದ್ಯರೆಂದು ಪರಿಗಣಿಸಲ್ಪಟ್ಟಿದ್ದಾರೆ ಮತ್ತು ಆಯುರ್ವೇದದ ಮೂಲವೆಂದು ಗುರುತಿಸಲ್ಪಡುತ್ತಾರೆ. ಸೂರ್ಯನ ಮಕ್ಕಳಾಗಿ: ಸೂರ್ಯನ ಹೆಂಡತಿ ಸಂಜ್ಞಾದೇವಿಯು ಕುದುರೆಯ ರೂಪದಲ್ಲಿದ್ದಾಗ ಸೂರ್ಯನಿಂದ ಜನಿಸಿದ ಅವಳಿ ಮಕ್ಕಳಾಗಿ ಇವರನ್ನು ವರ್ಣಿಸಲಾಗಿದೆ. ಆದ್ದರಿಂದ ಇವರಿಗೆ ಅಶ್ವಿನಿ ಕುಮಾರರೆಂಬ ಹೆಸರಿದೆ. ಮಹಾಭಾರತದ ನಂಟಿನ ಸಂಬಂಧ: ಪಾಂಡು ಮಹಾರಾಜನ ಎರಡನೆಯ ಹೆಂಡತಿಯಾದ ಮಾದ್ರಿಯಲ್ಲಿ ನಕುಲ ಮತ್ತು ಸಹದೇವರು ಈ ಅಶ್ವಿನಿ ದೇವತೆಗಳ ವರಪ್ರಸಾದದಿಂದ ಜನಿಸಿದರೆಂದು ಹೇಳಲಾಗುತ್ತದೆ. ಚ್ಯವನರಕ್ಷಕ: ವೃದ್ಧರಾಗಿದ್ದ ಚ್ಯವನ ಮುನಿಗಳಿಗೆ ಯೌವನ ಮತ್ತು ಸೌಂದರ್ಯವನ್ನು ಪುನರ್ಸ್ಥಾಪಿಸಿದ ಶ್ರೇಯಸ್ಸು ಇವರಿಗೆ ಸಲ್ಲುತ್ತದೆ. “ಅಸ್ತು”…
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಶಾಕಿಂಗ್ ಘಟನೆ ನಡೆದಿದ್ದು, ಕರೆಂಟ್ ಶಾಕ್ನಿಂದ ಜೀವ ಕಳೆದುಕೊಂಡಿದ್ದ ಕಾರ್ಮಿಕನ ಮೃತದೇಹವನ್ನ ರಹಸ್ಯವಾಗಿ ಹೂತಿಟ್ಟು ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದ ಲೈನ್ ಮ್ಯಾನ್ ಬಂಧಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯಲ್ಲಿ ನಡೆದಿದೆ ಗುಡಿಬಂಡೆ ತಾಲ್ಲೂಕಿನ ಬೀಚಗಾನಹಳ್ಳಿ ನಿವಾಸಿ ರವಿ (33) ಮೃತ ಕಾರ್ಮಿಕ. ಇನ್ನೂ ಚಂದ್ರಕುಮಾರ್ ಎಂಬ ಲೈನ್ ಮ್ಯಾನ್ ಕೃತ್ಯ ಎಸಗಿದ್ದಾನೆ. ವಿದ್ಯುತ್ ಕೆಲಸಕ್ಕೆ ಅಂತ ಕಾರ್ಮಿಕನನ್ನ ಕರೆದೊಯ್ದ ಲೈನ್‌ಮ್ಯಾನ್ ಆತ ಆಕಸ್ಮಿಕವಾಗಿ ವಿದ್ಯುತ್ ಹರಿದು ಕಂಬದಲ್ಲೇ ಮೃತಪಟ್ಟಿದ್ದಾನೆ. ನಂತರ ಆತನ ಮೃತದೇಹವನ್ನ ಅಲ್ಲೇ ಸಮೀಪದ ಕೆರೆಯಂಗಳದ ಕಾಲುವೆಯಲ್ಲಿ ರಹಸ್ಯವಾಗಿ ಹೂತು ಹಾಕಿ ಪ್ರಕರಣವನ್ನ ಮುಚ್ಚಿ ಹಾಕಲು ಯತ್ನಿಸಿದ್ದ. ಇನ್ನೂ ರವಿ ಮನೆಯವರು ರವಿ ಕಾಣೆಯಾದ ಬಗ್ಗೆ ಗುಡಿಬಂಡೆ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ರು. ಈ ಸಂಬಂಧ ತನಿಖೆ ನಡೆಸಿದ ಪೊಲೀಸರು ಲೈನ್ ಮ್ಯಾನ್ ಚಂದ್ರಕುಮಾರ್ ನನ್ನ ಬಂಧಿಸಿದ್ದಾರೆ. ಇನ್ನೂ ಮೃತದೇಹ ಹೂತ ಜಾಗ ತೋರಿಸಿದ್ದು ಮೃತದೇಹ ಹೊರತೆಗೆಯಲು ಪೊಲೀಸರು ಮುಂದಾಗಿದ್ದಾರೆ.
ಮಂಡ್ಯ : ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆ ಪ್ರತಿಭಟನೆ ನಡೆಸಿತ್ತು. ಈ ವೇಳೆ ಪೊಲೀಸರು ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ಮಾಡಿದ್ದರು. ಇದೀಗ ಪ್ರತಿಭಟನೆ ವೇಳೆ ಲಾಠಿ ಏಟು ತಿಂದ ಮಹಿಳೆ ವಿರುದ್ಧವು FIR ದಾಖಲಾಗಿದೆ. ಸಿಎಂ ಸಿದ್ದರಾಮಯ್ಯ ಹಾಗು ಮುಸ್ಲಿಂರ ವಿರುದ್ಧ ಅವಹೇಳನಕಾರಿ ಹೇಳಿಕೆ ಹಿನ್ನೆಲೆ ಮದ್ದೂರು ಶಿವಪುರ ನಿವಾಸಿ ಜ್ಯೋತಿ ವಿರುದ್ಧ FIR ದಾಖಲಾಗಿದೆ. ಮದ್ದೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮದ್ದೂರು ಠಾಣೆ ಪಿಐ ಶಿವಕುಮಾರ್ ದೂರು ಆಧರಿಸಿ FIR ದಾಖಲು ಮಾಡಲಾಗಿದೆ. ಅನ್ಯಧರ್ಮಕ್ಕೆ ಧಕ್ಕೆಯಾಗುವ ಪದ ಬಳಕೆ ಮಾಡಿದ್ದು, ಕೋಮುಗಳ ನಡುವೆ ಪರಸ್ಪರ ವೈಮನಸ್ಸು ಉಂಟು ಮಾಡುವ ಹೇಳಿಕೆ, ವೈರತ್ವ ಉತ್ತೇಜನ ನೀಡುವ ಆರೋಪದಡಿ FIR ದಾಖಲಾಗಿದೆ. ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಜ್ಯೋತಿ ಹೇಳಿಕೆ ವೈರಲ್ ಆಗಿದೆ.a
ಬೆಂಗಳೂರು : ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಬಿಜೆಪಿ ನಾಯಕರು ಭೇಟಿ ನೀಡಿದ್ದರು. ಈ ವೇಳೆ ಭಾಷಣದಲ್ಲಿ ಬಿಜೆಪಿ MLC ಸಿಟಿ ರವಿ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದು, ಅವರ ವಿರುದ್ಧ FIR ದಾಖಲಾಗಿದೆ. ಈ ಕುರಿತು ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ಸಿಟಿ ರವಿ ಪ್ರಚೋದನಾಕಾರಿ ಭಾಷಣ ಏನು ಮಾಡಿಲ್ಲ. ಇದಕ್ಕಿಂತ ಕೆಟ್ಟದಾಗಿ ಕಾಂಗ್ರೆಸ್ ನವರು ಬಹಳ ಸಲ ಮಾತನಾಡಿದ್ದಾರೆ. ವಿಧಾನಸೌಧದಲ್ಲೇ ಪಾಕ್ ಜಿಂದಾಬಾದ್ ಎಂದವರಿಗೆ ಏನು ಮಾಡಿದ್ರಿ? ಸಿಟಿ ರವಿ ಏನಾದರು ದೇಶದ್ರೋಹಿ ಕೆಲಸ ಮಾಡಿದ್ದರಾ? ಯಾರ್ಯಾರು ಮಾತಾಡುತ್ತಾರೋ ಅವರ ವಿರುದ್ಧ ಕೇಸ್ ಹಾಕಲು ಟೀಮ್ ಮಾಡಿದ್ದಾರೆ. ಕಾಂಗ್ರೆಸ್ ನಲ್ಲಿ ಒಂದು ಟೀಮ್ ಮಾಡಿದ್ದಾರೆ, ಅದರಲ್ಲಿ ಸಚಿವರು ಇದ್ದಾರೆ. ಇನ್ನೆರಡು ವರ್ಷ ಆಮೇಲೆ ಇದೆ ನಿಮಗೆ ತಿರುಗುಬಾಣ ಆಗುತ್ತೆ. ನಮ್ಮ ಸರ್ಕಾರ ಬಂದಾಗ ನಿಮ್ಮ ಮೇಲೂ 100% ಇದೆ ಮಾಡುತ್ತೇವೆ. ಇದರ ಅಪ್ಪಂನಂತಹ ಡಬಲ್ ಕೇಸ್ ಮಾಡಿತ್ತೇವೆ.…
ಧಾರವಾಡ : ಧಾರವಾಡದಲ್ಲಿ ಭೀಕರವಾದ ಅಪಘಾತ ಸಂಭಾವಿಸಿದ್ದು, ಲಾರಿಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಗ್ರಾಮದಲ್ಲಿ ನಡೆದಿದೆ. ಮೃತ ಬೈಕ್ ಸವಾರರು ಬೆಳಗಾವಿ ಮೂಲದ ಆದಂ (52) ಕಿರಣ್ (35) ಎಂದು ತಿಳಿದುಬಂದಿದೆ. ಇಬ್ಬರೂ ಹಾವೇರಿ ಜಿಲ್ಲೆಯ ಬಂಕಾಪುರಕ್ಕೆ ತೆರಳುತ್ತಿದ್ದರು. ಅಪಘಾತದ ಕುರಿತಂತೆ ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ನಿನ್ನೆ ತುಮಕೂರಿನ ತಿಪಟೂರಲ್ಲಿ ABVP ಕಾರ್ಯಕ್ರಮದಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಭಾಗಿಯಾಗಿರುವ ಕುರಿತು ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ವಿಚಾರವಾಗಿ ವಿಪಕ್ಷ ನಾಯಕ ಆರ್.ಅಶೋಕ್ ಗೃಹ ಸಚಿವ ಜಿ.ಪರಮೇಶ್ವರ್ ರಾಣಿ ಅಬ್ಬಕ್ಕ ರಥಯಾತ್ರೆಗೆ ಪುಷ್ಪಾರ್ಚನೆ ಮಾಡಿದ್ರಲ್ಲಿ ತಪ್ಪೇನಿಲ್ಲ ಎಂದು ತಿಳಿಸಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೃಹ ಸಚಿವ ಜಿ.ಪರಮೇಶ್ವರ್ ರಾಣಿ ಅಬ್ಬಕ್ಕ ರಥಯಾತ್ರೆಗೆ ಪುಷ್ಪಾರ್ಚನೆ ಮಾಡಿದ್ರಲ್ಲಿ ತಪ್ಪೇನಿಲ್ಲ. ಇದರಲ್ಲಿ ರಾಜಕಾರಣ ಮಾಡುವಂತದ್ದು, ಏನು ಇಲ್ಲ ಈ ವಿಚಾರದ ಬಗ್ಗೆ ಹೈಕಮಾಂಡ್ ಗೆ ದೂರು ಕೊಡೋದೆಲ್ಲ ತಪ್ಪು. ರಥಯಾತ್ರೆ ಬಗ್ಗೆ ಎಬಿವಿಪಿಯವರು ನಮಗೆ ಮಾಹಿತಿ ಕೊಟ್ಟಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ ನೀಡಿದರು.
ಬೆಂಗಳೂರು : ಬೆಂಗಳೂರಲ್ಲಿ ಪದೇ ಪದೇ ಕನ್ನಡ ಹಾಗು ಕನ್ನಡಿಗರ ಬಗ್ಗೆ ಕೀಳು ಭಾವನೆ ತೊರ್ಪಡುತ್ತಿರುವ ಘಟನೆಗಳು ಹೆಚ್ಚುತ್ತಿವೆ. ಇದೀಗ ಮತ್ತೊಂದು ಘಟನೆ ನಡೆದಿದ್ದು, ಆಂಗ್ಲ ಭಾಷೆಯಲ್ಲಿ ಮಾತ್ರ ಮಾತನಾಡುವಂತೆ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರಿದ್ದು, ಕನ್ನಡ ಮಾತಾಡಿದ್ರೆ ದಂಡ ವಿಧಿಸುವ ಎಚ್ಚರಿಕೆ ಹಾಕಿರುವ ಘಟನೆ ವರದಿಯಾಗಿದೆ. ಹೌದು ಬೆಂಗಳೂರಿನ ಕೆಕೆ ರಸ್ತೆಯಲ್ಲಿರುವ ಸಿಂಧಿ ಪ್ರೌಢಶಾಲೆ ಆಡಳಿತ ಮಂಡಳಿ ವಿರುದ್ಧ ಈ ಒಂದು ಆರೋಪ ಕೇಳಿಬಂದಿದೆ. ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಪತ್ರ ಬರೆಯಲಾಗಿದೆ. ಸಿಂಧಿ ಪ್ರೌಢಶಾಲೆಗೆ ಭೇಟಿ ನೀಡಿ ಪರಿಶೀಲನೆ ಪತ್ರ ಬರೆದು ಸೂಚಿಸಲಾಗಿದೆ. ಈ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಪತ್ರ ಬರೆದಿದ್ದಾರೆ. 1 ವಾರದೊಳಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ವರದಿ ನೀಡಲು ಸೂಚನೆ ನೀಡಿದ್ದಾರೆ.ಆರೋಪದ ಬಗ್ಗೆ ಪ್ರತಿಕ್ರಿಯೆಗೆ ಸಿಂಧಿ ಪ್ರೌಢಶಾಲೆ ಆಡಳಿತ ಮಂಡಳಿ ನಕಾರ ವ್ಯಕ್ತಪಡಿಸಿದೆ.
ಆಂಧ್ರಪ್ರದೇಶ : ಆಂಧ್ರ ಪ್ರದೇಶ ಸರ್ಕಾರದ ಸ್ಟಾರ್ ಶಾಸಕ ಆಗಿರುವ ಬಾಲಯ್ಯ ಅವರು ಟಾಲಿವುಡ್ನ ಸೂಪರ್ ಸ್ಟಾರ್ಗಳಲ್ಲಿ ಸಹ ಒಬ್ಬರಾಗಿದ್ದಾರೆ. ಆಂಧ್ರ ಪ್ರದೇಶ ಸರ್ಕಾರ ‘ಸೂಪರ್ ಸಿಕ್ಸ್’ ಹೆಸರಿನ ಕಾರ್ಯಕ್ರಮ ಮಾಡುತ್ತಿದ್ದು, ಆ ಕಾರ್ಯಕ್ರಮಕ್ಕೆ ಶಾಸಕ ಬಾಲಕೃಷ್ಣ ಅವರು ಗೈರಾಗಿದ್ದರು. ಈ ಬಗ್ಗೆ ಮಾತನಾಡಿದ ಸಚಿವರೊಬ್ಬರು ಬಾಲಯ್ಯ ಅವರಿಗೆ ಅನಾರೋಗ್ಯ ಉಂಟಾಗಿದೆ ಎಂದು ತಿಳಿಸಿದ್ದಾರೆ. ಆಂಧ್ರ ಪ್ರದೇಶ ಸರ್ಕಾರ ‘ಸೂಪರ್ ಸಿಕ್ಸ್’ ಹೆಸರಿನ ಕಾರ್ಯಕ್ರಮ ಮಾಡುತ್ತಿದ್ದು, ಆ ಕಾರ್ಯಕ್ರಮಕ್ಕೆ ಶಾಸಕ ಬಾಲಕೃಷ್ಣ ಅವರು ಗೈರಾಗಿದ್ದರು. ಈ ಬಗ್ಗೆ ಮಾತನಾಡಿದ ಸಚಿವ ಪಯ್ಯವುಲ ಕೇಶವ ಅವರು, ‘ಬಾಲಕೃಷ್ಣ ಅವರಿಗೆ ಆರೋಗ್ಯ ಹದಗೆಟ್ಟಿದೆ ಹಾಗಾಗಿ ಅವರು ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ’ ಎಂದಿದ್ದಾರೆ. ಆದರೆ ಬಾಲಯ್ಯ ಅವರಿಗೆ ಏನಾಗಿದೆ? ಯಾವ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ ಎಂಬ ಬಗ್ಗೆ ಅವರು ಮಾಹಿತಿ ನೀಡಿಲ್ಲ.ಬಾಲಯ್ಯ ಅವರಿಗೆ ಅನಾರೋಗ್ಯ ಉಂಟಾಗಿರುವುದು ಸಹಜವಾಗಿಯೇ ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ.













