Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ. ಈಗಾಗಲೇ ನಾಳೆಯಿಂದ ನಮ್ಮ ಮೆಟ್ರೋ ಪ್ರಯಾಣದ ದರ ಶೇಕಡ 5 ರಷ್ಟು ಏರಿಕೆ ಆಗಲಿದೆ ಎಂದು ಬಿಎಂಆರ್‌ಸಿಎಲ್ ಎಂಡಿ ರವಿಶಂಕರ್ ಸ್ಪಷ್ಟನೆ ನೀಡಿದ್ದಾರೆ. ಇದರ ಬೆನ್ನಲೆ ರಾಜ್ಯದ ಜನತೆಗೆ ಜನತೆಗೆ ಇದೀಗ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರದಲ್ಲಿಯೇ ವಿದ್ಯುತ್ ಏರಿಕೆ ಆಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಹೌದು ರಾಜ್ಯದಲ್ಲಿ ವಿದ್ಯುತ್ ಬಿಲ್ ಏರಿಕೆ ಆಗುವ ಸಾಧ್ಯತೆ ಇದೆ ಎಸ್ಕಾಂಗಳ ನಷ್ಟ ಸರಿದೂಗಿಸಲು ದೊರೆ ಏರಿಕೆಗೆ ಚಿಂತನೆ ನಡೆಸಲಾಗುತ್ತಿದೆ. ಆದಾಯ ಕೊರತೆಯಿಂದ ಕರೆಂಟ್ ಬಿಲ್ ಹೆಚ್ಚಿಸಲು ಚಿಂತಿಸಲಾಗುತ್ತಿದೆ ವಿದ್ಯುತ್ ಸರಬರಾಜು ಕಂಪನಿಗಳು ನಷ್ಟದ ಹಳಿಯಲ್ಲಿವೆ. ಆದಾಯ ಸರಿದೂಗಿಸಲು ವಿದ್ಯುತ್ ದರ ಏರಿಕೆಗೆ ಬೆಸ್ಕಾಂ, ಎಸ್ಕಾಂ ಗಳು ಪಟ್ಟು ಹಿಡಿದಿವೆ. ಏಪ್ರಿಲ್ 1 ರಿಂದ ವಿದ್ಯುತ್ತರ ಏರಿಕೆ ಆಗುವ ಸಾಧ್ಯತೆ ಇದೆ. ವಿದ್ಯುತ್ ದರ ಏರಿಕೆಗೆ ಕೆ ಇ ಆರ್ ಸಿ ಅಸ್ತು ಎನ್ನುತ್ತಾ ಎಂದು ಕಾಡುನೋಡ್ಬೇಕಾಗಿದೆ. ಬೆಸ್ಕಾಂ ಸೇರಿ ಎಸ್ಕಾಂಗಳಿಂದ ಕೆಇಆರ್‌ಸಿಗೆ…
ನವದೆಹಲಿ : ಆಗ್ನೇಯ ದೆಹಲಿಯ ಹಜರತ್ ನಿಜಾಮುದ್ದೀನ್‌ನಲ್ಲಿ ನಿನ್ನೆ ಸಂಜೆ 5 ಗಂಟೆ ಸುಮಾರಿಗೆ ವಿದ್ಯುತ್ ಗೀಸರ್ ಸ್ಫೋಟಗೊಂಡು 50 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮತ್ತು ಅವರ ಪತ್ನಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಬೆಂಕಿ ಕಾಣಿಸಿಕೊಂಡ ವರದಿಯಾದ ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ನೋಡಿದಾಗ ಹೊಗೆಯಿಂದ ಉಸಿರಾಡಿದ ಕಾರಣ ಪತಿ ಮತ್ತು ಅವರ ಪತ್ನಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ – ಪತಿ ಸ್ನಾನಗೃಹದಲ್ಲಿದ್ದರು ಮತ್ತು ಮನೆ ಒಳಗಿನಿಂದ ಲಾಕ್ ಆಗಿತ್ತು. ಮೊಹಮ್ಮದ್ ಸಯೀದ್ ನಿಜಾಮಿ ಮತ್ತು ಅವರ ಪತ್ನಿ ಫಿದಾ ಅವರನ್ನು ಸಂಪರ್ಕಿಸಲು ಪೊಲೀಸರು ಬಾಗಿಲು ಒಡೆದು ಒಳಗೆ ಹೋಗಬೇಕಾಯಿತು. ದುರದೃಷ್ಟವಶಾತ್ ನಿಜಾಮಿ ಸಾವನ್ನಪ್ಪಿದ್ದರು. ಆದರೆ ಫಿದಾಗೆ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೃಷ್ಟವಶಾತ್, ಮನೆಯಲ್ಲಿ ಇಬ್ಬರೇ ಇದ್ದ ಕಾರಣ ಕುಟುಂಬದ ಇತರ ಸದಸ್ಯರು ಸುರಕ್ಷಿತವಾಗಿದ್ದಾರೆ. ಸ್ಫೋಟಕ್ಕೆ ಕಾರಣವೇನು ಎಂಬುದರ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಬೆಂಗಳೂರು : ಪುತ್ತೂರಿನಲ್ಲಿ ವಿವೇಕಾನಂದ ಜಯಂತಿಯಲ್ಲಿ ಭಾಗವಹಿಸಿದ್ದ ಪ್ರಭಾಕರ್ ಭಟ್ ಮುಸ್ಲಿಂ, ಕ್ರಿಶ್ಚಿಯನ್ ಸಮುದಾಯಗಳ ವಿರುದ್ಧ ದ್ವೇಷ ಹರಡುವಂತಹ ಭಾಷಣ ಮಾಡಿದ್ದರ ಕುರಿತು ಕೇಸ್ ದಾಖಲಾಗಿತ್ತು. ಕೋಮು ದ್ವೇಷದ ಮಾತುಗಳನ್ನಾಡಿದ ಸಂಬಂಧ ಯೂಟ್ಯೂಬ್ ಚಾನಲ್‌ನಲ್ಲಿ ಪ್ರಸಾರವಾದ ವಿಡಿಯೋ ಆಧರಿಸಿ ಆರ್‌ಎಸ್‌ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ನಡೆಸಿತು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠವು, ”ಪ್ರಭಾಕರ್‌ಭಟ್ ಭಾಷಣ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಮಾಡಿದ್ದಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಸಂಬಂಧಿತ ಪ್ರಕರಣದಲ್ಲಿ ಬಿಎನ್‌ಎಸ್‌ಎಸ್ ಸೆಕ್ಷನ್ 35(3) ನೋಟಿಸ್ ನೀಡಿ, ಆರೋಪಿಯನ್ನು ಆಲಿಸದ ಹೊರತು ಬಂಧಿಸುವಂತಿಲ್ಲ ಎಂದು ತೆಲಂಗಾಣ ಹೈಕೋರ್ಟ್ ರೂಪಿಸಿರುವ ಮಾರ್ಗಸೂಚಿಗಳನ್ನು ಇತ್ತೀಚೆಗೆ ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಪ್ರಕರಣದ ಹಿನ್ನೆಲೆ: ಪುತ್ತೂರಿನಲ್ಲಿ ವಿವೇಕಾನಂದ ಜಯಂತಿಯಲ್ಲಿ ಭಾಗವಹಿಸಿದ್ದ ಪ್ರಭಾಕರ್ ಭಟ್ ಮುಸ್ಲಿಂ, ಮೊದಲಿಗೆ ಮೊಘಲರು, ಆನಂತರ ಕ್ರಿಶ್ಚಿಯನ್ನರು ದಾಳಿ…
ಮಂಗಳೂರು : ಕಳೆದ 5 ವರ್ಷದ ಹಿಂದೆ ಮಂಗಳೂರಲ್ಲಿ 7 ವರ್ಷ 7 ತಿಂಗಳಿನ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ ಇಡೀ ಸಮಾಜ ತಲೆತಗ್ಗಿಸುವಂತಹ ಕೆಲಸ ಮಾಡಿದ ಮೂವರು ಅಪರಾಧಿಗಳು, ಮತ್ತೆ ಶಿಕ್ಷೆ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದಾಗ ಛೀಮಾರಿ ಹಾಕಿದ ಕೋರ್ಟ್, ಗಲ್ಲುಶಿಕ್ಷೆಯನ್ನು ಕಾಯಂಗೊಳಿಸಿದೆ. ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಗಲ್ಲುಶಿಕ್ಷೆಯನ್ನು ಕಾಯಂಗೊಳಿಸಲು ಕೋರಿ ರಾಜ್ಯ ಸರಕಾರ ಸಲ್ಲಿಸಿದ್ದ ಅರ್ಜಿ, ಶಿಕ್ಷೆ ರದ್ದು ಕೋರಿ ಅಪರಾಧಿಗಳಾದ ಮಧ್ಯಪ್ರದೇಶದ ಪನ್ನಾ ಜಿಲ್ಲೆಯ ಜೈಬನ್ ಆದಿವಾಸಿ ಅಲಿಯಾಸ್ ಜಯಸಿಂಗ್ ಮುಖೇಶ್ ಸಿಂಗ್, ಮುಖೇಶ್ ಸಿಂಗ್ ತಿರ್ಕಿ ಮತ್ತು ಜಾರ್ಖಂಡ್‌ನ ರಾಂಚಿಯ ಮನೀಶ್ ತಿರ್ಕಿ ಎಂಬುವರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಮತ್ತು ನ್ಯಾಯಮೂರ್ತಿ ವೆಂಟಕೇಶ್ ಟಿ.ನಾಯ್ಕ್ ಅವರಿದ್ದ ವಿಭಾಗೀಯಪೀಠ ಈ ಆದೇಶ ನೀಡಿದೆ. ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್, ದಾಖಲೆಗಳನ್ನು ಪರಿಶೀಲಿಸಿದ ನಂತರ ವಿಚಾರಣಾ ನ್ಯಾಯಾಲಯ ವಿಧಿಸಿರುವ ಗಲ್ಲುಶಿಕ್ಷೆ ಕಾಯಂಗೊಳಿಸಿ, ಶಿಕ್ಷೆ ರದ್ದು ಕೋರಿ ಅಪರಾಧಿಗಳು ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿದೆ. ”ಅಪರಾಧಿಗಳು…
ಮೈಸೂರು : ಸಿಎಂ ಸಿದ್ದರಾಮಯ್ಯಗೆ ಎಚ್ ಡಿ ದೇವೇಗೌಡ ಕುಮಾರ ಸ್ವಾಮಿಯೇ ಟಾರ್ಗೆಟ್ ಆಗಿದ್ದಾರೆ. ದೇವೇಗೌಡರು ಹಾಗೂ ನನ್ನನ್ನು ಮುಗಿಸುವ ಕೆಲಸ ಮಾಡುತ್ತಿದ್ದಾರೆ. ಅಧಿಕಾರಿಗಳನ್ನು ಯಾವ ರೀತಿ ದುರುಪಯೋಗ ಮಾಡಿಕೊಂಡರು ಎಂದು ಗೊತ್ತಿದೆ ಎಂದು ಮೈಸೂರಿನಲ್ಲಿ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿದರು. ಸಿನಿಮಾ ರಂಗದಲ್ಲಿ ದುಡಿದ ದುಡ್ಡಿನಲ್ಲಿ 43 ಎಕರೆ ತೆಗೆದುಕೊಂಡಿದ್ದೆ ನನಗೆ ಸೇರಿದ ನಾಲ್ಕು ಎಕರೆ ವಶಪಡಿಸಿಕೊಳ್ಳಲು SIT ರಚನೆ ಮಾಡುತ್ತೀರಾ? ಇಷ್ಟೊಂದು ಕಿರುಕುಳ ಕೊಡುತ್ತೀರಾ? ನ್ಯಾಯಾಲಯದಲ್ಲಿ ಇನ್ನೂ ಎರಡು ಕೇಸುಗಳು ಎದುರಿಸುತ್ತಿದ್ದೇನೆ ಎಂದು ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಹೆಚ್‍ಡಿ ದೇವೇಗೌಡರ ಜೊತೆಗೆ ಬೆಳೆದು ಈ ರೀತಿ ಮಾಡುತ್ತಿದ್ದಾರೆ ಜೆಡಿಎಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಮುಂದಿನ ಚುನಾವಣೆಯಲ್ಲಿ ಮೈಸೂರಿನ 11 ಕ್ಷೇತ್ರ ಗೆದ್ದರೂ ಆಶ್ಚರ್ಯವಿಲ್ಲ ಜೆಡಿಎಸ್ ಬಿಜೆಪಿ ಮೈತ್ರಿ 11ಕ್ಕೆ 11 ಸೀಟ್ ಗೆದ್ದರೂ ಆಶ್ಚರ್ಯ ಪಡಬೇಕಿಲ್ಲ ಎಂದು ಮೈಸೂರಿನಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿಕೆ…
ಬೆಂಗಳೂರು : ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣದ ದರ ಏರಿಕೆ ವಿಚಾರದ ಕುರಿತು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಡುವೆ ಫೈಟ್ ನಡೆಯುತ್ತಿದೆ.ಈ ವಿಚಾರವಾಗಿ ನಿನ್ನೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸೋಮವಾರದಿಂದ ಮೆಟ್ರೋ ಪ್ರಯಾಣದ ಏರಿಕೆ ಆಗಲ್ಲ ಎಂದು ನಿನ್ನೆ ಹೇಳಿದ್ದರು. ಆದರೆ ಸಿಎಂ ಸಿದ್ದರಾಮಯ್ಯ ಮೆಟ್ರೋ ಪ್ರಯಾಣದ ದರ ನಾವು ಏರಿಕೆ ಮಾಡಿಲ್ಲ ಕೇಂದ್ರ ಸರ್ಕಾರದವರು ಏರಿಕೆ ಮಾಡಿದ್ದಾರೆ ಎಂದು ಹೇಳುತ್ತಿದ್ದಾರೆ. ಹೀಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಒಬ್ಬರ ಮೇಲೆ ಒಬ್ಬರು ಆರೋಪಗಳು ಮಾಡುತ್ತಿದ್ದು, ಇದರ ಮಧ್ಯ ಪ್ರಯಾಣಿಕರನ್ನ ಗೊಂದಲಕ್ಕೆ ಸಿಲುಕಿಸಿದ್ದಾರೆ. ಆದರೆ ಇದೀಗ ಬಿಎಂಆರ್‌ಪಿಎಲ್ ಎಂಡಿ ರವಿಶಂಕರ್ ಮಾಹಿತಿ ನೀಡಿದ್ದು, ನಮಗೆ ಕೇಂದ್ರ ಸರ್ಕಾರದಿಂದ ಯಾವುದೇ ದರ ಏರಿಕೆ ಮಾಡಿದನ್ನು ತಡೆಹಿಡಿಯಿರಿ ಎಂದು ಯಾವುದೇ ಸೂಚನೆಗಳು ಆಗಲಿ ಬಂದಿಲ್ಲ. ಹಾಗಾಗಿ ನಾಳೆಯಿಂದ ಮೆಟ್ರೋ ಪ್ರಯಾಣದ ದರ ಏರಿಕೆ ಮಾಡುವುದಾಗಿ ಏನು ಆದೇಶ ನೀಡಿದ್ದೆವೋ, ಅದರಲ್ಲಿ ಯಾವುದೇ ಬದಲಾವಣೆ ಇಲ್ಲ ಎನ್ನುವ ಮೂಲಕ ಇದೀಗ…
ಇಸ್ಲಾಮಾಬಾದ್ ಶಿಯಾ ಮಸೀದಿಯಲ್ಲಿ ಶುಕ್ರವಾರ ನಡೆದ ಭೀಕರ ಬಾಂಬ್ ಸ್ಫೋಟದ ಹೊಣೆಯನ್ನು ಜಾಗತಿಕ ಭಯೋತ್ಪಾದಕ ಸಂಘಟನೆ ಇಸ್ಲಾಮಿಕ್ ಸ್ಟೇಟ್ ಹೊತ್ತುಕೊಂಡಿದೆ. ಈ ಸ್ಫೋಟದ ಬಗ್ಗೆ ಇಸ್ಲಾಮಿಕ್ ಸ್ಟೇಟ್ ಮುಖವಾಣಿ ಅಮಾಕ್ ಮೂಲಕ ಹೇಳಿಕೆ ನೀಡಲಾಗಿದ್ದು, ಈ ದಾಳಿಯು ಪಾಕಿಸ್ತಾನ ಪ್ರಾಂತ್ಯದಲ್ಲಿ ಇಸ್ಲಾಮಿಕ್ ಸ್ಟೇಟ್ ಸೈನಿಕ ನಡೆಸಿದ ಫಿದಾಯೀನ್ ಕಾರ್ಯಾಚರಣೆಯಾಗಿದೆ ಎಂದು ಉಲ್ಲೇಖಿಸಿದೆ. ಇಸ್ಲಾಮಿಕ್ ಸ್ಟೇಟ್ ತನ್ನ ಇತ್ತೀಚಿನ ಅಲ್-ನಬಾ ಸಂಚಿಕೆಯಲ್ಲಿ ಲಷ್ಕರ್-ಎ-ತೈಬಾ ಸದಸ್ಯರು ಖೊರಾಸನ್ ಪ್ರಾಂತ್ಯದಲ್ಲಿ ಇಸ್ಲಾಮಿಕ್ ಸ್ಟೇಟ್ ಸೇರಲು ಕರೆ ನೀಡಿದೆ. 200 ಜನ ಬಲಿ! ಶುಕ್ರವಾರದ ಮಧ್ಯಾಹ್ನ ಪ್ರಾರ್ಥನೆ ನಡೆಯುತ್ತಿದ್ದಾಗ ಇಸ್ಲಾಮಾಬಾದ್ ಮಸೀದಿಯಲ್ಲಿ ನಡೆದ ಸ್ಫೋಟದಲ್ಲಿ 36 ಮಂದಿ ಸಾವನ್ನಪ್ಪಿದ್ದಾರೆ ಎಂದು ಪಾಕ್ ಸರ್ಕಾರ ಹೇಳಿದರೂ ಅಮಾಕ್ 200 ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಿದೆ. ಸೈಫುಲ್ಲಾ ಅನ್ಸಾರಿ ಆತ್ಮಾಹುತಿ ಬಾಂಬರ್ ಆಗಿದ್ದು ಆತನ ಫೋಟೋವನ್ನು ಅಮಾಕ್ ಪ್ರಕಟಿಸಿದೆ. ತನ್ನ ಹೇಳಿಕೆಯಲ್ಲಿ ನೂರಾರು ಪಾಕಿಸ್ತಾನಿ ಶಿಯಾಗಳು ಸಿರಿಯಾದಲ್ಲಿ ಇರಾನ್ ಪರ ‘ಜೈನಬಿಯೂನ್ ಬ್ರಿಗೇಡ್’ ಸೇರಿದ್ದಾರೆ ಎಂದು ಉಲ್ಲೇಖಿಸಿದೆ. https://twitter.com/Press_Point1/status/2020004710024098170?t=cZEzXSZ8dPtDtVZvYaDE4w&s=19
ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಇದೀಗ ಗುಡ್ ನ್ಯೂಸ್ ಸಿಕ್ಕಿದ್ದು ಮೆಟ್ರೋ ಪ್ರಯಾಣದ ದರ ಹೆಚ್ಚಳ ಇಲ್ಲ ಎಂದು ಹೇಳಲಾಗುತ್ತಿದೆ ಈ ಕುರಿತು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತಮ್ಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.ಈ ವಿಚಾರವಾಗಿ ಬಿಎಂಆರ್‌ಸಿಎಲ್ ಇಂದ ಅಧಿಕೃತ ಮಾಹಿತಿ ಬರಬೇಕಷ್ಟೇ. ಕೇಂದ್ರ ಗೃಹ ವ್ಯವಹಾರಗಳ ಸಚಿವ ಮನೋಹರ್ ಕಟ್ಟರ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದೇನೆ, ಸೋಮವಾರದಿಂದ ಪ್ರಾರಂಭಿಸಲು ಪ್ರಸ್ತಾಪಿಸಲಾದ ರಾಜ್ಯ ಸರ್ಕಾರದ ಅನ್ಯಾಯದ ಬೆಂಗಳೂರು ಮೆಟ್ರೋ ದರ ಏರಿಕೆಯ ವಿರುದ್ಧ ತಕ್ಷಣದ ಮಧ್ಯಪ್ರವೇಶವನ್ನು ಕೋರಿದ್ದೇನೆ. ಬೆಂಗಳೂರಿನಲ್ಲಿ ಈಗಾಗಲೇ ಭಾರತದಲ್ಲಿ ಅತ್ಯಂತ ದುಬಾರಿ ಮೆಟ್ರೋ ದರಗಳಿವೆ ಎಂದು ನಾನು ಗಮನಸೆಳೆದಿದ್ದೇನೆ. ಈ ಹೆಚ್ಚಳವು ಲಕ್ಷಾಂತರ ನಾಗರಿಕರಿಗೆ ಸಾರ್ವಜನಿಕ ಸಾರಿಗೆಯನ್ನು ತಲುಪಲು ಕಷ್ಟವಾಗುತ್ತದೆ ಮತ್ತು ಅದರ ಉದ್ದೇಶವನ್ನು ವಿಫಲಗೊಳಿಸುತ್ತದೆ. ಪ್ರಸ್ತಾವಿತ ಹೆಚ್ಚಳವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಅವರು ಸೂಚನೆ ನೀಡಿದ್ದಾರೆ. ಇದು ಸೋಮವಾರದಿಂದ ಜಾರಿಗೆ ಬರುವುದಿಲ್ಲ. FFC ಯಲ್ಲಿನ ವೈಪರೀತ್ಯಗಳ ವೈಯಕ್ತಿಕ ಪರಿಶೀಲನೆಯನ್ನು ಸಹ ಅವರು ಭರವಸೆ…
ಬೆಂಗಳೂರು : ಮಂಗಳೂರು ಸೇರಿದಂತೆ ಕರಾವಳಿ ಕರ್ನಾಟಕ ಭಾಗದ ಜನರ ಬಹುದಿನಗಳ ಕನಸು ಶೀಘ್ರದಲ್ಲಿ ನನಸಾಗಲಿದೆ. ಹೌದು ಶೀಘ್ರದಲ್ಲಿ ಬೆಂಗಳೂರು-ಮಂಗಳೂರು ಕರಾವಳಿ ಭಾಗದ ಮಾರ್ಗದಲ್ಲಿ ಎರಡು ವಂದೇ ಭಾರತ್ ರೈಲು ಸೇವೆ ಆರಂಭಿಸಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಬೆಂಗಳೂರು-ಮಂಗಳೂರುಗೆ ಶೀಘ್ರದಲ್ಲಿ ವಂದೇ ಭಾರತ್ ರೈಲು ಆರಂಭಿಸಲಾಗುವುದು ಎಂದರು. ಶಿರಾಡಿ ಘಾಟ್ ಭಾಗದ ಮಾರ್ಗದಲ್ಲಿ ವಿದ್ಯುದೀಕರಣ ಪೂರ್ಣವಾಗಿದೆ. ಇನ್ನೂ, ಹಲವು ಸುರಕ್ಷತಾ ಪರೀಕ್ಷೆಗಳು ನಡೆಯಬೇಕಿವೆ. ಸುರಕ್ಷತಾ ದೃಢೀಕರಣ ಪತ್ರ ಬಂದ ಬಳಿಕ, ಸಂಸದರು, ಜನಪ್ರತಿನಿಧಿಗಳು ಸೇರಿ ಎಲ್ಲರಿಂದ ಸಲಹೆ ಪಡೆದು ವಂದೇ ಭಾರತ್ ರೈಲು ಸೇವೆಯ ವೇಳಾಪಟ್ಟಿಯನ್ನು ಸಿದ್ಧಪಡಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ವಂದೇ ಭಾರತ್ ಕರ್ನಾಟಕದ ಕರಾವಳಿ ಭಾಗವನ್ನು ಸಂಪರ್ಕಿಸಲಿದೆ. ಮಂಗಳೂರು, ಉಡುಪಿ ಮುಖೇನ ಕಾರವಾರದವರೆಗೆ ವಂದೇ ಭಾರತ್ ರೈಲು ಸಂಚರಿಸಲಿದೆ. ಕರಾವಳಿ ಕರ್ನಾಟಕದ ಅತಿ ಉದ್ದದ ಮಾರ್ಗವನ್ನು ಸಂಪರ್ಕಿಸುವ ಕಾರಣ ಎರಡು ವಂದೇ ಭಾರತ್ ರೈಲು ಸೇವೆಯನ್ನು ಆರಂಭಿಸಲಾಗುವುದು. ಒಂದು ಕೋಸ್ಟಲ್ ನಿಂದ ಬೆಂಗಳೂರು, ಮತ್ತೊಂದು…
ಬೆಳಗಾವಿ : ಬೆಳಗಾವಿಯಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು ರಸ್ತೆ ದಾಟುತ್ತಿದ್ದಾಗ ಟ್ರಕ್ ಹರಿದು ಇಬ್ಬರೂ ಮಹಿಳೆಯರು ಸ್ಥಳದಲ್ಲಿ ಸಾವನಪ್ಪಿದ್ದಾರೆ. ಬೆಳಗಾವಿ ತಾಲೂಕಿನ ಹಾನಗ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ನೀಲವ್ವ ಸದಾಶಿವ ಕೋರೆ (55) ಹಾಗೂ ಮಹದೇವಿ ನಾವಲಗಿ (50) ಮೃತ ಮಹಿಳೆಯರು ಮದುವೆ ಸಮಾರಂಭಕ್ಕೆ ಹೋಗಲು ಮಹಿಳೆಯರು ಹೆದ್ದಾರಿ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಸದ್ಯ ಇಬ್ಬರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಬಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














