Subscribe to Updates
Get the latest creative news from FooBar about art, design and business.
Author: kannadanewsnow05
ಶಿವಮೊಗ್ಗ : ರಾಷ್ಟ್ರೀಯ ಅಪಘಾತದಲ್ಲಿ ಹಸೆಮಣೆ ಇರಬೇಕಿದ್ದ ಜೋಡಿ ಸಾವನ್ನಪ್ಪಿದ್ದಾರೆ ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಕ್ರಾಸ್ ಬಳಿ ಈ ಒಂದು ಘಟನೆ ಸಂಭವಿಸಿದ್ದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಓಮಿನಿ ವಾಹನ ಮತ್ತು ಬೈಕ್ ನಡುವೆ ಮುಖಾಮುಖಿಯಾಗಿ ಬೈಕ್ ನಲ್ಲಿ ಇದ್ದಂತಹ ಹಸೆಮಣೆ ಎರಬೇಕಿದ್ದ ಜೋಡಿಗಳು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಶಿಕಾರಿಪುರ ತಾಲೂಕಿನ ಮಟ್ಟಿಕೊಪ್ಪ ಗ್ರಾಮದ ರೇಖಾ (20) ಹಾಗೂ ಗಂಗೊಳ್ಳಿ ಗ್ರಾಮದ ಬಸವನಗೌಡ ದ್ಯಾಮನಗೌಡ (25) ಸಾವನಪ್ಪಿದ್ದಾರೆ. ಘಟನಾಸ್ಥಳಕ್ಕೆ ಪೊಲೀಸ್ರು ಆಗಮಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು : ಕನ್ನಡದ ಖ್ಯಾತ ನಿರ್ದೇಶಕ ಎಸ್ ನಾರಾಯಣ ಮತ್ತು ಕುಟುಂಬದ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದ ಅಡಿ ಇದೀಗ ಕೇಸ್ ದಾಖಲಾಗಿದೆ.ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮಾವ ನಾರಾಯಣ, ಅತ್ತೆ ಭಾಗ್ಯವತಿ, ಪತಿ ಪವನ್ ವಿರುದ್ಧ ಸೊಸೆ ಪವಿತ್ರ ಬೆಂಗಳೂರಿನ ಜ್ಞಾನಭಾರತಿ ಠಾಣೆಗೆ ದೂರು ನೀಡಿದ್ದಾರೆ. 2021 ರಲ್ಲಿ ಎಸ್ ನಾರಾಯಣ ಪುತ್ರ ಪವನ್ ಹಾಗೂ ಪವಿತ್ರ ಮದುವೆ ನಡೆದಿತ್ತು. ಮದುವೆಯಲ್ಲಿ ವರದಕ್ಷಿಣೆ ಕೊಟ್ಟರು ಹೆಚ್ಚಿನ ಹಣಕ್ಕೆ ಒತ್ತಾಯ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಮದುವೆಯಲ್ಲಿ ಒಂದು ಲಕ್ಷ ಮೌಲ್ಯದ ಉಂಗುರ ಮದುವೆ ಖರ್ಚು ಮಾಡಿದ್ದರು ಕೆಲಸ ಇಲ್ಲದೆ ಎಸ್ ನಾರಾಯಣ ಪುತ್ರ ಪವನ್ ಮನೆಯಲ್ಲಿಯೇ ಇದ್ದ ಎಂದು ಆರೋಪಿಸಲಾಗಿದೆ. ಆರ್ಥಿಕ ಸಂಕಷ್ಟ ಹಿನ್ನೆಲೆಯಲ್ಲಿ ನಾನೇ ಮನೆಯನ್ನು ನಡೆಸುತ್ತಿದ್ದೆ. ಕೆಲಸ ಮಾಡಿ ಪವನ ಪತ್ನಿ ಪವಿತ್ರ ಮನೆ ನಡೆಸುತ್ತಿದ್ದರು. ಈ ವೇಳೆ ತಾಯೆ ಒಡೆಯವೇಯನ್ನು ಅಡವಿಟ್ಟು ಪವಿತ್ರ ಹಣ ಕೊಟ್ಟಿದ್ದಾರೆ. ಆದರೆ ಕಲಾ…
ಬೆಂಗಳೂರು : ರಾಜ್ಯದಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ಒಂದು ನಡೆದಿದ್ದು ಬೆಂಗಳೂರಿನಲ್ಲಿ 10ನೇ ತರಗತಿ ವಿದ್ಯಾರ್ಥಿಯ ಮೇಲೆ ಪಿಯುಸಿ ವಿದ್ಯಾರ್ಥಿಗಳು ಲೈಂಗಿಕ ದೌರ್ಜನ್ಯ ಎಸಗಿರುವ ಘೋರ ಕೃತ್ಯ ನಡೆದಿದೆ. ಬನ್ನೇರುಘಟ್ಟ ಖಾಸಗಿ ಶಾಲಾ ಹಾಸ್ಟೆಲ್ ನಲ್ಲಿ ಈ ಒಂದು ಘಟನೆ ನಡೆದಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಂದ 10ನೇ ತರಗತಿ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದೆ. ಹೊಸದಾಗಿ ಶಾಲಾ ಹಾಸ್ಟೆಲ್ ಗೆ ಸಂತ್ರಸ್ತ ವಿದ್ಯಾರ್ಥಿ ಸೇರಿಕೊಂಡಿದ್ದ. ರಾಗಿಂಗ್ ಬಗ್ಗೆ ಹಾಸ್ಟೆಲ್ ವಾರ್ಡನ್ ಮತ್ತು ಪ್ರಿನ್ಸಿಪಾಲ್ ಗೆ ಆತ ದೂರು ನೀಡಿದ್ದಾನೆ. ಅವರಿಗೆ ದೂರು ನೀಡಿದ್ದಾನೆ ಎಂದು ವಿದ್ಯಾರ್ಥಿಗಳು 10ನೇ ತರಗತಿ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಸೆ.3 ರಿಂದ 6 ವರೆಗೆ 4 ದಿನಗಳ ಕಾಲ ಕೊಠಡಿಯಲ್ಲಿ ಕೂಡಿ ಹಾಕಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅದರ ಜೊತೆಗೆ ಹ್ಯಾಂಗರ್ ಇಂದ ಸಹ ಹಲ್ಲೆ ನಡೆಸಿದ್ದಾರೆ. ಪ್ರಿನ್ಸಿಪಾಲ್ ಮತ್ತು ವಾರ್ಡನ್ ಯಾವುದೇ ಕ್ರಮ ಕೈಗೊಳ್ಳದ…
ಬೆಂಗಳೂರು : ರಾಜ್ಯದ ಜನತೆಗೆ ಇದೀಗ ಬಿಗ್ ಶಾಕ್ ಎದುರಾಗಿದ್ದು, ಯಾರೆಲ್ಲ ಪಡಿತರ ಚೀಟಿ ಹೊಂದಲು ಅನರ್ಹರೋ ಅಂತವರ ಬಿಪಿಎಲ್ ಕಾರ್ಡ್ ಅನರ್ಹಗೊಳಿಸಲು ಸಿಎಂ ಸಿದ್ದರಾಮಯ್ಯ ಇದೀಗ ಸೂಚನೆ ನೀಡಿದ್ದಾರೆ. ಸಭೆಯಲ್ಲಿ ಅರ್ಹ ಬಿಪಿಎಲ್ ಕಾರ್ಡ್ದಾರರಿಗೆ ಯಾವುದೇ ತೊಂದರೆ ಆಗಬಾರದು, ಬದಲಿಗೆ ಅವರಿಗೆ ಸುಲಭವಾಗಿ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳಬೇಕು. ಆದರೆ ಅನರ್ಹ ಕಾರ್ಡ್ಗಳನ್ನು ಯಾವುದೇ ಮುಲಾಜಿಲ್ಲದೆ ತಕ್ಷಣವೇ ರದ್ದುಪಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಅಧಿಕಾರಿಗಳ ವಿವರ ಪ್ರಕಾರ, ರಾಜ್ಯದಲ್ಲಿ ಈಗಾಗಲೇ ಗುರುತಿಸಲ್ಪಟ್ಟ 3,65,614 ಅನರ್ಹ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದ್ದು ಅಥವಾ ವರ್ಗ ಬದಲಾವಣೆ ಮಾಡಲಾಗಿದೆ. ಸಭೆಯಲ್ಲಿ ಅನ್ನಭಾಗ್ಯ ಯೋಜನೆಗೂ ಸಂಬಂಧಿಸಿದ ಮಹತ್ವದ ವಿಚಾರಗಳು ಚರ್ಚಿಸಲ್ಪಟ್ಟವು. ಅಕ್ಕಿಯ ಜೊತೆಗೆ ಪೌಷ್ಟಿಕ ಧಾನ್ಯಗಳು ಮತ್ತು ಅಗತ್ಯ ಆಹಾರ ಸಾಮಾಗ್ರಿಗಳನ್ನು ಒಳಗೊಂಡ ಕಿಟ್ ವ್ಯವಸ್ಥೆ ಮಾಡಲು ಸಿಎಂ ಸೂಚನೆ ನೀಡಿದರು. ಇದರ ಕುರಿತು ಶೀಘ್ರದಲ್ಲೇ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಆದೇಶಿಸಲಾಯಿತು.
ಬೆಂಗಳೂರು : ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್ ಅವರ ಒಡೆತನದಲ್ಲಿರುವ ಸಿದ್ದಾರ್ಥ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಇಂದು ಕಾರ್ಮಿಕನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೇ. ಟಿ.ಬೇಗೂರಿನಲ್ಲಿರುವ ಸಿದ್ಧಾರ್ಥ ಮೆಡಿಕಲ್ ಕಾಲೇಜು ಹಾಗು ಆಸ್ಪತ್ರೆಯಲ್ಲಿ ಕಾರ್ಮಿಕ ಆತ್ಮಹತ್ಯೆ ಶರಣಾಗಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಟಿ.ಬೆಗೂರಲ್ಲಿ ಸಿದ್ದಾರ್ಥ್ ಮೆಡಿಕಲ್ ಕಾಲೇಜಿನಲ್ಲಿ ಎಲೆಕ್ಟ್ರಿಕ್ ಕೆಲಸ ಮಾಡುತ್ತಿದ್ದ ಕಾರ್ಮಿಕ ತಿಮ್ಮೆಗೌಡ (38) ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ಎಂಟು ವರ್ಷದಿಂದ ತಿಮ್ಮೇಗೌಡ ಸಿದ್ದಾರ್ಥ್ ಮೆಡಿಕಲ್ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದರು. ಗೃಹ ಸಚಿವ ಜಿ ಪರಮೇಶ್ವರ್ ಒಡೆತನದ ಸಿದ್ಧಾರ್ಥ ಮೆಡಿಕಲ್ ಕಾಲೇಜು ಇದಾಗಿದ್ದು, ಆಸ್ಪತ್ರೆಯ ಕೊಠಡಿಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ತಿಮ್ಮೆಗೋಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಆತ್ಮಹತ್ಯೆಗೆ ಶರಣರ ತಿಮ್ಮೇಗೌಡ ಮೂಲತಃ ತುಮಕೂರು ಜಿಲ್ಲೆಯ ಗುಬ್ಬಿಯವರು ಎಲೆಕ್ಟ್ರಿಷಿಯನ್ ತಿಮ್ಮೇಗೌಡ ಮಾತೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಬೆಂಗಳೂರು : ಕಬ್ಬಿಣದ ಅದಿರು ಕಳ್ಳತನ ಮತ್ತು ಅಕ್ರಮ ಸಾಗಣೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆಯ ಆರೋಪದಡಿ ಕಾರವಾರ – ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಬಂಧಿಸಿದ್ದರು. ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸತೀಶ್ ಸೈಲ್ ಗೆ 2 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಉತ್ತರ ಕನ್ನಡ ಜಿಲ್ಲೆಯ ಬೇಲೇಕೇರಿ ಬಂದರಿನಲ್ಲಿ ವಶಕ್ಕೆ ಪಡೆದು ಸಂಗ್ರಹಿಸಲಾಗಿದ್ದ ಸಾವಿರಾರು ಟನ್ಗಳಷ್ಟು ಕಬ್ಬಿಣದ ಅದಿರನ್ನು ಅಕ್ರಮವಾಗಿ ಸಾಗಣೆ ಮಾಡಿದ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 7 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿತ್ತು. ಈ ತೀರ್ಪು ಪ್ರಶ್ನಿಸಿ ಸತೀಶ್ ಸೈಲ್ ಮತ್ತಿತರರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್ ಶಿಕ್ಷೆಯನ್ನು ಅಮಾನತಿನಲ್ಲಿಟ್ಟಿತ್ತು. ಮಂಗಳವಾರ ಶಾಂತಿ ನಗರದ ಜಾರಿ ನಿರ್ದೇಶನಾಲಯದ ಕಚೇರಿಗೆ ಆಗಮಿಸಿದ್ದ ಸತೀಶ್ ಸೈಲ್ ಅವರನ್ನು ಅಧಿಕಾರಿಗಳು ಹಲವು ಗಂಟೆಗಳ ಕಾಲ…
ಬೆಂಗಳೂರು : ಮದ್ದೂರಲ್ಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ದೂರಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮ ಹಿನ್ನೆಲೆ ಬಿಜೆಪಿ ನಾಯಕರು ಭೇಟಿ ಕೊಟ್ಟಿದ್ದರೆ. ಈ ಒಂದು ಭೇಟಿ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಕಿಡಿ ಕಾರಿದ್ದು, ನಿಮ್ಮ ಮಕ್ಕಳನ್ನು ವಿದೇಶದಿಂದ ಕರೆಸಿ ಮದ್ದೂರು ಚಲೋ ಮಾಡಿ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಕಲಬುರ್ಗಿಯಲ್ಲಿ ಮಾತನಾಡಿದ ಅವರು, ಬಿಜೆಯವರಿಗೆ ಮಾಡುವುದಕ್ಕೆ ಕೆಲಸವಿಲ್ಲ. ಬಿಜೆಪಿಯವರಿಗೆ ನಾಚಿಕೆ ಮಾನ ಮರ್ಯಾದೆ ಇಲ್ಲ. ಉರಿಗೌಡ, ನಂಜೇಗೌಡ ಕಥೆ ಕಟ್ಟಿದ್ರಲ್ಲ, ಎಲ್ಲಿ ಹೋದ್ರು ಅವರು, ಅಮಾಯಕರನ್ನು ಮುಂದಿಟ್ಟುಕೊಂಡು ಪ್ರತಿಭಟನೆ ಮಾಡಬೇಡಿ. ನಿಮ್ಮ ಮಕ್ಕಳನ್ನು ವಿದೇಶದಿಂದ ಕರೆಸಿ ಮದ್ದೂರು ಚಲೋ ಮಾಡಿ. ಬಡವರ ಮಕ್ಕಳನ್ನು ಯಾಕೆ ಬಳಸಿಕೊಳ್ತೀರಿ? ಕಲ್ಲು ತೂರಾಟ ಕೇಸ್ ಬಗ್ಗೆ ತನಿಖೆ ಆಗ್ತಿದೆ 21 ಜನರ ಬಂಧನವಾಗಿದೆ ಎಂದು ಪ್ರಿಯಾಂಕ್ ಖರ್ಗೆ ಕಿಡಿ ಕಾರಿದರು. ಬಿಜೆಪಿ ನಾಯಕರಿಂದ ಕೇಂದ್ರ ಸಚಿವ ಅಮಿತ ಶಾ ಭೇಟಿ ವಿಚಾರವಾಗಿ ಅಮಿತ್ ಶಾ ಯಾವುದೇ ಕೇಸ್ CBI ಗೆ ಕೊಡಬೇಡಿ ಎಂದಿದ್ದಾರೆ.…
ಬೆಂಗಳೂರು : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಶಿವನಗೆರೆ ಗ್ರಾಮದಲ್ಲಿನ ಹೊನ್ನೇಶ್ವರ ದೇವಾಲಯದ ಸುತ್ತಲು ಪ್ರಾಣಿಗಳ ವಧೆ ಮತ್ತು ಮಾಂಸಾಹಾರ ಸೇವನೆ ನಿಷೇಧಿಸಿ ಹೊರಡಿಸಿರುವ ನೋಟಿಸ್ ಹಿಂಪಡೆಯಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ. ಅಲ್ಲದೇ, ದೇವಾಲಯದ ಸುತ್ತಮುತ್ತಲ ಭಾಗಗಳಲ್ಲಿ ಪ್ರಾಣಿವಧೆ ಮಾತ್ರ ಸೀಮಿತಗೊಳಿಸಿ ಮುಂದಿನ ಒಂದು ವಾರದಲ್ಲಿ ಹೊಸದಾಗಿ ನೋಟಿಸ್ ನೀಡಲಾಗುವುದು ಎಂದು ಸರ್ಕಾರದ ಪರ ವಕೀಲರು ಹೈಕೋರ್ಟ್ಗೆ ಮಾಹಿತಿ ನೀಡಿದ್ದಾರೆ. ದೇವಾಲಯದ 200 ಮೀಟರ್ ವ್ಯಾಪ್ತಿಯಲ್ಲಿ ಮಾಂಸಾಹಾರ ಸೇವನೆ ಮತ್ತು ಪ್ರಾಣಿ ಬಲಿ ನಡೆಸುವಂತಿಲ್ಲ ಎಂಬ ಷರತ್ತು ವಿಧಿಸಿ ಬಡವನಹಳ್ಳಿ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರು 2014ರ ಜುಲೈ 13ರಂದು ಸ್ಥಳೀಯ ಪೊಲೀಸರ ಹೊರಡಿಸಿದ್ದ ನೋಟಿಸ್ ಪ್ರಶ್ನಿಸಿ ಹೊನ್ನೇಶ್ವರ ಸ್ವಾಮಿ ದೇವಸ್ಥಾನ ಜೀರ್ಣೋದ್ಧಾರ ಸೇವಾ ಸಮಿತಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಂ.ಶ್ಯಾಮಪ್ರಸಾದ್ ಅವರಿದ್ದ ನ್ಯಾಯಪೀಠಕ್ಕೆ ಸರ್ಕಾರ ಈ ಮಾಹಿತಿ ನೀಡಿದೆ.
ಬೆಂಗಳೂರು : ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಈ ಒಂದು ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು ಹೀಗಿವೆ. • ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ)ಯಡಿ ಹಿಂದಿನ ಬಾರಿ ನಮ್ಮ ಸರ್ಕಾರವಿದ್ದಾಗ 43,874ಮನೆಗಳು ಸೇರಿದಂತೆ ಒಟ್ಟು 47,848 ಮನೆಗಳನ್ನು ಮಂಜೂರು ಮಾಡಲಾಗಿದೆ. ಇದರಲ್ಲಿ 13,303 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಒಟ್ಟು 25,815 ಮನೆಗಳು ನಿರ್ಮಾಣ ಹಂತದಲ್ಲಿವೆ. • ಇದರಲ್ಲಿ ಫಲಾನುಭವಿಗಳ ವಂತಿಕೆ ಒಟ್ಟು ರೂ. 134ಕೋಟಿ ಸಂಗ್ರಹಿಸಲಾಗಿದೆ. ಮೊದಲ ಹಂತದಲ್ಲಿ 7900 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಫಲಾನುಭವಿಗಳ ವಂತಿಕೆ ಮೊತ್ತ ರೂ. 216 ಕೋಟಿ ಬಾಕಿಯಿದೆ. ಮನೆ ಹಂಚಿಕೆ ಮಾಡಲು ಸಾಧ್ಯವಾಗುವಂತೆ ಈ ಬಾಕಿ ಮೊತ್ತದ ಪಾವತಿ ಬಗ್ಗೆ ಹುಡ್ಕೋದಿಂದ ಸಾಲ ಪಡೆಯುವುದು ಸೇರಿದಂತೆ ಸೂಕ್ತ ಪ್ರಸ್ತಾವನೆ ಸಿದ್ಧಪಡಿಸಲು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು. • ಸ್ಲಂ ಬೋರ್ಡ್ ಅಡಿ 42ಸಾವಿರ ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಇಲ್ಲಿ ರಸ್ತೆ ಸೇರಿದಂತೆ…
ಮಂಡ್ಯ : ಮದ್ದೂರು ಪಟ್ಟಣದಲ್ಲಿ ಇಂದು ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮ ಹಿನ್ನೆಲೆಯಲ್ಲಿ, ಬಿಜೆಪಿ ನಿಯೋಗ ಭೇಟಿ ನೀಡಿದೆ. ಈ ವೇಳೆ ಬೃಹತ್ ಗಣೇಶ ಮೆರವಣಿಗೆ ನಡೆದಿದ್ದು, ಸಾವಿರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಭಾಗಿಯಾಗಿದ್ದಾರೆ. ಈ ಒಂದು ಮೆರವಣಿಗೆಯಲ್ಲಿ ಬಿಜೆಪಿ ಎಂಎಲ್ಸಿ ಸಿಟಿ ರವಿ ಮಾತನಾಡಿ, ನಮಗೆ ತೊಡೆತಟ್ಟಿ ಸವಾಲು ಹಾಕಬೇಡಿ ತೊಡೆ ಮುರಿಯುತ್ತೇವೆ ತಲೆಯನ್ನು ತೆಗೆಯುತ್ತೇವೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕಲ್ಲು ಹೊಡೆದವರನ್ನು ಕಲ್ಲಿನೊಳಗೆ ಸಮಾಧಿ ಮಾಡೋ ತಾಕತ್ತಿದೆ. ಆ ಒಂದು ತಾಕತ್ ಹಿಂದೂ ಸಮಾಜಕ್ಕೆ ಇದೆ. ನಾವು ಟಿಪ್ಪು ಹಾಗೂ ಅವನ ಅಪ್ಪನನ್ನೇ ಬಿಡಲಿಲ್ಲ ನೀವು ಲೆಕ್ಕಕ್ಕಿಲ್ಲ. ಉರಿಗೌಡ ನಂಜೇಗೌಡ ರಕ್ತ ನಮ್ಮ ಮೈಯಲ್ಲಿ ಇದೆ. ನಮಗೆ ತೊಡೆತಟ್ಟಿ ಸವಾಲು ಹಾಕಬೇಡಿ ತೊಡೆ ಮುರಿಯುತ್ತೇವೆ ತಲೆಯನ್ನು ತೆಗೆಯುತ್ತೇವೆ. ಹಿಂದೂಗಳ ವಿಷಯದಲ್ಲಿ ರಾಜಕಾರಣ ಮಾಡಲ್ಲ ಪಾಕಿಸ್ತಾನದ ಮೇಲೆ ಪ್ರೀತಿ ಇದ್ದರೆ ಗಂಟು ಮೂಟೆ ಕಟ್ಟಿ ಹೊರಡಿ ಎಂದು ವಾಗ್ದಾಳಿ ನಡೆಸಿದರು. ಮುಸ್ಲಿಮರು ದೇವಸ್ಥಾನದ ಮುಂದೆ ಬರಬಾರದು ಎಂದು…












