Subscribe to Updates
Get the latest creative news from FooBar about art, design and business.
Author: kannadanewsnow05
ಮಂಡ್ಯ : ಮುಂದಿನ ಜನ್ಮದಲ್ಲಿ ಮುಸ್ಲಿಂ ಧರ್ಮದಲ್ಲಿ ಹುಟ್ಟಬೇಕು ಅಂತ ಕಾಂಗ್ರೆಸ್ ಶಾಸಕ ಸಂಗಮೇಶ ಹೇಳಿಕೆ ನೀಡಿದ್ದು, ಇವರ ಹೇಳಿಕೆಗೆ ಮದ್ದೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿಕೆ ನೀಡಿದ್ದು, ಮುಂದಿನ ಜನ್ಮದಲ್ಲಿ ದನ ತಿನ್ನುವವನಾಗಿಯೇ ಹುಟ್ಟು ಎಂದು ವಾಗ್ದಾಳಿ ನಡೆಸಿದರು. ಸರ್ಕಾರದ ಸುಳ್ಳಿಗೆ ನಾವೇನೂ ಸುಳ್ಳು ಹೇಳೋಕ್ಕಾಗಲ್ಲ. ತಾತ್ಕಾಲಿಕವಾಗಿ ಆರೋಪಿಗಳನ್ನು ರಕ್ಷಣೆ ಮಾಡಬಹುದು. ಮಸೀದಿಯಿಂದ ಕಲ್ಲು ಹೊಡೆಯಲು ಬಿಜೆಪಿ ಹೇಳಿತ್ತಾ? ಯಾವ ಮುಖ ಇಟ್ಟುಕೊಂಡು ಈ ರೀತಿ ಮಾತಾಡುತ್ತಾರೆ? ನಾಚಿಕೆ ಆಗಲ್ವಾ ಇವರಿಗೆ? ಎಂದು ಕಿಡಿ ಕಾರಿದರು. ಅದರ ಬದಲು ಕ್ಯಾಬಿನೆಟ್ ಪೂರ್ತಿ ಸಂಗಮೇಶ್ ಹೇಳಿದಂತೆ ಮತಾಂತರ ಆಗಿ. ಆಗ ನಾವು ನಿಮ್ಮನ್ನು ನೇರವಾಗಿ ಎದುರಿಸುತ್ತೇವೆ. ಮಸೀದಿ ಹತ್ತಿರ ಬಂದಾಗ ಪೊಲೀಸರು ಮೈಕ್ ಆಫ್ ಮಾಡಿಸಿದ್ದಾರೆ. ಅದೇ ಅಸಹಿಷ್ಣುತೆ. ಹಿಂದೂ ದೇವಾಲಯದ ಬಳಿ ಮಿಲಾದ್ ಮೆರವಣಿಗೆ ಬರಬಾರದು ಎಂದು ಹೇಳಿದರೆ ಮುಸಲ್ಮಾನರು ಎಲ್ಲಿ ಹೋಗುತ್ತಾರೆ?. ಕರೆಂಟ್ ಆಫ್ ಮಾಡಿಸಿ ಕಲ್ಲು ಹೊಡೆಸಲು ಯಾರು ಕಾರಣ? ಇವರ ಈ ರೀತಿಯ…
ಬೆಂಗಳೂರು: ಅಕ್ರಮ ಆನ್‌ಲೈನ್ ಹಾಗೂ ಆಫ್‌ಲೈನ್ ಬೆಟ್ಟಿಂಗ್ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇ.ಡಿ.) ಇದುವರೆಗೂ ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿಗೆ ಸೇರಿದ ಕೆಜಿಗಟ್ಟಲೇ ಚಿನ್ನ, ಬೆಳ್ಳಿ, ಐಷಾರಾಮಿ ಕಾರುಗಳು ಸೇರಿ 100 ಕೋಟಿ ರೂ. ಗೂ ಅಧಿಕ ಸ್ವತ್ತುಗಳನ್ನು ಜಪ್ತಿ ಮಾಡಿದೆ. ಇಡಿ ಅಧಿಕಾರಿಗಳು ಸೆ.6ರಂದು ಚಳ್ಳಕೆರೆಯಲ್ಲಿ ಕೆ. ಸಿ. ವೀರೇಂದ್ರ ಹಾಗೂ ಸಂಬಂಧಿಕರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದರು. ಈ ವೇಳೆ 24 ಕೋಟಿ ರೂ. ಮೌಲ್ಯದ 24 ಕ್ಯಾರೆಟ್ 21.43 ಕೆ.ಜಿ. ಚಿನ್ನದ ಗಟ್ಟಿ, 10.985 ಕೆ.ಜಿ. ತೂಕದ ಚಿನ್ನ ಲೇಪಿತ 11 ಬೆಳ್ಳಿ ಗಟ್ಟಿಗಳು ಹಾಗೂ 1 ಕೆ.ಜಿ. ಚಿನ್ನವನ್ನು ಜಪ್ತಿ ಮಾಡಿದ್ದಾರೆ. ಇದಕ್ಕೂ ಮುನ್ನ ಇ.ಡಿ. ಅಧಿಕಾರಿಗಳು ಆರೋಪಿ ಕೆ.ಸಿ. ವೀರೇಂದ್ರ ಅವರನ್ನು 15 ದಿನಗಳ ಕಾಲ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಕಡೆಯ ನಾಲ್ಕು ದಿನ ಹೆಚ್ಚಿನ ವಿಚಾರಣೆ ವೇಳೆ ಆರೋಪಿ ಕೆ.ಸಿ. ವೀರೇಂದ್ರ ಕಿಂಗ್…
ಧಾರವಾಡ : ಧಾರವಾಡದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಕೆರೆಯಲ್ಲಿರುವ ಕಲುಷಿತ ನೀರು ಸೇವಿಸಿ 19ಕ್ಕೂ ಹೆಚ್ಚು ಜನರಿಗೆ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಜಿಲ್ಲೆಯ ನವಲಗುಂದ ತಾಲೂಕಿನ ಗುಡಿಸಾಗರ ಗ್ರಾಮದಲ್ಲಿ ನಡೆದಿದೆ. ಜನರು ಜ್ವರದಿಂದ ಬಳಲಿದ್ದು, ಬಳಿಕ ವಾಂತಿ, ಭೇದಿ, ಹೊಟ್ಟೆನೋವು ಕಾಣಿಸಿಕೊಂಡು ಅಸ್ವಸ್ಥರಾಗಿದ್ದರು. ಈ ಬಾರಿ ಮಳೆ ಹೆಚ್ಚಾದ ಹಿನ್ನೆಲೆಯಲ್ಲಿ ಬೇರೆ ಬೇರೆ ಕಡೆಗಳಿಂದ ನೀರು ಕೆರೆಗೆ ಹರಿದುಬಂದಿದೆ. ಕೆರೆ ನೀರು ಕಲುಷಿತಗೊಂಡ ಕಾರಣದಿಂದ ಜನರಿಗೆ ಜ್ವರ ಬಂದಿದ್ದು, ವಾಂತಿ, ಭೇದಿ ಕಾಣಿಸಿಕೊಂಡಿರುವ ಸಾಧ್ಯತೆಯಿದೆ. ಇದರಿಂದ ಅಲ್ಲಿನ ಜನರು ಕಂಗಾಲಾಗಿದ್ದಾರೆ. ಕೆಲವರು ಗ್ರಾಮದಲ್ಲಿರುವ ಖಾಸಗಿ ಆಸ್ಪತ್ರೆ ಹಾಗೂ ಔಷಧ ಅಂಗಡಿಗಳಲ್ಲಿ ಮಾತ್ರ ತೆಗೆದುಕೊಂಡರೆ, ಕೆಲವರು ಅತಿಯಾಗಿ ಭೇದಿಮತ್ತು ಹೊಟ್ಟೆ ನೋವಿನಿಂದ ಬಳಲಿ ನವಲಗುಂದ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ತಹಶಿಲ್ದಾರ್ ಹಾಗೂ ಜಿಲ್ಲಾ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.
ಚಾಮರಾಜನಗರ: ಅರಣ್ಯದ ಅಂಚಿನ ಗ್ರಾಮಗಳಿಗೆ ಹುಲಿ, ಚಿರತೆಗಳು ನುಗ್ಗಿ ಜನ – ಜಾನುವಾರುಗಳ ಮೇಲೆ ದಾಳಿ ಮಾಡುವುದು ಸಾಮಾನ್ಯವಾಗಿದೆ. ಜೀವ ಭಯದಲ್ಲಿರುವ ಜನರಿಗೆ ಅರಣ್ಯ ಇಲಾಖೆ ನೆರವು ನೀಡುತ್ತಿಲ್ಲ ಎಂದು ಆರೋಪಿಸಿ, ಹುಲಿ ಹಿಡಿಯಲು ಇಟ್ಟಿದ್ದ ಬೋನಿನಲ್ಲಿ ಸಿಬ್ಬಂದಿ ಕೂಡಿ ಹಾಕಿದ ಘಟನೆ ತಾಲೂಕಿನ ಬೊಮ್ಮಲಾಪುರದಲ್ಲಿ ಇಂದು ನಡೆದಿದೆ. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಐವರ ವಿರುದ್ಧ FIR ದಾಖಲಾಗಿದೆ.ಬೊಮ್ಮಲಪುರ ಗ್ರಾಮದ 5 ಜನರ ವಿರುದ್ಧ FIR ದಾಖಲಾಗಿದೆ. ಅರಣ್ಯ ಸಿಬ್ಬಂದಿಗಳು ನೌಕರರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ ಎಂದು ದೂರು ನೀಡಿದ ಹಿನ್ನೆಲೆ ಬಂಡೀಪುರ ಸಿಎಫ್ ಸೂಚನೆಯಂತೆ ಗುಂಡ್ಲುಪೇಟೆ ಠಾಣೆಗೆ ದೂರು ನೀಡಿದ್ದರು. ಸಿಬ್ಬಂದಿ ನೀಡಿದ ದೂರಿನ ಅನ್ವಯ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಪ್ರಕರಣ ಹಿನ್ನೆಲೆ? ಹುಲಿ, ಚಿರತೆ ದಾಳಿಗೆ ಬೇಸತ್ತ ರೈತರು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಆಕ್ರೋಶ ವ್ಯಕ್ತಪಡಿಸಿ, ಸ್ಥಳಕ್ಕೆ ಹುಲಿ ಹಿಡಿಯಲು ಎಂದು ಬಂದಿದ್ದ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಜನರು ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರಾಣ ಭಯದಲ್ಲಿ…
ಕೋಲಾರ : ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶ ಮೆರವಣಿಗೆಯ ವೇಳೆ ಕಲ್ಲುತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಇಂದು ಮದ್ದೂರು ಪಟ್ಟಣಕ್ಕೆ ಸಾಮೂಹಿಕ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಭೇಟಿ ನೀಡಿದ್ದಾರೆ ಈ ವಿಚಾರವಾಗಿ ಕಾರ್ಮಿಕ ಸಚಿವ ಸಂತೋಷ ಲಾರ್ಡ್ ಬಿಜೆಪಿ ನಾಯಕರು ಮಕ್ಕಳು ಯಾವ ಪ್ರತಿಭಟನೆಗೆ ಬಂದಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಕೋಲಾರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಹಿಂದು ಮುಸ್ಲಿಂ ಗಲಾಟೆ ಬಿಟ್ಟು ಬಿಜೆಪಿ ಬೇರೆ ಏನು ಮಾಡುತ್ತಿಲ್ಲ ಕಲ್ಲುತೂರಾಟ ಮಾಡಿದವರಿಗೆ ಕಾನೂನಿನ ಅಡಿ ಶಿಕ್ಷೆ ಆಗಬೇಕು ಇಂದು ಅವರು ಮಾತ್ರ ಅವರ ಆಸ್ತಿಗಳನ್ನು ಬಡವರಿಗೆ ಕೊಡಿ. ಬಿಜೆಪಿ ನಾಯಕರು ಮಕ್ಕಳು ಯಾವ ಪ್ರತಿಭಟನೆಗೆ ಬಂದಿದ್ದಾರೆ ಶಕ್ತಿಪೀಠಗಳು ಹೆಚ್ಚಾಗಿ ಮಾಡಿರುವುದು ನಾವೆ ಎಂದು ಕೋಲಾರದಲ್ಲಿ ಬಿಜೆಪಿ ವಿರುದ್ಧ ಸಂತೋಷ ಲಾಡ್ ವಾಗ್ದಾಳಿ ನಡೆಸಿದರು.
ಹಾವೇರಿ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ವರದಿಯಾಗಿದ್ದು, ಪ್ರಿಯಕರೊಂದಿಗೆ ಸೇರಿ ಕ್ರೂರಿ ತಾಯಿಯೊಬ್ಬಳು ತನ್ನ ಹೆತ್ತ ಮಗುವನ್ನೇ ಕೊಂದಿರುವ ಘಟನೆ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಗುಡ್ಡದ ಅಣ್ವಿರಿ ಗ್ರಾಮದಲ್ಲಿ ನಡೆದಿದೆ. ಪ್ರಿಯಾಂಕ (4) ಎನ್ನುವ ಮಗಳನ್ನು ಉಸಿರುಗಟ್ಟಿಸಿ ಗಂಗಮ್ಮ ಮತ್ತು ಪ್ರಿಯಕರ ಅಣ್ಣಪ್ಪ ಕೊಲೆ ಮಾಡಿದ್ದಾರೆ. ಆಗಸ್ಟ್ 5 ರಂದು ಪ್ರಿಯಾಂಕ ಕೊಲೆಗೈದು ಶವ ಸುಟ್ಟು ಹಾಕಲು ಯತ್ನಿಸಲಾಗಿದೆ. ತುಂಗಾ ಮೇಲ್ದಂಡೆ ಕಾಲುವೆ ಬಳಿ ಶವ ಸುಟ್ಟು ಹಾಕಲು ಪ್ರಯತ್ನಿಸಲಾಗಿದೆ. ಬಾಲಕಿಯ ದೇಹ ಅರ್ಧ ಸುಟ್ಟು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪತಿ ಬಿಟ್ಟು ಪ್ರಿಯಕರ ಅಣ್ಣಪ್ಪ ಮಡಿವಾಳ ಜೊತೆಗೆ ಗಂಗಮ್ಮ ವಾಸವಿದ್ದಳು. ಮಗಳನ್ನು ಕಳಿಸಿಕೊಡು ಎಂದು ಕೇಳಲು ಹೋದಾಗ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಇದೀಗ ರಾಣೆಬೆನ್ನೂರು ಪೊಲೀಸರು ಗಂಗಮ್ಮ ಮತ್ತು ಅಣ್ಣಪ್ಪನನ್ನು ಅರೆಸ್ಟ್ ಮಾಡಿದ್ದಾರೆ. ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿಯಲ್ಲಿ ಭೀಕರ ಮರ್ಡರ್ : ನಿವೇಶನಕ್ಕಾಗಿ ತಮ್ಮನ ಹೆಂಡತಿಗೆ 20ಕ್ಕೂ ಹೆಚ್ಚು ಬಾರಿ ಚಾಕು ಇರಿದು ಕೊಂದ ರೌಡಿಶೀಟರ್!
ಬೆಂಗಳೂರು : ಬೆಳಗಾವಿಯಲ್ಲಿ ನಿವೇಶನಕ್ಕಾಗಿ ಮಹಿಳೆಯ ಬರ್ಬರ ಕೊಲೆಯಾಗಿದ್ದು, ನಿವೇಶನಕ್ಕಾಗಿ ರೌಡಿ ಶೀಟರ್ ತನ್ನ ತಮ್ಮನ ಹೆಂಡತಿಗೆ 20ಕ್ಕೂ ಹೆಚ್ಚು ಬಾರಿ ಚಾಕು ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ಟಿಳಕವಾಡಿಯಲ್ಲಿ ನಡೆದಿದೆ. ಬೆಳಗಾವಿ ನಗರದ ಟಿಳಕವಾಡಿಯ ಗೀತಾ ಗವಳಿ (45) ಎನ್ನುವ ಮಹಿಳೆಯನ್ನು ಗಣೇಶ ಎನ್ನುವ ವ್ಯಕ್ತಿ 20ಕ್ಕೂ ಹೆಚ್ಚು ಬಾರಿ ಚಾಕು ಇರಿದು ಕೊಲೆ ಮಾಡಿದ್ದಾನೆ. ಹಲವು ವರ್ಷಗಳ ಹಿಂದೆ ಗಣೇಶ್ ತಮ್ಮ ಅಂದರೆ ಕೊಲೆಯಾದ ಗೀತಾಳ ಪತಿ ಮೃತಪಟ್ಟಿದ್ದ. ಪತಿಗೆ ಸೇರಿದ 40×12 ನಿವೇಶನಕ್ಕಾಗಿ ರಂಜಿತ್ ಜೊತೆಗೆ ಜಗಳ ನಡೆದಿತ್ತು. ಇಂದು ಬೆಳಿಗ್ಗೆ ಮಾತಿನ ಚಕಮಕಿ ನಡೆದು ಗಣೇಶ್ ಗೀತಾಳಿಗೆ 20ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.ಆರೋಪಿ ಗಣೇಶ್ ಟಿಳಕವಾಡಿ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಆಗಿದ್ದು, ಸದ್ಯ ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಮಂಡ್ಯ : ಇಂದು ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿ ಸಾಮೂಹಿಕ ಗಣೇಶ ಮೂರ್ತಿ ವಿಸರ್ಜನೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಅಲ್ಲದೆ ಇಂದು ಮದ್ದೂರು ಪಟ್ಟಣದಲ್ಲಿ ಸ್ವಯಂಘೋಷಿತ ಬಂದ್ ನಡೆಸಲಾಗಿದ್ದು, ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಸಹ ಭಾಗಿಯಾಗಲಿದ್ದಾರೆ. ಮದ್ದೂರು ಪಟ್ಟಣದಲ್ಲಿ ಇಂದು ಸಹ ಸ್ವಯಂ ಘೋಷಿತ ಬಂದ್ ಮಾಡಲಾಗಿದ್ದು, ಮೂರನೇ ದಿನವೂ ಬಂದ್ ಮುಂದುವರಿಯಲಿದೆ. ಇಂದು ಸಾಮೂಹಿಕ ಗಣಪತಿ ವಿಸರ್ಜನೆ ಕಾರ್ಯಕ್ರಮ ಹಿನ್ನೆಲೆಯಲ್ಲಿ 20 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ. ಹಾಗಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರದಾಗಕ್ರಮವಾಗಿ 3000ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಅಂಗಡಿ ಮುಂಗಟ್ಟು ಮುಚ್ಚಿ ಸ್ವಯಂ ಘೋಷಿತ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
ಗಳೂರು : ಮಂಗಳೂರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅಮೆಜಾನ್ ಸುಗಂಧ ದ್ರವ್ಯ ಫ್ಯಾಕ್ಟರಿ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಬೆಳಿಗ್ಗೆ 5 ಗಂಟೆ ಸುಮಾರಿಗೆ ಈ ಒಂದು ಅಗ್ನಿ ಅವಘಡ ಸಂಭವಿಸಿದ್ದು ಮುಗಿಲತ್ತರಕ್ಕೆ ಬೆಂಕಿ ಹಬ್ಬಿದೆ. ಅಮೆಜಾನ್ ಸುಗಂಧ ದ್ರವ್ಯ ಕಾರ್ಖಾನೆಗೆ ಬೆಳಗಿನ ಜಾವ 5 ಗಂಟೆಗೆ ಅಗ್ನಿ ಅವಘಡ ಸಂಭವಿಸಿದೆ. ತಾಂತ್ರಿಕ ಸಮಸ್ಯೆಯಿಂದ ಈ ಒಂದು ಅಗ್ನಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ತಕ್ಷಣ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಮಂಡ್ಯ : ಇಂದು ಸಾಮೂಹಿಕ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಮದ್ದೂರಿಗೆ ಬಿಜೆಪಿ ನಾಯಕರ ತಂಡ ಭೇಟಿ ನೀಡಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಸಿ.ಟಿ.ರವಿ, ಪ್ರತಾಪ್ ಸಿಂಹ, ಛಲವಾದಿ ನಾರಾಯಸ್ವಾಮಿ, ಸುಮಲತಾ ಅಂಬರೀಶ್ ಸೇರಿದಂತೆ ಹಲವು ನಾಯಕರು ಭೇಟಿ ನೀಡಲಿದ್ದಾರೆ. ಸಾಮೂಹಿಕ ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಭಾಗಿಯಾಗಲಿದ್ದು, ಅದಕ್ಕೂ ಮುನ್ನ ಕಲ್ಲೆಸೆತದಲ್ಲಿ ಗಾಯಗೊಂಡವರ ಮನೆಗೆ ಭೇಟಿ ಕೊಡಲಿದ್ದಾರೆ. ಸ್ಥಳೀಯರಿಗೆ ಧೈರ್ಯ ತುಂಬಲಿರುವ ಕಮಲ ನಾಯಕರು, ನಂತರ ಲಾಠಿ ಚಾರ್ಜ್ ವೇಳೆ ಗಾಯಗೊಂಡವರ ಮನೆಗಳಿಗೂ ಭೇಟಿ ನೀಡಲಿದ್ದಾರೆ. ಬಿ.ವೈ.ವಿಜಯೇಂದ್ರರಿಂದ ಕಾಶಿವಿಶ್ವನಾಥನಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತೆ. ನಂತರ ಸಾಮೂಹಿಕ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಬಿಜೆಪಿ ನಾಯಕರು ಭಾಗಿಯಾಗಲಿದ್ದಾರೆ.a














