Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಆರ್ ಎಸ್ ಎಸ್ ನೂರು ವರ್ಷ ಭರ್ತಿ ಬೆನ್ನಲ್ಲೇ ಬಿಗ್ ಶಾಕ್ ಎದುರಾಗಿದ್ದು, ಆರ್ ಎಸ್ ಎಸ್ ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ಬ್ರಿಕ್ ಹಾಕುತ್ತಾ? ಎನ್ನುವ ಕುರಿತು ಚಿಂತನೆ ನಡೆಯುತ್ತಿದೆ. ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿರ್ಬಂಧದ ಬಗ್ಗೆ ಗಂಭೀರ ಚಿಂತನೆ ನಡೆಯುತ್ತಿದೆ. ಸಾರ್ವಜನಿಕ ಸರಕಾರಿ ಸ್ಥಳಗಳಲ್ಲಿ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸರಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಹೌದು ಆರ್ ಎಸ್ ಎಸ್ ಚಟುವಟಿಕೆಗಳಿಗೆ ಕಡಿವಾಣದ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಕೆಲವು ಸಚಿವರು ಪ್ರಸ್ತಾವನೆ ಸಲ್ಲಿಸಿದ್ದಾರೆ. ಶಾಲಾ ಕಾಲೇಜು ಆವರಣ, ಉದ್ಯಾನವನ, ಸರ್ಕಾರಿ ಮೈದಾನ, ವಿವಿಧ ಹಾಸ್ಟೆಲ್ ಕ್ಯಾಪಸ್ ಗಳಲ್ಲಿ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿರ್ಬಂಧಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಈಗಾಗಲೇ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ವಿವಿಧ ಹಾಸ್ಟೆಲ್ ಮತ್ತು ಕ್ಯಾಂಪಸ್ ಗಳಲ್ಲಿ ಬ್ರೇಕ್ ಹಾಕಲು ಸರ್ಕಾರ ಮುಂದಾಗಿದೆ. ಇದೆ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ…
ಬೆಂಗಳೂರು : ಮದುವೆಗೆ ನಿರಾಕರಿಸಿದ ಯುವತಿಯನ್ನು ಅಪಹರಿಸಿದ್ದ ಐವರನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ಬೆಂಗಳೂರಿನ ಸುಬ್ರಮಣ್ಯಪುರ ಠಾಣೆ ಪೋಲೀಸರು ಐವರು ಆರೋಪಗಳನ್ನು ಅರೆಸ್ಟ್ ಮಾಡಿದ್ದಾರೆ. ರಂಗನಾಥ, ರಾಜೇಶ್, ಚಂದನ್,ಶ್ರೇಯಸ್ ಹಾಗೂ ಮಂಜುನಾಥ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದ್ದು, ಮಾರಕಾಸ್ತ್ರ ಸಮೇತ ಆಟೋ ಬೈಕ್ ನಲ್ಲಿ ಬಂದು ಯುವತಿಯನ್ನು ಅಪಹರಿಸಿದ್ದಾರೆ. ಯುವತಿ ಅಪಹರಿಸಿದ್ಧ ಹನ್ನೆರಡು ಗಂಟೆಯೊಳಗೆ ಪೊಲೀಸರು ಆರೋಪಿಗಳ ಹೇಡೆಮುರಿ ಕಟ್ಟಿದ್ದಾರೆ. ಯುವತಿಯನ್ನು ರಕ್ಷಿಸಿ, ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಚಿಕ್ಕಲ್ಲಸಂದ್ರದಲ್ಲಿ ವಾಸವಿದ್ದ ಯುವತಿಯನ್ನು ಈ ಒಂದು ಗ್ಯಾಂಗ್ ಕಿಡ್ಯಾಪ್ ಮಾಡಿತ್ತು. ಬುಧವಾರ ಮನೆಯ ಬಳಿಗೆ ಯುವತಿಯನ್ನು ಕಿಡ್ನಾಪ್ ಮಾಡಿದ್ದರು. ಕಿಡ್ನಾಪ್ ಆಗಿದ್ದ ಯುವತಿಗೆ ಆರೋಪಿ ರಂಗನಾಥ್ ಪರಿಚಯವಿದ್ದ ಎನ್ನಲಾಗಿದೆ. ಬೈಕ್ ಮೆಕ್ಯಾನಿಕ್ ಆಗಿ ಆರೋಪಿ ರಂಗನಾಥ್ ಕೆಲಸ ಮಾಡುತ್ತಿದ್ದ. ಕೊಲೆ ಪ್ರಕರಣ ಒಂದರಲ್ಲಿ ಜೈಲಿಗೆ ಸಹ ಹೋಗಿ ಬಂದಿದ್ದ. ಜೈಲಿನಿಂದ ಬಂದ ನಂತರ ಮದುವೆಯಾಗುವಂತೆ ಯುವತಿಗೆ ಒತ್ತಡ ಹೇರಿದ್ದಾನೆ ಮನೆಯ ಬಳಿ ಹೋಗಿ ಗಲಾಟೆ ಮಾಡಿದ್ದಾನೆ. ಮದುವೆ ಮಾಡಿಕೊಡಲು ಯುವತಿ…
ಬೆಳಗಾವಿ : ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಈ ಒಂದು ಚುನಾವಣೆಯಲ್ಲಿ ರಮೇಶ್ ಕತ್ತಿ ಬಣಕ್ಕೆ ಬಿಗ್ ಶಾಕ್ ಆಗಿದೆ. ಏಕೆಂದರೆ ಜಾರಕಿಹೊಳಿ ಬಣದ ಆರು ಜನರು ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದು. 16 ನಿರ್ದೇಶಕ ಸ್ಥಾನಗಳ ಪೈಕಿ ಆರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚಿಕ್ಕೋಡಿಯಿಂದ ವಿಶ್ವಾಸ ವೈದ್ಯ, ಮೂಡಲಗೆಯಿಂದ ನೀಲಕಂಠ, ಸವದತ್ತಿ ಯಿಂದ ವಿರುಪಾಕ್ಷ ಮಾಮನೆ ಗೋಕಾಕ್ ನಿಂದ ಶಾಸಕ ರಮೇಶ ಜಾರಕಿಹೊಳಿ ಪುತ್ರ ಅಮರನಾಥ್ ಆಯ್ಕೆಯಾಗಿದ್ದು, ಬೆಳಗಾವಿಯಿಂದ ಸತೀಶ್ ಜಾರಕಿಹೊಳಿ ಪುತ್ರ ರಾಹುಲ್ ಜಾರಕಿಹೊಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಕ್ಟೋಬರ್ 13 ರಂದು ಚುನಾವಣಾಧಿಕಾರಿ ಅಧಿಕೃತವಾಗಿ ಚುನಾವಣಾ ಫಲಿತಾಂಶ ಘೋಷಣೆ ಮಾಡಲಿದ್ದಾರೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಕಚೇರಿ ಮುಭಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಲಾಗಿದೆ.
ರಾಯಚೂರು : ರೋಡ್ ಕ್ರಾಸ್ ವೇಳೆ ಬೈಕಿಗೆ ಕಾರು ಡಿಕ್ಕಿ ಆಗಿದೆ. ಈ ವೇಳೆ ಬೈಕ್ ಮುಂದಿನ ಸವಾರ ಸಾವನ್ನಪ್ಪಿದ್ದು, ಹಿಂಬದಿಯ ಸವಾರರನಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದ್ದು, 40 ವರ್ಷದ ವೀರೇಶ್ ಬೈಕ್ ಸವಾರ ಎಂದು ತಿಳಿದುಬಂದಿದೆ. ರಾಯಚೂರಿನ ಮಸ್ಕಿ ತಾಲೂಕಿನ ಸಂತೆಕಲೂರಿನಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಅಪಘಾತದ ಭೀಕರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪೆಟ್ರೋಲ್ ಹಾಕಿಸಿಕೊಂಡು ಮಸ್ಕಿ ಕಡೆಗೆ ಪ್ರಯಾಣಿಸುವಾಗ ಏಕಾಏಕಿ ವೇಗವಾಗಿ ಬಂದಂತಹ ಕಾರು ಡಿಕ್ಕಿ ಹೊಡೆದಿದೆ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ್ದು ಹಿಂಬದಿ ಸವಾರನಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ.
ಕಲಬುರ್ಗಿ : ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ ಒಂದು ಕೋಟಿಗೂ ಹೆಚ್ಚು ಲೂಟಿ ಹೊಡೆಯಲಾಗಿದೆ. ಗುಲ್ಬರ್ಗ ವಿಶ್ವವಿದ್ಯಾಲಯದ ಮತ್ತೊಂದು ಕರ್ಮಕಾಂಡ ಬಯಲಾಗಿದ್ದು, ಹಣಕಾಸು ವಿಭಾಗದ ಅಕೌಂಟೆಂಟ್ ನಿಂದ ಹಣ ಲೂಟಿಯಾಗಿದೆ. ತುರ್ತು ಭತ್ಯೆ ಹೆಸರಲ್ಲಿ ಸರ್ಕಾರದ ಬೊಕ್ಕಸಕ್ಕೆ ವಂಚನೆ ಎಸಗಿದ್ದಾನೆ. ವಿಶ್ವವಿದ್ಯಾಲಯದ ಅಕೌಂಟೆಂಟ್ ಶರಣು ಹೂಗಾರ ವಿರುದ್ಧ ಈ ಒಂದು ಆರೋಪ ಕೇಳಿ ಬಂದಿದೆ. ಸಿಬ್ಬಂದಿಗೆ ಸಂಬಳದ ಜೊತೆಗೆ ಹೆಚ್ಚುವರಿ ತುರ್ತು ಭತ್ಯೆ ಹಾಕುತ್ತಿದ್ದ ತಪ್ಪಾಗಿ ಬಂದಿದೆ ಅಂತ ತನ್ನ ಖಾತೆಗೆ ವಾಪಸ್ ಹಾಕಿಸಿಕೊಳ್ಳುತ್ತಿದ್ದ. ಈ ರೀತಿ ಪ್ಲಾನ್ ಮಾಡಿ ಸರ್ಕಾರದ ಬೊಕ್ಕಸಕ್ಕೆ ಒಂದು ಕೋಟಿಗೂ ಹೆಚ್ಚು ಹಣ ಲೂಟಿ ಮಾಡಿ ವಂಚನೆ ಎಸಗಿದ್ದಾನೆ. ಹೊರಗುತ್ತಿಗೆ ಆಧಾರದಲ್ಲಿ ಟೆಕ್ನಿಷಿಯನ್ ಆಗಿ ಈತ ಕೆಲಸಕ್ಕೆ ಸೇರಿದ್ದ.10 ವರ್ಷಗಳಿಂದ ಹಣಕಾಸು ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಹಣ ಲೂಟಿ ಬೆಳಕಿಗೆ ಬರಿತ್ತೀದ್ದ ಹಾಗೆ ವಿಶ್ವವಿದ್ಯಾಲಯದಿಂದ ಈತನನ್ನು ಕಿಕ್ ಔಟ್ ಮಾಡಲಾಗಿದೆ. ವಿಶ್ವವಿದ್ಯಾಲಯ ಆಡಳಿತ ಮಂಡಳಿ ಹೊರಹಾಕಿದೆ.
ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಕೃತ್ಯ ನಡೆದಿದ್ದು, ಬೆಂಗಳೂರಲ್ಲಿ ಅಪಾರ್ಟ್ಮೆಂಟ್ ನಲ್ಲಿ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ವರದಿಯಾಗಿದೆ. ಬೆಂಗಳೂರು ನಗರದ ಹೊರವಲಯದಲ್ಲಿರುವ ಅಪಾರ್ಟ್ಮೆಂಟಲ್ಲಿ ಈ ಒಂದು ಕೃತ್ಯ ನಡೆದಿದ್ದು, ಬಾಲಕೀಯ ಅಂಗಾಂಗ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಅಪಾರ್ಟ್ಮೆಂಟ್ ನಿವಾಸಿ ಪರಿಚಿತನಿಂದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ. ತನ್ನ ಮೇಲೆ ನಡೆದ ಲೈಂಗಿಕ ದೋಷದಿಂದ ಬಗ್ಗೆ ಬಾಲಕಿ ತಾಯಿಗೆ ಮಾಹಿತಿ ನೀಡಿದ್ದಾಳೆ. ಈ ವೇಳೆ ಅಪಾರ್ಟ್ಮೆಂಟ್ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ಪೊಲೀಸರು ಆರೋಪಿಯನ್ನು ಕೋರ್ಟಿಗೆ ಹಾಜರುಪಡಿಸಿ ಜೈಲಿಗೆ ಅಟ್ಟಿದ್ದಾರೆ.
ಬೆಂಗಳೂರು : ಬೆಂಗಳೂರಲ್ಲಿ ಕಿಲ್ಲರ್ ಬಿಎಂಟಿಸಿಗೆ ಇಂದು ವಿದ್ಯಾರ್ಥಿನಿಯೊಬ್ಬಳು ಬಲಿಯಾಗಿದ್ದಾಳೆ. 9 ವರ್ಷದ ಭಾವನಾ ಎಂಬ ವಿದ್ಯಾರ್ಥಿನೀ ಮೇಲೆ ಬಿಎಂಟಿಸಿ ಬಸ್ ಹರಿದು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ರಾಜಾಜಿನಗರದಲ್ಲಿ ನಡೆದಿದೆ. ಇದರ ಬೆನ್ನಲ್ಲೆ ಇದೀಗ ಬಿಎಂಟಿಸಿ ಚಾಲಕ ಮತ್ತೊಂದು ಯಡವಟ್ಟು ಮಾಡಿರುವ ಘಟನೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದಿದೆ. ಹೌದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸರಣಿ ಅಪಘಾತ ಸಂಭವಿಸಿ ಏಕಾಏಕಿ ಬಂದು 9 ವಾಹನಗಳಿಗೆ ಬಸ್ ಚಾಲಕ ಡಿಕ್ಕಿ ಹೊಡೆದಿದ್ದಾನೆ. ಚಿನ್ನಸ್ವಾಮಿ ಕ್ರೀಡಾಂಗಣದ 9ನೇ ಈ ಒಂದು ಸರಣಿ ಅಪಘಾತ ಸಂಭವಿಸಿದ್ದು, ಬಿಎಂಟಿಸಿ ಬಸ್ ಚಾಲಕನಿಗೆ ಪಿಡ್ಸ್ ಬಂದಿದ್ದರಿಂದ ಈ ಒಂದು ಅಪಘಾತ ಸಂಭವಿಸಿದೆ. ಘಟನೆಯಲ್ಲಿ 3 ಆಟೋ 3 ಕಾರು ಹಾಗೂ ಬೈಕ್ಗಳಿಗೆ ಬಸ್ ಡಿಕ್ಕಿ ಹೊಡೆದಿದೆ. ಒಂದು ಆಟೋ ಸಂಪೂರ್ಣ ಸ್ಥಿತಿ ಗಂಭೀರವಾಗಿದೆ. ಬಿಎಂಟಿಸಿ ಬಸ್ ಚಾಲಕನನ್ನು ಕೂಡ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಘಟಕಕ್ಕೆ ಕಬ್ಬನ್ ಪಾರ್ಕ್ ಅಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳೂರು : ಮಂಗಳೂರಿನಲ್ಲಿ ಕೇರಳ ಚಲನಚಿತ್ರ ನಟ ಜಯಕೃಷ್ಣನನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ಉರ್ವ ಠಾಣೆ ಪೊಲೀಸರು ನಟ ಜಯಕೃಷ್ಣನನನ್ನು ಅರೆಸ್ಟ್ ಮಾಡಿದ್ದಾರೆ. ನಟ ಜಯಕೃಷ್ಣನ ಸರಿ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಕ್ಯಾಬ್ ಚಾಲಕನನ್ನು ಟೆರರಿಸ್ಟ್ ಎಂದು ಬೈದಿದಕ್ಕೆ ಎಫ್ ಐ ಆರ್ ದಾಖಲಾಗಿತ್ತು. ನಟ ಜಯಕೃಷ್ಣನ ಸೇರಿ ಮೂವರ ವ್ರಿಗೆವಿರುದ್ಧ ಕೇಸ್ ದಾಖಲು ಮಾಡಲಾಗಿತ್ತು. ಮಂಗಳೂರು ಸೆಪ್ಟೆಂಬರ್ 9 ರಂದು ಆಪ್ ಮೂಲಕ ಕ್ಯಾಬ್ ಮಾಡಿದ್ದಾನೆ. ನಟ ಜಯ ಕೃಷ್ಣನ್ ಸಂತೋಷ್ ಮತ್ತು ಅಬ್ರಹಾಂ ಅಪಹಾಸ್ಯ ಮಾಡಿರುವ ಆರೋಪ ಕೇಳಿ ಬಂದಿದೆ. ಹಿಂದಿ ಮಲಯಾಳಂ ಭಾಷೆಯಲ್ಲಿ ಆವಾಜಿ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ಬಿಎನ್ಎಸ್ 352 353 (2)ರ ಅಡಿ ಪ್ರಕರಣ ದಾಖಲಾಗಿತ್ತು.
ಬೆಂಗಳೂರು : ಬೆಂಗಳೂರಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದೆ. ವಿದ್ಯಾರ್ಥಿನಿಯ ಮೇಲೆ ಬಿಎಂಟಿಸಿ ಬಸ್ ಹರಿದು ಸ್ಥಳದಲ್ಲೇ ವಿದ್ಯಾರ್ಥಿನೀ ಸಾವನ್ನಪ್ಪಿರುವ ಘಟನೆ ರಾಜಾಜಿನಗರದ ಒಂದನೇ ಬ್ಲಾಕ್ ನಲ್ಲಿ ನಡೆದಿದೆ. Bmtc ಬಸ್ ಹರಿದು 9 ವರ್ಷದ ವಿದ್ಯಾರ್ಥಿನಿ ರಸ್ತೆಯಲ್ಲಿ ತೆರಳುತ್ತಿದ್ದಾಗ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಈ ವೇಳೆ ಸ್ಥಳೀಯರು ತಕ್ಷಣ ಬದುಕಿಸುವ ಪ್ರಯತ್ನ ಮಾಡಿದರು ಕೂಡ ಯಾವುದೇ ಪ್ರಯತ್ನ ಸಫಲವಾಗಲಿಲ್ಲ. ಸ್ಥಳದಲ್ಲಿ ವಿದ್ಯಾರ್ಥಿನಿ ಸಾವನಪ್ಪಿದ್ದಾಳೆ.
ಬಳ್ಳಾರಿ : ರಾಜ್ಯದಲ್ಲಿ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗಿದ್ದು, ಈಗಾಗಲೇ ಸಮೀಕ್ಷೆ ಮುಗಿಯದ ಹಿನ್ನೆಲೆಯಲ್ಲಿ ಅಕ್ಟೋಬರ್ 13 ರವರೆಗೆ ಸಮೀಕ್ಷೆ ಅವಧಿಯನ್ನು ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿತ್ತು.ಇದೀಗ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಗೈರು ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.














