Author: kannadanewsnow05

ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ನಿನ್ನ ಸಹ ಬಿಎಂಟಿಸಿ ಬಸ್ ಯುವತಿಯ ಮೇಲೆ ಹರಿದು ಸ್ಥಳದಲ್ಲಿ ಯುವತಿ ಸಾವನಪ್ಪಿರುವ ಘಟನೆ ವರದಿಯಾಗಿದೆ. ಬೆಂಗಳೂರಿನ ಟಿನ್ ಫ್ಯಾಕ್ಟರಿ ಬಳಿ ಈ ಒಂದು ಘಟನೆ ನಡೆದಿದೆ. ಹೌದು ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ಗೆ ಮತ್ತೊಂದು ಮತ್ತೊಂದು ಬಲಿಯಾಗಿದೆ. ಬೈಕ್ ಮೇಲೆ ಹೋಗುತ್ತಿದ್ದವರಿಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಬ್ಯಾಲೆನ್ಸ್ ತಪ್ಪಿ ಬಸ್ ಚಕ್ರದ ಅಡಿ ಯುವತಿ ಬಿದ್ದಿದ್ದಾಳೆ. ಆಗ ಯುವತಿಯ ತಲೆಯ ಮೇಲೆ ಬಸ್ ಚಕ್ರ ಹರಿದು ಹೋಗಿದೆ. ನಿನ್ನೆ ಬೆಳಿಗ್ಗೆ 9:30 ಸುಮಾರಿಗೆ ಈ ಒಂದು ಘಟನೆ ನಡೆದಿದ್ದು ಮೃತ ಯುವತಿಯನ್ನ ಮಣಿಪುರದ ಹನ್ನಾ ಇನಕ (20) ಎಂದು ತಿಳಿದು ಬಂದಿದೆ

Read More

ಮೈಸೂರು : ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಲಾರಿ ಹರಿದು ಬೈಕ್ನಲ್ಲಿ ಇದ್ದ ಇಬ್ಬರೂ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಇದೀಗ ವರದಿಯಾಗಿದೆ. ನಂಜನಗೂಡಿನ ಹಣಮನ ಪುರ ಗೇಟುವಳಿ ಒಂದು ಅಪಘಾತ ಸಂಭವಿಸಿದ್ದು, ಚಂದ್ರು (38) ಶೀಲ (35) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಚುಂಚನಹಳ್ಳಿ ಕಡೆಗೆ ತೆರಳುವಾಗ ಗೊಬ್ಬರ ತುಂಬಿದ ಲಾರಿ ಡಿಕ್ಕಿ ಹೊಡೆದಾಗ ಲಾರಿ ಬೈಕ್ ಮೇಲೆ ಹರಿದು ಸ್ಥಳದಲ್ಲೇ ಇಬ್ಬರು ಸಾವನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ರಘು ಸಿಪಿಐ ಚಂದ್ರಶೇಖರ್ ಭೇಟಿ ನೀಡಿ ಪರಿಶೀಲನೆ ಮಾಡಿದರು.

Read More

ಕೋಲಾರ : ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಭೂಸಾಲಕುಂಟೆ ಕೆರೆಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ. ನವಜಾತ ಗಂಡು ಮಗುವಿನ ಶವ ಪತ್ತೆಯಾಗಿದೆ. ಆಗತಾನೆ ಜನಿಸಿದ ನವಜಾತ ಮಗುವನ್ನು ಕೆರೆಯಲ್ಲಿ ಬಿಸಾಡಿ ಹೋಗಿರುವ ಶಂಕೆ ವ್ಯಕ್ತವಾಗುತ್ತಿದೆ. ಘಟನ ಸ್ಥಳಕ್ಕೆ ಮುಳಬಾಗಿಲು ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಶಂಕಿತ ಭಯೋತ್ಪಾದಕ ಸಾವನಪ್ಪಿದ್ದಾನೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ತಡರಾತ್ರಿ ಸಾಧಿಕ್ ಪಾಷಾ (47) ಇದೀಗ ಸಾವನಪ್ಪಿದ್ದಾನೆ. ಕಳೆದ ಆರು ತಿಂಗಳಿನಿಂದ ಲೋ ಬಿಪಿ ಮತ್ತು ಹೈ ಶುಗರ್ ಸೇರಿದಂತೆ ಕೆಲ ಅನಾರೋಗ್ಯ ಸಮಸ್ಯೆಯಿಂದ ಶಂಕಿತ ಭಯೋತ್ಪಾದಕ ಬಳಲುತ್ತಿದ್ದ. ಕಳೆದ 2020 ರಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಇದ್ದ. ಸುದ್ದಗುಂಟೆಪಾಳ್ಯ ಸ್ಪೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಜೈಲು ಸೇರಿದ್ದ. ಪ್ರಕರಣ ಸಂಬಂಧ NIA ಅಧಿಕಾರಿಗಳು ಸಾಧಿಕ್ ಪಾಶ ಸೇರಿದಂತೆ 6 ಶಂಕಿತರನ್ನು ಅರೆಸ್ಟ್ ಮಾಡಿದ್ದರು. ಬೆಂಗಳೂರಿನ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು.

Read More

ಕಲಬುರ್ಗಿ : ಮಸೀದಿ ಕಮಿಟಿ ಅಧ್ಯಕ್ಷ ಸ್ಥಾನದ ವಿಚಾರವಾಗಿ ಕಲ್ಬುರ್ಗಿಯಲ್ಲಿ ಎರಡು ಗುಂಪುಗಳ ನಡುವೆ ತೀವ್ರ ಗಲಾಟೆ ನಡೆದಿದೆ. ಪೊಲೀಸರ ಎದುರಿನಲ್ಲಿಯೇ ಮನೆಯ ಮೇಲೆ ಕಲ್ಲುತೂರಾಟ ನಡೆಸಿರುವ ಘಟನೆ ನಡೆದಿದೆ. ಕಲ್ಲು ತೂರಾಟದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗಲಾಟೆಯಲ್ಲಿ ಓರ್ವ ಮಹಿಳೆಗೆ ಗಂಭೀರವಾದ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲಬುರ್ಗಿ ನಗರದ ಬುಲಂದ್ ಪರವೇಜ್ ಕಾಲೋನಿಯಲ್ಲಿ ಈ ಒಂದು ಗಲಾಟೆ ನಡೆದಿದೆ. ಮಸೀದಿ ಅಧ್ಯಕ್ಷರಾಗಿದ್ದ ನೈಮ್ ಖಾನ್ ಅವಧಿ ಮುಕ್ತಾಯವಾಗಿತ್ತು ಅವಧಿ ಮುಗಿದರು ಕೂಡ ಅಧ್ಯಕ್ಷ ಸ್ಥಾನ ಬಿಟ್ಟುಕೊಡದ ಹಿನ್ನೆಲೆಯಲ್ಲಿ ಗಲಾಟೆಯಾಗಿದೆ. ನಯಿಮ್ ಖಾನ್ ಸುಫಿಯಾ ಕುಟುಂಬದ ನಡುವೆ ಈ ಒಂದು ಗಲಾಟೆ ನಡೆದಿದೆ. ಒಂದು ಕಡೆ ಸುಫಿಯ ಮನೆಯ ಮೇಲೆ ಕಲ್ಲುತೂರಾಟ ನಡೆಸಿ ಹಲ್ಲೆ ನಡೆಸಿದ್ದಾರೆ ಎಂದು ನಯಿಮ್ ಖಾನ್ ಕಡೆಯವರ ವಿರುದ್ಧ ಹಲ್ಲೆ ಮತ್ತು ಕಲ್ಲುತೂರಾಟ ಆರೋಪ ಕೇಳಿಬಂದಿದೆ. ಇನ್ನೊಂದು ಕಡೆ ಮನೆಯಲ್ಲಿ ಇದ್ದಂತಹ ಹೆಣ್ಣು ಮಕ್ಕಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನಯೀಮ್ ಖಾನ್ ಕೂಡ…

Read More

ಹಾವೇರಿ : ಹಾವೇರಿ ಜಿಲ್ಲೆಯ ರಾಣಿಬೆನ್ನೂರು ಪಟ್ಟಣದಲ್ಲಿ ಒಂದೇ ದಿನ 20ಕ್ಕೂ ಹೆಚ್ಚು ಜನರ ಮೇಲೆ ಹುಚ್ಚು ನಾಯಿಯೊಂದು ದಾಳಿ ಮಾಡಿವೆ. ಗಾಯಗೊಂಡವರನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕ್ಕಚಿ ನೀಡಲಾಗುತ್ತಿದೆ. ದಾಳಿಯ ವೇಳೆ ಒಂದು ವರ್ಷದ ಮಗುವಿನ ಮೇಲು ಕೂಡ ಹುಚ್ಚು ನಾಯಿ ದಾಳಿ ಮಾಡಿದ್ದು, ಒಂದು ವರ್ಷದ ಮಗು ಸೇರಿದಂತೆ ಐವರಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹುಚ್ಚುನಾಯಿ ಹಿಡಿಯುವಂತೆ ಸಾರ್ವಜನಿಕರು ಒತ್ತಾಯ ಮಾಡಿದ್ದಾರೆ.

Read More

ಬೀದರ್ : ಈಗಾಗಲೇ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಚರ್ಚೆ ಜೋರಾಗಿದ್ದು ಒಂದು ಕಡೆ ಐದು ವರ್ಷಗಳ ಕಾಲ ನಮ್ಮ ತಂದೆಯೇ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡುತ್ತಿದ್ದರೆ ಮತ್ತೊಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ ಆಪ್ತರು ಎರಡು ಬಾರಿ ಚಾನ್ಸ್ ಮಿಸ್ ಆಗಿರಬಹುದು ಆದರೆ ಮೂರನೇ ಬಾರಿ ಮಿಸ್ ಆಗಲ್ಲ ಎಂದು ಸಿಎಂ ಕುರ್ಚಿಗಾಗಿ ವಾಕ್ಸಮರ ನಡೆಯುತ್ತಿದೆ. ಈ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಯತೀಂದ್ರ ಅವರೇ ನಮ್ಮ ಹೈಕಮಾಂಡ್ ಎಂದು ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಗೆ ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಏನೇ ಆಗಿದ್ದರೂ ಹೈಕಮಾಂಡ್ ಹೈಕಮಾಂಡೆ. ಅವರ ನಿರ್ಧಾರವೇ ಅಂತಿಮ ಪಕ್ಷದ ಎಲ್ಲರೂ ಕೂಡ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿದ್ದೇವೆ. ಮೊನ್ನೆ ಕೂಡ ಅದನ್ನೇ ಹೇಳಿದ್ದೇನೆ ಹಾಗಾಗಿ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಹೇಳಿದ್ದೇನೆ. ಆದರೆ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಸಹ ಹೇಳಿದ್ದೇನೆ. ಎಲ್ಲಾ ಪಕ್ಷಗಳಲ್ಲೂ ಮುಖ್ಯಮಂತ್ರಿ ಆಕಾಂಕ್ಷಿಗಳು ಬೇಕಾದಷ್ಟು ಇರುತ್ತಾರೆ.…

Read More

ಹಾಸನ : ಈಗಾಗಲೇ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಚರ್ಚೆ ಜೋರಾಗಿದ್ದು ಒಂದು ಕಡೆ ಐದು ವರ್ಷಗಳ ಕಾಲ ನಮ್ಮ ತಂದೆಯೇ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡುತ್ತಿದ್ದರೆ ಮತ್ತೊಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ ಆಪ್ತರು ಎರಡು ಬಾರಿ ಚಾನ್ಸ್ ಮಿಸ್ ಆಗಿರಬಹುದು ಆದರೆ ಮೂರನೇ ಬಾರಿ ಮಿಸ್ ಆಗಲ್ಲ ಎಂದು ಸಿಎಂ ಕುರ್ಚಿಗಾಗಿ ವಾಕ್ಸಮರ ನಡೆಯುತ್ತಿದೆ. ಇದೀಗ “ಗಟ್ಟುಂಡ ಯೋಗಿ ಅಟ್ಟುಂಡ ರಾಯ ಜಟ್ಟಿಯಂತೆ ಮೆಟ್ಟಿ ಮಂತ್ರಿಯ ಪದವಿಗೆ ಅಟ್ಟಿ ಬರುವನೋ ಡಿಕೆಶಿ” ಎಂದು ಗಜೇಂದ್ರಗಡದ‌ ತಳ್ಳಿಹಾಳ ಸಂಸ್ಥಾನ, ಕೋಡಿಮಠದ ಕಾಲಜ್ಞಾನ ಬ್ರಹ್ಮ ಸದ್ಗುರು ವಿಶ್ವಕಾಲಜ್ಞಾನ ಶಿವಯೋಗಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.ಈ ಹೇಳಿಕೆಯು ಕರ್ನಾಟಕದ ರಾಜಕೀಯದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮುಂದಿನ ಪ್ರಭಾವದ ಬಗ್ಗೆ ಸುಳಿವು ನೀಡುತ್ತದೆ. ಈ ಭವಿಷ್ಯವಾಣಿಯ ಅರ್ಥ! * ಗಟ್ಟುಂಡ ಯೋಗಿ : ಇದು ಬಲಶಾಲಿ ಅಥವಾ ಗಟ್ಟಿಯಾದ ಯೋಗಿಯನ್ನು ಸೂಚಿಸುತ್ತದೆ, ಅವರು ರಾಜಕೀಯ ಭವಿಷ್ಯ ನುಡಿದಿದ್ದಾರೆ. *…

Read More

ಹಾಸನ : ಈಗಾಗಲೇ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಚರ್ಚೆ ಜೋರಾಗಿದ್ದು ಒಂದು ಕಡೆ ಐದು ವರ್ಷಗಳ ಕಾಲ ನಮ್ಮ ತಂದೆಯೇ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡುತ್ತಿದ್ದರೆ ಮತ್ತೊಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ ಆಪ್ತರು ಎರಡು ಬಾರಿ ಚಾನ್ಸ್ ಮಿಸ್ ಆಗಿರಬಹುದು ಆದರೆ ಮೂರನೇ ಬಾರಿ ಮಿಸ್ ಆಗಲ್ಲ ಎಂದು ಸಿಎಂ ಕುರ್ಚಿಗಾಗಿ ವಾಕ್ಸಮರ ನಡೆಯುತ್ತಿದೆ. ಇದೀಗ ಮುಂಬರುವ ದಿನಮಾನಗಳಲ್ಲಿ ಕರ್ನಾಟಕ ಮಾತ್ರವಲ್ಲದೇ ದೇಶದ ರಾಜಕೀಯದಲ್ಲಿಯೇ ದೊಡ್ಡ ಪರಿವರ್ತನೆಗಳು ನಡೆಯಲಿದ್ದು, ಹಾಸನ ಜಿಲ್ಲೆಯೇ ಮತ್ತೆ ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ಪ್ರಮುಖ ಪಾತ್ರ ವಹಿಸುವ ದಿನಗಳು ದೂರವಿಲ್ಲ. ಪ್ರಧಾನಿಯಾಗಲಿ ಅಥವಾ ಮುಖ್ಯಮಂತ್ರಿಯಾಗಲಿ ಹಾಸನದೊಳಗಿಂದಲೇ ಹೊರಬರುವ ಸಾಧ್ಯತೆ ಇದೆ ಎಂದು ಗಜೇಂದ್ರಗಡದ‌ ತಳ್ಳಿಹಾಳ ಸಂಸ್ಥಾನ, ಕೋಡಿಮಠದ ಕಾಲಜ್ಞಾನ ಬ್ರಹ್ಮ ಸದ್ಗುರು ವಿಶ್ವಕಾಲಜ್ಞಾನ ಶಿವಯೋಗಿ ಭವಿಷ್ಯ ನುಡಿದಿದ್ದಾರೆ. ಬರುವ ದಿನಮಾನಗಳಲ್ಲಿ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಅವನ ಮನೆತನಕ್ಕೆ ಅಂಟಿಕೊಂಡಿರುವ ಕಪ್ಪುಚುಕ್ಕಿ ಹೊರಗೆ ಬರುತ್ತದೆ. ಹಳ್ಳಿ ಹಳ್ಳ ತುಂಬಿ…

Read More

ಬೆಂಗಳೂರು : ಅಪ್ರಾಪ್ತೆ ಮೇಲೆ ಅತ್ಯಾಚಾರ, ಕೊಲೆ ಮಾಡಿದವರ ಶಿಕ್ಷೆ ಕಡಿಮೆಗೊಳಿಸಿದರೆ ಕೃತ್ಯ ಪ್ರೋತ್ಸಾಹಿಸಿದಂತೆ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಅಪ್ರಾಪ್ತೆಯನ್ನು ಅತ್ಯಾಚಾರವೆಸಗಿ, ಕೊಲೆ ಮಾಡಿದ ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆಯನ್ನು ದೃಢೀಕರಿಸಿ ಹೈಕೋರ್ಟ್ ಆದೇಶಿಸಿದೆ. ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್ ಮತ್ತು ನ್ಯಾಯಮೂರ್ತಿ ವೆಂಟಕೇಶ್ ಟಿ.ನಾಯ್ಕ್ ಅವರಿದ್ದ ನ್ಯಾಯಪೀಠ, ವಿಚಾರಣಾ ನ್ಯಾಯಾಲಯ ವಿಧಿಸಿರುವ ಗಲ್ಲು ಶಿಕ್ಷೆಯನ್ನು ಖಾಯಂಗೊಳಿಸಿ, ಶಿಕ್ಷೆ ರದ್ದು ಕೋರಿ ಅಪರಾಧಿಗಳು ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿ ಆದೇಶಿಸಿದೆ. ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ದೃಢೀಕರಣಕ್ಕಾಗಿ ರಾಜ್ಯ ಸರ್ಕಾರ ಮತ್ತು ವಿಚಾರಣಾ ನ್ಯಾಯಾಲಯದ ಶಿಕ್ಷೆ ರದ್ದು ಕೋರಿ ಅಪರಾಧಿಗಳಾದ ಮಧ್ಯಪ್ರದೇಶದ ಜೈಬನ್ ಆದಿವಾಸಿ, ಮುಖೇಶ್ ಸಿಂಗ್ ಮತ್ತು ಜಾರ್ಖಂಡ್​ನ ಮನೀಶ್ ತಿರ್ಕಿ ಎಂಬವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಪ್ರಕರಣ ಹಿನ್ನೆಲೆ ಮಂಗಳೂರಿನ ವಾಮಂಜೂರು ಬಳಿ ಟೈಲ್ಸ್ ಕಾರ್ಖಾನೆಯಲ್ಲಿ ಮೂವರು ಆರೋಪಿಗಳು ಕಾರ್ಮಿಕರಾಗಿದ್ದರು. ಅದೇ ಕಾರ್ಖಾನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮಹಿಳೆಯ 8 ವರ್ಷದ ಅಪ್ರಾಪ್ತ…

Read More