Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಉದ್ಯಮಿಯೊಬ್ಬರನ್ನು ಅಪಹರಿಸಿ ಹಣ ಸುಲಿ ಮಾಡಿದ್ದ ಪ್ರಕರಣದ ಆರೋಪಿಯ ಬಂಧನಕ್ಕೆ ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದಡಿ ಮಾಜಿ ರೌಡಿಶೀಟರ್ ಯಶಸ್ವಿನಿ ಗೌಡ (47) ಅವರನ್ನು ಸಿಸಿಬಿಯ ಸಂಘಟಿತ ಅಪರಾಧ ನಿಯಂತ್ರಣ ದಳದ ಪೊಲೀಸರು ಬಂಧಿಸಿದ್ದಾರೆ. ಉದ್ಯಮಿ ಮನೋಜ್ ಕುಮಾರ್ ಅವರಿಗೆ ಪರಿಚಿತನಾಗಿದ್ದ ರಾಜೇಶ್ ಖ್ಯಾತ ಸಿನಿಮಾ ನಿರ್ದೇಶಕರೊಬ್ಬರಿಗೆ 1.20 ಲಕ್ಷ ರೂಪಾಯಿ ಸಾಲ ಕೊಡಿಸಿದ್ದ. ಆದರೆ ಒಂದು ವರ್ಷ ಕಳೆದರೂ ಸಾಲದ ಹಣವನ್ನು ನಿರ್ದೇಶಕ ಹಿಂತಿರುಗಿಸದಿದ್ದಾಗ ರಾಜೇಶ್ ಮೇಲೆ ಮನೋಜ್ ಕುಮಾರ್ ಒತ್ತಡ ಹೇರಿದ್ದರು. ಆಗಸ್ಟ್ 26ರಂದು ಸಂಜೆ 6.30ಕ್ಕೆ ಹಣ ಕೊಡುವುದಾಗಿ ರಾಜಾಜಿನಗರದ ಮೋದಿ ಆಸ್ಪತ್ರೆ ಸರ್ಕಲ್‌ಗೆ ಮನೋಜ್ ಕುಮಾರ್ ಅವರನ್ನು ರಾಜೇಶ್ ಕರೆಸಿಕೊಂಡಿದ್ದ. ಬಳಿಕ ದೊಡ್ಡವರು ಹಣ ಕೊಡುತ್ತಾರೆ ಎಂದು ಕಾರಿಗೆ ಕೂರಿಸಿಕೊಂಡು ಕರೆದುಕೊಂಡು ಹೋಗಿದ್ದ. ಮಾರ್ಗ ಮಧ್ಯೆ ಮನೋಜ್ ಕುಮಾರ್ ಅವರನ್ನು ಮತ್ತೊಂದು ಕಾರಿನಲ್ಲಿ ಕೂರಿಸಿಕೊಂಡು ಆರೋಪಿಗಳು ಅಪಹರಿಸಿದ್ದರು. ನಗರದ ವಿವಿಧೆಡೆ ಸುತ್ತಾಡಿಸಿದ ಬಳಿಕ ಡ್ಯಾಗರ್ ತೋರಿಸಿ, ಬೆದರಿಸಿ ಮನೋಜ್ ಅವರ ಎರಡು…
ಚಿಕ್ಕಬಳ್ಳಾಪುರ : ಇತ್ತೀಚಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅಶ್ಲೀಲ ನಿಂದಿಸಿದ್ದು ಅಲ್ಲದೆ ಬೆದರಿಕೆ ಹಾಕಿರುವ ಪ್ರಕರಣ ನಡೆದಿತ್ತು. ಇದೀಗ ಮತ್ತೊಬ್ಬ ಕಾಂಗ್ರೆಸ್ ಮುಖಂಡ ಶಿಕ್ಷಕರಿಗೆ ನಿಂದಿಸಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಹೌದು ಶಿಕ್ಷಕ ಶುಭಾಶೇಕರ್ ಎಂಬವರಿಗೆ ಕಾಂಗ್ರೆಸ್ ಮುಖಂಡ ನಾಗೇಶ್ ರೆಡ್ಡಿ ಅಶ್ಲೀಲವಾಗಿ ನಿಲ್ಲಿಸಿದ್ದಾನೆ. ಮತದಾರರ ಪಟ್ಟಿ ಪರಿಷ್ಕರಣೆಯ ವೇಳೆ ಶಿಕ್ಷಕನಿಗೆ ಬೆದರಿಕೆ ಹಾಕಿದ್ದಾನೆ. ಒಂದು ಪಕ್ಷದ ಹಿಂಬಾಲಕನಾಗಿದ್ದೀಯ ಎಂದು ಶಿಕ್ಷಕನಿಗೆ ಆವಾಜ್ ಹಾಕಿದ್ದಾನೆ. ಅವಾಜ್ ಹಾಕಿದ್ದು ಅಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಕರ್ನಾಟಕ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿವಶಂಕರ್ ಹಿಂದಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಮೈಸೂರು : ನಾಯಕತ್ವ ಬದಲಾವಣೆ ವಿಚಾರವಾಗಿ ಚರ್ಚೆ ನಡೆಯುತ್ತಿರುವಾಗಲೇ ಯತೀಂದ್ರ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ ನೀಡಿದ್ದು, 5 ವರ್ಷಗಳ ಕಾಲ ನಮ್ಮ ತಂದೆಯೇ ಸಿಎಂ ಎಂದು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎಂದು ಸ್ಪೋಟಕ ಹೇಳಿಕೆ ನೀಡಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಯಾರೋ ಕೆಲವರು ನಾಯಕತ್ವ ಬದಲಾವಣೆಗೆ ಪ್ರಯತ್ನಿಸಿದ್ದರು. ಆ ಪ್ರಯತ್ನಕ್ಕೆ ಹೈಕಮಾಂಡ್ ಸೊಪ್ಪು ಹಾಕಿಲ್ಲ. ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿ ಆಗಿ ಅಧಿಕಾರ ನಡೆಸ್ತಾರೆ. ಪಕ್ಷದಲ್ಲಿ ಈಗ ಎಲ್ಲೂ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಆಗ್ತಿಲ್ಲ. ಮಾಧ್ಯಮಗಳಲ್ಲಿ ಮಾತ್ರ ನಾಯಕತ್ವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ನಮ್ಮಲ್ಲಿ ಈಗ ಯಾವುದೇ ಗೊಂದಲ ಇಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
ಬೆಳಗಾವಿ : ರಾಜ್ಯದ ಯಜಮಾನಿಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಿಹಿ ಸುದ್ದಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತು ಹಣ ಬಿಡುಗಡೆಯಾಗಿದೆ ಎಂದು ತಿಳಿಸಿದರು. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್ ಇದುವರೆಗೂ ಫಲಾನುಭವಿಗಳಿಗೆ 26 ಕಂಚಿನ ಹಣ ಬಿಡುಗಡೆಯಾಗಿದೆ ಎಂದು ತಿಳಿಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮರಗಳ ಮರಣ ಹೋಮ ವಿಚಾರವಾಗಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್, ಪ್ರಧಾನಮಂತ್ರಿಗಳ ಯೋಜನೆಯಲ್ಲಿ 600 ಎಕರೆ ಗುರುತಿಸಿದ್ದಾರೆ. ಜಾಗವನ್ನು ಕೊಟ್ಟಿರುವುದು ನನಗೆ ಗೊತ್ತಿರಲಿಲ್ಲ. ಮಾಧ್ಯಮಗಳಲ್ಲಿ ಸುದ್ದಿ ಬಂದಾಗ ನಾನು ಜಿಲ್ಲಾಧಿಕಾರಿಗಳ ಜೊತೆಗೆ ಮಾತನಾಡಿದೆ.ಎಫ್ಐಆರ್ ನಲ್ಲಿ 8 ಶ್ರೀ ಗಂಧದ ಮರಗಳು ಇವೆ ಎಂದು ಉಲ್ಲೇಖಿಸಲಾಗಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ಚಿಕ್ಕಮಗಳೂರು : ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ ವಿಚಾರವಾಗಿ ಬ್ಯಾಲೆಟ್ ಪೇಪರ್ ಬಳಕೆಯ ಬಗ್ಗೆ ಸಂಪುಟದಲ್ಲಿ ತೀರ್ಮಾನ ಆಗಿದೆ. ಬಹುಷಃ GBA ಚುನಾವಣೆಯಲ್ಲಿ ಕೂಡ ಬ್ಯಾಲೆಟ್ ಪೇಪರ್ ಬಳಕೆ ಅಪ್ಲೈ ಮಾಡಬಹುದು ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಬ್ಯಾಲೆಟ್ ಪೇಪರ್ ಬಳಕೆಯ ಬಗ್ಗೆ ಈಗಾಗಲೇ ಸಂಪುಟದಲ್ಲಿ ತೀರ್ಮಾನ ಆಗಿದ್ದು, ತಾಲೂಕ ಪಂಚಾಯತ್, ಜಿಲ್ಲಾ ಪಂಚಾಯತ್ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ ಮಾಡಲಾಗುತ್ತೆ. ಬಹುಶಃ GBA ಚುನಾವಣೆಗು ಕೂಡ ಅದನ್ನೇ ಅಪ್ಲೈ ಮಾಡುತ್ತಾರೆ ಎಂದರು.
ಶಿವಮೊಗ್ಗ : ಜ್ಯೋತಿಷಿ ಕಮಲಾಕರ್ ಭಟ್ ಮತ್ತು ಸುಚಿತ್ರ ಸೇರಿದಂತೆ ಒಟ್ಟು ಎಂಟು ಆರೋಪಿಗಳು ವಸಂತ ನಾಯಕ ಕೊಲೆ ಪ್ರಕರಣದಲ್ಲಿ ಸದ್ಯ ಜೈಲಿನಲ್ಲಿ ಇದ್ದಾರೆ. ಜ್ಯೋತಿಷಿ ಕಮಲಾಕರ ಭಟ್ಟ ವಿರುದ್ಧ ಮತ್ತೊಂದು ಗಂಭೀರವಾದ ಆರೋಪ ಕೇಳಿ ಬಂದಿದ್ದು ಗೋಶಾಲೆ ಹೆಸರಿನಲ್ಲಿ ಕೋಟಿ ಕೋಟಿ ಆಸ್ತಿ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಹೌದು ಗೋಶಾಲೆ ಹೆಸರಿನಲ್ಲಿ ಕಮಲಾಕಾರ್ ಭಟ್ ಕೋಟಿ ಕೋಟಿ ಆಸ್ತಿ ಗಳಿಕೆ ಮಾಡಿದ್ದಾರೆ. ಶಿವಮೊಗ್ಗದ ಮುದುವಾಲ ಗ್ರಾಮದಲ್ಲಿ ಈ ಒಂದು ಜಮೀನು ಇದೆ, ಮಠ ಹಾಗೂ ಗೋಶಾಲೆ ನಿರ್ಮಾಣಕ್ಕೆ 10 ಎಕರೆ ಜಮೀನು, ಖರೀದಿ ಮಾಡಿರುತ್ತಾರೆ ಐದು ವರ್ಷದ ಹಿಂದೆ ಮೂರುವರೆ ಕೋಟಿಗೆ 10 ಎಕರೆ ಜಮೀನು ಖರೀದಿ ಮಾಡಿದ್ದರು. ಇದೀಗ ಜಮೀನಿನ ಬೆಲೆ 6 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಅಲ್ಲದೇ ಶೃಂಗೇರಿ ಶ್ರೀಗಳು ಸಹ ಈ ಒಂದು ಗೋಶಾಲೆಗೆ ಭೇಟಿ ನೀಡಿದ್ದರು. ಆದರೆ ಸರಿಯಾಗಿ ನಿರ್ವಹಣೆ ಇಲ್ಲದ ಕಾರಣ ಗೋಶಾಲೆ ಬಂದ್ ಆಗಿದೆ. ಗೋ ಶಾಲೆ…
ಹುಬ್ಬಳ್ಳಿ : ಹಿಂದೂ ಧರ್ಮಕ್ಕೆ ಅವಮಾನ ಆಗುವ ರೀತಿ ವಾಟ್ಸಪ್ ಸ್ಟೇಟಸ್ ನಲ್ಲಿ ವಿಡಿಯೋ ಹಾಕಿದವನನ್ನು ಹುಬ್ಬಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹಳೆ ಹುಬ್ಬಳ್ಳಿ ಪೊಲೀಸರಿಂದ ದಾದಾಪೀರ್ ಎನ್ನುವ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಹುಬ್ಬಳ್ಳಿ ನಗರದ ನೂರಾನಿ ಪ್ಲಾಟ್ ನಿವಾಸಿ ಆಗಿರುವ ದಾದಾಪೀರ್ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ ಪೊಲೀಸರು ಇದೀಗ ದಾದಾಪೀರ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಆರೋಪಿ ದಾದಾಪೀರ್ ನನ್ನು ವಶಕ್ಕೆ ಪಡೆದುಕೊಂಡು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿ ದಾದಪೀರ್ ಹಿಂದೂ ದೇವರು ಬಳಿ ಹೋಗಿ ಕಲ್ಮಾ ಹೇಳಿಕೊಟ್ಟ ಯುಟುಬರ್ ಒಬ್ಬನ ವಿಡಿಯೋವನ್ನ ತನ್ನ ಸ್ಟೇಟಸ್ ಗೆ ಹಾಕೊಂಡಿದ್ದ. ಹಿಂದೂ ಧರ್ಮಕ್ಕೆ ಅಪಮಾನ ಆಗೋ ರೀತಿ ಸ್ಟೇಟಸ್ ಹಾಕಿದ್ದಕ್ಕೆ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರು : ಪ್ರೀತಿಯ ವಿಚಾರಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಪ್ರೇಯಸಿಯ ಜೊತೆಗಿನ ಖಾಸಗಿ ಕ್ಷಣಗಳನ್ನು ಸೆರೆಹಿಡಿದ ಯುವಕನಿಗೆ ಇದೀಗ ಹೈಕೋರ್ಟ್ ಜಾಮೀನು ನಿರಾಕರಿಸಿದೆ. ಪ್ರಿಯಕರನೊಬ್ಬ ತನ್ನ ಪ್ರೇಯಸಿಯೊಂದಿಗಿನ ಖಾಸಗಿ ಕ್ಷಣಗಳನ್ನು ಸೆರೆ ಹಿಡಿದು ಲೈಂಗಿಕ ಕ್ರಿಯೆ ಒತ್ತಾಯ ಮಾಡಿದ್ದಾನೆ. ಈ ಸಂಬಂಧ ಪೊಲೀಸ್ ಪ್ರಕರಣ ದಾಖಲಾಗಿದ್ದು, ಇದ್ದನ್ನು ರದ್ದು ಕೋರಿ ಪ್ರಿಯಕರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದನು. ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ನೀಡಲು ನಿರಾಕರಣೆ ಮಾಡಿದೆ. ವಿಚಾರಣೆ ವೇಳೆ ನಿಜವಾದ ಪ್ರೇಮಿಯು ತನ್ನ ಪ್ರೇಯಸಿಯೊಂದಿಗೆ ಕಳೆದ ಖಾಸಗಿ ಕ್ಷಣಗಳ ದೃಶ್ಯಗಳನ್ನು ಸೆರೆಹಿಡಿಯುವುದಿಲ್ಲ. ಅಲ್ಲದೆ, ಅಂತಹ ಪೋಟೋಗಳನ್ನು ತೋರಿಸಿ ಲೈಂಗಿಕ ಕ್ರಿಯೆಗೆ ಬಲವಂತಪಡಿಸುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಪ್ರಕರಣ ಹಿನ್ನೆಲೆ ಪ್ರಕರಣದಲ್ಲಿ ಅರ್ಜಿದಾರ ಆರೋಪಿಯು, ಬ್ಲ್ಯಾಕ್‌ಮೇಲ್ ಮಾಡಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಂದು ಆರೋಪಿಸಿ ಸಂತ್ರಸ್ತೆಯು 2025ರ ಮಾ.11ರಂದು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಆರೋಪಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣಾ ನ್ಯಾಯಾಲಯ ತಿರಸ್ಕರಿಸಿತ್ತು. ಹಾಗಾಗಿ,…
ಬೆಂಗಳೂರು : ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಶೆಡ್‌ಗೆ ಬೆಂಕಿ ಬಿದ್ದು 100ಕ್ಕೂ ಅಧಿಕ ಶೆಡ್‌ಗಳು ಹೊತ್ತಿ ಉರಿದ ಘಟನೆ ಕೂಡ್ಲು ಕೆರೆ ಸಮೀಪ ನಡೆದಿದೆ. ಇಂದು ಬೆಳಗ್ಗೆ 5:30 ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಎಲೆಕ್ಟ್ರಾನಿಕ್ ಸಿಟಿ , ಹುಳಿಮಾವು , ಸರ್ಜಾಪುರ ಹಾಗು ಡೈರಿ ಸರ್ಕಲ್‌ನಿಂದ ಬಂದ ಅಗ್ನಿಶಾಮಕದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಶೆಡ್ ಗಳು ಹಾಗು ಸ್ಕ್ರಾಪ್ ವಸ್ತುಗಳು ಬೆಂಕಿಗಾಹುತಿಯಾಗಿದೆ. ಹೈ ಟೆನ್ಷನ್ ವಯರ್ ತುಂಡಾಗಿ ಬಿದ್ದು ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಕುರಿತು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾವಣಗೆರೆ : ದಾವಣಗೆರೆಯಲ್ಲಿ ಜಿಂಕೆಗಳಿಗೆ ಸಾಂಕ್ರಾಮಿಕ ರೋಗ ಹರಡಿದ್ದು, ಮಾಸಾಂತ್ಯದ ವರೆಗೆ ಮೃಗಾಲಯಕ್ಕೆ ಪ್ರವೇಶವನ್ನು ನಿಷೇಧ ಮಾಡಲಾಗಿದೆ. ದಾವಣಗೆರೆ ಜಿಲ್ಲೆಯ ಅನಗೋಡದಲ್ಲಿರುವ ಇಂದಿರಾ ಪ್ರಿಯದರ್ಶಿನಿ ಮೃಗಾಲಯದಲ್ಲಿ ಈ ಒಂದು ಘಟನೆ ನಡೆದಿದೆ. ಮೃಗಾಲಯದಲ್ಲಿ ಜಿಂಕೆಗಳಿಗೆ ಸಾಂಕ್ರಾಮಿಕ ರೋಗ ಹರಡಿರುವ ಹಿನ್ನೆಲೆಯಲ್ಲಿ ಇಡೀ ಮೃಗಾಲಯಕ್ಕೆ ಸದ್ಯ ಅರಣ್ಯ ಇಲಾಖೆ ಪರದೆ ಅಳವಡಿಸಿದೆ. ಜನವರಿ 16 ಕೆ ಮೊದಲ ಜಿಂಕೆ ಸಾವನ್ನಪ್ಪಿದ್ದು ಇಲ್ಲಿಯವರೆಗೆ ಆರು ಜಿಂಕೆಗಳು ಸಾವನ್ನಪ್ಪಿವೆ. ಹಾಗಾಗಿ ಇಡೀ ಮೃಗಾಲಯವನ್ನು ಬಂದ್ ಮಾಡಲಾಗಿದ್ದು, ಪಶು ವೈದ್ಯರು ಆಗಮಿಸಿ ಜಿಂಕೆಗಳನ್ನು ಪರೀಕ್ಷಿಸಿ ಚಿಕಿತ್ಸೆ ನೀಡುತ್ತಿದ್ದಾರೆ.














