Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಿನಲ್ಲಿ ಐದೂವರೆ ಕೋಟಿ ಮೌಲ್ಯ ಬೆಂಟ್ಲಿ ಕಾರನ್ನು ಸೀಜ್ ಮಾಡಲಾಗಿದೆ. ನೋಂದಣಿಯ ವೇಳೆ ಕಾರು ಮಾಲೀಕ ಕಡಿಮೆ ಮೌಲ್ಯ ತೋರಿಸಿದ್ದ 5 ಕೋಟಿ 50 ಲಕ್ಷ ಮೌಲ್ಯ ಹೊಂದಿರುವ ಬೆಂಕಿ ಕಾರಿನ ಮೌಲ್ಯದ ಬೆಲೆ ಕಡಿಮೆ ಮೌಲ್ಯದ ಬೆಲೆ ಕಾರು ಎಂದು ತೋರಿಸಿ ನೋಂದಣಿ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಕೇವಲ 2,43,50,000 ಎಂದು ಮಾಲೀಕ ಬೆಲೆ ತೋರಿಸಿ ನೋಂದಣಿ ಮಾಡಿಸಿಕೊಂಡಿದ್ದ ಸುಮಾರು 70 ಲಕ್ಷದವರೆಗೆ ತೆರಿಗೆ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದ್ದು, ಕೋರಮಂಗಲದಲ್ಲಿ ಆರ್ಟಿಓ ಅಧಿಕಾರಿಗಳು ಇದೀಗ ಬೆಂಟ್ಲಿ ಕಾರನ್ನು ಸೀಜ್ ಮಾಡಿದ್ದಾರೆ. ತಪ್ಪು ಮೌಲ್ಯದ ಜೊತೆಗೆ ನಕಲಿ ದಾಖಲೆ ನೀಡಿ ನೋಂದಣಿ ಮಾಡಿರುವ ಆರೋಪ ಕೇಳಿ ಬಂದಿದೆ ಎರಡು ವರ್ಷದ ಹಿಂದೆ ಬೆಂಕಿ ಕಾರು ನೊಂದಣಿಯಾಗಿತ್ತು.
ಹಾಸನ : ರಾಕಿಂಗ್ ಸ್ಟಾರ್ ನಟ ಯಶ್ ಅವರ ವಿರುದ್ಧ ಕೂಡ ಭೂ ಒತ್ತುವರಿ ಆರೋಪ ಕೇಳಿಬಂದಿದ್ದು, ಅಕ್ರಮ ಕಂಪೌಂಡ್ ತೆರವು ಶಾಕ್ ಎದುರಾಗಿದೆ. ಹಾಸನದಲ್ಲಿ ಅಕ್ರಮ ಕಾಂಪೌಂಡ್ ಅನ್ನು ತೆರವು ಮಾಡಲಾಗಿದೆ ಜೆಸಿಬಿ ಮೂಲಕ ಕಾಂಪೌಂಡ್ ಧ್ವಂಸ ಮಾಡಲಾಗಿದೆ. ಬೆಳ್ಳಂ ಬೆಳಿಗ್ಗೆ ಮಾಲೀಕರು ನಟ ಯಶ್ ಅವರ ತಾಯಿ ಅವರಿಗೆ ಸೇರಿದಂತಹ ಮನೆಯ ಕಂಪೌಂಡ್ ಅನ್ನು ತೆರವುಗೊಳಿಸಿದ್ದಾರೆ ಲಕ್ಷ್ಮಮ್ಮ ಜಾಗದಲ್ಲಿ ಅಕ್ರಮ ಕಾಂಪೌಂಡ್ ನಿರ್ಮಾಣ ಮಾಡಲಾಗಿತ್ತು ಅಕ್ರಮ ಕಾಂಪೌಂಡ್ ನಿರ್ಮಾಣದ ಆರೋಪ ಕೇಳಿ ಬಂದಿತ್ತು . ಇದೀಗ ಜೆಸಿಬಿ ಮೂಲಕ ಇದೀಗ ತೆರವುಗೊಳಿಸಲಾಗಿದೆ. ಹಾಸನದ ವಿದ್ಯಾ ನಗರದಲ್ಲಿರುವ ನಟ ಯಶ್ ತಾಯಿ ಪುಷ್ಪ ಅವರ ಮನೆ ಸುಮಾರು 1,500 ಅಡಿ ಜಾಗವನ್ನು ಒತ್ತುವರಿ ಮಾಡಿರುವ ಆರೋಪ ಕೇಳಿ ಬಂದಿದೆ. ಕೋರ್ಟ್ ಅನುಮತಿ ಮೇರೆಗೆ ಕಾಂಪೌಂಡ್ ತೆರವುಗೊಳಿಸಲಾಗಿದೆ. ಅನುಮತಿಯ ಮೇರೆಗೆ ಅಕ್ರಮ ಕಾಂಪೌಂಡ್ ಅನ್ನು ಇದೀಗ ಜೆಸಿಬಿ ಮೂಲಕ ತೆರವುಗೊಳಿಸಲಾಗಿದೆ.
ಬೆಂಗಳೂರು : ಹಣಕ್ಕಾಗಿ, ಆಸ್ತಿಗಾಗಿ ಮಕ್ಕಳು ತಂದೆ ತಾಯಿಯರ ಮೇಲೆ ಹಲ್ಲೆ ಮಾಡುವುದು ಅಥವಾ ತಂದೆ-ತಾಯಿರನ್ನು ಕೊಲ್ಲುವುದನ್ನು ನೋಡಿದ್ದೇವೆ ಕೇಳಿದ್ದೇವೆ. ಆದರೆ ಇಲ್ಲಿ ಒಬ್ಬ ಪಾಪಿ ತಂದೆ ತನ್ನ ಮಗನಿಗೆ ಚಿಕಿತ್ಸೆ ಕೊಡಿಸಲು ಹಣ ಇಲ್ಲ ಎಂದು ವಿಷ ಹಾಕಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು ಬೆಂಗಳೂರಿನ ಬಾಗಲೂರುನಲ್ಲಿ ಮಗನ ಚಿಕಿತ್ಸೆಗೆ ಹಣವಿಲ್ಲದೇ ಬುದ್ದಿಮಾಂದ್ಯ ಮಗುವಿಗೆ ತನ್ನ ಕೈಯ್ಯಾರೆ ವಿಷ ಹಾಕಿದ್ದಾನೆ. ಮುನಿಕೃಷ್ಣ ಎಂಬಾತ ಸ್ವಂತ ಮಗನಿಗೆ ಕೀಟನಾಶಕ ಕುಡಿಸಿದ್ದಾನೆ.ಸತ್ಯಾ-ಮುನಿಕೃಷ್ಣ ದಂಪತಿಯ 2.5 ವರ್ಷದ ಮಗ ಜೋಯಲ್ ಗೆ ವಿಷ ಕುಡಿಸಿದ್ದಾನೆ. ಡಿಸೆಂಬರ್ 22 ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಬೆಂಗಳೂರು : ಬೆಂಗಳೂರಿನ ಕೋಗಿಲು ಲೇಔಟ್ ನಲ್ಲಿ ಅಕ್ರಮವಾಗಿ ನೆಲೆಸಿದವರಿಗೆ ಮನೆ ಹಂಚಿಕೆ ವಿಚಾರವಾಗಿ ಮನೆ ಹಂಚಿಕೆ ವಿರೋಧಿಸಿ ನಾಳೆ ವಿಪಕ್ಷ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ. ಈ ವೇಳೆ ನಾಳೆ ಪ್ರತಿಭಟನೆ ನಡೆಸಿದಂತೆ ಪೊಲೀಸರು ಬಿಜೆಪಿ ನಾಯಕರಿಗೆ ನೋಟಿಸ್ ನೀಡಿದ್ದಾರೆ. ಬೆಂಗಳೂರಿನ ಬಾಗಲೂರು ಠಾಣೆ ಪೋಲಿಸರು ನೋಟಿಸ್ ಜಾರಿ ಮಾಡಿದ್ದಾರೆ. ಹೌದು ಕೋಗಿಲು ಲೇಔಟ್ ನಲ್ಲಿ ಅನಧಿಕೃತ ಮನೆಗಳನ್ನು ತೆರವುಗೊಳಿಸಿದ ಬಳಿಕ ಅಲ್ಲಿನ ನಿವಾಸಿಗಳಿಗೆ ಮನೆ ಹಂಚಿಕೆ ವಿಚಾರವನ್ನು ವಿರೋಧಿಸಿ ನಾಳೆ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತ್ತು ಇದೇ ವಿಚಾರವಾಗಿ ಬಾಗಲೂರು ಠಾಣೆ ಪೋಲಿಸರು ಬಿಜೆಪಿಯ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್ ಹರೀಶ್ ಗೆ ನೋಟಿಸ್ ನೀಡಿದ್ದಾರೆ. ಜಿಬಿಎ ವ್ಯಾಪ್ತಿಯಿಂದ ಹೊರಗೆ ಪ್ರತಿಭಟನೆಗೆ ಬಿಜೆಪಿ ನಿರ್ಧರಿಸಿದ್ದು ಬಾಗಲೂರು ಮುಖ್ಯ ರಸ್ತೆಯ ಕಂಟ್ರಿ ಕ್ಲಬ್ ಬಳಿ ಪ್ರತಿಭಟನೆಗೆ ನಿರ್ಧರಿಸಿದ್ದರು. ನಿನ್ನೆ ರಾತ್ರಿ ಹರೀಶ್ ಮನೆಗೆ ಬಂದು ಪೊಲೀಸರು ನೋಟಿಸ್ ನೀಡಿದ್ದಾರೆ ಎಂದು ತಿಳಿದು ಬಂದಿದೆ ಬೆಂಗಳೂರಿನ ಫ್ರೀಡಂ ಪಾರ್ಕ್ ಹೊರತುಪಡಿಸಿ ಬೇರೆ ಎಲ್ಲೂ ಪ್ರತಿಭಟನೆಗೆ…
ಮೈಸೂರು : ಮೈಸೂರು : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು ಪೂಜೆ ಮಾಡುವ ವೇಳೆ ಕುಸಿದು ಬಿದ್ದು ಅರ್ಚಕರು ಒಬ್ಬರು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ತಡರಾತ್ರಿ ನಡೆದಿದೆ. ಪೂಜೆ ವೇಳೆ ಶ್ರೀಕಂಠೇಶ್ವರ ದೇವಾಲಯದ ಸಹಾಯಕ ಶಂಕರ ಉಪಾಧ್ಯಾಯ (55) ಮೃತರು ಎಂದು ತಿಳಿದು ಬಂದಿದೆ. ಅರ್ಚಕ ಕುಸಿದು ಬೀಳುವ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ. ಅಂಧಕಾಸುರ ವಧೆ ಪೂಜೆ ಸಮಯದಲ್ಲಿ ಕುಸಿದು ಬಿದ್ದು ಅರ್ಚಕ ಸಾವನಪ್ಪಿದ್ದಾರೆ. ಪ್ರತಿ ವರ್ಷ ನಂಜನಗೂಡಿನಲ್ಲಿ ಅಂಧಕಾಸುರ ವಧೆ ನಡೆಯುತ್ತದೆ. ಈ ವೇಳೆ ಅರ್ಚಕ ಉಪಾಧ್ಯಾಯ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಇದೀಗ ವರದಿಯಾಗಿದೆ. ನಿನ್ನೆ ರಾತ್ರಿ ದೇವಾಲಯದ ಮುಂದೆ ಪ್ರತಿ ವರ್ಷ ನಡೆಯುವ ಸಂಪ್ರದಾಯದಂತೆ ಅಂಧಕಾಸುರನ ವಧೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಿಗದಿತ ಸಮಯಕ್ಕೆ ಸರಿಯಾಗಿ ಕಾರ್ಯಕ್ರಮ ಆರಂಭವಾಗಿತ್ತು. ನೆಲದ ಮೇಲೆ ರಂಗೋಲಿಯಲ್ಲಿ ಬಿಡಿಸಲಾಗಿದ್ದ ಅಂಧಕಾಸುರನ ಭಾವಚಿತ್ರದ ಮೇಲೆ ಪಲ್ಲಕ್ಕಿಯಲ್ಲಿ ವಿರಾಜಮಾನನಾದ ಶ್ರೀಕಂಠೇಶ್ವರನ ಉತ್ಸವಮೂರ್ತಿಯನ್ನು ಹೊತ್ತ ಅರ್ಚಕರ ತಂಡ ಎಂದಿನ ಆಚರಣೆಯಂತೆ…
ಮೈಸೂರು : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು ಪೂಜೆ ಮಾಡುವ ವೇಳೆ ಕುಸಿದು ಬಿದ್ದು ಅರ್ಚಕರು ಒಬ್ಬರು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ತಡರಾತ್ರಿ ನಡೆದಿದೆ. ಪೂಜೆ ವೇಳೆ ಅರ್ಚಕ ಉಪಾಧ್ಯಾಯ ಕುಸಿದು ಬಿದ್ದು ಸಾವನಪ್ಪಿದ್ದಾರೆ. ಅರ್ಚಕ ಕುಸಿದು ಬೀಳುವ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ. ಅಂಧಕಾಸುರ ವಧೆ ಪೂಜೆ ಸಮಯದಲ್ಲಿ ಕುಸಿದು ಬಿದ್ದು ಅರ್ಚಕ ಸಾವನಪ್ಪಿದ್ದಾರೆ. ಪ್ರತಿ ವರ್ಷ ನಂಜನಗೂಡಿನಲ್ಲಿ ಅಂಧಕಾಸುರ ವಧೆ ನಡೆಯುತ್ತದೆ. ಈ ವೇಳೆ ಅರ್ಚಕ ಉಪಾಧ್ಯಾಯ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಇದೀಗ ವರದಿಯಾಗಿದೆ.
ಮಂಡ್ಯ : ಮಂಡ್ಯ ಜಿಲ್ಲೆಯ ಅಗಸರ ಹಳ್ಳಿ ಬಳಿ,ಉಚಿತವಾಗಿ ಎಣ್ಣೆ ಕೊಡದಿದ್ದಕ್ಕೆ ಪುಂಡರು ಬಾರ್ ಗೆ ಬೆಂಕಿ ಇಟ್ಟಿರುವ ಘಟನೆ ವರದಿಯಾಗಿದೆ. ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಅಗಸರಹಳ್ಳಿ ಗ್ರಾಮದಲ್ಲಿ ಪರಮೇಶ್ ಎಂಬವರಿಗೆ ಸೇರಿದ ಈಗಲ್ ಬಾರ್ ಮತ್ತು ರೆಸ್ಟೋರೆಂಟ್ ಗೆ ಪುಂಡರು ಬೆಂಕಿ ಇಟ್ಟಿದ್ದಾರೆ. ಮುರುಕನಹಳ್ಳಿಯ ರಕ್ಷಿತ ಹಾಗೂ ಆತನ ಸ್ನೇಹಿತರಿಂದ ಬಾರ್ ನಲ್ಲಿ ಗಲಾಟೆ ಮಾಡಿದ್ದಾರೆ. ಉಚಿತವಾಗಿ ಮದ್ಯ ಕೊಡಬೇಕು ಎಂದು ರಕ್ಷಿತ್ ಮತ್ತು ಆತನ ಸ್ನೇಹಿತರು ಬೇಡಿಕೆ ಇಟ್ಟಿದ್ದರು. ಈ ವೇಳೆ ಮದ್ಯ ಕೊಡದಿದ್ದಕ್ಕೆ ಗಲಾಟೆ ಮಾಡಿದ್ದಾರೆ. ಬಳಿಕ ಬಾರ್ ಹಾಗೂ ಮಾಲೀಕ ಪರಮೇಶ್ ಕಾರಿಗೆ ಬೆಂಕಿ ಹಾಕಿ ಗಲಾಟೆ ಮಾಡಿದ್ದಾರೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕೆಆರ್ ಪೇಟೆ ಗ್ರಾಮಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಬ್ಬಳ್ಳಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಹುಬ್ಬಳ್ಳಿ ನಗರದಲ್ಲಿ ಅಪ್ರಾಪ್ತೆ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಹುಬ್ಬಳ್ಳಿಯ ಶಹರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಒಂದು ವಾರದಲ್ಲಿ ಪರಿಚಯಸ್ಥ ಮೂವರು ಬಾಲಕರಿಂದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ. ಕಳೆದ ವಾರ ನಡೆದಿದ್ದ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ನೊಂದ ಬಾಲಕಿ ಮತ್ತು ಆಕೆಯ ತಾಯಿ ದೂರು ನೀಡಿದ್ದು ಮೂವರು ಅಪ್ರಾಪ್ತ ಬಾಲಕರನ್ನು ಸದ್ಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅತ್ಯಾಚಾರದ ವೇಳೆ ಲೈಂಗಿಕ ದೌರ್ಜನ್ಯದ ವಿಡಿಯೋ ಮಾಡಿ ಇಟ್ಟುಕೊಂಡಿದ್ದರು. ಬಾಲಕರ ವಿರುದ್ಧ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬಳ್ಳಾರಿಯಲ್ಲಿ ಗಲಾಟೆ ಹಾಗು ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ SP ಪವನ್ ನಜ್ಜುರ್ ಸಸ್ಪೆಂಡ್ ಆಗಿದ್ದರು. ಇದರಿಂದ ನೊಂದ ಅವರು ತುಮಕೂರಲ್ಲಿ ಸ್ನೇಹಿತನ ಫಾರ್ಮ್ ಹೌಸ್ ನಲ್ಲಿ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಾಸಿದ್ದರು ಎಂದು ಹೇಳಲಾಗಿತ್ತು. ಇದೀಗ ಬಳ್ಳಾರಿ ಎಸ್ಪಿ ಪವನ್ ನಿಜ್ಜೂರ್ ಆತ್ಮಹತ್ಯೆಗೆ ಯತ್ನಿಸಿಲ್ಲ ಎಂದು ಅವರ ಸ್ನೇಹಿತ, ಬೆಂಗಳೂರು ಸಿಸಿಬಿ ಡಿಸಿಪಿ ಶ್ರೀಹರಿಬಾಬು ಹೇಳಿದ್ದಾರೆ. ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಈಗ ಶಿರಾ ಬಳಿಯ ಫಾರ್ಮ್ಹೌಸ್ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಪವನ್ ಆತ್ಮಹತ್ಯೆಗೆ ಯತ್ನಿಸಿದ್ದ ವರದಿ ಸುಳ್ಳು ಎಂದಿದ್ದಾರೆ.ಸರ್ಕಾರ ಅಮಾನುತು ಆದೇಶ ಪ್ರಕಟಿಸಿದ ಬಳಿಕ ಬಳ್ಳಾರಿ ಎಸ್ಪಿ ಪವನ್ ನಿಜ್ಜೂರ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿ ಹರಡಿತ್ತು. ಜ.1 ರಂದು ಅಧಿಕಾರ ಸ್ವೀಕರಿಸಿದ್ದ ಪವನ್ ನಿಜ್ಜೂರ್ ಅವರನ್ನು ಕರ್ತವ್ಯ ಲೋಪದ ಆರೋಪದ ಅಡಿ ಸರ್ಕಾರ ನಿನ್ನೆ (ಜ.2) ರಾತ್ರಿ ಅಮಾನತು ಮಾಡಿ ಆದೇಶ ಪ್ರಕಟಿಸಿತ್ತು. ರಾತ್ರಿ…
ತುಮಕೂರು : ಬಳ್ಳಾರಿಯಲ್ಲಿ ಬ್ಯಾನರ್ ವಿಚಾರವಾಗಿ ನಡೆದ ಗಲಾಟೆ ಪ್ರಕರಣದಲ್ಲಿ ಫೈರಿಂಗ್ ಆಗಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ SP ಪವನ್ ನಜ್ಜುರು ಅವರನ್ನು ಕರ್ತವ್ಯ ಲೋಪ ಆರೋಪದ ಅಡಿ ಸಸ್ಪೆಂಡ್ ಮಾಡಲಾಗಿತ್ತು ಇದೀಗ ಮಾತ್ರೆ ನುಂಗಿ ಪವನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹೌದು ಸಸ್ಪೆಂಡ್ ಆಗಿದ್ದ ಎಸ್ಪಿ ಪವನ್ ನಜ್ಜುರ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಎನ್ನುವ ಸುದ್ದಿ ಹರಿದಾಡುತ್ತಿದ್ದು, ಸ್ನೇಹಿತನ ಫಾರ್ಮ್ ಹೌಸ್ ನಲ್ಲಿ ಪವನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗುತ್ತಿದೆ ತುಮಕೂರು ಜಿಲ್ಲೆಯ ಶಿರದ ಬರಗೂರಿನ ಫಾರ್ಮರ್ಸ್ ನಲ್ಲಿ ಪವನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಸದ್ಯ ಆಸ್ಪತ್ರೆಯಲ್ಲಿ ಪವನ್ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ.













