Subscribe to Updates
Get the latest creative news from FooBar about art, design and business.
Author: kannadanewsnow05
ಚಿಕ್ಕಮಗಳೂರು : ಪ್ರಸಿದ್ಧ ದೇವಿರಮ್ಮ ಬೆಟ್ಟದಲ್ಲಿ ಮಹಿಳೆಯ ಅಸ್ತಿ ಪಂಜರ ಪತ್ತೆಯಾಗಿದೆ. ದೇವಿರಮ್ಮ ಬೆಟ್ಟ ದಾರಿ ಸ್ವಚ್ಛ ವೇಳೇ ಈ ಒಂದು ಅಸ್ತಿ ಪಂಜರ ಪತ್ತೆಯಾಗಿದೆ. ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಇರುವ ದೇವಿರಮ್ಮ ಬೆಟ್ಟದಲ್ಲಿ ಮಹಿಳೆಯ ಅಸ್ತಿ ಪಂಜರ ಪತ್ತೆಯಾಗಿದ್ದು, ವರ್ಷದಲ್ಲಿ ಒಮ್ಮೆ ಮಾತ್ರ ಗ್ರಾಮಸ್ಥರು ಮತ್ತು ಭಕ್ತರು ಈ ಒಂದು ದೇವಿರಮ್ಮ ಬೆಟ್ಟಕ್ಕೆ ತೆರಳುತ್ತಾರೆ. ದೇವಿರಮ್ಮ ದೇವಾಲಯಕ್ಕೆ ತೆರಳುವ ಮಾರ್ಗದಲ್ಲಿ ಇದೀಗ ಮಹಿಳೆಯ ಅಸ್ತಿ ಪಂಜರ ಪತ್ತೆಯಾಗಿದೆ. ದೀಪಾವಳಿ ಹಬ್ಬದ ದಿನ ಬೆಟ್ಟ ಏರಿ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಪ್ರತಿ ವರ್ಷ ಬೆಟ್ಟಕ್ಕೆ ತೆರಳಿ ಲಕ್ಷಾಂತರ ಭಕ್ತರು ದರ್ಶನ ಪಡೆಯುತ್ತಾರೆ. ಈ ಕುರಿತು ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಯುಡಿಆರ್ ದಾಖಲಾಗಿದೆ. ಪೊಲೀಸರು ಅಸ್ತಿಪಂಜರ ಪತ್ತೆ ಕುರಿತು ತನಿಖೆ ನಡೆಸುತ್ತಿದ್ದಾರೆ.
ಲಕ್ಕಿ ಪಾರಿಜಾತ ದೈವಿಕ ಶಕ್ತಿಯನ್ನು ಹೊರಹಾಕುವ ಪಾವಲ ಮಲ್ಲಿ ಎಂದು ಕರೆಯಲ್ಪಡುವ ಈ ಪಾರಿಜಾತ ಹೂವಿನಿಗಾಗಿ ಇಂದ್ರ ಮತ್ತು ಕೃಷ್ಣ ದೊಡ್ಡ ಯುದ್ಧ ನಡೆಸಿದರು. ನೀವು ಈ ಹೂವಿನೊಂದಿಗೆ ಪ್ರಾರ್ಥಿಸಿ ವರವನ್ನು ಕೇಳಿದರೆ, ನೀವು ಕೇಳಿದ ವರವು ನಿಮಗೆ ಸಿಗುತ್ತದೆ ಎಂದು ನಂಬಲಾಗಿದೆ. ಈ ಪೋಸ್ಟ್ನಲ್ಲಿ, ಪಾರಿಜಾತ ಹೂವಿನ ಪೌರಾಣಿಕ ಕಥೆ ಮತ್ತು ಈ ಹೂವು ತರಬಹುದಾದ ಪ್ರಯೋಜನಗಳ ಬಗ್ಗೆ ಆಧ್ಯಾತ್ಮಿಕ ಮಾಹಿತಿಯನ್ನು ನಾವು ಹಂಚಿಕೊಳ್ಳುತ್ತೇವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ,…
ಬೆಂಗಳೂರು : ಬೆಂಗಳೂರಿನ ಬನಶಂಕರಿ ಮೆಟ್ರೋ ಸ್ಟೇಷನ್ ಗೆ ಬೀಡಾಡಿ ದನ ನುಗ್ಗಿದೆ. ಮೆಟ್ರೋ ಸ್ಟೇಷನ್ ನಲ್ಲಿ ಹಸು ಕಂಡು ಪ್ರಯಾಣಿಕರು ಶಾಕ್ ಆಗಿದ್ದಾರೆ. ಹಸು ಏನಾದರೂ ಟ್ರ್ಯಾಕ್ಕೆ ನುಗ್ಗಿದ್ದರೆ, ದೊಡ್ಡ ಅನಾಹುತಾವೇ ನಡೆದು ಹೋಗುತ್ತಿತ್ತು. ಕಳೆದ ಬುಧುವಾರ ರಾತ್ರಿ 8:00ಗೆ ಆಗಿರುವಂತಹ ಘಟನೆ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹಸು ಮೆಟ್ರೋ ಸ್ಟೇಷನ್ ಗೆ ನುಗ್ಗಿರೋ ವಿಡಿಯೋ ವೈರಲ್ ಆಗಿದೆ. ಸೆಕ್ಯೂರಿಟಿ ಗಾರ್ಡ್ ನಿರ್ಲಕ್ಷದಿಂದ ಈ ಒಂದು ಘಟನೆ ನಡೆದಿದೆ ಎಂದು ಪ್ರಯಾಣಿಕರು ಆಕ್ರೋಶ ಹೊರ ಹಾಕುತ್ತಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, 5 ವರ್ಷದ ಪುತ್ರಿ ಹಾಗು ಒಂದುವರೆ ವರ್ಷದ ಪುತ್ರನ ಕೊಂದು ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನಲ್ಲಿ ಈ ಒಂದು ಘಟನೆ ನಡೆದಿದ್ದು ಬಾಗಲಕುಂಟೆ ಪಾಳ್ಯ ಭುವನೇಶ್ವರಿ ನಗರದಲ್ಲಿ ಈ ಒಂದು ದುರಂತ ಸಂಭವಿಸಿದೆ. ಐದು ವರ್ಷದ ಪುತ್ರಿ ಹಾಗೂ ಒಂದೂವರೆ ವರ್ಷದ ಪುತ್ರನ ಕೊಂದು ತಾಯಿ ವಿಜಯಲಕ್ಷ್ಮಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಯಚೂರು ಮೂಲದ ವಿಜಯಲಕ್ಷ್ಮಿ, ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದು, ವಿಜಯಲಕ್ಷ್ಮಿ ಸಹೋದರಿ ಬಂದು ನೋಡಿದಾಗ ಈ ಒಂದು ಘಟನೆ ಬೆಳಕಿಗೆ ಬಂದಿದೆ. ಖಾಸಗಿ ಮಾಲ್ ನಲ್ಲಿ ವಿಜಯಲಕ್ಷ್ಮಿ ಪತಿ ಕೆಲಸ ಮಾಡುತ್ತಿದ್ದರು. ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹಗಳನ್ನು ರವಾನಿಸಲಾಗಿದೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾವೇರಿ : ಇನ್ಸೂರೆನ್ಸ್ ಆಸ್ತಿ ಮನೆ ಮತ್ತು ಜಮೀನಿನಗಾಗಿ ಅಳಿಯನನ್ನೇ ಕೊಲೆ ಮಾಡಲಾಗಿದೆ. ಅಳಿಯನನ್ನು ಕೊಲೆ ಮಾಡಿಸಿದ್ದ ಮಾವ ಮತ್ತು ಗ್ಯಾಂಗ್ ಅರೆಸ್ಟ್ ಆಗಿದೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿತ್ತು. ಬಸವರಾಜ್ ಪುಟ್ಟಪ್ಪನವರ್ ಎನ್ನುವ ವ್ಯಕ್ತಿಯನ್ನು ಕೊಲೆ ಮಾಡಿ ಕಥೆ ಕಟ್ಟಿದರು ಅಪಘಾತದಲ್ಲಿ ಸಾವು ಎಂದು ಆರೋಪಿಗಳು ಬಿಂಬಿಸಿದ್ದಾರೆ. ಸೆಪ್ಟೆಂಬರ್ 27 ರಂದು ಬಸವರಾಜ್ ಮರ್ಡರ್ ನಡೆದಿದೆ. ಬಸವರಾಜ್ಗೆ ಕಂಠಪೂರ್ತಿ ಕುಡಿಸಿ ಕಾರಿನಿಂದ ಗುದ್ದಿಸಿದ್ದಾರೆ.ಬಳಿಕ ಅಪಘಾತದಲ್ಲಿ ಸಾವನಪ್ಪಿದ್ದಾನೆ ಎಂದು ಆರೋಪಿಗಳು ಬಿಂಬಿಸಿದ್ದಾರೆ ದೂರದಲ್ಲಿ ಈ ಒಂದು ಕೊಲೆ ಮಾಡಿದ್ದಾರೆ. ರಾಘವೇಂದ್ರ ಬಾಳಗುಂಡರ, ಪ್ರವೀಣ್, ಸಿದ್ದನಗೌಡ ಹಲಗೇರಿ ಲೋಕೇಶ್ ಎಂಬಾತರನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಉದಾರಣೆ ವೇಳೆ ಆರೋಪಿಗಳು ತಪ್ಪು ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ನಾಲ್ವರನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಲ್ಲಿ ಯುವಕ ಯುವತಿ ಸಾವು ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರ ತನಿಖೆಯ ವೇಳೆ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಮೃತ ಕಾವೇರಿಗೆ ಮದುವೆಯಾಗಿ ಮೂವರು ಮಕ್ಕಳಿದ್ದಾರೆ. ಪತಿ ಮತ್ತು ಮಕ್ಕಳನ್ನು ಬಿಟ್ಟು ಕಾವೇರಿ ಕೆಲಸಕ್ಕೆ ಅಂತ ಬೆಂಗಳೂರಿಗೆ ಬಂದಿದ್ದಾಳೆ. ಗದಗ ಮೂಲದ ರಮೇಶ್ ಜೊತೆಗಿದ್ದಾಗಲೇ ಕಾವೇರಿ ಸಾವನಪ್ಪಿದ್ದಾಳೆ. ಗದಗ ಮೂಲದ ರಮೇಶ್ ಜೊತೆಗೆ ಹುನಗುಂದ ಮೂಲದ ಕಾವೇರಿ ಸಾವನ್ನಪ್ಪಿದ್ದು, ರಮೇಶ್ ಜೊತೆಗೆ ಕಾವೇರಿ ಅನೈತಿಕ ಸಂಬಂಧ ಹೊಂದಿದ್ದಳು. ಮದುವೆ ವಿಚಾರವಾಗಿ ಕಾವೇರಿಗೆ ರಮೇಶ್ ಒತ್ತಡ ಹೇರಿರುವ ಅನುಮಾನ ವ್ಯಕ್ತವಾಗುತ್ತಿದೆ. ಆದರೆ ಕಾವೇರಿ ಒಪ್ಪದೇ ಇದ್ದ ಸಂದರ್ಭದಲ್ಲಿ ಪೆಟ್ರೋಲ್ ಸುರಿದು ಬೆದರಿಕೆ ಹಾಕಲಾಗಿತ್ತು ಎಂದು ತಿಳಿದು ಬಂದಿದೆ. ಬೆದರಿಕೆ ಹಾಕಲು ಹೋಗಿ ಇಬ್ಬರು ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದ್ದು ಪೊಲೀಸರು ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ.
ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗಿದ್ದು ಅದರಲ್ಲೂ ಉತ್ತರ ಕರ್ನಾಟಕದಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಇದೀಗ ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಇನ್ನೂ ಸಹ ಕಡಿಮೆಯಾಗಿಲ್ಲ. ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚುರುಕು ಪಡೆದಿದ್ದು, ಕಳೆದ ಎರಡು ದಿನಗಳಿಂದ ಹಲವೆಡೆ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಗುರುವಾರ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಕರ್ನಾಟಕದಲ್ಲಿ ಅಕ್ಟೋಬರ್ 15ರವರೆಗೆ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ಉತ್ತರ ಕನ್ನಡ, ದಾವಣಗೆರೆ, ಚಿತ್ರದುರ್ಗ, ವಿಜಯನಗರ, ಗದಗ, ಹಾವೇರಿ, ಧಾರವಾಡ, ಕೊಪ್ಪಳ, ವಿಜಯಪುರ, ರಾಯಚೂರು, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದಿರುವ ಹವಾಮಾನ ಇಲಾಖೆ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು…
ಕಲಬುರ್ಗಿ : ಕಲಬುರ್ಗಿಯಲ್ಲಿ ಘೋರ ದುರಂತವೊಂದು ನಡೆದಿದ್ದು, ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಶಾಕಾಪುರ ಎಂಬ ಗ್ರಾಮದಲ್ಲಿ ನಡೆದಿದೆ. ಕೌಟುಂಬಿಕ ಕಲಹ ಹಿನ್ನಲೆ ಭಾಗ್ಯಶ್ರೀ (31) ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಜೈಲಿನಲ್ಲಿ ಕನಿಷ್ಠ ಸವಲತ್ತು ನೀಡದ ಆರೋಪ ವಿಚಾರವಾಗಿ ಕೋರ್ಟ್ ಗೆ ದರ್ಶನ್ ಪರ ವಕೀಲರು ಸಲ್ಲಿಸಿದ ವಿಚಾರಣೆ ನಡೆಯಿತು. ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ವಾದ ಪ್ರತಿವಾದ ಆಲಿಸಿ ನಾಳೆಗೆ ಆದೇಶ ಕಾಯ್ದೆಸಿದರು. ಪ್ರಾಸಿಕ್ಯೂಷನ್ ವಾದಕ್ಕೆ ದರ್ಶನ್ ಪರ ವಕೀಲ ಸುನಿಲ್ ಪಆಕ್ಷೇಪ ವ್ಯಕ್ತಪಡಿಸಿದ್ದಾರೆ. ನ್ಯಾಯಾಂಗ ನಿಂದನೆ ಅಪರಾಧ ಘಟಿಸಿದೆಯೇ ಇಲ್ಲವೇ ಪರಿಶೀಲಿಸಬೇಕು. ದರ್ಶನ್ ಸಲ್ಲಿಸಿದ ಮೆಮೊ ಸಂಬಂಧ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಜಡ್ಜ್ ಖುದ್ದು ಪರಿಶೀಲಿಸಿದರೆ ಪ್ರಾಸಿಕ್ಯೂಷನ್ ಗೆ ಭಯ ಏಕೆ? ಸವಲತ್ತು ನೀಡಿದೆಯೋ ಇಲ್ಲವೋ ಕೋರ್ಟ್ ಪರಿಶೀಲಿಸಬೇಕು ಎಂದು ಕೇಂದ್ರ ಸರ್ಕಾರದ ಮಾರ್ಗಸೂಚಿ ಉಲ್ಲೇಖಿಸಿ ಸುನಿಲ್ ವಾದಿಸಿದರು. ಆಗ ಕೇಂದ್ರದ ಮಾರ್ಗ ಸೂಚಿ ರಾಜ್ಯಕ್ಕೆ ಅನ್ವಯ ಆಗುವುದಿಲ್ಲ ಎಂದು ಎಸ್ ಪಿಪಿ ಪ್ರಸನ್ನ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದರು. ಜಡ್ಜ್ ಗೆ…
ಚಿತ್ರದುರ್ಗ : ಅಕ್ರಮ ಆನ್ಲೈನ್ ಬೆಟ್ಟಿಂಗ್ ಆ್ಯಪ್ ಹಗರಣ ಸಂಬಂಧ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಉದ್ಯಮಿ ಕೆ.ಸಿ.ವೀರೇಂದ್ರ ಅಲಿಯಾಸ್ ಪಪ್ಪಿ ಸದ್ಯ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ ಇದರ ಬೆನ್ನಲ್ಲೇ ಇಂದು ಇಡೀ ಅಧಿಕಾರಿಗಳು ಮತ್ತೆ ಚಳ್ಳಕೆರೆಯಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಹೌದು ಇಡಿ ಇಂದ ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಬಂಧನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಇಡಿ ಅಧಿಕಾರಿಗಳು ಚಳ್ಳಕೆರೆಯಲ್ಲಿ ಮತ್ತೆ ದಾಳಿ ಮಾಡಿದ್ದಾರೆ. ಚಳ್ಳಕೆರೆಯ ಫೆಡರಲ್ ಬ್ಯಾಂಕ್ ನಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದ ವಿವಿಧಡೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸುತ್ತಿದ್ದಾರೆ. ಸದ್ಯ ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಪ್ರಕರಣ ಹಿನ್ನೆಲೆ? ಅಕ್ರಮವಾಗಿ ಆನ್ಲೈನ್ ಬೆಟ್ಟಿಂಗ್ ಆ್ಯಪ್ಗಳನ್ನು ನಡೆಸಿ ಬಹುಕೋಟಿ ಹಣ ಗಳಿಸಿರುವ ಬಗ್ಗೆ ಶಾಸಕ ವೀರೇಂದ್ರ ವಿರುದ್ಧ ಆರೋಪ ಕೇಳಿ ಬಂದಿದೆ. ಪ್ರಕರಣ…














