Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಾಮಾನ್ಯ ಕೈದಿಯಂತೆ ತಮ್ಮ ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ. ಜೈಲು ಅಧಿಕಾರಿಗಳು ಅವರನ್ನು ಲೈಬ್ರರಿಯ ಕ್ಲರ್ಕ್ ಆಗಿ ನೇಮಿಸಿದ್ದು, ಪುಸ್ತಕಗಳನ್ನು ವಿತರಿಸುವುದು ಮತ್ತು ನೋಂದಣಿ ಮಾಡುವ ಕೆಲಸವನ್ನು ನಿರ್ವಹಿಸುತ್ತಿದ್ದಾರೆ. ಸದ್ಯಕ್ಕೆ ಪ್ರಜ್ವಲ್ ರೇವಣ್ಣ ಅವರು ಒಂದು ದಿನದ ಮಟ್ಟಿಗೆ ಕೆಲಸ ಮಾಡಿದ್ದು, ದಿನಗೂಲಿಯಾಗಿ 522 ರೂಪಾಯಿಗಳನ್ನು ಸಂಬಳವಾಗಿ ಪಡೆಯುತ್ತಿದ್ದಾರೆ. ಕೆಲಸಕ್ಕೆ ಹಾಜರಾಗದಿದ್ದರೆ ಸಂಬಳ ನೀಡಲಾಗುವುದಿಲ್ಲ. ನ್ಯಾಯಾಲಯದ ವಿಚಾರಣೆಗಾಗಿ ಆಗಾಗ ಬರಬೇಕಾಗಿರುವುದರಿಂದ ಮತ್ತು ವಕೀಲರೊಂದಿಗೆ ಇತರ ಪ್ರಕರಣಗಳ ಚರ್ಚೆಗಾಗಿ ಸಮಯ ಬೇಕಾಗಿರುವ ಕಾರಣ, ಅವರನ್ನು ಪೂರ್ಣ ಸಮಯದ ಕೆಲಸಕ್ಕೆ ನಿಯೋಜಿಸಿಲ್ಲ. ಪ್ರಜ್ವಲ್ ರೇವಣ್ಣ ಅವರ ಜೈಲು ಜೀವನವು ಸಾಮಾನ್ಯ ಕೈದಿಗಳಂತೆಯೇ ಇದ್ದು, ಕಾರಾಗೃಹದ ನಿಯಮಗಳನ್ನು ಪಾಲಿಸುತ್ತಿದ್ದಾರೆ. ಈ ಪ್ರಕರಣದಲ್ಲಿ ಅವರಿಗೆ ಜೀವಾವಧಿ ಶಿಕ್ಷೆಯಾಗಿದ್ದರೂ, ಜೈಲಿನಲ್ಲಿ ಕೆಲಸ ಮಾಡುವ ಮೂಲಕ ಸಮಯ ಕಳೆಯುತ್ತಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ಹುಬ್ಬಳ್ಳಿ : ಗಣೇಶ ವಿಸರ್ಜನೆ ವೇಳೆ ರಾಜ್ಯದಲ್ಲಿ ಹಲವಡೆ ಅಹಿತಕರ ಘಟನೆ ನಡೆದಿದ್ದು ಇದೀಗ ಹುಬ್ಬಳ್ಳಿಯಲ್ಲಿ ಗಣೇಶ ವಿಸರ್ಜನೆಯ ವೇಳೆ ವ್ಯಕ್ತಿಗೆ ಚಾಕು ಇರಿಯಲಾಗಿದೆ. ಹುಬ್ಬಳ್ಳಿಯ ಕೊಪ್ಪೀಕರ ರಸ್ತೆಯಲ್ಲಿ ನಿನ್ನೆ ರಾತ್ರಿ ಒಂದು ಘಟನೆ ನಡೆದಿದ್ದು ಪ್ರತಾಪ್ ಅಲಿಯಾಸ್ ಚೇತನ ಗೌಡರ (32) ಗೆ ಚಾಕು ಇರಿಲಾಗಿದೆ. ಹುಬ್ಬಳ್ಳಿ ತಾಲೂಕಿನ ಬಿಡನಾಳ ಮಾರುತಿ ನಗರದ ನಿವಾಸಿ ಪ್ರತಾಪ್ ಗೌಡ ಎಂದು ತಿಳಿದು ಬಂದಿದ್ದು, ಸೋನಿಯಾ ಗಾಂಧಿನಗರದ ಶಿರಿ ಹಾಗೂ ಇನ್ನಿಬ್ಬರಿಂದ ಕೃತ್ಯ ಎಸಗಿರುವ ಆರೋಪ ಕೇಳಿ ಬಂದಿದೆ. ಗಣೇಶ ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಪ್ರತಾಪ್ ಗೆ ಚಾಕು ಇರಿದಿದ್ದಾರೆ. ಮೂತ್ರ ವಿಸರ್ಜನೆಗೆ ಎಂದು ಹೋಗುತ್ತಿದ್ದಾಗ ಏಕಾಏಕಿ ಚಾಕು ಇರಿಯಲಾಗಿದೆ. ಟ್ರಾನ್ಸ್ಪೋರ್ಟ್ ಕಂಪನಿ ಒಂದರಲ್ಲಿ ಪ್ರತಾಪ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಕಳೆದ ಒಂದು ತಿಂಗಳ ಹಿಂದೆ ಅಷ್ಟೇ ಪ್ರತಾಪ್ ಮದುವೆಯಾಗಿದ್ದಾನೆ. ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರತಾಪ್ ಗೆ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿದ್ದಾರೆ ಹುಬ್ಬಳ್ಳಿಯ…
ಚಿತ್ರದುರ್ಗ : ಆನ್‌ಲೈನ್ ಬೆಟ್ಟಿಂಗ್ ಹಾಗೂ ಮನಿ ಗೇಮಿಂಗ್ ಹಗರಣ ದಲ್ಲಿ ಬಂಧಿತರಾಗಿರುವ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರಿಗೆ ಸೇರಿದ ಆಸ್ತಿಪಾಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ನಿನ್ನೆ 3ನೇ ಸಲ ದಾಳಿ ಮಾಡಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರ ಬ್ಯಾಂಕ್‌ಗಳಿಗೆ ಇ.ಡಿ. ಅಧಿಕಾರಿಗಳ ತಂಡ ಶನಿವಾರ ಬೆಳಗ್ಗೆ ಭೇಟಿ, ಪಪ್ಪಿ ಅವರಿಗೆ ಸೇರಿದ ಲಾಕರ್ ನಲ್ಲಿದ್ದವು ಎನ್ನಲಾದ ಅಮೂಲ್ಯ ವಸ್ತುಗಳಿದ್ದ 2 ಬಟ್ಟೆ ಚೀಲಗಳನ್ನು ತೆಗೆದು ಕೊಂಡು ಹೋಗಿದೆ. ಇದರಲ್ಲಿ ಚಿನ್ನ ಇತ್ತೋ ಅಥವಾ ದಾಖಲೆಗಳಿದ್ದವೋ ಎನ್ನುವುದು ಇನ್ನಷ್ಟೇ ಖಚಿತವಾಗಬೇಕಿದೆ. ಆದಾಗ್ಯೂ ಲಾಕರ್‌ಗಳಲ್ಲಿ ಚಿನ್ನ ಸಿಕ್ಕಿರುವುದನ್ನು ಬಲ್ಲ ಮೂಲಗಳು ಖಚಿತಪಡಿಸಿವೆ. ಎಲ್ಲಾ ಬ್ಯಾಂಕ್‌ಗಳ ಲಾಕರ್‌ಗಳಲ್ಲಿ ಪಪ್ಪಿಗೆ ಸೇರಿದ ಅಪಾರವಾದ ಚಿನ್ನಾಭರಣ ಚೀಲಗಳು ಪತ್ತೆಯಾಗಿವೆ ಎನ್ನಲಾಗಿದೆ. ಒಟ್ಟು 4 ಬ್ಯಾಂಕ್‌ಗಳಿಂದ ಇ.ಡಿ. ಅಧಿಕಾರಿಗಳು ಲಾಕರ್‌ನಲ್ಲಿ ದೊರೆತ ಚಿನ್ನದ ಆಭರಣಗಳನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಆದರೆ, ಎಷ್ಟು ಪ್ರಮಾಣ ಅದರ ಮೌಲ್ಯದ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಈಗಾಗಲೇ ಬೆಂಗಳೂರಿನ…
ಮಂಡ್ಯ : ಮಂಡ್ಯದಲ್ಲಿ ನಿಶ್ಚಿತಾರ್ಥವಾಗಿ ಮದುವೆ ರದ್ದಾಗಿದ್ದಕ್ಕೆ ಮನನೊಂದ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ತಾಲೂಕಿನ ಕಿಕ್ಕೇರಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವತಿಯನ್ನು ವಳಗೆರೆಮೆಣಸ ಗ್ರಾಮದ ಕಾವ್ಯಾ (26) ಎಂದು ತಿಳಿದುಬಂದಿದೆ. ಅವರು ಕಿಕ್ಕೇರಿಯ ರೈತ ಸಂಪರ್ಕ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದರು. 15 ದಿನದ ಹಿಂದೆ ಹಾಸನದ ಹುಡುಗನ ಜೊತೆ ನಿಶ್ಚಿತಾರ್ಥ ಆಗಿತ್ತು. ಹುಡುಗ ಪದವೀಧರ, ಉದ್ಯೋಗದಲ್ಲಿದ್ದಾನೆ ಎಂದು ಆತನ ಮನೆಯವರು ಸುಳ್ಳು ಹೇಳಿ ಮದುವೆ ಮಾಡಿಸಲು ಮುಂದಾಗಿದ್ದರು. ಆದರೆ ವಿಷಯ ಸುಳ್ಳೆಂದು ತಿಳಿದ ಹುಡುಗಿಯ ಮನೆಯವರು ಮದುವೆ ರದ್ದು ಮಾಡಿದ್ದರು. ಇದರಿಂದ ಮನನೊಂದ ಕಾವ್ಯಾ ತಾನು ಕೆಲಸ ಮಾಡುತ್ತಿದ್ದ ಕಚೇರಿಯಲ್ಲಿ ಗುರುವಾರ ಬೆಳಗ್ಗೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಬೆಳಗಾವಿ : ಕಳೆದ 2 ದಿನಗಳ ಹಿಂದೆ ವಿಜಯಪುರದಲ್ಲಿ ವಿದ್ಯುತ್ ತಗುಲಿ ಯುವಕನೊಬ್ಬ ಸಾವನ್ನಪ್ಪಿದ್ದ ಘಟನೆ ನಗರದ ಗಾಂಧಿ ಚೌಕ್ ಬಳಿ ನಡೆದಿತ್ತು. ಶುಭಂ (22) ಎಂಬ ಯುವಕ ಧ್ವಜದಿಂದ ವಿದ್ಯುತ್ ತಂತಿ ಮೇಲೇತ್ತುವಾಗ ಕರೆಂಟ್ ಶಾಕ್ ತಗುಲಿ ಸಾವನ್ನಪ್ಪಿದ್ದಾನೆ. ಈ ಘಟನೆ ಮಾಸುವ ಮುನ್ನವೇ ಬೆಳಗಾವಿಯಲ್ಲಿ ಗಣೇಶ ವಿಸರ್ಜನೆ ವೇಳೆ ಹೊಂಡದಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ್ದಾರೆ. ಹೌದು ಬೆಳಗಾವಿ ನಗರದ ಜಕ್ಕೇರಿ ಹೊಂಡದಲ್ಲಿ ಗಣೇಶ ವಿಸರ್ಜನೆ ವೇಳೆ ಹೊಂಡದಲ್ಲಿ ಮುಳುಗುತ್ತಿದ್ದ ಬೆಳಗಾವಿಯ ವಡ್ಡರವಾಡಿ ನಿವಾಸಿ ರಾಹುಲ್ ಬ್ಯಾಕವಾಡಕರ್ನನ್ನು ರಕ್ಷಣೆ ಮಾಡಲಾಗಿದೆ. ಆದರೆ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಬೆಳಗಾವಿಯ ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಮೂರ್ತಿ ವಿಸರ್ಜನೆ ಮಾಡಿ ಹಿಂದಿರುಗುವಾಗ ಕೈ ಸೋತು ಶುಭಂ ಕುಪ್ಪಟಗೇರಿ ಕೊಚ್ಚಿಕೊಂಡು ಹೋಗಿದ್ದಾನೆ. ಶುಭಂ, ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಯಡೋಗ ನಿವಾಸಿ. ಯಡೋಗ-ಚಾಪಗಾವಿ ನಡುವಿನ ಮಲಪ್ರಭಾ ನದಿ ಸೇತುವೆ ಬಳಿ ಘಟನೆ ನಡೆದಿದೆ. ಸದ್ಯ ಎಸ್ಡಿಆರ್ಎಫ್ ಸಿಬ್ಬಂದಿಯಿಂದ ಶುಭಂ…
ರಾಯಚೂರು : ಕಳೆದ ವರ್ಷ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಲ್ಲಿ ಗಣೇಶ ವಿಸರ್ಜನೆ ವೇಳೆ ಗಲಾಟೆ ನಡೆದಿದ್ದು ಇಡಿ ರಾಜ್ಯಾದ್ಯಂತ ಭಾರಿ ಸುದ್ದಿಯಾಗಿತ್ತು. ಈ ಬಾರಿ ನಾಗಮಂಗಲದಲ್ಲಿ ಹಿಂದೂ ಮಹಾ ಗಣಪತಿ ವಿಸರ್ಜನೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದೆ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಆದರೆ ರಾಯಚೂರಲ್ಲಿ ನಿನ್ನೆ ಕಿಡಿಗೇಡಿಗಳು ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಹೌದು ರಾಯಚೂರಿನಲ್ಲಿ ಗಣೇಶ ಮೂರ್ತಿಯ ಅದ್ಧೂರಿ ಮೆರವಣಿಗೆ ವೇಳೆ ಇಬ್ಬರು ದುಷ್ಕರ್ಮಿಗಳು ದುಷ್ಟತನ ಮೆರೆದಿದ್ದಾರೆ. ಗಂಗಾ ನಿವಾಸ ರಸ್ತೆಯಲ್ಲಿ ಪಾರ್ವತಿ ಸುತನ ಮೆರವಣಿಗೆ ವೇಳೆ, ಇಬ್ಬರು ಮನೆ ಮೇಲೆ ನಿಂತು ರಾಜಾರೋಷವಾಗಿ ಕಲ್ಲು ತೂರಿದ್ದಾರೆ. ಈ ವೇಳೆ ವಿನಯ್, ಗಣೇಶ್ ಎಂಬುವರು ಗಾಯಗೊಂಡಿದ್ದಾರೆ. ಘಟನೆ ಬೆನ್ನಲ್ಲೇ ಕೆರಳಿದ ಸಾರ್ವಜನಿಕರು ಪುಂಡರನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಹಳೆ ವೈಷಮ್ಯ ಮನಸ್ಸಿನಲ್ಲಿ ಇಟ್ಕೊಂಡು, ತಮ್ಮ ಏರಿಯಾದಲ್ಲಿ ಮೂರ್ತಿಯ ಶೋಭಯಾತ್ರೆ ಮಾಡಬಾರದು ಅಂತಾ ಈ ಕೃತ್ಯ ಎಸಗಿದ್ದಾಗಿ ಆರೋಪಿಗಳಾದ ಪ್ರಶಾಂತ್ ಹಾಗೂ ಪ್ರವೀಣ್,…
ವಿಜಯಪುರ : ಕೃಷ್ಣಾ ಮೇಲ್ದಂಡೆ ಯೋಜನೆಗಾಗಿ ಭೂಸ್ವಾಧಿನ ಪಡಿಸಿಕೊಳ್ಳಲು ಡಿಸಿಎಂ ಡಿ.ಕೆ.ಶಿವಕುಮಾರ್ ನಡೆಸಿದ ಸಭೆ ಬಹುತೇಶ್ ಫಲಪ್ರದವಾಗಿದ್ದು, ಮುಂದಿನ ವಾರ ದರ ನಿಗದಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಆಲಮಟ್ಟಿ ಅಣೆಕಟ್ಟೆಯಲ್ಲಿ ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರಿಗೆ ಭೂ ಪರಿಹಾರ ಕೊಡುವ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಭೂಮಿ ಕಳೆದುಕೊಳ್ಳುವ ಬಾಧಿತ ರೈತರು, ಹೋರಾಟಗಾರರ ಜೊತೆ ಬೆಳಗಾವಿಯಲ್ಲಿ ಸಭೆ ನಡೆಸಿದ್ದೇವೆ. ಅವರೆಲ್ಲರೂ ಒಂದೇ ಬಾರಿ ಕನ್ಸೆಂಟ್ ಅವಾರ್ಡ್ ಮಾಡಿ ಎಂದು ತಿಳಿಸಿದ್ದಾರೆ. ಸರ್ಕಾರವೂ ಇದಕ್ಕೆ ಒಪ್ಪಿದೆ ಎಂದರು. 3 ದಿನಗಳ ಹಿಂದೆ ಡಿಸಿಎಂ ಡಿ.ಕೆ. ಈ ವಿಚಾರ ಒಂದು ಹಂತಕ್ಕೆ ಬಂದಿದೆ. ಮುಂದಿನ ವಾರದಲ್ಲಿ ನಾನು, ಡಿಕೆಶಿ, ಸಚಿವರು, ಶಾಸಕರು, ಸೇರಿ ಒಂದು ದರ ನಿಗದಿ ಮಾಡುತ್ತೇವೆ. ಖುಷ್ಕಿ ಜಮೀನು, ನೀರಾವರಿ ಜಮೀನು, ನಾಲಾ ಜಮೀನುಗಳಿಗೆ ಎಷ್ಟೆಷ್ಟು ಪರಿಹಾರ ಕೊಡಬೇಕು ಎಂದು ತೀರ್ಮಾನಿಸುತ್ತೇವೆ. ಇದನ್ನು ರೈತರು ಒಪ್ಪಿಕೊಳ್ಳಬೇಕು. ಯಾರೂ ಕೋರ್ಟ್‌ಗೆ ಹೋಗಬಾರದು.…
ಬೆಂಗಳೂರು : ಖಗೋಳದ ಅಪರೂಪದ ಮತ್ತು ಅಪೂರ್ವವಾದ ವಿದ್ಯಮಾನ ಖಗ್ರಾಸ ಚಂದ್ರ ಗ್ರಹಣ ಸೆ.7ರ ರಾತ್ರಿ ಜರುಗಲಿದ್ದು, ಚಂದಿರನು ರಕ್ತ ವರ್ಣ/ತಾಮ್ರ ವರ್ಣದಲ್ಲಿ ಕಾಣಿಸಲಿದ್ದಾನೆ. ಈ ಅಪರೂಪದ ಖಗೋಳ ವಿಸ್ಮಯ ಭಾರತದಲ್ಲಿ 5 ತಾಸು 27 ನಿಮಿಷಗಳ ಕಾಲ ಇರಲಿದೆ. ಅದರಲ್ಲಿ 1 ತಾಸು 22 ನಿಮಿಷಗಳ ಕಾಲ ಸಂಪೂರ್ಣ ಗ್ರಹಣ ಇರಲಿದೆ. ನಾಗರಿಕರು ತಮ್ಮ ಮನೆಗಳ ಮೇಲೆ ನಿಂತು ಬರಿಗಣ್ಣಿನಲ್ಲೇ ಕೆಂಪು ಶಶಿಯನ್ನು ವೀಕ್ಷಿಸಬಹುದಾಗಿದೆ ಎಂದು ಜವಾಹರಲಾಲ್ ನೆಹರುತಾರಾಲಯದ ನಿರ್ದೇಶಕ, ವಿಜ್ಞಾನಿ ಡಾ.ಬಿ.ಆರ್. ಗುರುಪ್ರಸಾದ್ ತಿಳಿಸಿದರು. ಸೆ.7ರಂದು ರಾತ್ರಿ 8.58ಕ್ಕೆ ಚಂದ್ರ ಗ್ರಹಣ ಆರಂಭವಾಗಿ, 9.57ರಿಂದ ಭಾಗಶಃ ಚಂದ್ರಗ್ರಹಣ ಶುರುವಾಗು ತ್ತದೆ. ಆದರೆ, ರಾತ್ರಿ 11ರಿಂದ ಸಂಪೂರ್ಣ ಗ್ರಹಣ ಆರಂಭವಾಗುತ್ತದೆ. ಈ ಅವಧಿಯಲ್ಲೇ ಕೆಂಪು ಚಂದಿರನನ್ನು ಕಾಣಬಹುದಾಗಿದೆ. ಗ್ರಹಣ ತಡರಾತ್ರಿ 1.26 ಮುಕ್ತಾಯಗೊಳ್ಳಲಿದೆ. ಭಾರತದ ಎಲ್ಲೆಡೆ ಈ ಗ್ರಹಣ ಕಾಣಿಸುತ್ತದೆ. ಜಗತ್ತಿನ ಜನಸಂಖ್ಯೆಯ ಶೇ.88ರಷ್ಟು ಜನ ಈ ಗ್ರಹಣವನ್ನು ವೀಕ್ಷಿಸಬಹುದುಎಂದು ಗುರುಪ್ರಸಾದ್ ಮಾಹಿತಿ ನೀಡಿದರು. ಸೂರ್ಯ, ಭೂಮಿ ಮತ್ತು ಚಂದ್ರ…
ವಿಜಯಪುರ : ಕಳೆದ ಎರಡು ದಿನಗಳ ಹಿಂದೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷನ ಕೊಲೆ ಪ್ರಕರಣದಲ್ಲಿ ಕರ್ತವ್ಯ ಲೋಪ ಆಧಾರದಲ್ಲಿ ಚಡಚಣ ಪಿಎಸ್‌ಐ ಪ್ರವೀಣ್ ಅವರನ್ನು ಅಮಾನತು ಮಾಡಲಾಗಿದೆ. ಗ್ರಾಪಂ ಅಧ್ಯಕ್ಷ ಭೀಮನಗೌಡ ಬಿರಾದಾರ್‌ನ ಬರ್ಬರವಾಗಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಪ್ರಕರಣದಲ್ಲಿ ಕರ್ತವ್ಯ ಲೋಪ, ನಿರ್ಲಕ್ಷ್ಯ ಆರೋಪದ ಮೇಲೆ ಚಡಚಣ ಪಿಎಸ್ಐ ಪ್ರವೀಣರನ್ನು ಸಸ್ಪೆಂಡ್ ಮಾಡಲಾಗಿದೆ. ಅಮಾನತು ಆದೇಶವನ್ನು ಎಸ್ಪಿ ಲಕ್ಷ್ಮಣ ನಿಂಬರಗಿ ಜಾರಿ ಮಾಡಿದ್ದಾರೆ. ಕಳೆದ ಸೆ.3 ರ ಬೆಳಗ್ಗೆ ದೇವರನಿಂಬರಗಿ ಗ್ರಾಮದಲ್ಲಿ ಗುಂಡಿಕ್ಕಿ ಭೀಮನಗೌಡ ಹತ್ಯೆ ಮಾಡಲಾಗಿತ್ತು. ಚಡಚಣ ತಾಲೂಕಿನ ದೇವರನಿಂಬರಗಿ ಗ್ರಾಮದಲ್ಲಿ ಘಟನೆ ನಡೆದಿತ್ತು. ಬೆಳಗ್ಗೆ ಕಟಿಂಗ್ ಶಾಪ್‌ಗೆ ಬಂದಿದ್ದ ಭೀಮನಗೌಡನನ್ನ ನಾಲ್ವರು ಆರೋಪಿಗಳು ಕೃತ್ಯ ಎಸಗಿದ್ದರು. ಕಣ್ಣಿಗೆ ಖಾರದ ಪುಡಿ ಎರಚಿ ಕಂಟ್ರೀ ಪಿಸ್ತೂಲ್‌ನಿಂದ ಗುಂಡುಗಳನ್ನು ಹಾರಿಸಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಘಟನೆ ನಡೆದ ದಿನವೇ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಜೀವುಲ್ಲಾ ಮಕಾನದಾರ್, ವಾಸೀಂ ಮನಿಯಾರ್,…
ಬೀದರ್ : ಖಾಸಗಿ ಶಾಲಾ ಬಸ್ ಹರಿದು ಯುಕೆಜಿ ಓದುತ್ತಿದ್ದ 6 ವರ್ಷದ ಬಾಲಕಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಎಕ್ಕಂಬಾ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಕಾವೇರಿ ಆಕಾಶ್ ಎಂದು ತಿಳಿದುಬಂದಿದೆ. ವಿದ್ಯಾರ್ಥಿನಿ ಶಾಲೆಯ ಬಸ್‌ನಿಂದ ಕೆಳಗಡೆ ಇಳಿಯುವಾಗ ಅವಘಡ ಸಂಭವಿಸಿದೆ. ಚಾಲಕನ ನಿರ್ಲಕ್ಷ್ಯವೇ ಪುಟ್ಟ ವಿದ್ಯಾರ್ಥಿನಿ ದಾರುಣ ಸಾವಿಗೆ ಕಾರಣವಾಗಿದೆ. ಸದ್ಯ ನಿರ್ಲಕ್ಷ್ಯ ಮಾಡಿದ ಚಾಲಕನ ವಿರುದ್ಧ ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













