Author: kannadanewsnow05

ಬೆಂಗಳೂರು : ನಮ್ಮ ಮೆಟ್ರೋ ಟಿಕೆಟ್ ದರ ಹೆಚ್ಚಳ ಮಾಡಿದ್ದಕ್ಕಾಗಿ ನಿನ್ನೆ ಬೆಂಗಳೂರಿನ ಮೆಜೆಸ್ಟಿಕ್ ಬಳಿ ABVP ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಇದೀಗ ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ್ದರಿಂದ ಎಬಿವಿಪಿಯ ಒಟ್ಟು 16 ಕಾರ್ಯಕರ್ತರ ವಿರುದ್ಧ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಹೌದು ಬೆಂಗಳೂರಲ್ಲಿ ಮೆಟ್ರೋ ದರ ಏರಿಕೆ ಖಂಡಿಸಿ ಪ್ರತಿಭಟನೆ ಮಾಡಿದ್ದ ಎಬಿವಿಪಿ ಕಾರ್ಯಕರ್ತರ ವಿರುದ್ಧ ಇದೀಗ FIR ದಾಖಲಾಗಿದೆ. ಕಾಟನ್ ಪೇಟಿ ಠಾಣೆಯಲ್ಲಿ 16 ಜನರ ವಿರುದ್ಧ ದಾಖಲಾಗಿದೆ. ನಿನ್ನೆ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದ ಬಳಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ್ದಕ್ಕಾಗಿ ಇದೀಗ 16 ಜನ ಎಬಿವಿಪಿ ಕಾರ್ಯಕರ್ತರ ವಿರುದ್ಧ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

Read More

ವಿಜಯಪುರ : ಕಳೆದ ಎರಡು ದಿನಗಳ ಹಿಂದೆ ವಿಜಯಪುರದ ಮದೀನಾ ನಗರದ ಬಳಿ ಭೀಮಾ ತೀರದ ಹಂತಕ ಭಾಗಪ್ಪ ಹರಿಜನ್ ಭೀಕರವಾಗಿ ಕೊಲೆಯಾಗಿತ್ತು. ಇದೀಗ ಈ ಒಂದು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಚಾರಣೆಯ ವೇಳೆ ಹಂತಕರು ಭಾಗಪ್ಪನನ್ನು ಕೊಲೆ ಮಾಡಿರುವ ರಹಸ್ಯವನ್ನು ಬಾಯಿಬಿಟ್ಟಿದ್ದಾರೆ. ಫೆಬ್ರವರಿ 11 ರಂದು ರಾತ್ರಿ ವಿಜಯಪುರ ನಗರದ ಮದೀನಾ ನಗರದ ಬಾಡಿಗೆ ಮನೆಯಲ್ಲಿದ್ದ ಭೀಮಾತೀರದ ಹಂತಕ ಬಾಗಪ್ಪ ಹರಿಜನನ್ನು ಪ್ರಕಾಶ ಅಲಿಯಾಸ್​ ಪಿಂಟ್ಯಾ, ರಾಹುಲ ಭೀಮಾಶಂಕರ ತಳಕೇರಿ, ಸುದೀಪ ಕಾಂಬಳೆ ಹಾಗೂ ಮಣಿಕಂಠ ಅಲಿಯಾಸ್​ ಗದಿಗೆಪ್ಪ ಶಂಕ್ರಪ್ಪ ಬೆನಕೊಪ್ಪ ಭಾಗಪ್ಪನನ್ನು ಕೊಡಲಿ ಮತ್ತು ತಲ್ವಾರ್​​ನಿಂದ ಕೊಚ್ಚಿ ಹಾಕಲಾಗಿತ್ತು. ಎಡ ಮುಂಗೈ ಕಟ್ ಆಗಿ ಬಿದ್ದಿತ್ತು. ನಂತರ ಆತನ ಮೇಲೆ ಕಂಟ್ರಿ ಪಿಸ್ತೂಲ್​ನಿಂದ ಗುಂಡು ಹಾರಿಸಿ ಬಾಗಪ್ಪ ಮೃತಪಟ್ಟ ಎಂದು ದೃಢ ಪಡಿಸಿಕೊಂಡು ಪರಾರಿಯಾಗಿದ್ದರು. ವಿಚಾರ ತಿಳಿದು ಜಿಲ್ಲಾಪೊಲೀಸ್​ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಎಎಸ್ಪಿಗಳಾದ ಶಂಕರ ಮಾರೀಹಾಳ, ರಾಮನಗೌಡ…

Read More

ಬೆಂಗಳೂರು : ಕಾಂಗ್ರೆಸ್ ಮುಖಂಡ ಹಾಗೂ ಅಲ್ಪಸಂಖ್ಯಾತ ನಿಗಮದ ಅಧ್ಯಕ್ಷರಾಗಿರುವ ಬಿಕೆ ಅಲ್ತಾಫ್ ಖಾನ್ ಅವರಿಗೆ ಅನಾಮಿಕ ವ್ಯಕ್ತಿಯಿಂದ ಕೊಲೆ ಬೆದರಿಕೆ ಕರೆ ಬಂದಿದ್ದು, RSS ಚಮಚಾಗಿರಿ ಮಾಡಿದರೆ PFI ನಿನ್ನನ್ನು ಸುಮ್ಮನೆ ಬಿಡಲ್ಲ ಎಂದು ಬಿಕೆ ಅಲ್ತಾಫ್ ಖಾನ್ ಗೆ ಅನಾಮಿಕ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ. ಅಲ್ತಾಫ್ ಪರಿಚಯಸ್ಥ ಅಜ್ಮತ್ ಉಲ್ಲಾಗೆ ಕರೆ ಮಾಡಿ ಬೆದರಿಕೆ ಹಾಕಲಾಗಿದೆ. ಅಲ್ತಾಫ್ ಕಾಂಗ್ರೆಸ್ ಮುಖಂಡರಾಗಿದ್ದು, ಹಾಗೂ ಅಲ್ಪಸಂಖ್ಯಾತ ನಿಗಮದ ಅಧ್ಯಕ್ಷರಾಗಿದ್ದಾರೆ. ಈ ಕುರಿತು ಜೆಜೆ ನಗರ ಠಾಣೆಗೆ ಬಿಕೆ ಅಲ್ತಾಫ್ ಖಾನ್ ದೂರು ನೀಡಿದ್ದಾರೆ. ಅಲ್ಲದೆ ಕೋರ್ಟ್ ನಲ್ಲಿರುವ ಕೇಸ್ ಗೂ ಸಾಕ್ಷಿ ಹೇಳದಂತೆ ಬೆದರಿಕೆ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಫೆಬ್ರವರಿ 5ರಂದು ರಾತ್ರಿ 8 ಗಂಟೆ ಸುಮಾರಿಗೆ ಬೆದರಿಕೆ ಕರೆ ಬಂದಿದೆ ಎನ್ನಲಾಗಿದೆ. ಈ ಕುರಿತು ಜಯನಗರ ಠಾಣೆಯಲ್ಲಿ FIR ದಾಖಲಾಗಿದೆ.

Read More

ಉಡುಪಿ : ಪ್ರೇಮಿಗಳ ದಿನಾಚರಣೆ ದಿನದಂದೇ ಉಡುಪಿಯಲ್ಲಿ ಹುಡುಗಿಯರಗೋಸ್ಕರ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ. ಉಡುಪಿ ಜಿಲ್ಲೆಯ ಮಣಿಪಾಲ್ ನಲ್ಲಿ ವಿದ್ಯಾರ್ಥಿಗಳ ಮಧ್ಯ ಮಾರಾಮಾರಿ ನಡೆದಿರುವ ಘಟನೆ ವರದಿಯಾಗಿದೆ. ಹೌದು ಹುಡುಗಿಯರ ವಿಚಾರಕ್ಕೆ ಹೊಡೆದಾಡಿಕೊಂಡ ವಿದ್ಯಾರ್ಥಿಗಳು. ಉಡುಪಿ ತಾಲೂಕಿನ ಮಣಿಪಾಲದಲ್ಲಿ ಹುಡುಗಿಯರ ವಿಚಾರಕ್ಕೆ ವಿದ್ಯಾರ್ಥಿಗಳ ಮಧ್ಯ ಮಾರಾಮಾರಿ ನಡೆದಿದೆ. ಮಣಿಪಾಲನ ಕಾಯಿನ್ ವೃತ್ತದ ಬಳಿಯ ಬಾರ್ ಮುಂದೆ ನಿನ್ನೆ ಈ ಒಂದು ಗಲಾಟೆ ನಡೆದಿದೆ.ಗಲಾಟೆ ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ನಿಯಂತ್ರಿಸಲು ಪೊಲೀಸರು ವಿಫಲರಾಗಿದ್ದಾರೆ. ಮಣಿಪಾಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉತ್ತರಪ್ರದೇಶ : ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭ ಮೇಳಕ್ಕೆ ಪವಿತ್ರ ಸ್ಥಾನಕ್ಕೆ ಎಂದು ತೆರಳುತ್ತಿದ್ದ ವೇಳೆ ಇದೀಗ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಬೊಲೆರೋ ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತದಲ್ಲಿ 10 ಜನ ಸಾವನ್ನಪ್ಪಿದ್ದು 19 ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮಿರ್ಜಾಪುರ ಮತ್ತು ಪ್ರಯಾಗ್ ರಾಜ್ ರಾಷ್ಟೀಯ ಹೆದ್ದಾರಿಯಲ್ಲಿ ನಡೆದಿದೆ. ಕುಂಭ ಮೇಳಕ್ಕೆ ಎಂದು ಪವಿತ್ರ ಸ್ನಾನ ಮಾಡಲು, ತೆರಳುವ ವೇಳೆ ಮಿರ್ಜಾಪುರ ಪ್ರಯಾಗ್ರಾಜ್ ಹೆದ್ದಾರಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದೆ. ಬೋಲೇರೋ ವಾಹನ ಮತ್ತು ಬಸ್ ನಡುವೆ ಅಪಘಾತ ಸಂಭವಿಸಿ 10 ಜನ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಕುಂಭಮೇಳಕ್ಕೆ ತರುಳುವಾಗತೆರಳುವಾಗ ಈ ಭೀಕರವಾದ ಅಪಘಾತವಾಗಿ 10 ಜನ ದುರ್ಮರಣ ಹೊಂದಿದ್ದಾರೆ. ಮೃತರನ್ನು ಛತ್ತಿಸ್ಗಢ ಕೊರ್ಬಾ ಜಿಲ್ಲೆಯ 10 ಜನರು ಸಾವನ್ನಪ್ಪಿದ್ದಾರೆ. ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಲು ಬರುವಾಗ ಈ ಒಂದು ಘೋರವಾದ ದುರಂತ ಸಂಭವಿಸಿದೆ. ಘಟನೆಯಲ್ಲಿ 19 ಜನರಿಗೆ ಗಂಭೀರವಾದ ಗಾಯಗಳಾಗಿದ್ದು, ಕೂಡಲೇ ಅವರನ್ನು ಸ್ಥಳೀಯ…

Read More

ಬೆಂಗಳೂರು : ಬೀದರ್ ವಿಶ್ವವಿದ್ಯಾಲಯ ಒಂದನ್ನು ಹೊರತುಪಡಿಸಿ ರಾಜ್ಯದಲ್ಲಿ ಬಿಜೆಪಿ ಅವಧಿಯಲ್ಲಿ ಆರಂಭಿಸಲಾಗಿದ್ದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ರಾಜ್ಯ ಸರ್ಕಾರ ಮುಂದಾಗಿದ್ದು ಸರ್ಕಾರದ ಈ ಒಂದು ನಡೆಗೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಬಿಜೆಪಿ ನಾಯಕರು ಸುದ್ದಿಗೋಷ್ಠಿ ನಡೆಸಲಿದ್ದಾರೆ.ಬಳಿಕ ಸರ್ಕಾರದ ಈ ಒಂದು ನಿರ್ಧಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡುವ ಕುರಿತು ಚಿಂತನೆ ನಡೆಸಿದ್ದಾರೆ. ಹೌದು ಇಂದು ಬೆಂಗಳೂರಿನಲ್ಲಿ ಬಿಜೆಪಿ ನಾಯಕರು ಸುದ್ದಿಗೋಷ್ಠಿ ನಡೆಸಲಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ಬಿಜೆಪಿ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಲಿದ್ದು ವಿಧಾನಸಭೆಯ ವಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ಈ ಸುದ್ದಿಗೋಷ್ಠಿ ನಡೆಯಲಿದೆ. ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಶಾಸಕ ಡಾ.ಸಿಎನ್ ಅಶ್ವಥ್ ನಾರಾಯಣ್ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಲಿದ್ದಾರೆ. ಬಿಜೆಪಿ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 10 ವಿಶ್ವವಿದ್ಯಾಲಯಗಳನ್ನು ಆರಂಭಿಸಲಾಗಿತ್ತು ಆ ಪೈಕಿ ಬೀದರ್ ವಿಶ್ವವಿದ್ಯಾಲಯವನ್ನು ಹೊರತುಪಡಿಸಿ, ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಡಿಕೆ ಶಿವಕುಮಾರ್ ನೇತೃತ್ವದ ಸಂಪುಟ ಉಪ ಸಮಿತಿ…

Read More

ಬೆಂಗಳೂರು : ಬೆಂಗಳೂರಿನಲ್ಲಿ ವಿಪರೀತವಾಗಿ ಬೀದಿ ನಾಯಿಗಳ ಕಾಟ ಹೆಚ್ಚಾಗಿದೆ, ಇತ್ತೀಚಿಗೆ ಅಂತೂ ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಇದೀಗ ಬೀದಿನಾಯಿಗಳಿಗೆ ರೋಗಗಳು ಹರಡದಂತೆ ಕ್ರಮವಹಿಸೋಕೆ ಹೊರಟಿರೋ ಪಾಲಿಕೆ ಬರೋಬ್ಬರಿ 4.98 ಕೋಟಿ ರೂಪಾಯಿ ವೆಚ್ಚದಲ್ಲಿ ಕಂಬೈನ್ಡ್ ವ್ಯಾಕ್ಸಿನ್ ಕೊಡಿಸೋಕೆ ಹೊರಟಿದೆ. ಹೌದು ಬೆಂಗಳೂರು ಮಹಾನಗರ ಪಾಲಿಕೆ ಬೀದಿನಾಯಿಗಳಿಗೆ ಸಂಯೋಜಿತ ಲಸಿಕೆ ಅಭಿಯಾನ ಆರಂಭಿಸಿದೆ. 4.98 ಕೋಟಿ ರೂ. ವೆಚ್ಚದ ಈ ಯೋಜನೆಯು ರೇಬೀಸ್ ಸೇರಿದಂತೆ ಇತರ ಸಾಂಕ್ರಾಮಿಕ ರೋಗಗಳನ್ನು ತಡೆಯುವ ಗುರಿ ಹೊಂದಿದೆ. ನಿನ್ನೆ ಈ ಒಂದು ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಸದ್ಯ ಪಾಲಿಕೆ ವ್ಯಾಪ್ತಿಯ ಬೀದಿನಾಯಿಗಳಿಗೆ ಊಟ ನೀಡುವ ಕೆಲಸ ಶುರುಮಾಡಿರುವ ಪಾಲಿಕೆ ಇದೀಗ ಬೀದಿನಾಯಿಗಳಿಗೆ ರೋಗ ಹರಡದಂತೆ ನಿಗಾ ಇಡುವುದಕ್ಕೆ ಹೊರಟಿದೆ. ಸದ್ಯ ಬಿಬಿಎಂಪಿಯ ಈ ಹೊಸ ಯೋಜನೆಗೆ ಇಂದು ಚಾಲನೆ ನೀಡಿರುವ ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಈ ಪ್ಲಾನ್ ನಿಂದ ನಾಯಿಗಳಿಗೆ ಹರಡುವ ರೋಗ ಹಾಗೂ…

Read More

ಚಾಮರಾಜನಗರ : ಸಾವು ಯಾವಾಗ ಹೇಗೆ ಬರುತ್ತದೆ ಎಂಬುದು ಯಾರಿಗೂ ತಿಳಿಯುವುದಿಲ್ಲ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಸಾವುಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಇದೀಗ ಚಾಮರಾಜನಗರದಲ್ಲಿ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನಪ್ಪಿರುವ ಘಟನೆ ವರದಿಯಾಗಿದೆ. ಹೌದು ಚಾಮರಾಜನಗರದಲ್ಲಿ ಬೇಕರಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಒಬ್ಬರು, ಗ್ರಾಹಕರಿಗೆ ಏನನ್ನೋ ತಿಂಡಿ ಕಟ್ಟಿ ಕೊಡುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಅವರಿಗೆ ಹೃದಯಸ್ತಂಬನವಾಗಿದೆ. ಕೂಡಲೇ ಬೇಕರಿಯಲ್ಲಿ ಆ ವ್ಯಕ್ತಿ ಕುಸಿದು ಬಿದ್ದು ಸ್ಥಳದಲ್ಲೇ ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Read More

ಹಾಸನ : ಒಂದು ಕಡೆ ಕಾಂಗ್ರೆಸ್ ನ ಹಲವು ನಾಯಕರು ಮುಂದಿನ 10 ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಸಿಎಂ ಎಂದು ಹೇಳಿಕೆ ನೀಡುತ್ತಿದ್ದರೆ, ಇನ್ನೊಂದು ಕಡೆ ಕೆಲವು ನಾಯಕರು ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ ನಿಭಾಯಿಸುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಇದೆಲ್ಲದರ ಮಧ್ಯ ವಿಪಕ್ಷ ನಾಯಕ ಆರಶೋಕ್ ಮುಂಬರುವ ನವೆಂಬರ್ 15 ತಾರೀಕಿನ ಒಳಗೆ ಸಿಎಂ ಬದಲಾಗಲಿದ್ದು ಕಾಂಗ್ರೆಸ್ನಲ್ಲಿ ಜ್ವಾಲಾಮುಖಿ ಸ್ಪೋಟಿಸಲಿದೆ ಎಂದು ಭವಿಷ್ಯ ನುಡಿದರು. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬರುವ ನವೆಂಬರ್15-16ರೊಳಗೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಯಾಗುವುದು ನಿಶ್ಚಿತವಾಗಿದ್ದು, ನವೆಂಬರ್ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸಿಡಿಯಲಿದೆ ಎಂದು ಅವರು ಭವಿಷ್ಯ ನುಡಿದರು. ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ನನಗೆ ಖಚಿತ ಮಾಹಿತಿ ಇದೆ. ಆ ಬಳಿಕ ಕಾಂಗ್ರೆಸ್‌ನಲ್ಲಿ ಉಂಟಾಗುವ ಜ್ವಾಲಾ ಮುಖಿ ನಂದಿಸಲು ಈಗಲೇ ಅಗ್ನಿಶಾಮಕವಾಹನಗಳನ್ನು ಬುಕ್ ಮಾಡಿಕೊಳ್ಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ದರಿದ್ರ ಸರ್ಕಾರ. ಭ್ರಷ್ಟಾಚಾರ, ಆಡಳಿತ ವೈಫಲ್ಯ ಮತ್ತು…

Read More

ಮೈಸೂರು : ಪ್ರಕರಣ ಒಂದನ್ನು ಇತ್ಯರ್ಥ ಪಡಿಸಲು ಪಿಎಸ್ಐ ಅಧಿಕಾರಿ ಒಬ್ಬ 80,000ಕ್ಕೆ ಬೇಡಿಕೆ ಇಟ್ಟಿದ್ದು ಈ ವೇಳೆ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಬೆಟ್ಟದಪುರದಲ್ಲಿ ನಡೆದಿದೆ. ಹೌದು ಬೆಟ್ಟದಪುರ ಠಾಣೆಯಲ್ಲಿ ಪಿಎಸ್ಐ ಶಿವಶಂಕರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಠಾಣೆಯ ಪಿಎಸ್ಐ 80,000 ಹಣ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಗಳ ಬಲೆಗೆ ಬಿದ್ದಿದ್ದಾರೆ. ಪ್ರಕರಣ ಒಂದನ್ನು ಇತ್ಯರ್ಥ ಗೊಳಿಸಲು ಲಂಚಕ್ಕೆ ಶಿವಶಂಕರ್ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಲೋಕಾ ಯುಕ್ತ ಅಧಿಕಾರಿಗಳಿಗೆ ದೂರು ನೀಡಲಾಗಿತ್ತು. 80,000 ಹಣ ಪಡೆಯುವ ವೇಳೆ ಪಿಎಸ್ಐ ಶಿವಶಂಕರ್ ರೆಡ್ ಹ್ಯಾಂಡ್ ಆಗಿ ಸಿಗಿಬಿದ್ದಿದ್ದಾರೆ. ಸದ್ಯ ಪಿಎಸ್ಐ ಶಿವಶಂಕರ್ ವಶಕ್ಕೆ ಪಡೆದು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

Read More