Author: kannadanewsnow05

ಮೈಸೂರು : ಪಾರಂಪರಿಕ ಕಟ್ಟಡದ ಬಳಿ ಸಿಗರೇಟ್ ಸೇದುತ್ತಾ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ಫೋಟೋ ಶೂಟ್ ನಡೆಸಿದ್ದಾನೆ. ಮೈಸೂರಿನ ಹಳೆ ಡಿಸಿ ಕಚೇರಿ ಕಟ್ಟಡದ ಬಳಿ ರಜತ್ ಫೋಟೋ ಶೂಟ್ ನಡೆಸಿದ್ದು, ಇದೀಗ ರಜತ್ ಕಿಶನ್ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ಎಡವಟ್ಟಿಗೆ ಕಾರಣ ಏನೆಂದರೆ, ಫೋಟೋಶೂಟ್ ಮಾಡಿಸಿ ರಜತ್ ಇನ್ಸ್ಟಾಗ್ರಾಮ್ ನಲ್ಲಿ ಹಾಕಿಕೊಂಡಿದ್ದಾನೆ. ಧೂಮಪಾನ ಅಪಾಯಕಾರಿ ಸಂದೇಶ ಹಾಕದೆ ವಿಡಿಯೋ ಅಪ್ಲೋಡ್ ಮಾಡಿದ್ದಾನೆ. ಈ ಹಿಂದೆ ಮಚ್ಚು ಹಿಡಿದು ಫೋಟೋಶೂಟ್ ಮಾಡಿಸಿದ್ದ. ಇದೀಗ ಮೈಸೂರಿನ ಪಾರಂಪರಿಕ ಕಟ್ಟಡದ ಬಳಿ ಸಿಗರೇಟ್ ಹಿಡಿದು ಪೋಸ್ ಕೊಟ್ಟು ಫೋಟೋ ಶೂಟ್ ಮಾಡಿ ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದಾನೆ.

Read More

ಗದಗ : ಗದಗದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಕ್ರೂಜರ್ ವಾಹನ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಗದಗ ಜಿಲ್ಲೆಯ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಕ್ರೂಜರ್ ನಲ್ಲಿದ್ದ ಮೂವರು ಸವನ ಪೆದ್ದು ಹತ್ತಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಕೂಲಿ ಕೆಲಸಕ್ಕಾಗಿ ಗಜೇಂದ್ರಗಡದಿಂದ ರೋಣ ಕಡೆಗೆ ಕಾರ್ಮಿಕರು ಕಾರ್ಮಿಕರು ಕೇಳುತ್ತಿದ್ದರು ಈ ವೇಳೆ ಎದುರುಗಡೆ ಬಂದ ಲಾರಿ ಹಾಗೂ ಕ್ರೂಜರ್ ವಾಹನ ನಡುವೆ ಅಪಘಾತ ಸಂಭವಿಸಿ ಮೂವರು ಸಾವನಪ್ಪಿದ್ದು, ಸದ್ಯ ಘಟನಾ ಸ್ಥಳಕ್ಕೆ ರೋಣ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.

Read More

ಚಿತ್ರದುರ್ಗ : ಈಗಾಗಲೇ ಕನ್ನಡ ಮಾಧ್ಯಮದಲ್ಲಿ ಕಲಿತ ಅಭ್ಯರ್ಥಿಗಳಿಗೆ ನೇಮಕಾತಿಯಲ್ಲಿ ಶೇ.5ರಷ್ಟು ಇರುವ ಮೀಸಲಾತಿಯನ್ನು ಶೇ. 10ಕ್ಕೆ ಏರಿಸಲು ರಾಜ್ಯ ಸರಕಾರಕ್ಕೆ ಶಿಫಾರಸು ಮಾಡುವುದಾಗಿ ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಡಾ.ಮರುಷೋತ್ತಮ ಬಿಳಿಮಲೆ ತಿಳಿಸಿದರು. ಸರಕಾರಿ ಹಾಗೂ ಖಾಸಗಿ ವಲಯಗಳ ಉದ್ಯೋಗದಲ್ಲಿ ಕನ್ನಡಿಗರ ಪ್ರಾತಿನಿಧ್ಯ ಕಡಿಮೆಯಾಗಿದೆ. ಎಸ್ಎಸ್‌ಎಲ್‌ಸಿ ವರೆಗೆ ಕನ್ನಡ ಭಾಷೆಯಲ್ಲಿ ಓದಿದವರಿಗೆ ರಾಜ್ಯ ಸರಕಾರಿ ನೇಮಕಾತಿಗಳಲ್ಲಿ ಈಗಿರುವ ಶೇ.5ರಷ್ಟು ಮೀಸಲನ್ನು ಶೇ. 10ಕ್ಕೆ ಏರಿಸಿದರೆ ಕನ್ನಡಿಗರಿಗೆ ಉದ್ಯೋಗಾವಕಾಶಗಳು ಹೆಚ್ಚಾಗಲಿವೆ. ಸರಕಾರ ನಾನಾ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ನಡೆಯುವ ನೇಮಕಾತಿಯಲ್ಲೂ ಕನ್ನಡ ಮಾಧ್ಯಮದಲ್ಲಿ ಕಲಿತ ಅಭ್ಯರ್ಥಿಗಳಿಗೆ ಆದ್ಯತೆ ನೀಡುವಂತೆ ಶಿಫಾರಸು ಮಾಡಲಾಗುವುದು ಸುದ್ದಿಗೋಷ್ಠಿಯಲ್ಲಿ ಹೇಳಿದರು. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ-2022ಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಈ ಕಾಯಿದೆಗೆ ನಿಯಮಗಳ ರಚನೆ ಕುರಿತು ಫೆ.11ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ನಿಯಮಗಳು ರಚನೆಯಾದರೆ ಕನ್ನಡವನ್ನು ಸರಿಯಾಗಿ ಅನುಷ್ಠಾನಗೊಳಿಸದ ಅಧಿಕಾರಿಗಳ ವಿರುದ್ಧ ದಂಡ, ವರ್ಗಾವಣೆ ಸೇರಿದಂತೆ ಶಿಸ್ತು…

Read More

ಮೈಸೂರು : ಹಳೆ ವೈಷಮ್ಯ ಹಿನ್ನೆಲೆಯಲ್ಲಿ ಕೋರ್ಟ್ ಆವರಣದಲ್ಲಿಯೇ ವಕೀಲನ ಮೇಲೆ ಹಲ್ಲೆ ನಡೆಸಲಾಗಿದೆ ಮೈಸೂರು ಜಿಲ್ಲೆಯ ಟಿ ನರಸೀಪುರ ಕೋರ್ಟ್ ಮುಂಭಾಗ ಈ ಒಂದು ಘಟನೆ ನಡೆದಿದ್ದು, ಸಂತೋಷ ಎಂಬಾತನಿಂದ ತೊಟ್ಟಬಾಡಿ ಮಹದೇವಸ್ವಾಮಿ ಮೇಲೆ ಹಲ್ಲೆ ನಡೆದಿದೆ. ಮಹದೇವಸ್ವಾಮಿ ಟಿ ನರಸಿಪುರ ತಾಲೂಕು ವಕೀಲರ ಸಂಘದ ಅಧ್ಯಕ್ಷನಾಗಿದ್ದು, ಹಲ್ಲೆಗೆ ಒಳಗಾದ ಮಹದೇವಸ್ವಾಮಿಗೆ ಟಿ ನರಸೀಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿ ಸಂತೋಷವನ್ನು ಪೊಲೀಸರು ವರ್ಷಕ್ಕೆ ಪಡೆದಿದ್ದಾರೆ ಘಟನೆ ಸಂಭಂದ ಟಿ ನರಸಿಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ವಕೀಲ ಮಹದೇವಸ್ವಾಮಿ ಮೇಲಿನ ಹಲ್ಲಿಗೆ ವಕೀಲರ ಸಂಘ ಇದೀಗ ಖಂಡನೆ ವ್ಯಕ್ತಪಡಿಸಿದೆ.

Read More

ಇಸ್ಲಾಮಾಬಾದ್ : ಟಿ20 ವಿಶ್ವಕಪ್ ನಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಕ್ರಿಕೆಟ್ ಆಡುವುದಿಲ್ಲ ಎಂದು ಪಾಕಿಸ್ತಾನದ ಪ್ರಧಾನ ಮಂತ್ರಿ ಶಹಬಾಜ್ ಶರೀಫ್ ಮತ್ತೆ ಪುನರುಚ್ಚರಿಸಿದ್ದಾರೆ. ಭಾರತದ ವಿರುದ್ಧ ಪಂದ್ಯವನ್ನು ಪಾಕಿಸ್ತಾನ ತಂಡ ಆಡುವುದಿಲ್ಲ. ಬಾಂಗ್ಲಾದೇಶಕ್ಕೆ ಬೆಂಬಲ ನೀಡಲು ನಿರ್ಧಾರ ಮಾಡಿದ್ದೇವೆ ಎಂದು ಪ್ರಧಾನಮಂತ್ರಿ ಹೇಳಿಕೆ ನೀಡಿದ್ದಾರೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಮುಂಬರುವ ಐಸಿಸಿ ಪುರುಷರ ಟಿ20 ವಿಶ್ವಕಪ್ 2026 ರಲ್ಲಿ, ಗುಂಪು ಹಂತಗಳಲ್ಲಿ ತಮ್ಮ ಹಿರಿಯ ಪುರುಷರ ರಾಷ್ಟ್ರೀಯ ಕ್ರಿಕೆಟ್ ತಂಡವು ಭಾರತದೊಂದಿಗೆ ಆಡುವುದಿಲ್ಲ ಎಂದು ಪಾಕಿಸ್ತಾನ ಪ್ರಧಾನಿ ಮತ್ತೊಮ್ಮೆ ದೃಢಪಡಿಸಿದರು. ಇಸ್ಲಾಮಾಬಾದ್‌ನಲ್ಲಿ ಫೆಡರಲ್ ಕ್ಯಾಬಿನೆಟ್ ಅನ್ನುದ್ದೇಶಿಸಿ ಮಾತನಾಡಿದ ಅವರು, ಈ ವಿಷಯದ ಬಗ್ಗೆ ಅವರು ಸ್ಪಷ್ಟವಾದ ನಿಲುವನ್ನು ತೆಗೆದುಕೊಳ್ಳಲು ಬಯಸುತ್ತಾರೆ ಮತ್ತು ಭಾರತದೊಂದಿಗೆ ಆಟವಾಡುವುದಿಲ್ಲ ಎಂದು ಪುನರುಚ್ಚರಿಸಿದರು.ಫೆಬ್ರವರಿ 15 ರಂದು ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ನಿಗದಿಯಾಗಿತ್ತು. ಈ ಪಂದ್ಯ ಆಡುವುದಿಲ್ಲ ಎಂದು ಪ್ರಧಾನ ಶರೀಫ್ ಹೇಳಿಕೆ ನೀಡಿದ್ದಾರೆ.

Read More

ಬೆಂಗಳೂರು : ವಿಚಿತ್ರ ಪ್ರಕರಣದ ಕುರಿತು ನಿನ್ನೆ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಕೇಸ್ ಏನೆಂದರೆ ಮಗುವಿಗೆ ಬಾಡಿ ಲೋಷನ್ ತರಲಿಲ್ಲವೆಂದು ಪತ್ನಿ ಪತಿಯ ವಿರುದ್ಧ ಹೂಡಿದ್ದ ಪ್ರಕರಣದ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ತನ್ನ ವಿರುದ್ಧ ಶ್ರೀರಾಮಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ಮತ್ತು ಆ ಸಂಬಂಧ ನಗರದ 32ನೇ ಎಸಿಜೆಎಂ ಕೋರ್ಟ್‌ನಲ್ಲಿರುವ ನ್ಯಾಯಿಕ ಪ್ರಕ್ರಿಯೆ ರದ್ದು ಕೋರಿ 33 ವರ್ಷದ ವ್ಯಕ್ತಿಯೊಬ್ಬರು ದಾಖಲಿಸಿರುವ ಕ್ರಿಮಿನಲ್ ಅರ್ಜಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ಬಂದಿತು. ಅರ್ಜಿದಾರರ ಪರ ವಾದಿಸಿದ ವಕೀಲೆ ಕೆ.ರಾಮುಲಾ, ಅರ್ಜಿದಾರರು ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದಾರೆಂಬ ಮಾಹಿತಿ ತಿಳಿದ ಕೂಡಲೇ ಪತ್ನಿ ಬೇಕೆಂದೇ ಈ ಸುಳ್ಳು ದೂರು ದಾಖಲಿಸಿದ್ದಾರೆ. ದೂರಿನಲ್ಲಿ ಆಕೆ ಆರೋಪಿಸಿರುವ ಅಂಶಗಳೆಲ್ಲಾ ಅಸ್ಪಷ್ಟ ಹಾಗೂ ವಿರೋಧಾಭಾಸದಿಂದ ಕೂಡಿವೆ ಎಂದರು. ಪ್ರಕರಣದ ಸಾಕ್ಷಿಗಳೂ ಸುಳ್ಳು ಹೇಳಿಕೆ ದಾಖಲಿಸಿದ್ದು ಅರ್ಜಿದಾರರ ವಿರುದ್ಧ ಭಾರತೀಯ ದಂಡ ಸಂಹಿತೆ 1860ರ ಕಲಂ…

Read More

ಬೆಂಗಳೂರು : ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಲಿದೆ. ಹೀಗಾಗಿ ಇದೇ ಫೆಬ್ರವರಿ 5 ಮತ್ತು 6ರಂದು ಬೆಂಗಳೂರು ನಗರದ ವಿವಿಧೆಡೆ ಕಾವೇರಿ ನೀರು ಸರಬರಾಜುವಿನಲ್ಲಿ ವ್ಯತ್ಯಯವಾಗಲಿದೆ. ಈ ಬಗ್ಗೆ ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್‌ ಪ್ರಸಾತ್‌ ಮನೋಹರ್‌ ಮಾಹಿತಿ ನೀಡಿದ್ದು, ನಾಗರಿಕರು ಮುಂಜಾಗ್ರತೆಯಾಗಿ ನೀರನ್ನು ಸಂಗ್ರಹಿಸಿಟ್ಟುಕೊಳ್ಳಲು ಸೂಚಿಸಿದ್ದಾರೆ. ಬೆಂಗಳೂರು ನೀರು ಸರಬರಾಜು ಮತ್ತು ಮಂಡಳಿಯ ವತಿಯಿಂದ ಸರಬರಾಜು ವತಿಯಿಂದ ನಿರ್ಮಾಣ 1200ಎಂಎಂ, 900 ಎಂಎಂ ಹಾಗೂ 700ಎಂಎಂ ವ್ಯಾಸದ ನೀರು ಸರಬರಾಜು ಪೈಪ್ ಲೈನ್ ಅಳವಡಿಕೆ ಕಾಮಗಾರಿ ನಡೆಯಲಿದೆ. ಈ ಕಾರಣದಿಂದ ಕಾವೇರಿ ನೀರು ಸರಬರಾಜು ಯೋಜನೆಯ ಮೊದಲನೇ ಮತ್ತು ಎರಡನೇ ಹಂತಗಳ ಜಲರೇಚಕ ಯಂತ್ರಗಾರಗಳನ್ನು ಫೆಬ್ರವರಿ 5 ಗುರುವಾರದಂದು ಬೆಳಗ್ಗೆ 6ರಿಂದ ಫೆಬ್ರವರಿ 6 ಶುಕ್ರವಾರ ಬೆಳಗ್ಗೆ 6 ಗಂಟೆವರೆಗೆ ರವರೆಗೆ ಒಟ್ಟು 24 ಗಂಟೆ ಸ್ಥಗಿತಗೊಳಿಸಲಾಗುತ್ತಿದೆ. ಯಾವ ಪ್ರದೇಶದಲ್ಲಿ? ಬೆಂಗಳೂರು ನಗರದ ಎ.ಜಿ.ಎಸ್ ಬಡಾವಣೆ, ಸಾರ್ವಭೌಮನಗರ ಸುಬ್ರಮಣ್ಯಪುರ, ಬಿ.ಹೆಚ್.ಸಿ.ಎಸ್ ಬಡಾವಣೆ,…

Read More

ವಿಜಯಪುರ : ವಿಜಯಪುರದ HMK ಕಾರು ಸರ್ವಿಸ್ ಸೆಂಟರ್ ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 50 ರಲ್ಲಿರುವ ಕಾರು ಸರ್ವಿಸ್ ಸೆಂಟರ್ ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಹನುಮಂತ ಕನವಡಿ ಎಂಬವರಿಗೆ ಸೇರಿದ ಕಾರು ಸರ್ವಿಸ್ ಸೆಂಟರ್ ನಲ್ಲಿ ಈ ಘಟನೆ ನಡೆದಿದೆ. ಕಾರು ಸರ್ವಿಸ್ ಸೆಂಟರ್ ಗೆ ರಿಪೇರಿ ಮತ್ತು ಸರ್ವಿಸ್ಗಾಗಿ ಬಂದಿದ್ದು, ಸುಮಾರು 20 ಕಾರುಗಳು ಸುಟ್ಟು ಭಸ್ಮವಾಗಿದ್ದು 1 ಕೋಟಿಗೂ ಅಧಿಕ ನಷ್ಟವಾಗಿದೆ. ಅಗ್ನಿ ದುರಂತಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಅಂಗಡಿಯಲ್ಲಿದ್ದ 35 ಲಕ್ಷ ಮೌಲ್ಯದ ಕಾರಿನ ಬಿಡಿ ಭಾಗಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ. ಘಟನೆ ಕುರಿತಂತೆ ವಿಜಯಪುರದ ಗೋಲಗುಂಬಜ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಚಂಡೀಗಢ : ಲೈಂಗಿಕ ಕಿರುಕುಳ ಕೇವಲ ಸ್ಪರ್ಶ ದಿಂದ ಮಾತ್ರವೇ ಆಗಬೇಕಿಲ್ಲ ‘ಪ್ರೈಯಿಂಗ್ ಕಿಸ್, ಕಣ್ಣು ಹೊಡೆಯುವುದು ಕೂಡ ಲೈಂಗಿಕ ಕಿರುಕುಳವೆಂದೇ ಆಗುತ್ತದೆ. ಅದು ಮಹಿಳೆಯ ಘನತೆಗೆ ಧಕ್ಕೆ ಎಂದು ಚಂಡೀಗಢ ಕೋರ್ಟ್ ವ್ಯಕ್ತಿಯೋರ್ವನಿಗೆ 10,000 ರು. ದಂಡ ಹಾಕಿದೆ. 2021ರಲ್ಲಿ ಮನೆಯ ಮುಂದೆ ಕಸ ಗುಡಿಸುವ ವೇಳೆ ಅಶೋಕ್ ಕುಮಾರ್ ಎಂಬಾತ 500 ರು. ನೋಟು ಬಿಸಾಡಿ, ಫೈಯಿಂಗ್ ಕಿಸ್ ಕೊಟ್ಟಿದ್ದಾನೆ. ಇದನ್ನು ವಿರೋಧಿಸಿ ಮಹಿಳೆ ಅಶೋಕ್ ಮನೆಗೆ ತೆರಳಿದಾಗ, ಅಸಭ್ಯ ಚಿಹ್ನೆ ತೋರಿ ದುರ್ವತನೆ ಮೆರೆದಿದ್ದಾನೆ. ಪರಿಣಾಮ ಮಹಿಳೆ ಪೊಲೀಸರಿಗೆ ದೂರು ಕೊಟ್ಟಿದ್ದಾರೆ. ಪ್ರಕರಣದ ವಿಚಾರಣೆ ವೇಳೆ ಅಶೋಕ್ ಕುಮಾರ್ ಪರ ವಕೀಲರು, ಅಶೋಕ್ ಐಸ್ ತರಲು ದುಡ್ಡ ತೆಗೆದಾಗ 500 ರು. ನೋಟು ಬಿದ್ದಿತ್ತು ಎಂದು ವಾದಿಸಿದ್ದಾರೆ. ಆದರೆ ಇದನ್ನು ಒಪ್ಪದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ, ನೋಟು ಬಿಸಾಡುವುದು, ಅಸಭ್ಯ ಚಿಹ್ನೆಗಳನ್ನು ತೋರುವುದು, ಫೈಯಿಂಗ್ ಕಿಸ್ ಕೊಡುವುದೂ ಸಹ ಕಿರುಕುಳವೆಂದೇ ಪರಿಗಣಿಸಲಾಗುತ್ತದೆ ಎಂದಿದೆ. ದೋಷಿಯಂದು 20,000 ರು. ಶೂರಿಟಿ…

Read More

ಉಡುಪಿ : ಯಾರಿಗೆ ಯಾವಾಗ ಅದೃಷ್ಟ ಖುಲಾಯಿಸುತ್ತೆ ಅಂತ ಹೇಳೋಕಾಗಲ್ಲ. ಇದೀಗ ದುಬೈನ ಮಸ್ಕತ್‌ನಲ್ಲಿ ಉದ್ಯೋಗದಲ್ಲಿರುವ ಕರ್ನಾಟಕದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾ‌ರ್ ಎಂಬ ಯುವಕ ಅಬುದಾಭಿಯಲ್ಲಿ ನಡೆದ ಬಿಗ್ ಟಿಕೆಟ್ ಡ್ರಾನಲ್ಲಿ 49 ಕೋಟಿ (20 ಮಿಲಿಯನ್ ದಿರಮ್) ರೂ. ಮೊತ್ತದ ಲಾಟರಿ ಗೆದ್ದಿದ್ದಾರೆ. ಹೌದು ಉಡುಪಿಯ ಉದ್ಯಾವರ ಮೂಲದ 33 ವರ್ಷದ ಶಂತನು ಮಸ್ಕತ್‌ನಲ್ಲಿ ರಿಟೇಲ್ ವಲಯದ ಉದ್ಯೋಗದಲ್ಲಿದ್ದಾರೆ. ಜ.20 ರಂದು ಬಿಗ್ ಟಿಕೆಟ್‌ನಲ್ಲಿ 305810 ಸಂಖ್ಯೆ ಲಾಟರಿ ಖರೀದಿಸಿದ್ದರು. ಫೆ.3ರಂದು ಡ್ರಾ ಫಲಿತಾಂಶ ಹೊರ ಬಿದ್ದಿದ್ದು ಇದರಲ್ಲಿ ಅವರಿಗೆ ಅದೃಷ್ಟಖುಲಾಯಿಸಿದೆ. ಆದರೆ ಶಂತನು ತನ್ನ ಸ್ನೇಹಿತರೊಬ್ಬರೊಂದಿಗೆ ಈ ಟಿಕೆಟನ್ನು ಜಂಟಿಯಾಗಿ ಖರೀದಿಸಿದ್ದರು. ಹೀಗಾಗಿ ಅದರಲ್ಲಿ ಅರ್ಧ ಹಣ ಅಂದರೆ ಸರಿ ಸುಮಾರು 24.5 ಕೋಟಿ ರು. ಹಣ ಅವರ ಗೆಳೆಯನಿಗೆ ಸಿಗಲಿದೆ. ಡ್ರಾ ಫಲಿತಾಂಶ ನೇರ ಪ್ರಸಾರವಾಗಿದ್ದು, ಕಾರ್ಯಕ್ರಮ ಆಯೋಜಕರೊಂದಿಗೆ ಶಾಂತನು ಸಂತಸ ವ್ಯಕ್ತಪಡಿಸಿದ್ದಾರೆ. 2021ರಿಂದಲೂ ಬಿಗ್ ಟಿಕೆಟ್ ರಾಫಲ್‌ಗಳಲ್ಲಿ ಭಾಗವಹಿಸುತ್ತಿದ್ದೆ. ಈ ಗೆಲುವು ತುಂಬಾ ಅನಿರೀಕ್ಷಿತವಾಗಿತ್ತು.…

Read More