Subscribe to Updates
Get the latest creative news from FooBar about art, design and business.
Author: kannadanewsnow05
ನವದೆಹಲಿ : ಬೆಂಗಳೂರಿನ ಅರಮನೆ ಜಾಗದ ವಿಚಾರವಾಗಿ ಮೈಸೂರು ರಾಜ ಮನೆತನದವರಿಗೂ ಹಾಗೂ ರಾಜ್ಯ ಸರ್ಕಾರದ ಮಧ್ಯ ಸಂಘರ್ಷಕ್ಕೆ ಇದೀಗ ಸುಪ್ರೀಂ ಕೋರ್ಟ್ ಅಂತ್ಯ ಹಾಡಿದ್ದು, ರಸ್ತೆ ನಿರ್ಮಾಣ ಉದ್ದೇಶಕ್ಕೆ ಕರ್ನಾಟಕ ಸರ್ಕಾರವು ಬಳಸಲು ಉದ್ದೇಶಿಸಿದ್ದ, ಮೈಸೂರು ರಾಜ ವಂಶಸ್ಥರಿಗೆ ಸೇರಿದ ಬೆಂಗಳೂರಿನ ಅರಮನೆ ಜಾಗಕ್ಕೆ ಟಿಡಿಆರ್ ಪಾವತಿಸುವಂತೆ ತಾನು ಈ ಹಿಂದೆ ನೀಡಿದ್ದೆ ಆದೇಶದಲ್ಲಿ ಚರ್ಚೆ ಅಥವಾ ಮರುಪರಿಶೀಲನೆಗೆ ಆಸ್ಪದವೇ ಇಲ್ಲ. ಈ ಕುರಿತ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸುಪ್ರೀಂಕೋರ್ಟ್ ಕರ್ನಾಟಕ ಸೂಚಿಸಿದೆ. ರಾಜ್ಯ ಸರ್ಕಾರಕ್ಕೆ ನಾವು ಈಗಾಗಲೇ ಈ ಕುರಿತು ಆದೇಶ ಹೊರಡಿಸಿದ್ದೇವೆ. ಇದನ್ನು ನಿಮ್ಮ ಅಧಿಕಾರಿಗಳು ಪಾಲಿಸಲೇಬೇಕು. ಇಲ್ಲದೇ ಹೋದಲ್ಲಿ ಅವರು ಸಂಕಷ್ಟಕ್ಕೆ ಸಿಕ್ಕಿಹಾಕಿಕೊಳ್ಳುತ್ತಾರೆ ಎಂದು ಸುಪ್ರೀಂಕೋರ್ಟ್ ಎಚ್ಚರಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಮೈಸೂರು ರಾಜ ವಂಶಸ್ಥರಿಗೆ ಸೇರಿದ ಬೆಂಗಳೂರಿನ ಅರಮನೆ ಜಾಗಕ್ಕೆ ಟಿಡಿಆರ್ ಪಾವತಿಸುವಂತೆ ಸೂಚಿಸಿದೆ. ಸುಪ್ರೀಂ ಕೋರ್ಟ್ ನ ಈ ಒಂದು ಸೂಚನೆಗೆ ಸಹಸ್ರಾರು ಕೋಟಿರು. ಮೊತ್ತದ ಟಿಡಿಆರ್ ಪರಿಹಾರ…
ಉತ್ತರಕನ್ನಡ : ಜಲಪಾತ ವೀಕ್ಷಿಸಲು ಆಗಮಿಸಿದ್ದ ಆರು ಜನ ಯುವಕರ ತಂಡದಲ್ಲಿ ಇಬ್ಬರು ಯುವಕರು ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ವಾಟೆಹೊಳೆ ಜಲಪಾತದಲ್ಲಿ ಈ ಒಂದು ಘಟನೆ ನಡೆದಿದೆ.ಮೃತ ಯುವಕರನ್ನು ಶಿರಸಿಯ ಸುಹಾಸ್ (22) ಹಾಗೂ ಅಕ್ಷಯ (22) ನೀರು ಪಾಲಾಗಿ ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಹೌದು ಸಿದ್ದಾಪುರ ತಾಲೂಕಿನ ವಾಟೆಹೊಳೆ ಫಾಲ್ಸ್ ನಲ್ಲಿ ಈ ಒಂದು ಘಟನೆ ನಡೆದಿದ್ದು, ಕಾಲು ಜಾರಿ ಬಿದ್ದು ಇಬ್ಬರು ಯುವಕರು ಸಾವನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ ವಾಟೆಹೊಳೆ ಫಾಲ್ಸ್ ನಲ್ಲಿ ಈ ಒಂದು ಘಟನೆ ನಡೆದಿದ್ದು, ಜಲಪಾತ ನೋಡಲು ಯುವಕರು ಅಲ್ಲಿಗೆ ಆಗಮಿಸಿದ್ದರು. 6 ಜನ ಯುವಕರು ಫಾಲ್ಸ್ ನೋಡಲು ಬಂದಾಗ ಇಬ್ಬರು ಯುವಕರು ಕಾರು ಜಾರಿ ಬಿದ್ದು ಸಾವನಪ್ಪಿದ್ದಾರೆ. ಘಟನೆ ಕುರಿತು ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
BREAKING : ಇಂದು ತಮಿಳುನಾಡು ಸರ್ಕಾರಕ್ಕೆ ಮಾಜಿ ಸಿಎಂ ಜಯಲಲಿತಾ ರೇಷ್ಮೆಸೀರೆ, ಒಡವೆ, ಸೇರಿ ಹಲವು ವಸ್ತುಗಳು ಹಸ್ತಾಂತರ
ಬೆಂಗಳೂರು : ತಮಿಳುನಾಡು ಮಾಜಿ ಸಿಎಂ ದಿವಂಗತ ಜಯಯಲಲಿತಾ ಅವರಿಗೆ ಸಂಬಂಧಿಸಿದ ಆಸ್ತಿಪತ್ರಗಳು, ಅಪಾರ ಒಡವೆ ಮತ್ತು ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ಪ್ರಕ್ರಿಯೆ ಆರಂಭವಾಗಿದ್ದು, ಈ ಸಂಬಂಧ ಈಗಾಗಲೇ ತಮಿಳುನಾಡು ಪೊಲೀಸರು ಮತ್ತು ಅಧಿಕಾರಿಗಳು ಬೆಂಗಳೂರಿಗೆ ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ. ಹೌದು ಇಂದು ತಮಿಳುನಾಡಿನ ಮಾಜಿ ಸಿಎಂ ದಿವಂಗತ ಜಯಯಲಲಿತಾ ಅವರಿಗೆ ಸಂಬಂಧಿಸಿದ ಆಸ್ತಿಪತ್ರಗಳು, 11,344 ರೇಷ್ಮೆ ಸೀರೆಗಳು, 7040 ಗ್ರಾಂ ತೂಕದ 468 ಬಗೆಯ ಚಿನ್ನ, ವಜ್ರಖಚಿತ ಆಭರಣಗಳು ಹಾಗೂ 750 ಜೊತೆ ಚಪ್ಪಲಿಗಳು, ವಾಚ್‌ಗಳು ಸೇರಿದಂತೆ ಇನ್ನಿತರ ಬೆಲೆಬಾಳುವ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲಾಗುತ್ತದೆ. ಜಯಲಲಿತಾ ಆಸ್ತಿ ಎಷ್ಟು? 7 ಕೆಜಿ ತೂಕದ 468 ಬಗೆಯ ಚಿನ್ನ, ವಜ್ರಖಚಿತ ಆಭರಣಗಳು, 700 ಕೆ.ಜಿ ತೂಕದ ಬೆಳ್ಳಿ ಆಭರಣಗಳು, 740 ಐಷಾರಾಮಿ ಚಪ್ಪಲಿಗಳು, 11,344 ರೇಷ್ಮೆ ಸೀರೆಗಳು, 250 ಶಾಲು, 12 ರೆಫ್ರಿಜರೇಟರ್, 10 ಟಿವಿ ಸೆಟ್, 8 VCR, 1 ವಿಡಿಯೊ ಕ್ಯಾಮೆರಾ, 4 ಸಿಡಿ ಪ್ಲೇಯರ್,…
ಬೆಂಗಳೂರು : ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಕರ್ನಾಟಕಕ್ಕೆ ಭೇಟಿ ನೀಡಿದ್ದು, ಇಂದು ಅವರು ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಯೋಜಿಸಿರುವ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಇಂದು ವಿವಿಧ ಕಾರ್ಯಕ್ರಮಗಳಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭಾಗಿಯಾಗಲಿದ್ದಾರೆ.ಬೆಳಗ್ಗೆ ಕೋಲಾರದ ಅರಸಪುರಕ್ಕೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ ನೀಡಲಿದ್ದಾರೆ. ವೇಮಗಲ್ ನ ಟಾಟಾ ಕ್ಯಾಂಪಸ್ ಗೆ ಭೇಟಿ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸಂಜೆ ಖಾಸಗಿ ಹೋಟೆಲ್ ನಲ್ಲಿ ಸಂವಾದದಲ್ಲಿ ಸಚಿವ ಅಶ್ವಿನಿ ವೈಷ್ಣವ್ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.
ಮೈಸೂರು : ಮೈಸೂರಿನ ಉದಯಗಿರಿ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ತಪ್ಪಿತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮೈಸೂರು ಉದಯಗಿರಿ ಘಟನೆಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕಾವೇರಿ ನಿವಾಸದಲ್ಲಿ ಸಭೆ ನಡೆಸಿದರು. ಮೈಸೂರು ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ, ಮೈಸೂರು ಪೊಲೀಸ್ ಆಯುಕ್ತರು ಮತ್ತು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಸಭೆಯಲ್ಲಿ ಭಾಗವಹಿಸಿದ್ದರು.ಈ ಕುರಿತು ಸಿಎಂ ಸಿದ್ದರಾಮಯ್ಯ ಟ್ವೀಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಮೈಸೂರು ಉದಯಗಿರಿ ಘಟನೆಗೆ ಸಂಬಂಧಪಟ್ಟಂತೆ ಮೈಸೂರು ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ, ಮೈಸೂರು ಪೊಲೀಸ್ ಆಯುಕ್ತರು ಮತ್ತು ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಜೊತೆ ಚರ್ಚಿಸಿದೆ.ತಪ್ಪಿತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಬೇಕು. ಕಾನೂನು ಕೈಗೆತ್ತಿಕೊಂಡ ಪ್ರತಿಯೊಬ್ಬರನ್ನೂ ಪತ್ತೆಹಚ್ಚಿ ತಕ್ಕ ಶಿಕ್ಷೆಯಾಗುವಂತೆ ಕ್ರಮ ವಹಿಸಬೇಕು. ಪೊಲೀಸ್ ಠಾಣೆ ಮೇಲೆ ಕಲ್ಲು ತೂರಿದವರು, ಅದಕ್ಕೆ ಪ್ರಚೋದನೆ ನೀಡಿದ ಎಲ್ಲರನ್ನೂ ಪತ್ತೆಹಚ್ಚಿ ಕಾನೂನು…
ವಿಜಯಪುರ : ಜಿಲ್ಲೆಯ ಭೀಮಾತೀರದಲ್ಲಿ ನಡೆದ್ದಂತ ಬಾಗಪ್ಪ ಹರಿಜನ ಹತ್ಯೆ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳ್ನು ಬಂಧಿಸಲಾಗಿತ್ತು. ಇದೀಗ ನಾಲ್ವರು ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ವಿಜಯಪುರ 2ನೇ ಹೆಚ್ಚುವರಿ ಸೇಷನ್ಸ್ ನ್ಯಾಯಾಲಯ ಆದೇಶಿಸಿದೆ. ಕಳೆದ 2 ದಿನಗಳ ಹಿಂದೆ ವಿಜಯಪುರ ನಗರದ ಮದೀನಾ ನಗರದಲ್ಲಿ ಭೀಮಾತೀರದ ಹಂತಕ ಬಾಗಪ್ಪ ಹರಿಜನ್ ನನ್ನು ಭೀಕರವಾಗಿ ಕೊಲೆಗಯ್ಯಲಾಗಿತ್ತು. ಈ ಹತ್ಯೆ ಸಂಬಂಧ ಪೊಲೀಸರು ಆರೋಪಿ ಪಿಂಟ್ಯಾ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು. ವಿಜಯಪುರದ ಗಾಂಧಿಚೌಕ್ ನ ಪೊಲೀಸರು ಪಿಂಟ್ಯಾ ಸೇರಿದಂತೆ ನಾಲ್ವರು ಅರೋಪಿಗಳನ್ನು ಬಂಧಿಸಿದ್ದರು. ಬಂಧಿತ ಆರೋಪಿಗಳನ್ನ ಪ್ರಕಾಶ್ ಅಲಿಯಾಸ್ ಪಿಂಟ್ಯಾ ಅಗರಖೇಡ್ (25), ರಾಹುಲ್ ತಳಕೇರಿ (20), ಗದಿಗೆಪ್ಪ ಅಲಿಯಾಸ್ ಮನಿಕಂಠ ದನಕೊಪ್ಪ (27), ಎ4 ಸುದೀಪ್ ಕಾಂಬಳೆ (23) ಎಂದು ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದರು. ಬಂಧಿತ ಆರೋಪಿಗಳನ್ನು ವಿಜಯಪುರದ 2ನೇ ಹೆಚ್ಚುವರಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಅಲ್ಲದೇ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ…
ಉತ್ತರಕನ್ನಡ : ಜಲಪಾತ ವೀಕ್ಷಿಸಲು ಆಗಮಿಸಿದ್ದ ಆರು ಜನ ಯುವಕರ ತಂಡದಲ್ಲಿ ಇಬ್ಬರು ಯುವಕರು ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ವಾಟೆಹೊಳೆ ಜಲಪಾತದಲ್ಲಿ ಈ ಒಂದು ಘಟನೆ ನಡೆದಿದೆ. ಮೃತ ಯುವಕರನ್ನು ಶಿರಸಿಯ ಸುಹಾಸ್ (22) ಹಾಗೂ ಅಕ್ಷಯ (22) ನೀರುಪಾಲಾಗಿ ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಹೌದು ಸಿದ್ದಾಪುರ ತಾಲೂಕಿನ ವಾಟೆಹೊಳೆ ಫಾಲ್ಸ್ ನಲ್ಲಿ ಈ ಒಂದು ಘಟನೆ ನಡೆದಿದ್ದು, ಕಾಲು ಜಾರಿ ಬಿದ್ದು ಇಬ್ಬರು ಯುವಕರು ಸಾವನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ ವಾಟೆಹೊಳೆ ಫಾಲ್ಸ್ ನಲ್ಲಿ ಈ ಒಂದು ಘಟನೆ ನಡೆದಿದ್ದು, ಜಲಪಾತ ನೋಡಲು ಯುವಕರು ಅಲ್ಲಿಗೆ ಆಗಮಿಸಿದ್ದರು. 6 ಜನ ಯುವಕರು ಫಾಲ್ಸ್ ನೋಡಲು ಬಂದಾಗ ಇಬ್ಬರು ಯುವಕರು ಕಾರು ಜಾರಿ ಬಿದ್ದು ಸಾವನಪ್ಪಿದ್ದಾರೆ. ಘಟನೆ ಕುರಿತು ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ : ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಗೃಹಲಕ್ಷ್ಮೀ ಯೋಜನೆಯಡಿ ಮನೆಯ ಯಜಮಾನಿಯರಿಗೆ ಮಾಸಿಕ ರೂ.2 ಸಾವಿರ ಸಂದಾಯವಾಗುತ್ತದೆ. ಆದರೆ ಕಳೆದ 2-3 ತಿಂಗಳವರೆಗೆ ಫಲಾನುಭವಿಗಳ ಖಾತೆಗೆ ಹಣ ಬಂದಿಲ್ಲ ಎಂದು ಯಜಮಾನಿಯರು ಇದೀಗ ಆಕ್ರೋಶ ಹೊರಹಾಕುತ್ತಿದ್ದಾರೆ. ಇದೀಗ ಗೃಹಲಕ್ಷ್ಮಿಯರಿಗೆ ಖುದ್ದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿಹಿ ಸುದ್ದಿ ನೀಡಿದ್ದು, ಶೀಘ್ರವೇ ಹಣ ಸಂದಾಯ ಆಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ಕೂರ್ತು ಮಾತನಾಡಿ ಅವರು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಹಿಳೆಯರಿಗೆ ಕಳೆದ ಎರಡರಿಂದ ಮೂರು ತಿಂಗಳಿನಿಂದ ಗ್ರಹಲಕ್ಷ್ಮಿ ಹಣ ಬಂದಿಲ್ಲ ಎಂಬ ದೂರುಗಳು ಬಂದಿವೆ. ಶೀಘ್ರದಲ್ಲೇ ಅವರ ಖಾತೆಗೆ ಮೂರು ತಿಂಗಳ ಹಣ ಒಮ್ಮೆ ಜಮೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಹಿಂದಿನ ಮಾದರಿಯಂತೆ ಜಿಲ್ಲಾ ಉಪ ನಿರ್ದೇಶಕರ ಮೂಲಕವೇ ಗೃಹಲಕ್ಷ್ಮೀ ಯೋಜನೆ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ. ತಾಲೂಕು ಪಂಚಾಯಿತಿ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಣ ರವಾನೆಯಾಗುತ್ತಿದ್ದು, ಉಪ ನಿರ್ದೇಶಕರ ಮೂಲಕ ಹಣ…
ದಾವಣಗೆರೆ : ಶಾಸಕ ಯತ್ನಾಳ್ ಗೆ ನಾನು ನೋಟಿಸ್ ಕೊಟ್ಟಿಲ್ಲ. ಕೇಂದ್ರೀಯ ಶಿಸ್ತು ಸಮಿತಿ ನೋಟಿಸ್ ಕೊಟ್ಟಿದೆ ಎಂದು ಸೂರಗೊಂಡನಕೊಪ್ಪದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿಕೆ ನೀಡಿದರು. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ಮಾತನಾಡಿದ ಅವರು, ಯತ್ನಾಳ್ ಉಚ್ಚಾಟನೆ ಕುರಿತು ನಾನು ಏನು ಹೇಳಲ್ಲ. ಎಲ್ಲರಿಗೂ ಮುಂದೆ ಒಳ್ಳೆಯದಾಗುತ್ತದೆ. ಶೀಘ್ರದಲ್ಲಿ ಎಲ್ಲಾ ಬಗೆಹರಿಯುತ್ತೆ ಎಂಬ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜೇಂದ್ರ ತಿಳಿಸಿದರು. ಬಿಜೆಪಿ ಬಣ ಬಡಿದಾಟ ಬೀದಿಗೆ ಬಂದ ಹಿನ್ನೆಲೆಯಲ್ಲಿ ಇತ್ತೀಚಿಗೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕೇಂದ್ರೀಯ ಬಿಜೆಪಿ ಶಿಸ್ತು ಸಮಿತಿಯು 72 ಗಂಟೆಗಳಲ್ಲಿ ಉತ್ತರ ನೀಡುವಂತೆ ಶೋಕಾಸ್ ನೋಟಿಸ್ ನೀಡಿತು ಆದರೆ ಶೋಕಾಶ್ ನೋಟಿಸ್ ಗಡವು ಅವಧಿ ಮುಕ್ತಾಯವಾಗಿದ್ದು, ಯತ್ನಾಳ್ ಯಾವುದೇ ಉತ್ತರ ನೀಡಿಲ್ಲ ಹಾಗಾಗಿ ಬಿಜೆಪಿ ಯತ್ನಾಳ್ ವಿರುದ್ಧ ಯಾವ ಕ್ರಮ ಕೈಗೊಳ್ಳುತ್ತದೆ ಎನ್ನುವುದು ಕುತೂಹಲ ಮೂಡಿಸಿದೆ.
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಕಳೆದ 24 ಗಂಟೆಗಳಲ್ಲಿ ಮೂವರ ವ್ಯಕ್ತಿಗಳ ಭೀಕರವಾದ ಮರ್ಡರ್ ಆಗಿದ್ದು, ನಿನ್ನೆ ರಾತ್ರಿ ಇಂದು ಬೆಳಿಗ್ಗೆ ಹಾಗೂ ಇದೀಗ ಮಧ್ಯಾಹ್ನ ಸೇರಿದಂತೆ ಒಟ್ಟು ಮೂವರ ಭೀಕರ ಕೊಲೆಯಾಗಿದೆ ಇದರಿಂದ ಸಹಜವಾಗಿ ಚಿಕ್ಕಬಳ್ಳಾಪುರ ಜನತೆ ಬೆಚ್ಚಿಬಿದ್ದಿದ್ದಾರೆ. ಹೌದು ಚಿಂತಾಮಣಿಯಲ್ಲಿ ನಿನ್ನೆ ರಾತ್ರಿ, ಇಂದು ಬೆಳಿಗ್ಗೆ ಮತ್ತು ಮಧ್ಯಾಹ್ನ ಮೂವರ ಮೃತದೇಹಗಳು ಪತ್ತೆಯಾಗಿವೆ. ನಿನ್ನೆ ರಾತ್ರಿ ರಾಮಸ್ವಾಮಿ ಎಂಬಾತನನ್ನು ಚಾಕುವಿನಿಂದ ಚುಚ್ಚಿ ಕೊಲೆ ಮಾಡಲಾಗಿದೆ. ಇಂದು ಬೆಳಗ್ಗೆ ವ್ಯಕ್ತಿಯ ರುಂಡವನ್ನು ಕತ್ತರಿಸಿ ಬರ್ಬರವಾಗಿ ಹತ್ಯೆಗೈಯಲಾಗಿದೆ. ಇದೀಗ ಚಿಂತಾಮಣಿಯ ವೆಂಕಟಗಿರಿ ಕೋಟೆ ಬಡಾವಣೆಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಇದು ಕೂಡ ಕೊಲೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗುತ್ತಿದೆ. ಚಿಂತಾಮಣಿಯಲ್ಲಿ ಕಳೆದ 24 ಗಂಟೆಯಲ್ಲಿ ಮೂರು ಮರ್ಡರ್ ಆಗಿದ್ದರಿಂದ ಜನರು ಬೆಚ್ಚಿ ಬಿದ್ದಿದ್ದು, ಪೊಲೀಸರು ಏನು ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.