Author: kannadanewsnow05

ಬೆಂಗಳೂರು : ರಾಜ್ಯ ಸರ್ಕಾರಿ ಪ್ರಥಮ ದರ್ಜೆ, ಪಾಲಿಟೆಕ್ನಿಕ್, ಎಂಜಿನಿಯರಿಂಗ್ ಕಾಲೇಜುಗಳು ಮತ್ತು ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಒಟ್ಟು 2000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಅನುಮತಿ ನೀಡಿದೆ. ಪ್ರಥಮ ದರ್ಜೆ ಕಾಲೇಜುಗಳಲ್ಲಿನ 825 ಸಹಾಯಕ ಪ್ರಾಧ್ಯಾಪಕ ಹುದ್ದೆ, ಪಾಲಿಟೆಕ್ನಿಕ್‌ಗಳಲ್ಲಿನ 941 ಉಪನ್ಯಾಸಕರ ಹುದ್ದೆ, ಎಂಜಿನಿಯರಿಂಗ್ ಕಾಲೇಜುಗಳಿಗೆ 186 ಸಹಾಯಕ ಪ್ರಾಧ್ಯಾಪಕ ಹುದ್ದೆ ಮತ್ತು ಯುವಿಸಿಇಯ 47 ಬೋಧಕ ಹುದ್ದೆಗಳು ಸೇರಿ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಘೋಷಿಸಿರುವಂತೆ ಒಟ್ಟು 2000 ಹುದ್ದೆಗಳ ಭರ್ತಿಗೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತರು ಉನ್ನತ ಶಿಕ್ಷಣ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದರು. ಇದಕ್ಕೆ ಆರ್ಥಿಕ ಇಲಾಖೆಯ ಸಲಹೆಗಳನ್ವಯ ನೇಮಕಾತಿಗೆ ಷರತ್ತು ಬದ್ದ ಅನುಮತಿ ನೀಡಿ ಇಲಾಖೆಯ ಉಪ ಕಾರ್ಯದರ್ಶಿ ಬುಧವಾರ ಆದೇಶ ಮಾಡಿದ್ದಾರೆ. ಈ ಹುದ್ದೆಗಳನ್ನು ವೃಂದ ಮತ್ತು ನೇಮಕಾತಿ ನಿಯಮ ಗಳನ್ವಯ ಆಗತ್ಯ ವಿದ್ಯಾರ್ಹತೆ, ನೇಮಕಾತಿ ವಿಧಾನದಂತೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಬೇಕು. ಕಲ್ಯಾಣ ಕರ್ನಾಟಕ ವೃಂದಕ್ಕೆ…

Read More

ಬೆಂಗಳೂರು : ಬೆಂಗಳೂರಿನ ‘ನಮ್ಮ ಮೆಟ್ರೋ’ ಪ್ರಯಾಣ ದರವನ್ನು ಶೇ. 5ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಫೆ.9, ಸೋಮವಾರದಿಂದ ಹೊಸ ದರಗಳು ಜಾರಿಗೆ ಬರಲಿದ್ದು, ನಿರ್ವಹಣಾ ವೆಚ್ಚದ ಹೆಚ್ಚಳವಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ. ದರ ಏರಿಕೆಗೆ ಮೆಟ್ರೋ ಪ್ರಯಾಣಿಕರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಕಳೆದ ವರ್ಷ ಅಂದರೆ 2025ರ ಫೆಬ್ರವರಿ 9ರಂದು ಬಿಎಂಆರ್‌ಸಿಎಲ್ ದರಗಳಲ್ಲಿ ಗಣನೀಯ ಬದಲಾವಣೆ ಮಾಡಿತ್ತು. ಕಾಕತಾಳೀಯ ಎಂಬಂತೆ ಈ ವರ್ಷವೂ ಫೆಬ್ರವರಿ 9ರಿಂದಲೇ ಹೊಸ ದರಗಳು ಜಾರಿಯಾಗುತ್ತಿವೆ. ಈ ಬಾರಿ ಶೇಕಡಾ 5ರಷ್ಟು ಏರಿಕೆ ಮಾಡಲಾಗಿದ್ದು, ಕನಿಷ್ಠ ಮತ್ತು ಗರಿಷ್ಠ ದರಗಳಲ್ಲಿ 2 ರಿಂದ 5 ರೂಪಾಯಿಗಳವರೆಗೆ ವ್ಯತ್ಯಾಸವಾಗುವ ಸಾಧ್ಯತೆಯಿದೆ. ಬಿಎಂಆರ್‌ಸಿಎಲ್ ಇಂದೇ ಅಥವಾ ನಾಳೆ ಅಧಿಕೃತ ದರ ಪಟ್ಟಿಯನ್ನು ಬಿಡುಗಡೆ ಮಾಡಲಿದೆ. ಕಳೆದ ಕೆಲವು ದಿನಗಳ ಹಿಂದಷ್ಟೇ ನಡೆದ ಬೆಂಗಳೂರು ಮೆಟ್ರೋ ರೈಲು ನಿಗಮದ ಉನ್ನತ ಮಟ್ಟದ ಬೋರ್ಡ್ ಸಭೆಯಲ್ಲಿ ದರ ಏರಿಕೆಯ ಕುರಿತು ಸುದೀರ್ಘ ಚರ್ಚೆ ನಡೆದಿತ್ತು. ವಿದ್ಯುತ್ ವೆಚ್ಚದ ಹೆಚ್ಚಳ,…

Read More

ಬೆಂಗಳೂರು : ವಿಧಾನಸಭೆಯಲ್ಲಿ ವಿಪಕ್ಷಗಳ ಸಭಾತ್ಯಾಗದ ನಡುವೆ ವಿಬಿ-ಜಿ ರಾಮ್ ಜಿ ಬಿಲ್ ವಿರೋಧಿಸಿ ನಿರ್ಣಯವನ್ನು ಸರ್ಕಾರ ಪಾಸ್ ಮಾಡಿಕೊಂಡಿದೆ. ಜಿ ರಾಮ ಜಿ ಕಾಯ್ದೆ ವಿರುದ್ಧ ನಿರ್ಣಯವನ್ನು ಸಿಎಂ ಸಿದ್ದರಾಮಯ್ಯ ಮಂಡಿಸಿದರು. ಸಿಎಂ ಸಿದ್ದರಾಮಯ್ಯ ಮಂಡಿಸಿದ್ದ ನಿರ್ಣಯವನ್ನು ಸ್ಪೀಕರ್ ಯುಟಿ ಖಾದರ್ ಮತಕ್ಕೆ ಹಾಕಿದ್ದರು. ನಿರ್ಣಯ ಅಂಗೀಕರವಾಗಿದೆ ಎಂದು ಸ್ಪೀಕರ್ ಯುಟಿ ಖಾದರ್ ಪ್ರಕಟಿಸಿದರು. ಬಳಿಕ ಅನಿರ್ದಿಷ್ಟವಧಿಗೆ ವಿಧಾನಸಭೆ ಕಲಾಪ ಮುಂದೂಡಲಾಯಿತು. ಸಚಿವ ಪ್ರಿಯಾಂಕ್ ಖರ್ಗೆ ಮಾತಾಡಿ, ಅಡ್ವಾಣಿಯವರೇ ನರೇಗಾ ಯೋಜನೆಯನ್ನ ಹೊಗಳಿದ್ದರು. ಕಾರ್ಮಿಕರ ಬದುಕಿನ ಬಗ್ಗೆ ವರುಣ್ ಗಾಂಧಿ ಲೋಕಸಭೆಯಲ್ಲಿ ಪ್ರಶ್ನೆ ಮಾಡಿದ್ದಾಗ, ನರೇಗಾ ಪಾರದರ್ಶಕವಾಗಿದೆ ಅಂತ ಕೇಂದ್ರ ಸರ್ಕಾರವೇ ಉತ್ತರ ಕೊಟ್ಟಿತ್ತು. ವಿಬಿ ಜಿ ರಾಮ್ ಜಿ ಕಾಯ್ದೆ ಒಕ್ಕೂಟ ವಿರೋಧಿ, ಸಂವಿಧಾನ ವಿರೋಧಿ. ರಾಜ್ಯಗಳ ಮೇಲೆ ಆರ್ಥಿಕ ಹೊರೆ ಹೊರೆಸುವ ಸಂಚಿನ ಕಾಯ್ದೆ ಅಂದರು. ನಿರ್ಣಯ ಅಂಗೀಕಾರಕ್ಕೆ ಮನವಿ ಮಾಡಿದರು. ಆದರೆ, ಪ್ರಿಯಾಂಕ್ ಖರ್ಗೆ ಸುಳ್ಳು ಹೇಳ್ತಿದ್ದಾರೆ ಅಂತ ಆರಗ ಜ್ಞಾನೇಂದ್ರ ಆಕ್ಷೇಪಿಸಿದರು. ಅಶೋಕ್ ಸಿಡಿದೆದ್ದು,…

Read More

ಬೆಂಗಳೂರು : ಸಿಟಿ ರವಿಯನ್ನು ಈ ದಿನದ ಮಟ್ಟಿಗೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಮಾನತುಗೊಳಿಸಿದ್ದಾರೆ. ಸಿಟಿ ರವಿ ವಿರುದ್ಧ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಈ ಒಂದು ಕ್ರಮ ಕೈಗೊಂಡಿದ್ದಾರೆ. ವಿಪಕ್ಷ ನಾಯಕರು, ಪರಿಷತ್ ನ ವಿಪಕ್ಷ ಮುಖ್ಯ ಸಚೇತಕರಿಗೆ ಹೇಳಿದ್ದೆ. ರಾತ್ರಿ ಎಂಟು ಗಂಟೆಯೊಳಗೆ ಸಿಟಿ ರವಿ ಸದನಕ್ಕೆ ಕರೆತರುವಂತೆ ಹೇಳಿದ್ದೆ. ಬಿಜೆಪಿ ಸದಸ್ಯ ಸಿಟಿ ರವಿ ಸಭಾಪತಿ ಆದೇಶಕ್ಕೆ ಗೌರವ ನೀಡಿರುವುದಿಲ್ಲ ಹಾಗಾಗಿ ಅಮಾನತುಗೊಳಿಸಲಾಗಿದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಪ್ರಕಟಿಸಿದ್ದಾರೆ. ಆ ಮೂಲಕ ಸಿಟಿ ರವಿ ಅಮಾನತುಕೊಂಡಿದ್ದಾರೆ.

Read More

ನವದೆಹಲಿ : ಕರ್ನಾಟಕವನ್ನು ರಕ್ಷಿಸಿ ಎಂದು ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಗದ್ಗದಿತರಾದ ಪ್ರಸಂಗ ನಡೆಯಿತು. ರಾಜ್ಯದ ನೀರಾವರಿಯ ಬಗ್ಗೆ ರಾಜ್ಯಸಭೆಯಲ್ಲಿ ಎಚ್ ಡಿ ದೇವೇಗೌಡರು ಮಾತನಾಡುವಾಗ ಗದ್ಗದಿತರಾದ ಘಟನೆ ನಡೆದಿದೆ. ನನ್ನ ರಾಜ್ಯಸಭಾ ಅವಧಿ ಒಂದು ತಿಂಗಳಲ್ಲಿ ಮುಗಿಯುತ್ತೆ. ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ. ಅವರ ಹಿತ ಕಾಪಾಡಿರಿ. ಸದನದ ಎಲ್ಲ ಸದಸ್ಯರು ಕರ್ನಾಟಕವನ್ನು ರಕ್ಷಣೆ ಮಾಡಬೇಕು. ಕರ್ನಾಟಕ ರಕ್ಷಣೆ ಮಾಡಿ ಎಂದು ಕೈಮುಗಿದು ಬೇಡುತ್ತೇನೆ. ನಾನು ಜೀವನದ ಕೊನೆ ಕಾಲದಲ್ಲಿ ಇದ್ದೇನೆ. ಈ ವೃದ್ಧನ ಮನವಿಗೆ ಮಾನವೀಯತೆಯಿಂದ ಸ್ಪಂದಿಸಿ ಎಚ್ಡಿ ದೇವೇಗೌಡರ ಮಾತಿಗೆ ಇಡೀ ಸದನ ಒಂದು ಕ್ಷಣ ಮೌನವಾಯಿತು. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ ದಯಮಾಡಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಿ. ರಾಜ್ಯದ ನೀರಾವರಿ ಯೋಜನೆಗಳು ನೆನೆಗುದಿಗೆ ಬಿದ್ದಿವೆ, ನೆನೆಗುದಿಗೆ ಬಿದ್ದ ಯೋಜನೆಗಳಿಗೆ ಅನುಮೋದನೆ ನೀಡಿ ಎಂದು ಎಚ್ ಡಿ ದೇವೇಗೌಡರು ಕೈ ಮುಗಿದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.

Read More

ಬಳ್ಳಾರಿ : ಕರ್ನಾಟಕ ರಾಜ್ಯದ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಓಡಾಡುವ ವಾಹನಗಳ ಗಣತಿಯನ್ನು ನಡೆಸಲಾಗುತ್ತಿದ್ದು, ಸಾರ್ವಜನಿಕರು ಸಹಕರಿಸುವಂತೆ ಕಲಬುರಗಿ ವಲಯದ ಲೋಕೋಪಯೋಗಿ ಇಲಾಖೆಯ ಸಂಪರ್ಕ ಮತ್ತು ಕಟ್ಟಡಗಳು(ಈಶಾನ್ಯ) ಮುಖ್ಯ ಇಂಜಿನಿಯರ್ ಶರಣಪ್ಪ ಸುಲಗಂಟೆ ಅವರು ತಿಳಿಸಿದ್ದಾರೆ. 2026 ನೇ ಸಾಲಿನ ರಸ್ತೆ ಸಂಚಾರ ಗಣತಿಯನ್ನು ಫೆ.26 ರ ಬೆಳಿಗ್ಗೆ 06 ಗಂಟೆಯಿಂದ ಫೆ.27ರ ಬೆಳಿಗ್ಗೆ 06 ಗಂಟೆಯವರೆಗೆ ಸತತವಾಗಿ 02 ದಿನಗಳ ಕಾಲ ನಡೆಯಲಿದೆ. ಗಣತಿಗೆ ಈಶಾನ್ಯ ವಲಯದ ಕಲಬುರಗಿ ವ್ಯಾಪ್ತಿಯಲ್ಲಿ ಬರುವ ರಾಜ್ಯ ಹೆದ್ದಾರಿಗಳ ಮೇಲೆ 370 ಗಣತಿ ಕೇಂದ್ರಗಳನ್ನು ಮತ್ತು ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ 692 ಗಣತಿ ಕೇಂದ್ರಗಳನ್ನು, ಒಟ್ಟು 1062 ಗಣತಿ ಕೇಂದ್ರಗಳನ್ನು ಆಯ್ಕೆ ಮಾಡಲಾಗಿದೆ. ಗಣತಿಯ ಮುಖ್ಯ ಉದ್ದೇಶಗಳು: ಪ್ರತಿ ರಸ್ತೆಯ ಸಂಚಾರದ ಬೆಳವಣೆಗೆಯ ತೀವ್ರತೆಯನ್ನು ಅಳೆಯುವುದು. ಪ್ರಸ್ತುತದಲ್ಲಿ ಇರುವ ರಸ್ತೆಗಳನ್ನು ದುರಸ್ತಿ ಪಡಿಸುವಲ್ಲಿ ಹಾಗೂ ರಸ್ತೆಯನ್ನು ಇನ್ನು ಉತ್ತಮ ಪಡಿಸಲು ಸಹಾಯಕವಾಗಲಿದೆ.…

Read More

ಬೆಂಗಳೂರು : ವಿಧಾನಸಭೆಯಲ್ಲಿ ಜಿ ರಾಮ್ ಜಿ ಕಾಯ್ದೆ ವಿರುದ್ಧದ ನಿರ್ಣಯ ಅಂಗೀಕಾರವಾಯಿತು. ನಿರ್ಣಯ ಅಂಗೀಕಾರದ ನಂತರ ಅನಿರ್ದಿಷ್ಟವಧಿಗೆ ಕಲಾಪ ಮುಂದೂಡಿಕೆ ಮಾಡಲಾಯಿತು. ಜಿ ರಾಮ ಜಿ ಕಾಯ್ದೆ ವಿರುದ್ಧ ನಿರ್ಣಯವನ್ನು ಸಿಎಂ ಸಿದ್ದರಾಮಯ್ಯ ಮಂಡಿಸಿದರು. ಸಿಎಂ ಸಿದ್ದರಾಮಯ್ಯ ಮಂಡಿಸಿದ್ದ ನಿರ್ಣಯವನ್ನು ಸ್ಪೀಕರ್ ಯುಟಿ ಖಾದರ್ ಮತಕ್ಕೆ ಹಾಕಿದ್ದರು. ನಿರ್ಣಯ ಅಂಗೀಕರವಾಗಿದೆ ಎಂದು ಸ್ಪೀಕರ್ ಯುಟಿ ಖಾದರ್ ಪ್ರಕಟಿಸಿದರು. ಬಳಿಕ ಅನಿರ್ದಿಷ್ಟವಧಿಗೆ ವಿಧಾನಸಭೆ ಕಲಾಪ ಮುಂದೂಡಲಾಯಿತು. ಈ ವೇಳೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಪ್ರತಿಗಳನ್ನು ಹರಿದು ಹಾಕಿ ಆಕ್ರೋಶ ಹೊರ ಹಾಕಿದರು ಬಳಿಕ ಸಭಾ ತ್ಯಾಗ ಮಾಡಿದ ಪ್ರಸಂಗ ನಡೆಯಿತು.

Read More

ಬೆಂಗಳೂರು : BMRCL ಬೆಂಗಳೂರಿನ ಜನತೆಗೆ ಬಿಗ್ ಶಾಕ್ ನೀಡಿದ್ದು, ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಇದೀಗ ರಾಜ್ಯ ಸರ್ಕಾರ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶಾಕ್ ನೀಡಿದ್ದು ಟಿಕೆಟ್ ದರ ಏರಿಕೆಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಹಿನ್ನೆಲೆಯಲ್ಲಿ ಫೆಬ್ರವರಿ 9 ರಿಂದ ಪರಿಷ್ಕೃತ ದರ ಜಾರಿಯಾಗಲಿದೆ. ಹೌದು ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಗೆ BMRCL ಬೋರ್ಡ್ ಮೀಟಿಂಗ್ ನಲ್ಲಿ ಟಿಕೆಟ್ ದರ ಏರಿಕೆಗೆ ಒಪ್ಪಿಗೆ ನೀಡಲಾಗಿದ್ದು, ರಾಜ್ಯ ಸರ್ಕಾರದ ಅನುಮತಿಗಾಗಿ ನಮ್ಮ ಮೆಟ್ರೋ ಕಾಯುತ್ತಿದತ್ತು. ಇದೀಗ ರಾಜ್ಯ ಸರ್ಕಾರ ಸಹ ದರ ಏರಿಕೆಗೆ ಗ್ರೀನ್ ಸಿಗ್ನಲ್ ನೀಡಿದ್ದು, ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಶಾಕ್ ಎದುರಾಗಿದೆ. ಫೆಬ್ರವರಿ 9 ಅಂದರೆ ಸೋಮವಾರದಿಂದ ರಿಂದ ಪರಿಷ್ಕೃತ ದರ ಜಾರಿಯಾಗಲಿದೆ. ನಮ್ಮ ಮೆಟ್ರೋ ಟಿಕೆಟ್ ದರ ಶೇ.5 ರಷ್ಟು ಏರಿಕೆ ಮಾಡಲು ತೀರ್ಮಾನಿಸಲಾಗಿದೆ. ಕಳೆದ ವರ್ಷ ಫೆ.9ರಂದು ಶೇ. 101.5 ರಷ್ಟು ಟಿಕೆಟ್…

Read More

ಮಣಿಪುರ : ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಯುಮ್ನಮ್ ಖೇಮ್‌ಚಂದ್ ಸಿಂಗ್ ಅವರು ಮಣಿಪುರದ ಹೊಸ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು, ರಾಜ್ಯದಲ್ಲಿ ಸುಮಾರು ಒಂದು ವರ್ಷದ ರಾಷ್ಟ್ರಪತಿ ಆಳ್ವಿಕೆಯನ್ನು ತೆಗೆದುಹಾಕಿದರು. ಸಿಂಗ್ ಅವರು ಇಂಫಾಲದ ಲೋಕಭವನದಲ್ಲಿ ಸಂಜೆ 6 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಿದರು. ಮೀತಿ ಮತ್ತು ಕುಕಿ ಸಮುದಾಯಗಳ ನಡುವೆ ಹೆಚ್ಚುತ್ತಿರುವ ಜನಾಂಗೀಯ ಹಿಂಸಾಚಾರದ ಮಧ್ಯೆ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ನಂತರ ಫೆಬ್ರವರಿ 13, 2025 ರಂದು ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲಾಯಿತು. ಹಿಂಸಾಚಾರವು ಮೇ 2023 ರಲ್ಲಿ ಪ್ರಾರಂಭವಾಯಿತು ಮತ್ತು ಗಮನಾರ್ಹ ಸಾವುನೋವುಗಳು ಮತ್ತು ಅಶಾಂತಿಗೆ ಕಾರಣವಾಯಿತು, ಕೇಂದ್ರ ಸರ್ಕಾರವು ಮಧ್ಯಸ್ಥಿಕೆ ವಹಿಸಲು ಮತ್ತು ರಾಜ್ಯವನ್ನು ಸುವ್ಯವಸ್ಥೆ ಮತ್ತು ಆಡಳಿತವನ್ನು ಮರುಸ್ಥಾಪಿಸಲು ನೇರ ಆಡಳಿತಕ್ಕೆ ಒಳಪಡಿಸಲು ಪ್ರೇರೇಪಿಸಿತು. ಇಂದು ಮುಂಜಾನೆ, ಅಧ್ಯಕ್ಷೆ ದ್ರೌಪದಿ ಮುರ್ಮು ಅವರು ಹೊರಡಿಸಿದ ಘೋಷಣೆಯನ್ನು ಹಿಂಪಡೆದಿದ್ದರು. ಅಧಿಕೃತ ಆದೇಶವು ಹೀಗಿದೆ: “ಸಂವಿಧಾನದ 356 ನೇ ವಿಧಿಯ ಷರತ್ತು…

Read More

ಉತ್ತರಕನ್ನಡ : ಅನೈತಿಕ ಸಂಬಂಧ ಬಯಲು ಮಾಡಿದ್ದಕ್ಕೆ ಭೀಕರವಾಗಿ ಕೊಲೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ವಸಂತ ನಾಯಕ ಕೊಲೆಗೈದ ನಾಲ್ವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. A1 ಸುಚಿತ್ರ, A2 ಲೋಕನಾಥ್, A3 ಕಮಲಾಕಾರ್ ಭಟ್ ಹಾಗು A4 ಆಕಾಶ್ ಸೇರಿದಂತೆ ಒಟ್ಟು 7 ಆರೋಪಿಗಳಿಗೆ 8 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣ ಹಿನ್ನೆಲೆ? ಶಿವಮೊಗ್ಗದ ಖ್ಯಾತ ಜ್ಯೋತಿಷ್ಯ ಆದಂತಹ ಕಮಲಾಕಾರ್ ಭಟ್ ಜೊತೆಗೆ ಸುಚಿತ್ರ ಅನೈತಿಕ ಸಂಬಂಧ ಹೊಂದಿದಳು. ಈ ವಿಚಾರವನ್ನು ಸುಚಿತ್ರ ಹಿರಿಯ ಮಗಳು ತಂದೆ ಮಹೇಶ್ ನಾಯಕಗೆ ಹೇಳಿದ್ದಾಳೆ. ಈ ಕುರಿತು ಮಹೇಶ್ ನಾಯಕ್ ಮಗಳನ್ನ ಕರೆದುಕೊಂಡು ಠಾಣೆಗೆ ದೂರು ನೀಡಿದ್ದಾರೆ. ಈ ವೇಳೆ ವಾಪಸ್ ಮನೆಗೆ ಬಂದಾಗ ಸುಚಿತ್ರ ಅವರ ತಂದೆ ಲೋಕನಾಥ್ ಸೇರಿದಂತೆ ಒಟ್ಟು ನಾಲ್ವರು ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಂತಹ ವಸಂತ ನಾಯಕ್ ಎನ್ನುವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ವಸಂತ ನಾಯಕ್ ಸಾವನ್ನಪ್ಪಿದ್ದಾರೆ. ತಾಯಿಯ ಅನೈತಿಕ ಸಂಬಂಧವನ್ನು…

Read More