Subscribe to Updates
Get the latest creative news from FooBar about art, design and business.
Author: kannadanewsnow05
ಮಂಡ್ಯ : ಮಂಡ್ಯದಲ್ಲಿ ದಾರುಣ ಘಟನೆ ಒಂದು ನಡೆದಿದ್ದು, ಎಮ್ಮೆ ತೊಳೆಯುವ ವೇಳೆ ಬಾವಿಗೆ ಬಿದ್ದು ದಂಪತಿ ಸಾವನ್ನಪ್ಪಿರುವ ಘಟನೆ ಅರೆಬೊಪ್ಪನಹಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಕೆ.ಆರ್‌ಪೇಟೆ ತಾಲೂಕಿನ ಗ್ರಾಮದಲ್ಲಿ ಎಮ್ಮೆ ತೊಳೆಯಲು ಹೋದಾಗ ವಸಂತಮ್ಮ(65) ಹಾಗು ಕಾಳೇಗೌಡ(70) ಬಾವಿಗೆ ಬಿದ್ದು ಸಾವನ್ನಪ್ಪಿರುವ ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಎಮ್ಮೆ ತೊಳೆಯಲು ಹೋಗಿದ್ದ ವೇಳೆ ತೆರದ ಬಾವಿಗೆ ಪತ್ನಿಯನ್ನ ರಕ್ಷಿಸಲು ಹೋದ ಪತಿ ಕೂಡ ಸಾವನ್ನಪ್ಪಿದ್ದಾರೆ. ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಬೆಂಗಳೂರು : ಈಗಾಗಲೇ ಧರ್ಮಸ್ಥಳದಲ್ಲಿ ಶವ ಹೂತು ಹಾಕಿರುವ ಕುರಿತು SIT ಅಧಿಕಾರಿಗಳು ಚಿನ್ನಯನನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ ಇದರ ಮಧ್ಯ ಸೌಜನ್ಯ ಪ್ರಕರಣದ ಕುರಿತು ಎಸ್‌ಐಟಿ ಅಧಿಕಾರಿಗಳು ಧರ್ಮಸ್ಥಳ ಗ್ರಾಮ ಪ್ರಕರಣದ ತನಿಖೆ ನಡೆಸುತ್ತಿದ್ದು, ಸೌಜನ್ಯ ಪ್ರಕರಣದ ಮರು ತನಿಖೆ ಎನ್ನಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು. ಸೌಜನ್ಯ ಪ್ರಕರಣದಲ್ಲಿ ಆರೋಪ ಮುಕ್ತರಾಗಿರುವ ಉದಯ ಕುಮಾರ್ ಜೈನ್ ಅವರನ್ನು ಎಸ್‌ಐಟಿ ಅಧಿ ಕಾರಿಗಳು ವಿಚಾರಣೆ ನಡೆಸಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, ಅಧಿಕಾರಿಗಳು ಯಾವ ಆಧಾರದಲ್ಲಿ ವಿಚಾರಣೆ ನಡೆಸಿ ದ್ದಾರೋ ಗೊತ್ತಿಲ್ಲ. ಅವರಿಗೆ ಸಿಕ್ಕಿರುವ ಮಾಹಿತಿ ಏನು? ಏನಾದರೂ ಮಾಹಿತಿ ಸಿಕ್ಕಿದೆಯೇ ಎಂಬ ಮಾಹಿತಿ ಇಲ್ಲ. ತನಿಖೆ ಸಂದರ್ಭದಲ್ಲಿ ಬೇಕಾದಷ್ಟು ವಿಚಾರ ಕಲೆ ಹಾಕಿರುತ್ತಾರೆ. ಎಸ್‌ಐಟಿಗೆ ಮಾಹಿತಿ ಕೊಡುವವರು ಏನೋ ಮಾಹಿತಿ ನೀಡಿರಬಹುದು. ಅದಕ್ಕಾಗಿ ಉದಯ್ ಜೈನ್‌ರನ್ನು ಕರೆಸಿರಬಹುದು ಎಂದರು. ಟಮನ್‌ಸ್ ಆಫ್ ರೆಫರೆನ್ಸ್ ನಲ್ಲಿ ಇಲ್ಲದಿದ್ದರೂ ಲಿಂಕ್ ಇರು ತ್ತಲ್ವ? ಲಿಂಕ್‌ಗಳ ಪರಿಶೀಲನೆ ಮಾಡಬೇಕಾ…
ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚಿಗೆ ರೋಡರೇಜ್ ಪ್ರಕರಣಗಳು ಹೆಚ್ಚುತ್ತಿದ್ದು, ದಾರಿ ಬಿಡಲಿಲ್ಲ ಎಂದು ಬೈಕ್ ಸವಾರರೊಬ್ಬ ಪುಂಡಾಟ ಮೆರೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಡುರಸ್ತೆಯಲ್ಲಿಯೇ ಡ್ರ್ಯಾಗರ್ ಹಿಡಿದು ಬೈಕ್ ಸವಾರ ಪುಂಡಾಟ ಮೆರೆದಿದ್ದಾನೆ. ಗೂಡ್ಸ್ ವಾಹನ ಚಾಲಕನ ಮೇಲೆ ಬೈಕ್ ಸವಾರ ದರ್ಪ ತೋರಿದ್ದಾನೆ. ಗಲಾಟೆ ವೇಳೆ ಗೂಡ್ಸ್ ವಾಹನದ ಗ್ಲಾಸ್ ಒಡೆದು ಪುಡಿ ರೌಡಿ ದಾಂದಲೆ ಮಾಡಿದ್ದಾನೆ. ಬೆಂಗಳೂರಿನ ಲಿಂಗರಾಜಪುರ ಕೆಳಗೆ ನಿನ್ನೆ ಸಂಜೆ ಒಂದು ಗಲಾಟೆ ನಡೆದಿದೆ.
ನವದೆಹಲಿ : ಕರ್ನಾಟಕದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ದೇಶದ ಎರಡನೇ ಶ್ರೀಮಂತ ಸಚಿವ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ವರದಿ ಹೇಳಿದೆ. ರಾಜ್ಯ ವಿಧಾನಸಭೆಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಕೇಂದ್ರ ಸಚಿವರು ಚುನಾವಣೆ ಸಂದರ್ಭದಲ್ಲಿ ಸಲ್ಲಿಸಿದ ಅಫಿಡವಿಟ್‌ಗಳನ್ನು ವಿಶ್ಲೇಷಿಸಿ ಎಡಿಆರ್ ಗುರುವಾರ ವರದಿ ಬಿಡುಗಡೆ ಮಾಡಿದೆ. 27 ವಿಧಾನಸಭೆಗಳು, 3 ಕೇಂದ್ರಾಡಳಿತ ಪ್ರದೇಶಗಳು ಮತ್ತು ಕೇಂದ್ರದ 652 ಸಚಿವರ ಪೈಕಿ 643 ಸಚಿವರ ಅಫಿಡವಿಟ್‌ಗಳನ್ನು ವಿಶ್ಲೇಷಿಸಲಾಗಿದೆ. ಕರ್ನಾಟಕದಲ್ಲಿ ನೂರು ಕೋಟಿಗಿಂತ ಹೆಚ್ಚು ಆಸ್ತಿ ಇರುವ ಎಂಟು ಸಚಿವರು ಇದ್ದಾರೆ. ಆಂಧ್ರ ಪ್ರದೇಶವು ನಂತರದ ಸ್ಥಾನದಲ್ಲಿದೆ. 643 ಸಚಿವರ ಪೈಕಿ 302 ಮಂದಿ (47%) ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. 174 ಸಚಿವರ ವಿರುದ್ಧ (27%) ಗಂಭೀರ ಅಪರಾಧ ಪ್ರಕರಣಗಳಿವೆ. ಈ ಸಚಿವರು ಕೊಲೆ, ಕೊಲೆಯತ್ನ, ಅಪಹರಣ, ಮಹಿಳೆಯರ ವಿರುದ್ಧದ ಅಪರಾಧಗಳು ಸೇರಿದಂತೆ ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಕೇಂದ್ರ ಸಚಿವ ಸಂಪುಟದ 72ರಲ್ಲಿ 29 (40%) ಮಂದಿ ವಿರುದ್ಧ ಪ್ರಕರಣಗಳಿವೆ.a
ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಇಂದು ಸಾಮೂಹಿಕ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಇಂದು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಮದ್ಯ ಮಾರಾಟ ನಿಷೇಧ ಜಾರಿಗೊಳಿಸಲಾಗಿದೆ. ನಾಗಮಂಗಲದ ಸುತ್ತಮುತ್ತಲು ನಿನ್ನೆ ಮತ್ತು ಇಂದು ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧಗೊಳಿಸಿ ಜಿಲ್ಲಾಧಿಕಾರಿ ಡಾ. ಕುಮಾರ್ ಆದೇಶ ಹೊರಡಿಸಿದ್ದಾರೆ. ಗಣೇಶ ವಿಸರ್ಜನೆಯ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು, ಕಳೆದ ವರ್ಷ ಗಣೇಶ ವಿಸರ್ಜನೆ ವೇಳೆ ಕೋಮುಗಲಭೆ ನಡೆದಿತ್ತು. ಕೋಮುಗಲಭೆಯ ವೇಳೆ ಸಾರ್ವಜನಿಕರ ಆಸ್ತಿಪಾಸ್ತಿ ನಷ್ಟವಾಗಿತ್ತು ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ಆಡಳಿತದಿಂದ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ ನಾಗಮಂಗಲದಲ್ಲಿ ದಾರಿಯುದ್ದಕ್ಕೂ ಸಿಸಿ ಕ್ಯಾಮೆರಾ ಗಳನ್ನು ಅಳವಡಿಸಲಾಗಿದೆ. ಪೊಲೀಸ್ ಭದ್ರತೆಯಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ ನಡೆಯಲಿದೆ.
ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಧರ್ಮಸ್ಥಳ ಕ್ಷೇತ್ರದ ಕುರಿತು ಯೂಟ್ಯೂಬರ್ ಸಮೀರ್ ಈ ಹಿಂದೆ AI ತಂತ್ರಜ್ಞಾನದ ಮೂಲಕ ಯೂಟ್ಯೂಬ್ ನಲ್ಲಿ ವಿಡಿಯೋ ಹರಿ ಬಿಟ್ಟಿದ್ದ. ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಸಿದ ಆರೋಪದ ಹಿನ್ನೆಲೆಯಲ್ಲಿ, ಈ ವಿಚಾರವಾಗಿ ನಿನ್ನೆ ಪೊಲೀಸರು ಬೆಂಗಳೂರಿನಲ್ಲಿರುವ ಯುಟ್ಯೂಬರಿ ಸಮೀರ್ ಮನೆಯ ಮೇಲೆ ದಾಳಿ ನಡೆಸಿ ವಿಡಿಯೋ ಮಾಡಿದ ಕಂಪ್ಯೂಟರ್ ಹಾಗೂ ಫೋನ್ ಹಾರ್ಡ್ ಡಿಸ್ಕ್ ಜಪ್ತಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ನಾಗೇಶ್ ಕದ್ರಿ ಮತ್ತು ತಂಡ, ಎಫ್‌ಎಸ್ಎಲ್ ವಿಭಾ ಗದ ಸೋಕೊ ಸಿಬ್ಬಂದಿ ಜೊತೆ ಸಮೀರ್‌ರ ಮನೆಗೆ ಭೇಟಿ ನೀಡಿ, ಮಹಜರು ನಡೆಸಿದರು. ಪೊಲೀಸರು ಮುಂಚಿತ ವಾಗಿಯೇ ಸಮೀರ್‌ಗೆ ಮಹಜರು ಪ್ರಕ್ರಿಯೆಗೆ ಆಗಮಿ ಸುವುದಾಗಿ ಮಾಹಿತಿ ನೀಡಿದ್ದರು. ಹೀಗಾಗಿ, ಆತ ಮನೆ ಯಲ್ಲಿಯೇ ಇದ್ದರು. ಜೊತೆಗೆ, ಗಿರೀಶ್ ಮಟ್ಟಣ್ಣವರ್ ಕೂಡ ಇದ್ದರು. ಸ್ಥಳ ಸ್ಥಳ ಮಹಜರು ನಡೆಸಿದ ಪೊಲೀಸರು, ಅದರ ವಿಡಿಯೋ ಮಾಡಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ…
ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ಶಾಲಾ ಮಕ್ಕಳಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಒಂದರಿಂದ ಹತ್ತನೇ ತರಗತಿ ಮಕ್ಕಳಿಗೆ ರಾಗಿ ಮಾಲ್ಟ್ ವಿತರಣೆಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ತರಗತಿ 1ರಿಂದ 10 ವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್, ಮುದ್ದೇನಹಳ್ಳಿ, ಚಿಕ್ಕಬಳ್ಳಾಪುರ ಜಿಲ್ಲೆ ಈ ಸಂಸ್ಥೆಯ ವತಿಯಿಂದ ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ಪುಡಿಯನ್ನು ಬಿಸಿ ಹಾಲಿನೊಂದಿಗೆ ಮಿಶ್ರಣ ಮಾಡಿ ವಿತರಿಸಲಾಗುತ್ತಿರುವ ಕಾರ್ಯಕ್ರಮವನ್ನು ವಾರದ ಮೂರು ದಿನಗಳ ಬದಲಾಗಿ ಐದು ದಿನಗಳಿಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ. ರೈತರು, ಕನ್ನಡಪರ ಹೋರಾಟಗಾರರ ವಿರುದ್ಧದ 60 ಪ್ರಕರಣಗಳನ್ನು ವಾಪಸ್ ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಮೆಟ್ರೋ ಎಲಿವೇಟೆಡ್ ಕಾರಿಡಾರ್ ಗೆ ಸಚಿವ ಸಂಪುಟ ಅನುಮೋದನೆ ನೀಡಿದೆ, ಮೆಟ್ರೋ ಹಂತ-3, ಜೆಪಿನಗರ 4ನೇ…
ಬೆಂಗಳೂರು : 2017ರ ಮೊದಲು ಪ್ರಾಥಮಿಕ ಶಾಲಾ ಶಿಕ್ಷಕರಾಗಿ ನೇಮಕಗೊಂಡ ವರಿಗೆ 1- 5ನೇ ತರಗತಿವರೆಗೆ ಮಾತ್ರ ಬೋಧನೆಗೆ ಸೀಮಿತಿಗೊಳಿಸಿ ಹಿಂಬಡ್ತಿ ಯಿಂದಾಗಿರುವ ಅನ್ಯಾಯ ಸರಿಪಡಿಸುವ ಬಗ್ಗೆ ಗುರುವಾರ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆಯಾಗಿದೆಯಾದರೂ ಮುಂಬಡ್ತಿ ನೀಡುವ ಕುರಿತು ಅಂತಿಮ ತೀರ್ಮಾನ ಮಾಡಲಾಗಿಲ್ಲ. ಪದವಿ ಪಡೆದಿರುವ ಪ್ರಾಥಮಿಕ ಶಿಕ್ಷಕರನ್ನು 7ನೇತರಗತಿವರೆಗೆ ಬೋಧನೆಗೆ ಅವಕಾಶ ನೀಡಿ ಒಂದು ವೇತನ ಮುಂಬಡ್ತಿ ಬೇಡಿಕೆ8 ವರ್ಷಗಳಿಂದ ಇದೆ. ಈ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದ್ದು, ಕೆಲ ಕಾನೂನು ಅಂಶಗಳ ವಿಚಾರವಾಗಿ ಕಾನೂನು ಇಲಾಖೆ ಅಭಿಪ್ರಾಯ ಕೇಳಲಾಗಿದೆ. ಅಭಿಪ್ರಾಯ ಪಡೆದು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು :ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ, ಇನ್ಮುಂದೆ ಸ್ಥಳೀಯ ಸಂಸ್ಥೆಯ ಚುನಾವಣೆಗಳಲ್ಲಿ ಇವಿಎಂ ಬದಲಾಗಿ ಬ್ಯಾಲೆಟ್ ಪೇಪರ್ ಬಳಸಲು ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡಲು ನಿನ್ನೆ ನಡೆದ ರಾಜ್ಯ ಸಚಿವ ಸಂಪುಟದಲ್ಲಿ ಈ ಒಂದು ನಿರ್ಧಾರ ಕೈಗೊಳ್ಳಲಾಯಿತು. ಹೌದು ರಾಜ್ಯದ ಎಲ್ಲಾ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದಿನ ದಿನಗಳಲ್ಲಿ ವಿದ್ಯುನ್ಮಾನ ಮತ ಯಂತ್ರಗಳ (ಇವಿಎಂ) ಬದಲು ಹಿಂದೆ ಇದ್ದಂತೆ ಬ್ಯಾಲೆಟ್ ಪೇಪರ್ ಮೂಲಕ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲು, ಈ ಸಂಬಂಧ ಅಗತ್ಯ ಕಾನೂನು ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಜತೆಗೆ, ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವ ಣೆಗೆ ರಾಜ್ಯ ಚುನಾ ವಣಾ ಆಯೋಗವೇ…
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಶುಚಿ ಯೋಜನೆಯನ್ನು ಮುಂದುವರಿಸುತ್ತಿದ್ದು, 71.83 ಕೋಟಿ ವೆಚ್ಚದಲ್ಲಿ ಯೋಜನೆ ಜಾರಿಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ವಿಶೇಷವಾಗಿ ರಾಜ್ಯಾದ್ಯಂತ ಆಶಾಕಿರಣ ಯೋಜನೆ ವಿಸ್ತರಣೆಯಾಗೆ 52.85 ಕೋಟಿ ವೆಚ್ಚದಲ್ಲಿ ಎಲ್ಲ ಜಿಲ್ಲೆಗಳಲ್ಲಿ ಶಾಶ್ವತ ದೃಷ್ಟಿ ಕೇಂದ್ರಗಳನ್ನ ತೆರೆಯಲಾಗುವುದು. ಸಾರ್ವಜನಿಕರ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಮತ್ತು ಕೆಂಪುಕಲ್ಲು ಗಣಿಕಾರಿಕೆ ನೀತಿ ಸಡಿಲಗೊಳಿಸುವ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದ್ದು, ಶೀಘ್ರದಲ್ಲಿಯೇ ಪರಿಷ್ಕೃತ ನೀತಿ ಜಾರಿಗೆ ಬರಲಿದೆ. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಆರೋಗ್ಯ ಇಲಾಖೆಯ ಮಹತ್ವದ ವಿಷಯಗಳು.. * ಶುಚಿ ಯೋಜನೆಯಡಿ ರಾಜ್ಯದ ಶಾಲಾ ವಿದ್ಯಾರ್ಥಿನಿಯರಿಗೆ ವರ್ಷಕ್ಕಾಗುವಷ್ಟು 2.35 ಕೋಟಿ ನ್ಯಾಪ್ಕಿನ್ ಗಳನ್ನ 71.83 ಕೋಟಿ ವೆಚ್ಚದಲ್ಲಿ ಖರೀದಿಸಿ ವಿತರಿಸಲು ಅನುಮೋದನೆ. * 52.85 ಕೋಟಿ ವೆಚ್ಚದಲ್ಲಿ ರಾಜ್ಯಾದ್ಯಂತ ಆಶಾಕಿರಣ ಯೋಜನೆ ವಿಸ್ತರಣೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಶಾಶ್ವತ ದೃಷ್ಟಿ ಪರೀಕ್ಷಾ ಕೇಂದ್ರಗಳನ್ನ ತೆರೆದು, ಕಣ್ಣಿನ ತಪಾಸಣೆ, ಶಸ್ತ್ರ ಚಿಕಿತ್ಸೆ ಹಾಗೂ…














