Author: kannadanewsnow05

ಬೆಂಗಳೂರು : ರಾಜ್ಯದಲ್ಲಿ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಅವಧಿಯನ್ನು ಅಕ್ಟೋಬರ್ 12ರ ವರೆಗೆ ವಿಸ್ತರಿಸಲಾಗಿದ್ದು, ಇದರ ಬೆನ್ನಲ್ಲೆ ದಸರಾ ರಜಾ ಅವಧಿ ವಿಸ್ತರಣೆ ಮಾಡುವಂತೆ ಇದೀಗ ಶಿಕ್ಷಕರು ಮನವಿ ಮಾಡಿಕೊಂಡಿದ್ದಾರೆ. ಸಮೀಕ್ಷೆಗಳು ವಿಸ್ತರಣೆ ಬೆನ್ನಲ್ಲೇ ಸರ್ಕಾರಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸಚಿವರಿಗೆ ಮನವಿ ಮಾಡಿಕೊಳ್ಳಲಾಗಿದೆ. ಕಳೆದ ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 7ರ ತನಕ ದಸರಾ ರಜೆ ಇತ್ತು. ಶಿಕ್ಷಕರು ಸೆಪ್ಟೆಂಬರ್ 22 ರಿಂದ ಜಾತಿಗಣತಿ ಮಾಡುತ್ತಿದ್ದಾರೆ ಬೆಂಗಳೂರಿನಲ್ಲಿ ಸರ್ವೇ ಇನ್ನೂ ಗೊಂದಲದಲ್ಲಿ ನಡೆಯುತ್ತಿದೆ. ಹೀಗಾಗಿ ಶಿಕ್ಷಕರು ದೈಹಿಕ ಹಾಗೂ ಬೌದ್ಧಿಕವಾಗಿ ಒತ್ತಡದಲ್ಲಿ ಇದ್ದಾರೆ. ಅವರಿಗೆ ದೈಹಿಕ ಹಾಗು ಮಾನಸಿಕ ವಿರಾಮದ ಅವಶ್ಯಕತೆ ಇದೆ ಹಾಗಾಗಿ ಅಕ್ಟೋಬರ್ 17ರವರೆಗೆ ದಸರಾ ರಜಾ ಅವಧಿ ವಿಸ್ತರಣೆ ಮಾಡುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಮಾಡಿದೆ.

Read More

ದಾವಣಗೆರೆ : ರಾಜ್ಯಾದ್ಯಂತ ಸೆಪ್ಟೆಂಬರ್ 22 ರಿಂದ ಶೈಕ್ಷಣಿಕ ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆ ಆರಂಭಿಸಲಾಗಿದ್ದು, ಈಗಾಗಲೇ ಜಾತಿಗಣಿತಿ ವೇಳೆ ಹೃದಯಾಘಾತದಿಂದ ಶಿಕ್ಷಕರು ಮೃತಪಟ್ಟಿರುವ ಒಂದೆರಡು ಪ್ರಕರಣಗಳು ನಡೆದಿದ್ದುz ಇದೀಗ ದಾವಣಗೆರೆಯಲ್ಲಿ ಶಿಕ್ಷಕರೊಬ್ಬರಿಗೆ ಜಾತಿಗಣಿತಿ ವೇಳೆ ಹೃದಯಘಾತವಾಗಿದೆ. ಅದೃಷ್ಟವಶಾತ್ ಸ್ಥಳೀಯರ ಸಮಯ ಪ್ರಜ್ಞೆಯಿಂದ ಶಿಕ್ಷಕನ ಜೀವ ಉಳಿದಿದೆ. ಹೌದು ಜಾತಿ ಗಣತಿ ವೇಳೆ ದಾವಣಗೆರೆ ತಾಲ್ಲೂಕಿನ ಹಳೆಕಡ್ಲೆಬಾಳು ಶಾಲೆಯ ಶಿಕ್ಷಕರೊಬ್ಬರಿಗೆ ಹೃದಯಾಘಾತವಾಗಿದೆ. ಶಿಕ್ಷಕ ಪ್ರಕಾಶ್ ನಾಯಕ್ (44)ಗೆ ಹೃದಯಾಘಾತವಾಗಿದ್ದು, ತಕ್ಷಣ ಚಿಕಿತ್ಸೆಗಾಗಿ ದಾವಣಗೆರೆ ನಗರದ ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಶಸ್ತ್ರಚಿಕಿತ್ಸೆ ನೆರವೇರಿಸಿ ಸ್ಟೆಂಟ್ ಅಳವಡಿಸಿದ್ದಾರೆ. ಸ್ಥಳೀಯರ ಸಮಯಪ್ರಜ್ಞೆಯಿಂದ ಶಿಕ್ಷಕ ಪ್ರಕಾಶ್ ನಾಯಕ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದಾವಣಗೆರೆ ಡಿಸಿ ಜಿಎಂ ಗಂಗಾಧರ ಸ್ವಾಮಿ ಫೋನ್ ಮೂಲಕ ಪ್ರಕಾಶ್ ನಾಯಕ್​ಗೆ ಧೈರ್ಯ ತುಂಬಿದರು. ಸಮೀಕ್ಷೆ ವೇಳೆ ಸಿಬ್ಬಂದಿ ಸಾಕಷ್ಟು ಕಿರುಕುಳ ಎದುರಿಸುತ್ತಿದ್ದಾರೆ. ಇದರಿಂದಾಗಿ ಅವರು ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುತ್ತಿದ್ದಾರೆ ಎಂದು ಪ್ರಕಾಶ್ ನಾಯಕ್ ಜತೆಗಿದ್ದವರು ಡಿಸಿ ಜಿಎಂ ಗಂಗಾಧರ ಸ್ವಾಮಿ ಬಳಿ ಫೋನ್​ನಲ್ಲಿ…

Read More

ಬೆಂಗಳೂರು : ರಾಜ್ಯದಲ್ಲಿ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಈಗಾಗಲೇ ಸೆಪ್ಟೆಂಬರ್ 22 ರಿಂದ ಆರಂಭವಾಗಿದ್ದು, ಸಮೀಕ್ಷೆ ಮುಗಿಯದ ಹಿನ್ನೆಲೆಯಲ್ಲಿ ಇದೀಗ ಶಿಕ್ಷಣ ಇಲಾಖೆ ಶಿಕ್ಷಕರ ಅವಧಿಯನ್ನು ಸಮೀಕ್ಷೆ ಕಾರ್ಯಕ್ಕೆ ವಿಸ್ತರಿಸಿದೆ. ಅಲ್ಲದೆ ಶಾಲಾ ಅವಧಿ ಕೂಡ ಪರಿಷ್ಕರಣೆ ಮಾಡಲಾಗಿದೆ. ಬೆಳಿಗ್ಗೆ 8ರಿಂದ ಮಧ್ಯಾಹ್ನ 1 ರವರೆಗೆ ಶಾಲೆಯಲ್ಲಿ ಶಿಕ್ಷಕರು ಕರ್ತವ್ಯ ನಿರ್ವಹಿಸಬೇಕು. ಬಳಿಕ ಮಧ್ಯಾಹ್ನ 1 ಗಂಟೆಯಿಂದ ಸಮೀಕ್ಷಾ ಕಾರ್ಯದಲ್ಲಿ ಅವರು ಭಾಗಿಯಾಗಬೇಕು. ಅಕ್ಟೊಬರ್ 12 ರವರೆಗೆ ಸಮೀಕ್ಷೆಯಲ್ಲಿ ಭಾಗಿಯಾಗಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಇನ್ನು ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಅಕ್ಟೋಬರ್ 24ರ ವರೆಗೆ ಸರ್ವೆ ಮಾಡಲು ಆದೇಶ ನೀಡಿದೆ. ಬೆಂಗಳೂರು ಹೊರತುಪಡಿಸಿ ರಾಜ್ಯದಲ್ಲಿ ಅಕ್ಟೋಬರ್ 12 ರವರೆಗೆ ಸಮೀಕ್ಷೆ ವಿಸ್ತರಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

Read More

ತೆಲಂಗಾಣ : ಕಳೆದ ಎರಡು ದಿನಗಳ ಹಿಂದೆ ಕನ್ನಡದ ಖ್ಯಾತ ನಟಿ ರಶ್ಮಿಕ ಮಂದಣ್ಣ ಜೊತೆಗೆ ಟಾಲಿವುಡ್ ಸ್ಟಾರ್ ನಟ ವಿಜಯ್ ದೇವರಕೊಂಡ ನಿಶ್ಚಿತಾರ್ಥ ನೆರವೇರಿತ್ತು. ಇದರ ಬೆನ್ನಲ್ಲೇ ಇದೀಗ ವಿಜಯ್ ದೇವರಕೊಂಡ ಚಲಿಸುತ್ತೀದ್ದ ಕಾರು ಅಪಘಾತವಾಗಿದೆ. ಹೌದು ಪುಟ್ಟಪರ್ತಿಯಿಂದ ಹೈದರಾಬಾದ್ ಗೆ ಹೋಗುವಾಗ ಈ ಒಂದು ಅಪಘಾತ ಸಂಭವಿಸಿದ್ದು, ಮುಂದೆ ಹೋಗುತ್ತಿದ್ದ ಬೊಲೆರೋ ವಾಹನಕ್ಕೆ ವಿಜಯ್ ದೇವರಕೊಂಡ ಕಾರು ಡಿಕ್ಕಿ ಹೊಡೆದಿದೆ. ಮತ್ತೊಂದು ಕಾರಿನಲ್ಲಿ ದೇವರಕೊಂಡ ಹೈದರಾಬಾದ್ ಗೆ ತೆರಳಿದ್ದಾರೆ. ಸದ್ಯಕ್ಕೆ ಪ್ರಾಣಾಪಯದಿಂದ ವಿಜಯ ದೇವರಕೊಂಡ ಪಾರಾಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಅಷ್ಟೇ ರಶ್ಮಿಕ ಮಂದನ ಜೊತೆಗೆ ಎಂಗೇಜ್ಮೆಂಟ್ ಮಾಡಿಕೊಂಡಿರುವ ವಿಜಯ್ ದೇವರಕೊಂಡ ಫೆಬ್ರುವರಿಯಲ್ಲಿ ಈ ಜೋಡಿ ಹಸೆಮಣೆ ಏರಲಿದೆ ಎಂದು ತಿಳಿದು ಬಂದಿದೆ. https://twitter.com/igtelugu/status/1975202938420404715?t=RFtoiRSzeoBThV7uvfcSIQ&s=19

Read More

ಬೆಂಗಳೂರು : ಸೆಪ್ಟೆಂಬರ್ 22 ರಿಂದ ರಾಜ್ಯಾದ್ಯಂತ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಆರಂಭವಾಗಿದ್ದು, ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ಸಮೀಕ್ಷೆ ಪೂರ್ಣಗೊಂಡಿದೆ. ಇದೀಗ ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳ ಹಿಂದೆ ಸಮೀಕ್ಷೆ ಆರಂಭಿಸಲಾಗಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಾಮಾಜಿಕ ಶೈಕ್ಷಣಿಕ ಆರ್ಥಿಕ ಸಮೀಕ್ಷೆ ನಡೆಸಿದ್ದು ಇಂದು ಒಂದು ದಿನ 2,66,066 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಹೌದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿನ ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ 31,815 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ 38,374 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ 68,639 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಇನ್ನು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ 39,315 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಅಲ್ಲದೆ ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 87,923 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ.

Read More

ಗದಗ : ಗದಗದಲ್ಲಿ ಘೋರ ಘಟನೆ ಒಂದು ನಡೆದಿದ್ದು, ವಿಷಪೂರಿತ ಆಹಾರ ಸೇವಿಸಿ 80ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಹೊಳೆ ಇಟಗಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಚಿಕ್ಕೋಡಿ ಮೂಲದ ಕುರಿಗಾಗಿ ಪದ್ಮಣ್ಣ ಎನ್ನುವವರಿಗೆ ಕುರಿಗಳು ಸೇರಿದ್ದು ವಿಷಪೂರಿತ ಆಹಾರ ಸೇವಿಸಿ 80ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ. ಇದೀಗ ಕುರಿಗಾಹಿ ಪದ್ಮಣ್ಣ 80 ಕುರಿಗಳನ್ನು ಕಳೆದುಕೊಂಡು ಕಂಗಾಲಾಗಿದ್ದಾರೆ. ಘಟನೆ ಕುರಿತಂತೆ ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಹೋಟೆಲ್ನಲ್ಲಿ ಸಿಲಿಂಡರ್ ಸೋರಿಕೆಯಾಗಿ ಅಗ್ನಿ ದುರಂತ ಸಂಭವಿಸಿದೆ. ಬೆಂಗಳೂರಿನ ಸುಧಾಮ ನಗರದಲ್ಲಿ ಈ ಒಂದು ಘಟನೆ ನಡೆದಿದ್ದು ಸಂಜೆ 4 ಗಂಟೆಗೆ ಹೋಟೆಲ್ ಅನ್ನು ಸಿಬ್ಬಂದಿಗಳು ಬಂದ್ ಮಾಡಿದ್ದಾರೆ. ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ ಹೋಟೆಲ್ ನಲ್ಲಿ ಯಾರು ಇಲ್ಲದ್ದರಿಂದ ಭಾರಿ ಅನಾಹುತ ಒಂದು ತಪ್ಪಿದೆ. ಕೂಡಲೇ ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆ ಕುರಿತು ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ತೆಲಂಗಾಣ : ತೆಲುಗು ಖ್ಯಾತ ನಟ ವಿಜಯ್ ದೇವರಕೊಂಡ ಕಾರು ಅಪಘಾತವಾಗಿದೆ. ಪುಟ್ಟಪರ್ತಿಗೆ ಹೋಗಿ ಬರುವಾಗ ಈ ಒಂದು ಅಪಘಾತ ಸಂಭವಿಸಿದ್ದು, ತೆಲಂಗಾಣದ ಗದ್ವಾಲ್ ಜಿಲ್ಲೆಯ ಉಂಡವಳ್ಳಿ ಬಳಿ ಅಪಘಾತ ಸಂಭವಿಸಿದೆ. ಎಂದು ತಿಳಿದುಬಂದಿದೆ. ಪುಟ್ಟಪರ್ತಿಯಿಂದ ಹೈದರಾಬಾದ್ ಗೆ ಹೋಗುವಾಗ ಈ ಒಂದು ಅಪಘಾತ ಸಂಭವಿಸಿದ್ದು, ಮುಂದೆ ಹೋಗುತ್ತಿದ್ದ ಬೊಲೆರೋ ವಾಹನಕ್ಕೆ ವಿಜಯ್ ದೇವರಕೊಂಡ ಕಾರು ಡಿಕ್ಕಿ ಹೊಡೆದಿದೆ. ಮತ್ತೊಂದು ಕಾರಿನಲ್ಲಿ ದೇವರಕೊಂಡ ಹೈದರಾಬಾದ್ ಗೆ ತೆರಳಿದ್ದಾರೆ. ಸದ್ಯಕ್ಕೆ ಪ್ರಾಣಾಪಯದಿಂದ ವಿಜಯ ದೇವರಕೊಂಡ ಪಾರಾಗಿದ್ದಾರೆ. ಈಗಾಗಲೇ ಕನ್ನಡದ ಖ್ಯಾತ ನಟಿ ರಶ್ಮಿಕ ಮಂದಣ್ಣ ಅವರ ಜೊತೆಗೆ ಎಂಗೇಜ್ಮೆಂಟ್ ಮಾಡಿಕೊಂಡಿರುವ ವಿಜಯ್ ದೇವರಕೊಂಡ ಅವರು ಮುಂದಿನ ವರ್ಷ ಫೆಬ್ರವರಿಯಲ್ಲಿ ಹಸೆಮಣೆ ಇರಲಿದ್ದಾರೆ.

Read More

ಬೆಂಗಳೂರು : ಬಿಗ್ ಬಾಸ್ ಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿದೆ. ಬಿಗ್ ತಾಜ್ಯ ನೀರು ಸಂಸ್ಕರಣ ಘಟಕ ನಿರ್ಮಿಸಿದ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇದೀಗ ನೋಟಿಸ್ ನೀಡಿದ್ದು ಮಾಡುವಂತೆ ನೋಟಿಸ್ ನೀಡಲಾಗಿದೆ. ಹೌದು ಬಿಗ್ ಬಾಸ್ ಹೌಸ್ ಸಂಪೂರ್ಣವಾಗಿ ಬಂದು ಮಾಡುವಂತೆ ಕರ್ನಾಟಕ ವಾಯುವ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿದ್ದು ಶೋ ನಡೆಯುತ್ತಿರುವ ಸಂದರ್ಭದಲ್ಲಿ ಈ ರೀತಿ ನೋಟಿಸ್ ನೀಡಿದ್ದು ಬಿಗ್ ಬಾಸ್ ವೀಕ್ಷಕರಿಗೆ ಶಾಕ್ ನೀಡಿದೆ. ಫ್ಲಾಟ್ ನಂಬರ್ 24 ಮತ್ತು 26 ವೆಲ್ಟುಡೇಸ್ ಹಾಗೂ ಎಂಟರ್ಟೈನ್ಮೆಂಟ್ ಪ್ರೈವೇಟ್ ಲಿಮಿಟೆಡ್ ಗೆ ಸೇರಿರುವಂತಹ ಜಾಗ ಆ ಒಂದು ಜಾಗದಲ್ಲಿ ಪ್ರಾಬ್ಲಮ್ ನಂಬರ್ 21 ಟು 26 ಜಾಗಗಳಲ್ಲಿ ಬಿಗ್ ಬಾಸ್ ಮನೆ ನಿರ್ಮಿಸಿದ್ದಾರೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹೇಳುತ್ತಿರುವುದು ಅದಕ್ಕೆ ನೋಟಿಸ್ ಕೂಡ ನೀಡಿದೆ. ಇರುವಂತಹ ನೀರು ಸಂಸ್ಕರಣೆ ಘಟಕ ಅದನ್ನು ನಿರ್ಮಾಣ ಮಾಡಿ ಕೊಂಡಿಲ್ಲ. ಪ್ರತಿನಿತ್ಯ…

Read More

ಹಾಸನ : ಹಾಸನದಲ್ಲಿ ಘೋರವಾದ ಘಟನೆ ಒಂದು ನಡೆದಿದ್ದು, ಕಟ್ಟಡಕ್ಕೆ ವಿದ್ಯುತ್ ದೀಪಾಲಂಕಾರ ಮಾಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವನಪ್ಪಿದ್ದಾರೆ. ಹಾಸನದ ಮಲಬಾರ್ ಗೋಲ್ಡ್ ಕಟ್ಟಡದಿಂದ ಬಿದ್ದು ಸಿಬ್ಬಂದಿ ಸಾವನಪ್ಪಿದ್ದಾರೆ. ಹಾಸನ ಜಿಲ್ಲೆಯ ಆಲೂರು ಮೂಲದ ರವೀಂದ್ರ (55) ಕಟ್ಟಡಕ್ಕೆ ವಿದ್ಯುತ್ ದೀಪ ಅಲಂಕಾರ ಮಾಡುತ್ತಿದ್ದಾಗ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದಾರೆ.ಮಲಬಾರ್ ಗೋಲ್ಡ್ ನಲ್ಲಿ ಎಲೆಕ್ಟ್ರಿಷಿಯನ್ ಆಗಿದ್ದ ರವೀಂದ್ರ ಇಂದ್ರ ಕಳೆದ 14 ವರ್ಷಗಳಿಂದ ಅಲ್ಲಿ ಕೆಲಸ ಮಾಡುತ್ತಿದ್ದರು. ಕಟ್ಟಡಕ್ಕೆ ವಿದ್ಯುತ್ ದೀಪ ಅಲಂಕಾರ ಮಾಡುತ್ತಿದ್ದಾಗ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದಾರೆ ಘಟನೆ ಕುರಿತಂತ್ವ ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More