Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕಚೇರಿ ನಿವಾಸದ ಬಳಿ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನ ರಸ್ತೆ ಬದಿಯ ಡಿವೈಡರ್ ಏರಿದ ಘಟನೆ ನಡೆದಿದೆ. ಅಂಚೆ ಇಲಾಖೆಗೆ ಸೇರಿದ ಗೂಡ್ಸ್ ವಾಹನ ಅಪಘಾತಕ್ಕೆ ಈಡಾಗಿದೆ. ಅದೃಷ್ಟವಶಾತ್ ಅಪಘಾತದಲ್ಲಿ ಯಾವುದೇ ರೀತಿಯ ಪ್ರಾಣಪಾಯ ಸಂಭವಿಸಿಲ್ಲ. ತಕ್ಷಣ ಅಲ್ಲಿಗೆ ಸಂಚಾರಿ ಠಾಣೆ ಪೋಲೀಸರು ಭೇಟಿ ನೀಡಿ ಗೂಡ್ಸ್ ವಾಹನ ತೆರವುಗೊಳಿಸಿದರು. ಘಟನೆಯ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಚಿಕ್ಕಮಗಳೂರು : ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿಚಾರವಾಗಿ ನಾವು ಮುಸ್ಲಿಂ ಎನ್ನುವ ಕಾರಣಕ್ಕೆ ಯಾರನ್ನು ವಿರೋಧ ಮಾಡಿಲ್ಲ ಎಂದು ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದರು. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ನಿನ್ನೆ ಸಂಜೆ ನಡೆದ ಕಾರ್ಯಕ್ರಮದಲ್ಲಿ ದಸರಾ ಹಿಂದೂ ಸಂಪ್ರದಾಯದ ಪ್ರತೀಕವಾಗಿ ಉತ್ಸವ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರತಾಪ್ ಸಿಂಹ ಬಾನು ಮುಷ್ತಾಕ್ ದಸರಾ ಉದ್ಘಾಟನೆ ಬಗ್ಗೆ ಈ ಮೊದಲೇ ಪ್ರತಿಕ್ರಿಯೆ ನೀಡಿದ್ದೇನೆ. ಮೈಸೂರು ದಸರಾದಲ್ಲಿ 9 ದಿನಗಳ ಕಾಲ ಆರಾಧನೆ ನಡೆಯುತ್ತದೆ. ತಾಯಿ ಚಾಮುಂಡೇಶ್ವರಿಗೆ ವಿವಿಧ ಅಲಂಕಾರ ಮಾಡಲಾಗಿರುತ್ತದೆ. ಇದು ನೂರಕ್ಕೆ ನೂರು ಧಾರ್ಮಿಕ ಕಾರ್ಯಕ್ರಮ ಎಂದದ್ದೆ. ಯಾವನೋ ಘಜ್ನಿ, ಅಕ್ಬರ್ ಬಾಬರ್ ಬಂದಿದ್ದ ಅಂತ ಹೇಳಬೇಡಿ ಎಂದರು. ಬಾಬರ್ ಇಲ್ಲದೆ ಇದ್ದರೂ ಮುಷ್ತಾಕ್ ಅಂತವರು ನಮ್ಮ ಮಧ್ಯೆ ಇದ್ದಾರೆ ಅದಕ್ಕಾಗಿ ಎಚ್ಚರಿಕೆ ನೀಡಲು ನಾನು ಬಂದಿದ್ದೇನೆ. ದೇಶ ಉಳಿಸಿಕೊಳ್ಳಲು ಹಿಂದೂಗಳು ಜಾತಿ ಬಿಟ್ಟು ಒಂದಾಗಬೇಕು ನಾವು ಮುಸ್ಲಿಂ ಎನ್ನುವ…
ದಕ್ಷಿಣಕನ್ನಡ : ಧರ್ಮಸ್ಥಳ ಬಗ್ಗೆ ಅಪಪ್ರಚಾರ ಖಂಡಿಸಿ ನಾಳೆ ಧರ್ಮ ಜಾಗೃತಿ ಸಮಾವೇಶ ಹಮ್ಮಿಕೊಂಡಿದ್ದು, ಧರ್ಮಸ್ಥಳದಲ್ಲಿ ನಾಳೆ ಬೃಹತ್ ಧರ್ಮ ಜಾಗೃತಿ ಸಮಾವೇಶ ಆಯೋಜನೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಧರ್ಮ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಒಂದು ಸಮಾವೇಶದಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೇರಳದ ಕಾಸರಗೋಡು ಜಿಲ್ಲೆಯ ದೇವಸ್ಥಾನ, ದೈವಸ್ಥಾನ, ಬಸದಿಗಳ ಪ್ರಮುಖರು ವಿವಿಧ ಸಂಘಟನೆ ಗಳ ಪ್ರಮುಖರು ಭಾಗಿಯಾಗಲಿದ್ದಾರೆ. ಧರ್ಮಸ್ಥಳ ಸಮಿತಿಯಿಂದ ಜಾಗೃತಿ ಸಮಾವೇಶ ಯೋಜನೆ ಮಾಡಲಾಗಿದೆ. ಧರ್ಮಸ್ಥಳದ ಅಮೃತವರ್ಷಿಣಿ ಸಭಾವವನದಲ್ಲಿ ಈ ಸಮಾವೇಶ ನಡೆಯಲಿದೆ.
ಬೆಂಗಳೂರು : ಸಮಾಜದಲ್ಲಿ ಇಂತಹ ಗಂಡಸರು ಇರ್ತಾರ ಅಂತ ಒಮ್ಮೊಮ್ಮೆ ಆಶ್ಚರ್ಯ ಆಗುತ್ತ. ಇದೀಗ ಬೆಂಗಳೂರಿನಲ್ಲಿ ವರದಕ್ಷಿಣೆಗಾಗಿ ಪತಿಯಿಂದ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. 4 ಕೋಟಿ ರೂಪಾಯಿ ವರದಕ್ಷಿಣೆ ಕೊಡದಿದ್ದಕ್ಕೆ ಪತಿಯೊಬ್ಬ ತನ್ನ ಪತ್ನಿಯ ವಾಟ್ಸಾಪ್ ಗ್ರೂಪ್ ಗಳಲ್ಲಿ ಖಾಸಗಿ ಫೋಟೋ ವೈರಲ್ ಮಾಡಿ ಕಿರುಕುಳ ನೀಡಿದ್ದಾನೆ. ಪತಿ ವಂದೇಮಾತರಂ ವಿರುದ್ಧ ಮಹಿಳಾ ಪೊಲೀಸ್ ಠಾಣೆಗೆ ಪತ್ನಿ ದೂರು ನೀಡಿದ್ದಾರೆ. ಪಶ್ಚಿಮ ವಿಭಾಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಇದೀಗ ಪತ್ನಿಯ ದೂರು ಆಧರಿಸಿ ಪತಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಬೆಂಗಳೂರಿನಲ್ಲಿ ರಾಜಸ್ಥಾನದ ಬಲೋತ್ರ ಜಿಲ್ಲೆಯ ದಂಪತಿ ವಾಸವಾಗಿದ್ದಾರೆ ಸ್ವಂತ ಬಿಜಿನೆಸ್ ಮಾಡಲು 4 ಕೋಟಿ ರೂಪಾಯಿ ವರದಕ್ಷಿಣೆಗಾಗಿ ವಂದೇ ಮಾತರಂ ತನ್ನ ಪತ್ನಿಯ ಬಳಿ ಬೇಡಿಕೆ ಇಟ್ಟಿದ್ದಾನೆ ಹಣ ತರದಿದಕ್ಕೆ ವಾಟ್ಸಾಪ್ ಗ್ರೂಪ್ಗಳಲ್ಲಿ ತನ್ನ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ್ದಾನೆ. ಈ ವಿಚಾರವನ್ನು ಸಂಬಂಧಿಕರು ಸಂತ್ರಸ್ಥೆಗೆ ತಿಳಿಸಿದ್ದಾರೆ. ವಿಚಾರ ಗೊತ್ತಾಗಿ ಪತಿಯನ್ನು ವಿಚಾರಿಸಿದಾಗ ಆಕೆಯ…
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ನಟ ದರ್ಶನ್ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಇದೀಗ ಪರಪ್ಪನ ಅಗ್ರಹಾರ ಜೈಲಿನ ಬಳಿ ಕರಡಿ ಪ್ರತ್ಯಕ್ಷವಾಗಿದೆ. ದರ್ಶನ್ ಇರುವಾಗ ಜೈಲಿನ ಕಾಂಪೌಂಡ್ ಬಳಿ ಈಗ ಕರಡಿ ಪ್ರತ್ಯಕ್ಷವಾಗಿದೆ. ಸೆಪ್ಟೆಂಬರ್ 3ರಂದು ಸಂಜೆ ಜೈಲಿನ ಬಳಿ ಕರಡಿ ಕಾಣಿಸಿಕೊಂಡಿದೆ.ಕರಡಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎಚ್ಚರಿಕೆ ಇರುವಂತೆ ಸೂಚನೆ ನೀಡಲಾಗಿದೆ ಕರಡಿ ಕಾಣಿಸಿಕೊಂಡ ದೃಶ್ಯವನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಕರಡಿ ಕಾಣಿಸಿಕೊಂಡ ಹಿನ್ನೆಲೆ ರೈಲು ಸಿಬ್ಬಂದಿಗಳಿಗೆ ಆತಂಕ ಹೆಚ್ಚಿದೆ.
ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಕುರಿತು ಮಹಿಳಾ ಪತ್ರಕರ್ತೆಯೊಬ್ಬರು ಕೇಳಿದ ಪ್ರಶ್ನೆಗೆ, ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಆರ್.ವಿ.ದೇಶಪಾಂಡೆ ನೀಡಿದ ಉತ್ತರ ವಿವಾದಕ್ಕೀಡಾಗಿದೆ. ಹೌದು ಪತ್ರಕರ್ತೆಯೊಬ್ಬರು ಮಹಿಳೆಯರಿಗೆ ಇಲ್ಲಿ ಹೆರಿಗೆ ಸರಿಯಾದ ಸೌಲಭ್ಯ ಇಲ್ಲ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಯಾವಾಗ ಸಿಗುತ್ತದೆ ಎಂದು ಪ್ರಶ್ನಿಸಿದಾಗ ನಿನಗೆ ಹೆರಿಗೆ ಆಗಬೇಕೇ? ಹೇಳು, ನಾನು ಮಾಡಿಸಿ ಕೊಡುತ್ತೇನೆ ಎಂದು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಇತ್ತೀಚೆಗೆ ಸೂಪಾ ಜಲಾಶಯಕ್ಕೆ ಬಾಗಿನ ಸಲ್ಲಿಸಿದ ಆರ್.ವಿ.ದೇಶಪಾಂಡೆ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವಾಗ ಖಾಸಗಿ ವಾಹಿನಿಯ ಹಿರಿಯ ಪತ್ರಕರ್ತೆಯೊಬ್ಬರು, ಉತ್ತರ ಕನ್ನಡದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಇಲ್ಲ. ಇಲ್ಲಿನ ಜನರು ತುರ್ತು ಸಂದರ್ಭದಲ್ಲಿ ಹೊರ ಜಿಲ್ಲೆಯ ಆಸ್ಪತ್ರೆಗಳನ್ನು ಅವಲಂಬಿಸಬೇಕು. ನಿಮ್ಮ ಹಳಿಯಾಳ ಕ್ಷೇತ್ರದಲ್ಲಿ ಹೆರಿಗೆ ಆಗಬೇಕೆಂದರೂ ಸಮಸ್ಯೆ ಇದೆ ಎಂದು ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ‘ನಿಂದೇನಾದ್ರೂ ಹೆರಿಗೆ ಮಾಡಿಸಬೇಕಾ ಹೇಳು.. ಮಾಡಿಸ್ತೀನಿ’ ಎಂದು ಹೇಳಿದ್ದರು. ಈ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಶಾಸಕರ ಈ…
ಬೆಂಗಳೂರು : ಈ ಬಾರಿ ನವರಾತ್ರಿಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಜನತೆಗೆ ಭರ್ಜರಿ ಗಿಫ್ಟ್ ಕೊಟ್ಟಿದ್ದು ಔಷಧಿ ಆಟೊಮೊಬೈಲ್ ಸೇರಿದಂತೆ ಹಲವು ವಸ್ತುಗಳ ಮೇಲಿನ ಜಿ ಎಸ್ ಟಿ ದರ ಭಾರಿ ಇಳಿಕೆ ಮಾಡಿ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಈ ವಿಚಾರವಾಗಿ ಕಂದಾಯ ಸಚಿವ ಕೃಷ್ಣಭೇರೇಗೌಡ ಅವರು ಕೇಂದ್ರ ಸರ್ಕಾರದ ಡಿಎಸ್‌ಟಿ ತೀರ್ಮಾನಗಳಿಂದ ರಾಜಕೀಯ ವಾರ್ಷಿಕ 70,000 ಕೋಟಿ ಖೋತಾ ಆಗಲಿದೆ ರಾಜ್ಯಕ್ಕೆ ಆರ್ಥಿಕ ಹೊರೆ ಆಗಬಹುದು ಎಂದು ತೀವ್ರ ಕಳವಳ ವ್ಯಕ್ತಪಡಿಸಿದರು. ಕೇಂದ್ರದ ತೀರ್ಮಾನಗಳಿಂದ 2016-17 ಮತ್ತು 2024-25ರ ನಡುವೆ ಆಗಿರುವಂತಹ ಕರ್ನಾಟಕಕ್ಕೆ ಆದಾಯದ ಖೋತಾ 70 ಸಾವಿರ ಕೋಟಿ. ಇದು ರಾಜ್ಯದ ಪರಿಸ್ಥಿತಿ ಆಗಿದ್ದು ಬೇರೆ ಬೇರೆ ರಾಜ್ಯಗಳದ್ದು ಬೇರೆ ಬೇರೆ ರೀತಿ ಇರಬಹುದು. 2024 ಮತ್ತು 25ನೇ ಸಾಲಿಗೆ 70 ಸಾವಿರ ಕೋಟಿ ಒಂದು ವರ್ಷಕ್ಕೆ ಮಾತ್ರ ಖೋತ ಆಗಲಿದೆ ಎಂದು ದರ ಸರಳಿಕರಣದಿಂದ ಆಗುವ ಅವರ ಬಗ್ಗೆ ಸಚಿವ…
ಬೆಂಗಳೂರು : ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರರ ಸಂಘ ಮಾಡಿದ್ದ ಕಮಿಷನ್ ಆರೋಪ ಹಾಗೂ ಅವ್ಯವಹಾರವನ್ನು ಸಾಬೀತು ಪಡಿಸುವ ಸಂದಿಗ್ಧತೆಗೆ ಸಿಲುಕಿರುವ ಕಾಂಗ್ರೆಸ್ ಸರ್ಕಾರ, ತನಿಖಾ ಸಂಸ್ಥೆ ನಿಗದಿಪಡಿಸುವ ಮೂಲಕ ಪ್ರಕರಣವನ್ನು ತಾರ್ಕಿಕ ಹಂತಕ್ಕೆ ಕೊಂಡೊಯ್ಯಲು ನಿರ್ಧರಿಸಿದೆ. ಹಾಗಾಗಿ ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಗುತ್ತಿಗೆದಾರರ ಸಂಘದ ಆರೋಪ ಪರಿಗಣಿಸಿ ಸರ್ಕಾರ ಎರಡು ತನಿಖಾ ಆಯೋಗ ರಚಿಸಿತ್ತು. ಈ ಪೈಕಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ತನಿಖೆ ನಡೆಸಿ ವರದಿ ನೀಡಲು ನ್ಯಾ.ನಾಗಮೋಹನ್ ದಾಸ್ ಅವರಿಗೆ ಜವಾಬ್ದಾರಿ ನೀಡಲಾಗಿತ್ತು. ನ್ಯಾ.ನಾಗಮೋಹನ್ ದಾಸ್ ಕಳೆದ ವಾರ ವರದಿಯನ್ನು ಸಿಎಂಗೆ ಸಲ್ಲಿಸಿದ್ದರು. ಮುಂದುವರಿದ ಪ್ರಕ್ರಿಯೆಯ ಭಾಗವಾಗಿ ನಿವೃತ್ತ ಇಂಜಿನಿಯರ್‌ಗಳ ತಂಡ ಎಡಬಿಡದೆ ಈ ವರದಿ ವಿಶ್ಲೇಷಿಸಿದ್ದು, ಯಾವೆಲ್ಲ ಪ್ರಕರಣ ತನಿಖೆಗೆ ಸೂಕ್ತವಾಗಿದೆ ಎಂಬುದನ್ನು ಪಟ್ಟಿ ಮಾಡಿ ವರದಿ ಸಿದ್ಧಮಾಡಿದೆ. ಇದೇ ವೇಳೆ ಇಂದು ನಡೆಯುವ ಸಂಪುಟ…
ಬೆಂಗಳೂರು : ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕೆ.ಎನ್ ರಾಜಣ್ಣ ಬಿಜೆಪಿ ಪಕ್ಷಕ್ಕೆ ಸೇರಿಕೊಳ್ಳಲು ಅರ್ಜಿ ಹಾಕಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಬಾಲಕೃಷ್ಣ ನಿನ್ನೆ ಸ್ಪೋಟಕ ಹೇಳಿಕೆ ನೀಡಿದ್ದರು. ಇವರ ಹೇಳಿಕೆಗೆ ಇದೀಗ ಮಾಜಿ ಸಚಿವ ರಾಜಣ್ಣ ತಿರುಗೇಟು ನೀಡಿದ್ದು ಸಿಎಂ ಸಿದ್ದರಾಮಯ್ಯ ಇರುವವರೆಗೂ ನಾನು ಕಾಂಗ್ರೆಸ್ ಪಕ್ಷದಲ್ಲೇ ಇರುತ್ತೇನೆ ಎಂದು ತಿಳಿಸಿದರು. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುವವರೆಗೂ ಹಾಗೂ ಕಾಂಗ್ರೆಸ್ ಪಕ್ಷದ ನೇತೃತ್ವ ವಹಿಸಿಕೊಂಡರುವವರೆಗೂ ನಾನು ಕಾಂಗ್ರೆಸ್ ಪಕ್ಷದಲ್ಲೇ ಇರುತ್ತೇನೆ ಬೇರೆ ಯಾವುದೇ ಪಕ್ಷಕ್ಕೆ ಹೋಗಲ್ಲ ನಾನು ಬಿಜೆಪಿಗೆ ಹೋಗುತ್ತೇನೆ ಎಂದು ಯಾವನು ಹೇಳಿದ್ದು? ಅವನು ಹೇಳೋದು ಹೇಳಿಕೊಳ್ಳಲಿ, ಅವನೇ ಬೇಕಾದರೂ ಬ್ರೆನ್ ಮ್ಯಾಪಿಂಗ್ ಮಾಡಿಕೊಳ್ಳಲಿ ಎಂದು ಏಕವಚನದಲ್ಲಿ ತಿರುಗೇಟು ನೀಡಿದರು. ನಾನ್ಯಾಕೆ ಬಿಜೆಪಿಗೆ ಹೋಗಲಿ. ನಾನ್ಯಾಕೆ ಪಕ್ಷ ಬಿಡಲಿ. ಪಕ್ಷ ನನಗೇನು ಕಡಿಮೆ ಮಾಡಿದೆ? ಸಿದ್ದರಾಮಯ್ಯ ಸಿಎಂ ಆಗಿ ಇರುವ ತನಕ ಹಾಗೂ ಪಕ್ಷದ ನೇತೃತ್ವ…
ನವದೆಹಲಿ : ದೇಶದ ಜನತೆಗೆ ಪ್ರಧಾನಿ ಮೋದಿ ಸರ್ಕಾರ ಈ ಬಾರಿ ದಸರಾ ಹಬ್ಬದ ಭರ್ಜರಿ ಗಿಫ್ಟ್ ನೀಡಿದ್ದು, ಆರೋಗ್ಯ, ವಿಮೆ ಮರುವಿಮೆಯ ಮೇಲಿನ ಜಿಎಸ್ಟಿ ಸಂಪೂರ್ಣ ರದ್ದು ಮಾಡಿದೆ. ಕ್ಯಾನ್ಸರ್ ಅಪರೂಪದ ಕಾಯಿಲೆ ಮತ್ತು ಇತರ ತೀವ್ರ ದೀರ್ಘಕಾಲದ ಔಷದ ಮೇಲಿನ ಜಿ ಎಸ್ ಟಿ ಯನ್ನು ರದ್ದು ಮಾಡಿದೆ. ಅಷ್ಟೇ ಅಲ್ಲದೆ ಮೂರು ಜೀವ ಉಳಿಸುವ ಔಷದ ಮೇಲಿನ ಜಿಎಸ್ಟಿ ಶೇಕಡ 5ರಿಂದ ಶೂನ್ಯಕ್ಕೆ ಇಳಿಕೆ ಮಾಡಿದೆ ಇತರೆ ಎಲ್ಲಾ ಔಷಧಗಳ ಮೇಲೆ ಬಿಎಸ್‌ಟಿ ಶೇಕಡಾ 12 ರಿಂದ ಶೇಕಡ ಶೂನ್ಯಕ್ಕೆ ಇಳಿಕೆ ಮಾಡಿದ್ದು, ನವೀಕರಿಸಬಹುದಾದ ಇಂಧನ ಸಾಧನೆಗಳು ಮತ್ತು ಅವುಗಳ ಉತ್ಪಾದನೆಗೆ ಬಳಸುವ ಭಾಗಗಳ ಮೇಲಿನ ಜಿ ಎಸ್ ಟಿ ತರ ಶೇಕಡ 12 ರಿಂದ 5ಕ್ಕೆ ಇಳಿಕೆ ಮಾಡಿದೆ. ಪ್ರತಿದಿನ 7500ರೂ. ಅಥವಾ ಅದಕ್ಕಿಂತ ಕಡಿಮೆ ಮೌಲ್ಯದ ಹೋಟೆಲ್, ವಸತಿ ಸೇವೆಗಳ ಮೇಲೆ ಶೇಕಡ 12 ರಿಂದ ಶೇಕಡ 5ಕ್ಕೆ ಇಳಿಕೆ ಮಾಡಿದೆ ಸಲೂನ್, ಯೋಗ…












