Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಅಭಿಮಾನ್ ಸ್ಟುಡಿಯೋದಲ್ಲಿದ್ದ ಡಾ.ವಿಷ್ಣುವರ್ಧನ್ ಅವರ ಸಮಾಧಿ ಕೆಡುವಲಾಗಿತ್ತು. ಈ ವಿಚಾರವಾಗಿ ಇಂದು ಭಾರತಿ ವಿಷ್ಣುವರ್ಧನ್, ಅಳಿಯ ಅನಿರುದ್ಧ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಮಾಧಿ ನಿರ್ಮಾಣಕ್ಕಾಗಿ ಭೂಮಿ ನೀಡಿ ಎಂದು ಮನವಿ ಮಾಡಿದರು. ಅಲ್ಲದೇ ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಎಂದು ಸಹ ಮನವಿ ಮಾಡಿದರು. ಅದಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಂದಿಸಿ ಈ ವಿಚಾರವಾಗಿ ನಾಳೆ ಕ್ಯಾಬಿನೆಟ್ ನಲ್ಲಿ ಚರ್ಚಿಸಲಾಗುತ್ತದೆ ಎಂದು ಭರವಸೆ ನೀಡಿದ್ದು, ಹಾಗಾಗಿ ನಾಳೆ ಅಧಿಕೃತವಾಗಿ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಆಗುವ ಸಾಧ್ಯತೆ ಇದೆ. ನಟ ಡಾ. ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗಿದ್ದು, ನಾಳೆ ನಡೆಯುವ ಕ್ಯಾಬಿನೆಟ್ ಸಭೆಯಲ್ಲಿ ಅಧಿಕೃತ ಘೋಷಣೆಯಾಗಲಿದೆ.ನಿನ್ನೆ ಈ ವಿಚಾರವಾಗಿ ನಟ ಡಾ. ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡುವಂತೆ ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲ, ಶ್ರುತಿ ಮತ್ತು ಮಾಳವಿಕ ಅವಿನಾಶ್…
ಬೆಂಗಳೂರು : ವಿಷ್ಣುವರ್ಧನ್ ಅವರ ಅಭಿನವ್ ಸ್ಟುಡಿಯೋದಲ್ಲಿನ ಸಮಾಧಿ ಕೆಡವಿದ್ದಾರೆ. ಸ್ಮಾರಕ ನಿರ್ಮಾಣಕ್ಕಾಗಿ 10 ಗುಂಟೆ ಜಾಗ ನೀಡುವಂತೆ ಭಾರತಿ ವಿಷ್ಣುವರ್ಧನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಅಲ್ಲದೆ, ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಅಭಿಮಾನಿಗಳ ಮನವಿಯನ್ನೂ ಅವರು ಮುಂದಿಟ್ಟಿದ್ದಾರೆ. ಇಂದು ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿರೋ ವಿಷ್ಣುವರ್ಧನ್ ಸಮಾಧಿ ಕೆಡವಿದ ವಿಚಾರ ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿತ್ತು. ಸ್ಟುಡಿಯೋದ 10 ಗುಂಟೆ ಜಾಗವನ್ನು ತಮಗೆ ನೀಡುವಂತೆ ಅಭಿಮಾನಿಗಳು ಒತ್ತಾಯಿಸಿದ್ದರು. ಭಾರತಿ ವಿಷ್ಣುವರ್ಧನ್ ಅವರು ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ವಿಷ್ಣು ಅಳಿಯ ಅನಿರುದ್ಧ್ ಜತ್ಕರ್ ಕೂಡ ಈ ಸಂದರ್ಭದಲ್ಲಿ ಇದ್ದರು. ಅಭಿಮಾನಿಗಳಿಗಾಗಿ ಸ್ಟುಡಿಯೋದಲ್ಲಿ ಜಾಗ ಕೊಡಿ ಎಂದು ಸಿಎಂ ಬಳಿ ಕೇಳಿದ್ದೇವೆ. ಅಭಿಮಾನಿಗಳ ಬಂದು ನಮಸ್ಕಾರ ಮಾಡಿ ಹೋಗಲು ಅವಕಾಶ ಮಾಡಿ ಕೊಡಬೇಕು ಎಂಬುದು ನಮ್ಮ ಮನವಿ ಎಂದಿದ್ದಾರೆ. ವಿಷ್ಣುವರ್ಧನ್ಗೆ ಕರ್ನಾಟಕ ರತ್ನ ಕೊಡಬೇಕು ಎಂಬುದು ಹಲವು ವರ್ಷಗಳ ಕೋರಿಕೆ.…
ಬೆಂಗಳೂರು : ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಿದ್ದು, ಆರ್‌ಎಂಸಿ ಯಾರ್ಡ್ ಮಹಿಳೆ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಕ್ಲೀನ್‌ಚಿಟ್ ಸಿಕ್ಕಿದೆ. ಸಾಕ್ಷ್ಯಾಧಾರ ಕೊರತೆ ಹಿನ್ನೆಲೆ ಎಸ್‌ಐಟಿ ಬಿ ರಿಪೋರ್ಟ್ ಸಲ್ಲಿಕೆ ಮಾಡಿದೆ. ತಮ್ಮ ಮೇಲಿನ ಆರೋಪ ಸುಳ್ಳೆಂದು ಪ್ರಕರಣ ರದ್ದು ಕೋರಿ ಮುನಿರತ್ನ ಅರ್ಜಿ ಸಲ್ಲಿಸಿದ್ದರು. ಈಗ, ಆರೋಪ ಸಾಬೀತಾಗಿಲ್ಲವೆಂದು ಬಿ ರಿಪೋರ್ಟ್ ಸಲ್ಲಿಸಲಾಗಿದೆ ಎಂದು ಹೈಕೋರ್ಟ್‌ಗೆ ಶಾಸಕ ಮುನಿರತ್ನ ಪರ ವಕೀಲರು ತಿಳಿಸಿದ್ದಾರೆ. ಬಂಧಿಸದಂತೆ ನೀಡಿದ್ದ ಮಧ್ಯಂತರ ತಡೆಯನ್ನು ಹೈಕೋರ್ಟ್ ವಿಸ್ತರಿಸಿದೆ. ಮಹಿಳೆಯೊಬ್ಬರು ಸಾಮೂಹಿಕ ಅತ್ಯಾಚಾರದ ದೂರು ನೀಡಿದ್ದರು. ಆರ್‌ಎಂಸಿ ಯಾರ್ಡ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.ಮಹಿಳೆ ಮಾತ್ರೆ ಸೇವಿಸುವಾಗಲೂ ರಿಹರ್ಸಲ್ ಮಾಡಿರೋದು ಬೆಳಕಿಗೆ ಬಂದಿದೆ. 8 ಬಾರಿ ರಿಹರ್ಸಲ್ ಮಾಡಿದ್ದಳು. ಆಕೆ ದೇಹದಲ್ಲಿ ನಿದ್ರೆ ಮಾತ್ರೆ ಅಂಶ ಇಲ್ಲ. ಮಹಿಳೆ ಮಾಡಿರುವ ಆರೋಪಕ್ಕೆ ಯಾವುದೇ ಸಾಕ್ಷ್ಯಾಧಾರ ಇಲ್ಲ. ಹೀಗಾಗಿ, ಕೋರ್ಟ್ಗೆ ಎಸ್‌ಐಟಿ ಬಿ ರಿಪೋರ್ಟ್ ಸಲ್ಲಿಕೆ ಮಾಡಿದೆ.
ಶಿವಮೊಗ್ಗ : ಕೌಟುಂಬಿಕ ಕಲಹಕ್ಕೆ ಬೇಸತ್ತು ಮಹಿಳೆಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಬ್ಬಕ್ಕೆ ತವರು ಮನೆಗೆ ಬಂದಿದ್ದಾಗ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೇ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಎಂಬ ಗ್ರಾಮದಲ್ಲಿ ನಡೆದಿದೆ. ಮನೆಯ ಜಗುಲಿಯಲ್ಲಿ ರಂಜಿತ (28) ಎನ್ನುವ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಈ ಮೊದಲು ಮದುವೆಯಾಗಿ ರಂಜಿತ ವಿಚ್ಛೇದನ ಪಡೆದುಕೊಂಡಿದ್ದರು. ಸಾಗರದ ಆನಂದಪುರದಲ್ಲಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಎರಡನೇ ಮದುವೆ ಕೂಡ ಆಗಿದ್ದರು ಕಳೆದ ನಾಲ್ಕು ತಿಂಗಳ ಹಿಂದೆ ಅಷ್ಟೇ ಎರಡನೇ ಮದುವೆ ಆಗಿದ್ದರು. ಇತ್ತೀಚಿಗೆ ಅಷ್ಟೇ ಪತಿ ಪತಿಯ ಮಧ್ಯೆ ಜಗಳ ನಡೆದಿತ್ತು. ಹಾಗಾಗಿ ತವರು ಮನೆಗೆ ಹಬ್ಬಕ್ಕೆ ಎಂದು ಬಂದಾಗ ರಂಜಿತ ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು : ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ಕಳೆದ ಜೂನ್ 4 ರಂದು ಬೆಂಗಳೂರಲ್ಲಿ ಆರ್‌ಸಿಬಿ ತಂಡಕ್ಕೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಈ ಒಂದು ಕಾರ್ಯಕ್ರಮದಲ್ಲಿ ಅಪಾರ ಜನಸಂಖ್ಯೆಯಿಂದ ಕಾಲ್ತುಳಿತದಲ್ಲಿ 11 ಜನ ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದರು. ಕಾಲ್ತುಳಿತದಿಂದ ಆರ್‌ಸಿಬಿಯ 11 ಅಭಿಮಾನಿಗಳು ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ 3 ತಿಂಗಳ ಬಳಿಕ ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ಭಾವುಕ ಸಂದೇಶ ರವಾನೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಆರ್ ಸಿ ಬಿ ಸೋಶಿಯಲ್ ಮೀಡಿಯಾ ಪೇಜ್ ಮೂಲಕ ವಿರಾಟ್ ಕೊಹ್ಲಿ ಪೋಸ್ಟ್ ಹಂಚಿಕೊಂಡಿದ್ದು, ಜೂನ್ 4ರ ದಿನ ಅತ್ಯಂತ ಸಂತೋಷದಾಯಕ ಕ್ಷಣವಾಗಿರಬೇಕಾಗಿತ್ತು. ಆದರೆ ದುರಂತವಾಗಿ ಮಾರ್ಪಟ್ಟಿದೆ. ಆ ದಿನ ನಮ್ಮ ಹೃದಯ ಒಡೆದಂತಾಗಿದೆ. ನಾವು ಕಳೆದುಕೊಂಡವರ ಕುಟುಂಬಗಳಿಗಾಗಿ ಮತ್ತು ಗಾಯಗೊಂಡ ನಮ್ಮ ಅಭಿಮಾನಿಗಳಿಗಾಗಿ ಯೋಚಿಸುತ್ತಿದ್ದೇನೆ ಮತ್ತು ಪ್ರಾರ್ಥಿಸುತ್ತಿದ್ದೇನೆ. ನಿಮ್ಮ ನಷ್ಟವು ಈಗ ನಮ್ಮ ಕಥೆಯ ಭಾಗವಾಗಿದೆ. ಇನ್ಮುಂದೆ ಎಚ್ಚರಿಕೆ ಗೌರವ ಜವಾಬ್ದಾರಿಯಿಂದ ಮುಂದುವರಿಯುತ್ತೇವೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆರ್‌ಸಿಬಿ ಆಟಗಾರ ಕೊಹ್ಲಿ ಪೋಸ್ಟ್…
ಮಂಡ್ಯ : ಮಂಡ್ಯದಲ್ಲಿ ಘೋರ ದುರಂತವೊಂದು ನಡೆದಿದ್ದು, ಬಸ್ ನಿಲ್ದಾಣದ ಬಳಿಯೇ ವ್ಯಕ್ತಿಯ ಮೇಲೆ KSRTC ಬಸ್ ಒಂದು ಹರಿದ ಘಟನೆ ಮಂಡ್ಯ ಜಿಲ್ಲೆಯ KR ಪೇಟೆ ತಾಲೂಕಿನಲ್ಲಿ ನಡೆದಿದೆ. ಘಟನೆಯಲ್ಲಿ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಮಂಡ್ಯದ K.R ಪೇಟೆ ಪಟ್ಟಣದ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ. ಗಾಯಗೊಂಡ ವ್ಯಕ್ತಿಯ ಹೆಸರು ತಿಳಿದು ಬಂದಿಲ್ಲ. ತಕ್ಷಣ ಸ್ಥಳೀಯರಿಂದ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡ್ಯ : ಸಕ್ಕರೆನಾಡು ಮಂಡ್ಯದಲ್ಲಿ ವಿಚಿತ್ರ ಪ್ರಕರಣವೊಂದು ನಡೆದಿದ್ದು, ಆಸ್ತಿಗಾಗಿ ಮಗನಿಂದಲೇ ತಂದೆಗೆ ಬ್ಲಾಕ್ ಮೇಲ್ ಮಾಡಿದ್ದಾನೆ. ವಾಟ್ಸಪ್ ಗ್ರೂಪ್ ಗೆ ಅಪ್ಪನ ಅಶ್ಲೀಲ ಸಂದೇಶ ಕಳಿಸಿ ತಂದೆಗೆ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಮಗನ ವಿರುದ್ದ ರೊಚ್ಚಿಗೆದ್ದ ತಂದೆಯಿಂದ ಪೊಲೀಸರಿಗೆ ದೂರು ನೀಡಿದ್ದು, ಸದ್ಯ ಬೆದರಿಕೆ ಹಾಕಿದ ಆರೋಪಿ ಮಗನನ್ನು ಬಂಧಿಸಿ ಪೊಲೀಸರು ಜೈಲಿಗಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ವಿಚಿತ್ರ ಘಟನೆ ನಡೆದಿದೆ. ಮದ್ದೂರಿನ ರಿಯಲ್ ಎಸ್ಟೇಟ್ ಉದ್ಯಮಿ ಸತೀಶ್ ಗೆ ಮಗನಿಂದಲೇ ಬೆದರಿಕೆ ಹಾಕಿದ್ದು, ಮದ್ದೂರು ಸೇರಿದಂತೆ ರಾಜ್ಯದ ಹಲವೆಡೆ ರಾಣಿ ಐಶ್ವರ್ಯ ಡೆವಲರ್ಸ್ ಹೆಸರಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸ್ತಿರೋ ಉದ್ಯಮಿ ಸತೀಶ್. ಈತನ ಮಗ ಪ್ರಣವ್ (25) ತಂದೆಗೆ ಬ್ಲಾಕ್ ಮೇಲ್ ಮಾಡಿದ ಕಿರಾತಕ ಮಗ ಎಂದು ತಿಳಿದುಬಂದಿದೆ. ದುಶ್ಚಟಗಳಿಗೆ ಬಲಿಯಾಗಿ ವಿರೋಧಿಗಳ ಜೊತೆ ಸೇರಿ ಆಸ್ತಿಗಾಗಿ ತಂದೆ ಜೊತೆ ಕಿರಿಕ್ ಮಾಡಿಕೊಂಡಿದ್ದಾನೆ. ಈಗಾಗಲೇ ತಂದೆಯ ಕೋಟ್ಯಾಂತರ ರೂ ಕಳೆದು ಮತ್ತೆ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ.…
ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಚಿನ್ನಯ್ಯ ಹೇಳಿಕೆ ನೀಡಿದ ಬಳಿಕ ಎಸ್ಐಟಿ ತನಿಖೆ ಆರಂಭಿಸಿತು. ಬಳಿಕ ಯಾವುದೇ ಕುರುಹು ಪತ್ತೆ ಆಗದ ಹಿನ್ನೆಲೆಯಲ್ಲಿ ಚಿನ್ನಯ್ಯನನ್ನು ಅಧಿಕಾರಿಗಳು ವಶಕ್ಕೆ ಪಡದು ವಿಚಾರಣೆ ನಡೆಸಿದಾಗ ಹಲವು ಸ್ಫೋಟಕ ಅಂಶಗಳು ಬಯಲಾಗಿದೆ. ಇದು ಒಂದು ಕಡೆಯಾದರೆ ಇನ್ನೊಂದು ಕಡೆ ಎಸ್ಐಟಿ ಅಧಿಕಾರಿಗಳು ಸೌಜನ್ಯ ಪ್ರಕರಣದ ತನಿಖೆ ನಡೆಸುತ್ತಿದ್ದಾರಾ ಎನ್ನುವ ಪ್ರಶ್ನೆ ಹುಟ್ಟು ಹಾಕಿದೆ. ಹೌದು ಇದಕ್ಕೆ ಪುಷ್ಟಿ ನೀಡುವಂತೆ ಉದಯ್ ಕುಮಾರ್ ಜೈನ್ ಸೇರಿದಂತೆ ಹಲವರಿಗೆ ಎಸ್ಐಟಿ ಬಲಾವ್ ನೀಡಿದೆ ಶಾಸಕ ಉದಯ್ ಕುಮಾರ್ ಸೇರಿದಂತೆ ಸೌಜನ್ಯ ಮನೆಯವರು ಹಲವರ ಮೇಲೆ ಗಂಭೀರವಾದ ಆರೋಪ ಮಾಡಿದ್ದರು. ಈ ಹಿನ್ನಲೆಯಲ್ಲಿ ಸೌಜನ್ಯ ಪ್ರಕರಣದ ತನಿಖೆ ಕೂಡ ಎಸ್ಐಟಿ ನಡೆಸುತ್ತಿದೆಯ? ಎನ್ನುವ ಪ್ರಶ್ನೆ ಉದ್ಭವಿಸಿದೆ. ಇದೀಗ ಎಸ್ಐಟಿ ಅಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿರುವ ಎಸ್ಐಟಿ ಕಚೇರಿಗೆ ಆರೋಪ ಹೊತ್ತ ಉದಯ್ ಕುಮಾರ್ ಜೈನ್ ಧೀರಜ್ ಕೆಲ್ಲಾ ಹಾಗೂ ಮಲ್ಲಿಕ್ ಜೈನ್…
ವಿಜಯಪುರ : ಭೀಮಾತೀರದಲ್ಲಿ ಮತ್ತೆ ಗುಂಡಿನ ಮೊರೆತ ಕೇಳಿ ಬಂದಿದ್ದು, ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ದುಷ್ಕರ್ಮಿಗಳಿಂದ ಗುಂಡಿನ ದಾಳಿ ನಡೆದಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರಿಗೆ ಎಂಬ ಗ್ರಾಮದಲ್ಲಿ ರೌಡಿಶೀಟರ್ ಭಿಮನಗೌಡ ಬಿರಾದರ್ (45) ಮೇಲೆ ಫೈರಿಂಗ್ ನಡೆಸಲಾಗಿದೆ. ಗಾಯಗೊಂಡ ಭೀಮನಗೌಡನನ್ನು ವಿಜಯಪುರ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನಪ್ಪಿದ್ದಾನೆ. ಭೀಮನ ಗೌಡಗೆ ದುಷ್ಕರ್ಮಿಗಳು ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಭೀಮನಗೌಡ ಬಿರಾದರ್ ತಲೆ, ಎದೆಗೆ ಗುಂಡು ತಗುಲಿದ್ದು, ಮಹದೇವ ಭೈರಗೊಂಡ ಪರಮ ಆಪ್ತನಾದ ಭೀಮನಗೌಡ ಬಿರಾದರ್ ಕಟಿಂಗ್ ಮಾಡಿಸಿಕೊಳ್ಳುವಾಗ ಕಣ್ಣಿಗೆ ಕಾರದಪುಡಿ ಎರಚಿ, ಕೃತ್ಯ ಎಸಗಿದ್ದಾರೆ. ಹಳೆ ವೈಷಮ್ಯ ಹಿನ್ನೆಲೆ ಗುಂಡಿನ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಗಾಯಗೊಂಡ ಭೀಮನಗೌಡ ವಿಜಯಪುರ ಖಾಸಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಭೀಮನಗೌಡ ಬಿರಾದರ್ ಇದೀಗ ಸಾವನಪ್ಪಿದ್ದಾನೆ.
ಬೆಂಗಳೂರು : ಇತ್ತೀಚಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಮುತ್ತೂರಿನಲ್ಲಿ ಗಣೇಶ ವಿಸರ್ಜನೆಯ ವೇಳೆ ಪಟಾಕಿ ಸಿಡಿದು ಓರ್ವ ಬಾಲಕ ಸಾವನಪ್ಪಿದ್ದ. ಈ ಒಂದು ಘಟನೆಗೆ ಸಂಬಂಧಿಸಿದಂತೆ ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ಬಾಲಕ ಯೋಗೇಶ್ (15) ಇದೀಗ ಸಾವನ್ನಪ್ಪಿದ್ದಾನೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಯೋಗೇಶ್ ಗೆ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಚಿಕಿತ್ಸೆ ಫಲಿಸದೆ ಇಂದು ಬಾಲಕ ಯೋಗೇಶ್ ಸಾವನ್ನಪ್ಪಿದ್ದಾನೆ. ಹಾಗಾಗಿ ಪಟಾಕಿ ಸ್ಪೋಟ ದುರಂತದಿಂದ ಮೃತಪಟ್ಟವರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ.ಆಗಸ್ಟ್ 29 ರಂದು ದೊಡ್ಡಬಳ್ಳಾಪುರ ನಗರದ ಮುತ್ತೂರಿನಲ್ಲಿ ಈ ಒಂದು ಘಟನೆ ನಡೆದಿತ್ತು ಅಂದು ಓರ್ವ ಬಾಲಕ ಮೃತಪಟ್ಟಿದ್ದು, ಆರು ಜನರು ಗಾಯಗೊಂಡಿದ್ದರು. ಇದೀಗ ಇಂದು ಮತ್ತೋರ್ವ ಬಾಲಕ ಯೋಗೇಶ್ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ.














